SR Srinivas: ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್‌ಗೆ ಬೇಲ್ ವಿಳಂಬ; ಬಂಧನ ಭೀತಿ - Vistara News

ರಾಜಕೀಯ

SR Srinivas: ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್‌ಗೆ ಬೇಲ್ ವಿಳಂಬ; ಬಂಧನ ಭೀತಿ

SR Srinivas: ರಾಯಸಂದ್ರ ರವಿಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಎಫ್ಐಆರ್ ಅನ್ನು ಪೊಲೀಸರು ದಾಖಲು ಮಾಡಲಾಗಿತ್ತು. ಈ ಸಂಬಂಧ ಎಸ್.ಆರ್. ಶ್ರೀನಿವಾಸ್ ಅವರು ಜನಪ್ರತಿನಿಧಿಗಳ ಕೋರ್ಟ್‌ನಿಂದ ಬೇಲ್ ಪಡೆಯಬೇಕಿತ್ತು. ಆದರೆ, ಇಂದು ಭಾನುವಾರ ಆಗಿರುವ ಹಿನ್ನೆಲೆ ಬೇಲ್ ಸಿಗುವುದು ವಿಳಂಬವಾಗುತ್ತಿದೆ.

VISTARANEWS.COM


on

Gubbi MLA SR Srinivas bail delayed Fear of arrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ (SR Srinivas) ಅವರಿಗೆ ಹಲ್ಲೆ ಪ್ರಕರಣವೊಂದರಲ್ಲಿ ಈಗ ಬಂಧನ ಭೀತಿ ಎದುರಾಗಿದೆ. ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ, ಜಾಗತಿಕ ಲಿಂಗಾಯತ ವೇದಿಕೆ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್ (Rayasandra Ravikumar) ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಘಟನೆ ನಡೆದು 48 ಗಂಟೆಗಳ ಬಳಿಕ ಎಫ್‌ಐಆರ್ ದಾಖಲಾಗಿತ್ತು. ಆದರೆ, ಈಗ ಈ ಪ್ರಕರಣದಲ್ಲಿ ಬೇಲ್‌ ಸಿಗಲು ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಬಂಧನ ಭೀತಿ ಎದುರಾಗಿದೆ.

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಈಘ ಬಂಧನ ಭೀತಿ ಎದುರಾಗಿದೆ. ಐಪಿಸಿ ಸೆಕ್ಷನ್ 511, 506, 504, 143, 149, 323, 363 ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರಲ್ಲಿ ಗುಂಪು ಗಲಭೆಯಲ್ಲಿ ಭಾಗಿಯಾಗಿರುವುದು, ತೀವ್ರ ಗಾಯ ಮಾಡಿರುವುದು ಹಾಗೂ ಅಪಹರಣ ಆರೋಪದ ಮೇಲೆ ಪ್ರಕರಣವನ್ನು ದಾಖಲು ಮಾಡಲಾಗಿದೆ.

ರಾಯಸಂದ್ರ ರವಿಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಎಫ್ಐಆರ್ ಅನ್ನು ಪೊಲೀಸರು ದಾಖಲು ಮಾಡಲಾಗಿತ್ತು. ಈ ಸಂಬಂಧ ಎಸ್.ಆರ್. ಶ್ರೀನಿವಾಸ್ ಅವರು ಜನಪ್ರತಿನಿಧಿಗಳ ಕೋರ್ಟ್‌ನಿಂದ ಬೇಲ್ ಪಡೆಯಬೇಕಿತ್ತು. ಆದರೆ, ಇಂದು ಭಾನುವಾರ ಆಗಿರುವ ಹಿನ್ನೆಲೆ ಬೇಲ್ ಸಿಗುವುದು ವಿಳಂಬವಾಗುತ್ತಿದೆ. ಬೇಲ್‌ಗಾಗಿ ಇನ್ನೂ ಕನಿಷ್ಠ 2 ದಿನ ಕಾಯಬೇಕಿರುವುದರಿಂದ ಎಸ್.ಆರ್. ಶ್ರೀನಿವಾಸ್‌ಗೆ ಈಗ ಬಂಧನ ಭೀತಿ ಎದುರಾಗಿದೆ.

ಟೆಂಡರ್‌ ಗಲಾಟೆಯೇ ಕಾರಣ

ತುಮಕೂರು ಜಿಲ್ಲೆಯ ಗುಬ್ಬಿ, ತಿಪಟೂರು ತಾಲೂಕುಗಳ ಗಣಿಬಾಧಿತ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ 2023ರ ಸೆಪ್ಟೆಂಬರ್‌ನಲ್ಲಿ ಟೆಂಡರ್‌ ಕರೆಯಲಾಗಿತ್ತು. ರಾಯಸಂದ್ರ ರವಿಕುಮಾರ್ ಅವರಿಗೆ ಟೆಂಡರ್‌ ಆಗಿತ್ತು. ಕೊನೆಯ ಕ್ಷಣದಲ್ಲಿ ದಾಖಲೆ ಸಹಿತ ಟೆಂಡರ್ ಕರಾರು ಮಾಡಿಕೊಳ್ಳಲು ಹೋದಾಗ ನಿಮ್ಮ ಟೆಂಡರ್‌ ರದ್ದಾಗಿದೆ ಎಂದು ರಾಯಸಂದ್ರ ರವಿಕುಮಾರ್ ಅವರಿಗೆ ಹೇಳಲಾಗಿದೆ ಎಂಬುದು ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ಕಾರಣಕ್ಕೆ ಅವರು ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ವಿರುದ್ಧ ತಡರಾತ್ರಿಯಲ್ಲಿ ಪಿಡಬ್ಲ್ಯುಡಿ ಇಲಾಖೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲಾಗಿತ್ತು.

