Kannada signboard rules: ಕನ್ನಡ ಬೋರ್ಡ್‌ ಕಡ್ಡಾಯ; ಡೆಡ್‌ಲೈನ್‌ವರೆಗೆ ದಾಳಿಗೆ ಅವಕಾಶ ಕೊಡಬೇಡಿ: ಬಿಬಿಎಂಪಿಗೆ ವ್ಯಾಪಾರಿಗಳ ಒತ್ತಾಯ - Vistara News

ರಾಜಕೀಯ

Kannada signboard rules: ಕನ್ನಡ ಬೋರ್ಡ್‌ ಕಡ್ಡಾಯ; ಡೆಡ್‌ಲೈನ್‌ವರೆಗೆ ದಾಳಿಗೆ ಅವಕಾಶ ಕೊಡಬೇಡಿ: ಬಿಬಿಎಂಪಿಗೆ ವ್ಯಾಪಾರಿಗಳ ಒತ್ತಾಯ

Kannada signboard rules: ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯ ಮಾಡಲಾಗಿದ್ದು, ಇದನ್ನು ಅಳವಡಿಸಲು ಫೆ.28 ಕೊನೆಯ ದಿನವಾಗಿದೆ. ಆದರೆ, ಈ ಗಡುವಿನ ಅವಧಿ ಸಮೀಪಿಸುತ್ತಿದೆ. ಹೀಗಂತ ಕನ್ನಡ ನಾಮಫಲಕ ಅಳವಡಿಕೆಗೆ ಇರುವ ಅವಧಿಗೆ ಮೊದಲೇ ನಮ್ಮ ಮೇಲೆ ಬಲವಂತವಾಗಿ ಕ್ರಮ ಕೈಗೊಳ್ಳಬೇಡಿ ಎಂದು ವ್ಯಾಪಾರಸ್ಥರು ಬಿಬಿಎಂಪಿಗೆ ಮನವಿ ಮಾಡಿದ್ದಾರೆ.

VISTARANEWS.COM

on

Kannada signboard rules No coercive action until the deadline Traders urge BBMP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ ಅನ್ವಯ ಬೆಂಗಳೂರು ಹಾಗೂ ರಾಜ್ಯದ ಎಲ್ಲ ಅಂಗಡಿ ಮುಂಗಟ್ಟುಗಳು, ಕಂಪನಿಗಳು, ಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು, ಸಂಘ ಸಂಸ್ಥೆ, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ರೀತಿಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯ (Kannada signboard rules) ಮಾಡಲಾಗಿದ್ದು, ಇದನ್ನು ಅಳವಡಿಸಲು ಫೆ.28 ಕೊನೆಯ ದಿನವಾಗಿದೆ. ಆದರೆ, ಈ ಗಡುವಿನ ಅವಧಿ ಸಮೀಪಿಸುತ್ತಿದೆ. ಹೀಗಂತ ಕನ್ನಡ ನಾಮಫಲಕ (Kannada Name Plate) ಅಳವಡಿಕೆಗೆ ಇರುವ ಅವಧಿಗೆ ಮೊದಲೇ ನಮ್ಮ ಮೇಲೆ ಬಲವಂತವಾಗಿ ಕ್ರಮ ಕೈಗೊಳ್ಳಬೇಡಿ. ಈ ಸಂದರ್ಭದಲ್ಲಿ ಯಾವುದೇ ರೀತಿಯ ದಬ್ಬಾಳಿಕೆಗೆ ಅವಕಾಶವನ್ನು ಕೊಡಬೇಡಿ ಎಂದು ಬಿಬಿಎಂಪಿ (BBMP) ಹಾಗೂ ರಾಜ್ಯ ಸರ್ಕಾರಕ್ಕೆ ವ್ಯಾಪಾರಿ ಸಂಘಟನೆಯವರು ಮನವಿ ಮಾಡಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ಅನೇಕ ವ್ಯಾಪಾರಿಗಳು ತಮ್ಮ ಅಂಗಡಿ, ಮಳಿಗೆಗಳ ನಾಮಫಲಕಗಳನ್ನು ಬದಲಾಯಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಕೆಲವು ಕಡೆ ಈಗಿರುವ ಇಂಗ್ಲಿಷ್‌ ನಾಮಫಲಕಕ್ಕೆ ಪರದೆಯಿಂದ ಮುಚ್ಚಿದ್ದು, ಬದಲಾವಣೆಯನ್ನು ಮಾಡಲಾಗುತ್ತಿದೆ ಎಂಬ ಸಂದೇಶವನ್ನು ರವಾನೆ ಮಾಡುತ್ತಿದ್ದಾರೆ. ಹೀಗಾಗಿ ಗಡುವು ಮುಗಿಯುವುದರೊಳಗೆ ಕನ್ನಡ ಪರ ಸಂಘಟನೆಗಳ ಗುಂಪುಗಳು ತಮ್ಮ ವಿರುದ್ಧ ಕಿರುಕುಳ ಅಥವಾ ವಿಧ್ವಂಸಕ ಕೃತ್ಯಗಳಲ್ಲಿ ತೊಡಗದಂತೆ ನೋಡಿಕೊಳ್ಳಬೇಕು ಎಂದು ವ್ಯಾಪಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎಫ್‌ಕೆಸಿಸಿಐ ಸ್ಪಷ್ಟನೆ

