ಬಿಜೆಪಿ ಬೆಂಬಲಿತ ಸಂಘಟನೆಗಳು ಗೊಂದಲ ಸೃಷ್ಟಿಸುತ್ತಿವೆ: ಡಿಕೆಶಿ ಆರೋಪ - Vistara News

ರಾಜಕೀಯ

ಬಿಜೆಪಿ ಬೆಂಬಲಿತ ಸಂಘಟನೆಗಳು ಗೊಂದಲ ಸೃಷ್ಟಿಸುತ್ತಿವೆ: ಡಿಕೆಶಿ ಆರೋಪ

ಮುಖ್ಯಮಂತ್ರಿಗಳು ದಾವೋಸ್‌ನಲ್ಲಿ ಅಲ್ಪಸಂಖ್ಯಾತರ ಕಂಪನಿಗಳ ಜತೆ ಬಂಡವಾಳ ಹೂಡಿಕೆ ಒಪ್ಪಂದ ಮಾಡುತ್ತಿದ್ದಾರೆ. ಆದರೆ, ಇಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಡಿ.ಕೆ. ಶಿವಕುಮಾರ್‌ ಟೀಕಿಸಿದ್ದಾರೆ.

VISTARANEWS.COM


on

Rakshit Shetty Richard Anthony Produce By Hombale
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೋವಿಡ್ ನಿಯಮಾವಳಿ ಉಲ್ಲಂಘನೆ ವಿಚಾರವಾಗಿ ನಮ್ಮೆಲ್ಲ ನಾಯಕರಿಗೆ ಸಮನ್ಸ್ ಬಂದಿದ್ದು, ಬಿಜೆಪಿ ಸರ್ಕಾರ ಸಂವಿಧಾನ ಬಾಹಿರವಾಗಿ ಕೇವಲ ಕಾಂಗ್ರೆಸ್ ಪಕ್ಷದವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿದೆ. ಬಿಜೆಪಿ ನಾಯಕರು ಹಾಗೂ ಸಚಿವರು ಹಲವು ಬಾರಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರೂ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಆ ಮೂಲಕ ಬಿಜೆಪಿ ಸರ್ಕಾರ ದ್ವೇಷ ಸಾಧಿಸುತ್ತಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್‌ ನಿಯಮ ಉಲ್ಲಂಘನೆ ವಿಚಾರವಾಗಿ ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಕರಣ ದಾಖಲಾಗಿರುವುದರ ಕುರಿತು ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡುವ ಪ್ರಯತ್ನಗಳು ನಡೆಯುತ್ತಿದೆ. ಬಿಜೆಪಿ ಸರ್ಕಾರ ಕರ್ನಾಟಕದ ಘನತೆಯನ್ನು ಯಾಕೆ ಹಾಳು ಮಾಡುತ್ತಿದೆಯೋ ಗೊತ್ತಿಲ್ಲ. ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ರಾಜ್ಯ. ಇಲ್ಲಿ ಎಲ್ಲರೂ ಯಾವುದೇ ಗೊಂದಲಗಳಿಲ್ಲದೇ ಬದುಕುತ್ತಿದ್ದು, ಬಿಜೆಪಿ ಸರ್ಕಾರ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಭಾಗ ಸೇರಿದಂತೆ ಇತರ ಕಡೆಗಳಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದರು.

ಇದನ್ನೂ ಓದಿ | ಲಕ್ಷ್ಮಣ ಸವದಿಗೆ ಮತ್ತೆ ಅದೃಷ್ಟ: ವಿಧಾನ ಪರಿಷತ್‌ ಬಿಜೆಪಿ ಪಟ್ಟಿ ಘೋಷಣೆ

ಮುಖ್ಯಮಂತ್ರಿಗಳು ದಾವೋಸ್ ಪ್ರವಾಸದಲ್ಲಿದ್ದು, ಅಲ್ಲಿ ಹಲವು ಅಲ್ಪಸಂಖ್ಯಾತರ ಕಂಪನಿಗಳ ಜತೆ ಬಂಡವಾಳ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಾರೆ. ಆದರೆ ಇಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ಗೊಂದಲ ಸೃಷ್ಟಿಸುತ್ತಿವೆ. ಇವು ರಾಜ್ಯಕ್ಕೆ ದೊಡ್ಡ ಹೊಡೆತ ನೀಡಲಿವೆ. ಈಗಾಗಲೇ ಕಿರಣ್ ಮಜುಮ್ದಾರ್ ಶಾ, ಮೋಹನ್ ದಾಸ್ ಪೈ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಕೂಡ ರಾಜ್ಯದ ಘನತೆ ರಕ್ಷಿಸುವ ವಿಚಾರವಾಗಿ ಪತ್ರ ಬರೆದಿದ್ದಾರೆ.

