Site icon Vistara News

DK Shivakumar : ಎಸ್ಟಿಎಸ್‌, ಹೆಬ್ಬಾರ್‌ ಮಾತ್ರ ಅಲ್ಲ, ಇನ್ನೂ ಹಲವರು ಕಾಂಗ್ರೆಸ್‌ಗೆ ಬರ್ತಾರೆ ಎಂದ ಡಿಕೆಶಿ

DK Shivakumar BJP Congress

ಹುಬ್ಬಳ್ಳಿ: ಎಸ್‌.ಟಿ. ಸೋಮಶೇಖರ್‌ (ST Somashekhar), ಶಿವರಾಮ್‌ ಹೆಬ್ಬಾರ್‌ (Shivarama Hebbar) ಅವರಷ್ಟೇ ಅಲ್ಲ, ಇನ್ನೂ ಹಲವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ಬಿಜೆಪಿಯ ಇಬ್ಬರು ಶಾಸಕರ ಪಕ್ಷ ಸೇರ್ಪಡೆಯ (BJP leaders to Join Congress) ಬಗ್ಗೆ ಪ್ರಶ್ನೆ ಮಾಡಿದಾಗ ಈ ಉತ್ತರ ನೀಡಿದರು

ಲೋಕಸಭಾ ಚುನಾವಣೆಗೆ (Lokasabha Elections) ಕಾಂಗ್ರೆಸ್ ಅಭ್ಯರ್ಥಿಗಳ‌ ಆಯ್ಕೆ ಬಗ್ಗೆ ಕೇಳಿದಾಗ, “ನಾಳೆ ಪಕ್ಷದ ಚುನಾವಣಾ ಸಮಿತಿ ಸಭೆ ದೆಹಲಿಯಲ್ಲಿ ನಡೆಯಲಿದೆ. ಸಭೆಯ ನಂತರ ಕಾಂಗ್ರೆಸ್ ಟಿಕೆಟ್ ವಿಚಾರದ‌ ಬಗ್ಗೆ ಎಐಸಿಸಿ‌ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಪಾಕ್ ಪರ ಘೋಷಣೆ ತನಿಖೆ, ಬಂಧನ ಮಾಡದ ಬಿಜೆಪಿಗೆ ಬದ್ಧತೆ ಇದೆಯಾ?

ನಮ್ಮ ಸರ್ಕಾರದ ಅವಧಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಬಿಜೆಪಿ ತನ್ನ ಅವಧಿಯಲ್ಲಿ ಪಾಕ್ ಪರ ಘೋಷಣೆ ಕೂಗಿದಾಗ ತನಿಖೆಯೇ ನಡೆಸಲಿಲ್ಲ. ಅವರಿಗೆ ದೇಶದ ಬಗ್ಗೆ ಬದ್ಧತೆ ಇದೆಯಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಸಿಎಂ ಡಿಸಿಎಂ‌ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ: ಅವರಿಗೆ ರಾಜೀನಾಮೆ ಯಾವಾಗ ಬೇಕಂತೆ? ಯಾರಿಗೆ ರಾಜೀನಾಮೆ ನೀಡಬೇಕೆಂದು ಕೇಳಿ. ರಾಜೀನಾಮೆ ಕೊಡೋಣ. ಆದರೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಗ ಬಿಜೆಪಿ ಸರ್ಕಾರ ಅವರನ್ನು ಯಾಕೆ ಬಂಧನ‌ ಮಾಡಲಿಲ್ಲ? ಬಿಜೆಪಿಯವರು ಕೇಸರಿ ಶಾಲು ಹಾಕಿ‌ ಘೋಷಣೆ ಕೂಗಿದ್ದರು. ಈ ಪ್ರಕರಣಕ್ಕೆ ಯಾವುದೇ ಎಫ್ಎಸ್ಎಲ್ ವರದಿ ಅವಶ್ಯಕತೆ ಇಲ್ಲ. ನಾವು ರಾಜಕೀಯ ಮಾಡಬಾರದು ಎಂದು ಸುಮ್ಮನೆ ಇದ್ದೆವು. ಅವರ ಈ ಡೋಂಗಿ ಆಟಗಳನ್ನು ನೋಡಿ ನಮ್ಮ ಸ್ಥಳೀಯ ಶಾಸಕರು ದೂರು ನೀಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದರು.

ಕೊಲೆ ಕೊಲೆಯೇ, ಕಳ್ಳತನ ಕಳ್ಳತನವೇ, ನುಡಿಮುತ್ತು ನುಡಿಮುತ್ತೇ ಅಲ್ಲವೇ? ದೇಶದ್ರೋಹ ದೇಶದ್ರೋಹವೇ ಅಲ್ಲವೇ? ನಮ್ಮ ಸರ್ಕಾರದಲ್ಲಿ ಘೋಷಣೆ ಕೂಗಿದವರ ವಿರುದ್ಧ ವಿಚಾರಣೆ ನಡೆಸುತ್ತಿದ್ದೇವೆ. ದೇಶದ ಬಗ್ಗೆ ಬದ್ಧತೆ ನಮಗಿದೆಯೋ? ಬಿಜೆಪಿಯವರಿಗೆ ಇದೆಯೋ?” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ : Banavasi Kadambotsava: ಫ್ಲೆಕ್ಸ್‌ ಹಾಕಿ ಸಿಎಂ, ಡಿಸಿಎಂಗೆ ಭರ್ಜರಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್‌!

