Congress Guarantee: ಕಾಂಗ್ರೆಸ್‌ ಚೇಲಾಗಳ ಬಿರಿಯಾನಿ ಊಟಕ್ಕೆ 150 ಕೋಟಿ ರೂ.: ಆರ್‌. ಅಶೋಕ್‌ ಕಿಡಿ - Vistara News

ಕರ್ನಾಟಕ

Congress Guarantee: ಕಾಂಗ್ರೆಸ್‌ ಚೇಲಾಗಳ ಬಿರಿಯಾನಿ ಊಟಕ್ಕೆ 150 ಕೋಟಿ ರೂ.: ಆರ್‌. ಅಶೋಕ್‌ ಕಿಡಿ

Congress Guarantee: ಗ್ಯಾರಂಟಿ ಜಾರಿ ಸಮಿತಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕ್ಯಾಬಿನೆಟ್‌ ದರ್ಜೆ ನೀಡಲಾಗುತ್ತಿದೆ. ಆದರೆ, ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ರೈತರಿಗೆ ಮೊದಲು ಪರಿಹಾರ ಕೊಡಿ ಎಂದು ಆರ್. ಅಶೋಕ್‌ ಆಗ್ರಹಿಸಿದ್ದಾರೆ.

VISTARANEWS.COM


on

R Ashok attack on CM Siddaramaiah Governmemt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೈತರಿಗೆ ಬರ ಪರಿಹಾರ (Drought relief for farmers) ನೀಡಲು ಕಾಂಗ್ರೆಸ್‌ ಸರ್ಕಾರದ ಬಳಿ ಹಣವಿಲ್ಲ. ಆದರೆ, ಗ್ಯಾರಂಟಿ ಯೋಜನೆಗಳಿಗೆ (Congress Guarantee) ಸಂಬಂಧಪಟ್ಟಂತೆ ಕಾಂಗ್ರೆಸ್‌ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವಾಗಿ ಕಾಂಗ್ರೆಸ್‌ ಸರ್ಕಾರ 100 ಕೋಟಿ ರೂ.ಬಿಡುಗಡೆಗೊಳಿಸುತ್ತಿದೆ. ನ್ಯಾಯವಾಗಿ 3-4 ಸಾವಿರ ಕೋಟಿ ರೂ. ನೀಡಬೇಕಿತ್ತು. ಈಗ ಗ್ಯಾರಂಟಿ ಜಾರಿ ಸಮಿತಿಯ 3 ಸಾವಿರ ಕಾಂಗ್ರೆಸ್‌ ಕಾರ್ಯಕರ್ತರಿಗೆ 25 ಕೋಟಿ ರೂ. ಖರ್ಚು ಮಾಡಲಾಗುತ್ತದೆ. ಅಂದರೆ ಐದು ವರ್ಷಕ್ಕೆ 150 ಕೋಟಿ ರೂ. ಆಗಲಿದೆ. ಕಾಂಗ್ರೆಸ್‌ ಚೇಲಾಗಳಿಗೆ ಮಜಾ ಮಾಡಲು ಇಷ್ಟು ಹಣ ಖರ್ಚು ಮಾಡಲಾಗುತ್ತಿದೆ. ಅವರಿಗೆ ಕ್ಯಾಬಿನೆಟ್‌ ದರ್ಜೆ ನೀಡಲಾಗುತ್ತದೆ. ಸರ್ಕಾರ ರೈತರಿಗೆ ಯಾವಾಗ ಕ್ಯಾಬಿನೆಟ್‌ ದರ್ಜೆಯ ಗೌರವ ಕೊಟ್ಟು ಪರಿಹಾರ ನೀಡಲಿದೆ ಎಂದು ಪ್ರಶ್ನಿಸಿದರು.

