CM Siddaramaiah: ವಿಪಕ್ಷದವರು ಗೂಂಡಾಗಳು ಎಂದು ಕರೆದ ಸಿಎಂ ಕ್ಷಮೆ ಕೇಳಲೇಬೇಕು; ಕೋಟ ಶ್ರೀನಿವಾಸ್‌ ಪೂಜಾರಿ - Vistara News

ರಾಜಕೀಯ

CM Siddaramaiah: ವಿಪಕ್ಷದವರು ಗೂಂಡಾಗಳು ಎಂದು ಕರೆದ ಸಿಎಂ ಕ್ಷಮೆ ಕೇಳಲೇಬೇಕು; ಕೋಟ ಶ್ರೀನಿವಾಸ್‌ ಪೂಜಾರಿ

CM Siddaramaiah: ಛೀ, ಛೀ ಎಂಬಿತ್ಯಾದಿ ಅತ್ಯಂತ ಕಠಿಣ ಕೆಟ್ಟ ಶಬ್ದಗಳನ್ನು ಸಿಎಂ ಸಿದ್ದರಾಮಯ್ಯ ಬಳಸಿದ್ದಾರೆ. ಮುಖ್ಯಮಂತ್ರಿಯೊಬ್ಬರು ಸದನದಲ್ಲಿ ಗೂಂಡಾಗಳು ಎಂಬ ಪದವನ್ನು ಬಳಸಿದ್ದನ್ನು ನಾನು ನೋಡಿಲ್ಲ. ಅವರು ಎರಡೂ ಶಬ್ದಗಳನ್ನು ವಾಪಸ್ ಪಡೆದು ಕ್ಷಮೆ ಕೇಳಲು ಆಗ್ರಹಿಸಿದ್ದೇವೆ. ಇದೆಲ್ಲವನ್ನೂ ಪ್ರತಿಭಟಿಸಿ ನಾವು ಮತ್ತು ನಮ್ಮ ಸಹಪಕ್ಷ ಜೆಡಿಎಸ್‍ನವರು ಸಭಾತ್ಯಾಗ ಮಾಡಿದ್ದೇವೆ ಎಂದು ಕೋಟ ಶ್ರೀನಿವಾಸ್‌ ಪೂಜಾರಿ ಆಗ್ರಹಿಸಿದ್ದಾರೆ.

VISTARANEWS.COM


on

CM Siddaramaiah should apologise for calling opposition goondas says Kota Shrinivas Poojari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಸದನದಲ್ಲಿ (Karnataka Budget Session 2024) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನಡವಳಿಕೆ ಅತ್ಯಂತ ಆಕ್ಷೇಪಾರ್ಹವಾಗಿತ್ತು. ಅವರು ವಿಪಕ್ಷದವರನ್ನು ಗೂಂಡಾಗಳು ಎಂದು ಕರೆದಿದ್ದಾರೆ. ಇದಕ್ಕೆ ಅವರು ಕ್ಷಮೆ ಕೇಳಲೇಬೇಕು. ಇವರಿಗೆ ರಾಜ್ಯದ ಜನರು ಸೂಕ್ತ ಸಮಯದಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ (Kota Shrinivas Poojari) ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರ ಮಾತಿನಿಂದ ಸಿಟ್ಟಾದ ಪ್ರತಿಪಕ್ಷ ನಾಯಕರು ಸಭಾತ್ಯಾಗ ಮಾಡಿ ಹೊರಗೆ ಬಂದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕೋಟಾ ಶ್ರೀನಿವಾಸ ಪೂಜಾರಿ, ನಾಲ್ಕರಿಂದ ಐದು ನಿಮಿಷದ ಮಿತಿ ಉಳ್ಳ ಪ್ರಶ್ನೆಗೆ ಸಂಬಂಧಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಸುದೀರ್ಘವಾಗಿ ಟೀಕಿಸಿದ್ದಾರೆ. ಗಂಟೆಗಟ್ಟಲೇ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು, ನಾವು ಆಕ್ಷೇಪಿಸಿದ್ದೇವೆ. ಆದರೆ, ನಮ್ಮ ಆಕ್ಷೇಪಕ್ಕೆ ಉತ್ತರಿಸುವುದನ್ನು ಬಿಟ್ಟ ಸಿಎಂ ಅವರು ಸದನದಲ್ಲಿ ಇದ್ದ ಎಲ್ಲ ವಿಪಕ್ಷಗಳನ್ನು ಗೂಂಡಾಗಳು ಎಂದಿದ್ದಾರೆ ಎಂದು ಕಿಡಿಕಾರಿದರು.

