Budget 2024: ಕೇಂದ್ರ ಬಜೆಟ್‌ಗೆ FKCCI ಸಂತಸ; ಭವಿಷ್ಯದ ಭಾರತ ಬಗ್ಗೆ ಸ್ಪಷ್ಟತೆ - Vistara News

ರಾಜಕೀಯ

Budget 2024: ಕೇಂದ್ರ ಬಜೆಟ್‌ಗೆ FKCCI ಸಂತಸ; ಭವಿಷ್ಯದ ಭಾರತ ಬಗ್ಗೆ ಸ್ಪಷ್ಟತೆ

Budget 2024: ಯಾವ ರೀತಿ ದೇಶವನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಎಂಬುದನ್ನು ಕೇಂದ್ರ ಸರ್ಕಾರ ವಿವರಿಸಿದೆ. ಕನೆಕ್ಟಿವಿಟಿ, ಇನ್ಫ್ರಾಸ್ಟ್ರಕ್ಚರ್‌ಗೆ ಪ್ರಾಮುಖ್ಯತೆಯನ್ನು ಕೊಟ್ಟಿದ್ದಾರೆ. ಸ್ಟಾರ್ಟಪ್‌ಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಹಣವನ್ನು ಮೀಸಲಿಟ್ಟಿದ್ದಾರೆ. ಉತ್ತಮ ಬಜೆಟ್‌ ಇದಾಗಿದೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಹೇಳಿದ್ದಾರೆ.

VISTARANEWS.COM


on

Budget 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಧ್ಯಂತರ ಬಜೆಟ್‌ (Budget 2024) ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ ಬಗ್ಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ – FKCCI) ಸಂತಸ ವ್ಯಕ್ತಪಡಿಸಿದೆ. ಸಂಪರ್ಕ ಹಾಗೂ ಮೂಲ ಸೌಕರ್ಯಕ್ಕೆ ಆದ್ಯತೆ ಕೊಡಲಾಗಿದೆ. ಇದೊಂದು ದೂರದೃಷ್ಟಿ ಬಜೆಟ್‌ ಎಂದು ಬಣ್ಣಿಸಿದೆ.

ಕೇಂದ್ರ ಬಜೆಟ್ ಕುರಿತು ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೇಂದ್ರ ಬಜೆಟ್‌ನಲ್ಲಿ ಯಾವುದೇ ಟ್ಯಾಕ್ಸ್ ಘೋಷಿಸಿಲ್ಲ. ಯಾವ ರೀತಿ ದೇಶವನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಎಂಬುದನ್ನು ಕೇಂದ್ರ ಸರ್ಕಾರ ವಿವರಿಸಿದೆ. ಕನೆಕ್ಟಿವಿಟಿ, ಇನ್ಫ್ರಾಸ್ಟ್ರಕ್ಚರ್‌ಗೆ ಪ್ರಾಮುಖ್ಯತೆಯನ್ನು ಕೊಟ್ಟಿದ್ದಾರೆ. ಸ್ಟಾರ್ಟಪ್‌ಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಹಣವನ್ನು ಮೀಸಲಿಟ್ಟಿದ್ದಾರೆ. ಉತ್ತಮ ಬಜೆಟ್‌ ಇದಾಗಿದೆ ಎಂದು ಹೇಳಿದರು.

