Jagadish Shettar: ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ರಾಜೀನಾಮೆ ಪತ್ರ ನೀಡಿದ ಜಗದೀಶ್‌ ಶೆಟ್ಟರ್ - Vistara News

ರಾಜಕೀಯ

Jagadish Shettar: ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ರಾಜೀನಾಮೆ ಪತ್ರ ನೀಡಿದ ಜಗದೀಶ್‌ ಶೆಟ್ಟರ್

Jagadish Shettar: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ರಾಜೀನಾಮೆ ಸ್ವೀಕಾರ ಮಾಡಿ ಎಂದು ಶೆಟ್ಟರ್ ಕೋರಿದ್ದಾರೆ. ಇಲ್ಲಿಯವರೆಗೆ ತಾವು ನನಗೆ ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಜಗದೀಶ್‌ ಶೆಟ್ಟರ್‌ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

VISTARANEWS.COM


on

Jagadish Shettar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shettar), ಶುಕ್ರವಾರ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ (Primary membership of Congress) ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ (DK Shivakumar) ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ.

ಆಪ್ತ ಸಹಾಯಕರ ಮೂಲಕ ರಾಜೀನಾಮೆ ಪತ್ರವನ್ನು ಜಗದೀಶ್ ಶೆಟ್ಟರ್ ಡಿ.ಕೆ. ಶಿವಕುಮಾರ್‌ಗೆ ತಲುಪಿಸಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ರಾಜೀನಾಮೆ ಸ್ವೀಕಾರ ಮಾಡಿ ಎಂದು ಶೆಟ್ಟರ್ ಕೋರಿದ್ದಾರೆ. ಇಲ್ಲಿಯವರೆಗೆ ತಾವು ನನಗೆ ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದೂ ಹೇಳಿದ್ದಾರೆ.

Jagadish Shettar resignation letter

ನಿನ್ನೆಯೇ ಹೊರಟ್ಟಿಗೆ ರಾಜೀನಾಮೆ ನೀಡಿದ್ದ ಶೆಟ್ಟರ್‌

ಗುರುವಾರ ನವ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಬೆಂಗಳೂರಿಗೆ ಬರುತ್ತಿದ್ದಂತೆ ಜಗದೀಶ್‌ ಶೆಟ್ಟರ್‌ ಅವರು, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದರು. ಸ್ವ – ಇಚ್ಛೆಯಿಂದ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ಕೂಡಲೇ ಸಭಾಪತಿ ಹೊರಟ್ಟಿ ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ.

ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್‌ಗೆ ನೀಡಿದ ಆ 3 ಆಫರ್‌ ಏನು?

ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರ್ಪಡೆಯಾಗಲು ಬಿಜೆಪಿ ಹೈಕಮಾಂಡ್ ನಾಯಕರು ಮೂರು ಆಫರ್‌ಗಳನ್ನು ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

1) ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಬಯಸಿದರೆ ಅವಕಾಶ ಕಲ್ಪಿಸಲಾಗುವುದು. (ಹಾವೇರಿ, ಬೆಳಗಾವಿ ಲೋಕಸಭೆ ಟಿಕೆಟ್ ಆಫರ್)

2) ರಾಜ್ಯಸಭೆ ಸದಸ್ಯರನ್ನಾಗಿ ಮಾಡಿ ಕೇಂದ್ರದಲ್ಲಿ ಮಂತ್ರಿ ಮಾಡುವ ಆಫರ್

3) ಹಿರಿತನವನ್ನು ಪರಿಗಣಿಸಿ ರಾಜ್ಯಪಾಲರನ್ನಾಗಿ ಮಾಡುವ ಭರವಸೆ

ಈ ಮೂರು ಆಫರ್‌ಗಳಲ್ಲಿ ಜಗದೀಶ್‌ ಶೆಟ್ಟರ್ ಅವರು ಯಾವುದನ್ನು ಆಯ್ಕೆ ಮಾಡಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ. ಅವರು ಯಾವುದನ್ನು ಆಯ್ಕೆ ಮಾಡಿಕೊಂಡರೂ ಒಪ್ಪಿಗೆನೀಡುವ ಭರವಸೆಯನ್ನು ಬಿಜೆಪಿ ಹೈಕಮಾಂಡ್‌ ನಾಯಕರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಸೇರಿದ್ದ ಶೆಟ್ಟರ್‌

