ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ನಡುವೆ ಬೆಳಗಾವಿಗೆ ಆಗಮಿಸುತ್ತೇನೆ, ಎಂಇಎಸ್ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ ಎಂಬ ಉದ್ಧಟತನದ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್ (Chandrakant Patil) ಮುಖಕ್ಕೆ ಮಹಾರಾಷ್ಟ್ರದಲ್ಲೇ ಶನಿವಾರ ಮಸಿ ಬಳಿಯಲಾಗಿದೆ.
ಪುಣೆ ನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಹೊರಬರುವಾಗ ಭದ್ರತಾ ಸಿಬ್ಬಂದಿ ಇದ್ದರೂ ಲೆಕ್ಕಿಸದೆ ಚಂದ್ರಕಾಂತ ಪಾಟೀಲ್ ಮುಖಕ್ಕೆ ವ್ಯಕ್ತಿಯೊಬ್ಬ ಕಪ್ಪು ಮಸಿ ಎರಚಿದ್ದಾನೆ. ಈ ವೇಳೆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಜ್ಯೋತಿ ಬಾ ಫುಲೆ, ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಚಂದ್ರಕಾಂತ ಪಾಟೀಲ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿ, ಅವಹೇಳನಕಾರಿ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದವು. ಬೇಡಿಕೆಯನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಸಚಿವರ ಮುಖಕ್ಕೆ ಮಸಿ ಬಳಿಯಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ | ಟಿಪ್ಪು ವಿವಾದ | ದೇವರಿಗೆ ಮಾಡುವ ಆರತಿ ರದ್ದಾಗಲ್ಲ, ಹೆಸರು ಬದಲಾಗುತ್ತದೆ ಎಂದ ಸಚಿವೆ ಶಶಿಕಲಾ ಜೊಲ್ಲೆ