ಇದನ್ನೂ ಓದಿ: Lok Sabha Election 2024: 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ದಿಗ್ವಿಜಯ; ಈ ಆತ್ಮವಿಶ್ವಾಸಕ್ಕೆ ಕಾರಣ ಬಿಚ್ಚಿಟ್ಟ ವಿಜಯೇಂದ್ರ

ಈ ವೇಳೆ ಗಲಾಟೆ ನಡೆದಿದ್ದರಿಂದ ಕಾಂಗ್ರೆಸ್‌ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ, ಜಾಗತಿಕ ಲಿಂಗಾಯತ ವೇದಿಕೆ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್‌ ಮೇಲೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್‌ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಯಿತು. ಈ ಗಲಾಟೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರವಿಕುಮಾರ್‌ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಗುರುವಾರ ರಾತ್ರಿ ಜಿಲ್ಲಾಸ್ಪತ್ರೆಯಲ್ಲೇ ಪೊಲೀಸರು ರಾಯಸಂದ್ರ ರವಿಕುಮಾರ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ, ಶ್ರೀನಿವಾಸ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಇದರ ಜತೆಗೆ ರವಿಕುಮಾರ್‌ ಅವರ ಅಪಹರಣ ಯತ್ನವನ್ನೂ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈಗ ಈ ಕೇಸ್‌ನಲ್ಲಿ ಶ್ರೀನಿವಾಸ್‌ಗೆ ಬಂಧನ ಭೀತಿ ಎದುರಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Prajwal Revanna Case: ಪೆನ್ ಡ್ರೈವ್ ಕಥಾನಾಯಕರೇ ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಿದ್ದಾರೆ. ನನಗೆ ಬಹಳ ದೊಡ್ಡ ಮಟ್ಟದ ಆಫರ್ ಬಂತು. ಕ್ಯಾಬಿನೆಟ್ ರ‍್ಯಾಂಕ್‌ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟರು. ಪೆನ್‌ಡ್ರೈವ್‌ ಹೇಗೆ ರೆಡಿ ಆಯಿತು ಹೊಳೆನರಸೀಪುರಕ್ಕೆ ಹೇಗೆ‌‌ ಹೋಯಿತು? ಶ್ರೇಯಸ್‌ಗೆ‌ ಏನೆಲ್ಲಾ ಡೈರೆಕ್ಷನ್ ಇತ್ತು? ಎಲ್ಲವೂ ನನಗೆ ಗೊತ್ತು ಎಂದು ದೇವರಾಜೇಗೌಡ ಆರೋಪ ಮಾಡಿದ್ದಾರೆ.

VISTARANEWS.COM


on

Prajwal Revanna Case DK Shivakumar behind Prajwal video leak Devaraje Gowda demands CBI probe
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ವಿಡಿಯೊ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮಹತ್ವದ ವಿಚಾರವನ್ನು ಹೊರಹಾಕಿದ್ದಾರೆ. ಅಲ್ಲದೆ, ಈ ಎಲ್ಲ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪಾತ್ರ ಇದೆ ಎಂಬ ಗಂಭೀರ ಆರೋಪ ಮಾಡಿರುವ ಅವರು, ಡಿಕೆಶಿಯದ್ದು ಎನ್ನಲಾದ ಆಡಿಯೊವನ್ನು ಪ್ಲೇ ಮಾಡಿದ್ದಾರೆ. ಜತೆಗೆ ತಮಗೆ ಎಸ್‌ಐಟಿ ಮೇಲೆ ಯಾವುದೇ ನಂಬಿಕೆ ಇಲ್ಲ. ಹೀಗಾಗಿ ಈ ಎಲ್ಲ ಸಾಕ್ಷಿಗಳನ್ನು ನೇರವಾಗಿ ಸಿಬಿಐಗೆ ನೀಡುವುದಾಗಿ ಹೇಳಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವರಾಜೇಗೌಡ, ಮೊದಲು ನನಗೆ ಎಲ್.ಆರ್ ಶಿವರಾಮ್ ಗೌಡ ಕರೆ ಮಾಡಿದರು. ಬಳಿಕ ಅವರು ಪಕ್ಕದಲ್ಲಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಕೈಗೆ ಕೊಡುತ್ತಾರೆ ಎಂದು ಹೇಳುತ್ತಾ ಅದರ ಆಡಿಯೊವನ್ನು ಅರ್ಧ ಪ್ಲೇ ಮಾಡಿದರು. ಡಿಕೆಶಿ ಅವರ ಧ್ವನಿಯುಳ್ಳ ಮಾತು ಆರಂಭವಾಗುತ್ತಿದ್ದಂತೆ ಅದನ್ನು ಆಫ್‌ ಮಾಡಿದರು. ಹೀಗಾಗಿ ಪೂರ್ಣ ಆಡಿಯೊವನ್ನು ಬಿಡುಗಡೆ ಮಾಡಿ ಎಂದು ಮಾಧ್ಯಮದವರು ಆಗ್ರಹಿಸಿದರು. ಆದರೆ, ಅದಕ್ಕೆ ದೇವರಾಜೇಗೌಡರು ಒಪ್ಪಲಿಲ್ಲ. ನಾನಿದನ್ನು ಸಿಬಿಐಗೆ ಸಾಕ್ಷಿಯಾಗಿ ಕೊಡುತ್ತೇನೆ ಎಂದು ಹೇಳಿದರು.

ಪೆನ್ ಡ್ರೈವ್ ಕಥಾನಾಯಕರೇ ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಿದ್ದಾರೆ. ನನಗೆ ಬಹಳ ದೊಡ್ಡ ಮಟ್ಟದ ಆಫರ್ ಬಂತು. ಕ್ಯಾಬಿನೆಟ್ ರ‍್ಯಾಂಕ್‌ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟರು. ಪೆನ್‌ಡ್ರೈವ್‌ ಹೇಗೆ ರೆಡಿ ಆಯಿತು ಹೊಳೆನರಸೀಪುರಕ್ಕೆ ಹೇಗೆ‌‌ ಹೋಯಿತು? ಶ್ರೇಯಸ್‌ಗೆ‌ ಏನೆಲ್ಲಾ ಡೈರೆಕ್ಷನ್ ಇತ್ತು? ಎಲ್ಲವೂ ನನಗೆ ಗೊತ್ತು ಎಂದು ದೇವರಾಜೇಗೌಡ ಹೇಳಿದರು.

Prajwal Revanna Case DK Shivakumar behind Prajwal video leak Devaraje Gowda demands CBI probe
ದೇವರಾಜೇಗೌಡ ಅವರ ಕಚೇರಿಗೆ ಭೇಟಿ ನೀಡಿದ್ದ ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌. ವಿಡಿಯೊ ಹೊರಬಿಟ್ಟ ದೇವರಾಜೇಗೌಡ.