ಇವತ್ತಿನ ಬಜೆಟ್ ಮಂಡನೆ ಯಾವುದೇ ಹೊಸ ಟ್ಯಾಕ್ಸ್‌ ಘೋಷಣೆ ಮಾಡಿಲ್ಲ. ಸರ್ಕಾರ ನೀತಿಗಳ ಬಗ್ಗೆ ತಿಳಿಸಿದ್ದಾರೆ. Connectivity, corridor ಬಗ್ಗೆ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಡಿಜಿಟಲ್, ಸ್ಟಾರ್ಟ್ಅಪ್ ಪ್ರೋತ್ಸಾಹ ಧನದ ಕಡೆ ಗಮನ ಕೊಟ್ಟಿದ್ದಾರೆ. 1 ಲಕ್ಷ ಕೋಟಿ ರೂಪಾಯಿ ಜನರಿಗೆ ಇದರ ಉಪಯೋಗ ಆಗುತ್ತದೆ. ಟೆಕ್ನಾಲಜಿ ಕುರಿತು ಗಮನ ಕೊಡಲಾಗಿದೆ. ಇನ್ನು 1.72 ಲಕ್ಷ ಕೋಟಿ ತೆರಿಗೆ ಸಂಗ್ರಹ ಆಗಿದೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ರಮೇಶ್ ಚಂದ್ರ ಲಾಹೋಟಿ ಹೇಳಿದರು.

ಜಿಎಸ್‌ಟಿ ಮುಂದಿನ ದಿನಗಳಲ್ಲಿ ಒಂದು ನೇಷನ್, ಒಂದು ಟ್ಯಾಕ್ಸ್ ಮಾಡ್ತಾರಾ ಅಂತ‌ ನೋಡಬೇಕಿದೆ. ಟೂರಿಸಂ ಕುರಿತು ಗಮನ ಕೊಡಲಾಗಿದೆ. ನಮ್ಮ ರಾಜ್ಯದಲ್ಲಿ ಕೂಡ ಟೂರಿಸಂ ಬಗ್ಗೆ ಗಮನ ಕೊಡಲಾಗಿದ್ದು, ಇನ್ನಷ್ಟು ಗಮನಹರಿಸಬೇಕಿದೆ ಎಂದು ರಮೇಶ್ ಚಂದ್ರ ಲಾಹೋಟಿ ತಿಳಿಸಿದರು.

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ: ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ: ಆಯುಷ್ಮಾನ್ ಭಾರತ್ (Ayushman Bharat) ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ (Asha workers, Anganwadi workers) ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ತಿಳಿಸಿದ್ದಾರೆ. 2024ರ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ಅವರು ಈ ಅಂಶವನ್ನು ಪ್ರಸ್ತಾಪಿಸಿದರು.

ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆ (AB-PMJAY) ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ದ್ವಿತೀಯ ಮತ್ತು ತೃತೀಯ ಆರೈಕೆಗಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ಗಳನ್ನು ಒದಗಿಸುತ್ತದೆ. ಕಳೆದ ವರ್ಷ ಡಿಸೆಂಬರ್ 27ರವರೆಗೆ 12 ಕೋಟಿ ಕುಟುಂಬಗಳಿಗೆ ಸೇರಿದ 55 ಕೋಟಿ ಜನ ಈ ಯೋಜನೆಗೆ ಒಳಪಟ್ಟಿದ್ದರು.

ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಂಎಸ್‌ಎಂಇಗಳಿಗೆ ಸಮರ್ಪಕವಾಗಿ ಮತ್ತು ಸಮಯೋಚಿತ ಹಣಕಾಸು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.

ಉದ್ಯೋಗ ಸೃಷ್ಟಿ ಮತ್ತು ಉದ್ಯಮಶೀಲತೆಗೆ ಉತ್ತೇಜನ

ಭಾರತೀಯ ಆರ್ಥಿಕತೆ ಕಳೆದ ಒಂದು ದಶಕದಲ್ಲಿ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ. 2014ರಿಂದ ಭಾರತ ದೈತ್ಯ ಸವಾಲುಗಳನ್ನು ಎದುರಿಸಿತ್ತು. ಆದರೆ ಸರ್ಕಾರ ಈ ಅಡೆತಡೆಗಳನ್ನು ನಿವಾರಿಸಿದೆ ಮತ್ತು ರಚನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸಿದೆ. ಜನಪರ ಸುಧಾರಣೆಗಳಿಗೆ ಒತ್ತು ನೀಡಲಾಗಿದೆ. ಉದ್ಯೋಗ ಸೃಷ್ಟಿ ಮತ್ತು ಉದ್ಯಮಶೀಲತೆಗಳನ್ನು ಉತ್ತೇಜಿಸಲಾಗಿದೆ. ಅಭಿವೃದ್ಧಿ ಉಪಕ್ರಮಗಳು ಬೃಹತ್ ಪ್ರಮಾಣದಲ್ಲಿ ಜನರನ್ನು ತಲುಪಿವೆ ಎಂದು ನಿರ್ಮಲಾ ನುಡಿದರು.

