Hosanagara News: ನಮ್ಮ ಕಾರ್ಯಕರ್ತರ ಪರಿಶ್ರಮದಿಂದ ಮತ್ತೆ ಸಂಸದನಾಗಿದ್ದೇನೆ: ಬಿ.ವೈ. ರಾಘವೇಂದ್ರ - Vistara News

ರಾಜಕೀಯ

Hosanagara News: ನಮ್ಮ ಕಾರ್ಯಕರ್ತರ ಪರಿಶ್ರಮದಿಂದ ಮತ್ತೆ ಸಂಸದನಾಗಿದ್ದೇನೆ: ಬಿ.ವೈ. ರಾಘವೇಂದ್ರ

Hosanagara News: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದ್ದು, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಸಾಮಾನ್ಯ ಜನರು ಬದುಕುವುದೇ ಕಷ್ಟಕರವಾಗಿದ್ದು ಎಲ್ಲ ಬೆಲೆಗಳನ್ನು ಗಗನಕ್ಕೇರಿವೆ. ಇದು ಕಾಂಗ್ರೆಸ್ ಪಕ್ಷದ ಸಾಧನೆಯಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: ನನಗೆ ಶಕ್ತಿಯೇ ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರು, ಅವರ ಹಗಲಿರುಳು ಪರಿಶ್ರಮದಿಂದ ಈ ಬಾರಿ ಸುಮಾರು 2.47 ಲಕ್ಷ ಮತಗಳ ಅಂತರದಿಂದ ಜಯಶಾಲಿಯಾಗಲು ಸಾಧ್ಯವಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ (Hosanagara News) ಹೇಳಿದರು.

ಪಟ್ಟಣದ ಆರ್ಯಈಡಿಗರ ಸಭಾಭವನದಲ್ಲಿ ಮಂಗಳವಾರ ಪಕ್ಷದಿಂದ ಹಮ್ಮಿಕೊಂಡಿದ್ದ ಮತದಾರರಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಬಿಜೆಪಿ ಕಾರ್ಯಕರ್ತರ ಶ್ರಮದಿಂದ ಜಯಶಾಲಿಯಾಗಿ ಬರುವುದರ ಜತೆಗೆ ಸಾಗರ ಕ್ಷೇತ್ರದಲ್ಲಿ 10 ಸಾವಿರ, ಹೊಸನಗರ ಕ್ಷೇತ್ರದಲ್ಲಿ 17 ಸಾವಿರ ಮತಗಳನ್ನು ಹೆಚ್ಚು ಪಡೆಯುವ ಮೂಲಕ ಇನ್ನೂ ಈ ಕ್ಷೇತ್ರದಲ್ಲಿ ಬಿಜೆಪಿ ಗಟ್ಟಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Gautam Gambhir : ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಸಾಮಾನ್ಯ ಜನರು ಬದುಕುವುದೇ ಕಷ್ಟಕರವಾಗಿದ್ದು, ಎಲ್ಲ ಬೆಲೆಗಳು ಗಗನಕ್ಕೇರಿವೆ. ಇದು ಕಾಂಗ್ರೆಸ್ ಪಕ್ಷದ ಸಾಧನೆಯಾಗಿದೆ ಎಂದು ಆರೋಪಿಸಿದರು.

ಬಳಿಕ ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿದರು.

ಇದನ್ನೂ ಓದಿ: Kannada New Movie: ವಸಿಷ್ಠ ಸಿಂಹ ಅಭಿನಯದ “Love ಲಿ” ಸಿನಿಮಾಕ್ಕೆ 25 ದಿನಗಳ ಸಂಭ್ರಮ

