Gali Janardana Reddy : ಗಣಿ ಧಣಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಮಡಿಲಿಗೆ, ಕಲ್ಯಾಣದಲ್ಲಿ ಲಾಭ ನಿರೀಕ್ಷೆ - Vistara News

ರಾಜಕೀಯ

Gali Janardana Reddy : ಗಣಿ ಧಣಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಮಡಿಲಿಗೆ, ಕಲ್ಯಾಣದಲ್ಲಿ ಲಾಭ ನಿರೀಕ್ಷೆ

Gali Janardhana Reddy : ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿ ಸೇರಿದ್ದಾರೆ. ಇದರಿಂದ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಲಾಭವಾಗುವ ನಿರೀಕ್ಷೆ ಇದೆ.

VISTARANEWS.COM


on

Gali Janarhana Reddy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ ಮೇಲೆ ಮುನಿಸಿಕೊಂಡು ಕಳೆದ ವಿಧಾನಸಭಾ ಚುನಾವಣೆಯ (Assembly Election 2023) ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya pragati Party) ಸ್ಥಾಪನೆ ಮಾ‌ಡಿ ಸಡ್ಡು ಹೊಡೆದಿದ್ದ ಗಾಲಿ ಜನಾರ್ದನ ರೆಡ್ಡಿ (Gali Janardana Reddy) ಅವರು ಕಮಲ ಪಾಳಯಕ್ಕೆ ಮರಳಿದ್ದಾರೆ (Janardhana Reddy rejoins Congress). ಫೆಬ್ರವರಿ 27ರಂದು ನಡೆದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿದ್ದ ಅವರು ಲೋಕಸಭಾ ಚುನಾವಣೆಗೆ (Lok Sabha Election 2024) ಮುನ್ನ ಬಿಜೆಪಿಗೆ ಬಲ ತುಂಬಿದ್ದಾರೆ. ಅವರ ಮರು ಸೇರ್ಪಡೆಯಿಂದ ಬಿಜೆಪಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಲಾಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್‌, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ಅವರು ಭಾಗಿಯಾಗಿದ್ದಾರೆ. ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು. ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ. ಅವರು ನಾಯಕರು ಮತ್ತು ಹಿಂಬಾಲಕರನ್ನು ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಪಕ್ಷಕ್ಕೆ ಸ್ವಾಗತ ಮಾಡಿದರು.

ಮೋದಿ ಅವರ ನಾಯಕತ್ವ ಮೆಚ್ಚಿ ಬಂದಿದ್ದಾರೆ ಎಂದ ವಿಜಯೇಂದ್ರ

ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಪಕ್ಷಕ್ಕೆ ಬಂದಿರುವುದು ಬಹಳ ಸಂತೋಷದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಗಾಲಿ ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಗಾಲಿ ಜನಾರ್ದನ ರೆಡ್ಡಿ ಅವರು, ತಾವೇ ಕಟ್ಟಿದ ಪಕ್ಷವನ್ನು ವಿಸರ್ಜನೆ ಮಾಡಿ ಬಿಜೆಪಿಯೊಂದಿಗೆ ವಿಲೀನ ಮಾಡಿದ್ದಾರೆ. ಇದರಿಂದ ಬಿಜೆಪಿಗೆ ಶಕ್ತಿ ಬಂದಂತಾಗಿದೆ. ಮೋದಿ ಅವರ ನಾಯಕತ್ವ ಮೆಚ್ಚಿ ಮರು ಸೇರ್ಪಡೆ ಆಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

Gali Janarhana Reddy1
ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಂದಿಗೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ʻʻಲೋಕಸಭೆಯಲ್ಲಿ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ದಿನೇದಿನೆ ಮೋದಿ ಅವರ ಪರ ವಾತಾವರಣ ಹೆಚ್ಚುತ್ತಿದೆ. ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯ ರೂಪಿಸಲಿದೆ‌ʼʼ ಎಂದು ಹೇಳಿದ್ದಾರೆ.

ಬೆಳಗ್ಗೆ ಹೋಗಿ ಮಧ್ಯಾಹ್ನ ಮರಳಿ ಬಂದ ಹಾಗೆ ಅನಿಸ್ತಿದೆ ಎಂದ Gali Janardana Reddy

ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡುತ್ತಿದ್ದೇನೆ. ನನ್ನ ಕಷ್ಟದ ಕಾಲದಲ್ಲಿ ನನ್ನ ಬೆನ್ನಿಗೆ ನಿಂತ ಎಲ್ಲಾ ಕಾರ್ಯಕರ್ತರಿಗೂ ವಂದನೆ ಸಲ್ಲಿಸ್ತೇನೆ. ನಾವೆಲ್ಲರೂ ಸೇರಿ ಬಿಜೆಪಿಗೆ ಸೇರ್ಪಡೆ ಆಗಿದ್ದೇವೆ ಎಂದು ಹೇಳಿದರು.

