CM Siddaramaiah : ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ ಹುಟ್ಟಿದೆ ಎಂದ ಸಿದ್ದರಾಮಯ್ಯ - Vistara News

ಕರ್ನಾಟಕ

CM Siddaramaiah : ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ ಹುಟ್ಟಿದೆ ಎಂದ ಸಿದ್ದರಾಮಯ್ಯ

CM Siddaramaiah : ಪ್ರತಿಪಕ್ಷಗಳ ಒಗ್ಗಟ್ಟಿನಿಂದ ಬಿಜೆಪಿ ಭಯಗೊಂಡಿದೆ. ಹೀಗಾಗಿ ದಿಕ್ಕು ತಪ್ಪಿಸುವ ಕೆಲಸ ಮಾಡಲಾಡುತ್ತಿದೆ ಎಂದಿದ್ದಾರೆ ಸಿದ್ದರಾಮಯ್ಯ.

VISTARANEWS.COM


on

Siddaramaiah Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಬೈನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ (INDIA bloc) ಮಹತ್ವದ ಮೂರನೆಯ ಸಭೆಯು ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತವನ್ನು ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದೆ. ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಲು ಸಮನ್ವಯ ಸಮಿತಿಯನ್ನು ರೂಪಿಸಿರುವುದು ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯೋಜಿತವಾಗಿ ಮುಂದುವರಿಯಲು ಕ್ರಮವಹಿಸಿರುವುದು ಸ್ವಾಗತಾರ್ಹ. ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಹೇಳಿದ್ದಾರೆ. ಅವರು ಪತ್ರಿಕಾ ಪ್ರಕಟಣೆಯೊಂದರಲ್ಲಿ ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಅಭಿಪ್ರಾಯಗಳ ಮುಖ್ಯಾಂಶ ಇಲ್ಲಿವೆ

ಅದಾನಿ ರಕ್ಷಣೆಗೆ ನಿಂತ ನರೇಂದ್ರ ಮೋದಿ

ರಾಹುಲ್‌ ಗಾಂಧಿಯವರ ಕ್ರಿಯಾತ್ಮಕ ಸಲಹೆಗಳೂ ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನಿಲುವು-ನಿರ್ಧಾರಗಳು, ವಂಚಕ ಉದ್ಯಮಪತಿಗಳೊಂದಿಗೆ ಸೇರಿ ನಡೆಸುತ್ತಿರುವ ಲೂಟಿ, ಮೈತ್ರಿಕೂಟವು ಎತ್ತುತ್ತಿರುವ ಪ್ರಶ್ನೆಗಳ ಬಗ್ಗೆ ಬಿಜೆಪಿಯ ನಾಯಕರ ಬಳಿ ಉತ್ತರವಿಲ್ಲ. ತಮ್ಮ ಉದ್ಯಮಪತಿ ಗೆಳೆಯ ಅದಾನಿ ಮತ್ತವರ ಸಂಸ್ಥೆಯ ವಿರುದ್ಧದ ಅಕ್ರಮಗಳ ಬಗ್ಗೆ ಜಾಗತಿಕವಾಗಿ ಆಪಾದನೆಗಳು ಕೇಳಿಬರುತ್ತಿದ್ದರೂ ಮೋದಿಯವರು ತಾವೇ ಮುಂದಾಗಿ ಅದಾನಿ ರಕ್ಷಣೆಗೆ ನಿಂತಿದ್ದಾರೆ.

