DV Sadananda Gowda : ಕಾಂಗ್ರೆಸ್‌ ಸೇರಲ್ಲ ಎಂದ ಡಿ.ವಿ ಸದಾನಂದ ಗೌಡ; ಇನ್ನು ಬಿಜೆಪಿ ಶುದ್ಧೀಕರಣ ಮಾಡ್ತಾರಂತೆ! - Vistara News

ರಾಜಕೀಯ

DV Sadananda Gowda : ಕಾಂಗ್ರೆಸ್‌ ಸೇರಲ್ಲ ಎಂದ ಡಿ.ವಿ ಸದಾನಂದ ಗೌಡ; ಇನ್ನು ಬಿಜೆಪಿ ಶುದ್ಧೀಕರಣ ಮಾಡ್ತಾರಂತೆ!

DV Sadananda Gowda : ಡಿ.ವಿ. ಸದಾನಂದ ಗೌಡ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರುವುದಿಲ್ಲ ಎಂದಿದ್ದಾರೆ. ಆದರೆ, ಕರ್ನಾಟಕ ಬಿಜೆಪಿಯನ್ನು ಶುದ್ಧೀಕರಣ ಮಾಡುವುದಾಗಿ ಘೋಷಿಸಿದ್ದಾರೆ.

VISTARANEWS.COM


on

DV Sadananda Gowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ (Bangalore North Constituency) ಬಿಜೆಪಿ ಟಿಕೆಟ್‌ ವಂಚಿತರಾಗಿರುವ ಹಾಲಿ ಸಂಸದ ಡಿ.ವಿ. ಸದಾನಂದ ಗೌಡ (DV sadananda Gowda) ಅವರು ತಾನು ಕಾಂಗ್ರೆಸ್‌ ಸೇರುವುದಿಲ್ಲ ಎಂದು (DVS not to Join Congress) ಘೋಷಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪತ್ರಿಕಾಗೋಷ್ಠಿ ಮಾಡುವುದಾಗಿ ಹೇಳುತ್ತಿದ್ದ ಅವರು ಗುರುವಾರ ಮಾಧ್ಯಮಗಳ ಮುಂದೆ ಬಂದು ಕಾಂಗ್ರೆಸ್‌ ಸೇರುವುದಿಲ್ಲ ಎಂದು ಘೋಷಿಸಿದರು. ಅದರ ಜತೆಗೆ ಹಾಲಿ ಬಿಜೆಪಿ ನಾಯಕತ್ವದ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಅವರು, ಲೋಕಸಭಾ ಚುನಾವಣೆಯ ಬಳಿಕ ಬಿಜೆಪಿ ಶುದ್ಧೀಕರಣ ಅಭಿಯಾನ (Cleaning process of BJP) ಶುರು ಮಾಡುವುದಾಗಿ ಪ್ರಕಟಿಸಿದರು.

ಬೆಂಗಳೂರು ಉತ್ತರದಲ್ಲಿ ತಮ್ಮ ಬದಲಿಗೆ ಶೋಭಾ ಕರಂದ್ಲಾಜೆ (Shobha Karandlaje) ಅವರಿಗೆ ಟಿಕೆಟ್‌ ನೀಡಿದ್ದರಿಂದ ಡಿ.ವಿ. ಸದಾನಂದ ಗೌಡರು ಒಂದು ಕ್ಷಣ ಆಘಾತಕ್ಕೆ ಒಳಗಾಗಿದ್ದರು. ಅದರ ನಡುವೆ ಪರಿಸ್ಥಿತಿಯ ಲಾಭ ಪಡೆಯಲು ಕಾಂಗ್ರೆಸ್‌ ನಾಯಕರು ಅವರನ್ನು ಸಂಪರ್ಕ ಮಾಡಿದ್ದರು. ಈ ಹಂತದಲ್ಲಿ ತನಗೆ ಕಾಂಗ್ರೆಸ್‌ ಆಫರ್‌ ಇದೆ ಎಂದು ಘಂಟಾಘೋಷವಾಗಿ ಹೇಳಿಕೊಂಡ ಡಿ.ವಿ ಸದಾನಂದ ಗೌಡರು ಮಾರ್ಚ್‌ 18ರ ಮಂಗಳವಾರ ತೀರ್ಮಾನ ಪ್ರಕಟಿಸುವುದಾಗಿ ಹೇಳಿದ್ದರು. ಬಳಿಕ ಒಕ್ಕಲಿಗ ಸಂಘದ ಸಭೆ, ತವರಿನ ಭೇಟಿಯ ನೆಪ ಹೇಳಿ ಮುಂದೂಡಿದ ಮಾಧ್ಯಮ ಗೋಷ್ಠಿಯನ್ನು ಗುರುವಾರ ಆಯೋಜಿಸಿದ್ದರು.

