Budget 2024: ಕೇಂದ್ರ ಬಜೆಟ್‌ನಲ್ಲಿ ಅನ್ಯಾಯ; ದೆಹಲಿಯಲ್ಲಿ ಫೆ.7ಕ್ಕೆ ರಾಜ್ಯ ಸರ್ಕಾರದ ಪ್ರತಿಭಟನೆ ಎಂದ ಡಿಕೆಶಿ! - Vistara News

ರಾಜಕೀಯ

Budget 2024: ಕೇಂದ್ರ ಬಜೆಟ್‌ನಲ್ಲಿ ಅನ್ಯಾಯ; ದೆಹಲಿಯಲ್ಲಿ ಫೆ.7ಕ್ಕೆ ರಾಜ್ಯ ಸರ್ಕಾರದ ಪ್ರತಿಭಟನೆ ಎಂದ ಡಿಕೆಶಿ!

Budget 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

DK Shivakumar attack on central NDA Government
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ಕೇಂದ್ರ ಬಜೆಟ್‌ನಲ್ಲಿ (Budget 2024) ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರವು ‌ಫೆ. 7 ರಂದು ನವ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಪ್ರತಿಭಟನೆ ಸ್ಥಳಾವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು. ‌

ಇದನ್ನೂ ಓದಿ: 40 per cent commission: ಸಿದ್ದರಾಮಯ್ಯ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯುತ್ತಿದೆ: ಬಿ.ವೈ. ವಿಜಯೇಂದ್ರ

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು, ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ರೂಪಾಯಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ರೂಪಾಯಿ ಅನುದಾನ ಸಿಕ್ಕಿತ್ತು. ಆದರೆ, 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ರೂ. ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ಪಾಲು ನ್ಯಾಯಯುತವಾಗಿ ಸಿಕ್ಕಿಲ್ಲ

ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ

2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ

14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ನಮಗೆ ಮಲತಾಯಿ ಧೋರಣೆ

ನೀರಾವರಿ ಯೋಜನೆಯಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ 5,200 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದರು. ಅದನ್ನು ನೀಡಿಲ್ಲ. ಇನ್ನು ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರು. ನಾನು ಹಲವು ಬಾರಿ ಪ್ರಧಾನಿ, ಜಲಶಕ್ತಿ ಸಚಿವರು, ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದೀರಿ. ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದಾಗಿ ನಮಗೆ ನಿರಾಸೆಯಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ನಯಾಪೈಸೆ ಹಣ ಬಂದಿಲ್ಲ

ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ನಮಗೆ ನ್ಯಾಯಯುತ ಪಾಲನ್ನು ನೀಡಿ

ನರೇಗಾ ಯೋಜನೆ ಪ್ರಕಾರ ಬರ ಪೀಡಿತ ಪ್ರದೇಶಗಳಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ಕಾನೂನಿನಲ್ಲಿ ಇದೆ. ಯಾವುದೇ ಯೋಜನೆ ತೆಗೆದುಕೊಂಡರೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ರಾಜ್ಯದ ಪಾಲಿನ ಅನುದಾನ ಮಾತ್ರ ಹೆಚ್ಚಳವಾಗಿಲ್ಲ

ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ, ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ 62 ಸಾವಿರ ಕೋಟಿ ನಷ್ಟವಾಗಿದೆ. ಇದನ್ನು ಹೇಗೆ ಅರಗಿಸಿಕೊಳ್ಳುವುದು? ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಡಬಲ್ ಆಗಿದ್ದರೂ ರಾಜ್ಯದ ಪಾಲಿನ ಅನುದಾನ ಮಾತ್ರ ಹೆಚ್ಚಳವಾಗಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ವಿರೋಧ ಪಕ್ಷದ ಸಂಸದರಿಗೂ ಆಹ್ವಾನ

ಈ ಸಮಯದಲ್ಲಿ ನಾವು ಅನಿವಾರ್ಯವಾಗಿ ಹೋರಾಟ ಮಾಡಬೇಕಿದೆ. ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ 136+2 ಒಟ್ಟು 138 ಶಾಸಕರು, ಎಲ್ಲ ಪರಿಷತ್ ಸದಸ್ಯರು ಫೆ.6ರಂದು ದೆಹಲಿಗೆ ತಲುಪಿ, ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ ವ್ಯಕ್ತಪಡಿಸುತ್ತೇವೆ. ನಮ್ಮ ಧ್ವನಿಯನ್ನು ದೆಹಲಿ ಸರ್ಕಾರಕ್ಕೆ ಮುಟ್ಟಿಸಲು ಮುಂದಾಗಿದ್ದೇವೆ. ಫೆ.7ರಂದು ಬೆಳಗ್ಗೆ 10 ಗಂಟೆಗೆ ನಮಗೆ ಅನುಮತಿ ನೀಡುವ ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತೇವೆ. ಈ ಪ್ರತಿಭಟನೆಗೆ ರಾಜ್ಯದ ಎಲ್ಲಾ ಸಂಸದರಿಗೆ ಆಹ್ವಾನ ನೀಡಲಾಗುವುದು. ಎಲ್ಲರೂ ರಾಜ್ಯದ ಹಿತ ಕಾಯಲು ಪಕ್ಷಾತೀತವಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಎಲ್ಲರೂ ಹೋರಾಟದಲ್ಲಿ ಭಾಗಿಯಾಗಬಹುದು