ಅದಾನಿ ಸಂಸ್ಥೆಯ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ಮಾಡಬೇಕು ಎನ್ನುವ ವಿಪಕ್ಷಗಳ ಆಗ್ರಹಕ್ಕೆ ಜಾಣಕಿವುಡಾಗಿದ್ದಾರೆ. ಉದ್ಯಮಪತಿಗಳೊಂದಿಗಿನ ತಮ್ಮ ಅಪವಿತ್ರ ಮೈತ್ರಿ ಪುರಾವೆಸಹಿತ ಹೊರಬೀಳುವ ಭಯ ಮೋದಿಯವರನ್ನು ಕಾಡುತ್ತಿದೆ. ದೇಶದ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಸಾಲದ ಮೇಲಿನ ಬಡ್ಡಿದರದ ಹೆಚ್ಚಳ, ಹೆಚ್ಚುತ್ತಿರುವ ಜನಾಂಗೀಯ ದ್ವೇಷ, ಹಿಂಸಾಚಾರ, ಪ್ರಕೃತಿ ವಿಕೋಪ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಹಾರ ಹುಡುಕಲಾಗದ ‘ಮೋದಿ & ಕಂಪೆನಿ’ ತಮ್ಮ ಹುಳುಕು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ವಿಫಲಯತ್ನಗಳಿಗೆ ಕೈಹಾಕಿದೆ.

ಸಂಸತ್‌ ಅಧಿವೇಶನ ಜ್ವಲಂತ ಸಮಸ್ಯೆಗಳಿಂದ ದೂರ ಓಡುವ ಯತ್ನ

ಅವಸರದಲ್ಲಿ ಕರೆಯಲಾದ ಸಂಸತ್ ನ ವಿಶೇಷ ಅಧಿವೇಶನ, ಒಂದೇ ದೇಶ, ಒಂದೇ ಚುನಾವಣೆ’ಯ ಬಗ್ಗೆ ಅನವಶ್ಯಕ ಚರ್ಚೆಯ ಮೂಲಕ ಜ್ವಲಂತ ಸಮಸ್ಯೆಗಳನ್ನು ಜನರ ಕಣ್ಣುಗಳಿಂದ ಮರೆಮಾಚುವ ಹತಾಶ ಕೆಲಸಕ್ಕೆ ನರೇಂದ್ರ ಮೋದಿ ಮುಂದಾಗಿದ್ದಾರೆ.

ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘ ಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ.

ಇಸ್ರೋ ಸಾಧನೆ ತಮ್ಮದೆಂದು ಬಿಂಬಿಸುವುದು ಸಣ್ಣತನ

ನಮ್ಮ ಹೆಮ್ಮೆಯ ಇಸ್ರೋದ ಶ್ರೇಷ್ಠ ವಿಜ್ಞಾನಿಗಳ ಸಾಧನೆಯನ್ನು ತನ್ನ ಪಕ್ಷದ ಸಾಧನೆ ಎಂದು ಬಿಂಬಿಸಿಕೊಳ್ಳುವಷ್ಟು ಸಣ್ಣತನಕ್ಕೆ ದೇಶದ ಪ್ರಧಾನಿ ಇಳಿದಿರುವುದು ವಿಷಾದನೀಯ ಮಾತ್ರವಲ್ಲ ಖಂಡನೀಯ ಕೂಡಾ ಆಗಿದೆ. ಸೌರಯಾನದ ಯಶಸ್ಸುಗಳಿಗೆ ನಮ್ಮ ವಿಜ್ಞಾನಿಗಳಷ್ಟೇ ಅರ್ಹರು.

ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ? ಇನ್ನು ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು, ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ. ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ ಹೇಳಿ.

ಇದನ್ನೂ ಓದಿ: Congress Politics : ಮತ್ತೆ ಸಿಡಿದೆದ್ದ ರಾಯರೆಡ್ಡಿ; ಸಚಿವರು ಮಾತ್ರವಲ್ಲ ಈಗ ಅಧಿಕಾರಿಗಳೂ ಮಾತು ಕೇಳ್ತಿಲ್ಲ!

ಮೋದಿಯವರೇ ಇನ್ನು ನಿಮ್ಮ ಆಟ ನಡೆಯುವುದಿಲ್ಲ

ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಬತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ. ಇನ್ನು ನಿಮ್ಮ ಈ ಆಟಗಳು ನಡೆಯವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

VISTARANEWS.COM


on

Devarajegowda
Koo

ಹಾಸನ: ಮಹಿಳೆಗೆ ಲೈಂಗಿಕ ಕಿರುಕುಳ, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡ (Devaraje Gowda) ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಇದರೊಂದಿಗೆ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ (Prajwal Revanna Case) ಸುದ್ದಿಯಾಗಿದ್ದ ದೇವರಾಜೇಗೌಡ ಅವರೂ ಜೈಲುಪಾಲಾದಂತಾಗಿದೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಮೇ 10ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು. ಹಾಗಾಗಿ, ಅವರನ್ನು ವಶಕ್ಕೆ ಪಡೆಯಲಾಗಿತ್ತು.