ಇದರಲ್ಲಿ ತನ್ನ ಮುಂದಿನ ನಡೆಗಳನ್ನು ವಿವರಿಸಿದ ಡಿ.ವಿ. ಸದಾನಂದ ಗೌಡ ಅವರು, ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದ ತಮ್ಮನ್ನು ಮರಳಿ ಸ್ಪರ್ಧೆಗೆ ಎಳೆದು ಅಪಮಾನ ಮಾಡಿದ್ದರಿಂದ ಬೇಸರವಾಗಿದೆ ಎಂದು ಸ್ಪಷ್ಟವಾಗಿ ಹೇಳಿದರು. ರಾಜ್ಯ ಬಿಜೆಪಿ ಸ್ವಜನ ಪಕ್ಷಪಾತ, ಕೌಟುಂಬಿಕ ರಾಜಕಾರಣ ಮತ್ತು ಚೇಲಾಗಳ ರಾಜಕಾರಣದಿಂದ ತುಂಬಿ ತುಳುಕುತ್ತಿದೆ. ಇದನ್ನು ಶುದ್ಧೀಕರಣ ಮಾಡುವ ಕಾರ್ಯದ ಮುಂಚೂಣಿಯಲ್ಲಿ ನಿಲ್ಲುತ್ತೇನೆ. ಲೋಕಸಭಾ ಚುನಾವಣೆಯ ಬಳಿಕ ಈ ಕಾರ್ಯ ಆರಂಭವಾಗಲಿದೆ ಎಂದು ಘೋಷಿಸಿದರು.

ಇದನ್ನೂ ಓದಿ : DV Sadananda Gowda : ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಗೆ ಒಕ್ಕಲಿಗರ ಸಂಘ ಬೆಂಬಲ; ಕೈ ತೀರ್ಮಾನ ಏನು?

ಡಿ.ವಿ. ಸದಾನಂದ ಗೌಡ ಅವರಿಗೆ ಬಿಜೆಪಿ ಏನೆಲ್ಲ ಕೊಟ್ಟಿದೆ. ಆದರೆ, ಈಗಲೂ ಅವರಿಗೆ ರಾಜಕಾರಣದ ಆಸೆ ನಿಂತಿಲ್ಲ ಎಂದೆಲ್ಲ ಮಾಧ್ಯಮದಲ್ಲಿ ವಿಶ್ಲೇಷಣೆ ನಡೆಯಿತು. ಟಿಕೆಟ್ ತಪ್ಪಿದ್ದಕ್ಕೆ ಸದಾನಂದಗೌಡರಿಗೆ ಬೇಸರ ಆಯ್ತು ಅಂತ ಸುದ್ದಿ ಆಯ್ತು. ಹೌದು ಟಿಕೆಟ್ ತಪ್ಪಿದ್ದಕ್ಕೆ ಬೇಸರ ಆಗಿದ್ದು ನಿಜ.‌ ನನಗೆ ಬಿಜೆಪಿಯಿಂದ ಟಿಕೆಟ್‌ ತಪ್ಪಿದಾಗ ಕಾಂಗ್ರೆಸ್‌ನಿಂದ ಆಫರ್‌ ಬಂದಿದ್ದೂ ನಿಜ. ಹಾಗಿದ್ದರೆ ನಾನು ಕಾಂಗ್ರೆಸ್‌ ಸೇರುತ್ತೇನಾ ಎನ್ನುವ ಪ್ರಶ್ನೆ ಇದೆ. ಅದಕ್ಕೆ ಸ್ಪಷ್ಟ ಉತ್ತರ: ನಾನು ಕಾಂಗ್ರೆಸ್‌ ಸೇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನನ್ನನ್ನು ಆರತಿ ಎತ್ತಿ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದವರು ಕೊನೆಗೆ ಟಿಕೆಟ್‌ ನೀಡದೆ ಮಂಗಳಾರತಿ ಎತ್ತಿದರು. ಯಾರು ನನ್ನನ್ನು ಅಪಮಾನ ಮಾಡಿದರೋ ಅವರು ಮುಂದೆ ಪಶ್ಚಾತ್ತಾಪಡುತ್ತಾರೆ. ಕೆಲವು ನನಗೆ ನೋವು ಕೊಟ್ಟಿರಬಹುದು. ಆದರೆ, ನಾನು ಒಂದು ಮಾತು ಹೇಳುತ್ತೇನೆ. ಯಾರೇ ಬೇಸರ ಮಾಡಿದರೂ ನಮಗೆ ಅದನ್ನು ಸಹಿಸಿಕೊಳ್ಳಲು ತಾಳ್ಮೆ ಇದ್ದರೆ ದುಃಖ ನೀಡಿದವರು ಇದ್ದೂ ಸತ್ತಂತೆ ಎಂದು ಡಿ.ವಿ.ಸದಾನಂದ ಗೌಡ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

