Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಆರೋಪ ಸುಳ್ಳಾ: FIR ಸಮರ್ಥಿಸಿಕೊಂಡ ಸಿಎಂ - Vistara News

ರಾಜಕೀಯ

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಆರೋಪ ಸುಳ್ಳಾ: FIR ಸಮರ್ಥಿಸಿಕೊಂಡ ಸಿಎಂ

Harish Poonja: ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್ ಅನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ, ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗಳೆಯಲು ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

CM Siddaramaiah defends FIR against Harish Poonja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಕಾನೂನು ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ಅನ್ನು ದಾಖಲು ಮಾಡಲಾಗಿದೆ. ಐಪಿಸಿ 353ರ ಪ್ರಕಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಕಾನೂನು ಎಲ್ಲರಿಗೂ ಒಂದೇ. ಹರೀಶ್‌ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲೆ ಇರುವ ಆರೋಪ ಸುಳ್ಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರತಿಕ್ರಿಯೆ ನೀಡಿದರು.

7 ವರ್ಷ ಜೈಲುವಾಸ ಶಿಕ್ಷೆ

ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್ ಅನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ, ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗಳೆಯಲು ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದರು.

ಶಾಸಕರಾದರೆ ಪೊಲೀಸರಿಗೆ ಧಮ್ಕಿ ಹಾಕಬಹುದೇ?

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮರು ಪ್ರಶ್ನಿಸಿದರು.

ಅರೆಸ್ಟ್‌ ಮಾಡದೇ ವಾಪಸ್‌ ಹೋಗಿದ್ದ ಪೊಲೀಸರು!

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದ ಬೆನ್ನಲ್ಲೇ ಮೇ 22ರಂದು ಅವರನ್ನು ಬಂಧಿಸಲು ಪೊಲೀಸರು ನಡೆಸಿದ ಪ್ರಹಸನ ವಿಫಲವಾಗಿತ್ತು. ಅಂದು ಮಧ್ಯಾಹ್ನದಿಂದ ಅವರ ಮನೆಯಲ್ಲಿ ಠಿಕಾಣಿ ಹೂಡಿದ್ದ ಪೊಲೀಸರು, ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ರಾತ್ರಿ 7.15ರ ಸುಮಾರಿಗೆ ವಾಪಸಾಗಿದ್ದರು. ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ಮನೆಯಲ್ಲಿ ಹೈಡ್ರಾಮಾವೇ ನಡೆದಿತ್ತು.

ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿ, ಆಕ್ರೋಶವನ್ನು ಹೊರಹಾಕಿದ್ದರು.

Harish Poonja case Belthangady BJP MLA Harish Poonja arrested for taunting police

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜಾ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿತು. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆದಿದ್ದು, ಪೊಲೀಸ್‌ ಕ್ರಮ ತಪ್ಪು ಎಂದು ವಕೀಲರು ವಾದಿಸಿದರು. ಈ ವೇಳೆ ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈಡ್ರಾಮಾಕ್ಕೆ ಪೂಂಜಾ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು. ರಾಜ್ಯ ಸರ್ಕಾರದ ನಡೆಯನ್ನು ಅವರು ತೀವ್ರವಾಗಿ ಖಂಡಿಸಿದರು. ಬಂಧನ ಮಾಡಿದ್ದೇ ಆದಲ್ಲಿ ಮಂಗಳೂರು ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದ್ದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದ್ದರು.

Harish Poonja case Belthangady BJP MLA Harish Poonja arrested for taunting police

ವಿಡಿಯೊ ಸ್ಟೇಟಸ್‌ಗೆ ಹಾಕಿದ್ದ ಪೋಲಿಸ್‌ನನ್ನು ಆಚೆ ಕಳಿಸಿದ್ದ ಶಾಸಕ!

ಈ ವೇಳೆ ಪೊಲೀಸ್ ಠಾಣೆ ನಿಮ್ಮ ಅಪ್ಪಂದ ಎಂದು ಶಾಸಕ ಹರೀಶ್ ಪೂಂಜಾ ಅವಾಜ್‌ ಹಾಕುತ್ತಿದ್ದ ದೃಶ್ಯವನ್ನು ವಿಡಿಯೊ ಮಾಡಿ ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಲಾಗಿದ್ದ ಪೊಲೀಸ್‌ ಸಿಬ್ಬಂದಿ ಆನಂದ್‌ ಅವರು ಶಾಸಕರ ಮನೆಗೆ ಬಂದರು. ಅವರನ್ನು ನೋಡಿ ಕೆರಳಿದ ಶಾಸಕ ಹರೀಶ್‌ ಪೂಂಜಾ, ಆನಂದ್‌ಗೆ ಮನೆಯಿಂದ ಹೊರಗೆ ಹೋಗು ಎಂದು ಸೂಚಿಸಿದ್ದರು. ಅಲ್ಲಿಯೇ ಇದ್ದ ಹಿರಿಯ ಅಧಿಕಾರಿಗಳತ್ತ ತಿರುಗಿ, ಇವನನ್ನು ಹೊರಗೆ ಕಳುಹಿಸಿ, ಜನ ಇದ್ದಾರೆ. ಗಲಾಟೆ ಮಾಡ್ತಾರೆ ಅಂತಾ ಅಧಿಕಾರಿಗಳಿಗೆ ಹೇಳಿದ್ದರು. ಬಳಿಕ ಸೆಕ್ಯುರಿಟಿ ಕೊಟ್ಟು ಅಲ್ಲಿಂದ ಆನಂದ್ ಅವರನ್ನು ಪೊಲೀಸರು ಕರೆದೊಯ್ದಿದ್ದರು.

