Site icon Vistara News

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

MLA Basanagouda Patil Yatnal and CM Siddaramaiah

ಬೆಳಗಾವಿ: ಹುಬ್ಬಳ್ಳಿ‌ಯಲ್ಲಿ ಸೋಮವಾರ ನಡೆದಿದ್ದ‌ ಮುಸ್ಲಿಂ ಸಮಾವೇಶದಲ್ಲಿ (Muslim conference) ಸಿಎಂ‌ ಸಿದ್ದರಾಮಯ್ಯ ‌(CM Siddaramaiah) ಆಡಿರುವ ಕೆಲವು ಮಾತುಗಳು ವಿವಾದಕ್ಕೆ ಕಾರಣವಾಗಿದ್ದ ಬೆನ್ನಲ್ಲೇ ಈಗ ಮಾಜಿ ಸಚಿವ, ‌ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ (MLA Basanagouda Patil Yatnal) ಬಾಂಬ್‌ ಒಂದನ್ನು ಸಿಡಿಸಿದ್ದಾರೆ. ಆ ಕಾರ್ಯಕ್ರಮದಲ್ಲಿ ಸಿಎಂ ಪಕ್ಕ ಐಸಿಸ್‌ ಸಂಘಟನೆ (ISIS Terror) ಜತೆ ಸಂಪರ್ಕ ಹೊಂದಿರುವ ವ್ಯಕ್ತಿ ಕುಳಿತಿದ್ದ. ಇನ್ನೊಂದು ವಾರದಲ್ಲಿ ಈ ಸಂಬಂಧ ದಾಖಲೆಯನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್‌ ಯತ್ನಾಳ್‌, ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮಾವೇಶದಲ್ಲಿ ಐಸಿಸ್‌ ಸಂಘಟನೆ ಸಂಪರ್ಕ ಇರುವವನು ಇದ್ದ. ಅವನು ಸಿಎಂ ಪಕ್ಕದಲ್ಲಿ ಕುಳಿತಿದ್ದ. ವೇದಿಕೆಯನ್ನು ಸಿಎಂ ಜತೆಗೆ ಹಂಚಿಕೊಂಡಿದ್ದ. ಆ ಬಗ್ಗೆ ಅವರಿಗೆ ಮಾಹಿತಿ ಇರಲಿಲ್ವಾ? ಎಲ್ಲ‌ ಮಾಹಿತಿ ಪಡೆದೇ
ನಾನು ಗಂಭೀರವಾಗಿಯೇ ಹೇಳುತ್ತಿದ್ದೇನೆ. ಹುಡುಗಾಟಿಕೆಗೆ ನಾನು ಈ ಬಗ್ಗೆ ಹೇಳಿಕೆ ನೀಡುತ್ತಿಲ್ಲ. ಬೇಕಾದರೆ ಮಾಹಿತಿ ತರಿಸಿಕೊಳ್ಳಲಿ ಎಂದು ಕಿಡಿಕಾರಿದರು.

ಐಸಿಸ್‌ ಸಂಪರ್ಕಿತನ ಜೊತೆಗೆ ಸಿಎಂ ಸಭೆ ಹಂಚಿಕೊಂಡರೆ ಹೇಗೆ? | Yatnal Slams CM Siddaramaiah | Vistara News

ಇದನ್ನೂ ಓದಿ: Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಪ್ರಧಾನ ಮಂತ್ರಿ ಕಾರ್ಯಕ್ರಮ ಇದ್ದರೆ ಯಾರು ಯಾರು ವೇದಿಕೆ ಮೇಲೆ ಇರಬೇಕು ಎಂದು ಮಾಹಿತಿ ಇರುತ್ತದೆ. ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಯಾರು ಇರುತ್ತಾರೆ ಎಂದು ಮಾಹಿತಿ ಇರಲಿಲ್ವಾ? ನಾನೇ ಇನ್ನೊಂದು ವಾರದಲ್ಲೇ ಎಲ್ಲ ಮಾಹಿತಿ ಹೇಳುತ್ತೇನೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಏನಿದು ವಿವಾದ?