ಬಿರಿಯಾನಿ, ಮಟನ್‌ ಊಟ ಹಾಕಲು ಹಣವಿದೆ

ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾರ್ಯಕರ್ತರಿಗೆ ಬಿರಿಯಾನಿ, ಮಟನ್‌ ಊಟ ಹಾಕಲು ಹಣವಿದೆ. ಇದೇ ಹಣವನ್ನು ಶಾಲೆಗಳಿಗೆ ಕೊಡಬಹುದು. ಗ್ಯಾರಂಟಿ ನಿರ್ವಹಣೆಗೆ ಬೇಕಿದ್ದರೆ ಅಧಿಕಾರಿಗಳನ್ನು ಬಳಸಿಕೊಳ್ಳಲಿ. ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿ ತಂತ್ರಾಂಶ ಕೆಲಸ ಮಾಡುತ್ತಿಲ್ಲ. ಇದರ ಬಗ್ಗೆ ಗಮನಹರಿಸಲಿ ಎಂದು ಆರ್.‌ ಅಶೋಕ್‌ ಹೇಳಿದರು.

ಕಾಂಗ್ರೆಸ್‌ನವರ ದುರ್ಬುದ್ಧಿಯನ್ನು ಈ ಹಿಂದೆಯೇ ಕಂಡಿದ್ದೇವೆ. ರಾಮಾಯಣ ಕಾಲ್ಪನಿಕ, ರಾಮನೇ ಇಲ್ಲ ಎಂದು ಅವರು ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಲಕ್ಷಾಂತರ ದಾಖಲೆಗಳು ಸಿಗುತ್ತದೆ. ಆದರೂ ರಾಮನ ಜನ್ಮ ಪ್ರಮಾಣಪತ್ರವನ್ನು ಕೇಳಿ ಪಾಪ ಕಟ್ಟಿಕೊಂಡ ಕಾಂಗ್ರೆಸ್‌ ನಾಯಕರು ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಬರದೇ ಇರುವುದು ಲೇಸು. ಲಾಲ್‌ಕೃಷ್ಣ ಅಡ್ವಾಣಿಯವರು ಮಂದಿರ ಕಟ್ಟಲು ಹೋರಾಟ ನಡೆಸಿದಾಗ ಅವರನ್ನು ಕಾಂಗ್ರೆಸ್‌ ನಾಯಕರು ಹಾಗೂ ಲಾಲೂ ಪ್ರಸಾದ್‌ ಯಾದವ್‌ ಜೈಲಿಗೆ ಕಳುಹಿಸಿದ್ದರು. ಆಗ ಜೈಲಿಗೆ ಕಳಿಸಿ ಈಗ ಅವರ ಪರ ಮಾತನಾಡುವ ಈ ನಾಯಕರಿಗೆ ಎರಡು ನಾಲಿಗೆ ಇದೆಯೇ ಎಂದು ಆರ್.‌ ಅಶೋಕ್‌ ಪ್ರಶ್ನೆ ಮಾಡಿದರು.

ಶಿಕ್ಷಕರ ಅಹವಾಲು ಆಲಿಸಿದ ಪ್ರತಿಪಕ್ಷ ನಾಯಕ

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟಿಸುತ್ತಿದ್ದ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ಅಹವಾಲುಗಳನ್ನು ಆರ್‌. ಅಶೋಕ್‌ ಅವರು ಆಲಿಸಿದರು.

ನಂತರ ಮಾತನಾಡಿದ ಅಶೋಕ್, ಕಾಂಗ್ರೆಸ್‌ ನಾಯಕರು ಮತಕ್ಕಾಗಿ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ನೇಮಕಾತಿ ಸೇರಿದಂತೆ ಎಲ್ಲ ಬಗೆಯ ನೇಮಕಾತಿಗಳನ್ನು ಮಾಡುತ್ತೇವೆ ಎಂದು ಹೇಳಿದ್ದರು. ಗೆದ್ದ ನಂತರ ಈಗ ಕೈ ಕೊಟ್ಟಿದ್ದಾರೆ. ಕೈ ಕೊಡುವುದರಲ್ಲೇ ಇವರು ಪರಿಣಿತರಾಗಿದ್ದಾರೆ. ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ ನಡೆಯಬೇಕಿತ್ತು. ಹೊರಗುತ್ತಿಗೆ ಶಿಕ್ಷಕರಿಗೆ ಮೊದಲಿನಂತೆ ನೇರ ಸಂಬಳ ನೀಡುವ ಬೇಡಿಕೆಯನ್ನು ನಾನು ಕೂಡ ಬೆಂಬಲಿಸುತ್ತೇನೆ ಎಂದರು.