ಹರೀಶ್ ಪೂಂಜಾಗೆ ನೋಟಿಸ್ ಜಾರಿ

ಶಾಸಕ ಹರೀಶ್ ಪೂಂಜಾ ಅವರಿಗೆ ಇನ್ನೂ ನೋಟಿಸ್‌ ಕೊಟ್ಟಿಲ್ಲ ಎಂದು ಅವರ ಪರ ವಕೀಲರು ಆರೋಪ ಮಾಡಿದ ಬೆನ್ನಲ್ಲೇ ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರು ನೋಟಿಸ್ ಜಾರಿ ಮಾಡಿದ್ದರು. ತನಿಖಾಧಿಕಾರಿಗಳ ಜತೆ ಠಾಣೆಗೆ ಬರಲು ನೋಟಿಸ್‌ನಲ್ಲಿ ಸೂಚಿಸಲಾಗಿತ್ತು. ಹೀಗಾಗಿ ರಾತ್ರಿವರೆಗೂ ಬಂಧನಕ್ಕಾಗಿ ಪೊಲೀಸರು ಕಾದಿದ್ದರು. ಈ ವೇಳೆ ಶಾಸಕರ ಮನೆಗೆ ಹೆಚ್ಚಿನ ಪೊಲೀಸರನ್ನು ಕರೆಸಿಕೊಳ್ಳಲಾಗಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಇನ್ನಷ್ಟು ರೋಷಗೊಂಡರು. ಅಂತಿಮವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಮೂಲಕ ಸೂಚಿಸಿ ಪೊಲೀಸರು ಅಲ್ಲಿಂದ ತೆರಳಿದ್ದರು.

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

ವಿಶಾಖಪಟ್ಟಣದ ಋಷಿಕೊಂಡ ಬೆಟ್ಟದ ಬಳಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 500 ಕೋಟಿ ರೂ. ವೆಚ್ಚದಲ್ಲಿ ಅರಮನೆಯನ್ನು (Rushikonda Palace Issue) ನಿರ್ಮಿಸಿರುವುದು ಭಾರೀ ಟೀಕೆಗೆ ಗುರಿಯಾಗಿದೆ. ವೈಎಸ್‌ಆರ್‌ಸಿ ಆಡಳಿತದಲ್ಲಿ ನಿರ್ಮಿಸಿರುವ ಈ ಯೋಜನೆಯ ಬಗ್ಗೆ ತನಿಖೆ ನಡೆಸುವುದಾಗಿ ಈಗಿನ ಸರ್ಕಾರ ಹೇಳಿದೆ. ಏನಿದು ವಿವಾದ? ಇಲ್ಲಿದೆ ವಿಸ್ತೃತ ಮಾಹಿತಿ.

VISTARANEWS.COM


on

By

Rushikonda Palace Issue
Koo

ಆಂಧ್ರಪ್ರದೇಶದ ಋಷಿಕೊಂಡ ಬೆಟ್ಟದ ಬಳಿ (andrapradesh) ಈ ಹಿಂದೆ ಮುಖ್ಯಮಂತ್ರಿಯಾಗಿದ್ದ (former CM) ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) 500 ಕೋಟಿ ರೂ. ವೆಚ್ಚದಲ್ಲಿ ʼರಾಜಾ ಮಹಲ್‌ʼ ಹೆಸರಿನಲ್ಲಿ ಅರಮನೆಯನ್ನು (Rushikonda Palace) ನಿರ್ಮಿಸಿದ್ದರು. ಈಗ ಜಗನ್‌ ಸರ್ಕಾರ ಅಧಿಕಾರ ಕಳೆದುಕೊಂಡು ಟಿಡಿಪಿಯ ಎನ್‌ ಚಂದ್ರಬಾಬು ನಾಯ್ಡು ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೀಗ ಈ ಅರಮನೆ ಭಾರೀ ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿದೆ.

ಭಾರಿ ಭ್ರಷ್ಟಾಚಾರದ ಮೂಲಕ ರಾಜ್ಯ ಸರ್ಕಾರದ ಹಣವನ್ನು ಈ ಹಿಂದಿನ ಮುಖ್ಯಮಂತ್ರಿ ಜಗನ್‌ ರೆಡ್ಡಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ತೆಲುಗು ದೇಶಂ ಪಕ್ಷ (TDP), ವಿಶಾಖಪಟ್ಟಣಂನ (Vishakhapatnam) ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳ ಡ್ರೋನ್ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ಮೂಲಕ ಇದನ್ನು ಸಾರ್ವಜನಿಕರ ಗಮನಕ್ಕೆ ತಂದಿದೆ.