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಜಗದೀಶ್‌ ಶೆಟ್ಟರ್‌, ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ಮಹೇಶ್‌ ಟೆಂಗಿನಕಾಯಿ ವಿರುದ್ಧ ಸೋಲು ಕಂಡಿದ್ದರು. ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ಗೆ ಲಿಂಗಾಯತ ಮತಗಳನ್ನು ತರುವಲ್ಲಿ ಶೆಟ್ಟರ್‌ ಯಶಸ್ವಿಯಾಗಿದ್ದರು.

ಇದನ್ನೂ ಓದಿ: Republic Day: ಸಂವಿಧಾನ ಬದಲಾವಣೆ ಕೂಗನ್ನು ಖಂಡಿಸಿ, ನಾನೂ ಧ್ವನಿಗೂಡಿಸುವೆ: ಸಿದ್ದರಾಮಯ್ಯ ಕರೆ

ಲಿಂಗಾಯತ ಮುಖಂಡರನ್ನು ಕಡೆಗಣಿಸಿಲ್ಲ ಎಂಬ ಸಂದೇಶ ರವಾನೆ

ಈಗಾಗಲೇ ಕಾಂಗ್ರೆಸ್‌ ಸೇರಿ 9 ತಿಂಗಳು ಕಳೆದಿದ್ದರೂ ಅಲ್ಲಿ ಜಗದೀಶ್‌ ಶೆಟ್ಟರ್‌ಗೆ ಸೂಕ್ತ ಸ್ಥಾನಮಾನವನ್ನು ನೀಡಲಾಗಿಲ್ಲ. ವಿಧಾನ ಪರಿಷತ್‌ಗೆ ಆಯ್ಕೆ ಮಾಡಿದ್ದು ಬಿಟ್ಟರೆ ಅಲ್ಲಿ ಅವರನ್ನು ಕಾಂಗ್ರೆಸ್‌ ನಾಯಕರು ಸರಿಯಾಗಿ ನಡೆಸಿಕೊಂಡಿಲ್ಲ ಎಂಬ ಅಸಮಾಧಾನವನ್ನು ಶೆಟ್ಟರ್‌ ಹೊಂದಿದ್ದರು ಎನ್ನಲಾಗಿದೆ. ಈ ಎಲ್ಲ ಬೇಸರಗಳಿಂದ ಶೆಟ್ಟರ್‌ ಮರಳಿ ಗೂಡಿಗೆ ಸೇರಿದ್ದಾರೆ. ಹೀಗಾಗಿ ಅಮಿತ್‌ ಶಾ ಜತೆಗೆ ನಡೆದಿರುವ ಮಾತುಕತೆ ವೇಳೆ ಉನ್ನತ ಸ್ಥಾನಮಾನ ಕೊಡುವ ಬಗ್ಗೆ ಚರ್ಚೆ ನಡೆದಿದೆ. ಈಗ ಲೋಕಸಭೆ ಚುನಾವಣೆ ಇರುವುದರಿಂದ ಅವರನ್ನು ಪಕ್ಷಕ್ಕೆ ಮರಳಿ ತಂದರೆ ಬಿಜೆಪಿ ಲಿಂಗಾಯತ ಮುಖಂಡರನ್ನು ಕಡೆಗಣಿಸಿಲ್ಲ ಎಂಬ ಸಂದೇಶವನ್ನು ನೀಡದಂತೆ ಆಗುತ್ತದೆ ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಶೆಟ್ಟರ್‌ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Suvendu Adhikari: ಉಪಚುನಾವಣೆಯಲ್ಲಿ ಭಾರಿ ವಂಚನೆ? 2 ಲಕ್ಷ ಹಿಂದುಗಳ ವೋಟಿಂಗ್‌ ಹಕ್ಕು ಕಸಿಯಲಾಗಿತ್ತು ಎಂದ ಬಿಜೆಪಿ ನಾಯಕ

