Site icon Vistara News

Congress Karnataka : ಸಿಎಂಗೆ 5 ರಾಜಕೀಯ ಕಾರ್ಯದರ್ಶಿ ಹುದ್ದೆ ಸೃಷ್ಟಿ? ಡಿಸಿಎಂಗೂ ನೇಮಕ?

DK Shivakumar and CM Siddaramaiah

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ (Congress Karnataka) ನಿಗಮ-ಮಂಡಳಿ ನೇಮಕ (Appointment of Corporation Board) ವಿಚಾರ ಅಂತಿಮಗೊಂಡಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ (Randeep Singh Surjewala) ಅವರ ಜತೆಗೂಡಿ ಸಿಎಂ ಸಿದ್ದರಾಮಯ್ಯ (CM Siddaramaiah), ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಆದರೆ, ಹಲವು ಹಿರಿಯ ಶಾಸಕರು ಪ್ರಬಲ ಬೋರ್ಡ್‌ಗಳಿಗೆ ಬೇಡಿಕೆ ಇಟ್ಟಿದ್ದು, ಸರ್ಕಾರಕ್ಕೆ ತಲೆನೋವು ತಂದಿದೆ. ಇದಕ್ಕೆ ಪರಿಹಾರ ಸೂತ್ರವಾಗಿ 4 ರಿಂದ 5 ಹೆಚ್ಚುವರಿ ಸಿಎಂ ರಾಜಕೀಯ ಕಾರ್ಯದರ್ಶಿ (CM Political secretary) ಹುದ್ದೆ ಸೃಷ್ಟಿ ಬಗ್ಗೆ ಚರ್ಚೆ ನಡೆದಿದೆ. ಅಲ್ಲದೆ, ಉಪ ಮುಖ್ಯಮಂತ್ರಿಗೂ ನೇಮಕ ಮಾಡಲು ಬರುತ್ತದೆಯೇ ಎಂಬ ವಿಚಾರದ ಬಗ್ಗೆಯೂ ಚಿಂತನೆಗಳು ನಡೆದಿವೆ.

ಎಲ್ಲರೂ ಪ್ರಬಲ ಬೋರ್ಡ್‌ಗಳಿಗೆ ಬೇಡಿಕೆ ಇಟ್ಟಿದ್ದಾರೆ. ಆದರೆ, ಪ್ರಬಲ ಬೋರ್ಡ್‌ಗಳನ್ನು ಎಲ್ಲರಿಗೂ ನೀಡಲು ಆಗುವುದಿಲ್ಲ. ಹಾಗಾಗಿ ಸಿಎಂ, ಡಿಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಸೃಷ್ಟಿ ಬಗ್ಗೆ ಚಿಂತಿಸಬಹುದು ಎಂದು ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.

4 ರಿಂದ 5 ಹೆಚ್ಚುವರಿ ಹುದ್ದೆ ಸೃಷ್ಟಿ?

ಹೆಚ್ಚಿನ ಹಿರಿಯ ಶಾಸಕರು ತಮಗೆ ಪ್ರಬಲ ಬೋರ್ಡ್‌ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ, ಎಲ್ಲರಿಗೂ ನೀಡಲು ಸಾಧ್ಯವಾಗದ ಮಾತು. ಅದಕ್ಕಿಂತ ಕೆಳಗಿನ ಬೋರ್ಡ್‌ ಕೊಟ್ಟರೆ ನಿರಾಕರಿಸುವ ಆತಂಕ ಇದೆ. ಹೀಗಾಗಿ ಅವರಿಗೆ ಪರ್ಯಾಯವಾಗಿ ಪ್ರಬಲ ಹುದ್ದೆಯನ್ನು ಸೃಷ್ಟಿ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಚಿಂತನೆ ನಡೆಸಿದ್ದಾರೆ. ಆದ್ದರಿಂದ 4 ರಿಂದ 5 ಹೆಚ್ಚುವರಿ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಡಿಸಿಎಂಗೂ ರಾಜಕೀಯ ಕಾರ್ಯದರ್ಶಿ?

ಇನ್ನು ಉಪ ಮುಖ್ಯಮಂತ್ರಿಗೂ ರಾಜಕೀಯ ಕಾರ್ಯದರ್ಶಿಯನ್ನು ನೇಮಕ ಮಾಡುವ ಅವಕಾಶ ಇದೆಯಾ ಎಂಬ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದೆ. ಕಾನೂನಿನಲ್ಲಿ ಇದಕ್ಕೆ ಅವಕಾಶ ಇದೆಯೇ? ಆಯ್ಕೆ ನಂತರದ ಸಾಧಕ – ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸದ್ಯಕ್ಕೆ ಇಬ್ಬರು ಅಥವಾ ಮೂವರು ಹಿರಿಯರನ್ನು ರಾಜಕೀಯ ಕಾರ್ಯದರ್ಶಿ ಮಾಡುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ತಿಳಿದು ಬಂದಿದೆ.

ಮೊದಲ ಶಾಸಕರಿಗೆ ನಿಗಮ – ಮಂಡಳಿ ಸ್ಥಾನ ಇಲ್ಲ: ಡಿ.ಕೆ. ಶಿವಕುಮಾರ್

ನಿಗಮ-ಮಂಡಳಿ ಪಟ್ಟಿಯನ್ನು ಅಂತಿಮ ಮಾಡಿದ್ದೇವೆ. ಸುರ್ಜೇವಾಲ ಅವರು ಹೈಕಮಾಂಡ್ (Congress High Command) ಬಳಿ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ, ಮೊದಲ ಬಾರಿ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವೆಲ್ಲರೂ ಕುಳಿತು ನಿಗಮ – ಮಂಡಳಿ ಅಧ್ಯಕ್ಷರ ಆಯ್ಕೆಯನ್ನು ಮಾಡಿದ್ದೇವೆ. ಪಟ್ಟಿ ಅಂತಿಮಗೊಂಡಿದ್ದು, ಸುರ್ಜೇವಾಲ ಅವರು ಹೈಕಮಾಂಡ್‌ಗೆ ಈ ಪಟ್ಟಿಯನ್ನು ನೀಡಲಿದ್ದಾರೆ. ಅವರಿಗೆ ಇಂದು ಚುನಾವಣೆ ಪ್ರಚಾರ ಮುಗಿಯುತ್ತದೆ. ಆದಷ್ಟು ಬೇಗ ಪಟ್ಟಿ ಬಿಡುಗಡೆ ಆಗುತ್ತದೆ ಎಂದು ಹೇಳಿದ್ದಾರೆ. ‌

ಇದನ್ನೂ ಓದಿ: FDA SDA Recruitment : ಎಫ್‌ಡಿಎ, ಎಸ್‌ಡಿಎ ನೇಮಕಾತಿಗೆ ಅರ್ಜಿ ಯಾವಾಗ? ಕಾಯುತ್ತಿರುವ ಲಕ್ಷಾಂತರ ಆಕಾಂಕ್ಷಿಗಳು!

ಮೊದಲ ಬಾರಿ ಶಾಸಕರಾದವರಿಗೆ ಈ ಬಾರಿ ನಿಗಮ-ಮಂಡಳಿ ಸ್ಥಾನ ಇಲ್ಲ. ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಸ್ಥಾನವನ್ನು ಕಲ್ಪಿಸಿಕೊಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Exit mobile version