ಈ ಹೋರಾಟಕ್ಕೆ ದೇವೇಗೌಡರಿಗೆ ಆಹ್ವಾನ ನೀಡುತ್ತೀರಾ ಎಂದು ಕೇಳಿದಾಗ, “ಕರ್ನಾಟಕ ರಾಜ್ಯದ ಹಿತ ಕಾಯುವ ಬಗ್ಗೆ ಭಕ್ತಿ, ಭಾವನೆ ಯಾರಿಗೆಲ್ಲ ಇದೆಯೋ ಅವರೆಲ್ಲರೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ನಾವು ಈ ಹೋರಾಟವನ್ನು ಅಕಾಲದಲ್ಲಿ ಅಲ್ಲ, ಸಕಾಲದಲ್ಲಿ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಹಿತಕ್ಕಾಗಿ ಅವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕು. ಇದರ ಬಗ್ಗೆ ಜನರಿಗೆ ತಿಳಿಸಬೇಕು. ಪ್ರತಿ ಮತದಾರರಿಗೂ ನ್ಯಾಯ ಒದಗಿಸಬೇಕು. ಹೀಗಾಗಿ ಈ ಹೋರಾಟ ಮಾಡಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

100 ರೂಪಾಯಿಯಲ್ಲಿ 12-13 ರೂ. ಮಾತ್ರ ವಾಪಸ್

ತೆರಿಗೆ ಪಾವತಿಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದ್ದರೂ ಅನ್ಯಾಯವಾಗುತ್ತಿರುವುದೇಕೆ ಎಂದು ಕೇಳಿದಾಗ, “ಜಿಎಸ್ಟಿ ಹಾಗೂ ವಿವಿಧ ತೆರಿಗೆ ರೂಪದಲ್ಲಿ ನಮ್ಮ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಈ ವರ್ಷ 4 ಲಕ್ಷ ಕೋಟಿ ಹಣ ಸಂಗ್ರಹವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ನಮಗೆ ಕೇವಲ 50-53 ಸಾವಿರ ಕೋಟಿ ಮಾತ್ರ ವಾಪಸ್ ನೀಡಲಾಗುತ್ತಿದೆ. ಅಂದರೆ ಪ್ರತಿ ನೂರು ರೂಪಾಯಿಯ ತೆರಿಗೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದರೆ ಅದರಲ್ಲಿ 12-13 ರೂಪಾಯಿ ಮಾತ್ರ ನಮ್ಮ ರಾಜ್ಯಕ್ಕೆ ವಾಪಸ್ ನೀಡಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಾಗಿಲ್ಲ” ಎಂದು ಡಿ.ಕೆ. ಶಿವಕುಮಾರ್‌ ವಿವರಿಸಿದರು.

ಬಜೆಟ್‌ನಲ್ಲಿ ಬೇರೆ ರಾಜ್ಯಗಳಿಗೆ ನೀಡಿರುವ ಅನುದಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಕರ್ನಾಟಕ ರಾಜ್ಯಕ್ಕೆ ಭಾರಿ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಬರಬೇಕಾದ ಪಾಲಿನ ಅನುದಾನ ಸಿಕ್ಕಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪಕ್ಷದ ಸಭೆ ವಿಚಾರವಾಗಿ ಕೇಳಿದಾಗ, “ಸಂಸತ್ ಚುನಾವಣೆ ಅಭ್ಯರ್ಥಿಗಳನ್ನು ಅಂತಿಮ ಮಾಡಬೇಕು, ನಾವು ಎಲ್ಲರ ಅಭಿಪ್ರಾಯ ಪಡೆದಿದ್ದೇವೆ. ವೀಕ್ಷಕರಿಂದ ಅಭಿಪ್ರಾಯ ಪಡೆದಿದ್ದೇವೆ. ಕಾರ್ಯಕರ್ತರಿಗೂ ಸೂಕ್ತ ನಿರ್ದೇಶನ ನೀಡಿದ್ದೇವೆ” ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.‌

ಇದನ್ನೂ ಓದಿ: Magadi HC Balakrishna: ಗ್ಯಾರಂಟಿ ವಾಪಸ್;‌ ಕಾಂಗ್ರೆಸ್‌ ಮಾನ್ಯತೆ ರದ್ದುಗೊಳಿಸಲು ಚು. ಆಯೋಗಕ್ಕೆ JDS ದೂರು

ನಾವು ತಪ್ಪು ಮಾಡಿದ್ದರೆ, ಡಬಲ್ ಎಂಜಿನ್ ಸರ್ಕಾರ ಸರಿಪಡಿಸಲಿಲ್ಲ ಯಾಕೆ?

14 ಮತ್ತು 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆಯಲ್ಲಿ ಕುಸಿತಕ್ಕೆ ಆಗಿನ ಕಾಂಗ್ರೆಸ್ ಸರ್ಕಾರ ಸರಿಯಾಗಿ ವಿಚಾರ ಮಂಡನೆ ಮಾಡಿಲ್ಲ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ನಮ್ಮಿಂದ ತಪ್ಪಾಗಿದ್ದರೆ ಅವರು ಏನು ಮಾಡುತ್ತಿದ್ದರು? ನಮ್ಮ ತಪ್ಪನ್ನು ಸರಿಪಡಿಸಬಹುದಾಗಿತ್ತಲ್ಲವೇ? ಅವರದ್ದು ಡಬಲ್ ಎಂಜಿನ್ ಸರ್ಕಾರ ಇತ್ತಲ್ಲವೇ. ರಾಜ್ಯಕ್ಕೆ ಬರಬೇಕಾದ ಅನುದಾನ ತರುವುದು ಡಬಲ್ ಎಂಜಿನ್ ಸರ್ಕಾರದ ಜವಾಬ್ದಾರಿ ಆಗಿರಲಿಲ್ಲವೇ? ಆ ಸರ್ಕಾರ ಜನರ ಹಿತಕ್ಕೆ ವಿರುದ್ಧವಾಗಿ ಕೆಲಸ ಮಾಡಿತ್ತು. ನಾವು ಸೂಕ್ತ ದಾಖಲೆಗಳನ್ನು ಸಲ್ಲಿಸಿದ್ದು, ಈಗಲಾದರೂ ಕೇಂದ್ರ ಬಿಜೆಪಿ ಸರ್ಕಾರ ಸರಿಪಡಿಸಲಿ” ಎಂದು ಡಿ.ಕೆ. ಶಿವಕುಮಾರ್ ಸವಾಲೆಸೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi : 2019ರಲ್ಲಿ ಬಿಹಾರದ ಒಂದು ಕ್ಷೇತ್ರದಲ್ಲಿ ಸೋತಿದ್ದೆವು; ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದ ಮೋದಿ

