Site icon Vistara News

BJP Joining: ತುಂಬುತ್ತಿದೆ ಬಿಜೆಪಿ ಮನೆ; ಕಾಂಗ್ರೆಸ್- ಜೆಡಿಎಸ್ ಪಕ್ಷಗಳ ಮನೆ ಖಾಲಿ: ನಳಿನ್‍ಕುಮಾರ್ ಕಟೀಲ್

Congress home becoming empty says nalin kumar kateel

#image_title

ಬೆಂಗಳೂರು: ಬಿಜೆಪಿ ಮನೆ ತುಂಬುತ್ತಿದೆ. ಕಾಂಗ್ರೆಸ್- ಜೆಡಿಎಸ್ ಮನೆ ಖಾಲಿ ಆಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ನಿವೃತ್ತ ಐ.ಎ.ಎಸ್. ಅಧಿಕಾರಿ ಲಕ್ಷ್ಮೀನಾರಾಯಣ್, ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಸೀಕಲ್ ರಾಮಚಂದ್ರಗೌಡ, ಉದ್ಯಮಿ ಎಸ್.ವಿ. ಆನಂದ ಗೌಡ, ಗ್ರಾ.ಪಂ. ಸದಸ್ಯ ಟಿ.ಪಿ. ಶ್ರೀಧರ್, ಸಿನಿಮಾ ನಿರ್ಮಾಪಕ ವಿಜಯ್‍ಕುಮಾರ್, ಸ್ಥಳೀಯ ಮುಖಂಡರುಗಳಾದ ಮಂಜುನಾಥ್ ಭಕ್ತರಹಳ್ಳಿ, ಮೂರ್ತಿ ಸೊನ್ನೆನಹಳ್ಳಿ, ರಾಜು ಬಳುವನಹಳ್ಳಿ, ಸುರೇಶ್ ಮಿಟ್ಟಿಮರಿ, ವೆಂಕಟರಾಮ್ ರೆಡ್ಡಿ, ವಿರೇಂದ್ರ, ನಾಗರಾಜ್ ಅವರನ್ನು ಪಕ್ಷಕ್ಕೆ ಸೇರ್ಪಡೆ (BJP Joining) ಮಾಡಿಕೊಂಡು ಮಾತನಾಡಿದರು.

ಡಬಲ್ ಎಂಜಿನ್ ಸರ್ಕಾರಗಳ ಸಾಧನೆಯನ್ನು ಜನರು ಒಪ್ಪಿಕೊಂಡಿದ್ದಾರೆ. ರಾಜ್ಯದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ದೇಶದ ಅಭಿವೃದ್ಧಿ, ರಾಜ್ಯದ ಕಲ್ಯಾಣ ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಭಾವನೆ ಜನರಲ್ಲಿದೆ.

ಇದನ್ನೂ ಓದಿ: Sumalatha Ambareesh : ಬಿಜೆಪಿ ಫ್ಲೆಕ್ಸ್‌ನಲ್ಲಿ ಸುಮಲತಾ!; ಕಮಲ ಪಕ್ಷ ಸೇರ್ಪಡೆ ಫಿಕ್ಸಾ? ಎರಡು ಕಂಡಿಷನ್‌ಗಳೇನು?

ಬಿಜೆಪಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ. 3 ರಾಜ್ಯಗಳ ಫಲಿತಾಂಶ ಗಮನಿಸಿದರೆ ಕಾಂಗ್ರೆಸ್ ಪಕ್ಷವು ಶೂನ್ಯದತ್ತ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ವಿರೋಧ ಪಕ್ಷವಾಗಲು ನಾಲಾಯಕ್ ಎಂಬ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ.

ಅಧಿಕಾರ ಗಳಿಸುವ ರಾಜ್ಯದ ಕಾಂಗ್ರೆಸ್ಸಿಗರ ಕನಸು ಕೇವಲ ಹಗಲುಗನಸಾಗಲಿದೆ ಎಂದ ಅವರು, ಚೆನ್ನಾಗಿ ಕೆಲಸ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಉಪಸ್ಥಿತರಿದ್ದರು.

Exit mobile version