ಅಂತರ್ಗತ ಅಭಿವೃದ್ಧಿ ಉಪಕ್ರಮಗಳು ವಸತಿ, ನೀರು, ವಿದ್ಯುತ್, ಅಡುಗೆ ಅನಿಲ ಮತ್ತು ಆರ್ಥಿಕ ಸೇರ್ಪಡೆಯಂತಹ ಅಗತ್ಯ ಸೇವೆಗಳೊಂದಿಗೆ ಮನೆಗಳು ಮತ್ತು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿವೆ. 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸುವ ಮೂಲಕ ಆಹಾರ ಭದ್ರತೆಗೆ ಸಂಬಂಧಿಸಿದ ಕಳವಳವನ್ನು ನಿವಾರಿಸಲಾಗಿದೆ ಎಂದು ನಿರ್ಮಲಾ ಹೇಳಿದ್ದಾರೆ.

ನಮ್ಮ ರಾಷ್ಟ್ರದ ಬೆನ್ನೆಲುಬಾಗಿರುವ ರೈತರಿಗೆ ಬೆಂಬಲವನ್ನು ಖಾತ್ರಿಪಡಿಸುವ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಕಾಲಕಾಲಕ್ಕೆ ಹೆಚ್ಚಿಸಲಾಗಿದೆ. ಮೂಲಭೂತ ಅವಶ್ಯಕತೆಗಳ ಪೂರೈಕೆಯು ಗ್ರಾಮೀಣ ಪ್ರದೇಶಗಳಲ್ಲಿ ನೈಜ ಆದಾಯದಲ್ಲಿ ಗಮನಾರ್ಹ ಹೆಚ್ಚಳಕ್ಕೆ ಕಾರಣವಾಗಿದೆ. ಸಮಾಜದ ಎಲ್ಲಾ ಜಾತಿಗಳು ಮತ್ತು ಸ್ತರಗಳನ್ನು ಒಳಗೊಳ್ಳುವ ಸಮಗ್ರ, ಅಂತರ್ಗತ ಮತ್ತು ವ್ಯಾಪಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಇದನ್ನೂ ಓದಿ: Budget 2024: ದೇಶ, ರಾಜ್ಯಕ್ಕೆ ಮೋದಿ ಕೊಡುಗೆ ಏನು? ಕೇಂದ್ರ ಬಜೆಟ್‌ ಲೈವ್‌ ಇಲ್ಲಿ ವೀಕ್ಷಿಸಿ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಮಹತ್ವಾಕಾಂಕ್ಷೆಯ ಕಡೆಗೆ ಕೆಲಸ ಮಾಡುವುದು ನಮ್ಮ ಗುರಿ. ನಮ್ಮ ಪ್ರಯತ್ನಗಳು ಸಮಾಜದ ಪ್ರತಿಯೊಂದು ವಿಭಾಗವನ್ನೂ ಒಳಗೊಳ್ಳುವ ಸಮಗ್ರ ಪ್ರಗತಿಯತ್ತ ನಿರ್ದೇಶಿಸಲ್ಪಟ್ಟಿವೆ ಎಂದು ನಿರ್ಮಲಾ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

bigbreaking

ಬಿಜೆಪಿಗೆ ಸೇರಿದ ಎಎಪಿ ದಿಗ್ಗಜ ರಾಘವ್ ಚಡ್ಡಾ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್! ಪಕ್ಷಾಂತರಕ್ಕೆ ಕೊಟ್ಟ ಕಾರಣವೇನು?