ಸರ್ಕಾರದ ಪರ ಎಸ್‌ಐಟಿ ಕೆಲಸ

ಎಸ್‌ಐಟಿ ಟೀಂ ರಾಜ್ಯ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧವಾಗಿ ನಾನು ಎಸ್‌ಐಟಿಗೆ ನೀಡಿರುವ ಹೇಳಿಕೆಯನ್ನು ಹಿಂಪಡೆಯಿರಿ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದು ಎಸ್‌ಐಟಿ ತನಿಖಾ ತಂಡದಲ್ಲಿರುವ ಮಹಿಳಾ ಎಸ್‌ಪಿ ಸುಮನ್ ಡಿ ಪೆನ್ನೇಕರ್ ನನಗೆ ತಾಕೀತು ಮಾಡಿದ್ದರು. ಹೀಗಾಗಿ ಎಸ್‌ಐಟಿ ಬಗ್ಗೆ ನನಗೆ ನಂಬಿಕೆಯೇ ಇಲ್ಲ ಎಂದು ದೇವರಾಜೇಗೌಡ ಕಿಡಿಕಾರಿದರು.

ಇನ್ನು ಮಾಜಿ ಸಚಿವ ಎಲ್‌.ಆರ್.‌ ಶಿವರಾಮೇಗೌಡ ಕರೆ ಮಾಡಿ ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಹೆಸರನ್ನು ಹೇಳಬೇಡಿ ಎಂದು ಸೂಚನೆ ನೀಡಿದ್ದಾರೆ ಎಂದು ಆರೋಪ ಮಾಡಿದ ದೇವರಾಜೇಗೌಡ ಅವರು, ಅದಕ್ಕೆ ಸಂಬಂಧಪಟ್ಟ ಆಡಿಯೊವನ್ನು ಬಿಡುಗಡೆ ಮಾಡಿದರು. ಈ ಪ್ರಕರಣದಲ್ಲಿ ಎಲ್‌.ಆರ್.‌ ಶಿವರಾಮೇಗೌಡ ಮಧ್ಯವರ್ತಿಯಾಗಿದ್ದಾರೆ. ಡಿ.ಕೆ. ಶಿವಕುಮಾರ್‌ ಪರವಾಗಿ ಕೆಲಸ ಮಾಡಿದ್ದಾರೆ ಎಂದು ದೇವರಾಜೇಗೌಡ ಆರೋಪ ಮಾಡಿದರು.

ಎಲ್ಲ ಮಾಹಿತಿ ಕೊಟ್ಟರೂ ಪೆನ್‌ಡ್ರೈವ್‌ ಹಂಚಿದ ಆರೋಪಿಯನ್ನು ಹಿಡಿಯಲಿಲ್ಲ

ಪೆನ್ ಡ್ರೈವ್ ಹಂಚಿರುವವರ ಹೆಸರು, ಲೋಕೇಶನ್ ಹಾಗೂ ಫೋನ್ ನಂಬರ್‌ಗಳನ್ನು ಕೊಟ್ಟರೂ ಆರೋಪಿಗಳನ್ನು ಹಿಡಿಯಲಿಲ್ಲ. ಈಗ ದೇವರಾಜೇ ಗೌಡನನ್ನು ನನ್ನ ಫಿಟ್ ಮಾಡಬೇಕು ಅಂತ ಈ ತಂತ್ರ ಮಾಡಿದ್ದಾರೆ. ನಿನ್ನೆಯವರೆಗೂ ನನ್ನ ಜತೆ ಸಂಧಾನ ಆಯ್ತು. ಶಿವರಾಮೇಗೌಡರು ಸಂಧಾನ ಮಾಡಲು‌ ಮುಂದಾದರು. ನನಗೆ ಕ್ಯಾಬಿನೆಟ್‌ ದರ್ಜೆ ಹುದ್ದೆ ಕೊಡುವುದಾಗಿ ಆಫರ್‌ ಕೊಟ್ಟರು. ಇದಕ್ಕಾಗಿ ನನಗೆ ಸರ್ಕಾರದ, ಸಿಎಂ, ಡಿಸಿಎಂ ಹೆಸರು ತರಬೇಡ ಎಂದು ನನಗೆ ತಾಕೀತು ಮಾಡಿದರು. ಆದರೆ, ನಾನು ಅದನ್ನು ನಿರಾಕರಣೆ ಮಾಡಿದೆ ಎಂದು ದೇವರಾಜೇಗೌಡ ವಿವರಣೆ ನೀಡಿದರು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿ ಸಭೆ ನಡೆದಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಯಾರನ್ನೆಲ್ಲ ಬಂಧಿಸಬೇಕು? ತನಿಖೆ ಯಾವ ನಿಟ್ಟಿನಲ್ಲಿ ಸಾಗಬೇಕು? ಎಂಬಿತ್ಯಾದಿಗಳ ಬಗ್ಗೆ ಚರ್ಚೆ ನಡೆದಿದೆ. ನನ್ನ ಜೀವನದ ದೊಡ್ಡ ಹೋರಾಟ ಇದ್ದಿದ್ದೇ ಹಾಸನದ ನಾಯಕರ ವಿರುದ್ಧವಾಗಿ ಆಗಿದೆ. ನನ್ನ ಹೋರಾಟಕ್ಕೆ ನ್ಯಾಯ ಸಿಕ್ಕಿದೆ. ನನ್ನ ಹೋರಾಟವನ್ನು ಕೆಲವು‌ ಕಿಡಿಗೇಡಿ ರಾಜಕಾರಣಿಗಳು ವಾಮಮಾರ್ಗದಲ್ಲಿ ಬಳಸಿದ್ದಾರೆ ಎಂದು ದೇವರಾಜೇಗೌಡ ಆರೋಪಿಸಿದರು.