ಈ ಬಗ್ಗೆ ಎಫ್‌ಕೆಸಿಸಿಐ ಪ್ರತಿಕ್ರಿಯೆ ನೀಡಿದ್ದು, ವರ್ತಕರು ಹೊಸ ನಾಮಫಲಕಗಳನ್ನು ಅಳವಡಿಸಲು ಒಪ್ಪಿಕೊಂಡಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಅವರು ಕನ್ನಡ ನೆಲದ ಕಾನೂನು, ನಿಯಮಗಳನ್ನು ಪಾಲಿಸುತ್ತಾರೆ. ಫೆಬ್ರವರಿ 28ರವರೆಗೆ ಈಗಾಗಲೇ ಬಿಬಿಎಂಪಿ ಗುಡುವು ವಿಧಿಸಿದೆ. ಹೀಗಾಗಿ ಈ ಗಡುವಿನವರೆಗೆ ಯಾವುದೇ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ನಾವು ಈ ಮೂಲಕ ಕರ್ನಾಟಕ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮನವಿ ಮಾಡುತ್ತೇವೆ. ಅಲ್ಲದೆ, ಯಾರೂ ಸಹ ಕಾನೂನನ್ನು ಕೈಗೆ ತೆಗೆದುಕೊಳ್ಳದ ರೀತಿಯಲ್ಲಿ ಎಲ್ಲ ವ್ಯಾಪಾರಿಗಳಿಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದೆ.

ನಾಮಫಲಕ ಅಳವಡಿಕೆಗೆ ವೆಚ್ಚ ಅಧಿಕ

ನಾಮಫಲಕವನ್ನು ಕನ್ನಡದಲ್ಲಿ ಅಳವಡಿಕೆ ಮಾಡಲು ನಾವು ಬದ್ಧರಾಗಿದ್ದೇವೆ. ಆದರೆ, ಹೊಸ ಬೋರ್ಡ್‌ ಅಳವಡಿಕೆಗೆ ಸುಮಾರು 30,000 ರೂಪಾಯಿಗಳವರೆಗೆ ವೆಚ್ಚ ತಗುಲುತ್ತದೆ. ಹೀಗಾಗಿ ಕೆಲವರಿಗೆ ಹಣ ಹೊಂದಿಸಲು ವಿಳಂಬವಾಗುತ್ತಿದೆ. ಹೀಗಾಗಿ ಗಡುವಿನ ಅವಧಿವರೆಗೆ ಸಮಯಾವಕಾಶ ನೀಡಬೇಕು ಎಂದು ಕೆಲವು ವ್ಯಾಪಾರಸ್ಥರು ಕೋರಿದ್ದಾರೆ.

