Shamanuru Shivashankarappa : ಬಿಜೆಪಿ ಗೆಲ್ಲಿಸುವ ಶಾಮನೂರು ಹೇಳಿಕೆ; ಕಮಲ ಖುಷಿಖುಷಿ, ಕೈಗೆ ಕಸಿವಿಸಿ - Vistara News

ರಾಜಕೀಯ

Shamanuru Shivashankarappa : ಬಿಜೆಪಿ ಗೆಲ್ಲಿಸುವ ಶಾಮನೂರು ಹೇಳಿಕೆ; ಕಮಲ ಖುಷಿಖುಷಿ, ಕೈಗೆ ಕಸಿವಿಸಿ

Shamanuru Shivashankarappa : ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಮತ್ತೆ ಗೆಲ್ಲಿಸಿ ಎಂಬ ಹೇಳಿಕೆ ಮೂಲಕ ಕಾಂಗ್ರೆಸ್‌ ನಾಯಕ ಶಾಮನೂರು ಶಿವಶಂಕರಪ್ಪ ಯಾವ ಸಂದೇಶ ರವಾನೆ ಮಾಡಲು ಪ್ರಯತ್ನಿಸಿದರು ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಮುಂದಿನ ದಿನಗಳು ಈ ಚರ್ಚೆಗೆ ಹೊಸ ಆಯಾಮ ನೀಡಲೂಬಹುದು.

VISTARANEWS.COM


on

shamanuru shivashankarappa by raghavendra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ (Shivamogga Constituency) ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ (MP BY Raghavendra) ಅವರನ್ನೇ ಪುನರಾಯ್ಕೆ ಮಾಡಬೇಕು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆ, ಶಾಮನೂರು ಹೇಳಿಕೆ ಬಿಜೆಪಿ ವಲಯದಲ್ಲಿ ಭಾರಿ ಸಂಭ್ರಮಕ್ಕೆ ಕಾರಣವಾಗಿದ್ದರೆ, ಕಾಂಗ್ರೆಸ್‌ಗೆ ಕಸಿವಿಸಿ ಉಂಟು ಮಾಡಿದೆ.

ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರು ಹೇಳಿದ್ದೇನು?

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿವೈ ರಾಘವೇಂದ್ರರನ್ನು ಗೆಲ್ಲಿಸುವಂತೆ ಕರೆ ನೀಡಿದ್ದು ಅಚ್ಚರಿ ಮೂಡಿಸಿತ್ತು.

ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ಆಗಿರುವುದನ್ನು ಗಮನಿಸಿದ್ದೇನೆ. ನೀವು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ ಎಂದು ಹೇಳಿದರು. ಜತೆಗೆ, ಬಿ.ವೈ.ರಾಘವೇಂದ್ರ ಅವರಂತಹ ಲೋಕಸಭೆ ಸದಸ್ಯರನ್ನುಪಡೆದ ನೀವೇ ಧನ್ಯರು ಎಂದು ಹಾಡಿ ಹೊಗಳಿದ್ದರು.

ರಾಘವೇಂದ್ರ ಅವರು ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಿ ಎಂದು ಅವರು ಹೇಳಿದ್ದರು. ಇದು ಲಿಂಗಾಯತ ಸಮುದಾಯದ ಒಬ್ಬ ನಾಯಕನ ಪರವಾಗಿ ಶಾಮನೂರು ಆಡಿದ ಮಾತಿನಂತೆ ಕಂಡರೂ ಅದರಲ್ಲಿ ಹಲವು ರಾಜಕೀಯ ಒಳಸುಳಿಗಳ ವಿಶ್ಲೇಷಣೆ ನಡೆಯುತ್ತಿದೆ.

ಶಾಮನೂರು ಶಿವಶಂಕರಪ್ಪ (Shamanuru Shivashankarappa) ಹೇಳಿಕೆ ಸ್ವಾಗತಿಸಿದ ಯಡಿಯೂರಪ್ಪ

ಶಾಮನೂರು ಅವರು ನೀಡಿದ ಹೇಳಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪ್ರೀತಿಯಿಂದ ಸ್ವಾಗತಿಸಿದರು. ಶಾಮನೂರು ಅವರು ನಮ್ಮ ಸಮಾಜದ ಹಿರಿಯ ಮುಖಂಡರು. ರಾಘವೇಂದ್ರ ಮಾಡಿರುವ ಕೆಲಸ ಮೆಚ್ಚಿ ಅವರನ್ನು ಪುನರಾಯ್ಕೆ ಮಾಡಬೇಕೆಂದು ಹೇಳಿರುವುದು ನಮ್ಮ ಸಮಾಜದ ಬಂಧುಗಳಿಗೆ, ಕಾರ್ಯಕರ್ತರಿಗೆ ಸಂತೋಷ ತಂದಿದೆ. ಶಾಮನೂರು ಅವರಂಥ ಹಿರಿಯರು ಆಶೀರ್ವಾದ ಮಾಡಿರೋದು ಸಂತೋಷ. ಅದಕ್ಕಾಗಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದಿದ್ದಾರೆ.

ಇದು ನನ್ನ ಪೂರ್ವ ಜನ್ಮದ ಪುಣ್ಯ ಫಲ ಎಂದ ಬಿ.ವೈ ರಾಘವೇಂದ್ರ

ಶಾಮನೂರು ಶಿವಶಂಕರಪ್ಪ ಅವರ ಆಶೀರ್ವಾದದಿಂದ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ʻʻಧಾರ್ಮಿಕ ಸಭೆಯಲ್ಲಿ ನಮ್ಮ ಸಮಾಜದ ಹಿರಿಯರು ಶಿವಮೊಗ್ಗ ದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ನೋಡಿ ಹೇಳಿಕೆ ನೀಡಿದ್ದಾರೆ. ಆಶೀರ್ವಾದ ಮಾಡುವ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷದಲ್ಲಿ ಇದ್ರೂ ನೇರವಾಗಿ ಮಾತನಾಡಿದ್ದಾರೆ. ಇದು ನನ್ನ ಪೂರ್ವ ಜನ್ಮದ ಫಲʼʼ ಎಂದು ಅವರು ಹೇಳಿದ್ದಾರೆ.