Narendra Modi: ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

VISTARANEWS.COM


on

Narendra modi
Koo

ಬೆಂಗಳೂರು: ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ 2019ರ ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಬಿಹಾರದಲ್ಲಿ ಒಂದು ಸ್ಥಾನ ಕಳೆದುಕೊಂಡಿತ್ತು. ಈ ಬಾರಿ ಈ ಬಾರಿ ನಾವು ಒಂದನ್ನೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi ) ಹೇಳಿದ್ದಾರೆ. ಎನ್​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಎಲ್ಲ ಸೀಟ್​ಗಳನ್ನು ಗೆಲ್ಲುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷ ಜೆಡಿಯು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ರೋಡ್ ಶೋ (Modi Patna Road Show) ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆಡಳಿತಾರೂಢ ಮೈತ್ರಿಕೂಟವು 2019 ರ ಲೋಕಸಭಾ ಚುನಾವಣೆಗಿಂತ ರಾಜ್ಯದಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಕಳೆದ ಬಾರಿ ಕಳೆದುಕೊಂಡ ಏಕೈಕ ಕ್ಷೇತ್ರವನ್ನು ಸಹ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

ರಾಜ್ಯ ಮತ್ತು ಅದರ ಜನರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದೇನೆ. ನಾನು ಹಲವಾರು ಕೆಲಸಕ್ಕಾಗಿ ಆಗಾಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದೇನೆ. ನನಗೆ ಇಲ್ಲಿ ಬಹಳ ಹಳೆಯ ಸಂಪರ್ಕಗಳಿವೆ ಎಂಬುದಾಗಿ ಅವರು ಹೇಳಿಕೊಂಡರು.

ಮುಂದುವರಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಪೂರ್ವ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ಭಾರಿ ಪ್ರಮಾಣದಲ್ಲಿ ವಿಸ್ತರಿಸಲಿದೆ. ಇದು ಎನ್​ಡಿಎಯ 400 ಸ್ಥಾನಗಳ ಗಡಿ ಸುಲಭವಾಗಿ ತಲುಪಲು ನೆರವಾಗುತ್ತದೆ ಎಂದು ಹೇಳಿದರು. ಪೂರ್ವ ಭಾರತದಲ್ಲಿ ಬಿಜೆಪಿಯ ಏಳಿಗೆಯ ಬಗ್ಗೆ ಕೇಳಿದಾಗ, ವಲಯವನ್ನು ಬೆಳವಣಿಗೆಯ ಎಂಜಿನ್ ಆಗಿ ಅಭಿವೃದ್ಧಿಪಡಿಸಲು ವಿಶೇಷ ಗಮನ ಹರಿಸುವ ಬಗ್ಗೆ ಪ್ರಧಾನಿ ಮಾತನಾಡಿದರು.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ನೀವು ನನ್ನ 2013 ರ ಭಾಷಣವನ್ನು ಆಲಿಸಿದ್ದರೆ ನೆನಪಿರಬಹುದು. ನಾನು ಪ್ರಧಾನಿ ಆಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಲು ಬಯಸಿದ ವೇಳೆ ಪೂರ್ವ ಭಾರತವನ್ನು ಬೆಳವಣಿಗೆಯ ಎಂಜಿನ್ ಆಗಿ ಪರಿವರ್ತಿಸಿದ್ದೆನೆ ಎಂದು ನಾನು ಹೇಳಿದ್ದೆ” ಎಂದು ಅವರು ಪಾಟ್ನಾದಲ್ಲಿ ರೋಡ್ ಶೋ ನಡೆಸುವಾಗ ಹೇಳಿದರು.

ನಾವು ಮೂಲಸೌಕರ್ಯ, ಆರೋಗ್ಯ ಇತ್ಯಾದಿಗಳ ಮೇಲೆ ಗಮನ ಹರಿಸಿದ್ದೇವೆ. ಈ ಸಮೀಕ್ಷೆಯನ್ನು ಪರಿಗಣಿಸಿದರೆ, ಪೂರ್ವ ಭಾರತದ ಚುನಾವಣಾ ಫಲಿತಾಂಶಗಳು ಅದನ್ನು ಪ್ರತಿಬಿಂಬಿಸಲಿವೆ. ಜನರು ಆಶ್ಚರ್ಯಚಕಿತರಾಗಲಿದ್ದಾರೆ. ತೆಲಂಗಾಣ, ಒಡಿಶಾ, ಬಂಗಾಳ, ಬಿಹಾರ, ಜಾರ್ಖಂಡ್, ಅಸ್ಸಾಂನಲ್ಲಿ ಬಿಜೆಪಿ ಹೊಸ ಹುಟ್ಟುಪಡೆಯಲಿಎ ಎಂದು ಹೇಳಿದರು.