ಜಯನಗರದಲ್ಲಿ ಕೆಲವು ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಕೆ ಮಾಡಿರದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕನ್ನಡ ಪರ ಸಂಘಟನೆಗಳು ದಾಳಿ ನಡೆಸಿದ್ದವು. ಇದರಿಂದ ಸಾಕಷ್ಟು ನಷ್ಟವಾಗಿತ್ತು. ಈ ಕಾರಣದಿಂದ ರಕ್ಷಣೆ ಬೇಕು ಎಂದು ಬಿಬಿಎಂಪಿಗೆ ವ್ಯಾಪಾರಿಗಳು ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

Prajwal Revanna Case: ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಹೀಗಾಗಿ ನನ್ನ ವಿರುದ್ಧ ಸುಳ್ಳು ಆಪಾದನೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM

on

DK Shivakumar
Koo

ಬೆಂಗಳೂರು: ನನಗೂ ಮತ್ತು ಹಾಸನ ಪೆನ್ ಡ್ರೈವ್ ಪ್ರಕರಣಕ್ಕೂ (Prajwal Revanna Case) ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಈಗ ಆಗಿರುವ ಡ್ಯಾಮೇಜ್ ನಿವಾರಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಆಪಾದಿಸಿದ್ದಾರೆ.

ಇದೇ ದೇವರಾಜೇಗೌಡ ಈ ಹಿಂದೆ ತಮ್ಮಲ್ಲಿ ಪೆನ್ ಡ್ರೈವ್ ಇರುವ ಬಗ್ಗೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಅದನ್ನು ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಅಪಾದನೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

ನಾನೀಗ ಬೆಂಗಳೂರಿಂದ ಹೊರಗೆ ಇದ್ದು, ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ವತಂತ್ರ ಮತ್ತು ನಿಷ್ಪಕ್ಷಪಾತದ ತನಿಖೆ: ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’’ ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ.
ಎಸ್‌ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್‌ಐಟಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು. ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

Continue Reading

ಕರ್ನಾಟಕ

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

108 Ambulance: ಬಿಜೆಪಿ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನು ಸರಿಪಡಿಸಲು ಸಿಬ್ಬಂದಿ ಸಹಕರಿಸಬೇಕು. ಅನಗತ್ಯವಾಗಿ ಸಿಬ್ಬಂದಿ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೂ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

VISTARANEWS.COM

on

108 Ambulance
Koo

ಬೆಂಗಳೂರು: 108 ಆರೋಗ್ಯ ಕವಚದ ಆಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ. ಅಂಬ್ಯುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನು ಸರ್ಕಾರ ನೀಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ. 108 ಅಂಬ್ಯುಲೆನ್ಸ್ ಯೋಜನೆ ಸುಗಮವಾಗಿ ನಡೆಸಲು ಆರ್ಥಿಕ ವರ್ಷ 2023-24ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 210.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು, ಸದರಿ ಅನುದಾನದಲ್ಲಿ ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ನಿಗದಿಯಾದ ರೂ. 162.40 ಕೋಟಿಗಳ ಪೂರ್ಣ ಅನುದಾನವನ್ನು ಸೇವಾದಾರರಿಗೆ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ 108-ಆರೋಗ್ಯ ಕವಚ ಯೋಜನೆಗೆ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 260.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ವಾರ್ಷಿಕ ರೂ. 162.40 ಕೋಟಿಗಳ ಅನುದಾನವನ್ನು ಬಿಡುಗಡೆಗೊಳಿಸಬೇಕಾಗಿರುತ್ತದೆ. ಆರೋಗ್ಯ ಇಲಾಖೆ ಹಾಗೂ ಇ.ಎಂ.ಆರ್‌.ಐ ಗ್ರೀನ್‌ ಹೆಲ್ತ್‌ ಸಂಸ್ಥೆಯವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ 711 ಆಂಬ್ಯುಲೆನ್ಸ್‌ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಸೇವೆ ಒದಗಿಸಿದ್ದಲ್ಲಿ ಪ್ರತಿ ತ್ರೈಮಾಸಿಕಕ್ಕೆ ರೂ. 40.60 ಕೋಟಿಗಳಂತೆ ವಾರ್ಷಿಕ ರೂ. 162.40 ಕೋಟಿಗಳ ಅನುದಾನವು ಬಿಡುಗಡೆಗೊಳಿಸಲಾಗುವುದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