ಶಾಮನೂರು ಅವರ ಹೇಳಿಕೆಯಿಂದ ನಾನು ಅರ್ಥ ಮಾಡಿಕೊಂಡಿದ್ದು ಏನು ಅಂದರೆ ಯಾವುದೇ ವ್ಯಕ್ತಿ ಯಾವುದೇ ಪಕ್ಷ ಆದರೂ ಅವರು ಮಾಡಿದ ಒಳ್ಳೆ ಕೆಲಸ ನೋಡಿ ಸ್ಮರಣೆ ಮಾಡಬೇಕು. ನೇರ ನುಡಿಗೆ ಹೆಸರಾದವರು ಶಾಮನೂರು ಶಿವಶಂಕರಪ್ಪ ಅವರು. ಅವರು ಹೃದಯದಿಂದ ಅವರ‌ ಮನಸ್ಸಿನ ಮಾತು ಹೇಳಿದ್ದಾರೆ. ಎಲ್ಲರ ಅಪೇಕ್ಷೆಯಂತೆ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಮಾಡುತ್ತೇನೆ. ಕಾಂಗ್ರೆಸ್ ಶಾಸಕರು ಅನ್ನುವುದಕ್ಕಿಂತ ಒಳ್ಳೆಯ ಕೆಲಸಕ್ಕೆ ಒಳ್ಳೆಯದನ್ನು ಮಾತನಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಅನಿಸಲ್ಲ ನನಗೆ ಎಂದರು ಬಿ.ವೈ ರಾಘವೇಂದ್ರ.

ಇದನ್ನೂ ಓದಿ: Caste Census: ಜಾತಿ ಗಣತಿ ಬಗ್ಗೆ ಅನುಮಾನವಿದೆ; ಸರ್ಕಾರ ಹಠಕ್ಕೆ ಬೀಳಬಾರದು: ಶಾಮನೂರು ಎಚ್ಚರಿಕೆ

ಶಾಮನೂರು ಹೇಳಿದ್ದು ಮೋದಿ ಆಯ್ಕೆ ಆಗಬೇಕು ಎಂದು: ಸಿ.ಟಿ. ರವಿ ವ್ಯಾಖ್ಯಾನ

ಶಿವಮೊಗ್ಗದಲ್ಲಿ ಮತ್ತೆ ಬಿ.ವೈ ರಾಘವೇಂದ್ರ ಅವರನ್ನೇ ಆಯ್ಕೆ ಮಾಡಿ ಎಂಬ ಶಾಮನೂರು ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ. ಅವರು ಮೋದಿಯನ್ನು ಒಪ್ಪಿದ್ದಾರೆ. ಮತ್ತೆ ಮೋದಿ ಪ್ರಧಾನಿ ಆಗಲಿ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಶಾಮನೂರು ಅವರ ಹೇಳಿಕೆಯಂತೆ ಮೋದಿಗೆ ಎಲ್ಲರೂ ಮತ ಹಾಕಬೇಕು. ಬಿಜೆಪಿ ಗೆಲ್ಲಿಸಬೇಕು. ಅಭಿವೃದ್ಧಿ ಆಗಬೇಕು ಎಂದರೆ ಮೋದಿ ಬೇಕಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಅವರು ಶಾಮನೂರು ಮಾತುಗಳನ್ನು ವ್ಯಾಖ್ಯಾನಿಸಿದರು.

ಮೋದಿ ಬೆಂಬಲಿಸಿ ಎನ್ನುವುದು ಶಾಮನೂರು ಮಾತು ಎಂದರು ಆರ್‌. ಅಶೋಕ್‌

ʻʻ ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು. ಅವರು ಮೋದಿ ಉತ್ತಮ ಕೆಲಸ ಮಾಡಿದ್ದಾರೆ. ಮೋದಿ ಅವರನ್ನು ಬೆಂಬಲಿಸಿ, ರಾಘವೇಂದ್ರ ಅವರಿಗೆ ಮತ ನೀಡಿ ಅಂತ ಹೇಳಿದ್ದಾರೆʼʼ ಎಂದು ವಿರೋಧ ಪಕ್ಷದ ನಾಯಕ ಆರ್‌. ಆಶೋಕ್‌ ಹೇಳಿದರು.

ಶಾಮನೂರು ಅವರ ಈ ಮಾತು ಏನು ಸಂದೇಶ ನೀಡುತ್ತದೆ ಅಂತ ಗೊತ್ತಲ್ಲ. ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಾಗಿದೆ. ಮುಂದೆ ಒಡೆದು ನೂರು ಚೂರು ಆಗಲಿದೆ ಎಂದು ಹೇಳಿದರು.

ಯಾರೇನೇ ಹೇಳಿದರೂ ಶಿವಮೊಗ್ಗದಲ್ಲಿ ಕಾಂಗ್ರೆಸ್‌ಗೆ ಗೆಲುವು ಎಂದ ಡಿ.ಕೆ ಶಿವಕುಮಾರ್‌

ಸಂಸದ ರಾಘವೇಂದ್ರರನ್ನ ಗೆಲ್ಲಿಸುವಂತೆ ಹಿರಿಯ ಕಾಂಗ್ರೆಸ್ ಶಾಸಕ‌ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದರ ಬಗ್ಗೆ ಸ್ವಲ್ಪ ಖಾರವಾಗಿ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರು, ಎಲ್ಲರೂ ಪಕ್ಷದ ಚೌಕಟ್ಟಿನಲ್ಲಿ ಇರಬೇಕು. ಪಕ್ಷದ ವೇದಿಕೆಯಲ್ಲಿ ಶಾಮನೂರು ಈ ಮಾತು ಹೇಳಿಲ್ಲ ಅನ್ನಿಸುತ್ತದೆ. ಅದರ ಬಗ್ಗೆ ಮಾಹಿತಿ ಇಲ್ಲ ಎಂದರು.