ʻʻದೇಶದ ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಿನಂತೆ ಕೆಲಸ‌ ಮಾಡಿರುವ ಮೋದಿ ಅವರಿಗೆ ವಂದನೆಗಳು. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿ, ಬಾಹ್ಯ ಬೆಂಬಲ ಬೇಡ. ಬಿಜೆಪಿಗೆ ಬಂದು ಕೆಲಸ ಮಾಡಿ ಅಂತ ಆಹ್ವಾನ ನೀಡಿದರು. ಅವರ ಆಹ್ವಾನ ಸ್ವೀಕರಿಸಿ ಬಂದಿದ್ದೇನೆ. ಇದು ನನ್ನ ಪೂರ್ವ ಜನ್ಮದ ಪುಣ್ಯʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಬಿ.ಎಸ್‌. ಯಡಿಯೂರಪ್ಪ ಅವರು ನನಗೆ ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರು. ಯಡಿಯೂರಪ್ಪ ಅವರು ಸಿಎಂ‌ ಆಗಿದ್ದಾಗ ಅವರ ಕ್ಯಾಬಿನೆಟ್‌ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಈಗ ಅವರ ಸುಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆಗಿದ್ದಾರೆ. ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರೋದು ನನ್ನ ಪುಣ್ಯ. ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ, ಕೆಲಸ ಮಾಡುತ್ತೇವೆ ಎಂದು ಹೇಳಿದರು.

ʻʻಎಲ್ಲಾ ಏಳುಬೀಳುಗಳನ್ನು ನೋಡಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿರೋ ಖುಷಿ ಇದೆ. ಕೆಲವು ಕಾರಣದಿಂದ ಹೊರಗೆ ಹೋಗಿದ್ದೆ. 13 ವರ್ಷಗಳ ಬಳಿಕ ವಾಪಸ್ ಬಂದಿದ್ದೇನೆ ಅನಿಸುತ್ತಿಲ್ಲ. ಬೆಳಗ್ಗೆ ಹೋಗಿ, ಮಧ್ಯಾಹ್ನ ಬಂದಿದ್ದೇನೆ ಅನಿಸುತ್ತಿದೆʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ : Rekha Patra: ಸಂದೇಶ್‌ಖಾಲಿ ಸಂತ್ರಸ್ತೆಗೆ ಟಿಕೆಟ್‌ ನೀಡಿದ ಬಿಜೆಪಿ; ಯಾರಿವರು ರೇಖಾ ಪಾತ್ರಾ?

Gali Janardana Reddy ಅಜ್ಞಾತವಾಸ ಮುಗಿಸಿ ಮರಳಿದ ಶ್ರೀರಾಮ ಎಂದ ಶ್ರೀರಾಮುಲು

ಜನಾರ್ದನ ರೆಡ್ಡಿ ಅವರ ಪಕ್ಷ ಮರು ಸೇರ್ಪಡೆಯಿಂದ ಅವರ ಗೆಳೆಯ ಹಾಗೂ ಬಳ್ಳಾರಿ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು, ಜನಾರ್ದನ ರೆಡ್ಡಿ ಅವರು ರಾಜಕೀಯ ಅಜ್ಞಾತವಾಸ ಮುಗಿಸಿ ಬಿಜೆಪಿಗೆ ವಾಪಸು ಬರ್ತಿದ್ದಾರೆ. ಅವರು ಬಿಜೆಪಿಗೆ ಬರುವುದರಿಂದ ರಾಜಕೀಯವಾಗಿ ನಮಗೆ ಲಾಭ ಆಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ನಮಗೆ ಲಾಭ ಆಗಲಿದೆ. ನಮಗೆ ಈ ಬೆಳವಣಿಗೆ ಹೆಚ್ಚು ಶಕ್ತಿ ತಂದಿದೆ. ರಾಷ್ಟ್ರೀಯ ನಾಯಕರು ರೆಡ್ಡಿ ಬಿಜೆಪಿಗೆ ಬರಲು ಕಾರಣರಾಗಿದ್ದಾರೆ. ಮೋದಿ ಅವರನ್ನು ಮತ್ತೊಮ್ಮೆ ಪಿಎಂ ಮಾಡಲು ಈ ನಿರ್ಧಾರ ಎಂದು ಹೇಳಿದರು ಶ್ರೀರಾಮುಲು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಈ ಬೆಳವಣಿಗೆ ಆಗಿದ್ದರೆ ಲಾಭ ಆಗುತ್ತಿತ್ತು. ಎಲ್ಲವೂ ರಾಷ್ಟ್ರೀಯ ನಾಯಕರ ಇಚ್ಛೆಯಂತೆ ಆಗುತ್ತಿದೆ ಎಂದು ಶ್ರೀರಾಮುಲು ಹೇಳಿದರು.

Gali Janardana Reddy ಸೇರ್ಪಡೆಯಿಂದ ಬಿಜೆಪಿಗೆ ಏನು ಲಾಭ?

ಗಾಲಿ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿ ಸೇರುವುದರಿಂದ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಕಮಲ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ.

ಅದರಲ್ಲೂ ಮುಖ್ಯವಾಗಿ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರಿಗೆ ಸಾಕಷ್ಟು ಲಾಭವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಮತಗಳು ವಿಭಜನೆ ಆಗೋದು ತಪ್ಪಲಿದೆ.

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಪ್ರಭಾವಿ ನಾಯಕರ ಕೊರತೆಯನ್ನು ರೆಡ್ಡಿ ಸೇರ್ಪಡೆ ನೀಗಲಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ಅನಿವಾರ್ಯವಾದರೆ ರೆಡ್ಡಿ ತಂತ್ರಗಳು ಬಿಜೆಪಿಗೆ ಅನುಕೂಲವಾಗಲಿದೆ. ಯಾಕೆಂದರೆ, ಇಂಥ ತಂತ್ರಗಳನ್ನು ರೂಪಿಸುವಲ್ಲಿ ರೆಡ್ಡಿ ಅವರು ನಿಪುಣರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Lok Sabha Election 2024: ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಬಳ್ಳಾರಿ (ವಿಜಯನಗರ ಜಿಲ್ಲೆ ಒಳಗೊಂಡಂತೆ) ಜಿಲ್ಲೆಯ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 08 ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಜೂನ್ 04 ರಂದು ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

VISTARANEWS.COM


on

District administration all preparations for vote counting says DC Prashanth Kumar Mishra
Koo

ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ (Lok Sabha Election 2024) ಸಂಬಂಧ ಬಳ್ಳಾರಿ (ವಿಜಯನಗರ ಜಿಲ್ಲೆ ಒಳಗೊಂಡಂತೆ) ಜಿಲ್ಲೆಯ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 08 ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಜೂನ್ 04 ರಂದು ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.

ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜೂ.04 ರಂದು ಬೆಳಿಗ್ಗೆ 08 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 02 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 08 ಹಾಲ್‍ಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Weather Report : ನಾಗ್ಪುರದಲ್ಲಿ 56 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ; ಇದು ಸಾರ್ವಕಾಲಿಕ ದಾಖಲೆ!

ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನಿಯೋಜಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಒಟ್ಟು 112 ಟೇಬಲ್‍ಗಳಂತೆ, 150 ಎಣಿಕಾ ಮೇಲ್ವಿಚಾರಕರು, 159 ಎಣಿಕಾ ಸಹಾಯಕರು ಮತ್ತು 146 ಎಣಿಕಾ ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದ್ದು, ಎರಡನೇ ಹಂತದ ತರಬೇತಿಯನ್ನೂ ನೀಡಲಾಗುವುದು. 121 ಜನರಿಗೆ ಈಗಾಗಲೆ ಕೌಂಟಿಂಗ್ ಏಜೆಂಟ್ ಆಗಿ ವೀಕ್ಷಣೆಗೆ ಪಾಸ್ ನೀಡಲಾಗಿದೆ ಎಂದರು.

88-ಹಡಗಲಿ ಕ್ಷೇತ್ರದಲ್ಲಿ ಒಟ್ಟು 218 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 16 ಸುತ್ತು ಮತ ಎಣಿಕೆ ನಡೆಯಲಿದೆ. 89-ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, 19 ಸುತ್ತು ಮತ ಎಣಿಕೆ ನಡೆಯಲಿದೆ. 90-ವಿಜಯನಗರ ಕ್ಷೇತ್ರದಲ್ಲಿ ಒಟ್ಟು 259 ಮತಗಟ್ಟೆಗಳಿದ್ದು, ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: T20 World Cup 2024: ಐನಾಕ್ಸ್‌ ದೈತ್ಯ ಪರದೆಯಲ್ಲೂ ಮೂಡಿಬರಲಿದೆ ಭಾರತದ ಪಂದ್ಯಗಳು

91-ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 242 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 18 ಸುತ್ತು ಮತ ಎಣಿಕೆ ನಡೆಯಲಿದೆ. 93-ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 235 ಮತಗಟ್ಟೆಗಳಿದ್ದು, 17 ಸುತ್ತು. 94-ಬಳ್ಳಾರಿ ನಗರ ಕ್ಷೇತ್ರದಲ್ಲಿ 261 ಮತಗಟ್ಟೆಗಳಿದ್ದು, 19 ಸುತ್ತು. 95-ಸಂಡೂರು ಕ್ಷೇತ್ರದಲ್ಲಿ ಒಟು 253 ಮತಗಟ್ಟೆಗಳಿದ್ದು, 19 ಸುತ್ತು ಹಾಗೂ 96-ಕೂಡ್ಲಿಗಿ ಕ್ಷೇತ್ರದಲ್ಲಿ 250 ಮತಗಟ್ಟೆಗಳಿದ್ದು, ಒಟ್ಟು 18 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.
ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಚುರಪಡಿಸಲು ಅನುವಾಗುವಂತೆ ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುವುದು ಎಂದರು.

ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಪೊಲೀಸ್ ಅಧಿಕಾರಿ, ಸಿಬ್ಬಂದಿ ನಿಯೋಜನೆ

ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕೇಂದ್ರವಾದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ 01-ಎಸ್‍ಪಿ, 02-ಎಎಸ್ಪಿ, 05-ಡಿವೈಎಸ್ಪಿ, 15-ಸಿಪಿಐ, 25-ಪಿಎಸ್‍ಐ, 40-ಎಎಸ್‍ಐ, 250-ಪಿಸಿ, 04-ಕೆಎಸ್‍ಆರ್‍ಪಿ, 04 ಡಿ.ಆರ್ ತಂಡ ಸಹಿತ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್ ತಿಳಿಸಿದರು.

ಇದನ್ನೂ ಓದಿ: Forest Man Of India: ಇವರೇ ನೋಡಿ ಭಾರತದ ಫಾರೆಸ್ಟ್‌ ಮ್ಯಾನ್‌; ಏಕಾಂಗಿಯಾಗಿ 1,360 ಎಕ್ರೆಯಲ್ಲಿ ಕಾಡು ಬೆಳೆಸಿದ ಸಾಹಸಿ

ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

Lok Sabha Election 2024

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

ಲೋಕಸಭಾ ಚುನಾವಣೆ ಕೊನೆಯ ಹಂತದಲ್ಲಿದೆ. ಈಗ ಎಲ್ಲರ ದೃಷ್ಟಿ ಫಲಿತಾಂಶದತ್ತ ನೆಟ್ಟಿದೆ. ಈ ನಡುವೆ ಎಕ್ಸಿಟ್ ಪೋಲ್ ನುಡಿಯುವ ಭವಿಷ್ಯದ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ. ಕಳೆದ ನಾಲ್ಕು ಲೋಕ ಸಭಾ ಚುನಾವಣೆಯಲ್ಲಿ ಎಕ್ಸಿಟ್ ಪೋಲ್ (Exit Poll) ನುಡಿದಿರುವ ಭವಿಷ್ಯ ಎಷ್ಟು ನಿಜವಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ. ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