ಬೆಂಗಳೂರಿನ ಘನತೆ ಬಗ್ಗೆ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಗುಣಗಾನ ಮಾಡಿದ್ದರು. ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಪ್ರತಿಷ್ಠಿತ ಸಂಸ್ಥೆಗಳಿದ್ದು, ಅಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚಿನ ಅವಕಾಶಗಳಿವೆ. ಆದರೆ ಬಿಜೆಪಿಯಿಂದ ನಡೆಯುತ್ತಿರುವ ಬೆಳವಣಿಗೆಗಳು ಇದಕ್ಕೆ ತೊಡಕಾಗಲಿವೆ. ಹೀಗಾಗಿ ಕರಾವಳಿ ಭಾಗದ ಜನ ಮುಂಬೈ, ಸೌದಿ ರಾಷ್ಟ್ರಗಳಿಗೆ ಹೋಗುತ್ತಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಬೇಕು, ಕೋಮು ಸೌಹಾರ್ದತೆ ಕಾಪಾಡಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಕುರಿತ ಪ್ರತಿಕ್ರಿಯಿಸಿದ ಡಿ. ಕೆ. ಶಿವಕುಮಾರ್, ವಿಧಾನ ಪರಿಷತ್ ಸ್ಥಾನಕ್ಕೆ ನಮ್ಮ ಪಕ್ಷದಲ್ಲಿ ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಿಗೆ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸಿ ಕೊಡಲಾಗುವುದು. ಎಸ್. ಆರ್. ಪಾಟೀಲ್ ಅವರು ಪಕ್ಷದ ಹಿರಿಯ ನಾಯಕರಿದ್ದು, ಹೈಕಮಾಂಡ್ ಅವರ ವಿಚಾರವನ್ನು ಗಮನಿಸಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ಬಾರಿ ಕೇವಲ 2 ಸ್ಥಾನಗಳಿಗೆ ಮಾತ್ರ ಅವಕಾಶವಿದ್ದು, ಹಿಂದೆ ಹೆಚ್ಚು ಪ್ರಾತಿನಿಧ್ಯ ನೀಡದವರಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರಿಗೂ ಆದ್ಯತೆ ನೀಡಲು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಸರಿ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: BJP ಆದ್ಯತೆ ಕೋಮುವಾದವೇ ವಿನಃ ಅಭಿವೃದ್ಧಿಯಲ್ಲ ಎಂದ ಡಿ.ಕೆ. ಶಿವಕುಮಾರ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Vande Bharat Train: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ​; ಒಂದೇ ದಿನ 2 ಟ್ರೈನ್‌ ಮೇಲೆ 3 ಕಡೆ ದಾಳಿ!

Vande Bharat Train: ಈ ವರ್ಷವೊಂದರಲ್ಲೇ ವಂದೇ ಭಾರತ್​ ರೈಲಿನ ಮೇಲೆ 10 ಬಾರಿ ಕಲ್ಲು ತೂರಾಟ ನಡೆಸಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಕಳೆದ ವರ್ಷ 40 ಕಲ್ಲು ತೂರಾಟ ಪ್ರಕರಣಗಳು ನಡೆದಿದ್ದವು. ಅದೃಷ್ಟವಶಾತ್‌ ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ. ಆದರೆ, ರೈಲುಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿವೆ.

VISTARANEWS.COM


on

Stones pelted at 3 Vande Bharat train in a single day
Koo

ಬೆಂಗಳೂರು: ಬೆಂಗಳೂರಿನ ನೈಋತ್ಯ ರೈಲ್ವೆ ವಲಯದ (South Western Railway Zone) ಮೂಲಕ ಹಾದುಹೋಗುವ 2 ವಂದೇ ಭಾರತ್ ರೈಲುಗಳ (Vande Bharat Train) ಮೇಲೆ ಇತ್ತೀಚೆಗೆ ಮೂರು ಕಡೆ ಪ್ರತ್ಯೇಕವಾಗಿ ಕಲ್ಲು ತೂರಾಟದ ಪ್ರಕರಣಗಳು ನಡೆದಿವೆ. ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾನುವಾರ (ಮಾ.03) ರಂದು ದುಷ್ಕರ್ಮಿಗಳು ಕಲ್ಲು ತೂರಿದ್ದು, ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣಗಳನ್ನು ರೈಲ್ವೆ ಇಲಾಖೆ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ವರ್ಷವೊಂದರಲ್ಲೇ ವಂದೇ ಭಾರತ್​ ರೈಲಿನ ಮೇಲೆ 10 ಬಾರಿ ಕಲ್ಲು ತೂರಾಟ ನಡೆಸಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಕಳೆದ ವರ್ಷ 40 ಕಲ್ಲು ತೂರಾಟ ಪ್ರಕರಣಗಳು ನಡೆದಿದ್ದವು. ಅದೃಷ್ಟವಶಾತ್‌ ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ. ಆದರೆ, ರೈಲುಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿವೆ.

ಕೆಎಸ್​ಆರ್​ ಬೆಂಗಳೂರು-ಧಾರವಾಡ (20661/20662) ಮಧ್ಯೆ ಸಂಚರಿಸುವ ವಂದೇ ಭಾರತ್​ ರೈಲಿನ ಮೇಲೆ ಎರಡು ಬಾರಿ ಮತ್ತು ಮೈಸೂರು-ಚೆನ್ನೈ ಸೆಂಟ್ರಲ್ ​​ವಂದೇ ಭಾರತ್​ (20608) ರೈಲಿನ ಮೇಲೆ ಕಲ್ಲು ತೂರಲಾಗಿದೆ. ಭಾನುವಾರ (ಮಾ.03) ರಂದು ಬೆಂಗಳೂರಿನಿಂದ ಧಾರವಾಡದ ಕಡೆ ಹೊರಟಿದ್ದ ವಂದೇ ಭಾರತ್​ ರೈಲಿನ ಮೇಲೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ಮುಂಜಾನೆ 6.15ಕ್ಕೆ ಕಲ್ಲು ತೂರಲಾಗಿದೆ. ಇದೇ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುವಾಗ ಮಾರ್ಗ ಮಧ್ಯೆ ಹಾವೇರಿ ಮತ್ತು ಹರಿಹರ ರೈಲು ನಿಲ್ದಾಣಗಳ ಸಮೀಪ ಮಧ್ಯಾಹ್ನ 3.30ರ ಸುಮಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ.

Stones pelted at 3 Vande Bharat train in a single day

ಬೆಂಗಳೂರು ಮುಖಾಂತರ ಹಾದು ಚೈನ್ನೈ ತಲುಪುವ ಮೈಸೂರು-ಚೆನ್ನೈ ಸೆಂಟ್ರಲ್​ ವಂದೇ ಭಾರತ್​​ ರೈಲು ಮಾರ್ಗ ಮಧ್ಯೆ ಆಂಧ್ರಪ್ರದೇಶದ ಮೂಲಕ ಹಾದು ಹೋಗುತ್ತದೆ. ಈ ರೈಲು ಕುಪ್ಪಂ ನಿಲ್ದಾಣದ ಬಳಿ ಬಂದಾಗ ಸಂಜೆ 4.30ರ ಸುಮಾರಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಎರಡು ಕಲ್ಲು ತೂರಾಟಗಳು ಬೆಂಗಳೂರು ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ಸಂಭವಿಸಿದರೆ (ಚಿಕ್ಕಬಾಣಾವವಾರ ಮತ್ತು ಹಾವೇರಿ-ಹರಿಹರ) ಮೂರನೇ ಕಲ್ಲು ತೂರಾಟ ಪ್ರಕರಣು ಮೈಸೂರು ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿಗಳ ಪತ್ತೆ ಸುಲಭವೇ?