Prajwal Revanna Case

ಆಡಿಯೊ ವೈರಲ್‌

ಪೊಲೀಸರು ವಶಕ್ಕೆ ಪಡೆಯುವ ಮುನ್ನ ವಿಡಿಯೊದಲ್ಲಿ ಮಾತನಾಡಿದ್ದ ವಕೀಲ ದೇವರಾಜೇಗೌಡ, ನಾನು ಎಲ್ಲೂ ಕಾಣೆ ಆಗಿಲ್ಲ. ಮೂರು ದಿನ ರಜೆ ಇರುವುದರಿಂದ ದೇವಾಲಯಕ್ಕೆ ಹೊಗುತ್ತಿದ್ದೇನೆ. ಕಾಣೆ ಆಗುವ ಪರಿಸ್ಥಿತಿ ನನಗೆ ಬಂದಿಲ್ಲ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದೇನೆ. ಆಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಇನ್ನು ಇದೇ ವೇಳೆ ಹಾಸನ ಅಶ್ಲೀಲ‌ ವಿಡಿಯೋ ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಮೂರು ಆಡಿಯೊ ಕ್ಲಿಪ್ ಬಿಡುಗಡೆ ಮಾಡಿದ್ದರು. ಮಾಜಿ ಸಂಸದ ಶಿವರಾಮೇಗೌಡ ಜತೆ ಮಾತನಾಡಿರುವ ಎನ್ನಲಾದ ಎರಡು ಆಡಿಯೊ ತುಣುಕು ವೈರಲ್‌ ಆಗಿದ್ದವು. ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ ಜತೆ ಮಾತನಾಡಿದ ಒಂದು ಆಡಿಯೊ ಇದೆ. ಇನ್ನು ಡಿಕೆಶಿ ವಿಚಾರ ಶಿವರಾಮೇಗೌಡ ಜತೆ ದೇವರಾಜೇಗೌಡ ಮಾತನಾಡುತ್ತಿರುವ ಆಡಿಯೊ ಕೂಡ ಇದ್ದು, ಎಸ್‌ಐಟಿ ವಿಚಾರಣೆಯಲ್ಲಿ ಡಿಕೆಶಿ ಹೆಸರೇಳದಂತೆ ಶಿವರಾಮೇಗೌಡ ಸೂಚಿಸಿದ್ದರು.

ಕಾರ್ತಿಕ್‌, ದೇವರಾಜೇಗೌಡ ಪೆನ್‌ಡ್ರೈವ್‌ ರೂವಾರಿಗಳು

ದೇವರಾಜೇಗೌಡ ಬಂಧನದ ಬಳಿಕ ಮಾತನಾಡಿದ್ದ ಮಾಜಿ ಸಂಸದ ಶಿವರಾಮೇಗೌಡ, ಹಲವು ಆರೋಪ ಮಾಡಿದ್ದಾರೆ. “ಪೆನ್‌ಡ್ರೈವ್‌ ರಿಲೀಸ್‌ ಮಾಡಿರುವುದರ ಹಿಂದೆ ಕಾರು ಚಾಲಕ ಕಾರ್ತಿಕ್‌ ಹಾಗೂ ದೇವರಾಜೇಗೌಡ ಇದ್ದಾರೆ. ಏಟ್ರಿಯಾ ಹೋಟೆಲ್‌ನಲ್ಲಿ ಮಾತನಾಡುವಾಗ ನನ್ನ ವಿರುದ್ಧ ತನಿಖೆ ಮಾಡಬೇಕು ಅಂತಿದ್ದಾರೆ ಎಂದ. ಡಿ.ಕೆ.ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಬಗ್ಗೆ ಪದೇಪದೆ ಮಾತನಾಡಬೇಡ ಎಂದೆ. ನಿನ್ನದು ನೀನು ಸರಿಮಾಡಿಕೊ. ಉಳಿದ ಉಸಾಬರಿ ನಿನಗೆ ಬೇಡ ಎಂಬುದಾಗಿ ಹೇಳಿದ್ದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading

ಕರ್ನಾಟಕ

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Murder Case: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ಯವಕನ ಹತ್ಯೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕತ್ತು ಕೊಯ್ಯಲಾಗಿದೆ.