Suvendu Adhikari: ಉಪಚುನಾವಣೆ ವೇಳೆ ಸುಮಾರು 2 ಲಕ್ಷ ಹಿಂದುಗಳಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶವನ್ನೇ ನೀಡಲಿಲ್ಲ ಎಂದು ಪಶ್ಚಿಮ ಬಂಗಾಳದ ಪ್ರತಿಪಕ್ಷದ ನಾಯಕ, ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ 13 ಸ್ಥಾನಗಳ ಪೈಕಿ ಪ್ರತಿಪಕ್ಷಗಳ ಇಂಡಿ ಒಕ್ಕೂಟ 10 ಕಡೆ ಗೆದ್ದಿದೆ. ಬಿಜೆಪಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಇನ್ನು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Suvendu Adhikari
Koo

ಕೋಲ್ಕತ್ತಾ: ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ (Bypolls Result). ಲೋಕಸಭಾ ಚುನಾವಣೆ (Lok Sabha Election)ಯ ಬಳಿಕ ನಡೆದ ಮೊದಲ ಎಲೆಕ್ಷನ್‌ ಎನ್ನುವ ಕಾರಣಕ್ಕೆ ಇದು ಕುತೂಹಲ ಕೆರಳಿಸಿತ್ತು. 13 ಸ್ಥಾನಗಳ ಪೈಕಿ ಪ್ರತಿಪಕ್ಷಗಳ ಇಂಡಿ ಒಕ್ಕೂಟ 10 ಕಡೆ ಗೆದ್ದು ಪ್ರಬಲ ಪೈಪೋಟಿಯ ಸೂಚನೆ ನೀಡಿದರೆ ಬಿಜೆಪಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಇನ್ನು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ. ಈ ಬಗ್ಗೆ ಮಾತನಾಡಿದ ಪಶ್ಚಿಮ ಬಂಗಾಳದ ಪ್ರತಿಪಕ್ಷದ ನಾಯಕ, ಬಿಜೆಪಿ ಮುಖಂಡ ಸುವೇಂದು ಅಧಿಕಾರಿ (Suvendu Adhikari), ಉಪಚುನಾವಣೆ ವೇಳೆ ಸುಮಾರು 2 ಲಕ್ಷ ಹಿಂದುಗಳಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶವನ್ನೇ ನೀಡಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಲೋಕಸಭಾ ಚುನಾವಣೆಯ ವೇಳೆಯೂ ಸುಮಾರು 50 ಲಕ್ಷ ಹಿಂದುಗಳ ವೋಟಿಂಗ್‌ ಹಕ್ಕು ಕಸಿದುಕೊಳ್ಳಲಾಗಿತ್ತು. ಇದರ ವಿರುದ್ಧ ಕಾನೂನು ಸಮರ ಸಾರುವುದಾಗಿ ಘೋಷಿಸಿದ್ದಾರೆ.

ಸುವೇಂದು ಅಧಿಕಾರಿ ಹೇಳಿದ್ದೇನು?

ʼʼಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಿದೆ. ಇದರ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ. ಲೋಕಸಭಾ ಚುನಾವಣೆಯ ವೇಳೆ ಸುಮಾರು 50 ಲಕ್ಷ ಹಿಂದುಗಳಿಗೆ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಿಲ್ಲ. ಇನ್ನು ಇತ್ತೀಚೆಗೆ ನಡೆದ 4 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 2 ಲಕ್ಷಕ್ಕಿಂತ ಅಧಿಕ ಹಿಂದುಗಳ ಹಕ್ಕನ್ನು ಹತ್ತಿಕ್ಕಲಾಯಿತುʼʼ ಎಂದು ಅವರು ಆರೋಪಿಸಿದ್ದಾರೆ.