ಕಾರ್ತಿಕ್‌ ನನ್ನ ಕಚೇರಿಗೆ ಬಂದಿದ್ದ

ನನ್ನ ಸಾಕ್ಷಿಯನ್ನು ಪರಿಗಣಿಸಲಾಗಿದೆ. ಹೀಗಾಗಿ ಎಸ್‌ಐಟಿಯವರ ಮುಂದೆ ನಾನು ಕಹಿ ಸತ್ಯಗಳನ್ನು ಬಯಲು ಮಾಡಿದ್ದೇನೆ. ಅಶ್ಲೀಲ ವಿಡಿಯೊ ವಿಚಾರದಲ್ಲಿ ಕೆಲ ಬಂಧನ ಆಗಿದೆ. ಆದರೆ, ಯಾವ ವಿಡಿಯೊದಲ್ಲೂ ಮುಖ‌ಗಳನ್ನು ಬ್ಲರ್‌ ಮಾಡಲಾಗಿಲ್ಲ. ದೇವರಾಜೇಗೌಡನ ಪಾತ್ರ ಏನು ಅಂತ ತಿಳಿಸುತ್ತೇನೆ. ಕೊಲೆಗಾರ ಕೂಡ ಬಂದಾಗ ವಕೀಲರಾಗಿ ರಕ್ಷಣೆ ಮಾಡುವುದು ನನ್ನ ಕರ್ತವ್ಯವಾಗಿತ್ತು. ವಕೀಲ ವೃತ್ತಿಯ ಮೂಲ ಜವಾಬ್ದಾರಿ ಇದು. ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ನನ್ನ ಗೃಹ ಕಚೇರಿಗೆ ಬಂದಿದ್ದ. ಈ ಫೈಲ್ ಹಾಸನದಲ್ಲಿರುವ ನನ್ನ ಮನೆಯಲ್ಲಿರುವ ಕಚೇರಿಯಲ್ಲಿ ಕೊಟ್ಟಿದ್ದಾನೆ. ಇದರ ಜತೆ ಪೆನ್ ಡ್ರೈವ್‌ ಕೂಡ ಇತ್ತು ಎಂದು ದೇವರಾಜೇಗೌಡ ಹೇಳಿದರು.

ಎಲ್ಲ ದಾಖಲೆಗಳೂ ನನ್ನಲ್ಲಿದೆ

ಕಾರ್ತಿಕ್‌ ನನಗೆ ಪೆನ್‌ಡ್ರೈವ್ ಕೊಟ್ಟ ನಂತರ ಅದನ್ನು ನಾನು ಲಕೋಟೆಯಲ್ಲಿ ಇಟ್ಟಿದ್ದೆ. ನಾನು ಹೆಣ್ಣುಮಕ್ಕಳನ್ನು ಕಾಪಾಡಬೇಕು ಅಂತ ಬಹಿರಂಗ ಮಾಡಿಲ್ಲ. ಆತ ಮುಂದೆಯೇ ಸೀಲ್ಡ್ ಕವರ್‌ಗೆ ಹಾಕಿದೆ. ಪೆನ್ ಡ್ರೈವ್ ಹೊಳೆನರಸೀಪುರದಿಂದ ಪರಾಜಿತ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ತಲುಪಿತ್ತು. ಆತನ ಗುರು ಪುಟ್ಟಿ @ ಪುಟ್ಟರಾಜು ಅವರು ಬೆಂಗಳೂರಿಗೆ ಬಂದರು. ಅವರು ಯಾರನ್ನು ಭೇಟಿಯಾದರು? ಇದರ ದಾಖಲೆ ನನ್ನ ಬಳಿ‌ ಇದೆ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಕಾರ್ತಿಕ್‌ ಬಂದಿದ್ದ ವಿಡಿಯೊ ಪ್ರದರ್ಶನ

ಎಸ್‌ಐಟಿ ನನ್ನ ಬಳಿ ಇರುವ ದಾಖಲೆ ಏನು ಅಂತ ಕೇಳಿದರು? ಎಲ್ಲವನ್ನೂ ಅವರಿಗೆ ಕೊಟ್ಟಿದ್ದೇನೆ. ತನಿಖಾಧಿಕಾರಿ ಎಸ್‌ಪಿ ಮುಂದೆ ಪ್ರಮುಖ ಅಂಶಗಳನ್ನು ಉಲ್ಲೇಖ ಮಾಡಿದ್ದೇನೆ. ಕಾರ್ತಿಕ್ ನನ್ನ ಮನೆಗೆ ಯಾವಾಗ ಬಂದಿದ್ದು? ಎಂಬ ವಿಡಿಯೊ ನನ್ನ ಬಳಿ ಇದೆ. ಈಗ ಅದನ್ನು ಸಹ ಸಿಬಿಐಗೆ ನೀಡುತ್ತೇನೆ ಎಂದು ದೇವರಾಜೇಗೌಡ ಅವರು ಮಾಧ್ಯಮದೆದುರು ಆ ವಿಡಿಯೊವನ್ನು ಪ್ರದರ್ಶನ ಮಾಡಿದರು. ಕಾರ್ತಿಕ್‌ ಪೆನ್ ಡ್ರೈವ್ ಅನ್ನು ಯಾರಿಗೆ ಕೊಟ್ಟಿದ್ದೇನೆ ಎಂದು ಆತ ಹೇಳಿದ್ದು ಕೂಡಾ ರೆಕಾರ್ಡ್ ಆಗಿದೆ ಎಂದು ದೇವರಾಜೇಗೌಡ ಹೇಳಿದರು.

Continue Reading

ದೇಶ

Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

ಗುಜರಾತ್‌ನಲ್ಲಿ ಕಾಂಗ್ರೆಸ್‌ನಿಂದ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಣಕ್ಕೆ ಇಳಿಸಿಲ್ಲ. ಬಿಎಸ್‌ಪಿ ಮಾತ್ರ ಇಲ್ಲಿ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಈ ಕುರಿತ ವಿಶ್ಲೇಷಣಾತ್ಮಕ ವರದಿ ಇಲ್ಲಿದೆ.