Hassan Pen Drive Case: ಹಾಸನ ಸಂಸದ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ನಂತರ ಮೊದಲ ಬಾರಿ ಮಾಧ್ಯಮಗಳಿಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ನಾವೆಲ್ಲಾ ಇಲ್ಲೇ ಇದ್ದೇವೆ, ಎಲ್ಲೂ ಓಡಿ ಹೋಗಲ್ಲ. ಹಾಸನ ಪೆನ್‌ ಡ್ರೈವ್ ಪ್ರಕರಣದ (Hassan Pen Drive Case) ಬಗ್ಗೆ ಸದ್ಯ ನಾನು ಏನೂ ರಿಯಾಕ್ಟ್ ಮಾಡಲ್ಲ, ಕಾನೂನು ರೀತಿ ಪ್ರಕರಣವನ್ನು ನಾವು ಎದುರಿಸುತ್ತೇವೆ. ವಿಚಾರಣೆಗೆ ಕರೆದಾಗ ವಿದೇಶದಿಂದ ಪುತ್ರ ಬರುತ್ತಾನೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ ಸಂಸದ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ನಂತರ ನಗರದಲ್ಲಿ ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, 4-5 ವರ್ಷದ ಹಿಂದೆ ಘಟನೆ ನಡೆದಿದೆ ಎಂದು ಈಗ ಕೇಸ್‌ ಹಾಕಿದ್ದಾರೆ. ಇದು ಯಾವ ತರಹದ್ದು ಎಂದು ಏನೂ ಮಾತನಾಡಲ್ಲ. ವಿಡಿಯೊ ಸೇರಿ ಯಾವುದರ ಬಗ್ಗೆಯೂ ಮಾತನಾಡಲ್ಲ ಎಂದು ತಿಳಿಸಿದ್ದಾರೆ.

ಪಕ್ಷದಿಂದ ಉಚ್ಚಾಟನೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ನಿರ್ಧಾರ ಪಕ್ಷಕ್ಕೆ ಸೇರಿದ್ದು, ಎಸ್‌ಐಟಿ ರಚನೆ ಮಾಡಿರುವುದರಿಂದ ತನಿಖೆಗೆ ತೊಂದರೆ ಆಗಬಾರದೆಂದು ನಾನೇನೂ ಮಾತನಾಡಲ್ಲ. ಇದೆಲ್ಲಾ ರಾಜಕೀಯ. ಸರ್ಕಾರ ಅವರದು ಇದೆ, ಏನು ಬೇಕಾದರೂ ಮಾಡಿಕೊಳ್ಳಲಿ. ಪ್ರಕರಣದ ಬಗೆ ಕಾನೂನು ರೀತಿಯಲ್ಲಿ ತನಿಖೆ ಆಗಲಿ ಎಂದು ಹೇಳಿದ್ದಾರೆ.