ʼʼತಮ್ಮ ವೋಟಿಂಗ್‌ ಹಕ್ಕು ಕಳೆದುಕೊಂಡವರ ದೂರನ್ನು ಸ್ವೀಕರಿಸಲು ನಾನು ಪೋರ್ಟಲ್‌ ಒಂದನ್ನು ಆರಂಭಿಸುತ್ತಿದ್ದೇನೆ. ಮತ ಚಲಾವಣೆಯ ಹಕ್ಕು ನಿರಾಕರಿಸಲ್ಪಟ್ಟವರು ಇದರಲ್ಲಿ ತಮ್ಮ ದೂರನ್ನು ದಾಖಲಿಸಬಹುದು. ಅವರ ಹೆಸರನ್ನು ಸಂಪೂರ್ಣವಾಗಿ ಗೌಪ್ಯವಾಗಿ ಇಡಲಾಗುವುದು. ಯಾವುದೇ ರೀತಿಯ ಭಯ ಬೇಡ. ಜತೆಗೆ ನಾನು ಕಾನೂನು ಹೋರಾಟವನ್ನೂ ಕೈಗೊಳ್ಳಲಿದ್ದೇನೆʼʼ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಾತ್ರವಲ್ಲ ಅವರು ರಾಜಭವನದ ಮುಂದೆ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಇದನ್ನೂ ಓದಿ: Bypolls Result: 7 ರಾಜ್ಯಗಳ ಉಪಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ ಇಂಡಿ ಒಕ್ಕೂಟ; ಬಿಜೆಪಿಗೆ ಮುಖಭಂಗ

ಉಪಚುನಾವಣೆಯ ಫಲಿತಾಂಶ

ಪಶ್ಚಿಮ ಬಂಗಾಳದ ರಾಯ್‌ಗಂಜ್‌, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು. ಈ ಪೈಕಿ ಈ ನಾಲ್ಕೂ ಸೀಟುಗಳಲ್ಲಿ ಆಡಳಿತ ರೂಢ ತೃಣಮೂಲ ಕಾಂಗ್ರೆಸ್‌ (Trinamool Congress)ನ ಅಭ್ಯರ್ಥಿಗಳು ಗೆದ್ದು ಕ್ಲೀನ್‌ ಸ್ವೀಪ್‌ ಸಾಧಿಸಿದ್ದಾರೆ. ವಿಶೇಷ ಎಂದರೆ ಈ ಪೈಕಿ ಮೂರು ಸ್ಥಾನಗಳನ್ನು ಹಿಂದೆ ಬಿಜೆಪಿ ಗೆದ್ದುಕೊಂಡಿತ್ತು. ಇನ್ನು ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 29 ಕಡೆ ಜಯಭೇರಿ ಬಾರಿಸಿತ್ತು. ಶನಿವಾರ ಬಿಜೆಪಿಯ ಸಂಸದ ಸುಕುಂತ ಮುಜುಂದಾರ್‌ ಕೂಡ ಉಪಚುನಾವಣೆಯಲ್ಲಿ ಮೋಸ ನಡೆದಿದೆ ಎಂದು ದೂರಿದ್ದರು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದರು.

Continue Reading

ಕರ್ನಾಟಕ

Revenue Officers: ಹೆಚ್ಚು ದೂರುಗಳಿರುವ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಸಚಿವ ಕೃಷ್ಣಭೈರೇಗೌಡ ಸೂಚನೆ

Revenue Officers: ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ವಿವರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆ ನೀಡಿದ್ದಾರೆ.

