ED Case: ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು ಮಾಡಿದ ಸುಪ್ರೀಂ ಕೋರ್ಟ್‌; ಡಿ.ಕೆ. ಶಿವಕುಮಾರ್​​ಗೆ ಬಿಗ್ ರಿಲೀಫ್ - Vistara News

ರಾಜಕೀಯ

ED Case: ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು ಮಾಡಿದ ಸುಪ್ರೀಂ ಕೋರ್ಟ್‌; ಡಿ.ಕೆ. ಶಿವಕುಮಾರ್​​ಗೆ ಬಿಗ್ ರಿಲೀಫ್

ED Case: ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು 120B ಅಡಿ ದಾಖಲು ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ.

VISTARANEWS.COM


on

ED case Money laundering case quashed Supreme Court gives big relief to DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ (Money laundering) ವಿಷಯಕ್ಕೆ ಸಂಬಂಧ‌ಪಟ್ಟಂತೆ ಇಡಿ ದಾಖಲು ಮಾಡಿದ್ದ ಪ್ರಕರಣದಲ್ಲಿ (ED Case) ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ (DK Shivakumar) ಸುಪ್ರೀಂ ಕೋರ್ಟ್​ (Supreme Court) ಮಂಗಳವಾರ ಬಿಗ್ ರಿಲೀಫ್ ನೀಡಿದೆ.

ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು (Enforcement Directorate) 120B ಅಡಿ ದಾಖಲು ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ.

ಏನಿದು ಪ್ರಕರಣ?

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ನವ ದೆಹಲಿಯಲ್ಲಿ ಬಂಧಿಸಿ ತಿಹಾರ್‌ ಜೈಲಿಗೆ ಕಳಿಸಿತ್ತು. ತನಿಖೆ ಪೂರ್ಣಗೊಳಿಸಿರುವ ಇ.ಡಿ ಜೂನ್‌ ಕೊನೆಯ ವಾರದಲ್ಲಿ ದೋಷಾರೋಪ ಪಟ್ಟಿಯನ್ನು ದೆಹಲಿಯಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ದೆಹಲಿಯ ಸಫ್ಧರ್‌ಜಂಗ್ ಅಪಾರ್ಟ್‌ಮೆಂಟ್‌ನಲಿ ಸಿಕ್ಕ 6.61 ಕೋಟಿ ರೂ. ಡಿ.ಕೆ.ಶಿವಕುಮಾರ್ ಅವರದ್ದೇ ಎಂದು ವಿಚಾರಣೆ ವೇಳೆ ಆರೋಪಿ ಆಂಜನೇಯ ಬಾಯಿ ಬಿಟ್ಟಿದ್ದರು. ಡಿ.ಕೆ. ಶಿವಕುಮಾರ್‌ ಅವರ ಅಕ್ರಮ ಹಣದ ವ್ಯವಹಾರವನ್ನು ರಾಜೇಂದ್ರ ಹಾಗೂ ಆಂಜನೇಯ ನೋಡಿಕೊಳ್ಳುತ್ತಿದ್ದರು. ಸುರೇಶ್ ಶರ್ಮಾ ಅವರ ಫ್ಲಾಟ್‌ ಅನ್ನು ಡಿ.ಕೆ.ಶಿವಕುಮಾರ್ ಹಾಗೂ ಸುನಿಲ್ ಶರ್ಮಾ ಹಾಗೂ ಡಿಕೆಶಿ ಅಕ್ರಮ ಹಣ ಸಂಗ್ರಹಣೆ ಬಳಸುತ್ತಿದ್ದರು. ಡಿಕೆಶಿ ಸೂಚನೆ ಮೇರೆಗೆ 1 ಕೋಟಿ ರೂ., 2 ಕೋಟಿ ರೂ., 1.5 ಕೋಟಿ ರೂ. ಹೀಗೆ ಹಲವು ಬಾರಿ ಸಾಗಾಟ ಮಾಡಲಾಗಿದೆ. ಏನೇ ಸಮಸ್ಯೆ ಬಂದರೂ ನಾನು ನೋಡಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಆಂಜನೇಯಗೆ ಹೇಳಿದ್ದು, ಇದಕ್ಕಾಗಿ ಬೆಂಗಳೂರಿನಲ್ಲಿ ಜಾಗ ಕೊಡುವ ಭರವಸೆ ನೀಡಿದ್ದಾರೆ ಎಂಬ ಮಹತ್ವದ ಅಂಶಗಳು ಇ.ಡಿ. ಚಾರ್ಜ್‌ಶೀಟ್‌ನಲ್ಲಿವೆ.

