Site icon Vistara News

CM Siddaramaiah : ಪ್ರತಾಪ್‌ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆ, ಅದಕ್ಕೇ ಟಿಕೆಟ್‌ ಕೊಡ್ತಿಲ್ಲ ಎಂದ ಸಿದ್ದರಾಮಯ್ಯ

CM Siddaramaiah PratapSimha

ಚಾಮರಾಜನಗರ: ಮೈಸೂರು ಸಂಸದ ಪ್ರತಾಪ್ ಸಿಂಹ (MP Pratapsimha) ಅವರು ಹೆಸರು ಕೆಡಿಸಿಕೊಂಡಿದ್ದಾರೆ. ಹಾಗಾಗಿ ಅವರಿಗೆ ಟಿಕೆಟ್ ಕೊಡ್ತಿಲ್ಲ ಅನಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್. ಧ್ರುವ ನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಜತೆ ಮಾತನಾಡಿದರು.

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ನಡುವೆ ಹೊಂದಾಣಿಕೆ ರಾಜಕಾರಣ (Adjustment Politics) ನಡೆದಿದೆ ಎಂಬ ಮೈಸೂರು ಸಂಸದ ಪ್ರತಾಪ್‌ಸಿಂಹ ಅವರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಯಾವನೋ ಒಬ್ಬ ದಾರಿಯಲ್ಲಿ ಹೋಗುವವರು ಹೇಳಿದ್ರೆ ಆಗಲ್ಲ. ಈಗ ಪ್ರತಾಪ್‌ ಸಿಂಹ ಅವರಿಗೆ ಬಿಜೆಪಿಯವರು ಟಿಕೆಟ್‌ ನಿರಾಕರಿಸಿದ್ದಾರಲ್ಲಾ ಯಾಕೆ? ನಾನು ಹೊಂದಾಣಿಕೆ ಮಾಡಿದ್ನಾ? ಯದುವೀರ್ ಒಡೆಯರ್‌ (Yaduveer Odeyar) ಅವರಿಗೆ ನಾನು ಬಿಜೆಪಿಗೆ ಹೋಗಿ ನಿಲ್ಲು ಅಂತ ಹೇಳಿದ್ನಾ? ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆ ಅಂತ ಅವರಿಗೆ ಟಿಕೆಟ್ ಕೊಡ್ತಿಲ್ಲ ಅನ್ಸುತ್ತೆ. ಅದನ್ನು ಬಿಟ್ಟು ನೀವೇ ಸೃಷ್ಟಿ ಮಾಡಿ ಹೊಂದಾಣಿಕೆ ರಾಜಕೀಯ ಅಂತ ಹೇಳಿದ್ರೆ ಹೇಗೆ ಎಂದು ಅವರು ಪ್ರಶ್ನೆ ಮಾಡಿದರು.

ʻʻನನಗೆ ಟಿಕೆಟ್ ಕೊಟ್ರೆ ಸಿಎಂ ಕುರ್ಚಿ ಹೋಗುತ್ತದೆʼʼ ಎನ್ನುವ ಪ್ರತಾಪ್ ಸಿಂಹ ಹೇಳಿಕೆಗೆ ಲೇವಡಿಯ ಪ್ರತಿಕ್ರಿಯೆ ನೀಡಿದ ಅವರು, ʻʻಓಹ್… ಪ್ರತಾಪ್‌ ಸಿಂಹ ಎರಡು ಸಲ ಎಂಪಿ ಆಗಿದ್ದ ಅಲ್ವಾ? ಯಾಕೆ ನನ್ನ ಕುರ್ಚಿ ಅಲುಗಾಡಲಿಲ್ಲ.?ʼʼ ಎಂದು ಕೇಳಿದರು.

ʻʻನಮಗೆ ಬಿಜೆಪಿ ಯಾರನ್ನ ಅಭ್ಯರ್ಥಿ ಮಾಡ್ತಾರೆ ಎನ್ನುವ ಪ್ರಶ್ನೆ ಇಲ್ಲವೇ ಇಲ್ಲ. ನಾವು ಬಿಜೆಪಿಯನ್ನು ಸೋಲಿಸಬೇಕು ಅಷ್ಟೇ.ʼʼ ಎಂದ ಅವರು, ನಾವು ಕಾಂಗ್ರೆಸ್ ಬಡವರ ಪರ ನೀಡಿರುವ ಅಭಿವೃದ್ಧಿಗಳ ಮೇಲೆ ಅವಲಂಬನೆ ಆಗಿದ್ದೇವೆ ಹೊರತು ಬಿಜೆಪಿ ಅಭ್ಯರ್ಥಿ ಮೇಲೆ ಅಲ್ಲ. ನಾವು ಬಿಜೆಪಿ ನ ಸೋಲಿಸುತ್ತೇವೆ ಅಷ್ಟೆʼʼ ಎಂದು ಚಾಮರಾಜನಗರದ ಹೆಗ್ಗವಾಡಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ : MP Pratapsimha : ಯದುವೀರ್‌ಗೇ ಟಿಕೆಟ್‌ ಪಕ್ಕಾ; ಉಗ್ರಪ್ರತಾಪಿಯಂತೆ ಸಿಡಿದೆದ್ದ ಪ್ರತಾಪ್‌ಸಿಂಹ

ಸಿಎಎ ಜಾರಿಗೆ ಈಗ ಟೈಮ್‌ ಬಂತಾ? ಇಷ್ಟು ದಿನ ಯಾಕೆ ಮಾಡಿಲ್ಲ?

ಸಿಎಎ ಜಾರಿಯ ಹಿಂದೆ ರಾಜಕೀಯ ಉದ್ದೇಶ ಇದೆ. ಚುನಾವಣೆಗಾಗಿ ಅದನ್ನು ಜಾರಿ ಮಾಡಿದ್ದಾರೆ. ಅವರು ಇಷ್ಟು ದಿನ ಯಾಕೆ ಮಾಡಿರಲಿಲ್ಲ.? ಎಂದು ಕೇಳಿದ ಸಿದ್ದರಾಮಯ್ಯ ಅವರು, ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ನಮ್ಮ ವಿರೋಧ ಇದೆ ಎಂದರು.

ಕಾಂಗ್ರೆಸ್ ಸರ್ಕಾರ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಕೊಡುತ್ತಿದೆ ಎನ್ನುವ ಆರ್. ಅಶೋಕ್ ಆರೋಪಕ್ಕೂ ಪ್ರತ್ಯುತ್ತರ ನೀಡಿದ ಸಿದ್ದರಾಮಯ್ಯ ಅವರು, ʻʻಅದೆಲ್ಲ ಸುಳ್ಳು. ನೀರು ಬಿಡುವುದಕ್ಕೆ ನೀರು ಎಲ್ಲಿದೆ? ನಾವು ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಕೊಡಲ್ಲ. ಅವರು ಸಹ ನಮ್ಮಿಂದ ನೀರು ಕೇಳಿಲ್ಲ. ತಮಿಳುನಾಡಿನವರೂ ಕೇಳಿದ್ರೂ ಕೊಡಲ್ಲ, ಕೇಂದ್ರದವರು ಹೇಳಿದ್ರೂ ಕೊಡಲ್ಲ. ಅಲ್ಲದೆ ನೀರು ಎಲ್ಲಿದೆ ಬಿಡುವುದಕ್ಕೆ ಡ್ಯಾಂ ಖಾಲಿ ಇದೆ ಎಂದರು ಹೇಳಿದರು.

Exit mobile version