VISTARANEWS.COM


on

ರಾಷ್ಟ್ರ ರಾಜಕಾರಣದಲ್ಲಿ ಇಂದು ಭಾರಿ ಸಂಚಲನ ಮೂಡಿದ್ದು, ಆಮ್ ಆದ್ಮಿ ಪಕ್ಷದ (AAP) ಅತ್ಯಂತ ಪ್ರಭಾವಿ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಚಡ್ಡಾ ಅವರ ಈ ನಡೆ ಎಎಪಿ ಪಾಳಯಕ್ಕೆ ಅನಿರೀಕ್ಷಿತ ಪೆಟ್ಟು ನೀಡಿದೆ. ಕಳೆದ ಕೆಲವು ದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು, ಇಂದು ಕೇಸರಿ ಧ್ವಜ ಹಿಡಿಯುವ ಮೂಲಕ ದೆಹಲಿ ಮತ್ತು ಪಂಜಾಬ್ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ರಾಘವ್ ಚಡ್ಡಾ ಅವರ ಈ ಪಕ್ಷಾಂತರದ ಹಿಂದೆ ಹಲವು ದಿನಗಳಿಂದ ತಯಾರಿ ನಡೆದಿತ್ತು ಎಂಬ ಮುನ್ಸೂಚನೆಗಳು ಲಭ್ಯವಾಗಿದ್ದವು. ಇತ್ತೀಚೆಗೆ ಆಮ್ ಆದ್ಮಿ ಪಕ್ಷವು ಅವರ ಬಳಿಯಿದ್ದ ಕೆಲವು ಮಹತ್ವದ ಜವಾಬ್ದಾರಿಗಳನ್ನು ಹಿಂಪಡೆದಿದ್ದು ಅವರ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ, ಚಡ್ಡಾ ಅವರು ಕಳೆದ ಕೆಲವು ಸಮಯದಿಂದ ಬಿಜೆಪಿಯ ಕೇಂದ್ರ ನೀತಿಗಳ ವಿರುದ್ಧ ಯಾವುದೇ ಟೀಕೆಗಳನ್ನು ಮಾಡದೆ ಮೌನಕ್ಕೆ ಶರಣಾಗಿದ್ದರು. ಅಷ್ಟೇ ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಈ ಹಿಂದೆ ತಾವು ಮಾಡಿದ್ದ ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದು ವದಂತಿಗಳಿಗೆ ಪುಷ್ಟಿ ನೀಡಿತ್ತು.

ತಮ್ಮ ನಿರ್ಧಾರದ ಕುರಿತು ಮಾತನಾಡಿದ ರಾಘವ್ ಚಡ್ಡಾ, ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಧಾನಿ ಮೋದಿಯವರ ದಕ್ಷ ನಾಯಕತ್ವಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಎಎಪಿ ನಾಯಕತ್ವದೊಂದಿಗಿನ ಆಂತರಿಕ ಭಿನ್ನಾಭಿಪ್ರಾಯ ಮತ್ತು ಕಾರ್ಯವೈಖರಿಯ ಬಗ್ಗೆ ಅವರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಾಣಾಕ್ಷ ರಾಜಕಾರಣಿ ಎಂದು ಹೆಸರಾಗಿದ್ದ ಚಡ್ಡಾ ಅವರ ಸೇರ್ಪಡೆಯಿಂದ ದೆಹಲಿಯಲ್ಲಿ ಬಿಜೆಪಿಗೆ ಹೊಸ ಬಲ ಬಂದಂತಾಗಿದ್ದು, ಕೇಜ್ರಿವಾಲ್ ಪಡೆ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಈಗ ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Continue Reading