ಪದೆ ಪದೇ ಕಲ್ಲು ತೂರಾಟ ಪ್ರಕರಣಗಳು ಸಂಭವಿಸುತ್ತಿರುವುದರಿಂದ ರೈಲ್ವೆ ಇಲಾಖೆಗೆ ನಷ್ಟ ಉಂಟಾಗುತ್ತದೆ. ಅಲ್ಲದೆ, ಆರೋಪಿಗಳ ಪತ್ತೆ, ಬಂಧನ ಕಾರ್ಯವೂ ಅಷ್ಟು ಸುಲಭವಲ್ಲ. ಕೆಲವು ಸಂದರ್ಭದಲ್ಲಿ ಮಕ್ಕಳು, ಮದ್ಯವ್ಯಸನಿಗಳು ಇಲ್ಲವೇ ಮಾದಕ ವ್ಯಸನಿಗಳು ಎಸಗಿರುವುದು ಗೊತ್ತಾಗಿದೆ. ಈಗ ರೈಲಿನ ಒಳಗೆ ಇರುವ ಹಾಗೂ ಹೊರಗಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುವುದು. ಆದರೆ, ರೈಲು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುವುದರಿಂದ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಸ್ವಲ್ಪ ಕಷ್ಟವಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: JP Nadda: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಜೆ.ಪಿ. ನಡ್ಡಾ ರಾಜೀನಾಮೆ; ಚುನಾವಣೆ ಸ್ಪರ್ಧೆ ಫಿಕ್ಸ್?

5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು!

ಸೆಕ್ಷನ್ 147 (ರೈಲ್ವೆ ಹಳಿಯಲ್ಲಿ ಅತಿಕ್ರಮಣ) ಮತ್ತು ಸೆಕ್ಷನ್ 153 (ಉದ್ದೇಶ ಪೂರ್ವಕ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದು) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವುದು ಕ್ರಿಮಿನಲ್ ಅಪರಾಧವಾಗಿದೆ. ರೈಲ್ವೇ ಕಾಯ್ದೆ ಸೆಕ್ಷನ್ 153ರ ಅಡಿಯಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

Continue Reading

ಬೆಳಗಾವಿ

BY Vijayendra :‌ ನಾಸಿರ್‌ ಹುಸೇನ್‌ ಕೂಡಾ ಅಪರಾಧಿ, FIRನಲ್ಲಿ ಸೇರಿಸಿ; ವಿಜಯೇಂದ್ರ ಆಗ್ರಹ

BY Vijayendra : ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಪ್ರಕರಣದಲ್ಲಿ ರಾಜ್ಯಸಭಾ ಚುನಾವಣೆ ಗೆದ್ದ ನಾಸಿರ್‌ ಹುಸೇನ್‌ ಕೂಡಾ ಆರೋಪಿ. ಅವರನ್ನು ಪ್ರಮಾಣವಚನ ಸ್ವೀಕರಿಸಲು ಬಿಡಬಾರದು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

VISTARANEWS.COM


on

Sedition Case BY Vijayendra
Koo

ಬೆಳಗಾವಿ: ವಿಧಾನ ಸೌಧದಲ್ಲಿ (Vidhana Soudha) ಪಾಕಿಸ್ತಾನ್ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯರಾಗಿ (Rajyasabha Member) ಕಾಂಗ್ರೆಸ್‍ನಿಂದ ಆಯ್ಕೆಯಾದ ನಾಸಿರ್ ಹುಸೇನ್ (Nasir Husein) ಅವರನ್ನು ಕೂಡ ಅಪರಾಧಿ ಎಂದು ಎಫ್‍ಐಆರ್‌ನಲ್ಲಿ ಸೇರಿಸಬೇಕು. ಜಿಂದಾಬಾದ್‌ ಘೋಷಣೆ ಮಾಡಿದ ಮೂವರು ಆರೋಪಿಗಳ ವಿವರ ಲಭಿಸಿದೆ. ನಾಲ್ಕನೇ ಆರೋಪಿಯಾಗಿ ನಾಸೀರ್ ಹುಸೇನ್ ಹೆಸರು ಸೇರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಖಾಸಗಿ ಎಫ್‍ಎಸ್‍ಎಲ್ ವರದಿ ಬಿಡುಗಡೆ ಆಗದೆ ಇದ್ದಿದ್ದರೆ ಸರಕಾರ ಈ ದೇಶದ್ರೋಹಿಗಳನ್ನು ಬಂಧಿಸಲು ಮೀನ ಮೇಷ ಎಣಿಸುವ ಸಾಧ್ಯತೆ ಇತ್ತು ಎಂದು ಅನುಮಾನ ವ್ಯಕ್ತಪಡಿಸಿದರು.

Sedition Case : ಇನ್ನೂ ಎಫ್‌ಎಸ್‌ಎಲ್‌ ವರದಿ ಯಾಕೆ ಬಿಡುಗಡೆ ಮಾಡಿಲ್ಲ?

