ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವಾಗ ಎರಡು ಘೋಷಣೆಗಳನ್ನು ಮಾಡಿ ರಾಜಕೀಯ ಚರ್ಚೆಗೆ ಕಾರಣವಾಗಿರುವ ಕಾಂಗ್ರೆಸ್ ಇದೀಗ ಮೂರನೇ ಘೋಷಣೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ವ್ಯಕ್ತಿಗೆ ಮಾಸಿಕ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಹೊಸ ಗ್ಯಾರಂಟಿಯನ್ನು ( Congress Guarantee) ಕಾಂಗ್ರೆಸ್ ಮಾಡಿದೆ.
ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಅನೇಕರು ಸುದ್ದಿಗೋಷ್ಠಿ ನಡೆಸಿ ಹೊಸ ಗ್ಯಾರಂಟಿ ʼಅನ್ನ ಭಾಗ್ಯʼವನ್ನು ಘೋಷಣೆ ಮಾಡಿದರು.
ಇದನ್ನೂ ಓದಿ: ನಾ ನಾಯಕಿ | ರಾಜ್ಯದ ಮಹಿಳೆಯರಿಗೆ ಕಾಂಗ್ರೆಸ್‌ನಿಂದ ಬಂಪರ್ ಘೋಷಣೆ; ಪ್ರತಿ ತಿಂಗಳು ₹2,000 ರೂ.
ರಾಜ್ಯದ ಪ್ರತಿ ಕುಟುಂಬಕ್ಕೂ ಮಾಸಿಕ 200 ಯೂನಿಟ್‌ವರೆಗೆ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ, ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು.
ಈ ಯೋಜನೆಗಳು ಅನುಷ್ಠಾನ ಮಾಡಲು ಆರ್ಥಿಕವಾಗಿ ಸಾಧ್ಯವೇ ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ ಕಾಂಗ್ರೆಸ್ ಮೂರನೇ ಯೋಜನೆಯನ್ನು ಘೋಷಣೆ ಮಾಡಿದೆ.