Latest

ಬಿಜೆಪಿ ನಾಯಕನ ಮಗನಿಗೆ ಹೈಕೋರ್ಟ್ ಬಿಸಿ: ಮದುವೆಯಾಗದೆ ಮಗು ನೀಡಿದ ಲವರ್‌ಗೆ ಮಾಸಿಕ 75 ಸಾವಿರ ರೂ. ಜೀವನಾಂಶ ದಂಡ

VISTARANEWS.COM


on

ಬೆಂಗಳೂರು: ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಆಕೆಯ ಮಗುವಿಗೆ ತಂದೆಯಾದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ ರಾವ್ ಪುತ್ರ ಕೃಷ್ಣ ಜೆ. ರಾವ್ ಅವರಿಗೆ ಕರ್ನಾಟಕ ಹೈಕೋರ್ಟ್ ಕಠಿಣ ಷರತ್ತು ವಿಧಿಸಿದೆ. ಆರೋಪಿಯ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ನ್ಯಾಯಾಲಯ ಸದ್ಯ ತಡೆ ನೀಡಿದ್ದರೂ, ಸಂತ್ರಸ್ತೆ ಹಾಗೂ ಮಗುವಿನ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು 75,000 ರೂಪಾಯಿ ಪಾವತಿಸುವಂತೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶಿಸಿದೆ. “ಮಗುವಿಗೆ ನೀನೇ ತಂದೆ ಎಂಬುದು ದೃಢಪಟ್ಟಿರುವಾಗ ಸಂತ್ರಸ್ತೆಯನ್ನು ಮದುವೆಯಾಗುವುದೇ ಸೂಕ್ತ” ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಖಡಕ್ ಆಗಿ ಹೇಳಿದೆ.

ಈ ಪ್ರಕರಣದ ವಿಚಾರಣೆ ವೇಳೆ ಆರೋಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಒಂದು ವೇಳೆ ಯುವತಿಯನ್ನು ಮದುವೆಯಾಗಿ ಬಂದರೆ ಮಾತ್ರ ಕ್ರಿಮಿನಲ್ ಪ್ರಕರಣವನ್ನು ಸಂಪೂರ್ಣವಾಗಿ ರದ್ದುಪಡಿಸುವುದಾಗಿ ಸ್ಪಷ್ಟಪಡಿಸಿದೆ. ಮದುವೆಯಾದ ನಂತರವೂ ಯುವತಿಯನ್ನು ತ್ಯಜಿಸಿದರೆ ಕೇಸ್ ಮತ್ತೆ ಮರುಸ್ಥಾಪನೆಯಾಗಲಿದೆ ಎಂದು ನ್ಯಾಯಾಧೀಶರು ಎಚ್ಚರಿಕೆ ನೀಡಿದ್ದಾರೆ. ಸದ್ಯದ ಆದೇಶದಂತೆ, ಆರೋಪಿಯು ಮುಂದಿನ ಒಂದು ವಾರದೊಳಗೆ ಮೊದಲ ಕಂತಿನ 75 ಸಾವಿರ ರೂಪಾಯಿಗಳನ್ನು ಪಾವತಿಸಬೇಕು ಮತ್ತು ತದನಂತರ ಪ್ರತಿ ತಿಂಗಳು ಈ ಮೊತ್ತವನ್ನು ಸಂತ್ರಸ್ತೆಗೆ ನೀಡುತ್ತಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಆರೋಪಿ ಪರ ವಕೀಲರು ಇದು ರಾಜಕೀಯ ಪ್ರೇರಿತ ಪಿತೂರಿ ಮತ್ತು ಇಬ್ಬರೂ ವಯಸ್ಕರಾಗಿದ್ದಾಗ ನಡೆದ ದೈಹಿಕ ಸಂಬಂಧ ಎಂದು ವಾದಿಸಿ ಪ್ರಕರಣ ರದ್ದತಿಗೆ ಕೋರಿದ್ದರು. ಆದರೆ, ನ್ಯಾಯಾಲಯವು ಮಗುವಿನ ಹಿತದೃಷ್ಟಿ ಮತ್ತು ಸಂತ್ರಸ್ತೆಯ ಭವಿಷ್ಯಕ್ಕೆ ಆದ್ಯತೆ ನೀಡಿದೆ. ಪುತ್ತೂರಿನ ಯುವತಿಯೊಬ್ಬಳು ನೀಡಿದ ದೂರಿನನ್ವಯ ದಾಖಲಾಗಿದ್ದ ಈ ಕ್ರಿಮಿನಲ್ ಪ್ರಕರಣವು ಈಗ ಒಂದು ಮಹತ್ವದ ತಿರುವು ಪಡೆದುಕೊಂಡಿದ್ದು, ಆರೋಪಿಯು ಸಂತ್ರಸ್ತೆಯನ್ನು ಮದುವೆಯಾಗುತ್ತಾರೋ ಅಥವಾ ಪ್ರತಿ ತಿಂಗಳು ಜೀವನಾಂಶ ನೀಡುತ್ತಾ ಕಾನೂನು ಹೋರಾಟ ಮುಂದುವರಿಸುತ್ತಾರೋ ಎಂಬುದು ಕುತೂಹಲ ಮೂಡಿಸಿದೆ.