ಈ ಸಂದರ್ಭದಲ್ಲಿ ಮುಖಂಡರಾದ ಕೆ.ವಿ. ಕೃಷ್ಣಮೂರ್ತಿ, ಎನ್.ಆರ್. ದೇವಾನಂದ್, ಶ್ರೀಪತಿರಾವ್, ಮಂಡಾನಿ ಮೋಹನ್, ಸತ್ಯನಾರಾಯಣ, ಕಾಲಸಸಿ ಸತೀಶ್, ಮಂಜುನಾಥ್, ಸಂಜೀವ, ನಾಗರ್ಜುನ ಸ್ವಾಮಿ, ಉಮೇಶ್ ಕಂಚುಗಾರ್, ಕಲ್ಯಾಣಪ್ಪಗೌಡ, ಆಲವಳ್ಳಿ ವೀರೇಶ್, ಸುರೇಶ್ ಸ್ವಾಮಿರಾವ್, ಚಾಬುಸಾಬ್‌, ಗಾಯಿತ್ರಿ ನಾಗರಾಜ್, ಕೃಷ್ಣವೇಣಿ, ಎಂ.ವಿ ಜಯರಾಮ್, ಕಾಯಿ ನಾಗೇಶ, ಹಾಲಗದ್ದೆ ಉಮೇಶ, ಗಣಪತಿ ಬೆಳಗೋಡು, ಎ.ವಿ. ಮಲ್ಲಿಕಾರ್ಜುನ, ಶಿವಕುಮಾರ್, ಮನೋಹರ ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Road Accident: ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ಭೀಕರ ಅಪಘಾತ ನಡೆದಿದೆ.

VISTARANEWS.COM


on

Road Accident
Koo

ಕೊಡಗು: ಬೈಕ್ ಹಾಗೂ‌ ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ನಡೆದಿದೆ. ಮಂಜು (25) ಹಾಗೂ ರಕ್ಷಿತ್ (24) ಮೃತರು.

ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಕುಶಾಲನಗರದಿಂದ ಮಡಿಕೇರಿ ಕಡೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿವೆ, ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬಿದ್ದ ಬೈಕ್; ಇಬ್ಬರಿಗೆ ಗಾಯ

ಬಾಗಲಕೋಟೆ: ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬೈಕ್ ಬಿದ್ದ ಹಿನ್ನೆಲೆಯಲ್ಲಿ ಪಿಯುಸಿ ಓದುವ ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬೈಕ್‌ನಿಂದ ಬಿದ್ದು ಕೈ ಮುರಿದು ಏಳೋಕಾಗದೇ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ನರಳಾಡುತ್ತಿದ್ದ. ಮತ್ತೋರ್ವನ ಮುಖ, ಹಣೆ, ತಲೆ, ಮೂಗಿಗೆ ಗಾಯಗಳಾಗಿ ರಕ್ತಸ್ರಾವವಾಗುತ್ತಿತ್ತು.

ಬಾದಾಮಿ ತಾಲೂಕಿನ ಹಾಲಿಗೇರಿ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಸಯ್ಯ ಸೂಳಿಕೇರಿ (17), ಪ್ರಶಾಂತ್ (17) ಎಂಬ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕಾಲೇಜು ಮುಗಿಸಿ ಕೆರೂರು ಪಟ್ಟಣದಿಂದ ಮನೆಗೆ ಹೋಗುವ ವೇಳೆ ಅಪಘಾತ ನಡೆದಿದೆ.

ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ರಾಯಚೂರು: ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ.

ನಿಗಿ ನಿಗಿ ಕೆಂಡದಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮೊಹರಂ ಹಬ್ಬ ಆಚರಣೆ ವೇಳೆ ಕೊಂಡ ಹಾಯುವುದು ಪದ್ಧತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ಅದರಂತೆ ಬೆಂಕಿ ಹಾಯಲು ಯಮನಪ್ಪ ಮುಂದಾಗಿದ್ದರು. ಕೊಂಡ ಹಾಯುವಾಗ ಆಯತಪ್ಪಿ ಬೆಂಕಿಯೊಳಗೆ ಬಿದ್ದ ಪರಿಣಾಮ ಸುಟ್ಟುಕರಕಲಾಗಿದ್ದಾರೆ.