ಛೀ, ಛೀ ಎಂಬಿತ್ಯಾದಿ ಅತ್ಯಂತ ಕಠಿಣ ಕೆಟ್ಟ ಶಬ್ದಗಳನ್ನು ಅವರು ಬಳಸಿದ್ದಾರೆ. ಮುಖ್ಯಮಂತ್ರಿಯೊಬ್ಬರು ಸದನದಲ್ಲಿ ಗೂಂಡಾಗಳು ಎಂಬ ಪದವನ್ನು ಬಳಸಿದ್ದನ್ನು ನಾನು ನೋಡಿಲ್ಲ. ಅವರು ಎರಡೂ ಶಬ್ದಗಳನ್ನು ವಾಪಸ್ ಪಡೆದು ಕ್ಷಮೆ ಕೇಳಲು ಆಗ್ರಹಿಸಿದ್ದೇವೆ. ಇದೆಲ್ಲವನ್ನೂ ಪ್ರತಿಭಟಿಸಿ ನಾವು ಮತ್ತು ನಮ್ಮ ಸಹಪಕ್ಷ ಜೆಡಿಎಸ್‍ನವರು ಸಭಾತ್ಯಾಗ ಮಾಡಿದ್ದೇವೆ ಎಂದು ತಿಳಿಸಿದರು.

ಜೆಡಿಎಸ್‍ನ ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುದೀರ್ಘ ಉತ್ತರವನ್ನು ಸೌಜನ್ಯದಿಂದ ಕೇಳಿಸಿಕೊಳ್ಳುತ್ತಿದ್ದೆವು. ಪದೇ ಪದೆ ಅವರು ಕೇಂದ್ರ ಸರ್ಕಾರವನ್ನು ದೂರಿದ್ದಾರೆ. ಆಗ ಆಕ್ಷೇಪಿಸಿದಾಗ ‘ನೀವು ವಿಪಕ್ಷ ಸದಸ್ಯರು ಗೂಂಡಾಗಳಾ? ಥೂ, ಛೀ ಎಂದು ನಮ್ಮನ್ನೆಲ್ಲ ಬೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ’ ಎಂದು ಟೀಕಿಸಿದರು.‌

ಆರೂವರೆ ಕೋಟಿ ಜನರನ್ನು ಪ್ರತಿನಿಧಿಯಾಗಿರುವ ಮುಖ್ಯಮಂತ್ರಿಗಳು ಅಸಾಂವಿಧಾನಿಕ ಪದವನ್ನು ಬಳಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಪದ ಬಳಕೆಗೆ ವಿಷಾದ ಸೂಚಿಸಿಲ್ಲ. ಸಿಎಂ ಅವರ ವರ್ತನೆ, ಪದ ಪ್ರಯೋಗದಿಂದ ನಮಗೆ ಬಹಳ ನೋವಾಗಿದೆ. ಆದ್ದರಿಂದ ವಿಪಕ್ಷದ ಸದಸ್ಯರೆಲ್ಲರೂ ಸಭಾತ್ಯಾಗ ಮಾಡಿದ್ದೇವೆ ಎಂದು ಟಿ.ಎ. ಶರವಣ ತಿಳಿಸಿದರು.

ರಾಜ್ಯದ ಜನರು ಮುಖ್ಯಮಂತ್ರಿಗಳ ವರ್ತನೆಗೆ ತಕ್ಕ ಉತ್ತರವನ್ನು ಸೂಕ್ತ ಸಮಯದಲ್ಲಿ ನೀಡುತ್ತಾರೆ ಎಂದು ತಿಳಿಸಿದ ಅವರು, ಇವತ್ತು ಕಲಾಪವನ್ನು ಬಹಿಷ್ಕರಿಸಿದ್ದೇವೆ. ಮುಖ್ಯಮಂತ್ರಿಗಳು ಮಾತ್ರವಲ್ಲದೆ, ಸಚಿವರು ಕೂಡ ಪದೇ ಪದೆ ಎದ್ದುನಿಂತು ವಿಪಕ್ಷದವರಿಗೆ ಮಾತನಾಡಲು ಅವಕಾಶವನ್ನೇ ಕೊಟ್ಟಿಲ್ಲ ಎಂದು ಟಿ.ಎ. ಶರವಣ ಕಿಡಿಕಾರಿದರು. ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಇತರ ಸದಸ್ಯರು ಇದ್ದರು.