ವಿಧಾನಸೌಧದ ಒಳಗೆ ಕೆಲವು ದೇಶದ್ರೋಹಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ ನಂತರ ಬಿಜೆಪಿ ನಿರಂತರ ಹೋರಾಟದ ಪ್ರತಿಫಲವಾಗಿ ಸೋಮವಾರ ಮೂರು ದೇಶದ್ರೋಹಿಗಳನ್ನು ಬಂಧಿಸಿದ್ದಾರೆ. ಆದರೆ, ರಾಜ್ಯ ಸರಕಾರ ಇನ್ನೂ ಎಫ್.ಎಸ್.ಎಲ್ ವರದಿಯನ್ನು ಬಹಿರಂಗಪಡಿಸಿಲ್ಲ ಎಂದು ಆಕ್ಷೇಪಿಸಿದರು.

ಸರಕಾರ ಯಾವ ಕಾರಣಕ್ಕೆ ಎಫ್.ಎಸ್.ಎಲ್ ವರದಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಅವರು, ಇದಕ್ಕೆ ಉತ್ತರ ಕೊಡಿ ಎಂದು ಆಗ್ರಹಿಸಿದರು. ಈ ದೇಶದ್ರೋಹಿ ಘಟನೆಯ ಸೂತ್ರಧಾರಿಗಳು ಯಾರು? ಪಾತ್ರಧಾರಿಗಳು ಯಾರು? ಎಂದು ಕೇಳಿದರು. ಪ್ರಮುಖರಾದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಹೆಸರನ್ನೇ ಪೊಲೀಸರು ಕೈಬಿಟ್ಟಿದ್ದಾರೆ ಎಂದು ಆರೋಪಿಸಿದರು.

ತನಿಖೆ ಪೂರ್ಣ ಆಗುವವರೆಗೆ ನಾಸಿರ್‌ ಹುಸೇನ್‌ ಪ್ರಮಾಣವಚನ ಸ್ವೀಕರಿಸಬಾರದು

ಜನಪ್ರತಿನಿಧಿ, ರಾಜ್ಯಸಭಾ ಸದಸ್ಯ ಆಗುವವರು ಸಂವಿಧಾನ ಮತ್ತು ದೇಶದ ಸಾರ್ವಭೌಮತ್ವ- ಅಖಂಡತೆಯನ್ನು ಎತ್ತಿಹಿಡಿಯುವುದಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಈ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಅವರು ಪ್ರಮಾಣವಚನ ಸ್ವೀಕರಿಸಬಾರದು ಎಂದು ಅವರು ಒತ್ತಾಯಿಸಿದರು. ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರಾದ ಉಪ ರಾಷ್ಟ್ರಪತಿಗಳಿಗೆ ಬಿಜೆಪಿ ವತಿಯಿಂದ ಇವತ್ತೇ ಪತ್ರ ಬರೆಯಲಿದ್ದೇವೆ. ತನಿಖೆ ಪೂರ್ಣಗೊಳ್ಳುವವರೆಗೆ ಅವರಿಗೆ ಪ್ರಮಾಣವಚನ ಬೋಧಿಸದೆ ಇರಲು ಒತ್ತಾಯ ಮಾಡಲಿದ್ದೇವೆ ಎಂದರು.

ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕತೆ ಇದ್ದರೆ, ದೇಶಪ್ರೇಮ ಇದ್ದಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಂದು ಒತ್ತಾಯಿಸಿದರು. ನಾಸೀರ್ ಹುಸೇನ್ ಅವರು ಪ್ರಕರಣದಲ್ಲಿ ನಿರ್ದೋಷಿ ಎಂದು ಹೊರಕ್ಕೆ ಬರುವವರೆಗೆ ಅವರಿಗೆ ರಾಜ್ಯಸಭಾ ಸದಸ್ಯತ್ವದ ಪ್ರಮಾಣವಚನ ಸ್ವೀಕಾರಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹವನ್ನು ಮುಂದಿಟ್ಟರು.

ರಾಜ್ಯ ಸರಕಾರವು ಈ ವಿಷಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಯಾಕೆ ಒತ್ತಾಯ ಹಾಕುತ್ತಿದೆ? ಎಫ್‍ಎಸ್‍ಎಲ್ ವರದಿ ಬಹಿರಂಗಪಡಿಸಲು ಯಾಕೆ ಮೀನಮೇಷ ಮಾಡುತ್ತ ಇದ್ದೀರಿ? ಎಂದ ಅವರು, ಈ ವಿಚಾರವನ್ನು ಇನ್ನೂ ಗಂಭೀರವಾಗಿ ಪರಿಗಣಿಸಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: Sedition Case : ಪಾಕಿಸ್ತಾನ್‌ ಮುರ್ದಾಬಾದ್‌ ಬದಲು ಜಿಂದಾಬಾದ್‌ ಎಂದ ಬಿಜೆಪಿ ಕಾರ್ಯಕರ್ತ ಜೈಲಿಗೆ!

ದೇಶದ್ರೋಹದ ಪ್ರಶ್ನೆ ಬಂದಾಗ ಜಾತಿ, ಧರ್ಮ ನೋಡಬಾರದು

ದೇಶದ್ರೋಹದ ಪ್ರಶ್ನೆ ಬಂದಾಗ ಅವನು ಹಿಂದೂ, ಇವನು ಮುಸಲ್ಮಾನ ಎಂಬ ಪ್ರಶ್ನೆ ಉದ್ಭವವಾಗುವುದಿಲ್ಲ. ದೇಶದ್ರೋಹಿಗಳಿಗೆ ಯಾವುದೇ ಜಾತಿ, ಧರ್ಮ ಅಡ್ಡಿ ಬರಬಾರದು. ಈ ವಿಚಾರವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದಂತೆ ನಮಗಂತೂ ತೋರುತ್ತಿಲ್ಲ ಎಂದು ಆಕ್ಷೇಪ ಸೂಚಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

Continue Reading

ಮಂಡ್ಯ

Sedition Case : ಪಾಕಿಸ್ತಾನ್‌ ಮುರ್ದಾಬಾದ್‌ ಬದಲು ಜಿಂದಾಬಾದ್‌ ಎಂದ ಬಿಜೆಪಿ ಕಾರ್ಯಕರ್ತ ಜೈಲಿಗೆ!

