Hanuman Flag : ನೀನೇ ಗಾಂಡು, ನೀನು Seedless: ಸಿ.ಟಿ ರವಿ, ಶಾಸಕ ನರೇಂದ್ರ ಸ್ವಾಮಿ ಮಧ್ಯೆ ಅವಾಚ್ಯ ವಾರ್‌ - Vistara News

ರಾಜಕೀಯ

Hanuman Flag : ನೀನೇ ಗಾಂಡು, ನೀನು Seedless: ಸಿ.ಟಿ ರವಿ, ಶಾಸಕ ನರೇಂದ್ರ ಸ್ವಾಮಿ ಮಧ್ಯೆ ಅವಾಚ್ಯ ವಾರ್‌

Hanuman Flag : ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಮತ್ತು ಸಿ.ಟಿ. ರವಿ ನಡುವೆ ಗಾಂಡು, ಸೀಡ್‌ಲೆಸ್‌ ವಾರ್‌ ನಡೆದಿದೆ. ಸಿ.ಟಿ. ರವಿ ಅವರು ರಾಷ್ಟ್ರ ಧ್ವಜವನ್ನು ತಾಲಿಬಾನ್‌ ಧ್ವಜ ಎಂದು ಹೇಳಿದ್ದಾರೆ ಎಂದು ನರೇಂದ್ರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

hanuman Flag PM Narendra Swamy CT Ravi fight
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ/ ಚಿಕ್ಕಮಗಳೂರು: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ Hanuman Flag) ವಿವಾದ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಿರುವ ಜತೆಗೇ ರಾಜಕಾರಣಿಗಳ ನಡುವೆ ತೀವ್ರ ಮತ್ತು ಅಸಭ್ಯ ಪದ (Indecent words) ಬಳಕೆಯ ವಾಗ್ವಾದಕ್ಕೂ ಕಾರಣವಾಗಿದೆ. ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿ ಸೋಮವಾರ ನಡೆದ ಬೃಹತ್‌ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕ ಸಿ.ಟಿ. ರವಿ (BJP Leader CT Ravi) ಅವರು ರಾಷ್ಟ್ರಧ್ವಜವನ್ನು ತಾಲಿಬಾನ್‌ ಧ್ವಜ ಎಂದು ಹೇಳಿದ್ದಾರೆ ಎಂದು ಮಳವಳ್ಳಿ ಶಾಸಕ ಪಿಎಂ ನರೇಂದ್ರ ಸ್ವಾಮಿ (Congress MLA PM Narendra Swamy) ಆರೋಪಿಸಿದ್ದಲ್ಲದೆ, ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ.

ಮಂಡ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರು ಸಿ.ಟಿ. ರವಿ ಅವರ ಮೇಲೆ ಕಿಡಿ ಕಾರಿದ್ದಾರೆ.

ʻʻಅಯೋಗ್ಯ ಸಿ.ಟಿ ರವಿ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಅಂದಿದ್ದಾನೆ. ಇವರು ರಾಷ್ಟ್ರ ಧ್ವಜ, ಹೆತ್ತ ತಾಯಿಗೆ ಅವಮಾನ ಮಾಡ್ತಾರೆ. ಸಿ.ಟಿ ರವಿ ವಿರುದ್ದ ನಾನು ಇವತ್ತೆ ದೂರು ನೀಡ್ತಿದ್ದೇನೆ. ಸಿಟಿ ರವಿ ತಾಲೀಬಾನ್ ಧ್ವಜ ಎಂದಿರುವ ಬಗ್ಗೆ ಸಾಕ್ಷಿ ಸಮೇತ ಹೋಗಿ ದೂರು ನೀಡ್ತೇನೆʼʼ ಎಂದು ಹೇಳಿದ ನರೇಂದ್ರ ಸ್ವಾಮಿ ಅವರು ಮಾತಿನ ಭರದಲ್ಲಿ ಸಿಟಿ ರವಿಗೆ ಗಾಂಡು ಎಂದು ಕರೆದಿದ್ದಾರೆ.

ʻʻಸಿ.ಟಿ ರವಿ ನನಗೂ ಸ್ನೇಹಿತ. ಆದರೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದನ್ನು ಸಹಿಸಲಾಗುವುದಿಲ್ಲ. ಆತ ರಾಷ್ಟ್ರಧ್ವಜದ ಕುರಿತ ಹೇಳಿಕೆ ವಾಪಸ್ ಪಡೆದುಕೊಂಡರೆ ಆತನ ವಿರುದ್ಧ ಹೇಳಿರುವ ನನ್ನ ಹೇಳಿಕೆ ವಾಪಸ್ಸು ಪಡೆಯುತ್ತೇನೆʼʼ ಎಂದು ಅವಾಚ್ಯ ಶಬ್ದದಿಂದ ಸಿಟಿ ರವಿ ಅವರನ್ನು ನಿಂದಿಸಿದ ಪಿಎಂ ನರೇಂದ್ರ ಸ್ವಾಮಿ ಹೇಳಿದರು.

ಇದನ್ನೂ ಓದಿ : Hanuman Flag : ಮಂಡ್ಯಕ್ಕೆ ಬೆಂಕಿ ಹಚ್ಚಿದರೆ ಪರಿಣಾಮ ನೆಟ್ಟಗಿರಲ್ಲ ?; HDKಗೆ ಚಲುವರಾಯ ಸ್ವಾಮಿ ವಾರ್ನಿಂಗ್

HE IS Seedless : ಗಾಂಡು ಹೇಳಿಕೆಗೆ ಸಿ.ಟಿ. ರವಿ ಪ್ರತಿಕ್ರಿಯೆ

ಚಿಕ್ಕಮಗಳೂರು: ತಮ್ಮನ್ನು ಅಯೋಗ್ಯ, ಗಾಂಡು ಎಂಬ ಪದ ಬಳಸಿ ನಿಂದಿರುವ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಅವರ ಹೇಳಿಕೆ ಬಿಜೆಪಿಯ ಹಿರಿಯ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.

Now he is seedless (ಅವರು ಈಗ ಬೀಜರಹಿತ) ಎಂದು ಸಿ.ಟಿ ರವಿ ಅವರು ನರೇಂದ್ರ ಸ್ವಾಮಿಯನ್ನು ಲೇವಡಿ ಮಾಡಿದ್ದಾರೆ. ನರೇಂದ್ರ ‌ಸ್ವಾಮಿ ಮಂತ್ರಿಗಿರಿಗಾಗಿ ಅರ್ಜಿ ಮೇಲೆ ಅರ್ಜಿ ಹಾಕಿ, ಈಗ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಯಾರು ಅದೇ ರೀತಿ ಇರ್ತಾರೋ, ಅವರು ಮಾತ್ರ ಅಂತಹ ಪದ ಬಳಕೆ ಮಾಡುತ್ತಾರೆ. ಅವರ ಮಾತಿನ ದಾಟಿ ನೋಡಿದ್ರೆ now he is seedless. ಆ ಕಾರಣಕ್ಕೆ ಅವರ ಬಾಯಿಂದ ಅಂತಹಾ ಮಾತು ಬಂದಿದೆʼʼ ಎಂದು ಸಿ.ಟಿ. ರವಿ ಹೇಳಿದರು.