ಸಂಸದ ರಾಘವೇಂದ್ರ ಗೆಲ್ಲಿಸಿ ಎಂದ ಶಾಮನೂರು ಹೇಳಿಕೆ‌ಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು, ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರು.

ಶಿವಶಂಕರಪ್ಪ ಮೇಲೆ ವಿಶ್ವನಾಥ್‌ ಕೆಂಡ

ಈ ನಡುವೆ, ಬಿ.ವೈ ರಾಘವೇಂದ್ರ ಪರ ಬ್ಯಾಟ್ ಬೀಸಿದ್ದ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಎಚ್.‌ ವಿಶ್ವನಾಥ್‌ ತಮ್ಮದೇ ಧಾಟಿಯಲ್ಲಿ ಕುಟುಕಿದ್ದಾರೆ. ʻʻಶ್ಯಾಮನೂರು ಶಿವಶಂಕರಪ್ಪ ಯಾವ ಹಿರಿಯ ಮುತ್ಸದ್ದಿಯೂ ಅಲ್ಲ, ಅವನು ಜಾತಿವಾದಿ ಮುತ್ಸದ್ದಿ. ಕಾಂಗ್ರೆಸ್ ಜೀವಂತವಾಗಿದ್ರೆ ಮೊದಲು ಅವರನ್ನು ಪಾರ್ಟಿಯಿಂದ ಉಚ್ಛಾಟನೆ ಮಾಡಿ ಎಂದು ಹರಿಹಾಯ್ದರು.

ʻʻಶ್ಯಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಟಿಕೆಟ್ ಪಡೆದು ಶಾಸಕರಾಗಿದ್ದಾರೆ. ಮಗ ಮಂತ್ರಿಯಾಗಿದ್ದಾರೆ. ಕಾಂಗ್ರೆಸ್ ನಲ್ಲಿ ಇದ್ದುಕೊಂಡೆ ಕಾಂಗ್ರೆಸ್ ಅಧಿಕಾರ ಅನುಭವಿಸಿಕೊಂಡೆ ಬೇರೆ ಪಾರ್ಟಿಗೆ ಕ್ಯಾನ್ವಸ್ ಮಾಡೋದು ಸರಿಯಲ್ಲʼʼ ಎಂದು ಕೆಂಡ ಕಾರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

R Ashok: ಹಗರಣದ ವಿರುದ್ಧ ಮಾತನಾಡಿದ ಸದಸ್ಯರ ಬಾಯಿ ಮುಚ್ಚಿಸಿದ ಸ್ಪೀಕರ್‌; ಆರ್‌. ಅಶೋಕ್‌ ಆಕ್ರೋಶ

R Ashok: ಸದನದಲ್ಲಿ ಸದಸ್ಯರು ಮಾತನಾಡುವಾಗ ಅವರನ್ನು ಒತ್ತಾಯಪೂರ್ವಕವಾಗಿ ಸ್ಪೀಕರ್‌ ಕೂರಿಸುತ್ತಿದ್ದಾರೆ. ಇದು ಸದನಕ್ಕೆ ಅಥವಾ ಸ್ಪೀಕರ್‌ಗೆ ಗೌರವ ತರುವುದಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಈ ರೀತಿ ಸದನ ನಡೆದಿಲ್ಲ. ಸ್ಪೀಕರ್‌ ಸದನ ನಡೆಸಲು ಸಂಪೂರ್ಣ ವಿಫಲರಾಗಿದ್ದಾರೆ ಎಂದು ತಿಳಿಸಿರುವ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ಇಂತಹ ಸ್ಪೀಕರ್‌ರಿಂದ ನಾವು ಏನೂ ನಿರೀಕ್ಷೆ ಮಾಡಲಾಗುವುದಿಲ್ಲ. ಮಳೆ ಹಾನಿ ಕುರಿತು 15 ದಿನಗಳ ಹಿಂದೆಯೇ ಹೇಳಬೇಕಿತ್ತು. ಸ್ಪೀಕರ್‌ ನಡೆ ಸದನಕ್ಕೆ ಗೌರವ ತರುವುದಿಲ್ಲ. ಸೋಮವಾರದ ಅಧಿವೇಶನದಲ್ಲಿ ಬಿಜೆಪಿ ಈ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Opposition party leader R Ashok statement about Valmiki Development Corporation scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ ಅವರನ್ನು ಒತ್ತಾಯಪೂರ್ವಕವಾಗಿ ಕೂರಿಸುವ ಕೆಲಸವನ್ನು ಸ್ಪೀಕರ್‌ ಯು.ಟಿ. ಖಾದರ್‌ ಮಾಡಿದ್ದಾರೆ. ಮಳೆ ಹಾನಿಗೆ ಪರಿಹಾರ ನೀಡದೆ ಹಗರಣ ಮುಚ್ಚಿ ಹಾಕಲು ನಡುವೆ ಈ ವಿಷಯ ತರಲಾಗಿದೆ. ಇದು ಸದನಕ್ಕೆ ಹಾಗೂ ಸ್ಪೀಕರ್‌ಗೆ ಗೌರವ ತರುವ ಕೆಲಸವಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಸದನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸದಸ್ಯರು ಮಾತನಾಡುವಾಗ ಅವರನ್ನು ಒತ್ತಾಯಪೂರ್ವಕವಾಗಿ ಸ್ಪೀಕರ್‌ ಕೂರಿಸುತ್ತಿದ್ದಾರೆ. ಇದು ಸದನಕ್ಕೆ ಅಥವಾ ಸ್ಪೀಕರ್‌ಗೆ ಗೌರವ ತರುವುದಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಈ ರೀತಿ ಸದನ ನಡೆದಿಲ್ಲ. ಸ್ಪೀಕರ್‌ ಸದನ ನಡೆಸಲು ಸಂಪೂರ್ಣ ವಿಫಲರಾಗಿದ್ದಾರೆ. ಇಂತಹ ಸ್ಪೀಕರ್‌ರಿಂದ ನಾವು ಏನೂ ನಿರೀಕ್ಷೆ ಮಾಡಲಾಗುವುದಿಲ್ಲ. ಮಳೆ ಹಾನಿ ಕುರಿತು 15 ದಿನಗಳ ಹಿಂದೆಯೇ ಹೇಳಬೇಕಿತ್ತು. ಸ್ಪೀಕರ್‌ ನಡೆ ಸದನಕ್ಕೆ ಗೌರವ ತರುವುದಿಲ್ಲ. ಸೋಮವಾರದ ಅಧಿವೇಶನದಲ್ಲಿ ಬಿಜೆಪಿ ಈ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದರೆ ಅದು ಕಾಂಗ್ರೆಸ್‌ ಸರ್ಕಾರದ ಪ್ರಾಯೋಜಿತ ಕೊಲೆ. 187 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಲೂಟಿ ಮಾಡಿ ಚುನಾವಣೆಗೆ ಬಳಸಿದ್ದಾರೆ ಎಂಬುದು ಜಾರಿ ನಿರ್ದೇಶನಾಲಯದ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟವಾಗಿದೆ. ಈ ಕುರಿತು ಸದನದಲ್ಲಿ ನಿಲುವಳಿ ಸೂಚನೆಯಲ್ಲಿ ಮಾತನಾಡಲಾಗಿದೆ. ಲೂಟಿಯಾದ ಹಣವನ್ನು ಯಾವಾಗ ವಾಪಸ್‌ ತರಲಾಗುತ್ತದೆ ಎಂದು ನಾವು ಪ್ರಶ್ನೆ ಮಾಡಿದ್ದೇವೆ. ಇದು ಎಟಿಎಂ ಸರ್ಕಾರದ ಮೂಲಕ ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ತಲುಪಿದೆಯೇ ಎಂದು ಕೇಳಿದ್ದೇವೆ ಎಂದರು.