ಹಿಂದಿನ ವೈಎಸ್‌ಆರ್‌ಸಿ ಆಡಳಿತದಲ್ಲಿ ಋಷಿಕೊಂಡ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಭೇಟಿ ನೀಡಿದಾಗ ಋಷಿಕೊಂಡ ಅರಮನೆ ವಿವಾದ ಭುಗಿಲೆದ್ದಿತು. ಟಿಡಿಪಿ ನಾಯಕರು ಈ ಯೋಜನೆಯ ಸ್ವರೂಪ ಮತ್ತು ಪ್ರಕೃತಿಯ ಮೇಲೆ ಇದರ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಟಿಡಿಪಿ ನಾಯಕರು, ‘ಋಷಿಕೊಂಡ ಅರಮನೆ’ ಎಂದು ಕರೆಯಲ್ಪಡುವ ಈ ಅರಮನೆಯನ್ನು ಅಕ್ರಮವಾಗಿ ಮತ್ತು ರಹಸ್ಯವಾಗಿ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ. ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಅವರು ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (ವೈಎಸ್‌ಆರ್‌ಸಿ) ಆಡಳಿತದಿಂದ ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೇಟಿ ನೀಡಿದ ಈ ವಿಷಯ ಹೆಚ್ಚು ಚರ್ಚೆಗೆ ಕಾರಣವಾಯಿತು. ಈ ಕಟ್ಟಡಗಳನ್ನು ‘ರಾಜ ಮಹಲ್’ ಎಂದು ಬಣ್ಣಿಸಿರುವ ಟಿಡಿಪಿ ನಾಯಕ ನಾರಾ ಲೋಕೇಶ್, ಸಾರ್ವಜನಿಕ ನಿಧಿಯ ದುರುಪಯೋಗದ ಬಗ್ಗೆ ದನಿ ಎತ್ತಿದ್ದಾರೆ.

ಋಷಿಕೊಂಡ ನಿರ್ಮಾಣ

ಸಚಿವ ನಾರಾ ಲೋಕೇಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ತಮ್ಮ ಕಳವಳವನ್ನು ವ್ಯಕ್ತಪಡಿಸಿ, “ಬಡವರು ತಮ್ಮ ಮಕ್ಕಳ ತಲೆಯ ಮೇಲೆ ಸೂರು ನಿರ್ಮಿಸಲು ಹೆಣಗಾಡುತ್ತಿದ್ದರೆ, ಅವರ ಹಣದಲ್ಲಿ ಜಗನ್‌ ಅರಮನೆಯನ್ನು ನಿರ್ಮಿಸಿದ್ದಾರೆ. ಈ ಬಗ್ಗೆ ತನಿಖೆ ಮಾಡಲಾಗುವುದುʼʼ ಎಂದಿದ್ದಾರೆ. 9.88 ಎಕರೆ ಜಮೀನಿನಲ್ಲಿ ಕಟ್ಟಡವು 5 ಎಕರೆಯಲ್ಲಿ ಇರಬೇಕು, ಉಳಿದ ಪ್ರದೇಶವು ಭೂದೃಶ್ಯ ಮತ್ತು ಪಾರ್ಕಿಂಗ್ ಪ್ರದೇಶವಾಗಿರಬೇಕು ಎಂದು ಹೇಳಲಾಗಿತ್ತು. ಆದರೆ ಬೆಟ್ಟವನ್ನು 15 ಎಕರೆ ಹೆಚ್ಚುವರಿಯಾಗಿ ಅಗೆದಿರುವುದು ದೊಡ್ಡ ಉಲ್ಲಂಘನೆಯಾಗಿದೆ ಎಂದವರು ತಿಳಿಸಿದ್ದಾರೆ.


ಇದನ್ನೂ ಓದಿ: UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

ಜಗನ್‌ ಪಕ್ಷದ ಪ್ರತಿಪಾದನೆ ಏನು?

ವಿಶಾಖಪಟ್ಟಣಂನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶವನ್ನು ಈ ಪುನರಾಭಿವೃದ್ಧಿ ಯೋಜನೆ ಹೊಂದಿದೆ ಎಂದು ಜಗನ್ ನೇತೃತ್ವದ ಪಕ್ಷವು ಪ್ರತಿಪಾದಿಸಿದೆ. ಈ ಆಸ್ತಿ ಸರ್ಕಾರಿ ಸ್ವಾಮ್ಯದಲ್ಲಿದೆ, ಖಾಸಗಿಯಲ್ಲ ಎಂದು ಹೇಳಿರುವ ಪಕ್ಷದ ಪ್ರಮುಖರು, ರಾಷ್ಟ್ರಪತಿ ಅಥವಾ ಪ್ರಧಾನಮಂತ್ರಿ ವಿಶಾಖಪಟ್ಟಣಕ್ಕೆ ಭೇಟಿ ನೀಡಿದಾಗ ಇದನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಈ ನಡುವೆಯೇ ಯೋಜನೆಯು ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳನ್ನು ಉಲ್ಲಂಘಿಸಿದ ಕಾರಣದಿಂದ ಪರಿಸರವಾದಿಗಳಿಂದಲೂ ವ್ಯಾಪಕ ವಿರೋಧವನ್ನು ಎದುರಿಸುತ್ತಿದೆ.

ಹೇಗಿದೆ ಈ ಅರಮನೆ?

9.88 ಎಕರೆ ಸಮುದ್ರಾಭಿಮುಖ ಸೈಟ್‌ನಲ್ಲಿ ಹರಡಿರುವ ಋಷಿಕೊಂಡ ಅರಮನೆಯು ಒಟ್ಟು 1,41,433 ಚದರ ಮೀಟರ್‌ಗಳ ನಿರ್ಮಾಣ ಪ್ರದೇಶದೊಂದಿಗೆ 12 ಬೆಡ್‌ ರೂಮ್‌ಗಳನ್ನು ಹೊಂದಿದೆ. ಮೂರು ಮಹಲುಗಳನ್ನು ರಚಿಸಲು ರಮಣೀಯವಾದ ಋಶಿಕೊಂಡ ಬೆಟ್ಟಗಳನ್ನು ಧ್ವಂಸಪಡಿಸಲಾಗಿದೆ. ಕೆಲವು ವಾಶ್‌ರೂಮ್‌ಗಳಂತೂ 480 ಚದರ ಅಡಿ ದೊಡ್ಡದಾಗಿದೆ. ಮೀಟಿಂಗ್ ಹಾಲ್‌ಗಳು 7,266 ಚದರ ಮೀಟರ್‌ ವ್ಯಾಪಿಸಿದೆ!