VISTARANEWS.COM


on

Revenue Officers
Koo

ಬೆಂಗಳೂರು: ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ಸಾರ್ವಜನಿಕರಿಂದ ಹೆಚ್ಚು ದೂರುಗಳಿರುವ ಕಂದಾಯ ಅಧಿಕಾರಿಗಳ ಪಟ್ಟಿಯನ್ನು (Revenue Officers) ಶೀಘ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಸೂಚಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿಸಿ ಹಂಚಿಕೊಂಡಿರುವ ಸಚಿವರು, ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಅಂತಹ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Cauvery Dispute: ತಮಿಳುನಾಡಿಗೆ ನಿತ್ಯ 8000 ಕ್ಯುಸೆಕ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಸುತ್ತೋಲೆ

ಒಂದೇ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ದೂರುಗಳು ದಾಖಲಾಗಿರುವ ಕಂದಾಯ ಅಧಿಕಾರಿಗಳ ವಿವರ ನೀಡುವಂತೆ ಸಿಎಂ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಸುತ್ತೋಲೆ ಹೊರಡಿಸಿದ್ದಾರೆ.

ಜುಲೈ 8ರಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ಸಭೆ ನಡೆದಿತ್ತು. ಈ ವೇಳೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಸಮನ್ವಯತೆ ಸಾಧಿಸಲು ಅಧೀನ ಅಧಿಕಾರಿ, ಸಿಬ್ಬಂದಿಗೆ ನಿರ್ದೇಶನ ನೀಡುವಂತೆ ಸಿಎಂ ಸೂಚಿಸಿದ್ದರು. ಅಲ್ಲದೆ ಕಚೇರಿಯಲ್ಲಿ ಉತ್ತಮ ಕಾರ್ಯಕ್ಷಮತೆ, ಶಿಸ್ತು ಪಾಲಿಸುವಂತೆ ಕ್ರಮ ವಹಿಸಲು ಮತ್ತು ಒಂದು ವೇಳೆ ಈ ದಿಸೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿ, ಸಿಬ್ಬಂದಿ ಮೇಲೆ ನಿಯಮಾನುಸಾರ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸಹ ಸೂಚಿಸಿದ್ದರು. ಯಾವುದೇ ಅಧಿಕಾರಿ, ನೌಕರರ ಬಗ್ಗೆ ಅಸಮರ್ಥತೆ ಅಥವಾ ದೂರುಗಳು ಇತ್ಯಾದಿಗಳ ಕಾರಣದಿಂದ ಅವರನ್ನು ವರ್ಗಾವಣೆ ಮಾಡಲು ಅಥವಾ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಸ್ತಾವನೆಯನ್ನು ಕಳುಹಿಸುವಂತೆ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ | Assembly Session: ನಾಳೆಯಿಂದ ಮುಂಗಾರು ಅಧಿವೇಶನ: ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಹಲವು ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿರುವುದು. ಅಲ್ಲದೆ ಇಂತಹ ಹಲವು ಅಧಿಕಾರಿಗಳು, ನೌಕರರುಗಳ ವಿರುದ್ಧ ದೂರುಗಳು ಸಹ ಸ್ವೀಕೃತವಾಗಿರುವುದು ಸರ್ಕಾರದ ಗಮನಕ್ಕೂ ಬಂದಿದೆ. ಆದ್ದರಿಂದ ಒಂದೇ ಹುದ್ದೆ. ಸ್ಥಾನದಲ್ಲಿ ಅಥವಾ ಒಂದೇ ಸ್ಥಳದಲ್ಲಿ 5 ವರ್ಷ ಮೀರಿ ಮುಂದುವರಿದಿದ್ದಲ್ಲಿ ಮತ್ತು ಅಂತಹವರ ವಿರುದ್ಧ ದೂರುಗಳೇನಾದರೂ ಇದ್ದಲ್ಲಿ, ಅವರ ಅಧಿಕಾರಾವಧಿಯ ವಿವರಗಳೊಂದಿಗೆ ವಿವರವಾದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ರಾಜೇಂದರ್‌ ಕುಮಾರ್‌ ಕಟಾರಿಯಾ ಸೂಚಿಸಿದ್ದಾರೆ.

