ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದರೆ ರಾಜ್ಯ ಸರ್ಕಾರ ಅಧಿಕಾರ ಕಸಿದುಕೊಂಡಿದೆ ಎಂದು ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಮೆಮೋ ಸಲ್ಲಿಸಿದೆ. ಚುನಾವಣಾ ಆಯೋಗದ ಅಧಿಕಾರವನ್ನು ರಾಜ್ಯ ಸರ್ಕಾರ ಕಸಿದುಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
“ಸಂವಿಧಾನದ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಚುನಾವಣಾ ಆಯೋಗವೇ ಹೇಳುತ್ತಿದೆ. ಅಂದಮೇಲೆ ದೇಶದಲ್ಲಿ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೆ ಎಂದು ಹೇಳಬಹುದೇ?” ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶವಿದ್ದರೂ ಚುನಾವಣಾ ಆಯೋಗವು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಾಧ್ಯವಾಗದಂತೆ ರಾಜ್ಯ ಸರ್ಕಾರವು ಅಧಿಕಾರ ಕಸಿದುಕೊಂಡಿದೆ. ಈ ಸಮಸ್ಯೆಗಳನ್ನು ನ್ಯಾಯಾಲಯಗಳು ಬಗೆಹರಿಸಬಹುದೆಂಬ ವಿಶ್ವಾಸವಿದೆ ಎಂದು ಶಿವಕುಮಾರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಇಂತಹದ್ದು ನಮ್ಮ ಪಕ್ಷದಲ್ಲಾಗಿದ್ದರೆ ಒದ್ದು ಹೊರಗೆ ಹಾಕುತ್ತಿದ್ದೆ ಎಂದ ಡಿ.ಕೆ. ಶಿವಕುಮಾರ್