ಇದನ್ನೂ ಓದಿ: Ram Mandir: ರಾಮ ಮಂದಿರ ಉದ್ಘಾಟನೆ; ವಿಮಾನದಲ್ಲಿ ರಾಮನ ಜಪ ಮಾಡಿದ ಕೆ.ಎಚ್.‌ ಮುನಿಯಪ್ಪ!

ಪ್ರತಿಭಟನೆ ಮಾಡುವುದು ಪ್ರತಿ ನಾಗರಿಕರ ಹಕ್ಕು. ಅದನ್ನು ಇಷ್ಟೇ ಸಮಯ ಮಾಡಬೇಕು ಎನ್ನಲು ಯಾರಿಗೂ ಅಧಿಕಾರ ಇಲ್ಲ. ಈ ತುಘಲಕ್‌ ಸರ್ಕಾರ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವುದೂ ಇಲ್ಲ, ಪ್ರತಿಭಟನೆಗೂ ಅವಕಾಶ ನೀಡುವುದಿಲ್ಲ. ಪೊಲೀಸ್‌ ಅಧಿಕಾರಿಗಳು ಕಾನೂನು ಪಾಲಿಸಬೇಕೆ ಹೊರತು ಪ್ರತಿಭಟಕಾನಾರರನ್ನು ಓಡಿಸಬಾರದು. ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ಮಾಡುವ ಪ್ರವೃತ್ತಿ ಬಿಡಬೇಕು. ಇಲ್ಲದಿದ್ದರೆ ಅದು ತಿರುಗುಬಾಣವಾಗಲಿದೆ ಎಂದು ಆರ್.‌ ಅಶೋಕ್‌ ಆಕ್ರೋಶವನ್ನು ಹೊರಹಾಕಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

Gas leak : ಸಂಜೆ ವೇಳೆಗೆ ವಿಷಾನಿಲ ಸೋರಿಕೆಯಾಗಿತ್ತು. ಮೊದಲು ಗುಜರಿ ಗೋಡೌನ್​ನಲ್ಲಿ ಕೆಲಸ ಮಾಡುತ್ತಿದ್ದವರು ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಳಿಕ ಗ್ರಾಮಸ್ಥರಿಗೆ ಕೆಮ್ಮು, ವಾಂತಿ ಶುರುವಾಗಿದೆ. ಅಸ್ವಸ್ಥಗೊಂಡಿರುವ 30 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

VISTARANEWS.COM


on

Gas leak
Koo

ಮೈಸೂರು: ಗುಜರಿಯ ಗೋಡೌನ್‌ನಲ್ಲಿ ವಿಷಕಾರಿ ಅನಿಲ ಸೋರಿಕೆ‌ಯಾಗಿ (Gas Leakage) 30 ಮಂದಿ ಅಸ್ವಸ್ಥಗೊಂಡ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಮೈಸೂರಿನ ಹಳೆ ಕೆಸರೆಯ ಗುಜರಿ ಅಂಗಡಿಯಲ್ಲಿ ಈ ಸಮಸ್ಯೆ ಉಂಟಾಗಿದ್ದು, ಆರಂಭದಲ್ಲಿ ಶೆಡ್​ನಲ್ಲಿ ಕೆಲಸ ಮಾಡುತ್ತಿದ್ದ ಐವರು ಅಸ್ವಸ್ಥಗೊಂಡರೆ ಬಳಿಕ ಸುತ್ತಲಿನ ಗ್ರಾಮಸ್ಥರೂ ಆರೋಗ್ಯ ಸಮಸ್ಯೆ ಎದುರಿಸಿ ಆಸ್ಪತ್ರೆ ಸೇರಿದ್ದಾರೆ.