ಕೂಡಲೇ ಅಲ್ಲಿದ್ದವರು ಬೆಂಕಿ ಹಾರಿಸಲು ನೀರು ಎರಚಿ ರಕ್ಷಣೆ ಮುಂದಾದರೂ, ಆದರೆ ತೀವ್ರ ಬೆಂಕಿ ಆವರಿಸಿ ಯಮನಪ್ಪ ಸುಟ್ಟುಭಸ್ಮವಾದರು. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್‌ರಿಂದ ಲಾಠಿ ಚಾರ್ಜ್

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸ್‌ರಿಂದ ಲಾಠಿ ಚಾರ್ಜ್ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಶ್ಚಾಪುರ ಗ್ರಾಮದ ನಡುವಿನ ಪೇಟೆ ಬಳಿ ಬಂದಾಗ ಏಕಾಏಕಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಎರಡು ದೇವರ ಭೇಟಿ ಸಂದರ್ಭದಲ್ಲಿ ಟೊನ್ನೆಬಾವು, ಕರಬಾಲ ಎಂಬ ಸಂಪ್ರದಾಯದ ಆಚರಣೆ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯಮಕನಮರಡಿ ಪೊಲೀಸ್ ಠಾಣೆಯ ಎಎಸ್‌ಐ ಮುರಗೋಡ ಹಾಗೂ ಓರ್ವ ಪೋಲಿಸ್ ಪೇದೆ ಮೇಲೆ ಹಲ್ಲೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಿದೆ.

Continue Reading

ಕರ್ನಾಟಕ

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Assembly Session: ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ (Assembly Session) ಎರಡನೇ ದಿನವಾದ ಮಂಗಳವಾರವೂ ವಾಲ್ಮೀಕಿ ನಿಗಮದ ಹಗರಣವು (Valmiki Corporation Scam) ಸದ್ದು ಮಾಡಿದೆ. ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಗೈರುಹಾಜರಿಯನ್ನು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ್‌ ನಾರಾಯಣ್‌ (Ashwath narayan) ಆಕ್ಷೇಪಿಸಿದರು. ಈ ವೇಳೆ ʼಲೂಟಿಕೋರರ ಪಿತಾಮಹʼ ನೀನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿರುವುದು ಕಂಡುಬಂದಿದೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರಿಸಲು ಮುಂದಾದರು. ಈ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕು ಎಂದು ಪಟ್ಟು ಹಿಡಿದರು.

ಅಶೋಕ್ ಚರ್ಚೆ ಮಾಡುವಾಗ ಸಿಎಂ ಸಿದ್ದರಾಮಯ್ಯ ಗೈರಾದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಅಶ್ವತ್ಥ್‌ ನಾರಾಯಣ್, ನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ಹಣಕಾಸು ಸಚಿವರಾಗಿರೋ ಸಿಎಂ ಮೇಲೆ ಗಂಭೀರ ಆರೋಪ ಇದೆ. ಕೂಡಲೇ ಅವರನ್ನು ಕರೆಸಿ ಅಂತ ಆಗ್ರಹಿಸಿದರು. ಈ ವೇಳೆ ಸದನದಲ್ಲಿ ಎದ್ದು ನಿದ್ದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ ಡಿಸಿಎಂ ಡಿಕೆಶಿ, ಸಿಎಂಗೆ ಗೌರವ ಕೊಡೋದನ್ನು ಕಲಿಯಿರಿ ಅಂತ ಆಕ್ರೋಶ ಹೊರಹಾಕಿದರು. ಈ ವೇಳೇ ಲೂಟಿಕೋರರ ಪಿತಾಮಹ ನೀನು ಅಂತ ಅಶ್ವತ್ಥ್‌ ನಾರಾಯಣ್ ಕಡೆ ಬೊಟ್ಟು ಮಾಡಿ ಕಿಡಿಕಾರಿದರು. ಈ ವೇಳೆ ಡಿಸಿಎಂ ವಿರುದ್ಧ ಮುಗಿಬಿದ್ದ ಬಿಜೆಪಿ ಶಾಸಕರು, ನೀವೇನು ಎಂಬುವುದು ಎಲ್ಲರಿಗೂ ಗೊತ್ತಿದೆ ಅಂತ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಷಯದ ಚರ್ಚೆಗೆ ಪ್ರಸ್ತಾಪ ಮಾಡಿದಾಗೆಲ್ಲ ಬಿಜೆಪಿಯ ಮುಖ್ಯಮಂತ್ರಿಗಳು ಸದನದಲ್ಲಿ ಹಾಜರಿರುತ್ತಿದ್ದರೇ? ಅವರು ಗೈರಾಗಿರಲಿಲ್ಲವೇ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ” ಎಂದು ಹರಿಹಾಯ್ದರು.

“ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು” ಎಂದು ಅಶ್ವತ್ಥ್ ನಾರಾಯಣ ಹೇಳಿದಾಗ “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಗುಡುಗಿದರು.

“ನನ್ನ ವಿರುದ್ದ ಮಾಡಿದ ಆಪಾದನೆ ಹಿಟ್ ಆ್ಯಂಡ್ ರನ್” ಎಂದು ಅಶ್ವತ್ಥ್ ನಾರಾಯಣ ಗದ್ದಲ ಎಬ್ಬಿಸಿದಾಗ “ರಾಮನಗರದ ಕಸ ಗುಡಿಸುತ್ತೇನೆ ಎಂದು ಹೇಳಿದ ನಿಮಗೆ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸೀಟು ಗೆಲ್ಲಲು ಆಗಲಿಲ್ಲ” ಎಂದು ಡಿಸಿಎಂ ಕುಟುಕಿದರು.

ಮುಂದುವರಿದು “ಇಷ್ಟು ಹೊತ್ತಿನ ತನಕ ಮುಖ್ಯಮಂತ್ರಿಗಳು ಕುಳಿತಿರಲಿಲ್ಲವೇ? ಸದನದಲ್ಲಿ ನಾವೆಲ್ಲಾ ಕುಳಿತಿಲ್ಲವೇ? ಮುಖ್ಯಮಂತ್ರಿಗಳ ಮೇಲೆ ಆರೋಪವಿದೆ ಎಂದು ಹೇಗೆ ಹೇಳುತ್ತಾರೆ ಇವರು?” ಎಂದು ಬಿಜೆಪಿ ಶಾಸಕರ ಮೇಲೆ ಡಿಸಿಎಂ ಮುಗಿಬಿದ್ದರು. ʼ ಈ ರೀತಿ ಯಾರ ಹೆಸರನ್ನು ಬೇಕಾದರೂ ನಾವು ಬಳಸಿಕೊಳ್ಳಬಹುದೇ” ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿದಾಗ “ಇವರು (ಅಶ್ವತ್ಥ್ ನಾರಾಯಣ) ಮುಖ್ಯಮಂತ್ರಿಗಳ ಹೆಸರನ್ನು ಹೇಗೆ ಬಳಸಿಕೊಂಡರು? ಎಂದು ಕಟುವಾಗಿ ಮರುಪ್ರಶ್ನಿಸಿದರು.

ಶಿವಕುಮಾರ್ ಅವರ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಶಾಸಕರು ಗದ್ದಲ ಮಾಡಿದಾಗ ಕಲಾಪವನ್ನು ಮುಂದೂಡಲಾಯಿತು. “ಎಸ್ಐಟಿ ಎಂದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ, ಇದನ್ನು ಸಹ ಕಡತದಿಂದ ತೆಗೆದುಹಾಕಬೇಕು” ಎಂದು ಡಿಸಿಎಂ ಅವರು ಸ್ವೀಕರ್ ಗೆ ಮನವಿ ಮಾಡಿದರು.

ಇದನ್ನೂ ಓದಿ | D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

ಇದೇ ವೇಳೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ “ ನಾನು ಸ್ಪೀಕರ್ ಅವರ ಬಳಿ ಮನವಿ ಮಾಡುತ್ತಿದ್ದೇನೆ. ನನಗೂ ಈ ಸದನದ ಕಾನೂನು ಗೊತ್ತಿದೆ” ಎಂದಾಗ, “ನೀವು ಸಿಬಿಐ ಬಗ್ಗೆ ಹೇಳಿದ್ದೀರಲ್ಲ” ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದರು. “ಮೊದಲು ಹೇಳಿದವರು ನೀವು ಮತ್ತು ದೇವೇಗೌಡರು” ಎಂದು ಶಿವಕುಮಾರ್ ಅವರು ತಿರುಗೇಟು ಕೊಟ್ಟರು.