ಪ್ರಜ್ವಲ್ ವಿದೇಶಕ್ಕೆ ಹೋಗಿರುವ ವಿಚಾರಕ್ಕೆ ಸ್ಪಂದಿಸಿ, ಚುನಾವಣೆ ಮುಗಿದ ನಂತರ ಅವನು ಹೋಗಿದ್ದಾನೆ. ಯಾವುದೋ ಕೆಲಸಕ್ಕಾಗಿ ಹೋಗ್ಬೇಕಿತ್ತು ಹೋಗಿದ್ದಾನೆ. ಇವರು ಎಫ್‌ಐಆರ್‌ ಹಾಕುತ್ತಾರೆ ಅಂತ ಗೊತ್ತಿತ್ತಾ? ಎಸ್‌ಐಟಿ ತನಿಖೆ ಮಾಡುತ್ತಾರೆ ಅಂತ ಗೊತ್ತಿತ್ತಾ? ವಿಚಾರಣೆಗೆ ಕರೆದಾಗ ಬರುತ್ತಾನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

50 ವರ್ಷಗಳಿಂದ ನಾವು ತನಿಖೆ ಎದುರಿಸುತ್ತಿದ್ದೇವೆ. ದೇವೇಗೌಡರ ಮೇಲೆ ತನಿಖೆ ನಡೆಸಿದ್ದರು, ದೇವೆಗೌಡರ ಬಳಿ ಈ‌ ಪ್ರಕರಣದ ಬಗ್ಗೆ ಮಾತನಾಡಿಲ್ಲ. ಆದರೂ ಕಾನೂನು ಕ್ರಮ ಏನು ಆಗುತ್ತೆ ಆಗಲಿ ಎಂದು ಅವರು ಹೇಳಿರುವುದಾಗಿ ತಿಳಿಸಿದರು.

ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Hassan Pen Drive Case

ಶಿವಮೊಗ್ಗ: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Hassan Pen Drive Case) ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿದ್ದರಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಉಚ್ಚಾಟನೆ ಬಗ್ಗೆ ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ. ನೆನ್ನೆ ರಾತ್ರಿಯೇ ಈ ಬಗ್ಗೆ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ. ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ರೆ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ದೇವೇಗೌಡರು, ನನ್ನನ್ನು ಯಾಕೆ ತರುತ್ತೀರಿ? ಬಿಜೆಪಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಈಗಾಗಲೇ ನಾವು ಬೇರೆ ಆಗಿದ್ದೇವೆ. ನಮ್ಮ ವ್ಯವಹಾರ, ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತದೆ. ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನು ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ನಡೆದಿದ್ದರೆ ಈ ನೆಲ್ಲದಲ್ಲಿ ಶಿಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ನನ್ನ ನಿಲುವು ಮುಂದುವರಿದಿದೆ ಎಂದು ಹೇಳಿದರು.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಕಾನೂನು ಉಲ್ಲಂಘನೆ ಆಗಿದ್ದರೆ ಕ್ರಮ ಆಗಲಿ, ಚುನಾವಣೆ ಸಮಯದಲ್ಲಿ ಪೆನ್ ಡ್ರೈ ಹಂಚಿರುವುದು ಕೂಡ ತನಿಖೆ ಯಾಗಬೇಕು. ಯಾರಿಂದ ಹೊರಬಂದಿದೆ, ಯಾರು ಲಕ್ಷಾಂತರ ಪೆನ್ ಡ್ರೈ ಹಂಚಿದವರು ಯಾರು ಅಂತ ತಿಳಿಯಬೇಕು. ಪೆನ್ ಡ್ರೈ ಹಂಚಿದ್ದು ದೊಡ್ಡ ಅಪರಾಧ ಎಂದು ಕಿಡಿಕಾರಿದ್ದಾರೆ.

Continue Reading

ಹಾವೇರಿ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಶಾಸಕ ಶ್ರೀನಿವಾಸ ಮಾನೆ ಪ್ರಚಾರ

Lok Sabha Election 2024: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಬಿರುಸಿನ ಪ್ರಚಾರ ನಡೆಸಿದರು.