ಆಮದು ಮಾಡಿದ ದುಬಾರಿ ಮಾರ್ಬಲ್‌ಗಳನ್ನು ಬಳಸಿದ್ದು, ವಿಶಾಲವಾದ ಕಾರಿಡಾರ್‌ಗಳನ್ನು ಒಳಗೊಂಡಿದೆ. ವಾಲ್-ಟು-ವಾಲ್ ಸ್ಕ್ರೀನ್ ಹೊಂದಿರುವ ಹೋಮ್ ಥಿಯೇಟರ್ ಬ್ಲಾಕ್‌ ಇದರ ಮತ್ತೊಂದು ಪ್ರಮುಖ ಅಂಶವಾಗಿದೆ. ಸರ್ಕಾರವು ಲ್ಯಾಂಡ್‌ಸ್ಕೇಪಿಂಗ್‌ನಲ್ಲಿ 50 ಕೋಟಿ ರೂ. ಮತ್ತು ಒಳಾಂಗಣ ಅಲಂಕಾರಕ್ಕಾಗಿ 33 ಕೋಟಿ ರೂ. ವೆಚ್ಚ ಮಾಡಿದೆ ಎನ್ನಲಾಗಿದೆ. ರೆಸ್ಟ್ ರೂಮ್ಗ‌ಳನ್ನು ಒಳಗೊಂಡಂತೆ ಸಂಪೂರ್ಣ ಸಂಕೀರ್ಣದ ಉದ್ದಕ್ಕೂ ಸೆಂಟ್ರಲ್‌ ಹವಾನಿಯಂತ್ರಣವಿದೆ. ಸಮುದ್ರದ ನೋಟವನ್ನು ಹೊಂದಿರುವ ಡೈನಿಂಗ್ ಹಾಲ್, ಪ್ರತಿ ಮಲಗುವ ಕೋಣೆಯಲ್ಲಿ 12 ಹಾಸಿಗೆಗಳಿವೆ. ಸ್ಪಾ ಸೇವೆಗಳೊಂದಿಗೆ ಸ್ನಾನಗೃಹಗಳು ವಿಶೇಷ ವೈಶಿಷ್ಟ್ಯಗಳಿಂದ ಕೂಡಿದೆ.

Continue Reading

ಕರ್ನಾಟಕ

Pralhad Joshi: ಕೇವಲ ಶೇ.0.1 ಮತ ಗಳಿಕೆ ಹೆಚ್ವಿದ್ದಕ್ಕೇ ಕಾಂಗ್ರೆಸ್ ಗೆದ್ದ ಭ್ರಮೆಯಲ್ಲಿದೆ; ಪ್ರಲ್ಹಾದ್ ಜೋಶಿ ಗೇಲಿ

Pralhad Joshi: ಕಳೆದ 3 ಲೋಕಸಭೆ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್ ನಮಗೆ ಸರಿ ಸಾಟಿಯೇ ಅಲ್ಲ. 2014, 2019 ಮತ್ತು 2024 ಈ ಮೂರೂ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದ ಸಂಖ್ಯೆ ಬಿಜೆಪಿಯ ಪ್ರಸ್ತುತ ಫಲಿತಾಂಶಕ್ಕೆ ಸಮವಿಲ್ಲ. ಕಾಂಗ್ರೆಸ್ ಈ ಮೂರೂ ಚುನಾವಣೆಗಳಲ್ಲಿ ಒಟ್ಟಾರೆ 140ರಿಂದ 150 ಸ್ಥಾನ ಗೆದ್ದರೆ ಬಿಜೆಪಿ ಒಂದೇ ಚುನಾವಣೆಯಲ್ಲಿ 240 ಸ್ಥಾನಗಳನ್ನು ಗೆದ್ದುಕೊಂಡಿದೆ. ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿಗೆ ಕಳೆದ ಬಾರಿಗಿಂತ ತುಸು ಕಡಿಮೆ ಸೀಟುಗಳು ಬಂದಿವೆ ನಿಜ. ಚುನಾವಣೆಯಿಂದ ಚುನಾವಣೆಗೆ ವ್ಯತ್ಯಾಸ ಆಗೋದು ಸಹಜವೇ. ಆದರೆ, ಇಡೀ ಇಂಡಿ ಕೂಟ ಪಡೆದ ಸ್ಥಾನಗಳೂ ಬಿಜೆಪಿಗೆ ಸರಿ ಸಮನಾಗಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi statement
Koo

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಕೇವಲ ಶೇ.0.1 ರಷ್ಟು ವೋಟ್ ಶೇರ್ ಹೆಚ್ಚಿಸಿಕೊಂಡ ಕಾಂಗ್ರೆಸ್ (Congress) ಗೆದ್ದ ಭ್ರಮೆಯಲ್ಲಿದ್ದು, ಇಂಡಿ ಒಕ್ಕೂಟ ದೇಶದಲ್ಲಿ ಇಲ್ಲವೇ ಇಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಟೀಕಿಸಿದರು.

ಬೆಂಗಳೂರಿನಲ್ಲಿ ಇಂದು ಬಿಜೆಪಿ-ಜೆಡಿಎಸ್ ನೂತನ ಸಂಸದರಿಗೆ ಹಮ್ಮಿಕೊಂಡಿದ್ದ ಅಭಿನಂದನೆ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ದೇಶದಲ್ಲಿ 230 ಸ್ಥಾನಗಳನ್ನು ಗೆದ್ದಿದ್ದು, ಇದು ಬಿಜೆಪಿ ಒಂದೇ ಪಕ್ಷ ಪಡೆದ ಸೀಟುಗಳಿಗೂ ಸರಿ ಸಮವಾಗಿಲ್ಲ. ಕಾಂಗ್ರೆಸ್ಸಿಗರು ವಾಸ್ತವ ಅರಿಯಲಿ ಎಂದು ಹೇಳಿದರು.

ಬಿಜೆಪಿಗೆ ಸಾಟಿಯೇ ಅಲ್ಲ ಕಾಂಗ್ರೆಸ್

ಕಳೆದ ಮೂರು ಲೋಕಸಭೆ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್ ನಮಗೆ ಸರಿ ಸಾಟಿಯೇ ಅಲ್ಲ. 2014, 2019 ಮತ್ತು 2024 ಈ ಮೂರೂ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದ ಸಂಖ್ಯೆ ಬಿಜೆಪಿಯ ಪ್ರಸ್ತುತ ಫಲಿತಾಂಶಕ್ಕೆ ಸಮವಿಲ್ಲ. ಕಾಂಗ್ರೆಸ್ ಈ ಮೂರೂ ಚುನಾವಣೆಗಳಲ್ಲಿ ಒಟ್ಟಾರೆ 140 ರಿಂದ 150 ಸ್ಥಾನ ಗೆದ್ದರೆ ಬಿಜೆಪಿ ಒಂದೇ ಚುನಾವಣೆಯಲ್ಲಿ 240 ಸ್ಥಾನಗಳನ್ನು ಗೆದ್ದುಕೊಂಡಿದೆ ಎಂದು ಸಚಿವ ಜೋಶಿ ವಿಶ್ಲೇಷಿಸಿದರು.

ಇದನ್ನೂ ಓದಿ: HD Kumaraswamy: ಎಚ್‌ಎಂಟಿ ಕಾರ್ಖಾನೆಗೆ ಮರು ಜೀವ: ಎಚ್.ಡಿ. ಕುಮಾರಸ್ವಾಮಿ

ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿಗೆ ಕಳೆದ ಬಾರಿಗಿಂತ ತುಸು ಕಡಿಮೆ ಸೀಟುಗಳು ಬಂದಿವೆ ನಿಜ. ಚುನಾವಣೆಯಿಂದ ಚುನಾವಣೆಗೆ ವ್ಯತ್ಯಾಸ ಆಗೋದು ಸಹಜವೇ. ಆದರೆ, ಇಡೀ ಇಂಡಿ ಕೂಟ ಪಡೆದ ಸ್ಥಾನಗಳೂ ಬಿಜೆಪಿಗೆ ಸರಿ ಸಮನಾಗಿಲ್ಲ ಎಂದು ಹೇಳಿದರು.

ಅರ್ಥವೇ ಇಲ್ಲದ ಇಂಡಿ ಕೂಟ

ಬಿಜೆಪಿಯನ್ನು ವಿರೋಧಿಸಲೆಂದೇ ಹುಟ್ಟಿಕೊಂಡ ಕಾಂಗ್ರೆಸ್ ನೇತೃತ್ವದ ಇಂಡಿ ಕೂಟಕ್ಕೆ ಅರ್ಥವೇ ಇಲ್ಲ. ದೇಶದಲ್ಲೆಲ್ಲೂ ಇಂಡಿಗೆ ನೆಲೆಯೇ ಇಲ್ಲ. ಇಂಡಿ ಕೂಟದಲ್ಲಿ ಸಮನ್ವಯತೆ ಇಲ್ಲವೆಂದು ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದರು.

ಬೆಂಗಳೂರಿನಲ್ಲಿ ಇಂದು ಬಿಜೆಪಿ-ಜೆಡಿಎಸ್ ನೂತನ ಸಂಸದರಿಗೆ ಅಭಿನಂದನೆ ಸಮಾರಂಭ ಜರುಗಿತು.

ಕೇರಳದಲ್ಲಿ ಇಂಡಿ ಕೂಟದಲ್ಲಿ ಪರಸ್ಪರ ಬಡಿದಾಟವಿದೆ. ದೆಹಲಿಯಲ್ಲಿ ಎಎಪಿ+ ಕಾಂಗ್ರೆಸ್ ಚುನಾವಣೆಗೆ ಹೋಗುತ್ತಿವೆ. ಪಂಜಾಬ್ ಅಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಟವಿದೆ. ಹೀಗೆ ದೇಶದ ಎಲ್ಲೆಡೆಯೂ ಇಂಡಿ ಕೂಟದಲ್ಲಿ ಸಮನ್ವಯ ಇಲ್ಲವೇ ಇಲ್ಲ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: KEA: ಕೆಇಎಯಿಂದ ಮೊದಲ ಬಾರಿ ಯಶಸ್ವಿ ವೆಬ್‌ಕಾಸ್ಟಿಂಗ್; 37 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಡಿಸಿಇಟಿ

ವಯನಾಡಲ್ಲಿ ಪ್ರಿಯಾಂಕಾಗೆ ಬೆಂಬಲ ಸಿಗುತ್ತದೆಯೇ?