Continue Reading

ಕರ್ನಾಟಕ

Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

Assembly Session: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ.

VISTARANEWS.COM


on

R Ashok demands that Valmiki Development Corporation scam should be investigated by CBI and CM Siddaramaiah should resign
Koo

ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ (Assembly Session) ಆಗ್ರಹಿಸಿದರು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಕುರಿತು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ವಸಂತ ನಗರದ ಯೂನಿಯನ್‌ ಬ್ಯಾಂಕ್‌ ಹಾಗೂ ಎಂಜಿ ರಸ್ತೆಯ ಬ್ಯಾಂಕ್‌ ಖಾತೆಗೆ ಹಣ ಹಾಕಲಾಗಿದೆ. ಎರಡು ಖಾತೆ ತೆರೆಯಬಾರದು ಎಂದು ಸರ್ಕಾರವೇ ಆದೇಶ ಮಾಡಿರುವಾಗ ಅದನ್ನು ಉಲ್ಲಂಘಿಸಲಾಗಿದೆ. ಕಳ್ಳತನ ಆಗಿರುವುದೇ 187 ಕೋಟಿ ರೂ. ಎಂದಿರುವಾಗ ಅದು 89 ಕೋಟಿ ರೂ. ಎಂದು ಹೇಳಲು ಸಾಧ್ಯವಿಲ್ಲ. ಇದಕ್ಕಾಗಿಯೇ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ಇಲಾಖೆಯವರು ತಮಗೆ ಗೊತ್ತಿರಲಿಲ್ಲ ಎಂದು ಹೇಳಿದರೂ ಅದು ದೊಡ್ಡ ತಪ್ಪು ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ನಿಯೋಜಿಸಲಾಗಿದೆ. ಹಾಗೆಯೇ ಎಚ್‌.ಡಿ.ರೇವಣ್ಣ, ಪ್ರಜ್ವಲ್‌ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ತನಿಖೆಗೆ ವಿಶೇಷ ತನಿಖಾ ದಳ ನಿಯೋಜಿಸಲಾಗಿದೆ. ಎಸ್‌ಐಟಿ ತನಿಖೆ ಆರಂಭವಾದಾಗಲೇ ಅವರು ಭಯಗೊಂಡು ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ ನಿಗಮದ ತನಿಖೆ ಆರಂಭವಾದಾಗ ಸಚಿವರಿಗೆ ಹಾಗೂ ಅಧ್ಯಕ್ಷರಿಗೆ ಯಾವುದೇ ಭಯ ಇರಲಿಲ್ಲ. “ಸಿಬಿಐ ತನಿಖೆಯಾದರೆ ಎರಡು ವರ್ಷ ಜೈಲು ಹಾಗೂ ನಮ್ಮವರು ಬಂದರೆ ಬಿಡುಗಡೆ” ಎಂದು ಬಿಡುಗಡೆಯಾದ ಆಡಿಯೋದಲ್ಲಿ ಅಧಿಕಾರಿಗಳು ಮಾತಾಡಿದ್ದಾರೆ. ನಿಗಮದ ಹಗರಣದ ತನಿಖೆಯಲ್ಲಿ ಎಸ್‌ಐಟಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಬೇನಾಮಿ ಹಣ ಬಂದ ಕೂಡಲೇ ಸಹಜವಾಗಿ ಇಲ್ಲಿ ಜಾರಿ ನಿರ್ದೇಶನಾಲಯ ಬಂದು ತನಿಖೆ ಮಾಡಿದೆ. ಹಾಗೆಯೇ ಸಿಬಿಐ ಕೂಡ ಕಾನೂನು ಪ್ರಕಾರ ಮಧ್ಯಪ್ರವೇಶ ಮಾಡಿ ತನಿಖೆ ಮಾಡುತ್ತಿದೆ. ಆದರೆ ಎಸ್‌ಐಟಿಯನ್ನು ಕಾಂಗ್ರೆಸ್‌ ಸರ್ಕಾರ ನೇಮಿಸಿದ್ದು, ತನಿಖೆ ವೇಗವಾಗಿ ನಡೆದಿಲ್ಲ. ಇಲ್ಲಿ ತಾರತಮ್ಯ ನಡೆದಿದೆ ಎಂದು ದೂರಿದರು.