ಹುಬ್ಬಳ್ಳಿ‌ಯಲ್ಲಿ ಸೋಮವಾರ (ಡಿ.4) ನಡೆದಿದ್ದ‌ ಮುಸ್ಲಿಂ ಸಮಾವೇಶದಲ್ಲಿ ಸಿಎಂ‌ ಸಿದ್ದರಾಮಯ್ಯ ಭಾಗವಹಿಸಿದ್ದರು. ಇಲ್ಲಿ ಅವರು ಮುಸ್ಲಿಂ ಸಮುದಾಯದ ಪರವಾಗಿ ಆಡಿದ ಮಾತುಗಳು ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ಮುಸ್ಲಿಂ ಸಮುದಾಯದ ರಕ್ಷಣೆ ಮಾಡುವುದಾಗಿ ಘೋಷಿಸಿದ್ದಲ್ದದೆ, 10 ಸಾವಿರ ಕೋಟಿ ರೂಪಾಯಿಯನ್ನು ಅಲ್ಪಸಂಖ್ಯಾತರಿಗೆ ನೀಡಲು ಉದ್ದೇಶಸಲಾಗಿದೆ ಎಂಬ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಒಂದು ಸಮುದಾಯದ ಓಲೈಕೆಗೆ ಸಿಎಂ ಮುಂದಾಗಿದ್ದಾರೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಕಿಡಿಕಾರಿತ್ತು. ಅಲ್ಲದೆ, ಸದನದಲ್ಲಿ ಸಹ ಈ ವಿಚಾರ ಪ್ರಸ್ತಾಪವಾಗಿದ್ದು, ಸಿಎಂ ಉತ್ತರಕ್ಕಾಗಿ ಬಿಜೆಪಿ ಪಟ್ಟು ಹಿಡಿದು ಕುಳಿತಿದೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ರಾಜಕೀಯ ‌ಲಾಭಕ್ಕೆ ಕೆಲವರು ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುತ್ತಾರೆ. ಇದರಿಂದ ತಾತ್ಕಾಲಿಕ ಲಾಭ ಸಿಗಬಹುದು. ಪರಸ್ಪರ ಪ್ರೀತಿ ಇರಬೇಕಾದರೆ ನಾವು ಮನುಷ್ಯತ್ವದಿಂದ ಇರಬೇಕು. ಈ ವರ್ಷ ನಾಲ್ಕು ಸಾವಿರ ಕೋಟಿ ಅನುದಾನ ಅಲ್ಪಸಂಖ್ಯಾತರ ಇಲಾಖೆಗೆ ಕೊಟ್ಟಿದ್ದೇವೆ. 10 ಸಾವಿರ ಕೋಟಿ ಹಣ ಅಲ್ಪಸಂಖ್ಯಾತ ಇಲಾಖೆಗೆ ಖರ್ಚು ಮಾಡಬೇಕು ಅನ್ನೋದು ನಮ್ಮ ಉದ್ದೇಶ. ನಾನು ಕೊಟ್ಟಿದ್ದ ಹಣ ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಬೇಕು. ದೇಶದ ಸಂಪತ್ತಲ್ಲಿ ನಿಮಗೆ ಪಾಲು ಸಿಗಬೇಕು. ದೇಶದ ಸಂಪತ್ತು ನಿಮಗೂ ಹಂಚುತ್ತೇನೆ. ನಿಮಗೆ ಅನ್ಯಾಯ ಮಾಡೋಕೆ ನಾನು ಬಿಡಲ್ಲ. ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಇದನ್ನೂ ಓದಿ: Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಗಂಭೀರ ಸ್ವರೂಪ ಪಡೆದ ಯತ್ನಾಳ್‌ ಆರೋಪ

ಈ ಕಾರ್ಯಕ್ರಮದಲ್ಲಿ ಮೌಲ್ವಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಪಕ್ಕದಲ್ಲಿ ಐಸಿಸ್‌ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯೊಬ್ಬ ಇದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನೇರ ಆರೋಪವನ್ನು ಮಾಡಿದ್ದಾರೆ. ಹೀಗಾಗಿ ಈ ವಿವಾದ ಈಗ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ.

Exit mobile version