ಈ ಹಗರಣ ಮಾಡಿದ ತಪ್ಪಿತಸ್ಥರಿಗೆ ಶಿಕ್ಷಯಾಗಬೇಕೆಂದರೆ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್‌ ಅವರ ಹೆಸರು ಎಫ್‌ಐಆರ್‌ನಲ್ಲಿ ಬರಬೇಕು. ಆದರೆ ಇವರಿಬ್ಬರ ಹೆಸರು ಕೂಡ ಎಫ್‌ಐಆರ್‌ನಲ್ಲಿ ಬಾರದಂತೆ ಮಾಡಲು ಪೊಲೀಸರಿಗೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದಿಂದ ಭಾಷಣ ಮಾಡಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾರೂ ಭಾಗಿಯಾಗಿಲ್ಲ ಎಂದಿದ್ದಾರೆ. ಆದರೆ ಸಚಿವರು ರಾಜೀನಾಮೆ ನೀಡಿದ್ದಾರೆ. ಹಣ ಲೂಟಿಯಾಗಿದೆ ಎಂದು ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. 40 ಪರ್ಸೆಂಟ್‌ ಎಂದು ಭಿತ್ತಿಪತ್ರ ಅಂಟಿಸಿ, ಅಧಿಕಾರಕ್ಕೆ ಬಂದ ಮೇಲೆ ತನಿಖೆಗೆ ವಹಿಸಿದ್ದಾರೆ. ಆದರೆ ಇದರ ವರದಿ ಮಾತ್ರ ಬಂದಿಲ್ಲ. ಆದರೂ ಬಿಜೆಪಿ ಹಗರಣ ಮಾಡಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಪ್ರಶ್ನೆ ಮಾಡಿದ ನಂತರ ದಿಢೀರನೆ ಹಳೆ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ದೂರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಗರಣದಲ್ಲಿ ಭಾಗಿಯಾಗಿದ್ದು, ರಾಜೀನಾಮೆ ಕೊಡಬೇಕಿತ್ತು. ಆದರೆ ಅದನ್ನೂ ಮಾಡಿಲ್ಲ, ಸಿಬಿಐ ತನಿಖೆಗೂ ವಹಿಸಿಲ್ಲ. ಹಗರಣವನ್ನು ಮುಚ್ಚಿಹಾಕಲು ಎಲ್ಲ ವ್ಯವಸ್ಥಿತ ಸಂಚು ಮಾಡಲಾಗಿದೆ. ಬಿಜೆಪಿಯಿಂದ ಇದರ ವಿರುದ್ಧ ತೀವ್ರ ಹೋರಾಟ ಮುಂದುವರಿಯಲಿದೆ. ದಲಿತರ ಹಣ ವಾಪಸ್‌ ಸಿಗಬೇಕು, ಅಪರಾಧಿಗಳಿಗೆ ಶಿಕ್ಷೆ ಸಿಗಬೇಕು ಎಂಬುದು ಬಿಜೆಪಿಯ ಬೇಡಿಕೆ ಎಂದರು.