Sedition Case : ಮಂಡ್ಯದಲ್ಲಿ ಎರಡು ವರ್ಷದ ಹಿಂದೆ ಅಚಾತುರ್ಯದಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತನನ್ನು ಈಗ ಬಂಧಿಸಿ ಜೈಲಿಗಟ್ಟಲಾಗಿದೆ.

VISTARANEWS.COM


on

Sedition Case Mandya
Koo

ಮಂಡ್ಯ:‌ ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ (Vidhana Soudha) ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ (Sedition Case) ಮೂವರು ದುಷ್ಕರ್ಮಿಗಳನ್ನು ಬಂಧಿಸಿದ ಬೆನ್ನಿಗೇ ಇತ್ತ ಮಂಡ್ಯದಲ್ಲಿ (Mandya News) ಎರಡು ವರ್ಷದ ಹಿಂದಿನ ಪ್ರಕರಣಕ್ಕೆ ಜೀವ ಬಂದಿದ್ದು, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಬಂಧಿಸಲಾಗಿದೆ (BJP Activist Arrested). ಅವರು ಮುರ್ದಾಬಾದ್‌ ಬದಲು ತಪ್ಪಿ ಜಿಂದಾಬಾದ್‌ ಎಂದು ಹೇಳಿದ್ದಾರೆ.

ಎರಡು ವರ್ಷದ ಹಿಂದೆ ಮಂಡ್ಯದ ಸಂಜಯ ವೃತ್ತದಲ್ಲಿ ನಡೆದಿದ್ದ ಪ್ರತಿಭಟನೆ ಸಂದರ್ಭ ಮಂಡ್ಯ ತಾಲೂಕಿನ ಡನಾಯಕನಪುರ ರವಿ ಎಂಬವರು ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿದ್ದರು. ಬೆಂಗಳೂರಿನ ಪ್ರಕರಣ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಮಂಡ್ಯದ ಘಟನೆಯೂ ಮೇಲೆದ್ದು ಬಂದಿತ್ತು. ರವಿ ಅವರು ಅಚಾತುರ್ಯದಿಂದ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಗಿ ಹೇಳಿದ್ದರೂ ಏನು ಮಾಡಿದರೂ ಅದು ತಪ್ಪೇ ಎಂದು ಇನ್ನೊಂದು ವಾದ ಕೇಳಿಬಂದಿತ್ತು.

2022ರ ಡಿಸೆಂಬರ್‌ 18ರಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೇಳಿಬಂದಿತ್ತು. ರವಿ ಎಂಬವರು ಪಾಕಿಸ್ತಾನ್‌ ಮುರ್ದಾಬಾದ್‌ ಎಂದು ಹೇಳುವ ಬದಲು ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದರು.

ಬೆಂಗಳೂರು ವಿಧಾನಸೌಧ ಪ್ರಕರಣ ತೀವ್ರತೆ ಪಡೆದುಕೊಳ್ಳುತ್ತಿದ್ದಂತೆಯೇ ಕಾಂಗ್ರೆಸ್‌ ಕಾರ್ಯಕರ್ತರು ಈ ಪ್ರಕರಣವನ್ನು ಎತ್ತಿ ತೋರಿಸಲು, ಟ್ರೋಲ್‌ ಮಾಡಲು ಆರಂಭಿಸಿದ್ದರು.

ಇದನ್ನೂ ಓದಿ : Sedition Case: ಪಾಕ್‌ ಪರ ಘೋಷಣೆ ಕೂಗಿದವರಿಗೆ 3 ದಿನ ಪೊಲೀಸ್‌ ಕಸ್ಟಡಿ: ಕೋರ್ಟ್‌ ಆದೇಶ

ಸೋಮವಾರ ರಾತ್ರಿ ಎಫ್‌ಐಆರ್‌ ದಾಖಲು

ಮಂಡ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸೋಮವಾರ ರಾತ್ರಿ ಕನ್ನಂಬಾಡಿ ಕುಮಾರ್ ಎಂಬವರು ದೂರು ದಾಖಲಿಸಿದರು. ಇದರ ಆಧಾರದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಎಫ್ ಐ ಆರ್ ದಾಖಲಿಸಿದರು. ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಉಪ್ಪರಕನ‌ಹಳ್ಳಿ ಆರಾಧ್ಯ, ಡಣಾಕನಪುರ ರವಿ ಮತ್ತು ಇತರರ ವಿರುದ್ಧ ಎಫ್ ಐ ಆರ್ ದಾಖಲು ಮಾಡಿಕೊಂಡಿದ್ದು ಬಳಿಕ ರಾತ್ರಿಯೇ ರವಿ ಅವರನ್ನು ಬಂಧಿಸಿದ್ದಾರೆ.

ಘೋಷಣೆ ಬಳಿಕ ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದ ಬಿಜೆಪಿ ಕಾರ್ಯಕರ್ತ

ನಿಜವೆಂದರೆ, ಅಂದು ಆ ಘಟನೆ ನಡೆದ ಕೂಡಲೇ ರವಿ ಅವರು ಏನಾಯಿತು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದರು ಮತ್ತು ಕ್ಷಮೆ ಕೂಡಾ ಯಾಚಿಸಿದ್ದರು. ಡಣಾಯಕನಪುರದ ರವಿ ಅವರು, ನಾನೊಬ್ಬ ರೈತನಾಗಿದ್ದು ಹಿಂದಿ ಭಾಷೆ ಅರ್ಥ ಆಗದೆ ಜಿಂದಾ ಬಾದ್ ಮುರದಾ ಬಾದ್ ಗೆ ವ್ಯತ್ಯಾಸ ಗೊತ್ತಾಗದೆ ಹಾಗೆ ಕೂಗಿದ್ದೀನಿ ಎಂದು ಹೇಳಿದ್ದರು. ಅಂದೇ ರವಿ ಅವರು ಜಿಂದಾಬಾದ್‌ ಘೋಷಣೆ ಕೂಗಿದ ಕೂಡಲೇ ಸಹವರ್ತಿಗಳು ಬಾಯಿ ಮುಚ್ಚಿಸಿದ್ದರು.