Continue Reading

ಕ್ರೈಂ

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Prajwal Revanna Case: ಈಗಾಗಲೇ ಕಿಡ್ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರು ತಾವು ಕಿಡ್ನ್ಯಾಪ್‌ ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದಾರೆ. ಈಗ ಸಂತ್ರಸ್ತೆಯ ವಿಡಿಯೊ ವೈರಲ್‌ ಆಗಿದ್ದು, ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರನ್ನು ವಿನಾಕಾರಣ ಟಾರ್ಗೆಟ್‌ ಮಾಡಿದ್ದು, ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಲ್ಲದೆ, ಎಸ್‌ಐಟಿ ತನಿಖಾ ಪ್ರಕ್ರಿಯೆಯೇ ಅನುಮಾನ ಮೂಡಿಸುವಂತಿದೆ ಎಂದು ವಾದ ಮಂಡಿಸಿದ್ದರು. ಈಗ ಈ ವಿಡಿಯೊವನ್ನೇ ಆಧಾರವಾಗಿಟ್ಟುಕೊಂಡು ಕೋರ್ಟ್‌ ಮುಂದೆ ಎಸ್‌ಐಟಿ ಹಾಗೂ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಹೆಚ್ಚಿದೆ.

VISTARANEWS.COM


on

Prajwal Revanna Case I was never kidnapped and son has made a false complaint Video of victim goes viral
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ ಎನ್ನಲಾದ ಮೈಸೂರಿನ ಕೆ.ಆರ್.‌ ನಗರದ ಮಹಿಳೆಯೊಬ್ಬರನ್ನು ಕಿಡ್ನ್ಯಾಪ್‌ ಮಾಡಿದ್ದಾರೆಂಬ ದೂರಿನ ಮೇಲೆ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಬಂಧಿತರಾಗಿದ್ದಾರೆ. ಅವರು ಜಾಮೀನು ಸಿಗದೆ ಪರದಾಟ ನಡೆಸುತ್ತಿರುವ ಈ ಹೊತ್ತಿನಲ್ಲಿ ಅಪಹರಣ ನಡೆದಿದೆ ಎನ್ನಲಾದ ಸಂತ್ರಸ್ತ ಮಹಿಳೆಯ ವಿಡಿಯೊ ವೈರಲ್‌ ಆಗಿದೆ. ಆಕೆ, ನನ್ನನ್ನು ಯಾರು ಅಪಹರಣ ಮಾಡಿಲ್ಲ. ನನ್ನ ಮಗ ತಪ್ಪು ತಿಳಿದು ದೂರು ಕೊಟ್ಟಿದ್ದಾನೆ ಎಂಬ ಹೇಳಿಕೆಯು ವಿಡಿಯೊದಲ್ಲಿದೆ.

ಈಗಾಗಲೇ ಕಿಡ್ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌.ಡಿ. ರೇವಣ್ಣ ಅವರು ತಾವು ಕಿಡ್ನ್ಯಾಪ್‌ ಮಾಡಿಲ್ಲ ಎಂದೇ ಹೇಳಿಕೊಂಡು ಬಂದಿದ್ದಾರೆ. ಈಗ ಸಂತ್ರಸ್ತೆಯ ವಿಡಿಯೊ ವೈರಲ್‌ ಆಗಿದ್ದು, ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರನ್ನು ವಿನಾಕಾರಣ ಟಾರ್ಗೆಟ್‌ ಮಾಡಿದ್ದು, ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಲ್ಲದೆ, ಎಸ್‌ಐಟಿ ತನಿಖಾ ಪ್ರಕ್ರಿಯೆಯೇ ಅನುಮಾನ ಮೂಡಿಸುವಂತಿದೆ ಎಂದು ವಾದ ಮಂಡಿಸಿದ್ದರು. ಈಗ ಈ ವಿಡಿಯೊವನ್ನೇ ಆಧಾರವಾಗಿಟ್ಟುಕೊಂಡು ಕೋರ್ಟ್‌ ಮುಂದೆ ಎಸ್‌ಐಟಿ ಹಾಗೂ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಹೆಚ್ಚಿದೆ.

ಏನಿದು ಕೇಸ್‌?

ಪ್ರಜ್ವಲ್‌ ರೇವಣ್ಣ ಅವರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಮಹಿಳೆ ಮೈಸೂರಿನ ಕೆ.ಆರ್.‌ ನಗರ ನಿವಾಸಿಯಾಗಿದ್ದಾರೆ. ಆದರೆ, ಇವರನ್ನು ಸಾಕ್ಷಿ ನಾಶಕ್ಕಾಗಿ ಎಚ್‌.ಡಿ. ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬಣ್ಣ ಅಪಹರಣ ಮಾಡಿದ್ದಾರೆ ಎಂದು ಕೆ.ಆರ್. ನಗರದಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತ್ರಸ್ತೆಯ ವಿಡಿಯೊ ರಿಲೀಸ್‌ ಆಗಿದೆ. ಇದರಲ್ಲಿ ಮಹಿಳೆಯು ಅಪಹರಣ ಪ್ರಕರಣಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ ಎಂದ ಮಹಿಳೆ!