ʻʻಸೀಡ್ ಲೆಸ್ ಅಂದ್ರೆ ಗೊತ್ತಲ್ಲಾ… ಅದರಲ್ಲಿ ಬೀಜ ಇರಲ್ಲ… ಏನೂ ಹುಟ್ಟಲ್ಲ. ರಾಜಕೀಯವಾಗಿ now he is seedless. ಅದಕ್ಕೆ ಅವರು ಆ ಪದ ಬಳಸಿದ್ದಾರೆʼʼ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shivraj Singh Chouhan: ಮೋದೀಜಿ ನಾಯಕತ್ವದಲ್ಲಿ ಭಾರತ ವಿಶ್ವಗುರುವಾಗಲಿದೆ ಎಂದ ಶಿವರಾಜ್ ಸಿಂಗ್ ಚೌಹಾಣ್

Shivraj Singh Chouhan: ಕಲಬುರಗಿಯಲ್ಲಿ ಆಯೋಜಿಸಿದ್ದ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾತನಾಡಿದ್ದಾರೆ.

VISTARANEWS.COM


on

Shivraj Singh Chouhan
Koo

ಕಲಬುರಗಿ: ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ವಿಶ್ವಗುರುವಾಗಲಿದೆ. ಈ ನಿಟ್ಟಿನಲ್ಲಿ ಎನ್‍ಡಿಎ 400 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲುವ ಮೋದಿಯವರ ಸಂಕಲ್ಪ ಈಡೇರಬೇಕಿದೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಹೇಳಿದರು.

ಕಲಬುರಗಿಯಲ್ಲಿ ಆಯೋಜಿಸಿದ್ದ ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷವನ್ನು ನಾಶ ಮಾಡುತ್ತಾರೆ. ಮಲ್ಲಿಕಾರ್ಜುನ ಖರ್ಗೆಯವರು ನೇತೃತ್ವ ವಹಿಸಿದ ಬಳಿಕ ಕಾಂಗ್ರೆಸ್ ಪಕ್ಷದ ಸ್ಥಿತಿ ಹದಗೆಟ್ಟಿದೆ ಎಂದು ವಿಶ್ಲೇಷಿಸಿದರು.

ಬಸವೇಶ್ವರರ ಪುಣ್ಯಭೂಮಿಗೆ ನಾನು ಬರಲು ಸಾಧ್ಯವಾಗಿದೆ, ಅವರಿಗೆ ನನ್ನ ನಮನಗಳು. ಜಗತ್ತಿನಲ್ಲಿ ಪ್ರಜಾಪ್ರಭುತ್ವ ಹುಟ್ಟಿದ್ದು ಈ ಪುಣ್ಯಭೂಮಿಯಲ್ಲಿ. ನಾವೆಲ್ಲರೂ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ನಿರತರಾಗಿದ್ದೇವೆ. ಕಾಂಗ್ರೆಸ್ ಕರ್ನಾಟಕ ಮತ್ತು ದೇಶವನ್ನು ಸರ್ವನಾಶ ಮಾಡಿದ್ದು, ಆ ಪಕ್ಷವನ್ನು ಕೊನೆಗಾಣಿಸುವ ನಿರ್ಧಾರವನ್ನು ಜನರು ಮಾಡಿದ್ದಾರೆ ಎಂದರು.

ಇದನ್ನೂ ಓದಿ | Fali s Nariman : ಹೋಗಿ ಬನ್ನಿ ನಾರಿಮನ್‌ ಸಾಬ್‌, ಕನ್ನಡಿಗರ ಮನಸ್ಸಿನಲ್ಲಿ ನಿಮ್ಮ ನೆನಪು ಸದಾ ಹಸಿರು

ಪಂಡಿತ್ ಜವಾಹರಲಾಲ್ ನೆಹದು ಅವರು ಮಹಾತ್ಮ ಗಾಂಧಿ ಅವರ ಮಾತನ್ನು ಕೇಳಲಿಲ್ಲ, ಆದರೆ ರಾಹುಲ್ ಗಾಂಧಿಯವರು ಮಹಾತ್ಮ ಗಾಂಧಿ ಅವರ ಮಹಾನ್ ಭಕ್ತ, ಅವರು ಕಾಂಗ್ರೆಸ್ ಅನ್ನು ಕೊನೆಗೊಳಿಸುತ್ತಾರೆ. ರಾಹುಲ್ ಗಾಂಧಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದ ಅವರು, ಬನಾರಸ್‍ನಲ್ಲಿ ಮಕ್ಕಳು ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸುತ್ತಾರೆ ಎಂಬಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಯಾರನ್ನು ಅವಮಾನಿಸುತ್ತಿದ್ದೀರಿ? ಸಾಮಾನ್ಯ ಪ್ರಜೆಯನ್ನು ಅವಮಾನಿಸುವುದು ಇಷ್ಟು ದೊಡ್ಡ ನಾಯಕನಿಗೆ ಸರಿಹೋಗುತ್ತದೆಯೇ? ಎಂದು ಪ್ರಶ್ನಿಸಿದರು.

ಖರ್ಗೆಯವರ ಶಕ್ತಿಹೀನ ನಾಯಕತ್ವ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಶಿವರಾಜ್ ಸಿಂಗ್ ಚೌಹಾಣ್, ಇತ್ತೀಚಿನ ದಿನಗಳಲ್ಲಿ ಖರ್ಗೆ ಅವರು ತುಂಬಾ ಅಸಮಾಧಾನಗೊಂಡಿದ್ದಾರೆ ಮತ್ತು ಜನರು ಏಕೆ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂದು ಕೇಳುತ್ತಿದ್ದಾರೆ. ಖರ್ಗೆ ಜೀ, ನೀವು ರಾಷ್ಟ್ರೀಯ ಅಧ್ಯಕ್ಷರಾದಾಗಿನಿಂದ ಕಾಂಗ್ರೆಸ್ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಹಾಗಾಗಿಯೇ ದಿನವೂ ಯಾರೋ ಒಬ್ಬರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಶಕ್ತಿ ಇಲ್ಲ, ಜನರ ಆಶಾಭಾವನೆಗೆ ಧಕ್ಕೆಯಾಗಿದೆ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿಯಂತಹ ನಾಯಕರು ಮಾತ್ರ ಕಾಂಗ್ರೆಸ್‍ನಲ್ಲಿ ಉಳಿಯುತ್ತಾರೆ ಹೊರತು ಬೇರೆ ಯಾರೂ ಉಳಿಯುವುದಿಲ್ಲ. ಕಾಂಗ್ರೆಸ್ ಹಾಳು ಮಾಡುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ ಎಂದ ಅವರು, ಈಗ ಕಾಂಗ್ರೆಸ್ ಅಂತ್ಯ ಕಾಣುತ್ತಿದೆ ಎಂದು ತಿಳಿಸಿದರು.