ಡಿಕೆಶಿಗೆ ಬಿಗ್‌ ರಿಲೀಫ್‌

ಆದಾಯ ಮೂಲಕ್ಕಿಂತ 200 ಕೋಟಿ ಹೆಚ್ಚು ಅಕ್ರಮ ಸಂಪಾದನೆ (Illegal editing) ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧದ ಸಿಬಿಐ ಕೇಸ್‌ (CBI Case) ಅನ್ನು ಈಚೆಗೆ ರಾಜ್ಯ ಸರ್ಕಾರ ವಾಪಸ್‌ ಪಡೆದು ಲೋಕಾಯುಕ್ತಕ್ಕೆ ನೀಡುವ ತೀರ್ಮಾನವನ್ನು ತೆಗೆದುಕೊಂಡಿತ್ತು.

ಏನಿದು ಪ್ರಕರಣ?

2013ರಿಂದ 2018ರ ಅವಧಿಯಲ್ಲಿ ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಸಿದ ಆರೋಪ ಡಿ.ಕೆ. ಶಿವಕುಮಾರ್‌ ಮೇಲೆ ಇತ್ತು. ಈ ಪ್ರಕರಣವನ್ನು ಆಗಿನ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ 2019ರಲ್ಲಿ ಸಿಬಿಐಗೆ ನೀಡಿತ್ತು. ಸಿಬಿಐಗೆ ಪ್ರಕರಣವನ್ನು ವಹಿಸಿದ್ದನ್ನು ಪ್ರಶ್ನೆ ಮಾಡಿದ್ದ ಡಿ.ಕೆ. ಶಿವಕುಮಾರ್‌ ಕೋರ್ಟ್‌ ಮೊರೆ ಹೋಗಿದ್ದರು. ಎಫ್ಐಆರ್ ಹಾಕದೇ ಕೇಂದ್ರೀಯ ತನಿಖಾ ತಂಡಕ್ಕೆ ನೀಡಿದ್ದು ಸರಿಯಲ್ಲ ಎಂದು ಕೋರ್ಟ್‌ನಲ್ಲಿ ಡಿಕೆಶಿ ಪ್ರಶ್ನೆ ಮಾಡಿದ್ದರು.

ಅಲ್ಲದೆ ಇದೇ ಪ್ರಕರಣದಲ್ಲಿ ಸುಮಾರು ಐದು ತಿಂಗಳುಗಳ ಕಾಲ ಡಿ.ಕೆ. ಶಿವಕುಮಾರ್‌ ಜೈಲು ಪಾಲಾಗಿದ್ದರು. ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ಕೊನೆಗೆ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆಯಲಾಗಿತ್ತು. ಈ ನಡುವೆ ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿತ್ತು. ಇಲ್ಲಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ಸಿಬಿಐ ವಿಚಾರಣೆಯನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನೆ ಮಾಡಿದ ಡಿ.ಕೆ. ಶಿವಕುಮಾರ್ ದ್ವಿಸದಸ್ಯ ಪೀಠಕ್ಕೆ ಅಪೀಲು ಹೋಗಿದ್ದಾರೆ. ಈ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದೆ. ಆದರೆ, ಈ ಪ್ರಕರಣವನ್ನು ಸಂಪುಟದ ಮುಂದಿಟ್ಟು ವಾಪಸ್‌ ಪಡೆಯಲಾಗಿತ್ತು.

ಇದನ್ನೂ ಓದಿ: JP Nadda: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಜೆ.ಪಿ. ನಡ್ಡಾ ರಾಜೀನಾಮೆ; ಚುನಾವಣೆ ಸ್ಪರ್ಧೆ ಫಿಕ್ಸ್?

ಈಗ ಸುಪ್ರೀಂ ಕೋರ್ಟ್‌ ಸಹ ಇಡಿ ಹೂಡಿದ್ದ ಇಡೀ ಪ್ರಕರಣವನ್ನೇ ರದ್ದುಗೊಳಿಸಿರುವುದರಿಂದ ಡಿ.ಕೆ. ಶಿವಕುಮಾರ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

