Site icon Vistara News

Congress Candidates List : ಕಾಂಗ್ರೆಸ್‌ನ 17 ಟಿಕೆಟ್‌ ಘೋಷಣೆ; ರಾಜ್ಯದ ಐವರು ಸಚಿವರ ಮಕ್ಕಳು ಲೋಕ ಕಣಕ್ಕೆ

Congress Candidates List women Candidates

ಬೆಂಗಳೂರು: ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ. ಇದರಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬೆಳಗಾವಿ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್,‌ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಮತ್ತು ಬೀದರ್‌ನಿಂದ ಈಶ್ವರ್‌ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದಲ್ಲದೆ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತಾ ಪಾಟೀಲ್‌, ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪತ್ನಿ ಪ್ರಭಾ ಮಲ್ಲಿಕಾರ್ಜುನ್‌, ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮಾರ್ಚ್‌ 8ರಂದು ಬಿಡುಗಡೆಯಾದ ಮೊದಲ ಪಟ್ಟಿಯಲ್ಲಿ ಏಳು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲಿ 17 ‌ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇನ್ನು ನಾಲ್ಕು ಕ್ಷೇತ್ರಗಳ ಟಿಕೆಟ್‌ ಪೆಂಡಿಂಗ್‌ ಇಡಲಾಗಿದೆ.

ರಾಜ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗಳಿಸಿದ್ದ ಕಾಂಗ್ರೆಸ್‌ ಈ ಬಾರಿ 20 ಸ್ಥಾನಗಳ ಟಾರ್ಗೆಟ್‌ ಇಟ್ಟುಕೊಂಡು ಅಳೆದೂ ತೂಗಿ ಟಿಕೆಟ್‌ ಹಂಚಿಕೆ ನಡೆಸಿದೆ. ರಾಜ್ಯಮಟ್ಟದಲ್ಲಿ ತಲಾ ಎರಡು ಅಥವಾ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕೇಂದ್ರೀಯ ಚುನಾವಣಾ ಸಮಿತಿಯನ್ನು ಮುಕ್ತ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ. ಎಐಸಿಸಿ ಅಧ್ಯಕ್ಷ (AICC president) ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹಾಗೂ ಇತರ ಹಿರಿಯ ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ಟಿಕೆಟ್‌ ಫೈನಲ್‌ ಮಾಡಲಾಗಿದೆ.

ಎರಡನೇ ಪಟ್ಟಿಯಲ್ಲಿರುವ 17 ಕ್ಷೇತ್ರಗಳ ಅಭ್ಯರ್ಥಿಗಳು ಯಾರ್ಯಾರು?

ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ (ರಾಮಲಿಂಗಾ ರೆಡ್ಡಿ ಪುತ್ರಿ)
ಬೆಂಗಳೂರು ಕೇಂದ್ರ- ಮನ್ಸೂರ್ ಅಲಿಖಾನ್
ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ
ಮೈಸೂರು – ಕೊಡಗು – ಎಂ.ಲಕ್ಷ್ಮಣ್
ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
ದಕ್ಷಿಣ ಕನ್ನಡ – ಪದ್ಮರಾಜ್
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
ಬಾಗಲಕೋಟೆ – ಸಂಯುಕ್ತಾ ಶಿವಾನಂದ ಪಾಟೀಲ್ (ಶಿವಾನಂದ ಪಾಟೀಲ್‌ ಪುತ್ರಿ)
ರಾಯಚೂರು – ಕುಮಾರ್ ನಾಯಕ್
ಚಿತ್ರದುರ್ಗ – ಬಿ.ಎನ್‌. ಚಂದ್ರಪ್ಪ
ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್ (ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ)
ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ (ಸತೀಶ್‌ ಜಾರಕಿಹೊಳಿ ಮಗಳು)
ಹುಬ್ಬಳ್ಳಿ-ಧಾರವಾಡ – ವಿನೋದ್ ಅಸೂಟಿ
ಬೀದರ್ – ಸಾಗರ್‌ ಖಂಡ್ರೆ (ಈಶ್ವರ್‌ ಖಂಡ್ರೆ ಪುತ್ರ)
ಕೊಪ್ಪಳ – ರಾಜಶೇಖರ್ ಹಿಟ್ನಾಳ್
ದಾವಣಗೆರೆ – ಡಾ.ಪ್ರಭಾ ಮಲ್ಲಿಕಾರ್ಜುನ್ (ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪತ್ನಿ)
ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ (ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ)

Congress Candidates List karnataka full

ಪೆಂಡಿಂಗ್ ಕ್ಷೇತ್ರಗಳು ಮತ್ತು ಅಲ್ಲಿ ಸ್ಪರ್ಧೆಯಲ್ಲಿರುವವರು

ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ – ಶಿವಶಂಕರ್‌ ರೆಡ್ಡಿ, ವೀರಪ್ಪ ಮೊಯ್ಲಿ
ಕೋಲಾರ – ಚಿಕ್ಕಪೆದ್ದಣ್ಣ, ಎಲ್‌.ಹನುಮಂತಯ್ಯ,
ಚಾಮರಾಜನಗರ – ಸುನೀಲ್ ಬೋಸ್, ದರ್ಶನ್ ಧ್ರುವ ನಾರಾಯಣ
ಬಳ್ಳಾರಿ – ಸೌಪರ್ಣಿಕಾ ತುಕಾರಾಂ, ವೆಂಕಟೇಶ್‌ ಪ್ರಸಾದ್, ವಿ.ಎಸ್. ಉಗ್ರಪ್ಪ

ಇದನ್ನೂ ಓದಿ : Lok Sabha Election 2024: ಕಾಂಗ್ರೆಸ್‌ ಅಧಿಕೃತ ಪಟ್ಟಿ ಬಿಡುಗಡೆ; ಜಯಪ್ರಕಾಶ್‌ ಹೆಗ್ಡೆ, ಚಂದ್ರಪ್ಪ ಮಿಸ್!

ಏಳು ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳು ಇವರು

  1. ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
  2. ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
  3. ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
  4. ವಿಜಯಪುರ – ರಾಜು ಆಲಗೂರು – ಎಸ್.ಸಿ
  5. ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
  6. ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್ – ಒಕ್ಕಲಿಗ
  7. ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ

ಇದನ್ನೂ ಓದಿ: Lok Sabha Election 2024: 17 ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮವಾಗಿದೆ: ಡಿಕೆಶಿ

Exit mobile version