Site icon Vistara News

Dasara 2023: “ಬದುಕಿದು ಕನ್ನಡ ಭಿಕ್ಷೆ, ಇಲ್ಲಿ ಸಮರಸವೇ ನಮ್ಮ ರಕ್ಷೆ” ಎಂದು ಸಂತಸ ವ್ಯಕ್ತಪಡಿಸಿದ ಹಂಸಲೇಖ!

hamsalekha

ಈ ಬಾರಿಯ ಮೈಸೂರು ದಸರಾ (Dasara 2023) ಉತ್ಪವವನ್ನು ಸಂಗೀತ ನಿರ್ದೇಶಕ ಹಂಸಲೇಖ ಉದ್ಭಾಟಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ (hamsalekha mysuru dasara festivities )ಆಚರಿಸಲಾಗುವುದು ಎಂದು ಘೋಷಿಸಿದರು. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಹಂಸಲೇಖ ಅವರು ʻʻಬದುಕಿದು ಕನ್ನಡ ಭಿಕ್ಷೆ. ಇಲ್ಲಿ ಸಮರಸವೇ ನಮ್ಮ ರಕ್ಷೆ’ʼʼ ಎಂಬ ಸಾಲನ್ನು ಹೇಳಿದರು.

ಹಂಸಲೇಖ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ “ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕನಸು ಈ ದಸರಾ. ರಾಜ್ಯ ಸರ್ಕಾರಕ್ಕೆ ಎಲ್ಲಾ ಕಲಾವಿದರ ಪರವಾಗಿ ನಾನು ಧನ್ಯವಾದ ಹೇಳುತ್ತೇನೆ. ನಾನು ಅನಾರೋಗ್ಯದಲ್ಲಿದ್ದಾಗ ಉದ್ಯಮಕ್ಕಿಂತಲೂ ಮೊದಲು ಸಿಎಂ, ಡಿಸಿಎಂ ನನ್ನ ಕ್ಷೇಮವನ್ನು ವಿಚಾರಿಸಿದರು. ನಾನು ಕಲಾ ಪ್ರತಿನಿಧಿ ಆಗಿದ್ದೇನೆ. ದಸರಾ ಹಾಡನ್ನು ಮಾಡುವುದಕ್ಕೆ ಆಸೆ ಉಕ್ಕುತ್ತ ಇದೆ. ‘`ಬದುಕಿದು ಕನ್ನಡ ಭಿಕ್ಷೆ. ಇಲ್ಲಿ ಸಮರಸವೇ ನಮ್ಮ ರಕ್ಷೆ’ʼ ಎಂದು ಹಂಸಲೇಖ ಸಾಲನ್ನು ಹೇಳಿದರು.

ದಸರಾ ಅಕ್ಟೋಬರ್​ 1 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ.

ಇದನ್ನೂ ಓದಿ: Mysore Dasara : ಈ ಬಾರಿಯ ದಸರಾ ಮೆರವಣಿಗೆಯಲ್ಲಿ 5 ಗ್ಯಾರಂಟಿಗಳ ಸ್ತಬ್ಧಚಿತ್ರ ಗ್ಯಾರಂಟಿ, ಜತೆಗೆ ಏರ್‌ ಶೋ ಪ್ಲ್ಯಾನ್‌

ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ.

ವಿಶೇಷವೆಂದರೆ, ಈ ಬಾರಿಯ ದಸರಾ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಯ (Congress guarantee) ಪರಿಕಲ್ಪನೆಗಳನ್ನು ಆಧರಿಸಿದ ಸ್ತಬ್ಧಚಿತ್ರಗಳು ಇರಲಿವೆ. ಜತೆಗೆ ಏರ್‌ ಶೋ (Airshow in Mysore) ಆಯೋಜಿಸುವ ಬಗ್ಗೆಯೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajanath Sing) ಅವರ ಜತೆ ಮಾತನಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Exit mobile version