ವಿಪಕ್ಷಗಳ ನಾಯಕರು ಅನಗತ್ಯವಾಗಿ ಗ್ಯಾರಂಟಿ ಯೋಜನೆಯಿಂದ ಹಣಕಾಸಿನ ತೊಂದರೆಯಾಗಿದೆ ಎಂದು 108 ಆರೋಗ್ಯ ಕವಚ ಯೋಜನೆಗೆ ತಳುಕು ಹಾಕುವುದರಲ್ಲಿ ಯಾವುದೇ ಹುರುಳಿಲ್ಲ ಎಂದು‌ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 108 ವ್ಯವಸ್ಥೆಯಲ್ಲಿ ಒಂದಿಷ್ಟು ಲೋಪದೋಷಗಳು ಆಗಿರುವುದು ನಿಜ. 108 ಸಿಬ್ಬಂದಿಗಳಿಗೆ ಕನಿಷ್ಠ ವೇತನದ ಜಾರಿಗೊಳಿಸಿದ್ದಲ್ಲದೇ ಸರ್ಕಾರದ ಅನುಮತಿ ಇಲ್ಲದೇ ನಿಯಮಬಾಹಿರವಾಗಿ ಶೇ.45 ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು. ಇದೀಗ 108 ಸಿಬ್ಬಂದಿಗಳು ಶೇ 45 ರಷ್ಟು ವೇತನ ಹೆಚ್ಚಳ ಮಾಡಿರುವುದನ್ನ ಕಡಿತಗೊಳಿಸದಂತೆ ಬೇಡಿಕೆ ಇಡುತ್ತಿದ್ದಾರೆ.

ನಮ್ಮ ಸರ್ಕಾರ ನಿಯಮಾನುಸಾರ ಕನಿಷ್ಠ ವೇತನ ನೀಡಲು ಬದ್ಧವಾಗಿದ್ದು, ಅದರಂತೆ ಅನುದಾನವನ್ನು ನೀಡುತ್ತಾ ಬಂದಿದೆ. ಪ್ರತಿಯೊಬ್ಬ ಆಂಬ್ಯುಲೆನ್ಸ್ ಚಾಲಕರಿಗೆ 35 ಸಾವಿರಕ್ಕೂ ಹೆಚ್ವು ವೇತನ ದೊರೆಯುತ್ತಿದೆ. ಇದರ ಮೇಲೂ ಮೂಲ ವೇತನದಲ್ಲಿ ಶೇ 45 ರಷ್ಟು ಹೆಚ್ಚಳ ಮಾಡುವ ಬಗ್ಗೆ ಸಿಬ್ಬಂದಿಗಳು ಬೇಡಿಕೆ ಇಟ್ಟಿದ್ದು, ನಿಯಮಬಾಹಿರವಾಗಿ ಈ ಕ್ರಮ ಕೈಗೊಳ್ಳಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಈ ಬಗ್ಗೆ 108 ಸಿಬ್ಬಂದಿಯನ್ನು ಕರೆದು ಚರ್ಚಿಸಿ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬದಲಾವಣೆ ಮಾಡಲು ಅವಕಾಶವಿಲ್ಲ ಎಂದು ಸಿಬ್ಬಂದಿಗಳಿಗೆ ತಿಳಿಸಲಾಗಿದೆ. ನ್ಯಾಯಯುತವಾಗ ಕನಿಷ್ಢ ವೇತನ ಸರ್ಕಾರ ನೀಡುತ್ತಿದ್ದು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಜಿವಿಕೆ ಇಎಂಆರ್ ಸಂಸ್ಥೆ ಹಾಗೂ ಚಾಲಕರ ನಡುವಿನ ವೇತನ ಪಾವತಿ ಸಮಸ್ಯೆಗಳ ಬಗ್ಗೆಯೂ ಸಂಸ್ಥೆಯವರೊಂದಿಗೆ ಇಲಾಖೆ ಆಯುಕ್ತರು ಚರ್ಚಿಸಿ, ವೇತನ ಬಾಕಿ ಉಳಿಸಿಕೊಳ್ಳದಂತೆ ಆದೇಶಿಸಿದ್ದಾರೆ. ಇದಕ್ಕೂ ಮೀರಿ 108 ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೆ ಸರ್ಕಾರ ಸಿದ್ಧವಿದೆ. 108 ಆಂಬ್ಯುಲೆನ್ಸ್ ಸೇವೆಯನ್ನು ನಿಲ್ಲಿಸಲು ಸಾಧ್ಯವಿಲ್ಲ. ಅನಿವಾರ್ಯವಾಗಿ ಸರ್ಕಾರ ಪರ್ಯಾಯ ವ್ಯವಸ್ಥೆಗೆ ಮುಂದಾಗಬೇಕಾಗಲಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