ಹಾಗಾಗಿ ಅಂದು ಆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿರಲಿಲ್ಲ. ಈಗ ಕಾಂಗ್ರೆಸ್‌ ಪಕ್ಷದ ನಾಯಕರು ಬಿಜೆಪಿ ವಿರುದ್ಧ ಈ ಪ್ರಕರಣದ ಪ್ರಯೋಗ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Water Crisis: ಮಾ. 7ರೊಳಗೆ ನೋಂದಣಿ ಮಾಡಿಸದಿದ್ರೆ ನೀರಿನ ಟ್ಯಾಂಕರ್‌ ಸೀಜ್, ಸರ್ಕಾರದಿಂದಲೇ ದರ ನಿಗದಿ: ಡಿಕೆಶಿ

Water Crisis: ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ.

VISTARANEWS.COM


on

Water tanker to be seized if not registered by March 7‌ says DK Shivakumar
Koo

ಬೆಂಗಳೂರು: ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7ರೊಳಗೆ ವೇಳೆಗೆ ನೋಂದಣಿ ಮಾಡಿಸದಿದ್ದರೆ ಸೀಜ್ ಮಾಡಲಾಗುವುದು. ಇನ್ನು ಟ್ಯಾಂಕರ್ ನೀರು (Water Crisis) ಪೂರೈಕೆಗೆ 500 ರಿಂದ 2 ಸಾವಿರದವರೆಗೂ ವಸೂಲಿ ಮಾಡುತ್ತಿದ್ದಾರೆ. ಹೀಗಾಗಿ ನೀರಿನ ದರವನ್ನು ಸರ್ಕಾರದಿಂದಲೇ ನಿಗದಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇದ್ದು, ಕೇವಲ 219 ಟ್ಯಾಂಕರ್‌ಗಳು ಅಂದರೆ ಕೇವಲ ಶೇ 10 ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್‌ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂ ಎಸ್‌ಎಸ್‌ಬಿ ಅವರು 210 ಟ್ಯಾಂಕರ್‌ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ ಎಂದು ತಿಳಿಸಿದರು.

ನೀರು ಸರ್ಕಾರಕ್ಕೆ ಸೇರಿದ್ದು

ನೀರು ಸರ್ಕಾರಕ್ಕೆ ಸೇರಿದ್ದು. ಯಾವುದೇ ವೈಯಕ್ತಿಕ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ನೀರಿನ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ಧರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಚುನಾವಣಾ ನೀತಿ ಸಂಹಿತೆ ಅಡ್ಡ ಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ | HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

ಸಮಸ್ಯೆ ಬಗೆಹರಿಸಲು 556 ಕೋಟಿ ಮೀಸಲು

ಬೆಂಗಳೂರು ನಗರದ ಎಲ್ಲಾ ಶಾಸಕರಿಗೆ ನೀರಿನ ಸಮಸ್ಯೆ ಬಗೆಹರಿಸಲು 10 ಕೋಟಿ ಅನುದಾನ ನೀಡಲಾಗಿದೆ. ಬಿಬಿಎಂಪಿಗೆ 148 ಕೋಟಿ, ಬಿಡಬ್ಲ್ಯೂ ಎಸ್‌ಎಸ್‌ಬಿ ಯಿಂದ 128 ಕೋಟಿ ಒಟ್ಟು 556 ಕೋಟಿ ಹಣವನ್ನು ಕುಡಿಯುವ ನೀರಿನ ಪೂರೈಕೆಗೆ ಮೀಸಲಿಡಲಾಗಿದೆ ಎಂದು ತಿಳಿಸಿದರು.

ನೀರಿನ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಸಹಾಯವಾಣಿ ಮತ್ತು ವಾರ್ಡ್ ವಾರು ದೂರು ಕೇಂದ್ರಗಳನ್ನು ತೆರೆಯಲಾಗುವುದು. ಸಮಸ್ಯೆ ಆಲಿಸಲು ವಾರ್ ರೂಂಗಳು ಕೆಲಸ ನಿರ್ವಹಿಸಲಿವೆ. ಹಿರಿಯ ಅಧಿಕಾರಿಗಳು ಸೇರಿದಂತೆ ನಾನು ಸಹ ಪದೇ,‌ ಪದೇ ಪರಿಶೀಲನೆ ನಡೆಸುತ್ತೇನೆ. ಕುಡಿಯುವ ನೀರನ್ನು ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ. ಬೆಂಗಳೂರಿನ ಜನತೆ ಗಾಬರಿಯಾಗುವುದು ಬೇಡ. ಪ್ರತಿಯೊಬ್ಬರಿಗೂ ನೀರು ನೀಡುವುದು ನಮ್ಮ ಕರ್ತವ್ಯ ಎಂದು ಭರವಸೆ ನೀಡಿದರು.

ನಗರದಲ್ಲಿವೆ 15 ಸಾವಿರ ಕೊಳವೆಬಾವಿಗಳು

ಪ್ರಸ್ತುತ ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿವೆ. ದಾಖಲೆಗಳ ಪ್ರಕಾರ 16,781 ಕೊಳವೆ ಬಾವಿಗಳಿವೆ. ಇದರಲ್ಲಿ 6,997 ಕೊಳವೆ ಬಾವಿಗಳು ಬತ್ತಿ ಹೋಗಿದ್ದು, 7,784 ಕೊಳವೆ ಬಾವಿಗಳು ಚಾಲ್ತಿಯಲ್ಲಿವೆ. ಹೊಸ ಕೊಳವೆ ಬಾವಿ ಕೊರೆಸಲು ಸ್ಥಳೀಯ ಗುತ್ತಿಗೆದಾರರು ಮತ್ತು ತಮಿಳುನಾಡಿನ ಕೊಳವೆಬಾವಿ ಕೊರೆಯುವವರ ನಡುವೆ ದರದ ವಿಚಾರವಾಗಿ ಒಂದಷ್ಟು ಗೊಂದಲಗಳಿದ್ದು ಇದನ್ನು ಶೀಘ್ರ ಬಗೆಹರಿಸಲಾಗುವುದು ಎಂದು ತಿಳಿಸಿದರು.