VISTARANEWS.COM


on

Murder Case
Koo

ಕಲಬುರಗಿ: ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ (Murder Case) ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ ವಿಚಾರಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ರಮಜಾನ್ ಮೆಹಬೂಬ್ ತಾರಾ (24) ಹತ್ಯೆಯಾದ ಯುವಕ. ಘಟನಾ ಸ್ಥಳಕ್ಕೆ ಅಫಜಲಪುರ ಸಿಪಿಐ ಮತ್ತು ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

14 ವರ್ಷದ ಬಾಲಕಿಯ ಅಪಹರಿಸಿ ಕೊಲೆಯತ್ನ

ಕಲಬುರಗಿ: 14 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆಯತ್ನ ಮಾಡಿರುವ ಘಟನೆ ಕಲಬುರಗಿ ನಗರದ ಮರಪಳ್ಳಿ‌ ಲೇಔಟ್‌ನಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಹಲರ್ಕಟಿ ಗ್ರಾಮದ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕತ್ತು ಕೊಯ್ಯಲಾಗಿದೆ.

ಇದನ್ನೂ ಓದಿ | Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

ಹಲರ್ಕಟಿ ಗ್ರಾಮದಿಂದ ಬಾಲಕಿಯನ್ನು ಕಲಬುರಗಿಗೆ ಕರೆದುಕೊಂಡು ಹೋಗಿದ್ದ ಕಿರಾತಕರು, ಕಲಬುರಗಿಯ ಮರಪಳ್ಳಿ‌ಲೇಔಟ್ ಬಳಿ ಕತ್ತು ಕೊಯ್ದು ಪರಾರಿಯಾಗಿದ್ದಾರೆ. ಸ್ಥಳೀಯರು ಬಾಲಕಿಯ ರಕ್ಷಣೆ ಮಾಡಿ ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರ್ಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Murder Case in kodagu

ಕೊಡಗು:‌ ಮದುವೆ ರದ್ದಾಗಿದ್ದಕ್ಕೆ ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಬಾಲಕಿಯನ್ನು ಕೊಲೆ (Murder Case) ಮಾಡಿ ರುಂಡದೊಂದಿಗೆ ಪರಾರಿ ಆಗಿದ್ದ. ಕಾಡಿನಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಶನಿವಾರ ಬಂಧಿಸಿದ್ದರು. ಆದರೆ ಆರೋಪಿ ಸಿಕ್ಕರೂ ಬಾಲಕಿಯ ರುಂಡ ಪತ್ತೆಯಾಗಿರಲಿಲ್ಲ. ಇದೀಗ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲೆ ಇರಿಸಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಶುಕ್ರವಾರ ಇಡೀ ದಿನ ಹುಡುಕಾಡಿದ್ದರೂ ಬಾಲಕಿ ಮೀನಾಳ ತಲೆ ಸಿಕ್ಕಿರಲಿಲ್ಲ. ಇತ್ತ ಮಗಳ ತಲೆ ಸಿಗದೆ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದರು. ಹೀಗಾಗಿ ಶನಿವಾರ ಮತ್ತೆ 40ಕ್ಕೂ ಹೆಚ್ಚು ಪೊಲೀಸರಿಂದ ಶೋಧ ಕಾರ್ಯ ನಡೆದಿದ್ದು, ಹತ್ಯೆಯಾಗಿದ್ದ ಮೀನಾ ರುಂಡ ಪತ್ತೆ ಮಾಡಿದ್ದಾರೆ. ತಲೆ ವಶಕ್ಕೆ ಪಡೆದು ಬಾಲಕಿ ಮನೆ ಬಳಿ ಮಹಜರ್‌ ನಡೆಸಿದ್ದಾರೆ.

ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ

ಕೊಡಗಿನಲ್ಲಿ ಬಾಲಕಿ ಹತ್ಯೆಯ ಸ್ಥಳ ಮಹಜರು ವೇಳೆ ವಿಚಿತ್ರ ಘಟನೆಯೂ ನಡೆದಿದೆ. ರುಂಡ ಪತ್ತೆ ಸ್ಥಳದಲ್ಲಿ ಬಾಲಕಿ ಸಹೋದರನ ಮೈಮೇಲೆ ಶಕ್ತಿ ಆವಾಹನೆ ಆದ ರೀತಿ ವರ್ತಿಸಿದ್ದಾನೆ. ರುಂಡ ಪತ್ತೆಯಾದ ಸ್ಥಳಕ್ಕೆ ಆರೋಪಿ ಪ್ರಕಾಶ್‌ ಮತ್ತು ಬಾಲಕಿ ಸಹೋದರ ಹೋದಾಗ ಏಕಾಏಕಿ ಶಕ್ತಿ ಆವಾಹನೆ ಆದಂತೆ ವರ್ತಿಸಿದ್ದಾನೆ. ಏಕಾಏಕಿ ಆತನ ವರ್ತನೆಗೆ ಪೊಲೀಸರು ಕ್ಷಣಕಾಲ ಬೆಚ್ಚಿ ಬಿದ್ದರು. ಕೂಡಲೇ ಅಲ್ಲಿದ್ದವರು ಮೀನಾಳ ಸಹೋದರನನ್ನು ಹಿಡಿದುಕೊಂಡು ಸಮಾಧಾನಪಡಿಸಿದರು.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

Continue Reading

ಕರ್ನಾಟಕ

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Selco India: ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ವಾರ್ಷಿಕ ಪ್ರಶಸ್ತಿಗೆ ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ ಭಾಜನರಾಗಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

VISTARANEWS.COM


on

Richard Hansen
Koo

ಬೆಂಗಳೂರು: ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು (Selco India) 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ.

ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ತಿಳಿಸಿದ್ದಾರೆ.

ರಿಚರ್ಡ್ ಹ್ಯಾನ್ಸೆನ್ ಅವರು 1984ರಿಂದ ಮೊದಲ ಬಾರಿಗೆ ಉತ್ತರ ಅಮೇರಿಕಾದ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಮೈಕ್ರೋಫೈನಾನ್ಸ್ ಪರಿಹಾರಗಳೊಂದಿಗೆ ಪಿವಿ ತಂತ್ರಜ್ಞಾನವನ್ನು ಪರಿಚಯಿಸಲು ಲಾಭರಹಿತ ಕಾರ್ಯಕ್ರಮವನ್ನು ಮುನ್ನೆಡೆಸಿದರು. ನಂತರ ಅವರು 1989 ರಲ್ಲಿ ಇದೇ ಮಾದರಿಯನ್ನು ಹೊಂಡುರಾಸ್‌ನಲ್ಲಿ ಅಮೆರಿಕದ ಇಂಧನ ಇಲಾಖೆ ಜತೆಗೆ ಒಪ್ಪಂದ ಮಾಡಿಕೊಂಡು ಪುನರಾವರ್ತಿಸಿದರು. ಈ ಕಾರ್ಯವು ಜಾಗತಿಕವಾಗಿ ಗಮನಾರ್ಹ ಪುನರಾವರ್ತನೆಗೆ ಕಾರಣವಾಯಿತು.