“ನನ್ನನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ, ನಾನು ಎಲ್ಲಿಯೂ ಹೋಗಿಲ್ಲ. ನನ್ನ ಸಂಬಂಧಿಕರ ಮನೆಯಲ್ಲಿದ್ದೇನೆ. ರೇವಣ್ಣ ಆಗಲಿ, ಪ್ರಜ್ವಲ್ ರೇವಣ್ಣ ಆಗಲಿ, ಭವಾನಿ ಅಕ್ಕಾ ಆಗಲಿ, ಸತೀಶ್ ಬಾಬಾಣ್ಣ ಆಗಲಿ ಯಾರಿಂದಲೂ ತೊಂದರೆ ಆಗಿಲ್ಲ. ನನ್ನನ್ನು ಚೆನ್ನಾಗಿ ನೋಡಿಕೊಂಡು ಕಳಿಸಿಕೊಟ್ಟಿದ್ದಾರೆ. ನಾನು ಆರಾಮಾಗಿದ್ದೇನೆ. ಸಂಬಂಧಿಕರ ಮನೆಯಲ್ಲಿ ಟಿವಿ ನೋಡುವಾಗ ವಿಚಾರ ಗೊತ್ತಾಯಿತು. ಮೊಬೈಲ್‌ನಲ್ಲಿ ಬಂದ ವಿಡಿಯೊಗೂ ನನಗೂ ಯಾವುದೇ ಸಂಬಂಧ ಇಲ್ಲ. ಮನೆಯ ಬಳಿ ಯಾರು ಗಾಬರಿ ಆಗೋದು ಬೇಡ. ನಾನು ಸುರಕ್ಷಿವಾಗಿದ್ದೇನೆ. ಎಲ್ಲರೂ ಆರಾಮಾಗಿರಿ. ನಾಲ್ಕು ದಿನ ಸಂಬಂಧಿಕರ ಮನೆಗೆ ಹೋಗಿದ್ದೆ. ವಾಪಸ್‌ ಬರುತ್ತೇನೆ. ಎಲ್ಲಿ ಯಾರಿಗೆ ಮಾಹಿತಿ ಕೊಡಬೇಕೋ ಕೊಡುತ್ತೇನೆ. ಯಾರು ಮನೆ ಹತ್ತಿರ ಹೋಗಬೇಡಿ, ಪೊಲೀಸ್‌ನವರು ಟಾರ್ಚರ್ ಕೊಡಬೇಡಿ. ಎಲ್ಲರೂ ಗಾಬರಿಯಾಗುತ್ತಾರೆ. ನಾವು ಕೂಲಿ ಮಾಡಿಕೊಂಡು ಇರುವವರು ಹೊಟ್ಟೆ ಮೇಲೆ‌ ಹೊಡಿಯಬೇಡಿ. ಪೊಲೀಸಿನವರು ಮನೆ ಬಳಿ ಬಂದರೆ ಅಕ್ಕಪಕ್ಕದವರು ಏನೆಂದು ಕೊಳ್ಳುವುದಿಲ್ಲ. ಏನಾದರೂ ತೊಂದರೆಯಾದರೆ ನಾನೇ ಬಂದು ಹೇಳಿಕೆ ಕೊಡ್ತೇನೆ. ನನಗಾಗಲಿ, ಕುಟುಂಬದವರಿಗೆ ಆಗಲಿ, ಗಂಡನಿಗಾಗಲೀ ಏನಾದರೂ ತೊಂದರೆಯಾದರೆ ನೀವೇ ಜವಾಬ್ದಾರರು. ನನ್ನ ಮಗ ಗೊತ್ತಿಲ್ಲದೆ ಹೀಗೆ ಮಾಡಿಬಿಟ್ಟಿದ್ದಾನೆ. ನನ್ನನ್ನು ಯಾರೂ ಅಪಹರಣ ಮಾಡಿಲ್ಲ. ನಾನಾಗಿಯೇ ಸಂಬಂಧಿಕರ ಮನೆಗೆ ಬಂದಿದ್ದೇನೆ” ಎಂದು ಸಂತ್ರಸ್ತೆ ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಈ ವಿಡಿಯೊ ಮಾಡಿದ್ದು ಯಾರು?

ಸದ್ಯ ಎಸ್‌ಐಟಿ ವಶದಲ್ಲಿರುವ ಸಂತ್ರಸ್ತ ಮಹಿಳೆಯ ಈ ವಿಡಿಯೊವನ್ನು ಮಾಡಿದ್ದು ಯಾರು? ರಿಲೀಸ್ ಮಾಡಿದ್ದು ಯಾರು? ಎಂಬ ಪ್ರಶ್ನೆ ಈಗ ಎಸ್‌ಐಟಿಗೆ ತಲೆನೋವಾಗಿ ಕಾಡುತ್ತಿದೆ. ಹಾಗಾದರೆ, ತಾವು ವಶಕ್ಕೆ ಪಡೆಯುವ ಮೊದಲೇ ಈ ವಿಡಿಯೊವನ್ನು ಮಾಡಲಾಗಿತ್ತಾ? ಆದರೆ, ಮಹಿಳೆಯನ್ನ ಎಲ್ಲಿ ಇರಿಸಿ ಈ ವಿಡಿಯೊ ಮಾಡಲಾಗಿದೆ? ಈ ವಿಡಿಯೊವನ್ನು ಯಾವ? ಯಾರ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಲಾಗಿದೆ. ಈಕೆಯೇ ಆ್ಯಂಡ್ರಾಯ್ಡ್ ಮೊಬೈಲ್ ಅನ್ನು ಬಳಕೆ ಮಾಡುತ್ತಿದ್ದರೇ ಎಂಬಿತ್ಯಾದಿ ಪ್ರಶ್ನೆಗಳೊಂದಿಗೆ ತನಿಖೆ ನಡೆಸಬೇಕಿದೆ.