Exit Polls
Koo

ಲೋಕಸಭೆ ಚುನಾವಣೆ-2024ರ (Loksabha election-2024) ಕೊನೆಯ ಹಂತದ ಮತದಾನ (voting) ಮುಗಿದ ಬಳಿಕ ಪ್ರಸಾರವಾಗಲಿರುವ ಎಕ್ಸಿಟ್ ಪೋಲ್ ಗಳ (Exit Poll) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಜೂನ್ 1ರಂದು ಎಂಟು ರಾಜ್ಯಗಳ (states) 59 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಸಂಜೆ 6:30ಕ್ಕೆ ಮತಗಟ್ಟೆ ಸಮೀಕ್ಷೆ ಪ್ರಕಟವಾಗಲಿದೆ.

ಅಭಿಪ್ರಾಯ ಸಂಗ್ರಹಕ್ಕಿಂತ (opinion polls) ಎಕ್ಸಿಟ್ ಪೋಲ್ ಭಿನ್ನವಾಗಿರುತ್ತದೆ. ಎಕ್ಸಿಟ್ ಪೋಲ್ ಮತದಾನ ಮುಗಿದ ಅನಂತರ ತೆಗೆದುಕೊಳ್ಳಲಾಗುವ ಮತದಾರರ ಸಮೀಕ್ಷೆಯಾಗಿದೆ. ಜನರು ಹೇಗೆ ಮತ ಚಲಾಯಿಸಿದ್ದಾರೆ ಎಂಬ ಟ್ರೆಂಡ್ ಇದು ನೀಡುತ್ತದೆ.

ನಿರ್ದಿಷ್ಟ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯು ತನ್ನ ಪ್ರತಿಸ್ಪರ್ಧಿಗಿಂತ ಮುಂದಿದ್ದಾರೆ ಎಂಬ ನಿಖರವಾದ ಮಾಹಿತಿಯನ್ನು ಇದು ಒದಗಿಸುತ್ತದೆ. ಚುನಾವಣೆ ಆರಂಭಕ್ಕೂ ಮುನ್ನ ಅಭಿಪ್ರಾಯ ಸಂಗ್ರಹಣೆ ನಡೆಸಲಾಗುತ್ತದೆ. ಇದಕ್ಕಾಗಿ ಜನ ಯಾವ ಪಕ್ಷಕ್ಕೆ ಮತ ಹಾಕಬೇಕು ಎಂದು ಮತಗಟ್ಟೆಯವರು ಕೇಳುತ್ತಾರೆ. ಆದರೆ ಎಕ್ಸಿಟ್ ಪೋಲ್‌ಗಳಲ್ಲಿ ಜನರು ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂಬುದನ್ನು ಕಂಡುಕೊಳ್ಳುತ್ತಾರೆ.

ಎಕ್ಸಿಟ್ ಪೋಲ್‌ಗಳು ಎಷ್ಟು ನಿಖರವಾಗಿರುತ್ತದೆ?

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ.

ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಕಳೆದ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳು ಏನು ಭವಿಷ್ಯ ನುಡಿದಿವೆ ಮತ್ತು ನಿಜವಾದ ಫಲಿತಾಂಶಗಳು ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

2019ರ ಎಕ್ಸಿಟ್ ಪೋಲ್‌ಗಳು

ಇಂಡಿಯಾ ಟುಡೇ- ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಎನ್ ಡಿ ಎ: 339-365, ಯುಪಿಎ: 77-108
ನ್ಯೂಸ್ 24-ಟುಡೇಸ್ ಚಾಣಕ್ಯ ಪ್ರಕಾರ ಎನ್ ಡಿ ಎ-350, ಯುಪಿಎ-95
ನ್ಯೂಸ್ 18-ಐಪಿಎಸ್ ಒಎಸ್ ಪ್ರಕಾರ ಎನ್ ಡಿ ಎ- 336, ಯುಪಿಎ- 124
ಟೈಮ್ಸ್ ನೌ- ವಿಎಂಆರ್ ಪ್ರಕಾರ ಎನ್ ಡಿ ಎ- 306, ಯುಪಿಎ-132
ಇಂಡಿಯಾ ಟಿವಿ-ಸಿಎನ್ ಎಕ್ಸ್ ಪ್ರಕಾರ ಎನ್ ಡಿಎ-300, ಯುಪಿಎ-120
ಎಬಿಪಿ-ಸಿಎಸ್ ಡಿಎಸ್ ಪ್ರಕಾರ ಎನ್ ಡಿಎ- 277, ಯುಪಿಎ- 130
ಇಂಡಿಯಾ ನ್ಯೂಸ್-ಪೋಲ್ ಸ್ಟಾರ್ಟ್ ಪ್ರಕಾರ ಎನ್ ಡಿಎ- 287, ಯುಪಿಎ- 130
2019ರ ಅಂತಿಮ ಫಲಿತಾಂಶ ಹೀಗಿತ್ತು: ಎನ್ ಡಿ ಎ-353, ಯುಪಿಎ-91