Continue Reading

Latest

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

VISTARANEWS.COM


on

HD Revanna

ಹಾಸನ: ದಾವಣಗೆರೆ ದಂಗಲ್‌ ನಿಂದಾಗಿ ಕಾಂಗ್ರೆಸ್‌ ಪಕ್ಷದಿಂದ ಕಠಿಣ ಕ್ರಮದ ಭೀತಿಯಲ್ಲಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್‌ ವರಿಷ್ಠ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಜಮೀರ್‌ ಅವರಿಂದ ಈಗಾಗಲೇ ಸಾಕಷ್ಟು ಅನುಭವಿಸಿದ್ದೇನೆ. ರಾಜಕೀಯದಲ್ಲಿ ಶಕ್ತಿ ಬರುತ್ತೆ ಎಂದು ಹೇಳಿ ಅವರನ್ನು ಮತ್ತೆ ಪಕ್ಷ ಬರಮಾಡಿಕೊಳ್ಳುವ ಪ್ರೇಮಯವೇ ಇಲ್ಲ, ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ಶ್ರೀವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದರು. ಕೇವಲ ₹2೦೦೦ ಗ್ಯಾರಂಟಿ ಹಣದಿಂದ ಅಭಿವೃದ್ಧಿ ಸಾಧ್ಯವಿಲ್ಲ. ಮಹಿಳೆಯರು ಈ ಸಣ್ಣ ಮೊತ್ತಕ್ಕೆ ಮರುಳಾಗಬಾರದು, ಇದರಿಂದ ಅವರ ಉದ್ಧಾರ ಅಸಾಧ್ಯ ಎಂದರು. ಇಂತಹ ಗ್ಯಾರೆಂಟಿಗಳಿಂದ ರಾಜ್ಯ ಸರ್ಕಾರಗಳಿಗೆ ಸಂಬಳ ಕೊಡಲಾಗದಂತ ದುಸ್ಥಿತಿ ಎದುರಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.


ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳ ವೇತನವನ್ನು ಇನ್ನು ಕೊಟ್ಟಿಲ್ಲ ಎನ್ನುವ ಮಾಹಿತಿ ಇದೆ. ಹಾಗೆಯೇ ಕಾಂಗ್ರೆಸ್ ಆಡಳಿತ ಇರುವ ಹಿಮಾಚಲ ಪ್ರದೇಶದಲ್ಲಿಯೂ ಸರ್ಕಾರಿ ನೌಕರರ ಸಂಬಳವನ್ನು ನೀಡಲು ಪರದಾಡುತ್ತಿದೆ. ಆ ಸರ್ಕಾರವು ನೌಕರರ ಸಂಬಳವನ್ನು ಕಡಿತ ಮಾಡಿಕೊಂಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ ರಾಜ್ಯಗಳ ಅಭಿವೃದ್ಧಿ ಸಂಪೂರ್ಣವಾಗಿ ಹಳಿತಪ್ಪಿದೆ ಇದೆಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಹೊಣೆ ಎಂದರು.