VISTARANEWS.COM


on

By

Lok Sabha Election-2024
Koo

ಗುಜರಾತ್‌ನಲ್ಲಿ (gujarat) ಲೋಕಸಭೆ ಚುನಾವಣೆಗೆ (Lok Sabha Election 2024) ಮುಸ್ಲಿಂ (muslim) ಅಭ್ಯರ್ಥಿಯನ್ನು (candidate) ಕಣಕ್ಕಿಳಿಸಿದ ಏಕೈಕ ರಾಷ್ಟ್ರೀಯ ಪಕ್ಷ ಬಿಎಸ್‌ಪಿ (BSP). ಕಾಂಗ್ರೆಸ್‌ನಿಂದ (congress) ಯಾವುದೇ ಮುಸ್ಲಿಂ ಅಭ್ಯರ್ಥಿ ಗುಜರಾತ್‌ನಲ್ಲಿ ಕಣಕ್ಕೆ ಇಳಿದಿಲ್ಲ. ಮೇ 7ರಂದು ಮತದಾನ ನಡೆಯಲಿರುವ ರಾಜ್ಯದಲ್ಲಿ ಒಟ್ಟು 266 ಅಭ್ಯರ್ಥಿಗಳ ಪೈಕಿ ಕೇವಲ 32 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇಲ್ಲಿ ಹೆಚ್ಚಿನ ಮುಸ್ಲಿಂ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ಕೆಲವರು ಖೇಡಾ, ಲಾಗ್ ಪಾರ್ಟಿ, ರೈಟ್ ಟು ರೀಕಾಲ್ ಪಾರ್ಟಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಭಾರತೀಯ ಜನನಾಯಕ್ ಪಕ್ಷದಂತಹ ಸಣ್ಣ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ. ಗಾಂಧಿನಗರದಲ್ಲಿ ಅತೀ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಅಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ಮತ್ತು ಸೋನಾಲ್ ಪಟೇಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಇದರ ನಂತರ ಭರೂಚ್ ಮತ್ತು ಪಟಾನ್ ನಲ್ಲಿ ತಲಾ ನಾಲ್ಕು ಮಂದಿ ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಗುಜರಾತ್‌ನ ಜನಸಂಖ್ಯೆಯಲ್ಲಿ ಸುಮಾರು ಶೇ. 10ರಷ್ಟು ಮುಸ್ಲಿಮರು ಎಂದು ಅಂದಾಜಿಸಲಾಗಿದೆ. ಕಚ್, ಜಾಮ್‌ನಗರ, ಜುನಾಗಢ್, ಭರೂಚ್, ಭಾವನಗರ, ಸುರೇಂದ್ರನಗರ, ಪಟಾನ್, ಬನಸ್ಕಾಂತ, ಸಬರ್ಕಾಂತ, ಅಹಮದಾಬಾದ್ ಪಶ್ಚಿಮ, ಅಹಮದಾಬಾದ್ ಪೂರ್ವ, ಗಾಂಧಿನಗರ, ನವಸಾರಿ, ಪಂಚಮಹಲ್‌ಗಳು ಮತ್ತು ಆನಂದ್ ಸೇರಿದಂತೆ ಕನಿಷ್ಠ 15 ಸ್ಥಾನಗಳಲ್ಲಿ ಅವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಹಿಂದಿನ ಚುನಾವಣೆ

2019, 2009 ಮತ್ತು 2004ರಲ್ಲಿ ಕಾಂಗ್ರೆಸ್ ಭರೂಚ್‌ನಿಂದ ತಲಾ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಇದು ಹಿರಿಯ ನಾಯಕ ಅಹ್ಮದ್ ಪಟೇಲ್‌ ಅವರ ಭದ್ರಕೋಟೆಯಾಗಿತ್ತು. ಬಳಿಕ ಶೇರ್ಖಾನ್ ಪಠಾಣ್, ಅಜೀಜ್ ಟಂಕರ್ವಿ ಮತ್ತು ಮೊಹಮ್ಮದ್ ಪಟೇಲ್ ನಾಮನಿರ್ದೇಶನಗೊಂಡರು. ಈ ಬಾರಿ ಆಮ್ ಆದ್ಮಿ ಪಕ್ಷವು ಇಂಡಿಯಾ ಬ್ಲಾಕ್ ಪ್ರತಿನಿಧಿಯಾಗಿ ಭರೂಚ್ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು, ಪಕ್ಷವು ತನ್ನ ಶಾಸಕ ಚೈತಾರ್ ವಾಸವ ಅವರನ್ನು ಇಲ್ಲಿ ಕಣಕ್ಕಿಳಿಸಿದೆ.

2014 ರಲ್ಲಿ ಕಾಂಗ್ರೆಸ್ ಭರೂಚ್‌ನಿಂದ ಜಯೇಶ್ ಪಟೇಲ್ ಅವರನ್ನು ಕಣಕ್ಕಿಳಿಸಿತು. ಆದರೆ ನವಸಾರಿಯಲ್ಲಿ ಬಿಜೆಪಿಯ ಸಿ.ಆರ್. ಪಾಟೀಲ್ ಅವರನ್ನು ಎದುರಿಸಲು ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತು.


ಬಿಜೆಪಿಯ ಭದ್ರಕೋಟೆ

ಕಳೆದ ಎರಡು ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಗುಜರಾತ್‌ನ ಎಲ್ಲಾ 26 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ 25 ಕ್ಷೇತ್ರಗಳಲ್ಲಿ ಮಾತ್ರ ಮತದಾನ ನಡೆಯಲಿದ್ದು, ಸೂರತ್‌ನಲ್ಲಿ ಬಿಜೆಪಿ ಅವಿರೋಧವಾಗಿ ಗೆಲುವು ಸಾಧಿಸಿದೆ.

ಏಕೈಕ ಮುಸ್ಲಿಂ ಶಾಸಕ

ಪ್ರಸ್ತುತ ಗುಜರಾತ್ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಏಕೈಕ ಮುಸ್ಲಿಂ ಶಾಸಕ ಇಮ್ರಾನ್ ಖೇಡವಾಲಾ ಅವರು ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಶೇ.10ರಷ್ಟು ಮುಸ್ಲಿಂ ಜನಸಂಖ್ಯೆ ಇದ್ದರೂ ಕಾಂಗ್ರೆಸ್‌ ಒಂದೇ ಒಂದು ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ ಎಂಬ ಬಗ್ಗೆ ಇವರು ಸ್ಪಷ್ಟ ವಿವರಣೆ ನೀಡಲು ವಿಫಲರಾಗಿದ್ದಾರೆ.

ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು

1957ರಲ್ಲಿ ಭರೂಚ್ ಲೋಕಸಭಾ ಸ್ಥಾನವು 1984ರವರೆಗೆ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. 1977 ಮತ್ತು 1984ರ ನಡುವೆ ಅಹ್ಮದ್ ಪಟೇಲ್ ಮೂರು ಬಾರಿ ಗೆದಿದ್ದರು. ಇವರು ಈ ಸ್ಥಾನದಿಂದ ಗೆದ್ದ ಕೊನೆಯ ಕಾಂಗ್ರೆಸ್ ಸಂಸದರಾಗಿದ್ದರು. 1989ರಲ್ಲಿ ಅವರನ್ನು ಸೋಲಿಸಿದ ಬಿಜೆಪಿಯ ಚಂದುಭಾಯಿ ದೇಶಮುಖ್, ಬಳಿಕ ಮನ್ಸುಖ್ ವಾಸವಾ ಮರು ಚುನಾಯಿಸಲ್ಪಟ್ಟರು. ಈ ವರ್ಷ ಮನ್ಸುಖ್ ಈ ಕ್ಷೇತ್ರದಿಂದ ಏಳನೇ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ.