Continue Reading

ರಾಜಕೀಯ

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

VISTARANEWS.COM


on

Prajwal Revanna Case Naveen Gowda post against MLA A Manju
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ ಈ ಸಂಬಂಧ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದಾನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದಾನೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ನಲ್ಲಿ ನವೀನ್‌ ಗೌಡ ಹಾಕಿರುವ ಪೋಸ್ಟ್‌ನಲ್ಲಿ ಜೆಡಿಎಸ್‌ ಶಾಸಕ ಎ. ಮಂಜು ವಿರುದ್ಧ ನೇರವಾಗಿ ಆರೋಪ ಮಾಡಿದ್ದಾನೆ. ಆದರೆ, ನವೀನ್‌ ಗೌಡ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಎಸ್‌ಐಟಿಯವರು ಶೋಧ ಕಾರ್ಯ ನಡೆಸುತ್ತಿರುವುದಾಗಿ ಹೇಳಿಕೊಂಡಿದೆ. ಈ ಮಧ್ಯೆ ನವೀನ್‌ ಗೌಡ ಮಾತ್ರ ರಾಜಾರೋಷವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳತೊಡಗಿದ್ದಾನೆ.

ನವೀನ್‌ ಗೌಡನ ಪೋಸ್ಟ್‌ನಲ್ಲೇನಿದೆ?

ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ಎ. ಮಂಜುಗೂ ಸಂಕಷ್ಟ?

ಈಗಾಗಲೇ ಎಸ್‌ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಮಧ್ಯೆ ಪೆನ್‌ಡ್ರೈವ್‌ ಅನ್ನು ಹಾಸನ ಜಿಲ್ಲಾದ್ಯಂತ ಹಂಚಿಕೆ ಮಾಡಿರುವ ಆರೋಪವನ್ನು ಹೊತ್ತಿರುವ ನವೀನ್‌ ಗೌಡ ಮಾಡಿರುವ ಪೋಸ್ಟ್‌ ಈಗ ಚರ್ಚೆಗೆ ಎಡೆಮಾಡಿ ಕೊಟ್ಟಿದೆ. ಈತನ ಪೋಸ್ಟ್‌ ಅನ್ನು ಆಧಾರವಾಗಿಟ್ಟುಕೊಂಡು ಎಸ್‌ಐಟಿಯವರು ಮುಂದಿನ ಕ್ರಮವನ್ನು ಕೈಗೊಂಡು ಮಂಜು ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರಾ? ಇಲ್ಲವೇ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಿದ್ದಾರಾ? ಅಥವಾ ಈ ಪೋಸ್ಟ್‌ ಅನ್ನು ನವೀನ್‌ ಗೌಡ ಯಾವ ಐಪಿ ಅಡ್ರೆಸ್‌ನಿಂದ ಮಾಡಿದ್ದಾನೆ ಎಂಬುದನ್ನು ತಿಳಿದುಕೊಂಡು ಶೋಧ ಕಾರ್ಯ ನಡೆಸಲಿದ್ದಾರೋ? ಎಂಬುದನ್ನು ನೋಡಬೇಕಿದೆ.

ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

ಇದು ಸೂಕ್ಷ್ಮ ವಿಷಯವಾಗಿದೆ. ಮಾತನಾಡುವಾಗ ಈ ಬಗ್ಗೆ ಎಚ್ಚರಿಕೆ ಇರಬೇಕು. ಬಾಯಿಗೆ ಬಂದಂತೆ ಹೇಳಿಕೆ ನೀಡಿದರೆ ಕಾನೂನು ಪ್ರಕಾರ ನಿಮ್ಮನ್ನೂ ಕರೆಸಿ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರು ಯಾರೋ, ಏನೇನನ್ನೋ ಹೇಳುತ್ತಾರೆ. ಪ್ರತಿಯೊಂದು ಸಾರ್ವಜನಿಕ ಹೇಳಿಕೆಗಳಿಗೆ ನಾವು ಉತ್ತರ ಕೊಡುವುದಕ್ಕೆ ಆಗಲ್ಲ. ಇದು ಗಂಭೀರವಾದ ಪ್ರಕರಣ ಆಗಿರುವುದರಿಂದ ಇದರ ಇನ್ವೆಸ್ಟಿಗೇಶನ್ ಆಗುವವರೆಗೂ ಕೂಡ ಯಾವುದೇ ಮಾಹಿತಿಯನ್ನು ಸಾರ್ವಜನಿಕ ವಲಯಕ್ಕೆ ತಿಳಿಸಲು ಆಗುವುದಿಲ್ಲ. ಈ ಕೇಸ್‌ ಬಗ್ಗೆ ಸಾರ್ವಜನಿಕರಾಗಲೀ ಅಥವಾ ರಾಜಕೀಯ ನಾಯಕರಗಾಲೀ, ಯಾವುದೇ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕು. ಈ ವಿಚಾರದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವವರ ಮೇಲೆಯೂ ಕ್ರಮ ಆಗುತ್ತದೆ. ಯಾವುದೇ ರೀತಿಯ ಹೇಳಿಕೆ ಕೊಟ್ಟರೆ 41A ಪ್ರಕಾರ ಅವರನ್ನು ಕೂಡ ವಿಚಾರಣೆಗೆ ಕರೆಯಬೇಕಾಗುತ್ತದೆ. ಎಚ್.ಡಿ. ಕುಮಾರಸ್ವಾಮಿ ಪದೇ ಪದೆ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ವಿಷಯವನ್ನು ಅವರು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಪ್ರಜ್ವಲ್‌ ಬಂಧನಕ್ಕೆ ಎಸ್‌ಐಟಿ ಟೀಂ ವಿದೇಶಕ್ಕೆ ಹೋಗಲ್ಲ

ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುವ ಅವಕಾಶವಿಲ್ಲ. ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೇವೆ. ಇಂಟರ್ ಪೋಲ್‌ನವರು ಅವರಿಗೆ ಇನ್ಫಾರ್ಮೇಷನ್ ಕೊಡುತ್ತಾರೆ. ಯಾವ ದೇಶದಲ್ಲಿ ಇದ್ದಾರೆ ಎಂಬುದನ್ನು ಗುರುತಿಸಿ ಸಿಬಿಐಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಿಬಿಐನವರು ನಮಗೆ ಮಾಹಿತಿಯನ್ನು ನೀಡುತ್ತಾರೆ. ಆಮೇಲೆ ನಮ್ಮ ಏಜನ್ಸಿಗಳಿಗೂ ಈ ಬಗ್ಗೆ ಗೊತ್ತಾಗುತ್ತದೆ ಎಂದು ಡಾ. ಜಿ. ಪರಮೇಶ್ವರ್‌ ವಿವರಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ನಡೆಸಲಾಗುತ್ತದೆ. ಯಾವುದೇ ವಿಚಾರಗಳನ್ನು ಸಾರ್ವಜನಿಕ ವಲಯದಲ್ಲಿ ಹೇಳುವುದಕ್ಕೆ ಆಗುವುದಿಲ್ಲ. ಸದ್ಯ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆಯನ್ನು ನಡೆಸುತ್ತಿದೆ. ತನಿಖೆ ನಡೆಯುತ್ತಿರುವಾಗ ನಾನು ಹೇಳಿಕೆ ಕೊಡುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಬಿಜೆಪಿಗೆ ಸೋಲಿನ ಭಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನ ಬರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಾ. ಜಿ. ಪರಮೇಶ್ವರ್‌, ಬಿಜೆಪಿ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ಅದಕ್ಕೆ ಪದೇ ಪದೆ ಈ ರೀತಿ ಹೇಳುತ್ತಿದ್ದಾರೆ. ಫಲಿತಾಂಶ ಬಂದ ಮೇಲೆ ನೋಡೋಣ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಭವಾನಿ ರೇವಣ್ಣಗೆ 2ನೇ ನೋಟಿಸ್‌

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್‌ ಜಾರಿ ಮಾಡಿದೆ. ಮೊದಲ ನೋಟಿಸ್ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ಸಿದ್ಧವಾಗಿದೆ. ಆದರೆ, ಭವಾನಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ವಕೀಲ ದೇವರಾಜೇಗೌಡ ಪ್ಲ್ಯಾನ್‌ ಏನಿತ್ತು? ದೆಹಲಿಗೆ ಹೊರಟಿದ್ದು ಏಕೆ?

Prajwal Revanna Case: ಬೆಂಗಳೂರಿನಲ್ಲಿ ಈಗಾಗಲೇ ಎರಡೆರಡು ಸುದ್ದಿಗೋಷ್ಠಿ ನಡೆಸಿದ್ದ ವಕೀಲ ದೇವರಾಜೇಗೌಡ, ಕೆಲವೊಂದು ಆಡಿಯೊ ತುಣುಕನ್ನು ಮಾತ್ರವೇ ಪ್ಲೇ ಮಾಡಿದ್ದರು. ಬಳಿಕ ಇದರ ಮುಂದುವರಿದ ಭಾಗವಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಇನ್ನಷ್ಟು ಆಡಿಯೊವನ್ನು ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಎಸ್‌ಐಟಿ ತನಿಖೆ ಬಗ್ಗೆ ನೇರವಾಗಿಯೇ ಅನುಮಾನವನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದರು. ಇದೇ ವೇಳೆ ದೇವರಾಜೇಗೌಡ, ತಾವು ಬೇರೆ ರಾಜ್ಯಗಳ ಕೆಲವು ದೇವಾಲಯಗಳಿಗೆ ಹೋಗಿ ಬರುವುದಾಗಿ ಹೇಳಿಕೆ ನೀಡಿದ್ದರು. ಆದರೆ, ಅವರ ಪ್ಲ್ಯಾನ್‌ ಬೇರೆಯೇ ಇತ್ತು.

VISTARANEWS.COM


on

Prajwal Revanna Case What was plan of advocate Devaraje Gowda Why did you leave for Delhi
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಹೊಂದಿಕೊಂಡಂತೆ ಹನಿ ಟ್ರ್ಯಾಪ್‌ ಕೇಸ್‌ನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಬಂಧಿಸಲಾಗಿದೆ. ಒಂದು ವೇಳೆ ದೇವರಾಜೇಗೌಡ ಅವರನ್ನು ಬಂಧಿಸದೇ ಇದ್ದಿದ್ದರೆ ಇನ್ನಷ್ಟು ಸ್ಫೋಟಕ ಮಾಹಿತಿಯನ್ನು ಹೊರಗೆ ತರುವವರಿದ್ದರು ಎಂಬ ಸಂಗತಿ ಗೊತ್ತಾಗಿದೆ. ಬಿಜೆಪಿ ದೆಹಲಿ ನಾಯಕರ ಜತೆಗೆ ಸುದ್ದಿಗೋಷ್ಠಿ ನಡೆಸಲು ತಯಾರಿ ನಡೆಸಿದ್ದರು.