ಪ್ರಿಯಾಂಕಾ ಗಾಂಧಿ ವಯನಾಡಲ್ಲಿ ಸ್ಪರ್ಧಿಸಲು ಹೊರಟಿದ್ದಾರೆ. ಸಿಪಿಐ, ಸಿಪಿಎಂ ಪಕ್ಷಗಳು ಅಲ್ಲಿ ನಿಮ್ಮನ್ನು ಬೆಂಬಲಿಸುತ್ತವೆಯೇ? ನೋಡಿಕೊಳ್ಳಿ ಎಂದು ಪ್ರಲ್ಹಾದ್‌ ಜೋಶಿ ಸವಾಲು ಹಾಕಿದರು.

NDA ಗೆಲುವಿನ ನಾಗಾಲೋಟ

ದೇಶದಲ್ಲಿ ಬಿಜೆಪಿ ನೇತೃತ್ವದ NDA ಗೆಲುವಿನ ನಾಗಾಲೋಟ ಮುಂದುವರೆಸಿದೆ. 10 ರಾಜ್ಯಗಳಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. 7 ರಾಜ್ಯ ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.50ಕ್ಕಿಂತ ಹೆಚ್ಚು ಮತ ಪಡೆದಿದೆ. ಒಡಿಸ್ಸಾದಲ್ಲಿ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುತ್ತಿದೆ. ಅರುಣಾಚಲ ಪ್ರದೇಶದಲ್ಲಿ 46 ಸ್ಥಾನಗಳನ್ನು ಗೆದ್ದು ಹೊಸ ದಾಖಲೆ ಬರೆದಿದೆ ಬಿಜೆಪಿ. ಆಂಧ್ರಪ್ರದೇಶದಲ್ಲಿ ಸಹ NDA ಆಡಳಿತದಲ್ಲಿದೆ. ಪಂಜಾಬ್ ಅಲ್ಲಿ ಅಪಪ್ರಚಾರದ ನಡುವೆಯೂ ಶೇ.10ರಷ್ಟು ಹೆಚ್ಚು ಮತ ಪಡೆದಿದ್ದೇವೆ ಎಂದು ಪ್ರಲ್ಹಾದ್‌ ಜೋಶಿ, ಎನ್‌ಡಿಎ ಸಾಧನೆಯನ್ನು ಬಿಚ್ಚಿಟ್ಟರು.

ಇದನ್ನೂ ಓದಿ: GST Council Meet : ನಕಲಿ ಬಿಲ್​ ತಡೆಗೆ ಬಯೋಮೆಟ್ರಿಕ್​ ವ್ಯವಸ್ಥೆ; ಜಿಎಸ್​ಟಿ ಕೌನ್ಸಿಲ್​ ಸಭೆಯಲ್ಲಿ ಹಲವು ನಿರ್ಧಾರಗಳು ಪ್ರಕಟ

ಕಾಂಗ್ರೆಸ್ 2 ಬಾರಿ ಸಮ್ಮಿಶ್ರ ಸರ್ಕಾರ ನಡೆಸಲಿಲ್ಲವೇ?

ಕೇಂದ್ರದಲ್ಲಿ ಕಾಂಗ್ರೆಸ್ 2 ಬಾರಿ ಸಮ್ಮಿಶ್ರ ಸರ್ಕಾರ ನಡೆಸಲಿಲ್ಲವೇ? ಎಂದು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದರು. 2004ರಲ್ಲಿ ಕಾಂಗ್ರೆಸ್ 145 ಸೀಟು ಪಡೆದಿತ್ತು. ಬಿಜೆಪಿ 138 ಸೀಟು ಪಡೆದಿತ್ತು. ಆಗ ಕೇವಲ ಏಳೇ ಸೀಟು ಹೆಚ್ಚು ಪಡೆದು ಆಡಳಿತ ನಡೆಸಿದ ಕಾಂಗ್ರೆಸ್ ಈಗ 242 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿಯನ್ನು ಪ್ರಶ್ನಿಸುತ್ತಿದೆ ಎಂದು ವ್ಯಂಗ್ಯವಾಡಿದರು.

Continue Reading

ಪ್ರಮುಖ ಸುದ್ದಿ

HD Kumaraswamy: ಎಚ್‌ಎಂಟಿ ಕಾರ್ಖಾನೆಗೆ ಮರು ಜೀವ: ಎಚ್.ಡಿ. ಕುಮಾರಸ್ವಾಮಿ

HD Kumaraswamy: ಬೆಂಗಳೂರಿನಲ್ಲಿ ಶನಿವಾರ HMT (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗಾರಿಕೆ ಅಭಿವೃದ್ಧಿ ಬಗ್ಗೆ ದೊಡ್ಡ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಅವರ ಆತ್ಮನಿರ್ಭರ ಪರಿಕಲ್ಪನೆಯ ಮೂಲಕ ಎಚ್‌ಎಂಟಿ ಕಂಪನಿಯನ್ನು ಪುನರುಜ್ಜೀವನಗೊಳಿಸಬಹುದು ಎಂದಿದ್ದಾರೆ.