ಸಂಜೆ ವೇಳೆಗೆ ವಿಷಾನಿಲ ಸೋರಿಕೆಯಾಗಿತ್ತು. ಮೊದಲು ಗುಜರಿ ಗೋಡೌನ್​ನಲ್ಲಿ ಕೆಲಸ ಮಾಡುತ್ತಿದ್ದವರು ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಳಿಕ ಗ್ರಾಮಸ್ಥರಿಗೆ ಕೆಮ್ಮು, ವಾಂತಿ ಶುರುವಾಗಿದೆ. ಅಸ್ವಸ್ಥಗೊಂಡಿರುವ 30 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮೈಸೂರಿನ ಹಳೆ ಕೆಸರೆಯ ರಿದಾ ಸ್ಟೀಲ್ ಟ್ರೇಡರ್ಸ್ ಗುಜರಿ ಗೋಡೌನ್​ನಲ್ಲಿ ಘಟನೆ ಸಂಭವಿಸಿದೆ. ಅನಿಲ ಗೋಡೌನ್​ನಿಂದ ಹೊರಕ್ಕೆ ಬಂದು ಕೆಸರೆ ಗ್ರಾಮದಲ್ಲಿ ಹರಡಿದಿಎ. ಕೆಸರೆ ಗ್ರಾಮಸ್ಥರಲ್ಲೂ ಉಸಿರಾಟದ ತೊಂದರೆ, ಕೆಮ್ಮು ಕಾಣಿಸಿಕೊಂಡು ಪರದಾಡಿದ್ದಾರೆ. ಎನ್.ಆರ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಹಾಗೂ ಆರೋಗ್ಯಾಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಗದಗ: ವಾಟ್ಸ್ಆ್ಯಪ್‌ ಗ್ರೂಪ್‌ಗೆ (WhatsApp Group) ಬಂದಿದ್ದ ಮೆಸೇಜ್‌ವೊಂದನ್ನು ತೆರೆದು ನೋಡಿದ ವ್ಯಾಪಾರಿಯೊಬ್ಬರು ತಮ್ಮ ಖಾತೆಯಲ್ಲಿದ್ದ ಮೂರೂವರೆ ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ (Cyber Crime) ವಂಚಕರು ಹಣ ಲಪಟಾಯಿಸಿದ್ದಾರೆ. ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆz

ಅನಿಲ್‌ ಮಲ್ಲಪ್ಪ ಚಿನ್ನಾಪುರ ಎಂಬುವವರೇ ಸೈಬರ್‌ ವಂಚನೆಗೆ ಒಳಗಾದ ವ್ಯಕ್ತಿ. ನಗರದ ಜಿ.ಎಸ್. ಪಾಟೀಲ್‌ ಲೇಔಟ್‌ನಲ್ಲಿ ವಾಸವಾಗಿರುವ ಇವರು, ಮೊದಲು ಜಿ.ಎಸ್. ಪಾಟೀಲ್‌ ಲೇಔಟ್‌ ವಾಟ್ಸ್ಆ್ಯಪ್‌ ಗ್ರೂಪ್‌ನಲ್ಲಿ ಯುನಿಯನ್ ಬ್ಯಾಂಕ್‌ನ ಎಪಿಕೆ ಹೆಸರಿನಲ್ಲಿ ಬಂದಿದ್ದ ಲಿಂಕ್ ಮೆಸೇಜ್ ಅನ್ನು ತೆರದು ನೋಡಿದ್ದಾರೆ. ಇದಾದ ಬಳಿಕ ಮರುದಿನ ಫೋನ್‌ ಕರೆಯೊಂದು ಬಂದಿದೆ. ಯೂನಿಯನ್ ಬ್ಯಾಂಕ್ ಮುಖ್ಯಸ್ಥ ಎಂದು ಕರೆ ಮಾಡಿದ ವ್ಯಕ್ತಿಯು, ನಿಮ್ಮ ಬ್ಯಾಂಕ್ ಖಾತೆ ಡಿಆಕ್ಟಿವೇಟ್‌ ಆಗಿದೆ ಎಂದು ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇದಾದ ಅರ್ಧಗಂಟೆಯಲ್ಲೇ ಅನಿಲ್‌ ಅವರ ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಮೊದಲ ಹಂತದಲ್ಲಿ 50 ಸಾವಿರ ರೂ, 2ನೇ ಹಂತದಲ್ಲಿ 2,25,000 ರೂ. ಹೀಗೆ ಒಟ್ಟು 3,74,998 ರೂಗಳನ್ನು ಸೈಬರ್‌ ವಂಚಕರು ಎಗರಿಸಿದ್ದಾರೆ.