Continue Reading

ದೇಶ

Donald Trump Assassination Bid: “ಮೋದಿ ವಿರುದ್ಧದ ಹಿಂಸಾಚಾರಕ್ಕೆ ಬೆಂಬಲ”- ಟ್ರಂಪ್‌ ಮೇಲೆ ದಾಳಿ ಬೆನ್ನಲ್ಲೇ ರಾಹುಲ್‌ ವಿರುದ್ಧ ಬಿಜೆಪಿ ಕಿಡಿ

Donald Trump Assassination Bid:ಸದಾ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧದ ಹಿಂಸಾಚಾರವನ್ನು ಸಮರ್ಥಿಸಿಕೊಳ್ಳುವ ಮತ್ತು ಪೋತ್ಸಾಹಿಸುವ ರಾಹುಲ್‌ ಗಾಂಧಿ ಮೂರನೇ ಬಾರಿ ಸೋಲುಂಡಿದ್ದಾರೆ. ಪಂಜಾಬ್‌ನಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರನ್ನು ಫ್ಲೈ ಓವರ್‌ನ ಕೆಳಗೆ ಕೆಲಗಂಟೆಗಳ ಕಾಲ ತಡೆದ ಘಟನೆಯನ್ನು ಹೇಗೆ ಮರೆಯಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Donald Trump Assassination Bid
Koo

ಹೊಸದಿಲ್ಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲೇ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump Assassination Bid) ಅವರ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆಗೆ ಯತ್ನಿಸಿದ ಪ್ರಕರಣವು ಜಗತ್ತಿನಾದ್ಯಂತ ಸುದ್ದಿಯಾಗಿದೆ. ಇದೀಗ ಇದೇ ವಿಚಾರವನ್ನಿಟ್ಟುಕೊಂಡು ಬಿಜೆಪಿ ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರ ಹಳೆಯ ಹೇಳಿಕೆಯನ್ನು ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದೆ.

ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಟ್ರಂಪ್‌ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ಹಿಂಸಾಚಾರಕ್ಕೆ ಪ್ರೋತ್ಸಾಹಿಸಿ ಈ ಹೊಂದೆ ರಾಹುಲ್‌ ಗಾಂದಿ ನೀಡಿದ್ದ ಹೇಳಿಕೆಯನ್ನೂ ಅವರು ಪ್ರಸ್ತಾಪಿಸಿದ್ದಾರೆ. “ಸದಾ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧದ ಹಿಂಸಾಚಾರವನ್ನು ಸಮರ್ಥಿಸಿಕೊಳ್ಳುವ ಮತ್ತು ಪೋತ್ಸಾಹಿಸುವ ರಾಹುಲ್‌ ಗಾಂಧಿ ಮೂರನೇ ಬಾರಿ ಸೋಲುಂಡಿದ್ದಾರೆ. ಪಂಜಾಬ್‌ನಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರನ್ನು ಫ್ಲೈ ಓವರ್‌ನ ಕೆಳಗೆ ಕೆಲಗಂಟೆಗಳ ಕಾಲ ತಡೆದ ಘಟನೆಯನ್ನು ಹೇಗೆ ಮರೆಯಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ರಾಹುಲ್‌ ಗಾಂಧಿ ತಮ್ಮ ವಿರೋಧಿಗಳ ವಿರುದ್ಧ ಒಂದೇ ರೀತಿಯಾದ ಭಾಷೆಯನ್ನು ಬಳಸುತ್ತಿದೆ. ಅಮೆರಿಕದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಅಭಿಯಾನ ಶುರು ಮಾಡಿದರೆ, ಭಾರತದಲ್ಲಿ ಪ್ರತಿಪಕ್ಷಗಳು ಸಂವಿಧಾನವನ್ನು ಕಾಪಾಡಿ ಎಂಬ ಅಭಿಯಾನ ನಡೆಸಿತ್ತು. ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಬಳಸುವಂತಹ ಪದ ಉದಾಹರಣೆಗೆ ಸರ್ವಾಧಿಕಾರಿ.. ಇಂತಹ ಪದಗಳನ್ನೇ ಜೋ ಬೈಡೆನ್‌ ಮತ್ತು ಅವರ ಬೆಂಬಲಿಗರು ಟ್ರಂಪ್‌ ವಿರುದ್ಧ ಬಳಸುತ್ತಿದ್ದಾರೆ ಎಂದು ಮಾಳವಿಯಾ ಕಿಡಿಕಾರಿದ್ದಾರೆ.