ಅಹ್ಮದ್ ಪಟೇಲ್ ಅವರ ಮಕ್ಕಳಾದ ಫೈಸಲ್ ಮತ್ತು ಮುಮ್ತಾಜ್ ಅವರು ಭರೂಚ್‌ನಿಂದ ಟಿಕೆಟ್ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಇಮ್ರಾನ್‌ ಖೇಡಾವಾಲಾ, ಅವರು ಅಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕ್ಷೇತ್ರದಲ್ಲಿ ಸುಮಾರು ಮೂರು ಲಕ್ಷ ಮುಸ್ಲಿಂ ಮತಗಳಿವೆ. ಅವರೆಲ್ಲರೂ ಮತ ಹಾಕಿದರೂ ಸಾಕಾಗುವುದಿಲ್ಲ. ಕೇವಲ ಮುಸ್ಲಿಂ ಮತಗಳಿಂದ ಗೆಲ್ಲಲು ಸಾಧ್ಯವಿಲ್ಲ. ಹಿಂದೂ ಮತಗಳನ್ನು ಪಡೆಯಬೇಕು ಎನ್ನುತ್ತಾರೆ.

ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಮತ್ತು ಇಸ್ಲಾಮಿಕ್ ಹೂಡಿಕೆ ಸಲಹಾ ಸೇವೆಗಳ ಪ್ಲಾಟ್‌ಫಾರ್ಮ್ ಪಾರ್ಸೋಲಿ ಕಾರ್ಪೊರೇಷನ್ ಮಾಲೀಕ ಜಾಫರ್ ಸರೇಶ್‌ವಾಲಾ, ಯಾವುದೇ ರಾಷ್ಟ್ರೀಯ ಪಕ್ಷವು ಮುಸ್ಲಿಮರನ್ನು ಕಣಕ್ಕಿಳಿಸಿಲ್ಲ ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ಗುಜರಾತ್‌ನಲ್ಲಿ ಮುಸ್ಲಿಮರ ಬಗ್ಗೆ ಹೆಮ್ಮೆಪಡಲು ಸಾಕಷ್ಟು ವಿಷಯಗಳಿವೆ. 2002ರ ಅನಂತರ ಮುಸ್ಲಿಮರು ಶಿಕ್ಷಣ, ಉದ್ಯಮಶೀಲತೆ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದಾರೆ ಎನ್ನುತ್ತಾರೆ ಸುರೇಶ್ ವಾಲಾ.

ಗುಜರಾತ್‌ನಲ್ಲಿ ಬಿಜೆಪಿ 30 ವರ್ಷಗಳಿಂದ ಅಧಿಕಾರದಲ್ಲಿದೆ. 2022ರವರೆಗೂ ಮೂವರು ಶಾಸಕರಾದ ಗಯಾಸುದ್ದೀನ್ (ಶೇಖ್), ಜಾವೇದ್ ಪೀರ್ಜಾದಾ ಮತ್ತು ನಾನು ಇದ್ದೆವು. ಈಗ ನಾನು ಒಬ್ಬನೇ ರಾಜ್ಯಾದ್ಯಂತ ಇರುವ ಎಲ್ಲಾ ಮುಸ್ಲಿಂ ಸಮಸ್ಯೆಗಳನ್ನು ನಿಭಾಯಿಸಬೇಕಾಗಿದೆ ಎನ್ನುತ್ತಾರೆ ಶಾಸಕ ಇಮ್ರಾನ್ ಖೇಡವಾಲಾ.

Continue Reading

ದೇಶ

Rahul Gandhi : ಸುಳ್ಳು ಹರಡಬೇಡಿ, ಸುಮ್ಮನಿರಿ; ರಾಹುಲ್​ ಗಾಂಧಿಗೆ ಬಹಿರಂಗ ಪತ್ರ ಬರೆದು ಕುಟುಕಿದ ಯೂನಿವರ್ಸಿಟಿಗಳ ಕುಲಪತಿಗಳು

Rahul Gandhi: ಉಪಕುಲಪತಿಗಳ ನೇಮಕಾತಿಯನ್ನು ಅರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಮಾಡುವ ಬದಲು ಬಿಜೆಪಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳೊಂದಿಗಿನ ಸಂಬಂಧದ ಆಧಾರದ ಮೇಲೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಶಿಯಲ್ ಮೀಡಿಯಾ ಪೋಸ್ಟ್​ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಆ ಮೂಲಕ ಉಪಕುಲಪತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯ ಅರ್ಹತೆಯನ್ನು ಪ್ರಶ್ನಿಸಲಾಗಿದೆ ಎಂದು 181 ಉಪಕುಲಪತಿಗಳು ಪತ್ರ ಬರೆದಿದ್ದಾರೆ.

VISTARANEWS.COM


on

Rahul Gandi
Koo

ನವದೆಹಲಿ: ವಿಶ್ವವಿದ್ಯಾಲಯಗಳ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿರುವ ಹೇಳಿಕೆ ಖಂಡಿಸಿ 180 ಕ್ಕೂ ಹೆಚ್ಚು ಉಪಕುಲಪತಿಗಳು ಮತ್ತು ಹೆಸರಾಂತ ಶಿಕ್ಷಣ ತಜ್ಞರು ಬಹಿರಂಗ ಪತ್ರ ಬರೆದಿದ್ದಾರೆ. “ಜ್ಯೋತಿ ಬೆಳಗುವವರಿಗೇ ಬೆಳಕು” ಎಂಬ ಶೀರ್ಷಿಕೆಯ ಬಹಿರಂಗ ಪತ್ರ ಬರೆದಿದೆ. ಉಪಕುಲಪತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯ ಅರ್ಹತೆಯನ್ನು ರಾಹುಲ್ ಗಾಂಧಿ ಪ್ರಶ್ನಿಸಿರುವುದಕ್ಕೆ ಈ ಪತ್ರದಲ್ಲಿ ತಕರಾರು ಎತ್ತಲಾಗಿದೆ.

ಉಪಕುಲಪತಿಗಳ ನೇಮಕಾತಿಯನ್ನು ಅರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಮಾಡುವ ಬದಲು ಬಿಜೆಪಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳೊಂದಿಗಿನ ಸಂಬಂಧದ ಆಧಾರದ ಮೇಲೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಶಿಯಲ್ ಮೀಡಿಯಾ ಪೋಸ್ಟ್​ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಆ ಮೂಲಕ ಉಪಕುಲಪತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯ ಅರ್ಹತೆಯನ್ನು ಪ್ರಶ್ನಿಸಲಾಗಿದೆ ಎಂದು 181 ಉಪಕುಲಪತಿಗಳು ಪತ್ರ ಬರೆದಿದ್ದಾರೆ.

ಉಪಕುಲಪತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಕಠಿಣ ಪಾರದರ್ಶಕ, ಕಠಿಣ ಕಾರ್ಯವಿಧಾನದಿಂದ ಕೂಡಿದೆ. ಇದು ಅರ್ಹತೆ ಪಾಂಡಿತ್ಯದ ವ್ಯತ್ಯಾಸ ಮತ್ತು ಸಮಗ್ರತೆಯ ಮೌಲ್ಯಗಳನ್ನು ಆಧರಿಸಿದೆ. ಈ ಆಯ್ಕೆಯು ಸಂಪೂರ್ಣವಾಗಿ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸಾಧನೆಯನ್ನು ಆಧರಿಸಿದೆ. ವಿಶ್ವವಿದ್ಯಾಲಯಗಳನ್ನು ಮುಂದೆ ಕೊಂಡೊಯ್ಯುವ ದೃಷ್ಟಿಕೋನ ಹೊಂದಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

ಸತ್ಯವನ್ನು ಕಾಲ್ಪನಿಕತೆಯಿಂದ ಪ್ರತ್ಯೇಕಿಸುವಲ್ಲಿ ವಿವೇಚನೆ ಪ್ರದರ್ಶಿಸಬೇಕು. ಆಧಾರರಹಿತ ವದಂತಿಗಳನ್ನು ಹರಡುವುದರಿಂದ ದೂರವಿರಬೇಕು” ಎಂದು ಶಿಕ್ಷಣ ತಜ್ಞರು ರಾಹುಲ್ ಗಾಂಧಿಗೆ ಕುಟುಕಿದ್ದಾರೆ.

ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಸುಳ್ಳು ಹರಡುತ್ತಿರುವ ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ತಜ್ಞರು ಆಗ್ರಹಿಸಿದ್ದಾರೆ.

“ರಾಹುಲ್ ಗಾಂಧಿ ಅವರು ಸುಳ್ಳು ಹೇಳುತ್ತಿದ್ದಾರೆ ಮತ್ತು ಅದರಿಂದ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಉಪಕುಲಪತಿಗಳ ಹುದ್ದೆಗಳ ಮಾನಹಾನಿ ಮಾಡಿದ್ದಾರೆ. ಆದ್ದರಿಂದ, ಕಾನೂನಿನ ಪ್ರಕಾರ ಅವರ ವಿರುದ್ಧ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಾಮಾಣಿಕವಾಗಿ ಪ್ರಾರ್ಥಿಸುತ್ತೇವೆ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಉಪಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ನೇಮಕ ಮಾಡಲಾಗುತ್ತಿಲ್ಲ. ಆಡಳಿತಾರೂಢ ಬಿಜೆಪಿ ಸೈದ್ಧಾಂತಿಕ ನೆಲೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ ದೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ನೇಮಕ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಯುಪಿ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಪತ್ರಕ್ಕೆ ಪ್ರತಿಕ್ರಿಯಿಸಿ, “ಆರ್​ಎಸ್​​ಎಸ್​​ ಸಂಬಂಧ ಹೊಂದಿರುವ ಜನರನ್ನು ವಿಸಿಗಳನ್ನಾಗಿ ಮಾಡಲಾಗುತ್ತಿದೆ. ಈ ದೇಶದ ಭವಿಷ್ಯದ ಬಗ್ಗೆ ಕಾಳಜಿ ಹೊಂದಿರುವವರು ಚಿಂತಿತರಾಗಿದ್ದಾರೆ. ಒಂದು ರೀತಿಯಲ್ಲಿ ಇದು ಕ್ರಿಮಿನಲ್ ಕೃತ್ಯ ಮತ್ತು ದೇಶದ ಜನರು ಮತ್ತು ದೇಶದ ಭವಿಷ್ಯದೊಂದಿಗೆ ಆಟವಾಡುವುದು ಎಂದು ನಾನು ಭಾವಿಸುತ್ತೇನೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

Prajwal Revanna Case: ಸಿಐಡಿ ಸೈಬರ್‌ಸೆಲ್‌ನಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸ್ಥಳವನ್ನು ಎಸ್‌ಐಟಿ ಅಧಿಕಾರಿಗಳು ಮಹಜರು ಮಾಡಿದ್ದಾರೆ. ಈಗಾಗಲೇ ನ್ಯಾಯಾಧೀಶರ ಎದುರು ಕಳೆದ ಶುಕ್ರವಾರ (ಮೇ 3) ಸಿಎಆರ್‌ಪಿಸಿ 164 ಅಡಿಯಲ್ಲಿ ಸಂತ್ರಸ್ತ ಮಹಿಳೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ವಿಚಾರಣೆ ವೇಳೆ ತನ್ನನ್ನು ಹಾಸನದ ಎಂಪಿ ಕ್ವಾಟ್ರರ್ಸ್‌ ಮಾತ್ರವಲ್ಲದೆ ಬೆಂಗಳೂರಿನ ನಿವಾಸದಲ್ಲಿ ಸಹ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಅತ್ಯಾಚಾರ ಪ್ರಕರಣದ ಬಗ್ಗೆ ಮಹಜರು ಮಾಡಲಾಗುತ್ತಿದೆ.

VISTARANEWS.COM


on

Prajwal Revanna Case site inspection by SIT team in HD Revanna Basavanagudi residence
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಇನ್ನು ಎಚ್.ಡಿ. ರೇವಣ್ಣ ನಿವಾಸದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಸವನಗುಡಿಯ ನಿವಾಸದಲ್ಲಿ ಮಹಜರು ಮಾಡಲಾಗಿದೆ.