ಈ ಕುರಿತು ಸೈಬರ್‌ ವಂಚನೆಗೆ ಒಳಗಾದ ಅನಿಲ್ ನಗರದ ರಾಜೀವ್‌ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ಖಾತೆಯಿಂದ ಎಗರಿಸಿದ ಹಣ‌ವು ತಮಿಳುನಾಡು ಹಾಗೂ ಬಾಂಗ್ಲಾದೇಶದ ಬ್ಯಾಂಕ್‌ ಖಾತೆಗಳಿಗೆ‌ ಜಮೆ ಆಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.

Continue Reading

ಶಿವಮೊಗ್ಗ

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Shivamogga News: ಸೊರಬ ತಾಲೂಕಿನಲ್ಲಿ ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಚಟುವಟಿಕೆಗಳು ನಡೆಯದ ಕಾರಣ, ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಆಯ್ಕೆ ಮಾಡಿದ ಜನರಿಗೆ ಕ್ಷೇತ್ರದ ಶಾಸಕರು ನಂಬಿಕೆ ದ್ರೋಹ ವೆಸಗಿದ್ದಾರೆ ಎಂದು ಸೊರಬ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ ಆರೋಪಿಸಿದ್ದಾರೆ.

VISTARANEWS.COM


on

soraba BJP Mandala president prakash talakaalukoppa pressmeet
Koo

ಸೊರಬ: ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಚಟುವಟಿಕೆಗಳು ನಡೆಯದ ಕಾರಣ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. (Shivamogga News) ಆಯ್ಕೆ ಮಾಡಿದ ಜನರಿಗೆ ಕ್ಷೇತ್ರದ ಶಾಸಕರು ನಂಬಿಕೆ ದ್ರೋಹ ವೆಸಗಿದ್ದಾರೆ ಎಂದು ಸೊರಬ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ ಆರೋಪಿಸಿದರು.

ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯ್ಕೆಯಾಗಿ, ಸಚಿವರಾಗಿ ಒಂದು ವರ್ಷ ಕಳೆದರೂ ಒಂದೇ ಒಂದು ಬಿಡಿಗಾಸಿನ ಅನುದಾನ ತರದ ಮಧು ಬಂಗಾರಪ್ಪ ಅವರಿಗೆ ಅಭಿವೃದ್ಧಿ ಎನ್ನುವ ಪದದ ಅರ್ಥವೇ ತಿಳಿದಿಲ್ಲ. ಹಾಗಾಗಿ ತಾಲೂಕನ್ನು ಮರೆತಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಸ್ಥಗಿತಗೊಂಡಿರುವ ಆಡಳಿತ ಯಂತ್ರವನ್ನು ಚಾಲನೆ ತರುವ ಕೆಲಸಕ್ಕೆ ಮುಂದಾಗಬೇಕಿದೆ ಎಂದರು.