ಇದನ್ನೂ ಓದಿ: Donald Trump: ಡೊನಾಲ್ಡ್‌ ಟ್ರಂಪ್‌ ಕಿವಿಗೆ ತಾಗಿದ್ದು ಬುಲೆಟ್‌ ಅಲ್ಲ? ಹಾಗಾದ್ರೆ ಏನದು? ಹುಸಿ ದಾಳಿಯ ಅನುಮಾನ ಏಕೆ?

Continue Reading

ಕರ್ನಾಟಕ

Cauvery Dispute: ತಮಿಳುನಾಡಿಗೆ 8000 ಕ್ಯುಸೆಕ್ ನೀರು ಬಿಡುವುದು ಅನಿವಾರ್ಯ: ಸಿದ್ದರಾಮಯ್ಯ ಹೇಳಿಕೆ

Cauvery Dispute: ಹೆಚ್ಚು ಮಳೆ ಬಿದ್ದರೆ ಮಾತ್ರ CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯುಸೆಕ್ ನೀರು ಬಿಡಬೇಕಾಗುತ್ತದೆ. ಇದರ ಜತೆಗೆ ಮೇಲ್ಮನವಿ ಹಾಕುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Cauvery Dispute
Koo

ಬೆಂಗಳೂರು: ತಮಿಳುನಾಡಿಗೆ ಜುಲೈ 12ರಿಂದ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು (Cauvery Dispute) ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಆದೇಶದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ಸರ್ವಪಕ್ಷ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ತಮಿಳುನಾಡಿಗೆ 8000 ಕ್ಯುಸೆಕ್ ನೀರು ಬಿಡುವುದು ಅನಿವಾರ್ಯ ಎಂದು ತಿಳಿಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜುಲೈ 11ರಂದು ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದಿದ್ದು, ಜುಲೈ 12ರಿಂದ 31ರವರೆಗೆ ಸುಮಾರು 20 ದಿನ ಪ್ರತೀ ದಿನ 1 ಟಿಎಂಸಿಯಂತೆ 20 ಟಿಎಂಸಿ ನೀರು ಬಿಡಲು ಆದೇಶಿಸಿದ್ದಾರೆ. ಸಾಮಾನ್ಯವಾಗಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, ಜುಲೈನಲ್ಲಿ 31.24 ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5 ಟಿಎಂಸಿಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜು.12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, CWMA ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು. ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ ಶೇ.63 ಮಾತ್ರ ನೀರು ಭರ್ತಿ ಆಗಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯುಸೆಕ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ.

ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯುಸೆಕ್ ನೀರು ಬಿಡಬೇಕಾಗುತ್ತದೆ. ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಆಡ್ತೀವಿ ಎಂದು CWMCಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ | Cauvery Dispute: ತಮಿಳುನಾಡಿಗೆ ನಿತ್ಯ 8000 ಕ್ಯುಸೆಕ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ಸರ್ವಪಕ್ಷ ಸಭೆಯಲ್ಲಿ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಎಂಎಲ್‌ಸಿ ರವಿ ಕುಮಾರ್‌, ಸುರೇಶ್ ಬಾಬು, ನಾಗರಾಜ್ ಯಾದವ್, ಎಜಿ ಶಶಿಕಿರಣ್ ಶೆಟ್ಟಿ, ಮಂಜೇಗೌಡ, ಜಿಟಿ ದೇವೇಗೌಡ, ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ, ಯದವೀರ್ ಒಡೆಯರ್‌, ದರ್ಶನ ಪುಟ್ಟಣ್ಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Continue Reading
Advertisement
Mahanati Grand Finale priyanka from mysore is the winner season 1 dhanyashree runner up
ಕಿರುತೆರೆ9 mins ago

Mahanati Grand Finale: ʻಮಹಾನಟಿʼ ಚಿನ್ನದ ಕಿರೀಟ ಮುಡಿಗೇರಿಸಿಕೊಂಡ ಪ್ರಿಯಾಂಕಾ; ಧನ್ಯಶ್ರೀಗೆ ಎರಡನೇ ಸ್ಥಾನ, ಬಹುಮಾನ ಏನು?

Suvendu Adhikari
ರಾಜಕೀಯ48 mins ago

Suvendu Adhikari: ಉಪಚುನಾವಣೆಯಲ್ಲಿ ಭಾರಿ ವಂಚನೆ? 2 ಲಕ್ಷ ಹಿಂದುಗಳ ವೋಟಿಂಗ್‌ ಹಕ್ಕು ಕಸಿಯಲಾಗಿತ್ತು ಎಂದ ಬಿಜೆಪಿ ನಾಯಕ

salary hike
ಪ್ರಮುಖ ಸುದ್ದಿ53 mins ago

Salary Hike: ಸರ್ಕಾರಿ ನೌಕರರಿಗೆ ಭರವಸೆಯ ಸುದ್ದಿ; ಇಂದು ಸಂಪುಟ ಸಭೆಯಲ್ಲಿ ವೇತನ ಹೆಚ್ಚಳಕ್ಕೆ ಸಮ್ಮತಿ?

Talguppa Honnavar Railway Line
ಉತ್ತರ ಕನ್ನಡ1 hour ago

Talguppa Honnavar Railway Line: ಹೊನ್ನಾವರ-ತಾಳಗುಪ್ಪ ರೈಲ್ವೆ ಮಾರ್ಗ; ಮಂಕಿಯ ಬಿಜೆಪಿ ಮುಖಂಡರಿಂದ ಸಂಸದ ಕಾಗೇರಿಯವರಿಗೆ ಮನವಿ

road accident chitradurga news
ಕ್ರೈಂ1 hour ago

Road Accident: ನಿದ್ರೆ ಮಂಪರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರು ಸಾವು

Shikakai For Hair
ಆರೋಗ್ಯ2 hours ago

Shikakai For Hair: ಕೂದಲಿನ ಪೋಷಣೆಗೆ ಶ್ಯಾಂಪು ಒಳ್ಳೆಯದೋ ಸೀಗೆಕಾಯಿ ಒಳ್ಳೆಯದೋ?

Terrorist Attack
ಪ್ರಮುಖ ಸುದ್ದಿ2 hours ago

Terrorist Attack: ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದ ಸೇನೆ

karnataka weather Forecast
ಮಳೆ2 hours ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Noodles Side Effect
ಆರೋಗ್ಯ3 hours ago

Noodles Side Effect: ಇನ್‌ಸ್ಟಂಟ್‌ ನೂಡಲ್‌‌ಗಳನ್ನು ಸೇವಿಸಿದರೆ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳದಿರಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ15 hours ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ16 hours ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ20 hours ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ21 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ2 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ2 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ6 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

ಟ್ರೆಂಡಿಂಗ್‌