54 ದಿನ ತಿಹಾರ್‌ ಜೈಲಲ್ಲಿದ್ದ ಡಿಕೆಶಿ

ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2019 ರಲ್ಲಿ ಇ.ಡಿ. ಪ್ರಕರಣವನ್ನು ದಾಖಲು ಮಾಡಿಕೊಂಡಿತ್ತು. ಆದಾಯ ತೆರಿಗೆ ಇಲಾಖೆಯ ದೂರಿನ ಮೇರೆಗೆ ಐಟಿ ಕಾಯ್ದೆ ಹಾಗೂ ಐಪಿಸಿ 120B ಅಡಿ ಪ್ರಕರಣ ದಾಖಲಾಗಿದ್ದರಿಂದ ತೀವ್ರತೆಯನ್ನು ಪಡೆದುಕೊಂಡಿತ್ತು. ಈ ಕೇಸ್‌ನಲ್ಲಿ ಐಟಿ ಪ್ರಕರಣವನ್ನು ಇಡಿಗೆ ವರ್ಗಾವಣೆ ಮಾಡಿತ್ತು. ಐಟಿ ದೂರಿನ ಹಿನ್ನೆಲೆಯಲ್ಲಿ ಇಸಿಐಆರ್‌ (ECIR) ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್‌ಗೆ ನೋಟಿಸ್‌ ನೀಡಿದ್ದರು. ಇಡಿ ನೋಟಿಸ್ ಪ್ರಶ್ನಿಸಿ ಡಿಕೆಶಿ ಹೈಕೋರ್ಟ್ ಮೊರೆಹೋಗಿದ್ದರು. ಐಟಿ ಪ್ರಕರಣದಲ್ಲಿ ಇಡಿ ಪ್ರವೇಶ ಮಾಡಿರೋದನ್ನು ಪ್ರಶ್ನೆ ಮಾಡಿದ್ದರು. ಅಂದಿನ ನ್ಯಾ. ಅರವಿಂದ ಕುಮಾರ್ ನೇತೃತ್ವದ ಪೀಠ ಇಡಿ ನೋಟಿಸ್‌ ನೀಡಿದ್ದ ಕ್ರಮವನ್ನು ಎತ್ತಿ ಹಿಡಿದಿತ್ತು.

ಆ ಸಂದರ್ಭದಲ್ಲಿ ಡಿಕೆಶಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿತ್ತು. ಇದೇ ವೇಳೆ ಡಿಕೆಶಿಗೆ ವಿಚಾರಣೆ ಹಾಜರಾಗಲು ಮತ್ತೊಂದು ನೋಟಿಸ್ ಅನ್ನು ಜಾರಿ ಮಾಡಲಾಗಿತ್ತು. ವಿಚಾರಣೆಗೆಂದು ದೆಹಲಿಗೆ ಬಂದಿದ್ದ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಆಗ ಡಿ.ಕೆ. ಶಿವಕುಮಾರ್ ಒಟ್ಟು 54 ದಿನ ದೆಹಲಿಯ ತಿಹಾರ್ ಜೈಲಿನಲ್ಲಿದ್ದರು. ಬಳಿಕ ದೆಹಲಿಯ ರೋಸ್ ಅವೆನ್ಸೂ ಕೋರ್ಟ್‌ಗೆ ಇಡಿ ಚಾರ್ಜ್‌ಶೀಟ್ ಸಲ್ಲಿಸಿತ್ತು.

ಆದರೆ, ಇದೇ ವೇಳೆ ಇಡಿ ನೋಟಿಸ್ ಕುರಿತು ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದ ಪ್ರಕರಣದ ಸುದೀರ್ಘ ವಿಚಾರಣೆ ನಡೆಯುತ್ತಲಿತ್ತು. ಈಗ ಸುಪ್ರಿಂಕೋರ್ಟ್‌ನ ನ್ಯಾ. ಸೂರ್ಯಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಆದೇಶವನ್ನು ಹೊರಡಿಸಿದ್ದು, ಇಡಿಯ ಪ್ರಕ್ರಿಯೆ ಕಾನೂನು ಬಾಹಿರ ಎಂದು ಹೇಳಿದೆ. ಈ ಮೂಲಕ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

VISTARANEWS.COM


on

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ ಮಾಡಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್‌ ಪರೇಡ್‌ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಆರ್‌.ಎನ್‌.ರವಿ ಅವರು ಸುವೇಂದು ಅಧಿಕಾರಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು. ದೇವರ ಹೆಸರಿನಲ್ಲಿ ಸುವೇಂದು ಅಧಿಕಾರಿ ಪ್ರಮಾಣ ಸ್ವೀಕರಿಸಿದರು.

ಇದೇ ವೇಳೆ ಬಿಜೆಪಿಯ ಹಿರಿಯ ನಾಯಕರಾದ ದಿಲೀಪ್‌ ಘೋಷ್‌, ಅಗ್ನಿಮಿತ್ರಾ ಪಾಲ್‌, ಅಶೋಕ್‌ ಕೀರ್ತನಿಯಾ, ಕ್ಷುದಿರಾಮ್‌ ಟುಡು, ನಿಶಿತ್‌ ಪ್ರಾಮಾಣಿಕ್‌ ಅವರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು..