ಇದನ್ನೂ ಓದಿ: Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಈಗಾಗಲೇ ಮಳೆಗಾಲ ಪ್ರಾರಂಭಗೊಂಡಿದೆ. ರಸಗೊಬ್ಬರ, ಬಿತ್ತನೆ ಬೀಜ ಸಾಕಷ್ಟು ದಾಸ್ತಾನು ಇಲ್ಲದ ಕಾರಣ ರೈತರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗುವ ಸಂದರ್ಭ ಎದುರಾಗಿದೆ. ಅಲ್ಲದೇ ರೈತ ಪರಿಕರಗಳ ದರ ದುಪ್ಪಟ್ಟಾಗಿದೆ. ಈ ಬಗ್ಗೆ ಯಾವುದೇ ಸಭೆ ನಡೆದಿಲ್ಲ. ಬರಿಯ ಚುನಾವಣೆಗಷ್ಟೇ ಸೀಮಿತವಾಗಿರುವ ಸಚಿವರು, ವರ್ಷ ಕಳೆದರೂ ಒಂದೇ ಒಂದು ಕೆಡಿಪಿ ಮತ್ತು ಅಧಿಕಾರಿಗಳ ಸಭೆಗೆ ಭಾಗವಹಿಸಿಲ್ಲ. ಈ ಕಾರಣ ರೈತರು ಮತ್ತು ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅವರಿಂದ ಹೇಗೆ ಸಾಧ್ಯವಾಗುತ್ತದೆ ಎಂದು ಆರೋಪಿಸಿದ ಅವರು, ಕೂಡಲೇ ಸಚಿವರು ಅಧಿಕಾರಿಗಳ ಸಭೆ ನಡೆಸಬೇಕು ಮತ್ತು ತಾಲೂಕಿನ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿ, ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಸಚಿವರು ವರ್ಷದಿಂದ ಅಭಿವೃದ್ಧಿ ಅನುದಾನದ ಹಣವನ್ನು ತರದೇ ಕಾಲಹರಣ ಮಾಡಿದ್ದಾರೆ. ಕುಮಾರ್ ಬಂಗಾರಪ್ಪ ಅವರ ಅವಧಿಯಲ್ಲಿ ಬಿಡುಗಡೆಯಾದ ಅನುದಾನದ ಹಣದಲ್ಲಿ ನಿರ್ಮಾಣವಾಗುತ್ತಿರುವ ಈಡಿಗ ಸಮುದಾಯ ಭವನ, ನೌಕರರ ಭವನ, ಕನ್ನಡ ಸಾಹಿತ್ಯ ಪರಿಷತ್ ಭವನ ಸೇರಿದಂತೆ ವಿವಿಧ ಸಮುದಾಯಗಳ ಭವನಗಳಿಗೆ ಹಣದ ಕೊರತೆ ಎದುರಾಗಿ ಕಾಮಗಾರಿ ಕುಂಠಿತಗೊಂಡಿವೆ. ಆದ್ದರಿಂದ ಸರ್ಕಾರದಿಂದ ಹೆಚ್ಚಿನ ಹಣ ಬಿಡುಗಡೆಗೊಳಿಸಿ ತಕ್ಷಣ ಪೂರ್ಣಗೊಳಿಸಿ ಸಾರ್ವನಿಕರ ಸೇವೆಗೆ ಅನುವು ಮಾಡಿಕೊಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ನೈರುತ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಎಲ್. ಭೋಜೇಗೌಡ ಅವರ ಗೆಲುವಿಗೆ ಸಹಕರಿಸಿದ ಪ್ರಜ್ಞಾವಂತ ಮತದಾರರಿಗೆ ಕೃತಜ್ಞತೆಗಳನ್ನು ಅರ್ಪಿಸಿದ ಅವರು, ಡಾ.ಧನಂಜಯ ಸರ್ಜಿ, ಎಸ್‌.ಎಲ್. ಭೋಜೇಗೌಡ ಮತ್ತು ವಿಧಾನ ಪರಿಷತ್‍ಗೆ ಅವಿರೋಧವಾಗಿ ಆಯ್ಕೆಯಾದ ಸಿ.ಟಿ. ರವಿ, ಎನ್. ರವಿಕುಮಾರ್, ಎಂ.ಜಿ. ಮುಳೆ ಅವರಿಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ: Money Guide: ಪಿಎಫ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಈ ವೇಳೆ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಮುಖಂಡರಾದ ಪ್ರಕಾಶ ಅಗಸನಹಳ್ಳಿ, ದೇವೇಂದ್ರಪ್ಪ ಚನ್ನಾಪುರ, ಎಂ.ಡಿ. ಉಮೇಶ, ಕೊಟ್ರೇಶಸ್ವಾಮಿ ಆನವಟ್ಟಿ, ಓಂಕಾರಪ್ಪ ತತ್ತೂರು, ಗುರುಮೂರ್ತಿ ಹಿರೇಶಕುನ, ಹರೀಶ್, ವಿಶ್ವನಾಥ, ವಿನಯ್ ಗುತ್ತೇರ್, ಟೀಕಪ್ಪ ಕೊಡಕಣಿ, ಬಸವರಾಜ ಕೊಡಕಣಿ, ಜಾನಕಪ್ಪ ಒಡೆಯರ್ ಯಲಸಿ, ಅಶೋಕ್ ಶೇಟ್, ಡಿ. ಶಿವಯೋಗಿ ಸೇರಿದಂತೆ ಇತರರು ಇದ್ದರು.