VISTARANEWS.COM


on

Union Minister HD Kumaraswamy meeting with high officials of HMT Company in Bengaluru
Koo

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಬೆಂಗಳೂರಿನಲ್ಲಿ ಶನಿವಾರ ಎಚ್‌ಎಂಟಿ (HMT) (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿದಂತೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು, ಕಂಪನಿಯ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.

ವಹಿವಾಟು, ನಿವ್ವಳ ಲಾಭ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಕಂಪನಿಯ ಆರ್ಥಿಕತೆ, ಉತ್ಪಾದನೆ, ಇನ್ನಿತರೆ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು.

ಇದನ್ನೂ ಓದಿ: Job Alert: ಅಂಚೆ ಇಲಾಖೆಯಲ್ಲಿ 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ

ಒಂದು ಕಾಲದಲ್ಲಿ ವೈಭವಯುತವಾಗಿ ಮೆರೆದಿದ್ದ ಕಂಪನಿ ಇವತ್ತು ದುಸ್ಥಿತಿಗೆ ಬಂದಿದೆ. ಕಂಪನಿಯನ್ನು ಮತ್ತಷ್ಟು ಸದೃಢ ಮಾಡಿ. ಅದಕ್ಕೆ ಅಗತ್ಯವಾದ ಉಪ ಕ್ರಮ ಕೈಗೊಳ್ಳಿ. ಅದಕ್ಕೆ ಅಗತ್ಯವಾದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಎಂದು ರಾಜೇಶ್ ಕೊಹ್ಲಿ ಅವರಿಗೆ ಸಚಿವರು ಸೂಚಿಸಿದರು.

ಮೋದಿಯವರ ಆತ್ಮನಿರ್ಭರ ಪರಿಕಲ್ಪನೆಯಂತೆ HMT ಪುನಶ್ಚೇತನ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗಾರಿಕೆ ಅಭಿವೃದ್ಧಿ ಬಗ್ಗೆ ದೊಡ್ಡ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಅವರ ಆತ್ಮನಿರ್ಭರ ಪರಿಕಲ್ಪನೆಯ ಮೂಲಕ ಎಚ್‌ಎಂಟಿ ಕಂಪನಿಯನ್ನು ಪುನರುಜ್ಜೀವನಗೊಳಿಸಬಹುದು. ಪ್ರಧಾನಿಗಳ ಆಲೋಚನೆಯಂತೆ ಚಿಂತಿಸಿ ಕಂಪನಿಯ ಚೇತರಿಕೆಗೆ ಮುಂದಾಗಿ. ಅದಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತದೆ ಎಂದು ಸಚಿವರು ಹೇಳಿದರು.

ನೀವು ರಕ್ಷಣಾ ಇಲಾಖೆಗೆ, ಬಾಹ್ಯಾಕಾಶ ಯೋಜನೆಗಳಿಗೆ ಪರಿಕರಗಳನ್ನು ತಯಾರಿಸಿ ಕೊಡುತ್ತೀರಿ. ದೇಶದ ಉದ್ದಗಲಕ್ಕೂ ಕಂಪನಿಯ ಉತ್ಪಾದನಾ ಘಟಕಗಳು ಇವೆ. ಹೀಗಾಗಿ ಕಂಪನಿಯ ಕ್ಷಮತೆಯನ್ನು ಹೆಚ್ಚಿಸಬೇಕು ಎಂದು ಸಚಿವರು ಸಲಹೆ ನೀಡಿದರು. ಕಂಪನಿಯು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಇದೇ ವೇಳೆ ಕಂಪನಿಯ ಅಧ್ಯಕ್ಷ ರಾಜೇಶ್ ಕೊಹ್ಲಿ ತಿಳಿಸಿದರು. ನಷ್ಟದ ಜತೆಗೆ ಆರ್ಥಿಕ ಬಿಕ್ಕಟ್ಟು, ನ್ಯಾಯಾಲಯಗಳಲ್ಲಿ ಮೊಕದ್ದಮೆ ಇತ್ಯಾದಿ ಸಂಕಷ್ಟಗಳನ್ನು ಎಚ್‌ಎಂಟಿ ಎದುರಿಸುತ್ತಿದೆ. ಇದಕ್ಕೆ ಕೇಂದ್ರದ ನೆರವು ಬೇಕಿದೆ ಎಂದು ಸಚಿವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.

ಇದನ್ನೂ ಓದಿ: Karnataka Weather : ವೀಕೆಂಡ್‌ ಪ್ರಿಯರೇ ಎಚ್ಚರ; ಭಾನುವಾರ ಸುರಿಯಲಿದೆ ಮಳೆ ಧಾರಾಕಾರ

ಸಭೆಯಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು, ಕಂಪನಿಯ ನಿರ್ದೇಶಕಿ ಸಮೀನಾ ಕೊಹ್ಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Continue Reading

ಕರ್ನಾಟಕ

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ; ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್, ಬಂಧನ ಸಾಧ್ಯತೆ

Suraj Revanna Case: ಡಿಜಿ ಕಚೇರಿಯಲ್ಲಿ ಶುಕ್ರವಾರ ಸಂತ್ರಸ್ತ, ಜೆಡಿಎಸ್‌ ಕಾರ್ಯಕರ್ತ ದೂರು ನೀಡಿದ್ದರು. ಹಾಸನ ಎಸ್‌ಪಿಗೆ ದೂರಿನ ಪ್ರತಿ ಮೇಲ್ ಮಾಡಲಾಗಿತ್ತು. ಹೀಗಾಗಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ ಕೇಸ್ ದಾಖಲಾಗಿದೆ.