ಅಯೋಧ್ಯೆಯಲ್ಲಿ ರಾಮಲಲ್ಲಾನ ಭವ್ಯ ಮಂದಿರವನ್ನು ನಿರ್ಮಿಸಲಾಯಿತು, ಇಡೀ ದೇಶ ಮಾತ್ರವಲ್ಲ, ಇಡೀ ಜಗತ್ತೇ ಸಂತೋಷ ಪಟ್ಟಿತು. ಪ್ರತಿ ಹಳ್ಳಿಯಲ್ಲಿ ಕೇಸರಿ ಧ್ವಜಗಳನ್ನು ಹಾರಿಸಲಾಯಿತು, ದೀಪಗಳನ್ನು ಬೆಳಗಿಸಲಾಯಿತು. ಸೋನಿಯಾ ಮೇಡಂ, ಖರ್ಗೆ ಜೀ ಮತ್ತು ರಾಹುಲ್ ಬಾಬಾ ಅವರಿಗೂ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಲಾಗಿತ್ತು, ಆದರೆ ಮೋದೀಜಿಯನ್ನು ವಿರೋಧಿಸುತ್ತಲೇ ಕಾಂಗ್ರೆಸ್ ರಾಮನನ್ನೇ ವಿರೋಧಿಸತೊಡಗಿತು. ಕಾಂಗ್ರೆಸ್ಸಿಗರು ಅಲ್ಲಿ ಮಂದಿರ ಕಟ್ಟುತ್ತೇವೆ ಎಂದು ಹೇಳುತ್ತಿದ್ದರು, ಆದರೆ ದಿನಾಂಕ ಹೇಳುವುದಿಲ್ಲ. ಈಗ ನೋಡಿ, ಜನವರಿ 22 ರಂದು, ಅಯೋಧ್ಯೆಯ ಭವ್ಯವಾದ ಮತ್ತು ದೈವಿಕ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆÀ ನಡೆದಿದೆ ಎಂದರು.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 400 ದಾಟುವ ಗುರಿಯನ್ನು ಪ್ರಧಾನಿ ಹೊಂದಿದ್ದಾರೆ. ಬಿಜೆಪಿ ಏಕಾಂಗಿಯಾಗಿ 370 ಮತ್ತು ಎನ್‍ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಮೋದಿಯವರನ್ನು ಮತ್ತೊಮ್ಮೆ ಭಾರತದ ಪ್ರಧಾನಿಯನ್ನಾಗಿ ಮಾಡಬೇಕು. ಕರ್ನಾಟಕದಲ್ಲಿ ಈ ಬಾರಿ 28 ಲೋಕಸಭಾ ಸ್ಥಾನಗಳ ಪೈಕಿ 28 ಸ್ಥಾನ ಗೆಲ್ಲಬೇಕಿದೆ ಎಂದರು.

ಕರ್ನಾಟಕದಲ್ಲಿ ಬಿಜೆಪಿ 2014ರಲ್ಲಿ 17 ಮತ್ತು 2019ರಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಈಗ 2024 ರಲ್ಲಿ ನಾವು ಎಲ್ಲಾ 28 ಸ್ಥಾನಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಬೇಕಾಗಿದೆ. 2047ರ ವೇಳೆಗೆ ನಮ್ಮ ದೇಶ ಸಂಪೂರ್ಣ ಅಭಿವೃದ್ಧಿ ಹೊಂದಿದ ಭಾರತವಾಗಲಿದೆ ಎಂಬುದು ಪ್ರಧಾನಿ ಮೋದಿಯವರ ಭರವಸೆ. ಕರ್ನಾಟಕದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಖರ್ಗೆಯವರ ಆರೋಪಗಳಿಗೆ ಉತ್ತರ ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ಮೋದಿಯವರ ನೇತೃತ್ವದಲ್ಲಿ ನವ ಭಾರತ ನಿರ್ಮಾಣ

ಮೋದಿಯವರ ನೇತೃತ್ವದಲ್ಲಿ ನವ ಭಾರತ ನಿರ್ಮಾಣವಾಗುತ್ತಿದೆ. ಆದರೆ ಕಾಂಗ್ರೆಸ್ ದೇಶವನ್ನು ಎಲ್ಲಿಗೆ ಕೊಂಡೊಯ್ದಿದೆ ನೋಡಿ ಎಂದ ಶಿವರಾಜ್ ಸಿಂಗ್ ಚೌಹಾಣ್, ಭಾರತವನ್ನು ಹಗರಣಗಳ ದೇಶ ಎಂದು ಕರೆಯಲಾಗುತ್ತಿತ್ತು, ಯಾರೂ ಹೂಡಿಕೆಗೆ ಬರಲು ಸಿದ್ಧರಿರಲಿಲ್ಲ. 2ಜಿ ಹಗರಣ, 4ಜಿ ಹಗರಣ, ಸೋದರ ಮಾವ ಹಗರಣ ಹೀಗೆ ಎಷ್ಟು ಹಗರಣಗಳು ನಡೆದಿವೆಯೋ ಗೊತ್ತಿಲ್ಲ, ಮೋದಿಜಿ ಭಾರತದ ಪ್ರಧಾನಿಯಾದ ಮೇಲೆ ನಾನು ತಿನ್ನುವುದಿಲ್ಲ, ಯಾರಿಗೂ ತಿನ್ನಲು ಬಿಡುವುದಿಲ್ಲ ಎಂದರು. ಮೊದಲು ಸಣ್ಣ ದೇಶಗಳು ನಮ್ಮನ್ನು ಹೆದರಿಸುತ್ತಿದ್ದವು, ಆದರೆ ಈಗ ಚೀನಾ ಸೈನಿಕರು ನಮ್ಮ ಗಡಿಯನ್ನು ಪ್ರವೇಶಿಸಲು ಪ್ರಯತ್ನಿಸಿದಾಗ, ಭಾರತೀಯ ಸೇನೆ ಅವರನ್ನು ಓಡಿಸಿದೆ ಎಂದು ಮೆಚ್ಚುಗೆ ಸೂಚಿಸಿದರು.

ರಷ್ಯಾ-ಉಕ್ರೇನ್ ಯುದ್ಧದಿಂದ ಹಲವು ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದರು. ಮೋದಿ ಜೀ ಎರಡೂ ದೇಶಗಳ ಅಧ್ಯಕ್ಷರನ್ನು ಕರೆದು, ಭಾರತದ ಮಕ್ಕಳು ತ್ರಿವರ್ಣ ಧ್ವಜವನ್ನು ಹಿಡಿದು ಹೊರಬರುವಾಗ, ಯುದ್ಧವು ನಿಲ್ಲುತ್ತದೆ ಮತ್ತು ನಮ್ಮ ಮಕ್ಕಳು ಯುದ್ಧದ ಮಧ್ಯದಿಂದ ಸುರಕ್ಷಿತವಾಗಿ ಭಾರತಕ್ಕೆ ಬರುತ್ತಾರೆ ಎಂದು ಹೇಳಿದರು. ಭಾರತದ ಆರ್ಥಿಕತೆಯು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಮೋದೀಜಿ ಅವರ ಮೂರನೇ ಅವಧಿಯಲ್ಲಿ, ನಮ್ಮ ಆರ್ಥಿಕತೆಯು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಮೋದಿಯವರ ನಾಯಕತ್ವದಲ್ಲಿ ಭಾರತ ಈಗ ವಿಶ್ವಗುರುವಾಗಲು ಹೊರಟಿದೆ ಎಂದು ವಿವರಿಸಿದರು.

ಇದನ್ನೂ ಓದಿ | Nadageethe Row : ಇದು ಎಡವಟ್ಟು ಗಿರಾಕಿ ಸರ್ಕಾರ, ಇಲ್ಲಿ ಅಧಿಕಾರಿಗಳದ್ದೇ ದರ್ಬಾರ್‌; ಅಶ್ವತ್ಥನಾರಾಯಣ

ಶಿವರಾಜ್ ಸಿಂಗ್ ಚೌಹಾಣ್ ಅವರು ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರಲ್ಲದೆ, ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದರು. ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಗೋಡೆ ಬರಹ ಬರೆದರು. ಪ್ರತಿದಿನ ಸಸಿ ನೆಡುವ ಪ್ರತಿಜ್ಞೆಯ ಭಾಗವಾಗಿ ಸಸಿಗಳನ್ನು ನೆಟ್ಟರು.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನಾಡಗೀತೆ, ಕವಿವಾಕ್ಯಕ್ಕೆ ಅಪಚಾರ ಆಗದಿರಲಿ

Vistara editorial: ಒಂದೇ ವಾರದಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡುವಂಥ ಎರಡು ಪ್ರಕರಣಗಳನ್ನು ಸರ್ಕಾರ ಮಾಡಿಕೊಂಡಿದೆ. ಕುವೆಂಪು ಅವರನ್ನು ಅಗೌರವಿಸುವ ಉದ್ದೇಶದಿಂದಲೇ ಸರ್ಕಾರ ಹೀಗೆ ಮಾಡಿದೆ ಎನ್ನಲಾಗದಿದ್ದರೂ, ಸರ್ಕಾರದ ಕ್ರಿಯೆಗಳಿಂದ ಕುವೆಂಪು ಅವರಿಗೆ ಅಗೌರವ ಆಗಿದೆ ಎಂಬುದಂತೂ ನಿಜ.

VISTARANEWS.COM


on

Vistara editorial, Do not disrespectful to the Anthem of Karnataka
Koo

ನಾಡಗೀತೆಯ ವಿಷಯದಲ್ಲಿ ರಾಜ್ಯ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಕುವೆಂಪು ವಿರಚಿತ ನಾಡಗೀತೆಯನ್ನು ಖಾಸಗಿ ಶಾಲೆಗಳಲ್ಲಿ ಹಾಡುವುದು ಕಡ್ಡಾಯವಲ್ಲ, ಐಚ್ಛಿಕ ಎಂಬ ಅರ್ಥ ಬರುವ ಸುತ್ತೋಲೆಯನ್ನು (Government Circular) ಸರ್ಕಾರ ಈ ಹಿಂದೆ ಹೊರಡಿಸಿತ್ತು. ಇದಕ್ಕೆ ರಾಜ್ಯಾದ್ಯಂತ ಪ್ರತಿರೋಧ ಎದುರಾದ ಕಾರಣ ಸರ್ಕಾರ (Karnataka Government) ಇದೀಗ ತಿದ್ದುಪಡಿಗೇ ತಿದ್ದುಪಡಿ ಮಾಡಿ ಮುಖ ಉಳಿಸಿಕೊಳ್ಳುವ ಪ್ರಯತ್ನ ಮಾಡಿದೆ. ಹೊಸ ಸುತ್ತೋಲೆ ಪ್ರಕಾರ, ಖಾಸಗಿ ಶಾಲೆಗಳಲ್ಲೂ ನಾಡಗೀತೆ ಹಾಡುವುದು ಕಡ್ಡಾಯ ಎಂದಿದೆ. ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂಬುದು ಮೂಲ ಆದೇಶ. ಅದನ್ನು ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಈಗ ಪ್ರಕಟಿಸಿರುವ ತಿದ್ದುಪಡಿಯಲ್ಲಿ ಹಿಂದಿನ ಅಂಶವನ್ನೇ ಉಳಿಸಿಕೊಳ್ಳಲಾಗಿದೆ, ಅಂದರೆ ಖಾಸಗಿ ಶಾಲೆಗಳನ್ನೂ ಸೇರಿಸಿ ಎಲ್ಲ ಶಾಲೆಗಳಿಗೆ ಅನ್ವಯಿಸಲಾಗಿದೆ(Vistara editorial).

ನಾಡಗೀತೆಗೆ ಸಂಬಂಧಿಸಿ ಹೈಕೋರ್ಟ್‌ಗೆ ನೀಡಬೇಕಾಗಿದ್ದ ದಾಖಲೆಯಲ್ಲಿ ಸರ್ಕಾರ ಈ ಎಡವಟ್ಟು ಮಾಡಿಕೊಂಡಿತ್ತು ಎನ್ನಲಾಗಿದೆ. ಅದೇನೇ ಇರಲಿ, ಇದರಿಂದ ಸರ್ಕಾರ ಪ್ರತಿಪಕ್ಷಗಳ ತೀವ್ರ ವಾಗ್ದಾಳಿ, ಗೇಲಿಗೆ ಒಳಗಾದದ್ದಂತೂ ನಿಜ. ಸರ್ಕಾರ ಪದೇಪದೆ ಭಾಷೆ- ಸಂಸ್ಕೃತಿಗೆ ಸಂಬಂಧಿಸಿದ ವಿಚಾರದಲ್ಲಿ ಎಡವಟ್ಟುಗಳನ್ನು ಮಾಡಿಕೊಳ್ಳುತ್ತಿದೆ; ಇದು ಅಧಿಕಾರಿಗಳ ದರ್ಬಾರಿನ ಸರ್ಕಾರ ಎಂದು ಪ್ರತಿಪಕ್ಷ ವ್ಯಾಖ್ಯಾನಿಸಿತ್ತು. ಮೂಲ ತಿದ್ದುಪಡಿಯನ್ನು ಮಾಡಿದ್ದರ ಹಿಂದಿನ ಉದ್ದೇಶ ನಿಗೂಢವಾಗಿದೆ. ಆದರೆ, ಯಾಕೆ ಇಂಥ ಪ್ರಮಾದಗಳು ಆಗುತ್ತಿವೆ? ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಈ ವಿಷಯದಲ್ಲಿ ಉತ್ತರದಾಯಿತ್ವ ಇಲ್ಲದವರಂತೆ ಯಾಕೆ ವರ್ತಿಸುತ್ತಿದೆ? ಇದು ಪರಿಶೀಲನೆ ಹಾಗೂ ಗಂಭೀರ ಕ್ರಮಕ್ಕೆ ಅರ್ಹವಾಗಿದೆ. ನಾಡಗೀತೆಯನ್ನು ಹಾಡುವುದಕ್ಕೂ ಅದರದೇ ಆದ ಕ್ರಮ, ಸಮಯ, ಶೈಲಿಯನ್ನು ಸರ್ಕಾರ ಅಂತಿಮಗೊಳಿಸಿ ನಿಗದಿಪಡಿಸಿದೆ. ಎಲ್ಲ ಶಾಲೆಗಳಲ್ಲೂ ಅದನ್ನು ಹಾಡುವುದು ಕಡ್ಡಾಯವಾಗಿತ್ತು. ಈಗ ಅದನ್ನು ಖಾಸಗಿ ಶಾಲೆಗಳು ಕೈಬಿಡಬಹುದು ಎಂಬ ಯೋಚನೆ ಅಧಿಕಾರಿಗಳಿಗೆ ಯಾಕೆ ಬಂತೋ ಗೊತ್ತಿಲ್ಲ. ನಾಡಗೀತೆಯನ್ನು ಹಾಡುವ ಉದ್ದೇಶ ಈ ನಾಡಿನ, ಇಲ್ಲಿನ ಭಾಷೆ ಹಾಗೂ ಸಂಸ್ಕೃತಿಯ ಘನತೆಯ ಬಗ್ಗೆ ಮಕ್ಕಳಿಗೆ ಅರ್ಥ ಮಾಡಿಸುವುದು. ಖಾಸಗಿ ಶಾಲೆಗಳ ಮಕ್ಕಳೂ ಈ ನಾಡಿನಲ್ಲಿ ಹುಟ್ಟಿ ಬೆಳೆಯುತ್ತಿರುವವರು ಮತ್ತು ಕನ್ನಡ ಭಾಷೆಯ ಬಗ್ಗೆ ಬಾಧ್ಯತೆ ಹೊಂದಿರುವವರು. ಹೀಗಾಗಿ ಖಾಸಗಿ ಶಾಲೆಗಳೂ ಇದನು ಹಾಡುವುದು ಕಡ್ಡಾಯವಾಗಿರಬೇಕು.

ಇತ್ತೀಚೆಗೆ ಇಂಥ ಇನ್ನೊಂದು ಎಡವಟ್ಟು ಕೂಡ ನಡೆದಿದೆ. ಸರ್ಕಾರಿ ವಸತಿ ಶಾಲಾ-ಕಾಲೇಜುಗಳ ಪ್ರವೇಶ ದ್ವಾರದಲ್ಲಿದ್ದ ʼಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ’ ಎಂಬ ಘೋಷವಾಕ್ಯವನ್ನು ಸದ್ದಿಲ್ಲದೆ ಬದಲಾಯಿಸಿ, ʼಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಮಾಡಲಾಗಿದೆ. ಇದರಿಂದ ಅಂಥ ಹಾನಿಯೇನಿಲ್ಲ ಎಂದು ಮೇಲ್ನೋಟಕ್ಕೆ ಕಾಣುತ್ತದೆ. ಆದರೆ ಹಲವಾರು ವರ್ಷಗಳಿಂದ ಈ ಮೂಲವಾಕ್ಯಕ್ಕೆ ಪ್ರೇರಣೆ ಕುವೆಂಪು ಅವರ ʼಬಾಗಿಲೊಳು ಕೈಮುಗಿದು ಒಳಗೆ ಬಾ ಯಾತ್ರಿಕನೆ ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯುʼ ಎಂಬ ಕವನ ಆಗಿತ್ತು. ಇದನ್ನು ಬಾಗಿಲಲ್ಲಿ ಹಾಕುವ ಮೂಲಕ ಹಿಂದಿನ ಸರ್ಕಾರ ರಾಷ್ಟ್ರಕವು ಕುವೆಂಪು ಅವರ ಕವಿತ್ವ, ಸೃಜನಶೀಲತೆ, ಭಾಷಿಕ ಕೊಡುಗೆಗೆ ಗೌರವ ಸಲ್ಲಿಸಿತ್ತು. ಇದೀಗ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರ ಸೂಚನೆ ಮೇರೆಗೆ ಈ ಬದಲಾವಣೆ ಆಗುತ್ತಿದೆ ಎಂದು ಹೇಳಲಾಗಿದೆ. ಇದಕ್ಕೆ ಮುನ್ನ ಶಿಕ್ಷಕರ ಗ್ರೂಪ್‌ನಲ್ಲಿ ಚರ್ಚೆ ನಡೆದಿದೆ ಎಂದೂ ಹೇಳಲಾಗಿದೆ. ಆದರೆ ನಾಡು ಕಂಡ ಘನ ಸಾಹಿತಿ ಕುವೆಂಪು ಅವರಿಗೆ ಗೌರವ ನೀಡುವ ರೀತಿಯಂತೂ ಇದಲ್ಲ.

ಹೀಗೆ ಒಂದೇ ವಾರದಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡುವಂಥ ಎರಡು ಪ್ರಕರಣಗಳನ್ನು ಸರ್ಕಾರ ಮಾಡಿಕೊಂಡಿದೆ. ಕುವೆಂಪು ಅವರನ್ನು ಅಗೌರವಿಸುವ ಉದ್ದೇಶದಿಂದಲೇ ಸರ್ಕಾರ ಹೀಗೆ ಮಾಡಿದೆ ಎನ್ನಲಾಗದಿದ್ದರೂ, ಸರ್ಕಾರದ ಕ್ರಿಯೆಗಳಿಂದ ಕುವೆಂಪು ಅವರಿಗೆ ಅಗೌರವ ಆಗಿದೆ ಎಂಬುದಂತೂ ನಿಜ. ಅವರ ಕವನದ ಸಾಲುಗಳನ್ನು ನಮಗೆ ಬೇಕಾದಂತೆ ತಿರುಚಿ ಫಲಕವನ್ನೇನೋ ಹಾಕಬಹುದು. ಆದರೆ ಅದು ಸಾಂಸ್ಕೃತಿಕವಾಗಿ ಉನ್ನತ ನಡೆ ಅಲ್ಲ. ಅದರ ಮೂಲಕ ನಾವು ನಮ್ಮ ಹಿರಿಯರಿಗೆ ಅಪಮಾನ ಮಾಡುತ್ತಿದ್ದೇವೆ ಎಂಬುದು ನಮಗೆ ಗೊತ್ತಿರಬೇಕು. ಇಂಥ ಘಟನೆಗಳು ಮರುಕಳಿಸದಿರಲಿ. ಈಗ ಆಗಿರುವ ಪ್ರಮಾದಕ್ಕೆ ತಕ್ಕ ಶಿಕ್ಷೆ ಆಗಲಿ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಚಂಡೀಗಢ ಮೇಯರ್‌ ಚುನಾವಣೆ ಕುರಿತ ಸುಪ್ರೀಂ ತೀರ್ಪು ಐತಿಹಾಸಿಕ

Continue Reading

ಕರ್ನಾಟಕ

Krishi Bhagya Scheme: 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಮರು ಜಾರಿ: ಎನ್. ಚಲುವರಾಯಸ್ವಾಮಿ

Krishi Bhagya Scheme: 2023-24ನೇ ಸಾಲಿನಲ್ಲಿ ರಾಜ್ಯದ ಮಳೆಯಾಶ್ರಿತ ಕೃಷಿ ನೀತಿ, 2014 ರನ್ವಯ ರೂ. 100 ಕೋಟಿಗಳ ಅನುದಾನದಲ್ಲಿ ಕೃಷಿ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

VISTARANEWS.COM


on

Hello-minister-N-chaluvarayaswamy-in-vistara-news-2
Koo

ಬೆಂಗಳೂರು: ಕರ್ನಾಟಕದ ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ ಮಳೆ ನೀರು ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸಲು 2023-24ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಕೃಷಿ ಭಾಗ್ಯ ಯೋಜನೆ ಮರು ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಕರ್ನಾಟಕ ವಿಧಾನ ಸಭೆ ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014 ರನ್ವಯ ರೂ. 100 ಕೋಟಿಗಳ ಅನುದಾನದಲ್ಲಿ ಈ ಯೋಜನೆಯನ್ನು 2023-24ನೇ ಸಾಲಿನಲ್ಲಿ ಪ್ಯಾಕೇಜ್ ಮಾದರಿಯಲ್ಲಿ (ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ತಂತಿಬೇಲಿ, ಪಂಪ್ ಸೆಟ್, ಸೂಕ್ಷ್ಮ ನೀರಾವರಿ ಘಟಕಗಳು) ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮುಂಗಾರು 2023ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಸೇರ್ಪಡೆಯಾಗಿದ್ದರೂ 2023-24ನೇ ಸಾಲಿನಲ್ಲಿ ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಕೃಷಿ ಭಾಗ್ಯ ಯೋಜನೆ ರಾಜ್ಯದ ಒಣ ಕೃಷಿ ಹವಾಮಾನ ವಲಯಗಳಲ್ಲಿ ಇರುವ ತಾಲೂಕುಗಳಲ್ಲಿ ಮಾತ್ರ ಅನುಷ್ಠಾನ ಮಾಡಲಾಗುತ್ತಿರುವ ಕಾರಣ ಹಾಗಾಗಿ ಗದಗ ಜಿಲ್ಲೆಯ ಶಿಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಒಣ ಕೃಷಿ ಹವಾಮಾನ ವಲಯದಲ್ಲಿ ಇಲ್ಲದಿರುವ ಕಾರಣವ ಸೇರ್ಪಡೆ ಮಾಡಲಾಗಿಲ್ಲ ಎಂದು ಎನ್. ಚಲುವರಾಯಸ್ವಾಮಿ ಹೇಳಿದರು.

2023-24ನೇ ಸಾಲಿನ ಆಯವ್ಯಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ರಾಜ್ಯದ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ರಾಜ್ಯದ 24 ಜಿಲ್ಲೆ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ನು ಈಗಾಗಲೇ ಜಿಲ್ಲೆಗಳಿಗೆ ನೀಡಲಾಗಿದ್ದು, ಅದರಂತೆ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ | Karnataka Budget Session 2024: ಹೊಸ ಕಾಯಿದೆ; ಪಬ್ಲಿಕ್‌ ಪ್ಲೇಸ್‌ನಲ್ಲಿ ಸಿಗರೇಟ್‌ ಸೇದಿದ್ರೆ ಭಾರೀ ದಂಡ!

ಪ್ರಸಕ್ತ ಸಾಲಿನ ಆರ್ಥಿಕ ವರ್ಷಾಂತ್ಯಕ್ಕೆ ಕೇವಲ ಒಂದು ತಿಂಗಳು ಬಾಕಿ ಇದ್ದು, ಈ ಹಂತದಲ್ಲಿ ಯಾವುದೇ ಸೇರ್ಪಡೆ/ಬದಲಾವಣೆ ಹಾಗೂ ಅದರಂತಯೆ ಅನುಷ್ಠಾನ ಕಷ್ಟಸಾಧ್ಯವಾಗಿರುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉತ್ತರಿಸಿದರು.

Continue Reading

ಟಾಪ್ 10 ನ್ಯೂಸ್

VISTARA TOP 10 NEWS: ನಾಡಗೀತೆಯಲ್ಲೂ ಸರಕಾರ ಎಡವಟ್ಟು ಪಬ್ಲಿಕ್‌ ಪ್ಲೇಸಲ್ಲಿ ಸೇದಬಾರದು ಸಿಗರೇಟು.. ಮತ್ತು ಇತರ ಸುದ್ದಿಗಳು

VISTARA TOP 10 NEWS : ರಾಜ್ಯ ಸರ್ಕಾರ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡಬೇಕಾಗಿಲ್ಲ ಎಂಬ ಸುತ್ತೋಲೆ ಹೊರಡಿಸಿ ಮುಖಭಂಗ ಅನುಭವಿಸಿದೆ, ಮತ್ತೆ ಅದನ್ನು ಸರಿಪಡಿಸಿಕೊಂಡು ತೇಪೆ ಹಾಕಿದೆ. ಇದೇ ವೇಳೆ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ವಿಚಾರದಲ್ಲೂ ಕೆಲವೊಂದು ವಿವಾದ ಎದ್ದಿದೆ. ಹೀಗೆ ದಿನದ ಪ್ರಮುಖ ಸುದ್ದಿಗಳ ಸುತ್ತುನೋಟ ಇದು.

VISTARANEWS.COM


on

vistara top ten
Koo

1.ಇನ್ನೊಂದು ಎಡವಟ್ಟು; ಖಾಸಗಿ ಶಾಲೆಯಲ್ಲಿ ನಾಡಗೀತೆ ಹಾಡಬೇಕಿಲ್ಲ ಎಂದ ಸರ್ಕಾರ!
ರಾಜ್ಯದ ಕಾಂಗ್ರೆಸ್‌ ಸರ್ಕಾರ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು ಎಂಬ ಆದೇಶ, ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನೇ ಬದಲಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿತ್ತು. ಇದೀಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ (Nadageethe row) ಎಂಬ ಸುತ್ತೋಲೆ ಹೊರಡಿಸಿ ವಿವಾದಕ್ಕೆ ಒಳಗಾಗಿದೆ. ಕೊನೆಗೆ ಸುತ್ತೋಲೆ ಹಿಂಪಡೆದು ತಿಪ್ಪೆಸಾರಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ಸುದ್ದಿಯನ್ನೂ ಓದಿ: ಮಿಷನರಿಗಳಿಗೆ ಮಣಿದ ಸರ್ಕಾರ; ಡೋಂಗಿ ಕನ್ನಡ ಪ್ರೇಮಿ ಸಿದ್ದರಾಮಯ್ಯ; ಬಿಜೆಪಿ ಆಕ್ರೋಶ
ಈ ಸುದ್ದಿಯನ್ನೂ ಓದಿ: ಕೆಟ್ಟ ಮೇಲೆ ಬುದ್ಧಿ; ವಿವಾದಿತ ನಾಡಗೀತೆ ಸುತ್ತೋಲೆ ಬದಲಿಸಿದ ಸರ್ಕಾರ

2.ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಅನ್ಯಧರ್ಮೀಯರ ನೇಮಕಕ್ಕೆ ವಿರೋಧ
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು (Hindu Temples) ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ದಲ್ಲಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಅನ್ಯ ಸಮುದಾಯದವರನ್ನು ನೇಮಕ ಮಾಡಲು ಅವಕಾಶ ನೀಡಿರುವುದು ಸರಿಯಲ್ಲ. ಹೀಗಾಗಿ ವಿಧೇಯಕವನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಆಗ್ರಹಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ಸುದ್ದಿಯನ್ನೂ ಓದಿ: ದೇವಸ್ಥಾನದ ಆದಾಯ 1 ಕೋಟಿ ಇದ್ದರೆ ಸರ್ಕಾರಕ್ಕೆ 10 ಲಕ್ಷ ರೂ. ಸಿಗುವಂತೆ ವಿಧೇಯಕ!

3 ಮೋದಿ ಬಗ್ಗೆ ಸಿದ್ದರಾಮಯ್ಯ ಟೀಕೆ; ಪಲಾಯನವಾದಿ ಸಿಎಂ ಎಂದ ಬಿಜೆಪಿ
ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಕೇಂದ್ರದ ಅನುದಾನದ ಬಗ್ಗೆ ಪ್ರಸ್ತಾಪವಾಗಿದೆ. ಈ ವಿಷಯವನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಸಿದ್ದರಾಮಯ್ಯ ಅವರನ್ನೇ ಪಲಾಯನವಾದಿ ಎಂದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. ಅನಧಿಕೃತ ಹುಕ್ಕಾ ಬಾರ್‌ ತೆರೆದ್ರೆ 3 ವರ್ಷ ಜೈಲು; ಮಸೂದೆ ಪಾಸ್‌
ರಾಜ್ಯದಲ್ಲಿ ಇನ್ನು ಹುಕ್ಕಾ ಬಾರ್ (Hookah Bar) ಅನ್ನು ಅನಧಿಕೃತ ನಡೆಸಿದರೆ ಒಂದರಿಂದ ಮೂರು ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಇಂಥದ್ದೊಂದು ವಿಧೇಯಕವನ್ನು ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಈ ಸುದ್ದಿಯನ್ನೂ ಓದಿ: ಪಬ್ಲಿಕ್‌ ಪ್ಲೇಸ್‌ನಲ್ಲಿ ಸಿಗರೇಟ್‌ ಸೇದಿದ್ರೆ ಭಾರೀ ದಂಡ!

5. ವಾಟ್ಸಾಪ್‌ ವೆಬ್‌ನಲ್ಲೂ ಚಾಟ್‌ ಲಾಕ್‌ಗೆ ಸೀಕ್ರೆಟ್‌ ಕೋಡ್‌!
ವಾಟ್ಸಾಪ್(WhatsApp), ತನ್ನ ಚಾಟ್ ಲಾಕ್‌ ಫೀಚರ್ ಅನ್ನು ಮತ್ತಷ್ಟು ಸುಧಾರಿಸುವ ಪ್ರಯತ್ನವನ್ನು ಮಾಡುತ್ತಿದೆ(WhatsApp New Feature). ಕೆಲವು ವರದಿಗಳ ಪ್ರಕಾರ, ಇದರ ವೆಬ್‌ ವರ್ಷನ್ ಅಭಿವೃದ್ಧಿಪಡಿಸುತ್ತಿದೆ. ಅಂದರೆ ವೆಬ್‌ನಲ್ಲೂ ಚಾಟ್‌ ಲಾಕ್‌ಗೆ ಅವಕಾಶ ದೊರೆಯಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಮೆದುಳಿಗೆ ಚಿಪ್‌ ಅಳವಡಿಸಿಕೊಂಡ ವ್ಯಕ್ತಿ ಯೋಚನೆಯ ಮೂಲಕವೇ ಮೌಸ್‌ ಅಲ್ಲಾಡಿಸಿದ! ಏನಿದು ಎಲಾನ್‌ ಮಸ್ಕ್‌ ಪ್ರಯೋಗ?
‘ನ್ಯೂರಾಲಿಂಕ್ (Neuralink) ಬ್ರೈನ್ ಚಿಪ್‌ (Brain Chip) ಅಳವಡಿಸಿದ ಮೊದಲ ವ್ಯಕ್ತಿ ಇದೀಗ ಯೋಚನೆಯಿಂದಲೇ ಕಂಪ್ಯೂಟರ್‌ ಪರದೆಯ ಮೇಲಿನ ಕರ್ಸರ್‌ ಅನ್ನು ಚಲಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾನೆʼ ಎಂದು ಟೆಕ್‌ ದೈತ್ಯ ಎಲಾನ್‌ ಮಸ್ಕ್‌ (Elon Musk) ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಹೋಗಿ ಬನ್ನಿ ನಾರಿಮನ್‌ ಸಾಬ್‌, ಕನ್ನಡಿಗರ ಮನಸ್ಸಿನಲ್ಲಿ ನಿಮ್ಮ ನೆನಪು ಸದಾ ಹಸಿರು
ಕಾವೇರಿ ನದಿ ನೀರು ವಿವಾದದಲ್ಲಿ (Cauvery Water Dispute) ಕರ್ನಾಟಕದ ಪರ ಪ್ರಬಲ ವಾದ ಮಂಡಿಸುತ್ತಾ, ಕನ್ನಡಿಗರ ಕಣ್ಮಣಿಯಾಗಿದ್ದ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಫಾಲಿ ಸ್ಯಾಮ್‌ ನಾರಿಮನ್‌ (Fali s Nariman) ಅವರ ನಿಧನಕ್ಕೆ ಕನ್ನಡ ನಾಡು ಕಂಬನಿ ಮಿಡಿದಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫಾಲಿ ನಾರಿಮನ್‌ ಅವರು ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ನೆನಪಿಸಿಕೊಂಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ಪಾಕ್‌ನಲ್ಲಿ ಕೊನೆಗೂ ಮೈತ್ರಿ ಸರ್ಕಾರ; ಶೆಹಬಾಜ್‌ ಷರೀಫ್‌ ನೂತನ ಪ್ರಧಾನಿ
ಪಾಕಿಸ್ತಾನದಲ್ಲಿ ಕೆಲ ವರ್ಷಗಳಿಂದ ಉಂಟಾಗಿರುವ ರಾಜಕೀಯ ಅರಾಜಕತೆಯು ಕೊನೆಯಾಗುವ ಲಕ್ಷಣಗಳು ಕಾಣುತ್ತಿವೆ. ಪಾಕಿಸ್ತಾನ ಮುಸ್ಲಿಂ ಲೀಗ್‌-ನವಾಜ್‌ (PML-N) ಹಾಗೂ ಪಾಕಿಸ್ತಾನ ಪೀಪಲ್ಸ್‌ ಪಕ್ಷವು (PPP) ಮೈತ್ರಿ ಮಾಡಿಕೊಂಡಿದ್ದು, ಪಿಎಂಎಲ್‌ಎನ್‌ ಪಕ್ಷದ ಅಧ್ಯಕ್ಷ ಶೆಹಬಾಜ್‌ ಷರೀಫ್‌ (Shehbaz Sharif) ಅವರೇ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಖಚಿತವಾಗಿದೆ. ಇನ್ನು ಪಿಪಿಪಿಯ ಆಸಿಫ್‌ ಜರ್ದಾರಿ ಅವರು ಮತ್ತೆ ದೇಶದ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ವಿರುಷ್ಕಾ ದಂಪತಿಯ ಮಗನ ಹೆಸರು ಅಕಾಯ್‌; ಏನಿದರ ಅರ್ಥ?
ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಹಾಗೂ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿಗೆ ಎರಡನೇ ಮಗು ಜನಿಸಿದೆ. ಫೆಬ್ರವರಿ 15ರಂದು ಗಂಡು ಮಗು ಜನಿಸಿರುವುದಾಗಿ ದಂಪತಿ ಘೋಷಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಮಗುವಿಗೆ ಅಕಾಯ್ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಹಾಗಿದ್ದರೆ ಅಕಾಯ್‌ ಅಂದರೇನು? ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಈ ತಂಡದ ಆಟಗಾರರು ರಣಜಿ ಟ್ರೋಫಿ ಗೆದ್ದರೆ ಸಿಗಲಿದೆ bmw ಕಾರು!
ಹೈದರಾಬಾದ್​ ತಂಡದ ಆಟಗಾರರಿಗೆ ಇಲ್ಲಿನ ಕ್ರಿಕೆಟ್ ಅಸೋಷಿಯೇಷನ್(HCA) ಅಧ್ಯಕ್ಷ(HCA president) ಜಗನ್ ಮೋಹನ್ ರಾವ್(Jagan Mohan Rao) ಅವರು ಬಂಪರ್​ ಆಫರ್​ ನೀಡಿದ್ದಾರೆ. ತಂಡವು ಮುಂದಿನ ಮೂರು ವರ್ಷಗಳಲ್ಲಿ ರಣಜಿ ಟ್ರೋಫಿ (Ranji Trophy) ಗೆದ್ದರೆ ಪ್ರತಿಯೊಬ್ಬ ಆಟಗಾರನಿಗೆ BMW ಕಾರು(BMW car) ಮತ್ತು 1 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Shivraj Singh Chouhan
ಕರ್ನಾಟಕ1 hour ago

Shivraj Singh Chouhan: ಮೋದೀಜಿ ನಾಯಕತ್ವದಲ್ಲಿ ಭಾರತ ವಿಶ್ವಗುರುವಾಗಲಿದೆ ಎಂದ ಶಿವರಾಜ್ ಸಿಂಗ್ ಚೌಹಾಣ್

Vistara editorial, Do not disrespectful to the Anthem of Karnataka
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ನಾಡಗೀತೆ, ಕವಿವಾಕ್ಯಕ್ಕೆ ಅಪಚಾರ ಆಗದಿರಲಿ

Karnataka Government clarified about Non Hindus in Hindu Temples Management
ಕರ್ನಾಟಕ2 hours ago

Hindu Temples: ದೇವಸ್ಥಾನ ಸಮಿತಿಗೆ ಅನ್ಯಧರ್ಮೀಯರ ನೇಮಕ; ಧಾರ್ಮಿಕ ದತ್ತಿ ಇಲಾಖೆ ಸ್ಪಷ್ಟನೆ

Gavyamrita Book
ಉತ್ತರ ಕನ್ನಡ2 hours ago

ಗವ್ಯಾಮೃತ ಪುಸ್ತಕ ಲೋಕಾರ್ಪಣೆ; ಗೋವಿನ ಕುರಿತ ಸುವಿಚಾರಗಳನ್ನು ಸಮಾಜಕ್ಕೆ ತಲುಪಿಸಲು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಕರೆ

Indus App Store launched by Walmart-owned PhonePe
ದೇಶ2 hours ago

PhonePay: ಫೋನ್‌ಪೇ ಸ್ವದೇಶಿ ಆ್ಯಪ್‌ಸ್ಟೋರ್ ‘ಇಂಡಸ್’ ಲಾಂಚ್; ಗೂಗಲ್‌ ಪ್ಲೇ ಸ್ಟೋರ್‌ಗೆ ಪಂಚ್!

shishya sweekara Mahotsav in shri swarnavalli maha samsthana matha dharmasabhe
ಉತ್ತರ ಕನ್ನಡ2 hours ago

Sirsi News: ಅಪಕಾರ ಮಾಡಿದವರಿಗೂ ಉಪಕಾರ ಬಯಸುವ ಸದ್ಗುಣವನ್ನು ಎಲ್ಲರೂ ಬೆಳೆಸಿಕೊಳ್ಳಿ: ಶ್ರೀವಿದ್ಯಾವಿಶ್ವೇಶ್ವರ ಭಾರತೀ ಸ್ವಾಮೀಜಿ

Gurpatwant Singh Pannun
ಕ್ರೀಡೆ2 hours ago

IND vs ENG: ರಾಂಚಿ ಟೆಸ್ಟ್​ ಪಂದ್ಯಕ್ಕೆ ಖಲಿಸ್ತಾನಿ ಉಗ್ರನಿಂದ ಬೆದರಿಕೆ; ಸ್ಟೇಡಿಯಂಗೆ ಬಿಗಿ ಭದ್ರತೆ!

Hello-minister-N-chaluvarayaswamy-in-vistara-news-2
ಕರ್ನಾಟಕ3 hours ago

Krishi Bhagya Scheme: 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಮರು ಜಾರಿ: ಎನ್. ಚಲುವರಾಯಸ್ವಾಮಿ

bike accident
ಪ್ರಮುಖ ಸುದ್ದಿ3 hours ago

Road Accident: ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ; ಬಸ್-ಬೈಕ್ ಡಿಕ್ಕಿಯಾಗಿ ನಾಲ್ವರ ದುರ್ಮರಣ

vistara top ten
ಟಾಪ್ 10 ನ್ಯೂಸ್4 hours ago

VISTARA TOP 10 NEWS: ನಾಡಗೀತೆಯಲ್ಲೂ ಸರಕಾರ ಎಡವಟ್ಟು ಪಬ್ಲಿಕ್‌ ಪ್ಲೇಸಲ್ಲಿ ಸೇದಬಾರದು ಸಿಗರೇಟು.. ಮತ್ತು ಇತರ ಸುದ್ದಿಗಳು

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for february 21 2024
ಭವಿಷ್ಯ20 hours ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ2 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ3 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ4 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ5 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

read your daily horoscope predictions for february 17 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ!

Karnataka Budget Session 2024 siddaramaiah use cinema Lines
ಸಿನಿಮಾ6 days ago

Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

read your daily horoscope predictions for february 16 2024
ಭವಿಷ್ಯ6 days ago

Dina Bhavishya : ಈ ಹಿಂದೆ ಹಣ ಹೂಡಿಕೆ ಮಾಡಿದ್ದರೆ ಇಂದು ಈ ರಾಶಿಯವರಿಗೆ ಡಬಲ್‌ ಲಾಭ

Siddaramaiah
ರಾಜಕೀಯ6 days ago

Karnataka Budget Session 2024: ಬಿಜೆಪಿಯವರು ಗೂಂಡಾಗಳು ಎಂದ ಸಿಎಂ; ತೊಡೆ ತಟ್ಟಿದ್ದು ನಾವಾ – ನೀವಾ ಎಂದ ವಿಪಕ್ಷ!

ಟ್ರೆಂಡಿಂಗ್‌