ಇದನ್ನೂ ಓದಿ: Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

ಪ್ರಸ್ತುತ ಎನರ್ಜಿ ಅಕ್ಸೆಸ್‌ ಫೌಂಡೇಷನ್ (www.energyaccessfoundation.org) ನ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ರಿಚರ್ಡ್ ಹ್ಯಾನ್ಸೆನ್, ಜಾಗತಿಕವಾಗಿ ಸುಸ್ಥಿರ ಶಕ್ತಿಯೆಡೆಗಿನ ಪರಿವರ್ತನೆಗೆ ಸಹಾಯ ಮಾಡುವ ಉದ್ದೇಶದಿಂದ 1993 ರಲ್ಲಿ ರಿಚರ್ಡ್ ಸೋಲುಜ್ ಇಂಕ್ (Soluz Inc.,) ಎಂಬ ಸಾಮಾಜಿಕ ಉದ್ಯಮವನ್ನು ಸ್ಥಾಪಿಸಿದರು. ಇದು ಪಿವಿ ಉತ್ಪನ್ನಗಳು ಮತ್ತು ಸಂಬಂಧಿತ ಮೈಕ್ರೋಫೈನಾನ್ಸ್ ಪರಿಹಾರಗಳನ್ನು ಪೂರೈಸುವ ಒಂದು ಅಂಗಸಂಸ್ಥೆಯಾಗಿ ಕೆಲಸ ಮಾಡುತ್ತಿದೆ.

ರಿಚರ್ಡ್ ಹ್ಯಾನ್ಸೆನ್, ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ ನ್ಯಾಷನಲ್ ಡೆವಲಪ್ಮೆಂಟ್ (ಯುಎಸ್‌ಎಐಡಿ), ವಿಶ್ವ ಬ್ಯಾಂಕ್ ಮತ್ತು ಇಂಟರ್-ಅಮೆರಿಕನ್ ಅಭಿವೃದ್ಧಿ ಬ್ಯಾಂಕ್ ಸೇರಿದಂತೆ ಬಾಂಗ್ಲಾದೇಶ, ಬೊಲಿವಿಯಾ, ಡೊಮಿನಿಕನ್ ರಿಪಬ್ಲಿಕ್, ಇಥಿಯೋಪಿಯಾ, ಹೈಟಿ, ಭಾರತ, ನೇಪಾಳ, ನಿಕರಾಗುವಾ, ಫಿಲಿಪೈನ್ಸ್ ದೇಶಗಳು ಮತ್ತು ಪ್ರಮುಖ ಸಂಸ್ಥೆಗಳಿಗೆ ಸಲಹಾ ಸೇವೆಗಳನ್ನು ಒದಗಿಸಿದ್ದಾರೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ಸೂರ್ಯಮಿತ್ರ ಪ್ರಶಸ್ತಿ

ಪ್ರತಿಷ್ಠಿತ ರಾಮೋನ್‌ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರಾಗಿರುವ ಡಾ. ಎಚ್. ಹರೀಶ್ ಹಂದೆ ಅವರು ಸ್ಥಾಪಿಸಿ ಮುನ್ನಡೆಸುತ್ತಿರುವ ಸೆಲ್ಕೋ ಸಂಸ್ಥೆಯು ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು 2012ರಿಂದ ಕೊಡಮಾಡುತ್ತಾ ಬಂದಿದೆ. ಈ ಪ್ರಶಸ್ತಿಯನ್ನು, ಸುಸ್ಥಿರ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುವ ಹರಿಕಾರರು ಮತ್ತು ಗ್ರಾಮೀಣ ಜನತೆಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದ ಅಸಾಧಾರಣ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತದೆ.

ಸೆಲ್ಕೋ ಇಂಡಿಯಾ ಸಂಸ್ಥೆ

1995ರಲ್ಲಿ ಸ್ಥಾಪಿತವಾದ ಸೆಲ್ಕೋ ಇಂಡಿಯಾ ಸಂಸ್ಥೆಯು, ಮಾನ್ಯತೆ ಪಡೆದ ಸಾಮಾಜಿಕ ಉದ್ಯಮವಾಗಿದ್ದು, ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ನವೀಕರಿಸಬಹುದಾದ ಇಂಧನ ಆಧಾರಿತ ಪರಿಹಾರಗಳನ್ನು ಒದಗಿಸುವ ಮೂಲಕ ಬಡತನ ನಿರ್ಮೂಲನೆಯಲ್ಲಿ ವಿಶಿಷ್ಟ ಮಾದರಿಯ ಕೆಲಸ ಮಾಡುತ್ತಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸೆಲ್ಕೋ ಇಂಡಿಯಾ, ದೇಶಾದ್ಯಂತ ಏಳು ರಾಜ್ಯಗಳಲ್ಲಿ ಸೌರ ಇಂಧನದ ಮೂಲಕ ಶಿಕ್ಷಣ, ಆರೋಗ್ಯ ರಕ್ಷಣೆ, ಜೀವನೋಪಾಯ ಮತ್ತು ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

