Site icon Vistara News

BJP JDS alliance : ಮೈತ್ರಿಯಾಗಿದೆಯಷ್ಟೇ, ವರಿಷ್ಠರು ಸೀಟು ಹಂಚಿಕೆ ಮಾಡ್ತಾರೆ: ಬಿ.ಎಸ್.‌ ಯಡಿಯೂರಪ್ಪ

BS Yediyurappa

ನವ ದೆಹಲಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS alliance) ಆಗಿದೆ ಅಷ್ಟೇ. ಲೋಕಸಭಾ ಕ್ಷೇತ್ರಗಳ ಸೀಟು ಹಂಚಿಕೆ (Lok Sabha seat sharing) ಬಗ್ಗೆ ಮಾತುಕತೆ ನಡೆಯುತ್ತಿದೆ. ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Former CM BS Yediyurappa) ಪ್ರತಿಕ್ರಿಯೆ ನೀಡಿದ್ದಾರೆ.

ನವ ದೆಹಲಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸೀಟು ಹಂಚಿಕೆ ಬಗ್ಗೆ ಈಗಾಗಲೇ ಹೈಕಮಾಂಡ್ (BJP High Command) ನಾಯಕರು ಮಾತನಾಡಿದ್ದಾರೆ. ಯಾವ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬಹುದು ಎಂದು ಮಾತನಾಡಿದ್ದಾರೆ. ಇವತ್ತಿನ ಸಭೆಯಲ್ಲಿ ಕೇಳಿದರೆ ನಾನು ಸಲಹೆ ಕೊಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Lingayat CM : ಶಾಮನೂರು ಶಿವಶಂಕರಪ್ಪರಿಗೆ ಸಿಎಂ ಸ್ಪಷ್ಟ ಉತ್ತರ ಕೊಡಬೇಕು: ಬಸವರಾಜ ಬೊಮ್ಮಾಯಿ

ಮೈತ್ರಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿ ನನಗೆ ಇದೆ. ಹಂತ ಹಂತವಾಗಿ ಎಲ್ಲ ಮಾಹಿತಿಯೂ ನನಗೆ ಬಂದಿದೆ. ಹೈಕಮಾಂಡ್ ನಾಯಕರು ಈ ಬಗ್ಗೆ ಚರ್ಚೆ ಮಾಡಿದ್ದಾರೆ. ನನಗೆ ಏನೂ ಮಾಹಿತಿಯೇ ಇಲ್ಲ ಎನ್ನುವುದು ಸರಿಯಲ್ಲ. ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಯುತ್ತಿದೆ. ವರಿಷ್ಠರು ಯಾವ ತೀರ್ಮಾನವನ್ನು ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮೈತ್ರಿ ವಿಚಾರದಲ್ಲಿ ತಮ್ಮನ್ನು ಪರಿಗಣಿಸಲಾಗಿಲ್ಲ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಯು ಅವರ ಪಕ್ಷಕ್ಕೆ ಸಂಬಂಧಿಸಿದ್ದಾಗಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿಯಲ್ಲಿ ಅಸಮಾಧಾನ ಇಲ್ಲ

ಬಿಜೆಪಿಯಲ್ಲಿ ಯಾವ ನಾಯಕರಿಗೂ ಅಸಮಾಧಾನ ಇಲ್ಲ. ಜೆಡಿಎಸ್‌ನಲ್ಲಿ ವಿಶೇಷವಾಗಿ ಮುಸ್ಲಿಂ ನಾಯಕರಿಗೆ ಅಸಮಾಧಾನ ಇದೆ. ಕೆಲವು ನಾಯಕರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ಹಿಂದೆ ಕೂಡ ಮುಸ್ಲಿಂ ಸಮುದಾಯದವರು (Muslim community) ಜೆಡಿಎಸ್‌ಗೆ ವಾಸ್ತವಿಕವಾಗಿ ಬೆಂಬಲ ನೀಡಿರಲಿಲ್ಲ. ಬೆಂಬಲ ನೀಡಿದ್ದರೆ ಜೆಡಿಎಸ್ 19 ಸ್ಥಾನಕ್ಕೆ ಸೀಮಿತವಾಗಿರುತ್ತಿರಲಿಲ್ಲ.‌ ಮುಸ್ಲಿಂ ನಾಯಕರು ಜೆಡಿಎಸ್ ತೊರೆಯುತ್ತಿರುವುದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಹೋಗಲ್ಲ

ಕಾಂಗ್ರೆಸ್‌ಗೆ ಬಿಜೆಪಿ ನಾಯಕರು ಹೋಗುವುದಿಲ್ಲ. ರಾಮಪ್ಪ ಲಮಾಣಿ ಅವರನ್ನು ಕರೆದು ಮಾತನಾಡುತ್ತೇನೆ. ಎಲ್ಲರ ಜತೆಗೆ ನಾನೇ ಮಾತನಾಡುತ್ತೇನೆ. ಕೆಲವು ಕಾರಣಗಳಿಗೆ ಒಬ್ಬೊಬ್ಬ ನಾಯಕರು ಹೋದರೆ ಪಕ್ಷಕ್ಕೆ ಏನೂ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಶಾಮನೂರು ಹೇಳಿಕೆ ವಾಸ್ತವವಾಗಿದೆ

ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯು ವಾಸ್ತವಿಕವಾಗಿದೆ. ಅವರ ಹೇಳಿಕೆಗೆ ನನ್ನ ಸಹಮತ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಸಮಾಜ ಒಟ್ಟಾಗಬೇಕಿದೆ. ಒಟ್ಟಾದಾಗ ಮಾತ್ರ ಪರಿಹಾರ ಸಿಗುತ್ತದೆ ಎಂದು ಸೀಟು ಹಂಚಿಕೆ ಬಗ್ಗೆ ಈಗಾಗಲೇ ಹೈಕಮಾಂಡ್ ನಾಯಕರು ಮಾತನಾಡಿದ್ದಾರೆ. ಯಾವ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬಹುದು ಎಂದು ಮಾತನಾಡಿದ್ದಾರೆ. ಇವತ್ತಿನ ಸಭೆಯಲ್ಲಿ ಕೇಳಿದರೆ ನಾನು ಸಲಹೆ ಕೊಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ: Lingayat CM : ಲಿಂಗಾಯತರು ಸಿಎಂ ಆಗಬೇಕೆಂಬ ಶಾಮನೂರು ಹೇಳಿಕೆಯಲ್ಲಿ ಅರ್ಥ ಇದೆ: ಬಿ.ವೈ. ವಿಜಯೇಂದ್ರ

ಹೈಕಮಾಂಡ್‌ ಕೇಳಿದರೆ ಮಾತ್ರ ಹೇಳುವೆ

ಸಂಜೆಯ ಸಭೆಯಲ್ಲಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚಿಸುವುದಿಲ್ಲ. ಹೈಕಮಾಂಡ್ ಮಾತನಾಡಿದರೆ ನನ್ನ ಅಭಿಪ್ರಾಯ ಹೇಳುವೆ ಅಷ್ಟೇ ಎಂದು ಬಿ.ಎಸ್.‌ ಯಡಿಯೂರಪ್ಪ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

Exit mobile version