ನೀರು ಪೂರೈಕೆಗೆ ಹಾಲಿನ ಟ್ಯಾಂಕರ್‌ಗಳು

ನಿರುಪಯುಕ್ತ ಹಾಲಿನ ಟ್ಯಾಂಕರ್‌ಗಳನ್ನು ನೀರು ಸರಬರಾಜಿಗೆ ಬಳಕೆ ಮಾಡಲು ಸೂಚಿಸಲಾಗಿದೆ. ಕೆಎಂಎಫ್ ವ್ಯಾಪ್ತಿಯ ಎಲ್ಲಾ ಘಟಕಗಳಿಂದ ಟ್ಯಾಂಕರ್‌ಗಳನ್ನು ತರಿಸಿ ಸ್ವಚ್ಛಗೊಳಿಸಿ ಬಳಸಬೇಕು ಎಂದು ಹೇಳಲಾಗಿದೆ. ಈ ಟ್ಯಾಂಕರ್‌ಗಳನ್ನು ನೀರಿನ ಸಮಸ್ಯೆ ಬಗೆಹರಿಯುವ ತನಕ ಬಳಸಬೇಕು ಎಂದು ಸೂಚಿಸಲಾಗಿದೆ. ಟ್ಯಾಂಕರ್ ನೀರು ಪೂರೈಕೆಗೆ 500 ರಿಂದ 2 ಸಾವಿರದವರೆಗೂ ವಸೂಲಿ ಮಾಡುತ್ತಿದ್ದಾರೆ. ಈ ಗೊಂದಲವನ್ನು ಅಸೋಸಿಯೇಷನ್ ಬಳಿ ಮಾತನಾಡಿ ನೀರಿನ ದರವನ್ನು ಕಿ.ಮೀಗೆ ಇಂತಿಷ್ಟು ಎಂದು ನಿಗದಿ ಮಾಡಲಾಗುವುದು ಎಂದು ಹೇಳಿದರು.

110 ಹಳ್ಳಿಗಳಿಗೆ ಮೇ ಅಂತ್ಯದ ವೇಳೆಗೆ ಕಾವೇರಿ ನೀರು ಪೂರೈಕೆ ಮಾಡಲಾಗುವುಸು. 775 ಎಂಎಲ್ ಡಿ ನೀರು ಆದಷ್ಟು ಬೇಗ ಜನರಿಗೆ ಪೂರೈಸಲಾಗುವುದು. ನಿಷ್ಕ್ರಿಯವಾಗಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಚಾಲನೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಮಸ್ಯೆ ನಿವಾರಣೆಗೆ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಂಬಂಧಪಟ್ಟ ಎಲ್ಲಾ ಇಲಾಖೆಯವರಿಗೆ ಮುಖ್ಯವಾಗಿ ಬೆಸ್ಕಾಂ ಅವರಿಗೆ ನಗರದಲ್ಲಿ ಚಾಲನೆಯಲ್ಲಿ ಇರುವ ಕೃಷಿ, ವಾಣಿಜ್ಯ ಬಳಕೆಯ ಕೊಳವೆ ಬಾವಿಗಳನ್ನು ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ. ನಾಗರಿಕರು ಸಹ ಅನಗತ್ಯವಾಗಿ ನೀರನ್ನು ಬಳಕೆ ಮಾಡಬಾರದು. ಉದ್ಯಾನಗಳಿಗೆ, ಇತರೇ ಬಳಕೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು. ಬೀಕರ ಬರಗಾಲದಲ್ಲಿ ನೀರಿನ ಮಿತ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ | Nisha Yogeshwar : ಮತ್ತೆ ಕಾಂಗ್ರೆಸ್‌ ಪಾಳಯದಲ್ಲಿ ಕಾಣಿಸಿಕೊಂಡ ಸಿ.ಪಿ ಯೋಗೇಶ್ವರ್‌ ಪುತ್ರಿ

ಪ್ರಶ್ನೋತ್ತರಗಳು

ಟ್ಯಾಂಕರ್ ದರ ನಿಗದಿ ವಿಚಾರವಾಗಿ ಕೇಳಿದಾಗ “ಟ್ಯಾಂಕರ್ ನೀರು ಪೂರೈಕೆ ಮಾಲೀಕರ ಸಭೆಯನ್ನು ಮಾ. 7 ರಂದು ನಿಗದಿ ಮಾಡಿದ್ದು, ಅಂದು ದರ ನಿಗದಿ ಮಾಡಲಾಗುವುದು”. ಎಂದು ಹೇಳಿದರು.

ಕಾವೇರಿ 5 ನೇ ಹಂತಕ್ಕೆ ತೊಡಕು ಉಂಟಾಗಿದೆಯೇ ಎಂದಾಗ “2 ಕಿಮೀ ನಷ್ಟು ಸಮಸ್ಯೆ ಇದೆ. ಅರಣ್ಯ ಭೂಮಿ ಮತ್ತು ಒಂದು ಕಡೆ ಕಲ್ಲು ಅಡ್ಡ ಬಂದಿರುವ ಕಾರಣ ಸಮಸ್ಯೆ ಉಂಟಾಗಿದೆ. ಶೀಘ್ರ ಈ ತೊಡಕು ನಿವಾರಣೆಯಾಗುವುದು. ಮೇ ಅತ್ಯಂತ ವೇಳೆಗೆ ಪೂರೈಕೆಯಾಗುವುದು” ಎಂದು ಡಿಸಿಎಂ ತಿಳಿಸಿದರು.