2014ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್– ಸಿಎಸ್ ಡಿಎಸ್–ಲೋಕ್ ನೀತಿ ಪ್ರಕಾರ ಎನ್ ಡಿ ಎ – 276, ಯುಪಿಎ -97, ಇತರೆ-148
ಇಂಡಿಯಾ ಟುಡೇ–ಸಿಸೆರೊ ಪ್ರಕಾರ ಎನ್ ಡಿ ಎ-272, ಯುಪಿಎ-115, ಇತರೆ- 156
ಸುದ್ದಿ 24–ಚಾಣಕ್ಯ ಪ್ರಕಾರ ಎನ್‌ಡಿಎ-340, ಯುಪಿಎ-70, ಇತರೆ-133
ಟೈಮ್ಸ್ ನೌ–ಒ ಆರ್ ಜಿ ಪ್ರಕಾರ ಎನ್‌ಡಿಎ- 249, ಯುಪಿಎ-148, ಇತರೆ- 146
ಎಬಿಪಿ ನ್ಯೂಸ್–ನೀಲ್ಸನ್ ಪ್ರಕಾರ ಎನ್‌ಡಿಎ-274, ಯುಪಿಎ-97, ಇತರೆ-165
ಎನ್ ಡಿ ಟಿವಿ –ಹಂಸ ಸಂಶೋಧನೆ ಪ್ರಕಾರ ಎನ್‌ಡಿಎ-279, ಯುಪಿಎ-103, ಇತರೆ-161
2014ರ ಫಲಿತಾಂಶ ಹೀಗಿತ್ತು: ಎನ್‌ಡಿಎ-336, ಯುಪಿಎ-66, ಇತರೆ-147 ಇದರಲ್ಲಿ ಬಿಜೆಪಿ 282, ಕಾಂಗ್ರೆಸ್ 44 ಸ್ಥಾನಗಳನ್ನು ಗಳಿಸಿತ್ತು.

2009ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್ – ದೈನಿಕ್ ಭಾಸ್ಕರ್ ಪ್ರಕಾರ ಯುಪಿಎ 185– 205, ಎನ್‌ಡಿಎ 165– 185, ತೃತೀಯ ರಂಗ 110– 130, ನಾಲ್ಕನೇ ರಂಗ 25–35
ಸ್ಟಾರ್-ನೀಲ್ಸನ್ ಪ್ರಕಾರ ಯುಪಿಎ 199, ಎನ್‌ಡಿಎ 196, ತೃತೀಯ ರಂಗ 100, ನಾಲ್ಕನೇ ರಂಗ 36
ಭಾರತ ಟಿವಿ – ಸಿ ವೋಟರ್ ಪ್ರಕಾರ ಯುಪಿಎ 189–201, ಎನ್‌ಡಿಎ 183–195, ತೃತೀಯ ರಂಗ 105–121
2009ರ ಫಲಿತಾಂಶ ಹೀಗಿತ್ತು: ಯುಪಿಎ-262, ಎನ್‌ಡಿಎ-159, ತೃತೀಯ ರಂಗ-79, ನಾಲ್ಕನೇ ರಂಗ-27. ಇದರಲ್ಲಿ ಕಾಂಗ್ರೆಸ್- 206, ಬಿಜೆಪಿ 116 ಸ್ಥಾನಗಳನ್ನು ಗೆದ್ದುಕೊಂಡಿತ್ತು.

2004ರ ಎಕ್ಸಿಟ್ ಪೋಲ್‌ಗಳು

ಎನ್ ಡಿ ಟಿವಿ- ಎಸಿ ನೀಲ್ಸನ್ ಪ್ರಕಾರ ಎನ್ ಡಿ ಎ 230-250, ಕಾಂಗ್ರೆಸ್ 190-205, ಇತರೆ 100-120
ಆಜ್ತಕ್ ಒಆರ್ ಜಿ-ಮಾರ್ಗ್ ಪ್ರಕಾರ ಎನ್ ಡಿ ಎ 248, ಕಾಂಗ್ರೆಸ್-190, ಇತರೆ-105
ಸ್ಟಾರ್‌ನ್ಯೂಸ್ ಸಿ-ವೋಟರ್ ಪ್ರಕಾರ ಎನ್ ಡಿ ಎ 263-275, ಕಾಂಗ್ರೆಸ್ 174-186, ಇತರೆ 86-98
2004ರ ಫಲಿತಾಂಶ ಹೀಗಿತ್ತು: ಯುಪಿಎ- 208, ಎನ್‌ಡಿಎ- 181, ಎಡರಂಗ- 59. ಇದರಲ್ಲಿ ಕಾಂಗ್ರೆಸ್ 145, ಬಿಜೆಪಿ 138 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಎಷ್ಟು ನಿಖರ?

ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಗಳ ಮತಗಟ್ಟೆ ಸಮೀಕ್ಷೆಗಳಲ್ಲಿ ಮೂರು ಬಾರಿ ಬಹುತೇಕ ನಿಖರವಾಗಿತ್ತು. ಆದರೆ 2004ರಲ್ಲಿ ಮಾತ್ರ ಸಮೀಕ್ಷೆ ಸುಳ್ಳಾಗಿತ್ತು. ಇದೀಗ 2024 ಸಮೀಕ್ಷೆ ಕುತೂಹಲ ಮೂಡಿಸಿದೆ.

Continue Reading

ಪ್ರಮುಖ ಸುದ್ದಿ

MLC Election: ವಿಧಾನ ಪರಿಷತ್‌ ಚುನಾವಣೆ; ಯತೀಂದ್ರ ಸಿದ್ದರಾಮಯ್ಯ ಅವಿರೋಧ ಆಯ್ಕೆ

MLC Election: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೆಹಲಿ ಭೇಟಿ ವೇಳೆ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್‌ ನಾಯಕರ ಬಳಿ ಚರ್ಚೆ ನಡೆಸಿದ್ದು, ಈ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ.