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಹನಿ ಟ್ರ್ಯಾಪ್‌ ಕೇಸ್‌ನಲ್ಲಾದರೂ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆ ನಡೆಸಲಾಗಿದೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಈ ಸಾಕ್ಷಿಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಈಗ ಅವರನ್ನು ಎಸ್‌ಐಟಿ ಬಂಧಿಸಿದೆ.

ದೆಹಲಿ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಲು ನಡೆದಿತ್ತು ತಯಾರಿ!

ಬೆಂಗಳೂರಿನಲ್ಲಿ ಈಗಾಗಲೇ ಎರಡೆರಡು ಸುದ್ದಿಗೋಷ್ಠಿ ನಡೆಸಿದ್ದ ವಕೀಲ ದೇವರಾಜೇಗೌಡ, ಕೆಲವೊಂದು ಆಡಿಯೊ ತುಣುಕನ್ನು ಮಾತ್ರವೇ ಪ್ಲೇ ಮಾಡಿದ್ದರು. ಬಳಿಕ ಇದರ ಮುಂದುವರಿದ ಭಾಗವಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಇನ್ನಷ್ಟು ಆಡಿಯೊವನ್ನು ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಎಸ್‌ಐಟಿ ತನಿಖೆ ಬಗ್ಗೆ ನೇರವಾಗಿಯೇ ಅನುಮಾನವನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದರು. ಇದೇ ವೇಳೆ ದೇವರಾಜೇಗೌಡ, ತಾವು ಬೇರೆ ರಾಜ್ಯಗಳ ಕೆಲವು ದೇವಾಲಯಗಳಿಗೆ ಹೋಗಿ ಬರುವುದಾಗಿ ಹೇಳಿಕೆ ನೀಡಿದ್ದರು. ಆದರೆ, ಅವರ ಪ್ಲ್ಯಾನ್‌ ಬೇರೆಯೇ ಇತ್ತು.

ಪುಣೆ, ದೆಹಲಿಗೆ ಹೊರಟಿದ್ದ ದೇವರಾಜೇಗೌಡ

ತಾನು ಮಾಡಿದ ಸುದ್ದಿಗೋಷ್ಠಿಗಳು ರಾಷ್ಟ್ರ ಮಟ್ಟಕ್ಕೆ ಸುದ್ದಿಯಾಗಿದ್ದನ್ನು ಗಮನಿಸಿದ ದೇವರಾಜೇಗೌಡ, ಈ ವಿಷಯವನ್ನು ಬಿಜೆಪಿ ರಾಷ್ಟ್ರದ ನಾಯಕರ ಬಳಿ ತೆಗೆದುಕೊಂಡು ಹೋಗಬೇಕು ಮೊದಲು ಪುಣೆಗೆ ಹೊರಟರು. ಅಲ್ಲಿಂದ ನವ ದೆಹಲಿಗೆ ಹೋಗಿ ರಾಷ್ಟ್ರ ನಾಯಕರ ಜತೆಗೆ ಸುದ್ದಿಗೋಷ್ಠಿ ನಡೆಸಿ ಆಡಿಯೊ, ವಿಡಿಯೊವನ್ನು ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಡ್ಯಾಮೇಜ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಹೀಗೆ ಮಾಡುವ ಮೂಲಕ ಹೈಕಮಾಂಡ್‌ ವಿಶ್ವಾಸ ಪಡೆದು ತಾವು ಸಹ ರಾಜ್ಯದಲ್ಲಿ ಭವಿಷ್ಯದಲ್ಲಿ ಸ್ಥಾನಮಾನ ಪಡೆದುಕೊಳ್ಳುವ ಇರಾದೆಯನ್ನು ಹೊಂದಿದ್ದರು ಎನ್ನಲಾಗಿದೆ. ಆದರೆ, ಅವರ ಎಲ್ಲ ಪ್ಲ್ಯಾನ್‌ಗಳು ತಲೆಕೆಳಗಾಗಿವೆ. ಪೊಲೀಸರು ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಕಾರಿನಲ್ಲಿತ್ತಾ ಮಹತ್ವದ ದಾಖಲೆಗಳು?

ಸದ್ಯ ದೇವರಾಜೇಗೌಡ ಕಾರಿನಲ್ಲಿದ್ದ ಮೊಬೈಲ್‌ಗಳನ್ನು ಸೀಜ್‌ ಮಾಡಿದ್ದು, ಅದರಲ್ಲಿ ಸಾಕಷ್ಟು ಆಡಿಯೊಗಳಿರುವುದು ಕಂಡು ಬಂದಿದೆ. ಇದು ಪೆನ್ ಡ್ರೈವ್‌ಗೆ ಸಂಬಂಧಪಟ್ಟ ಆಡಿಯೊ ಎನ್ನಲಾಗಿದೆ‌. ಸದ್ಯ ಹಾಸನ ಪೊಲೀಸರು ದೇವರಾಜೇಗೌಡ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ.

Continue Reading
Advertisement
Lok Sabha Election
ದೇಶ31 mins ago

Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ; ʻಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿʼ ಎಂದ ಮೋದಿ

elephant attack charmadi ghat
ವೈರಲ್ ನ್ಯೂಸ್49 mins ago

Elephant Attack: ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ; ಬೆಚ್ಚಿಬಿದ್ದ ಡ್ರೈವರ್‌ನಿಂದ ಅಪಘಾತ!

karnataka weather forecast karnataka rains
ಮಳೆ2 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case
ಕರ್ನಾಟಕ8 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ8 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ9 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest9 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ10 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ10 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather forecast karnataka rains
ಮಳೆ2 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ14 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ14 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ14 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ18 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ19 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

ಟ್ರೆಂಡಿಂಗ್‌