Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ - Vistara News

ರಾಜಕೀಯ

Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ

Jai Shree Ram slogan: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ, ಈಗ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ… ಇದೆಲ್ಲದ್ದಕ್ಕೂ ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವುದೇ ಕಾರಣ. ಈ ಘಟನೆಗಳು ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ ಎಂದು ಸಚಿವ ಪ್ರಹ್ಲಾದ್‌ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Union Minister Pralhad Joshi reaction about rahul gandhi statement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹುಬ್ಬಳ್ಳಿ: ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್‌ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ (Rahul Gandhi) ಕಾರಣ. ಬೆಂಗಳೂರಲ್ಲಿ ಜೈಶ್ರೀರಾಮ್‌ ಘೋಷಣೆ (Jai Shree Ram slogan) ಕೂಗಿದ್ದಕ್ಕೆ ಹಲ್ಲೆ ಮಾಡಲಾದ ಪ್ರಕರಣವೂ ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಲೇ ಆಗಿರುವುದು ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್‌ ಜೋಶಿ, ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲಿನ ಹಲ್ಲೆ ಪ್ರಕರಣವನ್ನು ಕಟುವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಇದೆಲ್ಲ ಆಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ರಾಹುಲ್ ಮುಸ್ಲಿಂ ಲೀಗ್ ಧ್ವಜ ಹಿಡಿದಿದ್ದೇ ಕಾರಣ

ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಯನಾಡಲ್ಲಿ ತಮ್ಮ ಪಕ್ಷದ ಧ್ವಜ ಬಿಟ್ಟು, ಮುಸ್ಲಿಂ ಲೀಗ್ ಧ್ವಜ ಹಿಡಿದು ನಾಮಪತ್ರ ಸಲ್ಲಿಸಿ ಬಂದಿದ್ದಾರೆ. ಕಾಂಗ್ರೆಸ್‌ನವರ ಇಂಥ ನಡೆ ದೇಶ ವಿದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ಕೊಟ್ಟಿದೆ ಎಂದು ಪ್ರಲ್ಹಾದ್‌ ಜೋಶಿ ಆರೋಪಿಸಿದರು.

ಈ ಹಿಂದೆ ಹಿಂದೂಗಳ ಹತ್ಯೆ, ಹಿಂದೂ ಮಹಿಳೆಯರ ಅತ್ಯಾಚಾರಕ್ಕೆ ಮುಸ್ಲಿಂ ಲೀಗ್ ಕರೆ ಕೊಟ್ಟಿತ್ತು. ಇಂಥ ಒಂದು ವಿದ್ರೋಹಿ ಕೃತ್ಯಗಳ ಪರ ಇರುವ ಮುಸ್ಲಿಂ ಲೀಗ್ ಧ್ವಜ ಹಿಡಿದು ಚುನಾವಣೆಗೆ ಇಳಿದಿದ್ದಾರೆ ರಾಹುಲ್ ಗಾಂಧಿ ಎಂದು ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ, ಈಗ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ… ಇದೆಲ್ಲದ್ದಕ್ಕೂ ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಸ್ಲಿಂ ಓಲೈಕೆಯಲ್ಲಿ ತೊಡಗಿರುವುದೇ ಕಾರಣ. ಈ ಘಟನೆಗಳು ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ ಎಂದು ಸಚಿವ ಜೋಶಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಉಗ್ರವಾದಿ ಕೃತ್ಯ, ಭಯೋತ್ಪಾದನೆಗೆ ಪ್ರೋತ್ಸಾಹ ಸಿಗುತ್ತಿದೆ. ಜನ ಜಾಗೃತರಾಗಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಜೋಶಿ ಕರೆ ನೀಡಿದರು.

ಕಾರು ಅಡ್ಡಗಟ್ಟಿ ಮುಸ್ಲಿಂ ಯುವಕರ ಪುಂಡಾಟ!

ಶ್ರೀ ರಾಮನವಮಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಹಿಂದು ಯುವಕರು ತೆರಳುತ್ತಿದ್ದಾಗ, ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮುಸ್ಲಿಂ ಯುವಕರು, “ಜೈ ಶ್ರೀರಾಮ್‌ ಹೇಳಬಾರದು, ಅಲ್ಲಾಹ್ ಅಂತ ಹೇಳಬೇಕು” ಎಂದು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬುಧವಾರವೇ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬೈಕ್‌ನಲ್ಲಿ ಬಂದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿದ್ದಾರೆ. ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇದೇ ವೇಳೆ ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡುತ್ತೇವಾ ಎಂದು ಹಿಂದು ಯುವಕರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲು

ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹಿತರಾದ ವಿನಾಯಕ ಮತ್ತು ರಾಹುಲ್ ಜತೆ ಚಿಕ್ಕಬೆಟ್ಟಹಳ್ಳಿ ರಸ್ತೆಯಲ್ಲಿ ಮಧ್ಯಾಹ್ನ ಕಾರಿನಲ್ಲಿ ಹೋಗುತ್ತಿದ್ದೆ. ಕಾರಿನ ಮುಂದೆ ಶ್ರೀರಾಮನ ಧ್ವಜ ಕಟ್ಟಿದ್ದನ್ನು ನೋಡಿದ ಇಬ್ಬರು ಮುಸ್ಲಿಂ ಯುವಕರು, ನಮ್ಮ ಬಳಿ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಅಲ್ಲಾ ಹು ಅಕ್ಬರ್” ಎಂದು ಕೂಗಬೇಕು ಎಂದು ಒತ್ತಾಯಿಸಿದರು. ನಾವು ಹಾಗೆ ಕೂಗುವುದಿಲ್ಲವೆಂದು ಹೇಳಿದಾಗ, ನಮ್ಮ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ರಾಹುಲ್ ತಲೆಗೆ ಪೆಟ್ಟು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಹೇಗೋ ನಾವು ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ನಾಲ್ವರ ಬಂಧನ

ಹಲ್ಲೆ ಪ್ರಕರಣಕ್ಕೆ (Assault Case) ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು (Culprits) ಪೊಲೀಸರು ಬಂಧಿಸಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ (Hindu youth) ಮೇಲೆ ಬುಧವಾರ ಸಂಜೆ ಹಲ್ಲೆ ಮಾಡಿದ್ದವರ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಫರ್ಮಾನ್, ಎ2 ಸಮೀರ್ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಒಟ್ಟು ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

“ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರೋದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್. ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ” ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್ ಹೇಳಿಕೆ ನೀಡಿದ್ದಾರೆ.

“ಆರೋಪಿಗಳು ಬೈಕ್‌ನಲ್ಲಿ ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ಸು ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು?

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading
Advertisement
Latest12 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest14 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest17 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest18 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