ಹಗರಣವಾಗಿದೆ ಎಂದು ಗೊತ್ತಾದಾಗ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಇದು ತಮ್ಮ ವ್ಯಾಪ್ತಿಯದ್ದಲ್ಲ ಎಂದು ಹೇಳಿದರು. ಆರ್ಥಿಕ ಇಲಾಖೆಯವರೂ ಇದನ್ನೇ ಹೇಳಿದರು. ಮುಖ್ಯಮಂತ್ರಿಯನ್ನು ಕೇಳಿದರೆ ಇದು ನನಗೆ ಸಂಬಂಧವಿಲ್ಲ ಎಂದರು. ಹೀಗೆ ಯಾರೂ ಒಪ್ಪಿಕೊಳ್ಳದೆ ಮತ್ತೊಬ್ಬರ ಮೇಲೆ ತಪ್ಪು ಹೇರುವ ಕೆಲಸ ಮಾಡಿದ್ದಾರೆ. ಇದು ಹೊಣೆ ಇಲ್ಲದ ಸರ್ಕಾರ ಎಂದು ದೂರಿದರು.

ಎಲ್ಲ ಶಾಸಕರಿಗೆ ಸಂಬಂಧಿಸಿದ್ದು

ಇದು 224 ಶಾಸಕರಿಗೂ ಸಂಬಂಧಪಟ್ಟ ಸಂಗತಿ. ಒಂದು ವರ್ಷದಿಂದ ನಿಗಮದಿಂದ ದಲಿತರಿಗೆ 187 ಕೋಟಿ ರೂ. ಮೊತ್ತದ ಯೋಜನೆ ಸಿಕ್ಕಿಲ್ಲ. ಈ ಹಣವನ್ನು ಮುಖ್ಯಮಂತ್ರಿಯೇ ನೀಡಬೇಕು. ಇದಕ್ಕೆ ಯಾರು ಜವಾಬ್ದಾರಿ? ಯೋಜನೆ ಮುಂದುವರಿಸುವುದಕ್ಕೆ ಯಾರನ್ನು ಹೊಣೆಗಾರರಾಗಿ ಮಾಡುತ್ತಾರೆ? ಇದು ಕ್ಷೇತ್ರದ ಮತದಾರರಿಗೆ ತಲುಪಬೇಕಾದ ಹಣ. ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಮನೆಗೆ ಹೋಗಿ ಒಂದು ದಿನ ವಾಸ್ತವ್ಯ ಮಾಡಲಿ. ದಲಿತರು ಎಷ್ಟು ಕಷ್ಟ ಪಡುತ್ತಾರೆ ಎಂದು ಗೊತ್ತಾಗುತ್ತದೆ. ಅಂತಹ ಜನರ ಹಣವನ್ನು ಕದ್ದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರನ್‌ ಕುಟುಂಬ ಬೀದಿಗೆ ಬಂದಿದೆ ಎಂಬ ಸುದ್ದಿ ಪತ್ರಿಕೆಯಲ್ಲಿ ಬಂದಿದೆ. ಆ ಮನೆಯನ್ನೇ ಕುಟುಂಬದವರು ಖಾಲಿ ಮಾಡಿ ಹೋಗಿದ್ದಾರೆ. ಆ ಕುಟುಂಬವೀಗ ಬೀದಿಗೆ ಬಂದಿದೆ. ಸಚಿವರು ಬಂದು ಸಮಾಧಾನ ಹೇಳಿದ್ದಾರೆಯೇ ಹೊರತು, ಏನೂ ಪರಿಹಾರ ಸಿಕ್ಕಿಲ್ಲ ಎಂದು ಮೃತ ಅಧಿಕಾರಿಯ ಪತ್ನಿ ಹೇಳಿದ್ದಾರೆ. ಇದೇ ರೀತಿ ನಮ್ಮ ಮನೆಯ ಹೆಣ್ಣುಮಕ್ಕಳಿಗೆ ಆಗಿದ್ದರೆ ಸಹಿಸಿಕೊಳ್ಳುತ್ತಿದ್ದೆವಾ? ಎಂದು ಪ್ರಶ್ನಿಸಿದರು.