ಹಿಂದಿನ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನು ನಮ್ಮ ಸರ್ಕಾರ ಸರಿಪಡಿಸುತ್ತಿದೆ. ಟೆಂಡರ್‌ಗಳನ್ನು ಕರೆಯದೇ ಜಿವಿಕೆ ಇಎಂಆರ್ ಸಂಸ್ಥೆಯೊಂದಿಗೆ ಒಡಂಬಡಿಕೆಯ ಮೂಲಕವೇ 108 ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಸರ್ಕಾರ ಬಂದ ಬಳಿಕ ನಿಯಮನುಸಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತಿದೆ. ವ್ಯವಸ್ಥೆಯಲ್ಲಾದ‌ ಲೋಪಗಳನ್ನು ಸರಿಪಡಿಸುತ್ತಿರುವಾಗ ಸಿಬ್ಬಂದಿ ಸಹಕರಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

Continue Reading

ಹಾಸನ

Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

Prajwal Revanna Case: ಪ್ರಜ್ವಲ್‌ ವಿಡಿಯೊ ಪ್ರಕರಣ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ ಎಂದೂ ಸೂಚನೆಯನ್ನು ನೀಡಲಾಗಿದೆ.

VISTARANEWS.COM

on

Prajwal Revanna Case Delete vulgar video and avoid legal action says SIT chief
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ನಿಮ್ಮ ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿದೆಯೇ? ಇದ್ದರೆ ಅದು ದೊಡ್ಡ ಅಪರಾಧವಾಗಿದೆ. ಈಗಲೇ ಅದನ್ನು ಡಿಲೀಟ್‌ ಮಾಡಿಬಿಡಿ. ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ. ಈಗಾಗಲೇ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿದೆ. ಇನ್ನು ವಿಡಿಯೊದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಅವರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಹೀಗಾಗಿ ಈ ಕೇಸ್‌ ಮತ್ತಷ್ಟು ಜಟಿಲವಾಗಿದೆ.

ಈ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prajwal Revanna Case Delete vulgar video and avoid legal action says SIT chief

ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗಿ

ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading

ಕ್ರೈಂ

Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

Prajwal Revanna Case: ‌ವಕೀಲರು ಸೇರಿದಂತೆ ಯಾರೂ ಕೂಡಾ ಈ ಕೇಸ್‌ ಬಗ್ಗೆ ಬಹಿರಂಗವಾಗಿ ಮಾತನಾಡಬಾರದು. ಎಚ್‌.ಡಿ. ರೇವಣ್ಣ ಬಂಧನ ಹಾಗೂ ಮುಂದೆ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ಬಂಧನ ಮಾಡಿದ ನಂತರವೂ ಪ್ರತಿಭಟನೆಗಳನ್ನು ಮಾಡಬಾರದು. ಇನ್ನು ರೇವಣ್ಣ ಹಾಗೂ ಪ್ರಜ್ವಲ್ ಪರವಾಗಿ ಹೇಳಿಕೆಗಳನ್ನು ನೀಡಬಾರದು. ದೂರುದಾರರ ವಿರುದ್ಧ ಯಾವುದೇ ಬಹಿರಂಗ ಹೇಳಿಕೆಯನ್ನು ಸಹ ನೀಡಬಾರದು ಎಂದು ಎಚ್.ಡಿ. ದೇವೇಗೌಡರೇ ಕುಟುಂಬದವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