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿತಿನ್‌ ಗಡ್ಕರಿ, ಧರ್ಮೇಂದ್ರ ಪ್ರಧಾನ್‌, ಶಿವರಾಜ್‌ ಸಿಂಗ್‌ ಚೌಹಾಣ್‌, ಸುರೇಶ್‌ ಗೋಪಿ ಭಾಗವಹಿಸಿದ್ದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ರವೀಂದ್ರನಾಥ ಠಾಗೂರ್‌ ರವರ ಜಯಂತಿ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ರು. ಸಮಾರಂಭದ ವೇದಿಕೆಗೆ ಆಗಮಿಸಿದ ಮೋದಿ, ಪಶ್ಚಿಮ ಬಂಗಾಳದ ಅತ್ಯಂತ ಹಿರಿಯ ಬಿಜೆಪಿ ಕಾರ್ಯಕರ್ತನ ಕಾಲಿಗೆ ನಮಸ್ಕರಿಸಿದ್ರು.

ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿದ್ದಾರೆ.

Get smarter responses, upload files a

Continue Reading

ದೇಶ

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

VISTARANEWS.COM


on

Rakshit Shetty Richard Anthony Produce By Hombale

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೊಸ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಚುನಾವಣೆಯಲ್ಲಿ ಮಮತಾ ವಿರುದ್ಧ ಸೆಣಸಿ ಗೆದ್ದಿರುವ ಸುವೇಂದು ಅಧಿಕಾರಿ ಹೊಸ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಶನಿವಾರ ಬೆಳಗ್ಗೆ ೧೧ ಗಂಟೆಗೆ ಸುವೇಂದು ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಪ.ಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು. ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಹೆಸರು ಇತಿಹಾಸದಲ್ಲಿ ದಾಖಲಾಗಲಿದೆ.
ಇದೇ ವೇಳೆ ಯಾವುದೇ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸದೇ ಇರಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

ದೇಶ

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಸಿಎಂ ರೇಸ್‌‌ನಲ್ಲಿರೋ ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌‌ ಹತ್ಯೆ ಆಗಿದೆ. ಆದ್ರೆ, ದುಷ್ಕರ್ಮಿಗಳ ಟಾರ್ಗೆಟ್‌‌‌‌‌ ಇದಿದ್ದು, ಸುವೇಂದು ಅಧಿಕಾರಿ, ಚಂದ್ರನಾಥ್‌ ಸುವೇಂದು‌ ಅವರ ಕಾರಿನಲ್ಲೇ ಮನೆಗೆ ಹೋಗ್ತಿದ್ದಾಗ ದುಷ್ಕಿರ್ಮಿಗಳು ಅಡ್ಡಗಟ್ಟಿ ಪಿಸ್ತೂಲ್‌‌ನಿಂದ ಶೂಟೌಟ್‌‌‌‌ ಮಾಡಿ ಕೊಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಆಗ್ಬೇಕೆಂದು ಕಣ್ಣೀರು ಹಾಕುತ್ತಲೆ ಸುವೇಂದು ಅಧಿಕಾರಿ ಗುಡುಗಿದ್ದಾರೆ. ಇದೆಲ್ಲದರ ಮಧ್ಯೆ ಪಶ್ಚಿಮ ಬಂಗಾಳದ ಗದ್ದುಗೆ ಯಾರು ಏರ್ತಾರೆ ಅನ್ನೋ ಕುತೂಹಲಕ್ಕೆ ನಾಳೆ ಬ್ರೇಕ್‌ ಬೀಳಲಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಹ ವೀಕ್ಷಕ ಒಡಿಶಾದ ಮುಖ್ಯಮಂತ್ರಿ ಮೋಹನ್ ಮಾಝಿ ನೇತೃತ್ವದಲ್ಲಿ ನಾಳೆ ಸಂಜೆ 4 ಗಂಟೆಗೆ ನೂತನ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲೇ ಪಶ್ಚಿಮ ಬಂಗಾಳದ ಸಿಎಂ ಯಾರಾಗಬೇಕು ಅನ್ನೋದು ಫೈನಲ್‌ ಆಗಲಿದೆ.
ಇವತ್ತಿಗೆ ಮಮತಾ ಬ್ಯಾನರ್ಜಿ ಆಡಳಿತಾವಧಿ ಮುಕ್ತಾಯಗೊಂಡಿದೆ. ಮೇ 9ರಂದು ನೂತನ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸುವೇಂದು ಅಧಿಕಾರಿಯವರ ಜನಪ್ರಿಯತೆಯೋ ಅಥವಾ ದಿಲೀಪ್ ಘೋಷ್, ಸಮಿಕ್ ಭಟ್ಟಾಚಾರ್ಯ ಅವರ ಸಂಘಟನಾ ನಿಷ್ಠೆಯೋ? ಹೈಕಮಾಂಡ್ ಯಾರಿಗೆ ಮನ್ನಣೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading
Advertisement
Latest47 minutes ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ18 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ18 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ18 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ2 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ2 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ2 days ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