ಈ ವಲಯಗಳ ಸುಸ್ಥಿರ ಅಭಿವೃದ್ಧಿಗೆ ಬೇಕಾದ ಹಣಕಾಸು, ಕೌಶಲ್ಯಾಭಿವೃದ್ಧಿ, ಪೂರೈಕೆ ಸರಪಳಿ ಮತ್ತು ನೀತಿ-ನಿರೂಪಗಳ ಚೌಕಟ್ಟನ್ನು ಬಲಪಡಿಸುವ ಕೆಲಸಗಳ ಮೂಲಕ ಎಲ್ಲರೂ ಬಳಸಲು ಸಾಧ್ಯವಾಗುವಂತೆ ವಿಕೇಂದ್ರೀಕೃತ ಇಂಧನ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಭಾರತವು ಹೊಂದಿರುವ, ಹವಾಮಾನ ಬದಲಾವಣೆ ತಗ್ಗಿಸುವಿಕೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪುವ ಬದ್ಧತೆಯ ಸಂದರ್ಭದಲ್ಲಿ ಸೆಲ್ಕೋದ ಈ ಕಾರ್ಯವು ಹೆಚ್ಚು ಪ್ರಸ್ತುತವಾಗಿದೆ. ಸೆಲ್ಕೋದ ಈ ಎಲ್ಲ ಸಮಾಜಮುಖಿ ಕೆಲಸಗಳಿಗಾಗಿ ಆಶ್ಡೆನ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಕರ್ನಾಟಕ

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಐದು ಹಾಗೂ ಜೆಡಿಎಸ್‌ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ.

VISTARANEWS.COM


on

Legislative Council Election
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲೂ (Legislative Council Election) ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನು ಬಿಜೆಪಿ (BJP) ಇಟ್ಟುಕೊಂಡರೆ, ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ (JDS) ಬಿಟ್ಟುಕೊಟ್ಟಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ಈಗ ವಿಧಾನ ಪರಿಷತ್‌ ಚುನಾವಣೆಯಲ್ಲೂ ಒಗ್ಗೂಡಿ ಸ್ಪರ್ಧಿಸಲು ತೀರ್ಮಾನಿಸಿವೆ. ಜೂನ್‌ 3ರಂದು ಮೇಲ್ಮನೆಗೆ ಚುನಾವಣೆ ನಡೆಯಲಿದೆ.

ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಕಣಕ್ಕಿಳಿದಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಬಿಜೆಪಿಗೆ ನಾಲ್ಕು ಕ್ಷೇತ್ರ ಎಂದಿದ್ದ ಬಿಎಸ್‌ವೈ

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದರು. ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಎಂದಿದ್ದರು. ಮೈಸೂರಿನಲ್ಲಿ ಮಾತನಾಡಿದ್ದ ಅವರು, “ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ” ಎಂದಿದ್ದರು.

ಇದಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರ ಜತೆ ವಿಜಯೇಂದ್ರ ಚರ್ಚೆ ಮಾಡಿದ್ದರು. ಈಗ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading
Advertisement
Devarajegowda
ಕರ್ನಾಟಕ5 mins ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ5 mins ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ33 mins ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ37 mins ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Rain News
ಮಳೆ51 mins ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

ICMR Dietary Guidelines
ಆರೋಗ್ಯ1 hour ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Dwarka Tour
ಪ್ರವಾಸ1 hour ago

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

Narendra Modi
ದೇಶ1 hour ago

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

IPL 2024
ಪ್ರಮುಖ ಸುದ್ದಿ2 hours ago

IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

7th Pay Commission
ನೌಕರರ ಕಾರ್ನರ್3 hours ago

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು6 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ16 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