ಇದನ್ನೂ ಓದಿ: Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

ಮಳೆ ಹಾನಿಗೆ ಕ್ರಮವಿಲ್ಲ

ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಹಾನಿಯಾಗಿ ಜನರು ಸತ್ತಿದ್ದರೂ ಸಚಿವರು ಘಟನಾ ಸ್ಥಳಕ್ಕೆ ಹೋಗಿ ಸಂತ್ರಸ್ತರನ್ನು ಭೇಟಿ ಮಾಡಿಲ್ಲ. ಹಾನಿಗೊಳಗಾದವರಿಗೆ ಬಿಜೆಪಿ ಸರ್ಕಾರ 10,000 ರೂ. ಪರಿಹಾರ ನೀಡುತ್ತಿತ್ತು. ಈಗ ಸರ್ಕಾರ ಪರಿಹಾರವನ್ನು 5,000 ರೂ. ಗೆ ಇಳಿಸಿದೆ. ಮನೆ ಕಳೆದುಕೊಂಡವರಿಗೆ ಬಿಜೆಪಿ ತಲಾ 5 ಲಕ್ಷ ರೂ. ಪರಿಹಾರ ನೀಡುತ್ತಿತ್ತು. ಈಗ ಅದು ಕೂಡ ಇಲ್ಲ. ಸರ್ಕಾರ ದಿವಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Continue Reading

ದೇಶ

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

Keshav Prasad Maurya:ಅಖಿಲೇಶ್‌ ಯಾದವ್‌ ಅವರು ಹಗಲುಗನಸು ಕಾಣುತ್ತಿದ್ದಾರೆ. ಸಮಾಜವಾದಿ ಪಕ್ಷವೊಂದು ಮುಳುಗುತ್ತಿರುವ ಹಡಗು. 2017ನಂತಹ ಸೋಲು ಎಸ್‌ಪಿಗೆ ಕಟ್ಟಿಟ್ಟ ಬುತ್ತಿ. 2027ರಲ್ಲಿ ಬಿಜೆಪಿ ಮತ್ತೊಮ್ಮೆ ಹ್ಯಾಟ್ರಿಕ್‌ ಗೆಲುವು ಸಾಧಿಸುವುದು ಖಚಿತ. ಬಿಜೆಪಿ ಕಾರ್ಯಕರ್ತರು ಮಾನ್ಸೂನ್‌ ಆಫರನ್ನು ತಂದೆ ತರುತ್ತಾರೆ. ಎಸ್‌ಪಿ ಒಂದು ಸಾಯುತ್ತಿರುವ ಪಕ್ಷ. ಯಾದವ್‌ ಅವರು ಮುಂಗೇರಿಲಾಲ್‌ನ ಹಗಲುಗನಸಿನಂತೆ ಕನಸು ಕಾಣುತ್ತಲೇ ಇರಲಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Keshav Prasad Maurya
Koo

ಲಖನೌ: ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯಾನಾಥ್‌(Yogi Adityanath) ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ(Keshav Prasad Maurya) ನಡುವಿನ ಭಿನ್ನಮತವನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಸಮಾಜವಾದಿ ಪಕ್ಷ ಮುಂಬರುವ ವಿಧಾನಸಭೆಯಲ್ಲಿ ಮತ್ತೆ ಗದ್ದುಗೆ ಏರುವುದು ಖಚಿತ, ಬಿಜೆಪಿ ಸೋಲು ನಿಶ್ಚಿತ ಎಂದು ಹೇಳಿಕೆ ನೀಡುತ್ತಿದ್ದಾರೆ. ಅದೂ ಅಲ್ಲದೇ ಮಳೆಗಾಲದ ಆಫರ್‌! 100 ಶಾಸಕರನ್ನು ತನ್ನಿ ಸರ್ಕಾರ ರಚಿಸಿ ಎಂದು ಅಖಿಲೇಶ್‌ ಯಾದವ್‌(Akhilesh Yadav) ಕೂಡ ಟ್ವೀಟ್‌ ಮಾಡಿ ಬಿಜೆಪಿಯನ್ನು ಕೆಣಕಿದ್ದರು. ಇದೀಗ ಇದಕ್ಕೆ ಕೇಶವ್‌ ಪ್ರಸಾದ್‌ ಯಾದವ್‌ ತಿರುಗೇಟು ನೀಡಿದ್ದಾರೆ.

ಅಖಿಲೇಶ್‌ ಯಾದವ್‌ ಅವರು ಹಗಲುಗನಸು ಕಾಣುತ್ತಿದ್ದಾರೆ. ಸಮಾಜವಾದಿ ಪಕ್ಷವೊಂದು ಮುಳುಗುತ್ತಿರುವ ಹಡಗು. 2017ನಂತಹ ಸೋಲು ಎಸ್‌ಪಿಗೆ ಕಟ್ಟಿಟ್ಟ ಬುತ್ತಿ. 2027ರಲ್ಲಿ ಬಿಜೆಪಿ ಮತ್ತೊಮ್ಮೆ ಹ್ಯಾಟ್ರಿಕ್‌ ಗೆಲುವು ಸಾಧಿಸುವುದು ಖಚಿತ. ಬಿಜೆಪಿ ಕಾರ್ಯಕರ್ತರು ಮಾನ್ಸೂನ್‌ ಆಫರನ್ನು ತಂದೆ ತರುತ್ತಾರೆ. ಎಸ್‌ಪಿ ಒಂದು ಸಾಯುತ್ತಿರುವ ಪಕ್ಷ. ಯಾದವ್‌ ಅವರು ಮುಂಗೇರಿಲಾಲ್‌ನ ಹಗಲುಗನಸಿನಂತೆ ಕನಸು ಕಾಣುತ್ತಲೇ ಇರಲಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕಳೆದ ಜೂನ್ 14ರಂದು ಲಖನೌದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಯ ಹಿನ್ನಡೆಗೆ ‘ಅತಿಯಾದ ಆತ್ಮವಿಶ್ವಾಸ’ ಕಾರಣ ಎಂದು ಸಿಎಂ ಯೋಗಿ ಆದಿತ್ಯನಾಥ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ರಾಜ್ಯ ಬಿಜೆಪಿಯ ಹಲವು ನಾಯಕರು, ಯೋಗಿ ಆದಿತ್ಯನಾಥ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ತಮ್ಮ ಸೋಲಿಗೆ ಯೋಗಿ ಅವರ ಆಡಳಿತ ಶೈಲಿಯೇ ಕಾರಣ ಎಂದು ಆರೋಪಿಸುತ್ತಿದ್ದರು. ಸಿಎಂ ಯೋಗಿ ಆದಿತ್ಯಾನಾಥ್‌ ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರೀ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರನ್ನು ಭೇಟಿ ಮಾಡಿದ್ದರು.