VISTARANEWS.COM


on

MLA Srinivasa Mane Election campaign for Haveri Gadag Lok Sabha constituency Congress candidate Anandaswamy Gaddadevaramath
Koo

ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಹಾನಗಲ್‌ ಶಾಸಕ ಶ್ರೀನಿವಾಸ ಮಾನೆ ಬಿರುಸಿನ ಪ್ರಚಾರ (Lok Sabha Election 2024) ನಡೆಸಿದರು.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಜತೆ ಶಾಸಕ ಶ್ರೀನಿವಾಸ ಮಾನೆ, ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

ಗದಗನಲ್ಲಿ ಯುವ ಚೈತನ್ಯ ಸಮಾವೇಶದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ ಮಾತನಾಡಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಭಾರೀ‌ ಅನ್ಯಾಯವಾಗುತ್ತಿದೆ, ರೈತರಿಗೆ ಅಗೌರವ ತರುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬರ ಪರಿಹಾರ ವಿಚಾರದಲ್ಲಿ‌ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾವಿದ್ದರೆ ಬಿಡುಗಡೆ ಮಾಡುತ್ತಿದ್ದೆವು ಎಂದು ಮಾಧ್ಯಮ ಮೂಲಕ ಬೆಂಗಳೂರು, ಹಾವೇರಿಯಲ್ಲಿ ಹೇಳಿದರೇ ವಿನಃ ಒಂದು ಬಾರಿಯು ಅಮಿತ್ ಶಾ ಹಾಗೂ‌ ಮೋದಿ ಅವರನ್ನು ಭೇಟಿಯಾಗಲಿಲ್ಲ ಎಂದು ಆರೋಪಿಸಿದ ಅವರು, ಆದರೆ ಕರ್ನಾಟಕಕ್ಕೆ ನ್ಯಾಯ ಸಿಗಲು ಅನಿವಾರ್ಯವಾಗಿ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಪಡೆಯಬೇಕಾಯಿತು ಎಂದು ತಿಳಿಸಿದರು.

ದೇಶಾದ್ಯಂತ ಬಿಜೆಪಿ ವಿರೋಧಿ ಅಲೆಯಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಜಯವಾಗಲಿದೆ ಎಂದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದೆ. ಐದು ಗ್ಯಾರೆಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!

ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

Lok Sabha Election 2024

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

VISTARANEWS.COM


on

PM Narendra Modi met four special people in Sirsi visit
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕವು 2ನೇ ಹಂತದ ಮತದಾನಕ್ಕೆ ಸಜ್ಜಾಗುತ್ತಿದೆ. ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

ಇವರಲ್ಲಿ ಒಬ್ಬರು ವೃತ್ತಿಯಲ್ಲಿ ಮರ ಕಡಿಯುವವರಾದರೂ ಅಯೋಧ್ಯೆಯ ಕರಸೇವಕರಾಗಿದ್ದಾರೆ. ಇನ್ನೊಬ್ಬರು ನಿವೃತ್ತ ಪೌರ ಕಾರ್ಮಿಕ ಮಹಿಳೆಯಾಗಿದ್ದಾರೆ. ಮತ್ತೊಬ್ಬರು ಕಾಡು ಹಣ್ಣುಗಳನ್ನು ಮಾರಿ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಮಗದೊಬ್ಬರು ಕ್ಷೌರಿಕರಾಗಿದ್ದು, ಬಿಜೆಪಿಯ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪಕ್ಕಾ ಅಭಿಮಾನಿಯಾಗಿದ್ದಾರೆ.

PM Narendra Modi met four special people in Sirsi visit

ಹಾಗಾದರೆ ಯಾರಿವರು?

ಲಕ್ಷ್ಮಣ್ ನಾಯ್ಕ ದೊಂಬೆ, ಸಿದ್ದಾಪುರ: ಲಕ್ಷ್ಮಣ್‌ ನಾಯ್ಕ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದವರಾಗಿದ್ದಾರೆ. ಇವರು ಅಯೋಧ್ಯೆಯ ಕರಸೇವಕರೂ ಆಗಿದ್ದವರು. ಲಕ್ಷ್ಮಣ ಅವರು ಅಯೋಧ್ಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅಲ್ಲದೆ, ಬ್ರಹ್ಮಚಾರಿಯಾಗಿಯೇ ಉಳಿದಿದ್ದಾರೆ. ಲಕ್ಷ್ಮಣ ಅವರು ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರವನ್ನು ನಿರ್ಮಿಸುವವರೆಗೂ ಕ್ಷೌರ ಮಾಡಿಸುವುದಿಲ್ಲ ಎನ್ನುವ ವ್ರತವನ್ನು ಕೈಗೊಂಡಿದ್ದರು.