VISTARANEWS.COM


on

MLC Election
Koo

ಬೆಂಗಳೂರು: ಜೂನ್‌ 13ರಂದು ವಿಧಾನ ಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಅವಿರೋಧ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಯತೀಂದ್ರ ಅವರ ಉಮೇದುವಾರಿಕೆಯನ್ನು ನವದೆಹಲಿಯಲ್ಲಿ ಗುರುವಾರ ಕಾಂಗ್ರೆಸ್‌ ಹೈಕಮಾಂಡ್‌ ಅನುಮೋದಿಸಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೆಹಲಿ ಭೇಟಿ ವೇಳೆ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್‌ ನಾಯಕರ ಬಳಿ ಚರ್ಚೆ ನಡೆಸಿದ್ದು, ಈ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಇನ್ನು ಉಳಿದ 6 ಕ್ಷೇತ್ರಗಳಿಗೆ ಪೈಪೋಟಿ ಹೆಚ್ಚಾಗಿದ್ದು, ಈ ಸ್ಥಾನಗಳಲ್ಲಿ ಮೈಸೂರು ಭಾಗದ ಪುಷ್ಪ ಅಮರನಾಥ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಈ ಬಾರಿ 7 ಸ್ಥಾನಗಳಿಗೆ 65 ಮಂದಿ ಆಕಾಂಕ್ಷಿಗಳ ಶಾರ್ಟ್‌ ಲಿಸ್ಟ್‌ ಸಿದ್ಧಪಡಿಸಲಾಗಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್‌ ಹೈಕಮಾಂಡ್‌ ಈ ಹಿಂದೆ ಹೇಳಿತ್ತು. ಅದರಂತೆ ಯತೀಂದ್ರ ಅವರಿಗೆ ಟಿಕೆಟ್‌ ಪಟ್ಟ ಎನ್ನಲಾಗಿದೆ.

ಈ ಬಗ್ಗೆ ಗುರುವಾರ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್, ದೆಹಲಿಗೆ ಹೋಗಿ ಪಟ್ಟಿ ನೀಡಿ ಬಂದಿದ್ದೇವೆ. 11 ಸ್ಥಾನಕ್ಕೆ 300 ಆಕಾಂಕ್ಷಿಗಳು ಇದ್ದರು. ನಾವು 65 ಮಂದಿಯ ಶಾರ್ಟ್​ ಲಿಸ್ಟ್​ ನೀಡಿದ್ದೇವೆ. ಯತೀಂದ್ರ ಅವರದ್ದು ಮೊದಲೇ ಕಮಿಟ್ ಮೆಂಟ್ ಇದೆ. ಹಾಗಾಗಿ ಅವರಿಗೆ ಟಿಕೆಟ್ ನೀಡುವುದಕ್ಕೆ ಹೈಕಮಾಂಡ್ ಕೂಡ ಸಮ್ಮತಿ ನೀಡಿದೆ. ಇವರ ಜತೆಗೆ ವಿಧಾನಸಭಾ ಟಿಕೆಟ್ ತ್ಯಾಗ ಮಾಡಿದ ಹಿರಿಯರು, ಸೋತವರು ಇದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ | Valmiki Corporation Scam: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್‌; ರಾಜೀನಾಮೆ ಕೊಡಲು ಸಿಎಂ ಸೂಚನೆ

ಅಕಾಂಕ್ಷಿಗಳಲ್ಲಿ ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ಬಯಲು ಸೀಮೆ ಸೇರಿ ಎಲ್ಲಾ ಭಾಗದವರಿದ್ದಾರೆ. 21 ಮಂದಿ ಕರಾವಳಿ ಭಾಗದಲ್ಲಿ, 11 ಮಂದಿ ಮೈಸೂರು ಭಾಗದ ಆಕಾಂಕ್ಷಿಗಳು ಇದ್ದಾರೆ ಎಂದು ಡಿಸಿಎಂ ತಿಳಿಸಿದ್ದರು. ಪರಿಷತ್‌ ಚುನಾವಣೆಯಲ್ಲಿ 11 ಕ್ಷೇತ್ರಗಳ ಪೈಕಿ ವಿಧಾನಸಭೆಯಲ್ಲಿನ ಸಂಖ್ಯಾಬಲ ಆಧಾರದಲ್ಲಿ ಪಕ್ಷಕ್ಕೆ ಗೆಲ್ಲುವ ಅವಕಾಶವಿರುವ 7 ಅಭ್ಯರ್ಥಿಗಳನ್ನು ಫೈನಲ್‌ ಮಾಡಲು ಕಸರತ್ತು ನಡೆದಿದೆ ಎಂದು ಡಿಕೆಶಿ ಹೇಳಿದ್ದರು.

Continue Reading

Lok Sabha Election 2024

Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವನ್ನು ಎದುರು ನೋಡುತ್ತಿರುವಾಗಲೇ ಎಲ್ಲರ ದೃಷ್ಟಿ ಈಗ ಎಕ್ಸಿಟ್ ಪೋಲ್ ನತ್ತ ನೆಟ್ಟಿದೆ. ಈ ಮೂಲಕ ಚುನಾವಣಾ ಆಯೋಗದ (Election Commission) ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ಸುಳಿವು ಜನರಿಗೆ ಲಭ್ಯವಾಗುತ್ತದೆ. ಬಹುತೇಕ ಬಾರಿ ಎಕ್ಸಿಟ್ ಪೋಲ್ (Exit Poll) ಸಮೀಕ್ಷೆ ನಿಜವಾಗಿದ್ದರೂ ಹಲವು ಬಾರಿ ಉಲ್ಟಾ ಆಗಿದೆ. ಅದು ಯಾವಾಗ, ಎಲ್ಲಿ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Exit Poll
Koo

