Site icon Vistara News

Kangana Ranaut: ದೂರದೃಷ್ಟಿಯೇ ಇಲ್ಲದ ರಾಹುಲ್ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ: ಕಂಗನಾ

Kangana Ranaut

ಕಾಂಗ್ರೆಸ್ ನಾಯಕ (Congress leader) ರಾಹುಲ್ ಗಾಂಧಿ (Rahul Gandhi) ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಸಂಸದೆ (BJP MP), ನಟಿ ಕಂಗನಾ ರಣಾವತ್ (Kangana Ranaut), ರಾಹುಲ್ ಗಾಂಧಿಗೆ ಯಾವುದೇ ದೂರದೃಷ್ಟಿ ಇಲ್ಲ ಮತ್ತು ನಿರಂತರವಾಗಿ ಮಾರ್ಗವನ್ನು ಬದಲಾಯಿಸುತ್ತಾರೆ. ಕಾಂಗ್ರೆಸ್ ಸಂಸದರು ಒಂದು ಕೊಳಕು ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಕಂಗನಾ, ರಾಹುಲ್ ಗಾಂಧಿ ಎಂದರೆ ಅವ್ಯವಸ್ಥೆ. ಅವರಿಗೆ ತಮ್ಮ ಭಾಷಣಗಳಲ್ಲಿ, ನಡವಳಿಕೆಯಲ್ಲಿ ಗೊಂದಲಮಯರಾಗಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಭಾಷಣ ಮಾಡುವಾಗ ಹಿಂದೂ ದೇವರಾದ ಶಿವನ ಚಿತ್ರಗಳನ್ನು ತೋರಿಸಿದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ, ಅವರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಯಾವುದೇ “ಸಂಘಟಿತ ಕಲ್ಪನೆ” ಕಾಣಲಿಲ್ಲ ಮತ್ತು ಅವರು ನಿರಂತರವಾಗಿ ಮಾರ್ಗಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅವರು ನಾಯಕರಾಗಿ ಯಾರು ಎಂಬ ನಿರ್ಣಾಯಕ ಕಲ್ಪನೆಯನ್ನು ಹೊಂದಿಲ್ಲ ಎಂದು ತೋರುತ್ತದೆ. ಕೇವಲ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ ಮತ್ತು ಪ್ರತಿ ಬಾರಿ ಅವರು ತಮ್ಮ ಮಾರ್ಗವನ್ನು ಬದಲಾಯಿಸುತ್ತಿದ್ದಾರೆ ಎಂದು ಹೇಳಿದರು.

ರೈತರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಕಂಗನಾ, ಕೇಂದ್ರ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪ್ರತಿಭಟನೆಗಳು ಭಾರತದಲ್ಲಿ ಬಾಂಗ್ಲಾದೇಶದಂತಹ ನಾಗರಿಕ ಅಶಾಂತಿಗೆ ಕಾರಣವಾಗಬಹುದು ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ಸಂಸದೆ ಕಂಗನಾ ರಣಾವತ್‌ ರೈತರ ಪ್ರತಿಭಟನೆ ವಿರುದ್ಧ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಕೇಂದ್ರದಲ್ಲಿದ್ದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ರೈತರ ಪ್ರತಿಭಟನೆ ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿಗೆ ಕಾರಣವಾಗುತ್ತಿತ್ತು ಎಂದು ಹೇಳಿಕೆ ನೀಡಿ ಮತ್ತೊಮ್ಮೆ ರೈತರ ಕೋಪಕ್ಕೆ ಕಾರಣವಾಗಿದ್ದರು.

ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಕಂಗನಾ ರಣಾವತ್‌‌ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಮಯದಲ್ಲಿ, “ಶವಗಳನ್ನು ನೇತುಹಾಕುತ್ತಿರುವುದು ಕಂಡುಬಂದಿದೆ ಮತ್ತು ಅತ್ಯಾಚಾರಗಳು ನಡೆಯುತ್ತಿದ್ದವು,” ಎಂದು ಆರೋಪಿಸಿದ್ದರು. ಕಾನೂನುಗಳನ್ನು ಹಿಂತೆಗೆದುಕೊಂಡ ನಂತರವೂ ಪ್ರತಿಭಟನೆಗಳು ಮುಂದುವರಿಯುತ್ತಿರುವುದಕ್ಕೆ ಪಟ್ಟಭದ್ರ ಹಿತಾಸಕ್ತಿಗಳು ಮತ್ತು “ವಿದೇಶಿ ಶಕ್ತಿಗಳೇ ” ಕಾರಣ ಎಂದು ದೂಷಿಸಿದ್ದರು.

ಇದನ್ನೂ ಓದಿ: Crimes Against Women: ಮಹಿಳೆಯರ ವಿರುದ್ಧದ ಅಪರಾಧ ಆರೋಪ: ಪ.ಬಂಗಾಳದ ಶಾಸಕ, ಸಂಸದರೇ ಹೆಚ್ಚು!

ಕಂಗನಾ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಮೋದಿ ಸರ್ಕಾರದ ಪ್ರಚಾರ ಯಂತ್ರವು “ನಿರಂತರವಾಗಿ ರೈತರನ್ನು ಅವಮಾನಿಸುತ್ತಿದೆ” ಎಂದು ಆರೋಪಿಸಿದರು.


ಈ ಕುರಿತು ಎಕ್ಸ್ ನಲಿ ಪೋಸ್ಟ್ ಮಾಡಿರುವ ಅವರು, 378 ದಿನಗಳ ಮ್ಯಾರಥಾನ್ ಹೋರಾಟದಲ್ಲಿ 700 ಸಹೋದ್ಯೋಗಿಗಳನ್ನು ಬಲಿಕೊಟ್ಟ ರೈತರನ್ನು ಬಿಜೆಪಿ ಸಂಸದರು ಅತ್ಯಾಚಾರಿಗಳು ಮತ್ತು ವಿದೇಶಿ ಶಕ್ತಿಗಳ ಪ್ರತಿನಿಧಿಗಳು ಎಂದು ಕರೆಯುವುದು ಬಿಜೆಪಿಯ ರೈತ ವಿರೋಧಿ ನೀತಿ ಮತ್ತು ಉದ್ದೇಶಗಳಿಗೆ ಮತ್ತೊಂದು ಪುರಾವೆಯಾಗಿದೆ ಎಂದು ತಿಳಿಸಿದ್ದು, ರೈತ ಸಂಸ್ಥೆಗಳು ಮತ್ತು ರಾಜಕಾರಣಿಗಳ ಕುರಿತು ನಟಿಯ ಹೇಳಿಕೆಗಳನ್ನು ಖಂಡಿಸಿದ್ದಾರೆ.

Exit mobile version