Continue Reading

ಕರ್ನಾಟಕ

Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

Lakshmi Hebbalkar: 1982ರ ರಾಜ್ಯ ಅನುಸಂಧಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯ ಬೇಡಿಕೆಗಳನ್ನು ಇಲಾಖೆ ಸಹಾನುಭೂತಿಯಿಂದ ಪರಿಶೀಲಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸದ್ಯ ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ‌ ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಕಳೆದ 14 ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಜತೆಗೆ ಪ್ರತಿ ತಿಂಗಳು ವೇತನ ಭರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

VISTARANEWS.COM


on

Necessary action will be taken for salary revision of special schools teachers says minister Lakshmi Hebbalkar
Koo

ಬೆಂಗಳೂರು: ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ತಿಳಿಸಿದ್ದಾರೆ.

ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷಚೇತನ ಮಕ್ಕಳ ವಸತಿ ಶಾಲೆಗಳ ಸಭೆಯಲ್ಲಿ ಮಾತನಾಡಿದ‌ ಸಚಿವರು, 1982ರ ರಾಜ್ಯ ಅನುಸಂಧಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯ ಬೇಡಿಕೆಗಳನ್ನು ಇಲಾಖೆ ಸಹಾನುಭೂತಿಯಿಂದ ಪರಿಶೀಲಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಸದ್ಯ ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ‌ ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಕಳೆದ 14 ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಜತೆಗೆ ಪ್ರತಿ ತಿಂಗಳು ವೇತನ ಭರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ಮಾನಸಿಕ ಭಿನ್ನ ಸಾಮರ್ಥ್ಯದ 25 ವಯೋಮಿತಿ ಮೀರಿದವರಿಗಾಗಿ ವೃತ್ತಿಪರ ತರಬೇತಿ ಕೇಂದ್ರ ಅಥವಾ ಪಾಲನಾ ಕೇಂದ್ರವನ್ನು ರಾಜ್ಯಾದ್ಯಂತ ನಡೆಸುವ ಬಗ್ಗೆ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಸಭೆಯಲ್ಲಿ ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿರ್ದೇಶಕ ಸಿದ್ದೇಶ್ವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
K Kavitha
ದೇಶ7 mins ago

Delhi Liquor Policy Case: ತಿಹಾರ್‌ ಜೈಲಿನಲ್ಲಿರುವ ಕೆ.ಕವಿತಾ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

R Ashwin
ಪ್ರಮುಖ ಸುದ್ದಿ23 mins ago

R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

Children Mobile Addiction
ಆರೋಗ್ಯ27 mins ago

Children Mobile Addiction: ನಮ್ಮ ಮಕ್ಕಳು ಎಷ್ಟು ಹೊತ್ತು ಮೊಬೈಲ್‌ ನೋಡಬಹುದು?

Road Accident
ಕರ್ನಾಟಕ31 mins ago

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Assembly Session Job reservation for Kannadigas in private sectors Cabinet meeting approves bill
ಕರ್ನಾಟಕ38 mins ago

Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Dog Ethnicwear
ಫ್ಯಾಷನ್1 hour ago

Dog Ethnicwear: ನಾಯಿಗಳಿಗೂ ಬಂತು ಎಥ್ನಿಕ್‌ ವೇರ್ಸ್! ಎಷ್ಟು ಮುದ್ದಾಗಿ ಕಾಣಿಸುತ್ತಿವೆ!

SIM Cards
ಗ್ಯಾಜೆಟ್ಸ್1 hour ago

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

Assembly Session
ಕರ್ನಾಟಕ1 hour ago

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Ananth Ambani Fashion
ಫ್ಯಾಷನ್2 hours ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