ನೀರಿನ ಸಮಸ್ಯೆ ಬಗೆಹರಿಸಲು ನೋಡಲ್ ಅಧಿಕಾರಿಗಳ ನಿಯೋಜನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರ ವಲಯ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಶೀಘ್ರ ಕುಡಿಯುವ ನೀರಿನ ಸಮಸ್ಯೆ ಆಲಿಸುವ ಸಲುವಾಗಿ ಪ್ರತ್ಯೇಕ ಮೇಲುಸ್ತುವಾರಿಗಾಗಿ ಬಿಬಿಎಂಪಿಯ ಕಾರ್ಯಪಾಲಕ ಅಭಿಯಂತರರು(ದಾಸರಹಳ್ಳಿ) ಧರಣೇಂದ್ರ ಕುಮಾರ್ ಅವರನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ಸಮಸ್ಯೆ ಕುರಿತು ಮಾಹಿತಿ ನೀಡಬಹುದು.

ಅಲ್ಲದೇ, ಬಿಬಿಎಂಪಿ ವ್ಯಾಪ್ತಿಯ ಇನ್ನುಳಿದ ವಾರ್ಡ್‌ಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯವಾಣಿ ಸಂಖ್ಯೆಯಾದ 1916 ಗೆ ಕರೆ ಮಾಡಬಹುದು.

ಇದನ್ನೂ ಓದಿ | Water Crisis: ಬೆಂಗಳೂರಿನ ಕೊಳವೆಬಾವಿ ನೀರು ಪೂರೈಕೆ ಟ್ಯಾಂಕರ್‌ಗಳಿನ್ನು ಸರ್ಕಾರದ ಸುಪರ್ದಿಗೆ: ಡಿ.ಕೆ. ಶಿವಕುಮಾರ್

ಹೊರ ವಲಯಗಳಲ್ಲಿ ಬರುವ 35 ವಾರ್ಡ್‌ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಯು 35 ವಾರ್ಡ್‌ಗಳಿಗೆ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.

Continue Reading
Advertisement
KSRTC to operate special buses for Mahashivratri
ಮಹಾ ಶಿವರಾತ್ರಿ27 seconds ago

Maha Shivratri : ಮಹಾಶಿವರಾತ್ರಿಗೆ ಕೆಎಸ್‌ಆರ್‌ಟಿಸಿಯಿಂದ ಸ್ಪೆಷಲ್‌ ಬಸ್‌; ಶೇ.10ರಷ್ಟು ಡಿಸ್ಕೌಂಟ್‌!

Stones pelted at 3 Vande Bharat train in a single day
ರಾಜಕೀಯ12 mins ago

Vande Bharat Train: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ​; ಒಂದೇ ದಿನ 2 ಟ್ರೈನ್‌ ಮೇಲೆ 3 ಕಡೆ ದಾಳಿ!

Sedition Case BY Vijayendra
ಬೆಳಗಾವಿ20 mins ago

BY Vijayendra :‌ ನಾಸಿರ್‌ ಹುಸೇನ್‌ ಕೂಡಾ ಅಪರಾಧಿ, FIRನಲ್ಲಿ ಸೇರಿಸಿ; ವಿಜಯೇಂದ್ರ ಆಗ್ರಹ

elon musk
ವಾಣಿಜ್ಯ47 mins ago

World’s Richest Person: ವಿಶ್ವದ ಅತ್ಯಂತ ಸಿರಿವಂತ ವ್ಯಕ್ತಿ ಪಟ್ಟ ಕಳೆದುಕೊಂಡ ಎಲಾನ್‌ ಮಸ್ಕ್‌; ಈಗ ಯಾರು ನಂ. 1 ಶ್ರೀಮಂತ?

Guest Lecturers salarys
ನೌಕರರ ಕಾರ್ನರ್52 mins ago

Guest Lecturers : ಅತಿಥಿ ಉಪನ್ಯಾಸಕರ ವೇತನ 8000 ರೂ. ಹೆಚ್ಚಳ, ಪಾಠದ ಅವಧಿಯೂ ಜಾಸ್ತಿ

Is there a drinking water problem in your area Call this helpline number
ಬೆಂಗಳೂರು54 mins ago

Water Crisis : ನಿಮ್ಮ ಏರಿಯಾದಲ್ಲಿ ಕುಡಿಯುವ ನೀರಿನ ಸಮಸ್ಯೆನಾ?; ಈ ಹೆಲ್ಪ್‌ಲೈನ್‌ ನಂಬರ್‌ಗೆ ಕಾಲ್‌ ಮಾಡಿ

soumya shetty
ಸಿನಿಮಾ55 mins ago

Soumya Shetty: ಗೆಳತಿಯ ಮನೆಯಿಂದಲೇ ಚಿನ್ನ ಕದ್ದು ಸಿಕ್ಕಿಬಿದ್ದ ತೆಲುಗು ನಟಿ

railway crossing work Bengaluru Mysuru train services suspended for 5 days
ಬೆಂಗಳೂರು1 hour ago

Train services: ರೈಲ್ವೆ ಕ್ರಾಸಿಂಗ್‌ ಕಾಮಗಾರಿ; 5 ದಿನ ಬೆಂಗಳೂರು-ಮೈಸೂರು ರೈಲು ಸಂಚಾರ ಬಂದ್‌

Sedition Case Mandya
ಮಂಡ್ಯ2 hours ago

Sedition Case : ಪಾಕಿಸ್ತಾನ್‌ ಮುರ್ದಾಬಾದ್‌ ಬದಲು ಜಿಂದಾಬಾದ್‌ ಎಂದ ಬಿಜೆಪಿ ಕಾರ್ಯಕರ್ತ ಜೈಲಿಗೆ!

Couple
ದೇಶ2 hours ago

ಹೆಣ್ಣುಮಕ್ಕಳನ್ನು ‘ಡಾರ್ಲಿಂಗ್‌’ ಎಂದು ಕರೆಯುವುದೂ ಇನ್ನು ಲೈಂಗಿಕ ಕಿರುಕುಳ; ಹುಡುಗರೇ ಹುಷಾರ್!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ19 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ22 hours ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