ಬಿಜೆಪಿಯವರು ಗೂಂಡಾಗಳು ಎಂದ ಸಿಎಂ

ರಾಜ್ಯದ ತೆರಿಗೆ ಪಾವತಿ ಹಾಗೂ ಕೇಂದ್ರದ ತೆರಿಗೆ ಲೆಕ್ಕಾಚಾರದ ವ್ಯತ್ಯಾಸದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ವಿಪಕ್ಷಗಳ ಗದ್ದಲದಿಂದ ಆಕ್ರೋಶಗೊಂಡು, “ಏನು ಗೂಂಡಾಗಿರಿ ಮಾಡ್ತೀರಾ? ನೀವು ಗೂಂಡಾಗಳು, ನಿಮ್ಮ ಗೂಂಡಾಗಿರಿಗೆ ನಾವು ಹೆದರುವುದಿಲ್ಲ” ಎಂದು ಹೇಳಿರುವುದು ಈಗ ಗಲಾಟೆಗೆ ಕಾರಣವಾಗಿದೆ. ಈ ಸಂಬಂಧ ವಿಪಕ್ಷಗಳು ಕೆರಳಿದ್ದು ಗದ್ದಲ ಎಬ್ಬಿಸಿದ್ದಾರೆ. ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ 10 ನಿಮಿಷ ಕಾಲ ವಿಧಾನ ಪರಿಷತ್ ಕಲಾಪವನ್ನು ಸಭಾಪತಿಗಳು ಮುಂದೂಡಿದ್ದಾರೆ.

ರಾಜ್ಯದ ತೆರಿಗೆ ಪಾವತಿ ಹಾಗೂ ಕೇಂದ್ರದ ತೆರಿಗೆ ಲೆಕ್ಕಾಚಾರದಲ್ಲಿನ ವ್ಯತ್ಯಾಸದ ಬಗ್ಗೆ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುವ ವೇಳೆ ಈ ಗದ್ದಲಗಳು ನಡೆದಿವೆ. ಕರ್ನಾಟಕ ಇವತ್ತು ತೆರಿಗೆ ಪಾವತಿಸುವುದರಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ, ನಮಗೆ ಬರುವ ತೆರಿಗೆ ಆದಾಯದ ಪಾಲು ಕಡಿಮೆ ಆಗುತ್ತಿದೆ ಎಂದು ಹೇಳಿದರು.

ಹದಿನಾಲ್ಕು ಮತ್ತು ಹದಿನೈದನೇ ಹಣಕಾಸು ಆಯೋಗ ಶಿಫಾರಸು ಮಾಡುವಾಗ 18-19ರ ಬಜೆಟ್ ಗ್ರಾತ್ರ ಇತ್ತು. ಬಳಿಕ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋಯಿತು. ಹೀಗಾಗಿ ಅದರ ಪಾಲು ಹೆಚ್ಚಾಗಬೇಕಿತ್ತು. ಈ ಹಿನ್ನೆಲೆಯಲ್ಲಿ 14ನೇ ಹಣಕಾಸು ಆಯೋಗವು ಶೇ. 42 ಕೊಡಲು ಹೇಳಿತ್ತು. ಆದರೆ, 15ನೇ ಆಯೋಗದಲ್ಲಿ ಇದರ ಪ್ರಮಾಣ ಕಡಿಮೆಯಾಗಿದೆ. ಈ ಎರಡೂ ಹಣಕಾಸು ಆಯೋಗದಲ್ಲಿ ವರ್ಷವಾರು ಕಡಿಮೆ ತೆರಿಗೆ ಪಾವತಿ ಆಗುತ್ತಿದೆ. ಮೊದಲ ವರದಿಯಲ್ಲಿ 5495 ಕೋಟಿ ಕೊಡಲು ಶಿಫಾರಸು ಆಗಿತ್ತು. ಅಂತಿಮ ವರದಿಯಲ್ಲಿ ಕೆರೆ ಹಾಗೂ ಫೆರಿಫರಲ್ ರಿಂಗ್ ರೋಡ್‌ಗಾಗಿ 6000 ಕೋಟಿ ರೂಪಾಯಿ ನೀಡಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರು ಅಂಕಿ-ಅಂಶಗಳನ್ನು ತೆರೆದಿಟ್ಟರು.