VISTARANEWS.COM


on

Suraj Revanna Case
Koo

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ, ಸಲಿಂಗ ಕಾಮ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ (Suraj Revanna Case) ದಾಖಲಾಗಿದೆ.

ಡಿಜಿ ಕಚೇರಿಯಲ್ಲಿ ಶುಕ್ರವಾರ ಸಂತ್ರಸ್ತ, ಜೆಡಿಎಸ್‌ ಕಾರ್ಯಕರ್ತ ದೂರು ನೀಡಿದ್ದರು. ಹಾಸನ ಎಸ್‌ಪಿಗೆ ದೂರಿನ ಪ್ರತಿ ಮೇಲ್ ಮಾಡಲಾಗಿತ್ತು. ಇ- ಮೇಲ್ ಆಧರಿಸಿ ಸಂತ್ರಸ್ತನನ್ನು ಕರೆಸಿ ಮಾಹಿತಿ ಪಡೆದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಮತ್ತೊಂದೆಡೆ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಅಲ್ಲಗಳೆದಿರುವ ಸೂರಜ್‌ ರೇವಣ್ಣ, ಆಡಿಯೊ ವೈರಲ್‌ ಸಂಬಂಧ ಪ್ರತಿ ದೂರು ದಾಖಲಿಸಲು ಮುಂದಾಗಿದ್ದಾರೆ.

ಸಂತ್ರಸ್ತನ ವಿರುದ್ಧ ಸೂರಜ್‌ ಪ್ರತಿ ದೂರು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಮಾಡಿರುವ ಸಂತ್ರಸ್ತನ ವಿರುದ್ಧ ಪ್ರತಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿತ್ತು. ಇದೀಗ ಸಂತ್ರಸ್ತ ಮಾತನಾಡಿರುವ ಆಡಿಯೊ ಬಗ್ಗೆ ಮಾಹಿತಿ ನೀಡಲು ಪೊಲೀಸರನ್ನು ಭೇಟಿಯಾಗಲು ಸೂರಜ್‌ ತೆರಳಿದ್ದಾರೆ. ಆಡಿಯೊ ಸಂಬಂಧ ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಸೂರಜ್ ರೇವಣ್ಣ ತೆರಳಿದ್ದಾರೆ. ಆಡಿಯೋ ಸಾಕ್ಷ್ಯ ಸಮೇತ ಠಾಣೆಗೆ ಸೂರಜ್ ರೇವಣ್ಣ ತೆರಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Suraj Revanna Case: ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದ ಸೂರಜ್‌ ರೇವಣ್ಣ

ಬಂಧನ ಸಾಧ್ಯತೆ?

ಡಾ. ಸೂರಜ್‌ ರೇವಣ್ಣಗೆ ಬ್ಲಾಕ್‌ಮೇಲ್ ಪ್ರಕರಣದಲ್ಲಿ ವ್ಯಕ್ತಿ ವಿರುದ್ಧ ಹೊಳೆನರಸೀಪುರ ‌ನಗರ ಪೊಲೀಸ್ ಠಾಣೆಯಲ್ಲಿ ನೆನ್ನೆ ದಾಖಲಾಗಿದ್ದ ಎಫ್‌ಐಆರ್ ವಿಚಾರಣೆಗಾಗಿ ಹಾಸನ ಸೆನ್ ಪೊಲೀಸ್ ಠಾಣೆಗೆ ಎಂಎಲ್‌ಸಿ ಸೂರಜ್‌ ರೇವಣ್ಣ ತೆರಳಿದ್ದಾರೆ. ಮತ್ತೊಂದೆರೆ ಅವರ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಹೀಗಾಗಿ ಸೆನ್ ಪೊಲೀಸ್ ಠಾಣೆ ಪೊಲೀಸರು ಸೂರಜ್‌ ರೇವಣ್ಣರನ್ನು ಬಂಧಿಸುವ ಸಾಧ್ಯತೆ ಇದೆ.

ಏನಿದು ಪ್ರಕರಣ?

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದರು.

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗ ಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯದಿಂದ ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದ ಮೇಲೂ ಗಾಯವಾಗಿದೆ ಎಂದು ದೂರುದಾರ ಆರೋಪಿಸಿದ್ದರು.

ಇದನ್ನೂ ಓದಿ | Suraj Revanna Case: ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ; ದೂರು ಸಲ್ಲಿಸಿದ ವ್ಯಕ್ತಿ ವಿರುದ್ಧ ಎಫ್‌ಐಆರ್!

ಮತ್ತೊಂದೆಡೆ ದೂರು ನೀಡಿದ್ದ ವ್ಯಕ್ತಿ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್ ದಾಖಲಾಗಿತ್ತು. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಜೆಡಿಎಸ್‌ ಕಾರ್ಯಕರ್ತನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

Continue Reading
Advertisement
Rushikonda Palace Issue
ದೇಶ9 seconds ago

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

Sumit Nagal
ಕ್ರೀಡೆ6 mins ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ22 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಪ್ರಜ್ವಲ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್30 mins ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ52 mins ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ2 hours ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ3 hours ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Vastu Tips
ಧಾರ್ಮಿಕ3 hours ago

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

Virat kohli
ಪ್ರಮುಖ ಸುದ್ದಿ4 hours ago

Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