ಬಜೆಟ್ ನಲ್ಲಿ ಅಭಿವೃದ್ಧಿಗೆ 1.26 ಲಕ್ಷ ಕೋಟಿ ಅನುದಾನ

ಅಥಣಿಯಲ್ಲಿ 1 ಸಾವಿರ ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ‌ಗೆ ನಾವು ತೆರಳುತ್ತಿದ್ದು, ಸಿಎಂ ಸಿದ್ಧರಾಮಯ್ಯ ಕೂಡ ಆಗಮಿಸುತ್ತಿದ್ದಾರೆ. ಬಜೆಟ್ ನಲ್ಲಿ 1.26 ಲಕ್ಷ ಕೋಟಿ ಅನುದಾನವನ್ನು ಅಭಿವೃದ್ಧಿಗೆ ಮೀಸಲಿಟ್ಟಿದ್ದು, ಎಲ್ಲ‌ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದೇವೆ” ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಮಹಾದಾಯಿ ವಿಳಂಬ ಬಗ್ಗೆ ಜೋಶಿ ಚಕಾರ ಎತ್ತಲಿಲ್ಲ ಯಾಕೆ?

ಮಹದಾಯಿ ಕಾಮಗಾರಿ ವಿಳಂಬದ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ‌ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ‌ ಉತ್ತರ ನೀಡಬೇಕು. ಇದೇ ವಿಚಾರದಲ್ಲಿ ಹುಬ್ಬಳ್ಳಿಯಲ್ಲಿ‌ ವಿಜಯೋತ್ಸವ ಮಾಡಿದ್ದರು. ಆದರೂ ಯಾಕೆ ಇನ್ನೂ ಮಹದಾಯಿ ತೊಡಕುಗಳ ನಿವಾರಣೆ ಮಾಡುತ್ತಿಲ್ಲ? ನಾನು ಸಚಿವನಾದ ನಂತರ ಇದಕ್ಕೆ ಟೆಂಡರ್ ಕರೆಯಲಾಗಿದೆ. ಅನುಮತಿ ಸಿಗುತ್ತಿದ್ದಂತೆ ಕೆಲಸ ಆರಂಭವಾಗಲಿದೆ. ಅನುಮತಿ ಕೊಡಿಸಿದರೆ ಅವರಿಗೂ ಒಂದು ಗೌರವ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಜೋಶಿ ಅವರಿಗೆ ಅಧಿಕಾರ ಇದೆ. ಅವರು ಅರ್ಧ ಗಂಟೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿದರೆ ಕೆಲಸ ಆರಂಭಿಸುತ್ತೇವೆ. ಮಾಧ್ಯಮಗಳು ನನಗೆ ಉಲ್ಟಾ ಪಲ್ಟಾ ನನಗೆ ಪ್ರಶ್ನೆ ಕೇಳುತ್ತೀರಿ ಜೋಶಿ ಅವರನ್ನು ಯಾಕೆ ಕೇಳುವುದಿಲ್ಲ? ಪ್ರಹ್ಲಾದ್ ಜೋಶಿ ಯಾಕೆ ಈ ಬಗ್ಗೆ ಚಕಾರ ಎತ್ತುತ್ತಿಲ್ಲ? ಈ ಬಗ್ಗೆ ಅವರು ಉತ್ತರಿಸಲಿ” ಎಂದು ತಿಳಿಸಿದರು.

ಸದ್ಯದಲ್ಲೇ ಶೆಟ್ಟರ್ ಪಶ್ಚಾತಾಪದ ಹೇಳಿಕೆ ಎಂದ ಡಿ.ಕೆ.ಶಿವಕುಮಾರ್‌

ಶೀಘ್ರವೇ ಫ್ಲಡ್ ಗೇಟ್ ಓಪನ್ ಆಗುತ್ತೆ ಎಂಬ ಮಾಜಿ‌ ಸಿಎಂ‌ ಜಗದೀಶ ಶೆಟ್ಟರ್ ಹೇಳಿಕೆ ಬಗ್ಗೆ ಕೇಳಿದಾಗ, “ಈ ತಿಂಗಳು ಕಳೆದ ಮೇಲೆ‌ ಶೆಟ್ಟರ್ ಅವರಿಂದ ಪಶ್ಚಾತಾಪದ ಹೇಳಿಕೆ ಹೊರಬರಲಿದೆ” ಎಂದು ತಿರುಗೇಟು ನೀಡಿದರು.

Exit mobile version