ಲೋಕಸಭಾ ಚುನಾವಣೆಯ (Loksabha election-2024) ಅಂತಿಮ ಹಂತದ ಮತದಾನ (voting) ಜೂನ್ 1ರಂದು ನಡೆಯಲಿದ್ದು, ಜೂನ್ 4ರಂದು ಏಳು ಹಂತದ ಮತದಾನದ ಫಲಿತಾಂಶ ಹೊರಬೀಳಲಿದೆ. ರಾಜಕೀಯ ನಾಯಕರು (political leaders), ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ (Exit Poll) ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ (Election Commission) ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಸಮೀಕ್ಷೆಗಳು ಬಹುತೇಕ ಯಾವಾಗಲೂ ನಿಖರವಾಗಿವೆಯೇ ಇದ್ದರೂ ಕೆಲವು ಬಾರಿ ತಪ್ಪಾಗಿದ್ದೂ ಇದೆ. ತೀವ್ರವಾದ ಪರಿಶೀಲನೆ, ಚರ್ಚೆಯ ಬಳಿಕವೂ ಎಕ್ಸಿಟ್ ಪೋಲ್‌ಗಳು ಯಾವಾಗಲೂ ಅಂತಿಮ ಫಲಿತಾಂಶಗಳನ್ನು ನಿಖರವಾಗಿ ಹೇಳುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ ಒಟ್ಟು ಐದು ಬಾರಿ ಎಕ್ಸಿಟ್‌ ಪೋಲ್‌ ಭವಿಷ್ಯ ಸುಳ್ಳಾಗಿದೆ. ಈ ಕುರಿತ ಹಿನ್ನೋಟ ಇಲ್ಲಿದೆ.
2004ರ ಲೋಕಸಭಾ ಚುನಾವಣೆ

2004ರಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ರಾಜ್ಯಗಳ ಚುನಾವಣೆಗಳಲ್ಲಿ ಭರ್ಜರಿ ಜಯ ಗಳಿಸಿ, ಆಡಳಿತಾರೂಢ ಬಿಜೆಪಿಯು ‘ಇಂಡಿಯಾ ಶೈನಿಂಗ್’ ಬ್ಯಾನರ್ ಅಡಿಯಲ್ಲಿ ಅವಧಿಪೂರ್ವವೇ ಲೋಕಸಭೆ ಚುನಾವಣೆ ಎದುರಿಸಿತು. ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ನಾಯಕರು ಭಾರಿ ಆತ್ಮವಿಶ್ವಾಸದಿಂದಿದ್ದರು. ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎಗೆ 240ರಿಂದ 250 ಸ್ಥಾನಗಳು ಬರಲಿವೆ ಎಂದು ಭವಿಷ್ಯ ನುಡಿದಿದ್ದವು. ಆದರೆ ನಿಜವಾದ ಫಲಿತಾಂಶಗಳು ಬಂದಾಗ ಸಂಖ್ಯೆಗಳು ಸಂಪೂರ್ಣವಾಗಿ ವಿರುದ್ಧವಾಗಿದ್ದವು. ಎನ್‌ಡಿಎ ಕೇವಲ 181 ಸೀಟುಗಳನ್ನು ಗೆಲ್ಲಲು ಸಾಧ್ಯವಾಯಿತು. 218 ಸ್ಥಾನಗಳನ್ನು ಗಳಿಸಿದ ಯುಪಿಎ ಮಿತ್ರ ಪಕ್ಷಗಳ ನೆರವಿನಿಂದ ಕೇಂದ್ರದಲ್ಲಿ ಅಧಿಕಾರ ನಡೆಸಿತು.


2015ರ ದೆಹಲಿ ಅಸೆಂಬ್ಲಿ ಚುನಾವಣೆ

2015ರ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 70ರಲ್ಲಿ 67 ಸ್ಥಾನಗಳನ್ನು ಗಳಿಸಿ ಅಭೂತಪೂರ್ವ ಜಯ ಸಾಧಿಸಿತು. ಆದರೆ ಮತದಾನದ ದಿನದಂದು ನಡೆಸಿದ ಎಕ್ಸಿಟ್ ಪೋಲ್‌ಗಳು ಆಪ್‌ಗೆ ಸ್ಪಷ್ಟ ಬಹುಮತ ಎಂದು ಹೇಳಿತ್ತಾದರೂ, 50ರಷ್ಟು ಸೀಟು ಬರಬಹುದು ಎಂದಿತ್ತು. ಆದರೆ ಆಪ್‌ ಎಲ್ಲರ ನಿರೀಕ್ಷೆಗೂ ಮೀರಿದಷ್ಟು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಮೂಲಕ, ಜನರ ತೀರ್ಪನ್ನು ಸ್ಪಷ್ಟವಾಗಿ ಗುರುತಿಸಲು ಎಕ್ಸಿಟ್‌ ಪೋಲ್‌ಗಳು ವಿಫಲವಾಗಿದ್ದವು.

