ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ (BK Bhattacharya) (83) ಅವರು ಶನಿವಾರ (ನ.18) ನಿಧನರಾಗಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ (Retired IAS officer) ಆಗಿರುವ ಅವರಿಗೆ ಎರಡು ದಿನಗಳ ಹಿಂದೆ ಉಸಿರಾಟದ ಸಮಸ್ಯೆ (Shortness of breath) ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರು ಈ ಹಿಂದೆ ಸಿದ್ದರಾಮಯ್ಯ (CM Siddaramaiah) ಅವರು ಹಣಕಾಸು ಸಚಿವರಾಗಿದ್ದಾಗ ಅವರೊಂದಿಗೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಪತ್ನಿ ತೆರೆಸಾ ಭಟ್ಟಾಚಾರ್ಯ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಡಿಸೆಂಬರ್ 5, 1940 ರಂದು ಜನಿಸಿದ ಬಿ.ಕೆ. ಭಟ್ಟಾಚಾರ್ಯ ಅವರು, 2000ನೇ ಇಸ್ವಿಯ ಡಿಸೆಂಬರ್ 30ರಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು.
ಭಟ್ಟಾಚಾರ್ಯ ಅವರ ನಿಧನಕ್ಕೆ ಐಎಎಸ್ ಅಧಿಕಾರಿಗಳ ಸಂಘದ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರೂ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Congress Karnataka : ಬೆಂಗಳೂರು ಜಿಲ್ಲೆಯನ್ನು 5 ಭಾಗ ಮಾಡಿದ ಕಾಂಗ್ರೆಸ್; ಐವರು ಜಿಲ್ಲಾಧ್ಯಕ್ಷರ ನೇಮಕ
ಪ್ರಾಮಾಣಿಕ ಅಧಿಕಾರಿಯಾಗಿದ್ದರು: ಸಿಎಂ ಸಿದ್ದರಾಮಯ್ಯ
ಕಳೆದ ದಿನ ರಾತ್ರಿ ಅತ್ಯಂತ ಹಿರಿಯ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಶ್ರೀ ಬಿ.ಕೆ. ಭಟ್ಟಾಚಾರ್ಯ ಅವರು ನಿಧನರಾಗಿದ್ದಾರೆ ಎಂದು ತಿಳಿದು ನನಗೆ ದುಃಖವಾಗಿದೆ. ನಾನು 1994-1999 ರ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದಾಗ ಅವರು ನನ್ನೊಂದಿಗೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಾಮಾಣಿಕ ಅಧಿಕಾರಿಯಾಗಿದ್ದರು ಮತ್ತು ನಾನು ಅವರೊಂದಿಗೆ ಕೆಲಸ ಮಾಡುವುದನ್ನು ಬಹಲ ಇಷ್ಟಪಟ್ಟಿದ್ದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ.