HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ! - Vistara News

ರಾಜಕೀಯ

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

HD Revanna Bail: ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು.

VISTARANEWS.COM


on

HD Revanna Bail I am not happy that Revanna has been released says HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿದ್ದ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಜಾಮೀನು ಸಿಕ್ಕಿದೆ ನಿಜ. ಆದರೆ, ಇದಕ್ಕೆ ನಾನು ಸಂತೋಷ ಪಡಲಾರೆ. ಪಟಾಕಿ ಸಿಡಿಸಿ ಸಂಭ್ರಮಿಸುವ ಸಮಯವೂ ಇದಲ್ಲ ಎಂದು ಕಾರ್ಯಕರ್ತರಿಗೆ ಹೇಳಬಯಸುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮ ಪಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೊ ಲೀಕ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಸರಿಯಾದ ತನಿಖೆಯನ್ನು ನಡೆಸುತ್ತಿಲ್ಲ. ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರು ಕೂಡ ಎಸ್‌ಐಟಿಯಿಂದ ಆರೋಪ ಎದುರಿಸಬೇಕಾಯಿತು. ಅವರಿಗೆ ನಿನ್ನೆ (ಸೋಮವಾರ – ಮೇ 13) ಜಾಮೀನು ಸಿಕ್ಕಿದೆ. ಅದಕ್ಕೆ ನಾನು ಸಂತೋಷವನ್ನು ಪಡುವುದಿಲ್ಲ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮವನ್ನು ಪಡೋಣ. ಈಗ ನಡೆದಿರುವುದು ರಾಜ್ಯವೇ ತಲೆ ತಗ್ಗಿಸುವ ವಿಚಾರವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ? ಎಸ್‌ಐಟಿ ಅಧಿಕಾರಿಗಳೇ ನಿಮಗೂ ಅಕ್ಕ – ತಂಗಿ, ತಂದೆ – ತಾಯಿ ಇರುತ್ತಾರೆ. ಚುನಾವಣೆ ಹಿನ್ನೆಲೆಯಲ್ಲಿ ಯಾರು ಪೆನ್ ಡ್ರೈವ್ ಹಂಚಿದರೋ ಅವರನ್ನು ಇದುವರೆಗೂ ಮುಟ್ಟಿಲ್ಲ. ಹಾಸನ ಜಿಲ್ಲಾದ್ಯಂತ ಪೆನ್‌ ಡ್ರೈವ್‌ ಅನ್ನು ರಿಲೀಸ್‌ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ನ ನವೀನ್‌ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುತ್ತಾನೆ. ಆದರೆ, ಇಲ್ಲಿಯವರೆಗೆ ಆತನನ್ನು ಮುಟ್ಟಿಲ್ಲ. ಈ ಘಟನೆಗೆ ಕಾರಣವಾದ ವ್ಯಕ್ತಿಯನ್ನೂ ಹಿಡಿಯಲಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಸರ್ಕಾರದ ಜವಾಬ್ದಾರಿ ಅದು

ಬಿಜೆಪಿಯ ಮಾಜಿ ಶಾಸಕರೊಬ್ಬರ ಎಡಬಲಗಳನ್ನು ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯ ವಾದವರನ್ನು ಹಿಡಿಯಲಾಗುತ್ತೆ ಅಂದಿದ್ದಾರೆ. ಹಾಗಾದರೆ ಎಸ್ಐಟಿ ತನಿಖೆ ಹೇಗೆ ಸೋರಿಕೆ ಆಗ್ತಾ ಇದೆ? ಎಫ್‌ಐಆರ್ ಆಗಿರುವ ಒಬ್ಬ ವ್ಯಕ್ತಿಯನ್ನೂ ಹಿಡಿಯಲಿಲ್ಲ. ಖಾಸಗಿ ಚಾನಲ್‌ನಲ್ಲಿ ಒಂದೂವರೆ ಗಂಟೆಗಳ ಕಾಲ ಸಂದರ್ಶನ ಕೊಡುತ್ತಾರೆ. ನವೀನ್ ಗೌಡ ನಮ್ಮ ಪಕ್ಷದ ಶಾಸಕರಿಗೆ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳುತ್ತಾನೆ. ಕೆಲವೇ ಕ್ಷಣಗಳಲ್ಲಿ ಪೆನ್ ಡ್ರೈವ್ ಬರುತ್ತದೆ ಅಂತಾ ಪೋಸ್ಟ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದ ಆತನನ್ನು ಹಿಡಿದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ವಿಡಿಯೊದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರ್ಕಾರಕ್ಕೆ ಅನುಕಂಪ‌ ಇದೆಯಾ? ಇದರಲ್ಲಿ ಯಾವುದನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಿನ ಮಾಹಿತಿ ತಂತ್ರಜ್ಞಾನದಲ್ಲಿ ಅಪರಾಧಿ, ನಿರಪರಾಧಿ ಆಗುತ್ತಾನೆ, ನಿರಪರಾಧಿ ಅಪರಾಧಿ ಆಗುತ್ತಾನೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ನನ್ನ ಮೇಲೂ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಎಚ್.ಡಿ. ರೇವಣ್ಣ ಅವರ ಕುಟುಂಬವನ್ನು ಮುಗಿಸಲು ನಾನು ಪ್ರಯತ್ನ ಪಡುತ್ತಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ.

ನಾನು ನ್ಯಾಯದ ಪರ, ಮಹಿಳೆಯರ ಪರ ಇದ್ದೇನೆ. ಈ ವಿಡಿಯೊದಲ್ಲಿ ಆ ವ್ಯಕ್ತಿಯ ಯಾವುದೇ ಚಿತ್ರಣ ಇಲ್ಲ ಅಂತ ಪತ್ರಿಕೆಯೊಂದು ಬರೆದಿದೆ. ಅಲ್ಲಿಗೆ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ? ಎಂದು ಎಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಹೆದರಿಸಿ ದೂರು ಪಡೆಯಲು ಯತ್ನ

ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆಕ್ರೋಶವನ್ನು ಹೊರಹಾಕಿದರು. ಅಲ್ಲದೆ, ದೊಡ್ಡ ತಿಮಿಂಗಿಲವು ಸರ್ಕಾರದಲ್ಲಿದೆ. ಆ ದೊಡ್ಡ ತಿಮಿಂಗಲವನ್ನು ಹಿಡಿಯಲಾಗದೇ ಇದ್ದರೆ ಸಣ್ಣ ತಿಮಿಂಗಲಗಳನ್ನು ಹಿಡಿಯಲಾಗುತ್ತದೆಯೇ? ಈ ಸರ್ಕಾರದಲ್ಲಿ ಹಲವಾರು ತಪ್ಪುಗಳು ನಡೆದಿವೆ. ಎಚ್.ಡಿ. ರೇವಣ್ಣ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಕಿಡಿಕಾರಿದರು.

ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಒಂದು ಮಹಿಳೆ ದೂರು ಕೊಟ್ಟಿದ್ದು, ಆ ಹೆಣ್ಣುಮಕ್ಕಳಿಗೆ ಹೆದರಿಸಿ‌ ದೂರು ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದೆಲ್ಲ ಕೆಲವೇ ದಿನಗಳಲ್ಲಿ ಹೊರಗೆ ಬರಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಗೃಹ ಸಚಿವರಿಗೆ ನೇರ ಪ್ರಶ್ನೆ

ಈ ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ಕೊಟ್ಟರೆ ಅಂಥವರನ್ನು ವಿಚಾರಣೆಗೆ ಕರೆಸಬೇಕಾಗುತ್ತದೆ ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಗೆ ತಿರುಗೇಟು ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದ ಬಗ್ಗೆ, ವಿಡಿಯೊ ಬಗ್ಗೆ ಹೇಳಿಕೆ ನೀಡಿದ್ದ ನವೀನ್‌ ಗೌಡ ಸೇರಿ ಉಳಿದವರ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ವಿದೇಶಕ್ಕೆ ಹೋಗಿರುವ ಪ್ರಜ್ವಲ್ ಅವರನ್ನು ಏಕೆ ಕರೆಸಿಲ್ಲ? ಎಂದು ಪ್ರಶ್ನೆ ಮಾಡಿದರು.

ಪ್ರಜ್ವಲ್‌ ರೇವಣ್ಣ ನನಗೆ ಅಣ್ಣನ ಮಗನೇ ಇರಬಹುದು. ಆದರೆ, ಅವನು ಹೋಗುವಾಗ ನನ್ನನ್ನು ಕೇಳಿ ಹೋಗುತ್ತಿದ್ದನಾ? ಬೆಳೆದ ಮಕ್ಕಳು ನಮ್ಮನ್ನು ಕೇಳಿ ಹೋಗ್ತಾರಾ.? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ: HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

ಇನ್ನೆರಡು ದಿನದಲ್ಲಿ ಪರಿಷತ್‌ ಅಭ್ಯರ್ಥಿ ಆಯ್ಕೆ

ಪರಿಷತ್ ಚುನಾವಣೆಗೆ ಸಂಬಂಧಪಟ್ಟಂತೆ ಮೈತ್ರಿ ಒಪ್ಪಂದದ ಪ್ರಕಾರ ಜೆಡಿಎಸ್‌ಗೆ ಇನ್ನೊಂದು ಸೀಟ್‌ ಅನ್ನು ಬಿಟ್ಟುಕೊಡಲಾಗಿದೆ. ಅದಕ್ಕೆ ಸೂಕ್ತ ಅಭ್ಯರ್ಥಿಯ ಆಯ್ಕೆ ಆಗಬೇಕಿದೆ. ಇನ್ನೆರಡು ದಿನಗಳಲ್ಲಿ ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜಕೀಯ

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Muda Scam : ಮೂಡ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಿತು. ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಮತ್ತು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಭಾಗಿಯಾಗಿದ್ದರು.

VISTARANEWS.COM


on

By

MUda Scam
Koo

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಶನ್ ಹೈಕೋರ್ಟ್ (Muda Scam) ಎತ್ತಿ ಹಿಡಿದಿದೆ. ಹೀಗೆ ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ಟಿರುವ ತೀರ್ಪಿನಲ್ಲಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಕಪಾಳ ಮೋಕ್ಷ ಮಾಡಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಮತ್ತು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಜೆಡಿಎಸ್ ಪಕ್ಷದ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯ ವೇಳೆ ತಿಳಿಸಿದರು.

ಮೂಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ನೆರವಾಗುವ ರೀತಿಯಲ್ಲಿ ಮುಖ್ಯಂತ್ರಿಯಾಗಿ ಪ್ರಭಾವದ ದುರ್ಬಳಕೆ ಮಾಡಿದ್ದಾರೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ತನ್ನ ಆದೇಶದಲ್ಲಿ ತಿಳಿಸಿದೆ. ಸಿದ್ದರಾಮಯ್ಯ ಪತ್ನಿ ಅವರ ಸೈಟು ಪರ ಪ್ರತಿಬಾರಿಯೂ ಮೂಡಾ ತೀರ್ಮಾನ ಕೈಗೊಳ್ಳುವಾಗ ಸಿದ್ದರಾಮಯ್ಯ ಪ್ರಭಾವಿ ಹುದ್ದೆಯಲ್ಲಿ ಇದ್ದರು. ಈ ಹುದ್ದೆಯ ಪ್ರಭಾವದಿಂದ ಎರಡು ಸೈಟುಗಳು ಪರಿಹಾರವಾಗಿ ಸಿಗುವ ಬದಲು 14ಸೈಟುಗಳು ಸಿಕ್ಕಿವೆ ಎಂದು ನ್ಯಾಯಾಲಯ ಹೇಳಿದೆ ಎಂದು ತಿಳಿಸಿದರು.

ಅಂದ್ರೆ ಹೈಕೋರ್ಟ್ ಸಿದ್ದರಾಮಯ್ಯ ಅವರಿಗೆ ಬಹುತೇಕ ಛೀಮಾರಿ ಹಾಕಿದೆ. ಈ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಎಂದು ಸಿಎಂ ಹೇಳಿದರೂ , 62ಕೋಟಿ ರೂಪಾಯಿ ಪರಿಹಾರ ಕೇಳಿದ್ದೇಕೆ? ಎನ್ನುವುದು ನ್ಯಾಯಾಲಯ ಪ್ರಶ್ನೆ. ಹಾಗೆ ಇದು ನಮ್ಮೆಲ್ಲರ ಪ್ರಶ್ನೆ ಕೂಡ ಎಂದು ಈ ವೇಳೆ ತಿಳಿಸಿದರು.

ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡದೆ ಬೇರೆ ದಾರಿ ಇಲ್ಲ. ತನಿಖೆಗೆ ಹಸಿರು ನಿಶಾನೆ ಕೊಡುವ ಭರಾಟೆ ಯಲ್ಲಿ ನ್ಯಾಯಾಲಯ ಈ ಮೂಡಾ ಪ್ರಕರಣದಲ್ಲಿ ಸಿಎಂ ಭಾಗಿ ಆಗಿರುವುದನ್ನು ಖಚಿತಪಡಿಸಿದ್ದು, ಅವರು ರಾಜೀನಾಮೆ ಕೊಡಲೇ ಬೇಕು. ಆರೋಪಕ್ಕೆ ಗುರಿಯಾದ ವ್ಯಕ್ತಿ ಪ್ರಭಾವಿ ಹುದ್ದೆಯಲ್ಲಿ ಇದ್ದರೆ ನಿಷ್ಪಕ್ಸಪಾತವಾದ ತನಿಖೆ ಆಗುವುದಿಲ್ಲ. ಆದ್ದರಿಂದ ನಿಷ್ಪಕ್ಷಾತದಿಂದ ತನಿಖೆ ಆಗಬೇಕಾದರೆ ಸಿಎಂ ರಾಜೀನಾಮೆ ನೀಡಲೇಬೇಕು.
ಇನ್ನೂ ಅತ್ಯಂತ ಮುಖ್ಯ ಅಂದ್ರೆ ರಾಜ್ಯದ ಪೊಲೀಸರು ಸಿಎಂ ಕೈ ಕೆಳಗೆ ಬರುವುದರಿಂದ ಪೊಲೀಸ್ ತನಿಖೆಯಿಂದ ನ್ಯಾಯ ಸಿಗುವುದು ಅನುಮಾನ. ಪಾರದರ್ಶಕ ತನಿಖೆ ಸಾಧ್ಯವಿಲ್ಲ. ಆದ್ದರಿಂದ ಈ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah : ಬಿಜೆಪಿಯ‌ ಷಡ್ಯಂತರ, ನನ್ನ ವಿರುದ್ಧ ಸೇಡಿನ ರಾಜಕೀಯವಷ್ಟೇ; ತನಿಖೆಗೆ ಹಿಂಜರಿಯುವುದಿಲ್ಲ-ಸಿಎಂ ಸಿದ್ದರಾಮಯ್ಯ

VISTARANEWS.COM


on

By

CM Siddaramaiah
Koo

ಬೆಂಗಳೂರು: ಹೈ ಕೋಟ್೯ ತೀರ್ಪು ಕುರಿತು ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಾನೂನು ತಜ್ಞರ ಜತೆಗೆ ಚರ್ಚೆ ಮಾಡಿ ಮುಂದಿನ ಹೋರಾಟ ನಡೆಸಲಾಗುವುದು. ಇದು ಬಿಜೆಪಿಯ‌ ಷಡ್ಯಂತರವಷ್ಟೇ, ಎನ್‌ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದಿದ್ದಾರೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ತಿಳಿಸಿದ್ದಾರೆ.

ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟವಾಗಿದೆ. ಬಿಜೆಪಿ, ಜೆಡಿಎಸ್‌ ಪಕ್ಷದ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.

ಮುಡಾ ಪ್ರಕರಣ ನೆಪ ಅಷ್ಟೇ

ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ.

ರಾಜಭವನದ ದುರ್ಬಳಕೆ

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.

ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಕಿಡಿಕಾರಿದ್ದಾರೆ.

ಸಿಎಂ ವಿರುದ್ಧದ ಷಡ್ಯಂತರ -ಡಿಕೆ ಶಿವಕುಮಾರ್‌

ಸಿಎಂ ವಿರುದ್ಧ ಷಡ್ಯಂತರ ನಡಿತಿದೆ. ನನ್ನ ಮೇಲೂ ಬಿಜೆಪಿಯವರು ಷಡ್ಯಂತರ ನಡೆಸಿದರು. ಈಗ ಸಿಎಂ ಸಿದ್ದರಾಮಯ್ಯ ಮೇಲೆ ಷಡ್ಯಂತರ ನಡೆಸುತ್ತಿದ್ದಾರೆ. ಸಿಎಂ ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ. ನಾವೆಲ್ಲರೂ ಸಿಎಂ ಪರ ಇದ್ದಿವಿ. ಸದ್ಯ ಕಾನೂನು ಸಲಹೆ ಪಡೆದು ಮುಂದಿನ ಹೋರಾಟದ ಬಗ್ಗೆ ಚರ್ಚೆ ‌ ಮಾಡುತ್ತೇವೆ ಎಂದು ತಿಳಿಸಿದರು. ನಮ್ಮ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ, ಅವರು ಯಾವುದೇ ಹಗರಣದಲ್ಲೂ ಭಾಗಿಯಾಗಿಲ್ಲ. ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಯಾವುದೇ ತನಿಖೆ ನಡೆದರೂ ಅವರು ದೋಷಮುಕ್ತರಾಗುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ತೀರ್ಪಿನ ಸಂಪೂರ್ಣ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ

ಸಿಎಂ ಹಾಗೂ ಸರ್ಕಾರಕ್ಕೆ ಇದು ಹಿನ್ನಡೆಯೇ ಎಂದು ಕೇಳಿದಾಗ, “ಇಲ್ಲಿ ಹಿನ್ನಡೆಯಾಗುವ ವಿಚಾರ ಏನಿದೆ? ತನಿಖೆ ನಡೆಯಬೇಕು ಎಂದು ಕೋರ್ಟ್ ಆದೇಶ ನೀಡಿರುವುದಾಗಿ ಮಾಧ್ಯಮಗಳು ಹೇಳುತ್ತಿವೆ. ಈ ತೀರ್ಪಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ. ನ್ಯಾಯಲಯದ ತೀರ್ಪು ಏನಿದೆ ಎಂದು ನಾನು ನೋಡಿಲ್ಲ. ಮಾಧ್ಯಮಗಳಿಂದ ವಿಚಾರ ತಿಳಿಯುತ್ತಿದೆ. ಸಂಪೂರ್ಣ ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುತ್ತೇನೆ.” ಎಂದು ತಿಳಿಸಿದರು.

ಸಿಎಂ ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ

ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದು, ಸಿಂಗಲ್ ಬೇಂಚ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇನ್ನು ಡಬಲ್ ಬೆಂಚ್ ಇದೆ. ನ್ಯಾಯಾಂಗದ ಮೇಲೆ ನಮಗೆ ನಂಬಿಕೆ ಇದೆ. 17 A ಮೂಲಕ ಅನುಮತಿ ಕೊಟ್ಟಿದ್ದಾರೆ. ಡಬಲ್ ಬೆಂಚ್‌ನಲ್ಲಿ ನಾವು ಚಾಲೆಂಜ್ ಮಾಡುತ್ತೇವೆ. ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜತೆ ಇದ್ದೇವೆ. ರಾಜ್ಯಪಾಲರ ಮುಂದಿಟ್ಟುಕೊಂಡು ದೇಶದೆಲ್ಲೆಡೆ ಇದೆ ರೀತಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ನಿರಾಣಿ, ಡಿ ನೋಟಿಫೀಕೇಷನ್ ಅವರ ಕೇಸ್‌ಗಳ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಳ್ಳಲಿ ಎಂದು ಆಕ್ರೋಶಿಸಿದರು. ನಮ್ಮ ರಾಜ್ಯಕ್ಕೆ ಇಷ್ಟು ಅನ್ಯಾಯ ಆದರೂ ಬಿಜೆಪಿಯವರು ನಮ್ಮ ರಾಜ್ಯದ ಪರ ಮಾತನಾಡಲಿಲ್ಲ. ನಮ್ಮ ಪ್ರಕಾರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಗತ್ಯ ಇರಲಿಲ್ಲ. ಈಗ ಅನುಮತಿ ಕೊಟ್ಟಿದ್ದಾರೆ. ಕೋರ್ಟ್ ತೀರ್ಪಿಗೆ ನಾವು ಗೌರವ ಕೊಡುತ್ತೇವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

CM Siddaramaiah : ಪ್ರಾಸಿಕ್ಯೂಷನ್‌ಗೆ ಗ್ರೀನ್‌ ಸಿಗ್ನಲ್‌; ಸಿದ್ದರಾಮಯ್ಯ ರಾಜಿನಾಮೆಗೆ ಬಿಜೆಪಿ-ಜೆಡಿಎಸ್‌ ಒತ್ತಾಯ

CM Siddaramaiah : ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್‌ನಿಂದ ಗ್ರೀನ್‌ ಸಿಗ್ನಲ್‌ ಸಿಕ್ಕ ಬೆನ್ನಲ್ಲೇ ವಿರೋಧ ಪಕ್ಷಗಳು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆಗೆ ಒತ್ತಾಯಿಸಿದೆ.

VISTARANEWS.COM


on

By

Vijayendra and cm siddaramaiah
Koo

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ (CM Siddaramaiah) ರಾಜಿನಾಮೆಗೆ ಒತ್ತಾಯಿಸಿದರು. ಬಿಜೆಪಿ ಪಕ್ಷ ಕಳೆದ ಕೆಲ ತಿಂಗಳಿಂದ ಭ್ರಷ್ಟ ಕಾಂಗ್ರೆಸ್ ವಿರುದ್ಧ ನಿರಂತರ ಹೋರಾಟ ಮಾಡಿಕೊಂಡು ಬಂದಿದೆ. ವಾಲ್ಮೀಕಿ ನಿಗಮದ ಹಗರಣ ನಂತರ ಮುಡಾ ಹಗರಣವನ್ನು (MUDA Scam) ಕೈಗೆತ್ತಿಕೊಂಡೆವು. ಸ್ವತಃ ಸಿದ್ದರಾಮಯ್ಯ ಕುಟುಂಬವೇ ನೇರವಾಗಿ ಭಾಗಿಯಾಗಿತ್ತು. ಕಾನೂನಿನಲ್ಲಿ ಎಲ್ಲರೂ ಒಂದೇ ಎಂದು ಕೋರ್ಟ್‌ ತೀರ್ಪು ನೀಡಿದೆ. ರಾಜ್ಯಪಾಲರ ಮೇಲೆ ಆರೋಪ ಬಿಟ್ಟು, ಹೈಕೋರ್ಟ್ ತೀರ್ಪು ಅನ್ನು ಗೌರವಿಸಬೇಕು. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ಭ್ರಷ್ಟಾಚಾರ ಕಳಂಕ ಹೊತ್ತ ಸಿಎಂ ಸಿದ್ದರಾಮಯ್ಯ ರಾಜಿನಾಮೆ ಕೊಡಬೇಕು.

ವಾಲ್ಮೀಕಿ ನಿಗಮದ ಹಗರಣ ಆದಾಗ ಭ್ರಷ್ಟಾಚಾರ ಆಗಿಲ್ಲ ಅಂದಿದ್ದರು. ಬಳಿಕ ಸದನದಲ್ಲಿ ಸಿಎಂ ಅವರೇ ಹಗರಣ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಮುಡಾ ವಿಚಾರದಲ್ಲಿ ಕೂಡ ನಮ್ಮ ಕುಟುಂಬದ ಪಾತ್ರ ಇಲ್ಲ ಅಂದಿದ್ದರು. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ, ಅವರ ಮೇಲೆ ಆರೋಪ‌ ಮಾಡಿದರು. ರಾಜ್ಯಪಾಲರು ಕೊಟ್ಟ ತನಿಖೆ ಮಾಡುವ ಪ್ರಕರಣ ಸರಿ ಇದೆ ಎಂದರು.

ಸತ್ಯಕ್ಕೆ ಜಯ ಖಂಡಿತ – ಆರ್‌ ಅಶೋಕ್‌

ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಲಿ ಎಂದು ಆರ್‌.ಅಶೋಕ್‌ ಒತ್ತಾಯಿಸಿದರು. ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಜಾಗೊಳಿಸಿದ್ದು, ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.

ಈ ಸಂಬಂಧ ಪ್ರತಿಕ್ರಿಯಿಸಿದ ಆರ್‌. ಅಶೋಕ್‌, ಸತ್ಯಮೇವ ಜಯತೆ.. ಸತ್ಯಕ್ಕೆ ಯಾವತ್ತು ಜಯ ಸಿಗುತ್ತೆ. ಇದರ ವಿರುದ್ಧ ವಿಧಾನ ಸಭೆಯಲ್ಲಿ ಅಹೋರಾತ್ರಿ ಧರಣಿ ಮಾಡಿದ್ದೇವೆ. ನಿಲುವಳಿ ಪ್ರಸ್ತಾವನೆ ಮಾಡಲು ಅವಕಾಶ ಕೊಡಲಿಲ್ಲ. ತಪ್ಪಾಗಿದೆ ಅನ್ನೋದು ಅವತ್ತೆ ಸ್ಪಷ್ಟವಾಗಿತ್ತು. ವಿಧಾನ ಸಭೆಯಲ್ಲಿ ಚರ್ಚೆಗೆ ಅವಕಾಶ ಕೊಡ್ದೆ ಓಡಿದ್ರು. ಕೋರ್ಟ್‌ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿರುವುದು ಸ್ವಾಗತರ್ಹ. ಸಿದ್ದರಾಮಯ್ಯ ರಾಮಕೃಷ್ಟ ಹೆಗ್ಡೆ ಅವರನ್ನು ಪಾಲನೆ ಮಾಡುವುದಾದರೆ ರಾಜೀನಾಮೆ ಕೊಡಲಿ ಎಂದು ಕಿಡಿಕಾರಿದರು.

ಲಾಬಿ ಶುರು

ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಅವಕಾಶ ಕೊಟ್ಟಿದ್ದರೆ ಅಂದೇ ಎಲ್ಲವೂ ಬಯಲಾಗುತ್ತಿತ್ತು. ವಾಲ್ಮೀಕಿ ನಿಗಮದ ಹಗರಣದ ಸಚಿವರ ರಾಜೀನಾಮೆ ಆಗಿ ಒಂದು ವಿಕೆಟ್‌ ಬಿದ್ದಿದೆ. ಈಗ ಮತ್ತೊಂದು ವಿಕೆಟ್‌ ಬೀಳಬೇಕಿದೆ. ಈ ಕ್ಷಣದಿಂದ ಐದಾರು ಜನರು ಎಚ್ಚರಗೊಂಡು ದೆಹಲಿಗೆ ಹೋಗುತ್ತಾರೆ. ಸಿಎಂ ಆಗಲು ಲಾಬಿ ಶುರುವಾಗಲಿದೆ ಎಂದರು.

ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್‌ ಕಚೇರಿಯಲ್ಲಿ ದಾಖಲೆಗಳನ್ನು ಹೊರತೆಗೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ದಾಖಲೆ ತೆಗೆದಿದ್ದು ಯಾರು ಎಂಬುದು ಅರ್ಥವೇ ಆಗಲಿಲ್ಲ. ಸರ್ಕಾರ ಇದ್ದಾಗ, ಆ ಸರ್ಕಾರದಲ್ಲಿರುವವರಿಗೆ ಮಾತ್ರ ಬೇಗ ದಾಖಲೆಗಳು ದೊರೆಯುತ್ತದೆ. ಲಿಂಗಾಯತರು, ಒಕ್ಕಲಿಗರು ಎಂದು ಹೇಳಿಕೊಂಡು ಸಿಎಂ ಆಗಲು ಎಲ್ಲರೂ ಪ್ರಯತ್ನ ಮಾಡುತ್ತಿದ್ದಾರೆ. ಹೊಸ ಮುಖ್ಯಮಂತ್ರಿ ಕಾಂಗ್ರೆಸ್‌ನಲ್ಲೇ ತಯಾರಾಗುತ್ತಿದ್ದಾರೆ. ನಾವು ಈ ಸರ್ಕಾರವನ್ನು ಬೀಳಿಸಲ್ಲ, ದುರಾಡಳಿತದಿಂದ ಸರ್ಕಾರವೇ ಬೀಳಲಿದೆ ಎಂದು ನಾನು ಹೇಳಿದ್ದೆ. ಅದು ಈಗ ನಿಜವಾಗುತ್ತಿದೆ ಎಂದರು.

ಭಷ್ಟಚಾರ ಮುಚ್ಚಿಕೊಳ್ಳಲು ಸಿಎಂ ಕುತಂತ್ರ-ಜೆಡಿಎಸ್‌

ಮೂಡಾದಲ್ಲಿ ಅಕ್ರಮವಾಗಿ 14 ಸೈಟುಗಳನ್ನು ಕಬಳಿಸಿದ್ದ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿರುವುದು ಸ್ವಾಗತಾರ್ಹ. ಅಧಿಕಾರ ದುರ್ಬಳಕೆ, ಸ್ವಜನಪಕ್ಷಪಾತ ಎಸಗಿ ಮೂಡಾದಲ್ಲಿನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಸಿದ್ದರಾಮಯ್ಯ ನಡೆಸಿದ್ದ ಕುತಂತ್ರಗಳಿಗೆ ಹೈಕೋರ್ಟ್ ಆದೇಶ ಕಪಾಳಮೋಕ್ಷ ಮಾಡಿದೆ ಎಂದು ಟ್ವೀಟ್‌ ಮಾಡಿ ಹೈ ಕೋರ್ಟ್‌ ತೀರ್ಪುನ್ನು ಜೆಡಿಎಸ್‌ ಸ್ವಾಗತಿಸಿದೆ. ಮೂಡಾ ಹಗರಣದ ವಿರುದ್ಧ NDA ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ನಡೆಸಿದ್ದ “ಮೈಸೂರು ಚಲೋ” ಹೋರಾಟಕ್ಕೆ ಜಯ ಸಿಕ್ಕಿದೆ.

“ಕಪ್ಪು ಚುಕ್ಕೆ”ಯಿಂದ ಬೆತ್ತಲಾದ “ವೈಟ್ನರ್ ರಾಮಯ್ಯ”

ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕು ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ ಎಂದು ಟ್ವೀಟ್‌ ಮೂಲಕವೇ ಜೆಡಿಎಸ್‌ ಕಾಲೆಳೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್; ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ

CM Siddaramaiah : ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸುದೀರ್ಘ ವಾದ-ವಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪು ಅನ್ನು ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತೀರ್ಪು ಪ್ರಕಟಿಸಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

VISTARANEWS.COM


on

By

CM Siddaramaiah
Koo

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ತೀರ್ಪು ಅನ್ನು ಹೈಕೋರ್ಟ್‌ ಪ್ರಕಟಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಸುದೀರ್ಘ ವಾದ-ವಿವಾದ ಆಲಿಸಿ, ತೀರ್ಪು ಕಾಯ್ದಿರಿಸಲಾಗಿತ್ತು. ಸೆ.24ರಂದು ತೀರ್ಪು ಪ್ರಕಟಿಸಿದ್ದು, ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.

ಸಿದ್ದರಾಮಯ್ಯ ಪರ ವಕೀಲರಿಂದ ತಡೆಯಾಜ್ಞೆ ಕೊಡುವಂತೆ ಮನವಿ ಮಾಡಿದರು. ಈ ವೇಳೆ ಮನವಿ ಕೋರ್ಟ್‌ ತಿರಸ್ಕರಿಸಿದ ಕೋರ್ಟ್, ಮಧ್ಯಾಹ್ನ 2-30ಕ್ಕೆ ಆದೇಶ ಪ್ರತಿ ನಿಮ್ಮ ಕೈಗೆ ಸಿಗುತ್ತೆ. ನನ್ನ ಆದೇಶಕ್ಕೆ ನಾನು ತಡೆಯಾಜ್ಞೆ ಕೊಡಲ್ಲ ಎಂದು ನ್ಯಾಯಾಧೀಶರು ತಿಳಿಸಿದರು. ಇದೇ ವೇಳೆ ಹೈಕೋರ್ಟ್ ಏಕಸದಸ್ಯ ಪೀಠ ಕೆಳ ನ್ಯಾಯಾಲಯದ ತಡೆ ತೆರವು ಮಾಡಿದೆ. ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಧಾರದಲ್ಲಿ ಯಾವುದೇ ಲೋಪಗಳಿಲ್ಲ. ವಿವೇಚನಾಧಿಕಾರ ಸರಿ ಇದೆ. 17a ಅನುಮತಿ ತೆಗೆದುಕೊಳ್ಳುವುದು ಇಂತಹ ಕೇಸ್‌ನಲ್ಲಿ ಕಡ್ಡಾಯ ಹೀಗಾಗಿ ದೂರುದಾರರು ಅದನ್ನು ಪಾಲಿಸಿದ್ದಾರೆ ಎಂದು ಹೈಕೋರ್ಟ್ ತಿಳಿಸಿದೆ.

ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ದೂರುದಾರ ಟಿಜೆ ಅಬ್ರಾಹಂ ಕೋರ್ಟ್‌ಗೆ ಆಗಮಿಸಿದ್ದರು. ಇನ್ನು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂಧರ್ ಸಿಂಗ್, ಹಿರಿಯ ವಕೀಲ ರಾಘವನ್ ಹಾಗೂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ , ಪ್ರದೀಪ್‌ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು.

ಇದನ್ನೂ ಓದಿ: CM Siddaramaiah : ಸಿದ್ದರಾಮಯ್ಯ ವಿಷ್ಯದಲ್ಲಿ ಆತುರದ ನಿರ್ಣಯ; ರಾಜ್ಯಪಾಲರಿಂದ ಸಂವಿಧಾನಕ್ಕೆ ಅಪಚಾರ- ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ

ಏನಿದು ಮುಡಾ ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿತ್ತು. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ಸಿದ್ದರಾಮಯ್ಯಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ, ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅರ್ಜಿಗಳನ್ನು ಸಲ್ಲಿಸಿದ್ದರು.

ಮೈಸೂರಿನ ಸ್ನೇಹಮಯಿ ಕೃಷ್ಣ, ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Murder case
ಬೆಂಗಳೂರು9 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ10 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ10 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು13 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ14 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ14 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ14 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ15 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Self Harming
ಕೋಲಾರ2 ದಿನಗಳು ago

Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

karnataka weather Forecast
ಮಳೆ2 ದಿನಗಳು ago

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