ಅಖಿಲೇಶ್‌ ಯಾದವ್‌ ಗೆ ತಿರುಗೇಟು

ಏತನ್ಮಧ್ಯೆ, ಮೌರ್ಯ ಅವರ ಪೋಸ್ಟ್ ಅನ್ನೇ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ವ್ಯಂಗ್ಯವಾಡಿದೆ. ಈ ಬಗ್ಗೆ ಎಸ್ಪಿ ನಾಯಕ ಅಖಲೇಶ್‌ ಯಾದವ್‌ ಬಿಜೆಪಿಯನ್ನು ಟೀಕಿಸಿದ್ದರು. ಇದಕ್ಕೆ ಟಾಂಗ್‌ ಕೊಟ್ಟ, ಕೇಶವ್ ಪ್ರಸಾದ್ ಮೌರ್ಯ, ಇಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಬಲವಾಗಿದೆ ಮತ್ತು 2027 ರಲ್ಲಿ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading

ಕರ್ನಾಟಕ

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Pralhad Joshi: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿಜವಾಗಿ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ. ಚುನಾವಣೆ ವೇಳೆ ಮಾತ್ರ ಅವರನ್ನು ಓಲೈಸಿಕೊಳ್ಳಲು ಬಣ್ಣ ಬಣ್ಣದ ಕಥೆ ಕಟ್ಟಿ ರಾಜಕಾರಣ ಮಾಡುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Congress creates colorful stories only during elections Minister Pralhad Joshi alleges
Koo

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಮಾತ್ರ ಬಡವರ ಪರ, ಪರಿಶಿಷ್ಟರ ಪರ ಎನ್ನುತ್ತ ಬಣ್ಣ ಬಣ್ಣದ ಕತೆ ಕಟ್ಟುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಟೀಕಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿಜವಾಗಿ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ. ಚುನಾವಣೆ ವೇಳೆ ಮಾತ್ರ ಅವರನ್ನು ಓಲೈಸಿಕೊಳ್ಳಲು ಬಣ್ಣ ಬಣ್ಣದ ಕಥೆ ಕಟ್ಟಿ ರಾಜಕಾರಣ ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

ಇಂದಿರಾ ಕ್ಯಾಂಟಿನ್ ತಾನೇ ಮುಚ್ಚುತ್ತಿದೆ ಕಾಂಗ್ರೆಸ್ ಸರ್ಕಾರ

ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಬಿಜೆಪಿ ಅಲ್ಲ, ಈಗ ಕಾಂಗ್ರೆಸ್ ಸರ್ಕಾರವೇ ಮುಚ್ಚುತ್ತಿದೆ. ಬಡವರು ಮತ್ತು ಶ್ರಮಿಕ ವರ್ಗದವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಮುಚ್ಚಿಸಲು ಹೊರಟಿದ್ದೇವೆಂದು ಆಗ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿತ್ತು. ಆದರೆ, ಈಗ ಕಾಂಗ್ರೆಸ್ ಸರ್ಕಾರವೇ ಮುಚ್ಚಲು ಹೊರಟಿದೆ ಎಂದು ಜೋಶಿ ಆರೋಪಿಸಿದ್ದಾರೆ.

ಗ್ಯಾರಂಟಿ ಯೋಜನೆ ನಿಭಾಯಿಸಲಾಗದೆ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿದ್ದ ಧನಕ್ಕೆ ಕೈ ಹಾಕಿದ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟಿನ್‌ಗಳಿಗೆ ಬೀಗ ಹಾಕುತ್ತಿದೆ ಎಂದಿದ್ದಾರೆ.

ಇಂದಿರಾ ಕ್ಯಾಂಟಿನ್‌ಗಳಿಗೆ ಕಳೆದೊಂದು ವರ್ಷದಿಂದ ಆಹಾರ ಪೂರೈಸುತ್ತಿದ್ದ ಗುತ್ತಿಗೆದಾರರಿಗೆ ಬರೋಬ್ಬರಿ 47 ಕೋಟಿ ರೂ. ಬಿಲ್ ಪಾವತಿಸಲಾಗದೆ ಬಾಗಿಲು ಮುಚ್ಚಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕಾಂಗ್ರೆಸ್ ನಾಯಕರು ತಾವು ಬಡವರ ಪರ ಎನ್ನುತ್ತಾರೆ ಹೊರತು ಮಾತಲ್ಲಿ ಹೇಳಿದ್ದನ್ನು ಕಾರ್ಯರೂಪಕ್ಕೆ ತರುವುದಿಲ್ಲ. ಆ ಇಚ್ಛಾಸಕ್ತಿ ಮುಖ್ಯಮಂತ್ರಿ ಅವರಿಗಿಲ್ಲ ಎಂದು ಆರೋಪಿಸಿ ಪ್ರಲ್ಹಾದ್‌ ಜೋಶಿ ಟ್ವೀಟ್ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ

Valmiki Corporation Scam: ನಮ್ಮ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂದು ವಿಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ನಿಗಮ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿಯ ಮೇಲೆ ದೂರು ದಾಖಲಾಗಿದೆ. ಸರ್ಕಾರಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮಕ್ಕೆ (Valmiki Corporation Scam) ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಅಧಿಕಾರಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಪರಿಹಾರ ನೀಡಲಾಗುತ್ತದೆ, ಈ ಬಗ್ಗೆ ಅಧಿವೇಶನದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂದು ವಿಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ದಲಿತರ ಪರವಾಗಿ ಮಾತನಾಡಬೇಕು, ಸಿಂಪತಿ ಗಿಟ್ಟಿಸಿಕೊಳ್ಳಬೇಕು ಅಂತ ಮಾಡುತ್ತಿದ್ದಾರೆ. ನಾವು ದಲಿತರ ಪರವಾಗಿದ್ದೀವಿ, ನಮ್ಮ ಗ್ಯಾರಂಟಿ ಯೋಜನೆಗಳು ಹಿಂದುಳಿದವರ ಪರ ಇವೆ. ನಮ್ಮ ಗ್ಯಾರಂಟಿ ಯೋಜನೆಗೆ ಜಾತಿ, ಧರ್ಮ ಇಲ್ಲ. ಕಾನೂನಿಗೆ ವಿರುದ್ಧ ಯಾರಿದ್ದರೂ, ನಾವು ಅವರ ವಿರುದ್ಧ ಫೈಟ್ ಮಾಡುತ್ತೇವೆ ಎಂದು ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರನ್‌ ಪತ್ನಿ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಅದಕ್ಕೆ ಆ ಕುಟುಂಬಕ್ಕೆ 25 ಲಕ್ಷ ಹಣ ಪರಿಹಾರ ಘೋಷಣೆ ಮಾಡುತ್ತಿದ್ದೇವೆ. ಈಗ ಪರಿಹಾರ ಘೋಷಣೆ ಮಾಡಬಾರದಿತ್ತು, ಅಧಿವೇಶನದಲ್ಲಿ ಪರಿಹಾರ ಘೋಷಣೆ ಮಾಡುತ್ತೇನೆ ಎಂದು ತಿಳಿಸಿದರು.

ಅಧಿಕಾರಿಗಳೇ ಚಂದ್ರಶೇಖರನ್‌ ಆತ್ಮಹತ್ಯೆಗೆ ಕಾರಣ

ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಡೆತ್ ನೋಟ್‌ನಲ್ಲಿ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಚೀಪ್ ಅಕೌಂಟ್ ಅಫೀಸರ್ ಪರಶುರಾಮ, ಎಂಜಿ ರಸ್ತೆ ಯೂನಿಯನ್‌ ಬ್ಯಾಂಕ್‌ ಚೀಫ್‌ ಮ್ಯಾನೇಜರ್ ಸುಚಿಸ್ಮಿತಾ ಕಾರಣ ಅಂತ ಬರೆದಿದ್ದಾರೆ.

ಅಕೌಂಟ್ ಸೂಪರಿಂಟೆಂಡೆಂಟ್ ಚಂದ್ರಶೇಖರ್ ತಮಿಳುನಾಡಿನ ಭೋವಿ ಜನಾಂಗದವರು. ಶಿವಮೊಗ್ಗದ ವಿನೋಬಾ ನಗರದಲ್ಲಿ ವಾಸವಾಗಿದ್ದಾರೆ. ಹೆಂಡತಿ ದೊಡ್ಡಪ್ಪನ ಅಂತ್ಯಕ್ರಿಯೆಗೆ ಹೋದಾಗ ಈತ ಮೇ 26 ನೇಣಿಗೆ ಶರಣಾಗಿದ್ದ. ಆ‌ಮೇಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಟಿವಿ ಹಿಂಭಾಗದಲ್ಲಿ ಒಂದು ನೋಟ್ ಬುಕ್ ಸಿಗುತ್ತೆ, ಅದರಲ್ಲಿ ಡೆತ್‌ಗೆ ಕಾರಣ ಬರೆದಿದ್ದ. ಅದರಲ್ಲಿ ಸ್ಪಷ್ಟವಾಗಿ ಎಂಡಿ ಪದ್ಮನಾಭ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ, ಎಂಜಿ ರೋಡ್ ಶಾಖೆ ಮ್ಯಾನೇಜರ್ ಸುಚಿಸ್ಮಿತಾ ನನ್ನ ಸಾವಿಗೆ ಕಾರಣ ಅಂತ ಎಂದು ಸ್ಪಷ್ಟವಾಗಿ ಬರೆದಿದ್ದ ಎಂದು ಸಿಎಂ ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡ ಮೇಲೆ ಅವನ ಹೆಂಡತಿ ಕವಿತಾ, ಮೇ 27 ತಾರೀಖು ಕಂಪ್ಲೆಂಟ್ ಕೊಟ್ಟಿದ್ದರು. ಎಫ್‌ಐಆರ್‌ ಆದಮೇಲೆ ಕೇಸ್‌ ಕೋರ್ಟ್‌ಗೆ ಹೋಗುತ್ತದೆ. 3 ಜನರ ಮೇಲೆ ಎಫ್‌ಐಆರ್‌ ಆಗಿತ್ತು. ಮೇ 28ರಂದು ನಿಗಮದ ಎಂಡಿ ರಾಜಶೇಖರ್ ಕಂಪ್ಲೆಂಟ್ ಕೊಟ್ಟಿದ್ದರು. ಬ್ಯಾಂಕ್ ಅಧಿಕಾರಿಗಳು ಸುಚಿಸ್ಮಿತಾ ಮೇಲೆ ಕಂಪ್ಲೆಂಟ್ ಕೊಟ್ಟಿದ್ದರು. ಇದೆಲ್ಲಾ ಆದಮೇಲೆ ನನಗೆ ಪೋಲೀಸರು ಮಾಹಿತಿ ನೀಡಿದ್ದರು. ಹೀಗಾಗಿ ತನಿಖೆಗಾಗ ನಾನು ಎಸ್‌ಐಟಿ ರಚನೆ ಮಾಡಿದ್ದೆ ಎಂದು ತಿಳಿಸಿದರು.

ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಶಿವಕುಮಾರ್ ಹೆಸರೇ ಇಲ್ಲ. ಸಾಯಿತೇಜ ಎಂಬಾತನನ್ನು ಕರೆಸಿ ಶಿವಕುಮಾರ್ ಎಂದು ಹೆಸರಿಟ್ಟಿದ್ದರು. ಇವನು ಯಾರು ಎಂದು ಪರಿಶೀಲನೆ ಮಾಡಲ್ಲ. ಅಧಿಕಾರಿ ದೀಪಾ ನೋಡಿಲ್ಲ, ಕೃಷ್ಣಮೂರ್ತಿಯೂ ನೋಡಿಲ್ಲ. ಬ್ಯಾಂಕಿನವರೇ ಅವರ ಬ್ಯಾಂಕಿನ ಅಧಿಕಾರಿಗಳ ಮೇಲೆ ದೂರು ಕೊಟ್ಟಿದ್ದಾರೆ. ಇವರ ಮೇಲೆ ತನಿಖೆ ನಡೆಸಲು ಅನುಮತಿ ನೀಡಿದ್ದರು ಎಂದು ತಿಳಿಸಿದರು.

CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

ಈ ಹಗರಣದಲ್ಲಿ ಎಸ್‌ಐಟಿ, ಸಿಬಿಐ ತನಿಖೆ ಮಾಡುತ್ತಿವೆ. ಇಡಿ ಸುಮೊಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿವೆ. ನಾಗೇಂದ್ರ ಬಂಧನವಾಗಿದೆ, ದದ್ದಲ್ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಎಸ್‌ಐಟಿ 12 ಮಂದಿಯನ್ನು ವಶಕ್ಕೆ ಪಡೆದು, ಈ ಪೈಕಿ 9 ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದಾರೆ, ಮೂವರು ಕಸ್ಟಡಿಯಲ್ಲಿ ಇದ್ದಾರೆ. ತನಿಖೆ ವೇಳೆ 85 ಕೋಟಿ ರೂ.ಗಳಲ್ಲಿ 34 ಕೋಟಿ ಕೋಟಿ ವಾಪಾಸ್ ಬಂದಿದೆ ಎಂದರು.

Continue Reading
Advertisement
Kiran Kumar
ಕರ್ನಾಟಕ8 mins ago

ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

Assembly monsoon session UT Khader karnataka assembly live
ಪ್ರಮುಖ ಸುದ್ದಿ13 mins ago

Assembly Monsoon Session: ಮುಂಗಾರು ಅಧಿವೇಶನಕ್ಕೆ ಮುನ್ನವೇ 2 ಕೋಟಿ ಖರ್ಚು ಮಾಡಿ ವಿಧಾನಸೌಧ ಸಿಂಗಾರ!

Virat Kohli
ಕ್ರೀಡೆ18 mins ago

Virat Kohli: ಲಂಕಾ ಸರಣಿಯಲ್ಲಿ ರನ್​ ದಾಖಲೆ ಬರೆಯಲು ಸಜ್ಜಾದ ವಿರಾಟ್​ ಕೊಹ್ಲಿ

Actor Darshan 4th accused mother dies
ಸ್ಯಾಂಡಲ್ ವುಡ್29 mins ago

Actor Darshan: ದರ್ಶನ್‌ ಗ್ಯಾಂಗ್‌ನ ನಾಲ್ಕನೇ ಆರೋಪಿ ತಾಯಿ ನಿಧನ

Microsoft Global Outage
ದೇಶ30 mins ago

Microsoft Global Outage: ಮೈಕ್ರೊಸಾಫ್ಟ್ ಟ್ರಬಲ್; ಯಾರ ಮೇಲೆ ಏನು ಪರಿಣಾಮ? ಮುಂದೇನು?

Mohammed Shami
ಕ್ರೀಡೆ47 mins ago

Mohammed Shami: ಕೊಹ್ಲಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಶಮಿ; ವಿಡಿಯೊ ವೈರಲ್​

Kannada New Movie Moorane Krishnappa in OTT
ಸಿನಿಮಾ47 mins ago

Kannada New Movie: ಸದ್ದಿಲ್ಲದೇ ಒಟಿಟಿಗೆ ಲಗ್ಗೆ ಇಟ್ಟ ರಂಗಾಯಣ ರಘು ಅಭಿನಯದ ‘ಮೂರನೇ ಕೃಷ್ಣಪ್ಪ’ ಸಿನಿಮಾ!

odscene act driver
ಕ್ರೈಂ58 mins ago

Obscene Act: ಡ್ರೈವಿಂಗ್‌ ಹೇಳಿಕೊಡುವ ನೆಪದಲ್ಲಿ ಖಾಸಗಿ ಅಂಗ ತೋರಿಸಿದ ಟ್ರೇನರ್‌, ಯುವತಿಯ ದೂರು

Vicky Kaushal box office collection Movie Collects Only 8 Crore
ಬಾಲಿವುಡ್1 hour ago

Vicky Kaushal: ವಿಕ್ಕಿ ಕೌಶಲ್ ಅಭಿನಯದ ‘ಬ್ಯಾಡ್ ನ್ಯೂಸ್’ ಚಿತ್ರಕ್ಕೆ ಕಳಪೆ ಕಲೆಕ್ಷನ್ ; ಮೊದಲ ದಿನದ ಗಳಿಕೆ ಎಷ್ಟು?

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ21 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ22 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ6 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