2015ರ ಬಿಹಾರ ವಿಧಾನಸಭಾ ಚುನಾವಣೆ

2015ರ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ತೀವ್ರ ಪೈಪೋಟಿಯಿಂದ ಕೂಡಿತ್ತು. ಯಾವುದೇ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆಯುವುದಿಲ್ಲ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಈ ಮುನ್ಸೂಚನೆಯ ಹೊರತಾಗಿಯೂ ಆರ್‌ಜೆಡಿ-ಜೆಡಿಯು-ಕಾಂಗ್ರೆಸ್ ಒಕ್ಕೂಟವು ಭರ್ಜರಿ ಜಯ ಸಾಧಿಸಿತು. ಲಾಲು ಪ್ರಸಾದ್ ಅವರ ಆರ್‌ಜೆಡಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2017

ನೋಟು ಅಮಾನ್ಯೀಕರಣದ ಅನಂತರ ನಡೆದ 2017ರ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯ ಸಮೀಕ್ಷೆಗಳು ಭಾರಿ ಕುತೂಹಲ ಮೂಡಿಸಿದ್ದವು. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ ಸರಳ ಬಹುಮತಕ್ಕೂ ಕೆಲವು ಸ್ಥಾನಗಳು ಕೊರತೆ ಆಗಲಿವೆ. ಬಿಜೆಪಿಗೆ ಹೆಚ್ಚೆಂದರೆ 185ರಿಂದ 200 ಸ್ಥಾನಗಳು ಬರಬಹುದು ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಎಸ್‌ಪಿ-ಕಾಂಗ್ರೆಸ್‌ ಮೈತ್ರಿಕೂಟ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲಿದೆ ಎಂದು ಹೇಳಲಾಗಿತ್ತು. ಆದರೆ ಎಲ್ಲ ಮತಗಟ್ಟೆ ಸಮೀಕ್ಷೆಗಳಿಗೆ ವ್ಯತಿರಿಕ್ತವಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಒಟ್ಟು 403 ಸೀಟುಗಳಲ್ಲಿ 312 ಸೀಟುಗಳನ್ನು ಗೆದ್ದುಕೊಂಡಿತು. 2012ರ ಚುನಾವಣೆಯಲ್ಲಿ ಕೇವಲ 47 ಸ್ಥಾನ ಗಳಿಸಿದ್ದ ಬಿಜೆಪಿಗೆ 2017ರಲ್ಲಿ ಭರ್ಜರಿ ಜಯ ಸಾಧಿಸಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಸರ್ಕಾರ ರಚಿಸಿತು. ಆ ಚುನಾವಣೆಯಲ್ಲಿ ಬಿಎಸ್‌ಪಿ ಕೇವಲ 19 ಸ್ಥಾನ ಗೆದ್ದಿತು. ಎಸ್ಪಿಗೆ ಕೇವಲ 47 ಸೀಟುಗಳು ಸಿಕ್ಕಿದವು. ಕಾಂಗ್ರೆಸ್‌ಗೆ ಕೇವಲ 7 ಸ್ಥಾನಗಳು ಲಭಿಸಿದವು. ಮತಗಟ್ಟೆ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ಪರ ಭಾರಿ ಅಲೆ ಇರುವುದನ್ನು ಗುರುತಿಸುವಲ್ಲಿ ವಿಫವಾದವು.

ಇದನ್ನೂ ಓದಿ: PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

2014ರ ಲೋಕಸಭಾ ಚುನಾವಣೆ

2014ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಲಿದೆ ಎಂದು ಹೇಳಿತ್ತು. ಆದರೆ ಬಿಜೆಪಿಯೊಂದೇ ಸರಳ ಬಹುಮತಕ್ಕೆ ಅಗತ್ಯವಾದ 272 ಸಂಖ್ಯೆ ಪಡೆಯುವುದಿಲ್ಲ ಎಂದು ಬಹುತೇಕ ಸಮೀಕ್ಷೆಗಳು ಹೇಳಿದ್ದವು. ಟುಡೇಸ್‌ ಚಾಣಕ್ಯ ಸಮೀಕ್ಷೆಯೊಂದು ಮಾತ್ರ ಬಿಜೆಪಿಗೆ 291 ಸೀಟು ಬರಬಹುದು ಎಂದು ಹೇಳಿತ್ತು. ಆದರೆ ಅಂತಿಮ ಫಲಿತಾಂಶದಲ್ಲಿ ಬಿಜೆಪಿಗೆ ಭರ್ಜರಿ 282 ಸೀಟುಗಳು ಲಭಿಸಿದವು. ಎನ್‌ಡಿಎ ಸೀಟುಗಳ ಸಂಖ್ಯೆ 300 ದಾಟಿತು. ಕಾಂಗ್ರೆಸ್ ಕೇವಲ 44 ಸ್ಥಾನಗಳಿಗೆ ಸೀಮಿತವಾಯಿತು. ಬಿಜೆಪಿ ಮತ್ತು ಎನ್‌ಡಿಎಯ ಭಾರಿ ಗೆಲುವಿನ ಸುಳಿವು ಮತಗಟ್ಟೆ ಸಮೀಕ್ಷೆಗಳಿಗೆ ಸಿಕ್ಕಿರಲಿಲ್ಲ. ಹಾಗಾಗಿ ಮತಗಟ್ಟೆ ಸಮೀಕ್ಷೆಗಳು ಎಲ್ಲ ಕಾಲಕ್ಕೂ ಸರಿಯಾಗಿಯೇ ಇರುತ್ತವೆ ಎಂದು ಹೇಳಲಾಗುವುದಿಲ್ಲ.

Continue Reading
Advertisement
bhavani revanna case
ಪ್ರಮುಖ ಸುದ್ದಿ14 mins ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

KCET Result 2024
ಬೆಂಗಳೂರು14 mins ago

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

Heat Wave
ದೇಶ34 mins ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

driving licence
ಪ್ರಮುಖ ಸುದ್ದಿ40 mins ago

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Cardamom Benefits
ಆರೋಗ್ಯ1 hour ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ2 hours ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ2 hours ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Lok Sabha Election
ದೇಶ3 hours ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ3 hours ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ8 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