PM Narendra Modi met four special people in Sirsi visit

ರಾಧಾ ಹರಿಜನ: ಇವರು ಶಿರಸಿಯ ನಿವೃತ್ತ ಪೌರ ಕಾರ್ಮಿಕರಾಗಿದ್ದಾರೆ. ಸ್ವಚ್ಛತಾ ಕಾರ್ಯಕರ್ತೆಯಾಗಿ ದಣಿವರಿಯದೆ ಕೆಲಸ ಮಾಡಿದವರು ಇವರಾಗಿದ್ದಾರೆ. ತನ್ನ ಪ್ರಾಮಾಣಿಕ ಕೆಲಸಕ್ಕೆ ಹೆಸರುವಾಸಿಯಾಗಿರುವ ಇವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

PM Narendra Modi met four special people in Sirsi visit

ಮೋಹಿನಿ ಗೌಡ: ಇವರು ಹಾಲಕ್ಕಿ ಪಂಗಡಕ್ಕೆ ಸೇರಿದವರಾಗಿದ್ದಾರೆ. ಇವರು ಜೀವನಕ್ಕಾಗಿ ಅಂಕೋಲಾ ಬಸ್ ನಿಲ್ದಾಣದಲ್ಲಿ ಕಾಡು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ. ಸ್ವಚ್ಛ ಭಾರತ್ ಸ್ವಯಂಸೇವಕಿಯಾಗಿ ತೊಡಗಿಸಿಕೊಂಡಿದ್ದಾರೆ. ಅವರು ಬಿಡುವಿದ್ದಾಗಲೆಲ್ಲಾ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸುತ್ತಾರೆ.

PM Narendra Modi met four special people in Sirsi visit

ನಾಗೇಶ್‌ ಮಹಾಲೆ: ಇವರು ಒಬ್ಬ ಕ್ಷೌರಿಕರಾಗಿದ್ದಾರೆ. ನಾಗೇಶ್‌ ಅಂಕೋಲಾದಲ್ಲಿ 4 ಆಸನ ಸಾಮರ್ಥ್ಯವುಳ್ಳ ಸಲೂನ್‌ವೊಂದನ್ನು ಹೊಂದಿದ್ದಾರೆ. ಇವರು ಬಿಜೆಪಿಯ ಕಟ್ಟಾ ಬೆಂಬಲಿಗ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ಅಭಿಮಾನಿ. ಅವರ ಕೈಯಲ್ಲಿ ಮೋದಿ ಜಿ ಟ್ಯಾಟೂ ಇದೆ. ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ಅವರು ಇಡೀ ದಿನ ಉಚಿತವಾಗಿ ಕ್ಷೌರ ಮಾಡುತ್ತಾರೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಮೋದಿ ಭೇಟಿಯಾಗಿದ್ದು ಎಲ್ಲಿ?

ವಿಶೇಷ ವಿಮಾನದ ಮೂಲಕ ಶಿರಸಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಈ ನಾಲ್ವರು ವಿಶೇಷ ಸಾಧಕರನ್ನು ಪ್ರಧಾನಿ ನರೇಂದ್ರ ಅವರಿಗೆ ಪರಿಚಯ ಮಾಡಿಕೊಡಲಾಯಿತು. ಇದೇ ವೇಳೆ ಮೋದಿ ಸಹ ಅವರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

Continue Reading

ಕ್ರೈಂ

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case: ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

VISTARANEWS.COM


on

Hassan Pen Drive Case Where is Prajwal in Germany SIT is on lookout
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Continue Reading
Advertisement
Karnataka Weather
ಕರ್ನಾಟಕ17 mins ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ19 mins ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ42 mins ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ1 hour ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ1 hour ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Narendra Modi
ದೇಶ1 hour ago

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

International Labor Day-2024
ಉದ್ಯೋಗ2 hours ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು2 hours ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Hassan Pen Drive Case
ಕರ್ನಾಟಕ2 hours ago

Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

PF Balance Check
ಮನಿ ಗೈಡ್2 hours ago

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20248 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20249 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