Site icon Vistara News

Caste Census report: ಜಾತಿ ಗಣತಿ ವರದಿಗೆ ಕಾಂಗ್ರೆಸ್‌ನಲ್ಲಿ ಅಪಸ್ವರ; ಒಪ್ಪಲ್ಲವೆಂದ ಕುಲಕರ್ಣಿ, ದೋಷವಿದೆ ಅಂದ್ರು ಲಕ್ಷ್ಮಿ

Congress Vinay Kulkarni and Lakshmi Hebbalkar disagrees with caste census report

ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ ಜಾತಿ ಗಣತಿ ವರದಿಯನ್ನು (Caste Census report) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಅಧಿಕೃತವಾಗಿ ಸ್ವೀಕಾರ ಮಾಡಿದ್ದಾರೆ. ಆದರೆ, ಇದಕ್ಕೆ ಈಗ ಕಾಂಗ್ರೆಸ್‌ನಲ್ಲಿಯೇ ಅಪಸ್ವರಗಳು ಕೇಳಿ ಬರುತ್ತಿವೆ. ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರಿಂದ ತೀವ್ರ ವಿರೋಧಗಳು ವ್ಯಕ್ತವಾಗತೊಡಗಿವೆ. ಇದನ್ನು ಒಪ್ಪುವುದೇ ಇಲ್ಲ ಎಂದು ಶಾಸಕ ವಿನಯ್‌ ಕುಲಕರ್ಣಿ (Vinay Kulakarni) ಹೇಳಿದ್ದರೆ, ವರದಿಯಲ್ಲಿ ದೋಷಗಳಿವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದ್ದಾರೆ.

ಕಾಂತರಾಜು ಆಯೋಗದ ವರದಿ ಸಲ್ಲಿಕೆ ಕುರಿತು ಕಾಂಗ್ರೆಸ್ ಹಿರಿಯ ಶಾಸಕ ವಿನಯ್ ಕುಲಕರ್ಣಿ ವಿಸ್ತಾರ ನ್ಯೂಸ್ ಜತೆಗೆ ಮಾತನಾಡಿ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ. ನಾವು ಜಾತಿಗಣತಿ ವಿರೋಧಿ ಅಲ್ಲ. ಆದರೆ, ಈ ವರದಿಯನ್ನು ನಾವು ಒಪ್ಪಲ್ಲ. ನಮ್ಮ ಲಿಂಗಾಯತ ಸಮುದಾಯಕ್ಕೆ ಸೇರಿದ ಸಣ್ಣ ಉಪ ಪಂಗಡವನ್ನು ಕೈ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ನಾವು ಈ ವರದಿಯನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.

ಜಾತಿ ಗಣತಿಯಲ್ಲಿ ಕೆಲವು ದೋಷಗಳಿವೆ ಎಂದ ಲಕ್ಷ್ಮಿ ಹೆಬ್ಬಾಳ್ಕರ್‌

ಈ ನಡುವೆ ರಾಮನಗರದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಅವರು, ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಎಲ್ಲಾ ಸಮುದಾಯಕ್ಕೂ ಸಮಾನ ಅವಕಾಶ ಸಿಗಬೇಕು. ಆದರೆ ಈ ಜನಗಣತಿಯಲ್ಲಿ ಕೆಲ ದೋಷಗಳಿವೆ ಎಂದು ಹೇಳಿದ್ದಾರೆ.

ʻʻನಾಲ್ಕು ಜನರ ಮನೆಗೆ ಹೋಗಿದ್ದರೆ, ಇನ್ನು ಕೆಲವರ ಮನೆಗೆ ಹೋಗಲೇ ಇಲ್ಲ. ನಮ್ಮ ಸಂಬಂಧಿಕರ ಹಲವು ಮನೆಗಳಿಗೆ ಬಂದೇ ಇಲ್ಲ. ಹೀಗಾಗಿ ಈ ರೀತಿಯ ಕೆಲ ಗೊಂದಲಗಳಿವೆ. ವೀರಶೈವ ಲಿಂಗಾಯತ ಜಾತಿಯಲ್ಲಿ ಅನೇಕ ಉಪ ಪಂಗಡಗಳಿವೆ‌. 103 ಉಪ ಪಂಗಡಳಿರುವುದರಿಂದ ಅಧ್ಯಯನ ಮಾಡಬೇಕು. ಇದರ ವೈಜ್ಞಾನಿಕ ವರದಿ ಮಾಡಿ ಬಳಿಕ ಸ್ವೀಕರಿಸಬೇಕು. ಇದರಲ್ಲಿ ನಾವು ರಾಜಕೀಯ ಮಾಡಲ್ಲʼʼ ಎಂದು ಮಾಗಡಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ವರದಿ ಪ್ರಕಾರ ಯಾವ ಜಾತಿ, ಧರ್ಮದವರು ಎಷ್ಟಿದ್ದಾರೆ?

ಇದನ್ನೂ ಓದಿ: Sedition case: ರಾಜ್ಯಪಾಲರ ಅಂಗಳಕ್ಕೆ ‘ಪಾಕಿಸ್ತಾನ್‌ ಜಿಂದಾಬಾದ್‌’ ಕದನ; ಸರ್ಕಾರ ವಜಾಕ್ಕೆ ಬಿಜೆಪಿ ಆಗ್ರಹ

ವರದಿಯ ಸಾರಾಂಶ ಏನು?

Exit mobile version