ಕರ್ನಾಟಕಕ್ಕೆ 11 ಸಾವಿರ ಕೋಟಿ ರೂ. ಕೊಡಲು 15ನೇ ಹಣಕಾಸು ಆಯೋಗದಿಂದ ಶಿಫಾರಸು ಮಾಡಲಾಗಿತ್ತು. ಆದರೆ, ಈ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿಲ್ಲ. ಇದನ್ನೇ ಸೆಂಟ್ರಲ್ ಫೈನಾನ್ಸ್ ಮಿನಿಸ್ಟರ್ ವಾದ ಮಾಡಲು ಹೊರಟಿದ್ದಾರೆ. ಪ್ರಶ್ನೆ ಮಾಡಿದರೆ ಹಣಕಾಸು ಆಯೋಗ ಅಟಾನಮಸ್ ಬಾಡಿಯಾಗಿದೆ. ನಾವು ಅದರ ವರದಿಯನ್ನಷ್ಟೇ ಅನುಷ್ಠಾನ ಮಾಡುತ್ತೇವೆ ಎನ್ನುತ್ತಾರೆ.‌ ಅದರಂತೆ ಮಾಡಿದರೂ ನಮಗೆ ಹಣ ಬಿಡುಗಡೆ ಆಗಬೇಕಿತ್ತು. ಅದನ್ನಿನ್ನೂ ಅವರು ಮಾಡಿಲ್ಲ. ಈ ಹಿಂದಿನ ಸರ್ಕಾರದ ಗಮನಕ್ಕೆ ಈ ವಿಚಾರವನ್ನು ತಂದಿದ್ದೆ. ವಿಶೇಷ ಅನುದಾನ ಪಡೆಯಲು ಕ್ರಮ ವಹಿಸಿ ಎಂದು ಮನವಿ ಮಾಡಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದಕ್ಕೆ ವಿಪಕ್ಷದವರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಾನು ಫ್ಯಾಕ್ಟ್ ಹೇಳುತ್ತಿದ್ದೇನೆ. ಫ್ಯಾಕ್ಟ್ ಈಸ್ ಫ್ಯಾಕ್ಟ್. ವಿಪಕ್ಷಗಳ ಈ ನಡೆ ಸಹಿಸಲ್ಲ. ನಾನು ಉತ್ತರ ಕೊಡಲ್ಲ. ಪ್ರಶ್ನೆ ಕೇಳಿದವರು ಸುಮ್ಮನಿರುವಾಗ ವಿಪಕ್ಷದ್ದವರದ್ದೇನು ಮಾತು? ಎಂದು ಪ್ರಶ್ನೆ ಮಾಡಿದರು. ಆಗ ಮತ್ತೆ ವಿಪಕ್ಷದವರು ಗದ್ದಲ ಮಾಡಿದರು. ಆಗ ಮಧ್ಯಪ್ರವೇಶ ಮಾಡಿದ ಸಭಾಪತಿಗಳು, ಸದಸ್ಯರ ಮನವೊಲಿಕೆಗೆ ಪ್ರಯತ್ನಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಮ್ಮ ಫ್ಯಾಕ್ಟ್ ಉತ್ತರ ಸಹಿಸಲು ಸಾಧ್ಯ ಆಗುತ್ತಿಲ್ಲ. ನೀವು ಎಷ್ಟೇ ಕೂಗಾಡಿದರೂ ಅದು ಸತ್ಯವೇ. ನಿರ್ಮಲಾ ಸೀತಾರಾಂ ಕೂಡ ವಿರೋಧಿ ಧೋರಣೆ ತೋರಿಸಿದ್ದಾರೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, “ಸಿಎಂ ಆನ್ಸರ್ ಬೇಡ” ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Rajya Sabha Election: ರಾಜ್ಯಸಭೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ; ನಿಜ ಕಾರಣ ಬಿಚ್ಚಿಟ್ಟ ಬಿ.ವೈ. ವಿಜಯೇಂದ್ರ

ಘೋಷಣೆ ನಡುವೆ ಸಿಎಂ ಉತ್ತರವನ್ನು ಮುಂದುವರಿಸಿದರು. “ಅವರೇ ಬಜೆಟ್‌ನಲ್ಲಿ ಒಪ್ಪಿಕೊಂಡಿದ್ದ 5300 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಆದರೆ, ನಾವು ಯೋಜನೆ ಮೇಲಿನ ಕಾಳಜಿಯಿಂದ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 1 ಸಾವಿರ ಕೋಟಿ ರೂಪಾಯಿಗಳ ದ್ರೋಹ ಮಾಡಿದೆ. ಇದಕ್ಕೆ ಹಣಕಾಸು ಸಚಿವರು ಸಹಕಾರ ನೀಡಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದರು.