Continue Reading

ಕ್ರೈಂ

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Assault Case: ಹರಿಹರದ ಕಾಳಿದಾಸ ನಗರದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

VISTARANEWS.COM


on

assault case
Koo

ದಾವಣಗೆರೆ: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ (Moral policing) ನಡೆದಿದ್ದು, ಯುವಕನೊಬ್ಬನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ (Assault Case) ಮಾಡಲಾಗಿದೆ. ಯುವಕ ಪರಿ ಪರಿಯಾಗಿ ಬೇಡಿಕೊಂಡರೂ ಬಿಡದೇ ಎಂಟತ್ತು ಜನ ಥಳಿಸಿದ್ದಾರೆ.

ಹರಿಹರದ ಕಾಳಿದಾಸ ನಗರದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು ಎನ್ನಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಯುವಕನನ್ನು ಒಬ್ಬ ಹಿಡಿದುಕೊಂಡು, ಇನ್ನೊಬ್ಬ ಹಲ್ಲೆ ನಡೆಸಿದ್ದಾನೆ. ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ‌ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ, ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ | Viral Video: ಸಣ್ಣ ಕಾರಿಗೆ ಡಿಕ್ಕಿ ಹೊಡೆದು ಗಿರಗಿರ ಪಲ್ಟಿ ಹೊಡೆದ ಎಸ್‌ಯವಿ!

ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಪೇದೆಗೆ ಗಂಭೀರ ಗಾಯ

ಯಾದಗಿರಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಕಾನ್‌ಸ್ಟೇಬಲ್‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ-ಯಾದಗಿರಿ ಮಾರ್ಗ ಮಧ್ಯೆ ನಡೆದಿದೆ. ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಪೇದೆ ಹಜರತ್ ಅಲಿ ಗಾಯಾಳು. ದೋರನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿರುವ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿರುವ ಪೇದೆಯನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಅಕ್ಕ-ತಮ್ಮ ಸಾವು; ಕಾಲೇಜಿಗೆ ಹೋದ ಮೊದಲ ದಿನವೇ ದುರಂತ!