ಸರಿ ಸುಮಾರು 7.2600 ಲಕ್ಷ ಕೋಟಿಗೂ ಸಾಲವನ್ನು ರಾಜ್ಯ ಸರ್ಕಾರ ಮಾಡಿದೆ. ರಾಜ್ಯದ ಪ್ರತಿಯೊಬ್ಬರ ತಲೆಯ ಮೇಲೆಯೂ ಕನಿಷ್ಠವೆಂದರೂ ಒಂದು ಲಕ್ಷ ರೂಪಾಯಿಗೂ ಅಧಿಕ ಸಾಲವಿದೆ. ಇಷ್ಟು ಸಾಲ ಮಾಡಿದರೆ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವೇ ಎಂದು ಸಚಿವ ಕುಮಾರಸ್ವಾಮಿ ಪ್ರಶ್ನಿಸಿದರು.


ಒಂದು ಕೈಯಲ್ಲಿ ಜನರಿಗೆ 2 ಸಾವಿರ ಕೊಡುತ್ತಾರೆ. ಇನ್ನೊಂದು ಕೈಯಲ್ಲಿ ತೆರಿಗೆ ಮೇಲೆ ತೆರಿಗೆ ವಿಧಿಸುತ್ತಾರೆ. ಬೆಲೆ ಏರಿಕೆಗಳ ಬಗ್ಗೆ ಹೇಳುವ ಹಾಗೆಯೇ ಇಲ್ಲ. ಇತ್ತೀಚೆಗೆ ವಿದ್ಯುತ್ ದರವನ್ನು ಹೆಚ್ಚಿಸಿದರು. ಹಾಗೆಯೇ ಮದ್ಯದ ದರವನ್ನು ಏರಿಸಿದರು. ಎಷ್ಟು ಸಾಧ್ಯವೊ ಅಷ್ಟು ಕಡೆ ಜನರನ್ನು ಕಿತ್ತು ತಿನ್ನುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಸಚಿವರು ಕಿಡಿಕಾರಿದರು.


ನನಗೆ ದೊರೆತ ಸಣ್ಣ ಅವಧಿಯಲ್ಲಿ ಇಷ್ಟೆಲ್ಲ ಕೆಲಸಗಳನ್ನು ಮಾಡಿದ್ದೇನೆ. ಸಾವಿರಾರು ಶಿಕ್ಷಕರನ್ನು ನೇರವಾಗಿ ಮತ್ತು ಪಾರದರ್ಶಕವಾಗಿ ನೇಮಕ ಮಾಡಿದ್ದೆ. ಆದರೆ ಈಗಿನ ಸರ್ಕಾರಕ್ಕೆ ಒಂದೇ ಒಂದು ನೇಮಕಾತಿ ಮಾಡುವ ಶಕ್ತಿಯು ಇಲ್ಲವಾಗಿದೆ ಎಂದು ಕೇಂದ್ರ ಸಚಿವರು ದೂರಿದರು.

Continue Reading

Latest

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

VISTARANEWS.COM


on

HD DeveGowda Wont celebrate 92nd birthday

ಬೆಂಗಳೂರು: ಬಸವ ವೇದಿಕೆವತಿಯಿಂದ ನೀಡಲಾಗುವುದ ಪ್ರಸಕ್ತ ಸಾಲಿನ ಬಸವಶ್ರೀ ಪ್ರಶಸ್ತಿ ಹಾಗೂ ವಚನ ಸಾಹಿತ್ಯ ಪ್ರಶಸ್ತಿಯನ್ನು ಕ್ರಮವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರನ್ನು ಆಯ್ಕೆ ಮಾಡಲಾಗಿದೆ.


