Site icon Vistara News

Financial Intelligence Software: ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶ ಬಿಡುಗಡೆ ಮಾಡಿದ ಸಿಎಂ

CM Siddaramaiah visit police department

ಬೆಂಗಳೂರು: ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶ (Financial Intelligence Software) ಸೇರಿದಂತೆ ವಿವಿಧ ತಂತ್ರಾಂಶಗಳನ್ನು ಸಿಎಂ ಸಿದ್ದರಾಮಯ್ಯ (CM Siddramaiah) ಅವರು ಲೋಕಾರ್ಪಣೆಗೊಳಿಸಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಅವರು, ಪೊಲೀಸ್ ಐಟಿ-V2, ITPA ಸರಳ ಆ್ಯಪ್, ಪೊಲೀಸ್ ಮಿತ್ರ ಚಾಟ್ ಬಾಟ್, CG ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ಧಿಮತ್ತೆ ತಂತ್ರಾಂಶ ಹಾಗೂ ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.

ಗೃಹ ಸಚಿವ ಜಿ. ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಉಪಸ್ಥಿತರಿದ್ದರು.

ಎಲ್ಲರಲ್ಲೂ ಕೊಳ್ಳುವ ಶಕ್ತಿ ತುಂಬುವುದೇ ಧ್ಯೇಯ; ಗ್ಯಾರಂಟಿ ಸಮರ್ಥಿಸಿದ ಸಿಎಂ

ಚಿಕ್ಕ ಬಾಸೂರು (ಹಾವೇರಿ) : ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಅವರು ಸೋಮವಾರ ಶ್ರೀ ನೊಳಂಬ ಲಿಂಗಾಯತ ಸಂಘ (Nolamba Lingayatha Sangha) ಬೆಂಗಳೂರು ವತಿಯಿಂದ ಆಯೋಜಿಸಿದ್ದ ಶ್ರೀ ಗುರು ಶಿವಯೋಗಿ ಸಿದ್ದರಾಮೇಶ್ವರರ (Shivayogi Siddarameshwara Jayanti) 851 ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ.

ಸರ್ಕಾರ ಎಲ್ಲ ಸಮಾಜದಲ್ಲಿನ ಬಡವರನ್ನು ಮುಖ್ಯ ವಾಹಿನಿಗೆ ತಂದು, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಬೇಕು ಎಂದು ಪ್ರಯತ್ನ ಮಾಡುತ್ತಿದೆ. ಅನುಭವ ಮಂಟಪದಲ್ಲಿ ಸಮಸಮಾಜ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳಾಗುತ್ತಿತ್ತು. ಅಂಥ ಸಮಾಜವನ್ನು ಬಸವಾದಿ ಶರಣರು, ಸಿದ್ದರಾಮೇಶ್ವರರು ಬಯಸಿದ್ದರು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಬದುಕಿನ ಸಾರ್ಥಕತೆಯ ಬಗ್ಗೆ ಆತ್ಮಾವಲೋಕನ ಅಗತ್ಯ

ಶಿವಯೋಗಿ ಸಿದ್ದರಾಮೇಶ್ವರರು ಬಸವಣ್ಣನವರ ಸಮಕಾಲೀನರು. ವಚನ ಸಾಹಿತ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 12 ನೇ ಶತಮಾನದಲ್ಲಿ ಶರಣರು ವಚನಗಳನ್ನು ರಚಿಸಿ ಜೀವನದ ಮೌಲ್ಯಗಳನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ. ಜೀವನ ಮೌಲ್ಯಗಳನ್ನು ಮಾವು ಅರಿಯಬೇಕು. ಹುಟ್ಟು ಆಕಸ್ಮಿಕ, ಸಾವು ಖಚಿತವಾದರೂ ಹುಟ್ಟು ಸಾವುಗಳ ಮಧ್ಯೆ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ನಮ್ಮ ಬದುಕಿನ ಅವಧಿಯಲ್ಲಿ ನಮ್ಮ ಬದುಕನ್ನು ನಾವು ಸಾರ್ಥಕಗೊಳಿಸಿಕೊಂಡಿದ್ದೇವೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಸವಾದಿ ಶರಣರು ಮನುಷ್ಯರಾಗಿ ಬದುಕಬೇಕೆಂದು ಹೇಳಿದ್ದಾರೆ. ಜೀವನದ ಸಾರವನ್ನು ಜನರ ಮುಂದಿಡುವ ಪ್ರಯತ್ನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮೇಶ್ವರ ಜಯಂತಿ ಉತ್ಸವದ ವೇಳೆ ಸನ್ಮಾನ

ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದ ವಚನ ಸಾಹಿತ್ಯ

ವಚನ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಮಾತ್ರವಲ್ಲದೆ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ. ಧರ್ಮಾಚರಣೆ, ಆಧ್ಯಾತ್ಮ ಜನರ ಭಾಷೆಯಲ್ಲಿ ಲಭ್ಯವಿರಲಿಲ್ಲ. ಸಾಮಾನ್ಯ ಜನರಿಗೆ ಓದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಜನರ ಭಾಷೆಯಲ್ಲಿ ಇದನ್ನು ತಿಳಿಸಿದ್ದು ಬಸವಣ್ಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶರಣ ಸಾಹಿತ್ಯದಲ್ಲಿ ಬಸವಣ್ಣ, ಚೆನ್ನಬಸವಣ್ಣ, ಅಕ್ಕಮಹಾದೇವಿ ಅಲ್ಲಮಪ್ರಭು, ಸಿದ್ದರಾಮೇಶ್ವರರು ಪ್ರಮುಖರು. ಬಸವಾದಿ ಶರಣರು ಮುಖ್ಯವಾಗಿ ನೀಡಿದ ಮೌಲ್ಯ ಕಾಯಕ ಮತ್ತು ದಾಸೋಹ. ಸತ್ಯವೇ ಸ್ವರ್ಗ, ಮಿತ್ಯವೆ ನರಕ ಎಂದ ಶರಣರು, ಮೌಢ್ಯಗಳನ್ನು ತಿರಸ್ಕರಿಸಿದ್ದರು. ಬಸವಾದಿ ಶರಣರು ವೈಚಾರಿಕ, ವೈಜ್ಞಾನಿಕ ವಿಚಾರಗಳನ್ನು ಜನರ ಮುಂದಿಟ್ಟಿದ್ದಾರೆ. ಕಂದಾಚಾರ, ಮೂಢನಂಬಿಕೆ, ಮೌಢ್ಯಗಳನ್ನು ತಿರಸ್ಕಾರ ಮಾಡಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: CT Ravi : ನಿಂದನೆ ಯಾರು ಮಾಡಿದ್ರೂ ತಪ್ಪೇ; ಸಿದ್ದರಾಮಯ್ಯ ಬೆಂಬಲಿಸುತ್ತಲೇ ತಿವಿದ ಸಿ.ಟಿ ರವಿ

ಸಿದ್ದರಾಮೇಶ್ವರರ ಬೋಧನೆಯನ್ನು ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ. ಮನುಷ್ಯರು ಚಾತುರ್ವರ್ಣ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ಮಾಡಿಕೊಂಡಿದ್ದಾರೆ. ಯಾವ ದೇವಸ್ಥಾನದೊಳಗೆ ಪ್ರವೇಶವಿಲ್ಲವೋ ಆ ದೇವಸ್ಥಾನದೊಳಗೆ ಪ್ರವೇಶಿಸಬೇಡಿ, ನೀವೇ ದೇಗುಲ ನಿರ್ಮಿಸಿ ಪೂಜಿಸಿ ಎಂದು ನಾರಾಯಣ ಗುರುಗಳು ಕರೆ ನೀಡಿದ್ದರು. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಮನುಷ್ಯರಾಗಿರಬೇಕು ಎಂದು ಹೇಳಿದರೆ ಕೆಲವರಿಗೆ ಕೋಪ ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದರು.

Exit mobile version