ಸಿಐಡಿ ಸೈಬರ್‌ಸೆಲ್‌ನಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸ್ಥಳವನ್ನು ಎಸ್‌ಐಟಿ ಅಧಿಕಾರಿಗಳು ಮಹಜರು ಮಾಡಿದ್ದಾರೆ. ಈಗಾಗಲೇ ನ್ಯಾಯಾಧೀಶರ ಎದುರು ಕಳೆದ ಶುಕ್ರವಾರ (ಮೇ 3) ಸಿಎಆರ್‌ಪಿಸಿ 164 ಅಡಿಯಲ್ಲಿ ಸಂತ್ರಸ್ತ ಮಹಿಳೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ವಿಚಾರಣೆ ವೇಳೆ ತನ್ನನ್ನು ಹಾಸನದ ಎಂಪಿ ಕ್ವಾಟ್ರರ್ಸ್‌ ಮಾತ್ರವಲ್ಲದೆ ಬೆಂಗಳೂರಿನ ನಿವಾಸದಲ್ಲಿ ಸಹ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಅತ್ಯಾಚಾರ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿರುವ ಎಚ್.ಡಿ. ರೇವಣ್ಣ ಅವರ ಬಸವನಗುಡಿ ನಿವಾಸದೆದುರು ಮಹಜರು ಮಾಡಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಬೆಡ್‌ರೂಮ್‌ನಲ್ಲಿ ಅಧಿಕಾರಿಗಳಿಗೆ ದೂರುದಾರೆ ಮಾಹಿತಿ ನೀಡಿದ್ದಾರೆ. ಎಲ್ಲೆಲ್ಲಿ? ಏನೇನು ನಡೆದಿತ್ತು ಎಂಬ ಬಗ್ಗೆ ಸಂತ್ರಸ್ತೆಯಿಂದ ನೇರವಾಗಿ ಮಾಹಿತಿ ಪಡೆದು ಹೇಳಿಕೆಯಂತೆ ಮಹಜರು ಪ್ರಕ್ರಿಯೆಯನ್ನು ನಡೆಸಲಾಗಿದೆ.

ನೋಟಿಸ್ ಕೊಟ್ಟು ನಮ್ಮನ್ನು ಮನೆಯ ಒಳಗೆ ಬಿಟ್ಟಿಲ್ಲ: ವಕೀಲ ಗೋಪಾಲ್

ಎಚ್‌.ಡಿ. ರೇವಣ್ಣ ಪರ ವಕೀಲ ಗೋಪಾಲ್ ಪ್ರತಿಕ್ರಿಯೆ ನೀಡಿ, ಈಗಾಗಲೇ ಹಲವಾರು ವಿಚಾರಗಳು ಎಲ್ಲರಿಗೂ ತಿಳಿದಿದೆ. ನಮ್ಮ‌ ಕಕ್ಷಿದಾರ ಎಚ್.ಡಿ. ರೇವಣ್ಣ ಅವರ ಹೊಳೆನರಸೀಪುರ ಮನೆಯಲ್ಲಿ ಮಹಜರು ನಡೆದಿದೆ. ಎರಡು ಪ್ರಕರಣಗಳಲ್ಲಿ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಮಹಜರು ಮಾಡುವ ಸಂದರ್ಭದಲ್ಲಿ ನೋಟಿಸ್ ಕೊಡಬೇಕು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ‌ ಮಹಜರು ಪ್ರಕ್ರಿಯೆ ಮಾಡಲಾಗಿದೆ. ಭವಾನಿ ರೇವಣ್ಣ ಅವರು ಮಹಜರು ಪ್ರಕ್ರಿಯೆಗೆ ಅನುಮತಿ ನೀಡಿದ್ದಾರೆ. ಹೊಳೆನರಸೀಪುರದಲ್ಲಿ ಮಹಜರು ನಡೆದಾಗ ನೋಟಿಸ್ ನೀಡಿದರು. ನನ್ನ ಕಡೆಯಿಂದ ಅವರಿಗೆ ಸಹಕಾರ ನೀಡಿದ್ದೇನೆ. ಹೊಳೆನರಸೀಪುರ ಮಹಜರು ಸಂದರ್ಭದಲ್ಲಿ 4-5-2024ರಲ್ಲಿ ಬಸವನಗುಡಿ ಮನೆಯಲ್ಲಿ ಮಹಜರು ಮಾಡಲು‌ ಸಹಕಾರ ಕೇಳಿದರು. ಈ ಬಗ್ಗೆ ಎಸ್‌ಐಟಿಯಿಂದ ನೋಟಿಸ್ ನೀಡಲಾಗಿದೆ. ನೋಟಿಸ್ ಕೊಟ್ಟು, ನಮ್ಮನ್ನು ಮನೆಯ ಒಳಗೆ ಬಿಟ್ಟಿಲ್ಲ. ಬಸವನಗುಡಿಯ ಮನೆಯ‌‌ ಮಹಜರು ಸಂದರ್ಭದಲ್ಲಿ ನನಗೆ‌ ಮನೆಯೊಳಗೆ ಅನುಮತಿ ನೀಡಿಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಅಪರಹಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ರೇವಣ್ಣ ಜತೆ ಚರ್ಚೆ ನಡೆಸಿದ ವಕೀಲರು

ಎಚ್‌.ಡಿ. ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವ ಕಾರಣ ಅವರನ್ನು ವಕೀಲ ಮೂರ್ತಿ ಡಿ ನಾಯಕ್ ಭೇಟಿ ಮಾಡಿ ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವಕೀಲರ ಜತೆ ರೇವಣ್ಣ ಚರ್ಚೆ ನಡೆಸಿದ್ದಾರೆ. ಜಾಮೀನು ಸಲ್ಲಿಕೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ.

Continue Reading
Advertisement
karnataka weather forecast
ಮಳೆ18 mins ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Female foeticide
ಪ್ರಮುಖ ಸುದ್ದಿ23 mins ago

Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ26 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Summer Holiday Fashion
ಫ್ಯಾಷನ್26 mins ago

Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

Woman
ಪ್ರಮುಖ ಸುದ್ದಿ31 mins ago

ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

IPL 2024
ಪ್ರಮುಖ ಸುದ್ದಿ31 mins ago

IPL 2024 : ಧೋನಿ ಡಕ್​ಔಟ್ ಆಗುವಾಗ ಜೋರಾಗಿ ನಕ್ಕ ಪ್ರೀತಿ ಜಿಂಟಾ; ಇಲ್ಲಿದೆ ವಿಡಿಯೊ

couple came to Gangavathi from Dubai to vote
ಕರ್ನಾಟಕ35 mins ago

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

Lok Sabha Election-2024
ದೇಶ39 mins ago

Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

marriage cancel in kodagu
ಕೊಡಗು56 mins ago

Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

Jasprit Bumrah
ಪ್ರಮುಖ ಸುದ್ದಿ57 mins ago

Jasprit Bumrah : ಪತ್ನಿ ಸಂಜನಾಗೆ ರೊಮ್ಯಾಂಟಿಕ್​​ ಬರ್ತ್​ಡೇ ವಿಶಸ್​ ಹೇಳಿದ ಜಸ್​ಪ್ರಿತ್​ ಬುಮ್ರಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ26 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ23 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

ಟ್ರೆಂಡಿಂಗ್‌