ಸುದ್ದಿಗೋಷ್ಠಿಯಲ್ಲಿ ಗುರುವಾರ ಈ ವಿಷಯ ತಿಳಿಸಿದ ವೇದಿಕೆಯ ಅಧ್ಯಕ್ಷ ಸಿ.ಸೋಮಶೇಖರ್‌, ಬಸವ ಶ್ರೀ ಪ್ರಶಸ್ತಿ ಬಸವಣ್ಣನವರ ಪುತ್ಥಳಿ, ಸ್ಮರಣಿಕೆಯನ್ನೊಳಗೊಂಡಿದೆ. ವಚನ ಸಾಹಿತ್ಯ ಪ್ರಶಸ್ತಿ ಹತ್ತು ಸಾವಿರ ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿದೆ ಎಂದು ತಿಳಿಸಿದರು.


ಬರುವ ಏ.27 ರ ಸಂಜೆ 5:30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ಸಾನಿಧ್ಯ ವಹಿಸುವರು. ಕೇಂದ್ರ ಸಚಿವ ವಿ.ಸೋಮಣ್ಣ ಸಮಾರಂಭ ಉದ್ಘಾಟಿಸಲಿದ್ದೂ, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ಸಚಿವ ಹೆಚ್.ಕೆ.ಪಾಟೀಲ್‌ ಪ್ರಶಸ್ತಿ ಪ್ರದಾನ ಮಾಡುವರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು ಎಂದು ಮಾಹಿತಿ ನೀಡಿದರು.

Continue Reading
Advertisement
Latest4 hours ago

ಇನ್ನು ಮುಂದೆ ಒಳಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Latest4 hours ago

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

Latest5 hours ago

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ ಜಾತಿಗಳಿಗೆ ತಲಾ ಶೇ. 5.25 ಸ್ಪೃಶ್ಯ ಜಾತಿಗೆ ಶೇ.4.5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

Latest5 hours ago

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

Latest5 hours ago

ಇಂಜಿನಿಯರಿಂಗ್‌ ಶುಲ್ಕ: ಅಂತಿಮ ನಿರ್ಧಾರ ಮಾಡಿಲ್ಲ: ಸಚಿವ ಡಾ. ಎಂ.ಸಿ. ಸುಧಾಕರ್‌

Latest6 hours ago

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್: ಒಪ್ಪಂದಕ್ಕೆ ಸಹಿ

Latest6 hours ago

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಆರೋಗ್ಯ ಸ್ಥಿತಿ ಗಂಭೀರ?; ಕೃತಕ ಕಾಲು,ಸೀಳು ತುಟಿ, ಒಡೆದ ಮುಖ…

bigbreaking6 hours ago

ಬಿಜೆಪಿಗೆ ಸೇರಿದ ಎಎಪಿ ದಿಗ್ಗಜ ರಾಘವ್ ಚಡ್ಡಾ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್! ಪಕ್ಷಾಂತರಕ್ಕೆ ಕೊಟ್ಟ ಕಾರಣವೇನು?

Latest6 hours ago

ಒಳಮೀಸಲಾತಿ ನೀಡುವ ಬದಲು ಗೊಂದಲ ಸೃಷ್ಟಿಸುತ್ತಿದ್ದೀರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ

Latest7 hours ago

ಬಿಜೆಪಿ ನಾಯಕನ ಮಗನಿಗೆ ಹೈಕೋರ್ಟ್ ಬಿಸಿ: ಮದುವೆಯಾಗದೆ ಮಗು ನೀಡಿದ ಲವರ್‌ಗೆ ಮಾಸಿಕ 75 ಸಾವಿರ ರೂ. ಜೀವನಾಂಶ ದಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