Road accident

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

NEET UG 2024: ನೀಟ್ ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ‍್ಯಾಂಕ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

VISTARANEWS.COM


on

UG Neet 2024
Koo

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳಿಗೆ ಪ್ರವೇಶ ಬಯಸಿ ಈಗಾಗಲೇ 2024ರ ಯುಜಿ ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡು, ಆನ್ ಲೈನ್ ಅರ್ಜಿ ಸಲ್ಲಿಸಿರುವವರು ಈಗ ಯುಜಿ-ನೀಟ್‌ನಲ್ಲಿ (NEET UG 2024) ಅರ್ಹತೆ ಪಡೆದಿದ್ದಲ್ಲಿ, ಅಂಥವರು ತಮ್ಮ ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಜಾಲತಾಣದಲ್ಲಿ ಪೋರ್ಟಲ್ ತೆರೆಯಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ತಿಳಿಸಿದೆ.

ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದು, ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ‍್ಯಾಂಕ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಈಗ ಯುಜಿ ನೀಟ್‌ನಲ್ಲಿ ಅರ್ಹತೆ ಪಡೆದುಕೊಂಡಿದ್ದು, ಈವರೆಗೂ ಯುಜಿ-ಸಿಇಟಿಗೆ ನೋಂದಣಿ ಮಾಡಿಕೊಳ್ಳದೆ ಇರುವವರಿಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಅವಕಾಶ ನೀಡಲಾಗುವುದು. ಅಭ್ಯರ್ಥಿಗಳು ದಾಖಲಿಸುವ ವಿವರಗಳನ್ನು ವೆಬ್-ಸರ್ವೀಸ್ ಮೂಲಕ ಆನ್‌ಲೈನ್ ಮೂಲಕವೇ ಪರಿಶೀಲಿಸಲಾಗುವುದು. ಹೀಗಾಗಿ ಭೌತಿಕ ಪರಿಶೀಲನೆ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

ರಾಜ್ಯದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಾಧಿಕಾರದಲ್ಲಿ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಆನ್‌ಲೈನ್ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ನಮೂದಿಸುವ ಆಪ್ಶನ್ಸ್ (Options)ಪರಿಗಣಿಸಿ, ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು. ಎಂಜಿನಿಯರಿಂಗ್ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳಿಗೆ ಏಕಕಾಲದಲ್ಲೇ ಆಪ್ಶನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಮತ್ತು ಜತೆಯಲ್ಲೇ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ವಿವರಿಸಿದರು.

ಸಂಬಂಧ ವಿವಿಧ ಇಲಾಖೆಗಳು ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ಕೆಇಎಗೆ ನೀಡಿದ ಬಳಿಕ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ | Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

Continue Reading
Advertisement
T20 World Cup
ಪ್ರಮುಖ ಸುದ್ದಿ12 mins ago

T20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ

Narendra Modi
ದೇಶ29 mins ago

Narendra Modi: ಹಂಗಾಮಿ ಪ್ರಧಾನಿ ಮೋದಿಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು!

Narendra Modi
ಸಂಪಾದಕೀಯ50 mins ago

ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

T20 World Cup
ಪ್ರಮುಖ ಸುದ್ದಿ51 mins ago

T20 World Cup : ಪಾಕಿಸ್ತಾನ ತಂಡ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

Naxals
ದೇಶ55 mins ago

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

Gas leak
ಪ್ರಮುಖ ಸುದ್ದಿ1 hour ago

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

soraba BJP Mandala president prakash talakaalukoppa pressmeet
ಶಿವಮೊಗ್ಗ1 hour ago

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Chandrababu Naidu
ದೇಶ1 hour ago

Chandrababu Naidu: 5 ದಿನದಲ್ಲಿ 870 ಕೋಟಿ ರೂ. ಗಳಿಸಿದ ‘ಕಿಂಗ್‌ ಮೇಕರ್’‌ ಚಂದ್ರಬಾಬು ನಾಯ್ಡು; ಹೇಗಂತೀರಾ?

Shreyas Iyer
ಕ್ರೀಡೆ2 hours ago

Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

assault case
ಕ್ರೈಂ2 hours ago

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