ನೀವು ಗೂಂಡಾಗಳು ಎಂದ ಸಿಎಂ ಸಿದ್ದರಾಮಯ್ಯ

ಸಿಎಂ ಉತ್ತರದಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ಗದ್ದಲ ನಡೆಸಿದರು. ಆಗ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಉತ್ತರ ಕೊಟ್ಟ ಮೇಲೆ ಹೇಳಿ. ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ. ಏಳು ಕೋಟಿ ಜನ ನೋಡುತ್ತಾ ಇದ್ದಾರೆ. ಎದ್ದು ನಿಂತಿದ್ದಾರೆ ಎಂದರೆ? ಅವರು ತಪ್ಪು ಮಾಡಿದ್ದಾರೆ ಅಂತ ಅರ್ಥ ಎಂದು ಹೇಳಿದರು. ಆಗ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಎದ್ದುನಿಂತು, ವಿಧಾನಸೌಧದಲ್ಲಿ ತೊಡೆ ತಟ್ಟಿದ್ದು, ನೀವಾ ನಾವಾ? ಈಗ ನಮಗೆ ಗೂಂಡಾಗಿರಿ ಎಂದು ಹೇಳುತ್ತೀರಾ? ಅಂದು ತೊಡೆ ತಟ್ಟಿದ್ದು ಯಾರು? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಸಿಟ್ಟಿಗೆದ್ದ ಸಿಎಂ ಸಿದ್ದರಾಮಯ್ಯ, ನೀವು ಗೂಂಡಾಗಳು. ನಿಮ್ಮ ಗೂಂಡಾಗಿರಿಗೆ ನಾವು ಹೆದರಲ್ಲ. ನಾನು ಸತ್ಯವನ್ನೇ ಹೇಳುತ್ತಾ ಇದ್ದೇನೆ ಎಂದು ಹೇಳಿದರು. ಆಗ ಎದ್ದನಿಂತ ವಿಪಕ್ಷ ಬಿಜೆಪಿಯವರು ಗಲಾಟೆ ಮಾಡಿದರು. ಅದಕ್ಕೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಜನ ಇವರಿಗೆ ಛೀ.. ಥೂ.. ಅಂತಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೇಳಿದರು. ಆಗ ತೀವ್ರ ಗದ್ದಲವಾಗಿದ್ದರಿಂದ ಸಭಾಪತಿಯವರು ಪರಿಷತ್ ಕಲಾಪವನ್ನು ಮುಂದೂಡಿಕೆ ಮಾಡಿದರು. ಆಗ ವಿಪಕ್ಷ ಬಿಜೆಪಿಯವರು, ಗೂಂಡಾ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

Latest

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಪದಗ್ರಹಣದ ಬಳಿಕ ತಮ್ಮ ಮೊದಲ ಭಾಷಣದಲ್ಲಿ ಜನತೆಗೆ ತಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಸ್ಪಷ್ಟಪಡಿಸಿದರು.

“ನಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ. ತಮಿಳುನಾಡಿನ 8 ಕೋಟಿ ಜನರೂ ನನ್ನವರೇ. ನಾನು ನಿಮ್ಮಲ್ಲೊಬ್ಬ., ನಿಮ್ಮ ಕುಟುಂಬದ ಸದಸ್ಯ, ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ” ಎಂದು ವಿಜಯ್‌ ಹೇಳಿದರು.

“ಇಲ್ಲಿರುವುದು ಒಂದೇ ಪವರ್‌ ಸೆಂಟರ್‌. ಆ ಕಡೆ ಒಂದು, ಈ ಕಡೆ ಒಂದು ಪವರ್‌ ಸೆಂಟರ್‌ ಇಲ್ಲ. ತಮಿಳುನಾಡಿನಲ್ಲಿ ಹೊಸ ಯುಗಾರಂಭ ಆಗಿದೆ” ಎಂದು ಅವರು ಘೋಷಿಸಿದರು.

ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರ ಹಿತ ಕಾಪಾಡುವುದಾಗಿ ಹೇಳಿದ ವಿಜಯ್‌, “ನಿಜವಾದ ಜಾತ್ಯಾತೀತ ಹಾಗೂ ಸಮಾಜವಾದಿ ಆಡಳಿತ ಆರಂಭವಾಗಿದೆ” ಎಂದು ತಿಳಿಸಿದರು.

ತಮ್ಮ ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್‌, ವಿಸಿಕೆ ಹಾಗೂ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ವಿಜಯ್‌, “ನನ್ನ ಸಹೋದರ ರಾಹುಲ್‌ ಗಾಂಧಿಗೆ ವಿಶೇಷ ಧನ್ಯವಾದ” ಎಂದರು.

“ನನ್ನ ಜನರ ಹಣ ಲೂಟಿ ಮಾಡಲು ನಾನು ಬಿಡುವುದಿಲ್ಲ” ಎಂದು ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತಾಳುವುದಾಗಿ ಸಿಎಂ ವಿಜಯ್‌ ಸ್ಪಷ್ಟಪಡಿಸಿದರು.

Continue Reading

Latest

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್‌ ವಿಜಯ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಚೆನ್ನೈನ ನೆಹರೂ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಿದರು.

ಟಿವಿಕೆ ಪಕ್ಷ ಕಾಂಗ್ರೆಸ್‌, ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಸಚಿವ ಸಂಪುಟದಲ್ಲಿ ಎನ್‌. ಆನಂದ್‌, ಆಥವ್‌ ಅರ್ಜುನ್‌, ಡಾ. ಅರುಣ್‌ ರಾಜ್‌, ಕೆ.ಎ. ಸೆಂಗೋಟ್ಟಿಯ್ಯನ್‌, ಪಿ. ವೆಂಕಟರಮಣನ್‌, ಆರ್‌. ನಿರ್ಮಲ್‌ ಕುಮಾರ್‌, ಎ.ರಾಜ್‌ ಮೋಹನ್‌, ಟಿ.ಕೆ. ಪ್ರಭು, ಸೆಲ್ವಿ ಎಸ್‌. ಕೀರ್ತನಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಚಿತ್ರನಟಿ ತ್ರಿಶಾ, ವಿಜಯ್‌ ತಂದೆತಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿಜಯ್‌ ಪದಗ್ರಹಣ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

Continue Reading

Latest

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

VISTARANEWS.COM


on

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಪ್ರಯತ್ನ ಮುಂದುವರಿಸಿದೆ. ವಿಸಿಕೆ ಬೆಂಬಲ ಪಡೆಯುವಲ್ಲಿ ವಿಜಯ್ ಪಡೆ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗುತ್ತಿದೆ. ಚೆನ್ನೈನ ಮಾಮಲ್ಲಪುರಂನ ಖಾಸಗಿ ಹೋಟೆಲ್‌ನಲ್ಲಿ ಮಧ್ಯಾಹ್ನ ಟಿವಿಕೆ ಶಾಸಕರ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ವಿಸಿಕೆ ಸುದ್ದಿಗೋಷ್ಠಿ ನಡೆಸಲಿದ್ದು, ಬೆಂಬಲ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಕಾಂಗ್ರೆಸ್‌ ಹಾಗೂ ಎಡಪಕ್ಷಗಳು ಟಿವಿಕೆಗೆ ಬೆಂಬಲ ಸೂಚಿಸಿವೆ.
ಸದ್ಯ ವಿಜಯ್ ನೇತೃತ್ವದ ಮೈತ್ರಿಗೆ 116 ಶಾಸಕರ ಬೆಂಬಲವಿದೆ. ವಿಸಿಕೆ ಯ ಇಬ್ಬರು ಶಾಸಕರು ಬೆಂಬಲ ನೀಡಿದರೆ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಸಿಗಲಿದೆ.
ಇಂದು ಸಂಜೆ ವಿಜಯ್‌ ಅವರು ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸುವ ಸಾಧ್ಯತೆಯಿದೆ.
ಸಂಖ್ಯಾಬಲ ಹೀಗಿದೆ:
ಟಿವಿಕೆ – 107
ಕಾಂಗ್ರೆಸ್‌ – 5
ಎಡಪಕ್ಷಗಳು – 4
ವಿಸಿಕೆ – 2

Continue Reading
Advertisement
Latest18 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ20 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest21 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest22 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