Site icon Vistara News

CM Siddaramaiah : 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಸಿದ್ದರಾಮಯ್ಯ

CM Siddaramaiah Bidar tour

ಬೀದರ್: ಲೋಕಸಭಾ ಚುನಾವಣೆಯ (Lokasabha Election 2024) ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ (Congress Candidates list) ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಗುರುವಾರ ನಡೆಯಲಿರುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಬೀದರ್‌ ಜಿಲ್ಲಾ ಪ್ರವಾಸಕ್ಕೆ (Bidar District tour) ಆಗಮಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಬೆಂಗಳೂರಿನ ಎಚ್ ಎ ಎಲ್‌ನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಅವರಿಗೆ ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು‌ ಘೋಷಿಸಿದ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ ಕಾರ್ಯಕ್ರಮವಿದೆ.

ರಾಮೇಶ್ವರ ಕೆಫೆ (Rameshwara Cafe) ಬಾಂಬ್ ಸ್ಫೋಟ ಪ್ರಕರಣದ ಸುಳಿವು ದೊರೆತಿದೆ

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದರು.

ಬಾಕಿ ಇರುವ ಕಾಮಗಾರಿಗಳ ಬಿಲ್ಲು ಪಾವತಿಗೆ ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ

ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪಾವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ದಲಿತ ಸಿಎಂ: ಅಂಬೇಡ್ಕರ್ ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ

ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಹೇಳಿಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ : CM Siddaramaiah: ನೀರಾವರಿ ಯೋಜನೆಗಳ ಬಗ್ಗೆ ಬಿಜೆಪಿಯ ಒಬ್ಬೇ ಒಬ್ಬ ಸಂಸದ ಧ್ವನಿ ಎತ್ತಿಲ್ಲ: ಸಿದ್ದರಾಮಯ್ಯ ಕಿಡಿ

ಬಸವಣ್ಣ-ಸಿದ್ದರಾಮಯ್ಯ: ಸಮಾನ ಕಟೌಟ್‌ ಹಾಕಿದ್ದಕ್ಕೆ ಆಕ್ರೋಶ

ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯುತ್ತಿರುವ ಲಿಂಗಾಯತ ಮಹಾಸಭಾದ ಕಾರ್ಯಕ್ರಮದಲ್ಲಿ ವಿಶ್ವಗುರು ಬಸವಣ್ಣನಿಗೆ ಸರಿಸಮನಾಗಿ ಸಿಎಂ ಸಿದ್ದರಾಮಯ್ಯ ಅವರ ಕಟೌಟ್ ಹಾಕಿದ್ದಕ್ಕೆ ಬಸವ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಎಂಗೆ ಕಟೌಟ್ ಗೆ ಬಾರಿ ವಿರೋಧ ವ್ಯಕ್ತವಾಗಿದ್ದು, ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ ವಿಶ್ವ ಗುರು ಬಸವಣ್ಣ ಎಲ್ಲಿ, ಜಾತಿವಾದಿ ಸಿಎಂ ಸಿದ್ದರಾಮಯ್ಯ ಎಲ್ಲಿ ಎಂದು ಕೆಲವರು ಕೇಳಿದ್ದಾರೆ.

ಬಸವಣ್ಣನನ್ನು ಕನ್ನಡದ ಸಾಂಸ್ಕೃತಿಕ ನಾಯಕ ಮಾಡಿದ್ದು ಹೆಮ್ಮೆ ಇದೆ. ಆದರೆ ಸಿಎಂ ಹೋಲಿಕೆಗೂ ಒಂದು ಮಿತಿ ಇರಬೇಕು. ಜಾತಿ ರಹಿತ ಸಮಾಜದ ಸಂದೇಶವನ್ನು ಸಾರಿದ್ದು ಬಸವಣ್ಣ. ಆದರೆ ಜಾತಿವಾದಿ ಸಿಎಂ ಸಿದ್ದರಾಮಯ್ಯ ಬಸವಣ್ಣನವರ ಜೊತೆ ಹೋಲಿಕೆ ಖಂಡನೀಯ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಭಿನಂದನಾ ಸಮಾರಂಭ ನಡೆಯುವ ಥೇರು ಮೈದಾನದ ಮುಂಭಾಗ ಹಾಕಿರುವ ಕಟೌಟ್‌ಗಳ ಬಗ್ಗೆ ಈ ಆಕ್ಷೇಪ ವ್ಯಕ್ತವಾಗಿದೆ.

Exit mobile version