VISTARANEWS.COM

on

Prajwal Revanna Case HD Deve Gowda takes a big decision
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸದಲ್ಲಿ ನೀರವ ಮೌನ ಆವರಿಸಿದೆ. ರೇವಣ್ಣ ವಿಚಾರವಾಗಿ ಬಹಿರಂಗವಾಗಿ ಯಾರೂ ಮಾತನಾಡಬಾರದು ಎಂಬ ತೀರ್ಮಾನಕ್ಕೆ ಗೌಡರ ಕುಟುಂಬ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಕೆಲವೊಂದಿಷ್ಟು ಮಹತ್ವದ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

ವಕೀಲರು ಸೇರಿದಂತೆ ಯಾರೂ ಕೂಡಾ ಈ ಕೇಸ್‌ ಬಗ್ಗೆ ಬಹಿರಂಗವಾಗಿ ಮಾತನಾಡಬಾರದು. ಎಚ್‌.ಡಿ. ರೇವಣ್ಣ ಬಂಧನ ಹಾಗೂ ಮುಂದೆ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ಬಂಧನ ಮಾಡಿದ ನಂತರವೂ ಪ್ರತಿಭಟನೆಗಳನ್ನು ಮಾಡಬಾರದು. ಇನ್ನು ರೇವಣ್ಣ ಹಾಗೂ ಪ್ರಜ್ವಲ್ ಪರವಾಗಿ ಹೇಳಿಕೆಗಳನ್ನು ನೀಡಬಾರದು. ದೂರುದಾರರ ವಿರುದ್ಧ ಯಾವುದೇ ಬಹಿರಂಗ ಹೇಳಿಕೆಯನ್ನು ಸಹ ನೀಡಬಾರದು ಎಂದು ಎಚ್.ಡಿ. ದೇವೇಗೌಡರೇ ಕುಟುಂಬದವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮುಜುಗರದಲ್ಲಿ ಜೆಡಿಎಸ್‌ ಮುಖಂಡರು!

ಇನ್ನು ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊವುಳ್ಳ ಪೆನ್‌ಡ್ರೈವ್ ಪ್ರಕರಣದಿಂದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ಇನ್ನು ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲೇ ಎಚ್‌.ಡಿ. ರೇವಣ್ಣ ಬಂಧನಕ್ಕೊಳಗಾಗಿರುವು ಅವರಿಗೆ ಮತ್ತಷ್ಟು ಬೇಸರವನ್ನುಂಟು ಮಾಡಿದೆ.

ಇನ್ನು ಈವರೆಗೆ ಬೇರೆ ಎಂಥದ್ದೇ ರಾಜಕೀಯ ಪ್ರಕರಣವಾದರೂ ದೇವೇಗೌಡರ ಮನೆಯಲ್ಲಿ ಪಕ್ಷದ ನಾಯಕರು ಸೇರುತ್ತಿದ್ದರು. ಚುನಾವಣೆ ಗೆಲುವು, ಸೋಲು ಏನೇ ಇದ್ದರೂ ದೇವೇಗೌಡರ ಮನೆಯಲ್ಲಿ ಸೇರಲಾಗುತ್ತಿತ್ತು. ಆದರೆ, ಈ ಪ್ರಕರಣವು ಎಲ್ಲರನ್ನೂ ಇಕ್ಕಟ್ಟಿಗೆ ದೂಡಿದೆ. ಅಲ್ಲದೆ, ಈ ಪ್ರಕರಣವನ್ನು ಯಾವುದೇ ನಾಯಕರೂ ಸಮರ್ಥನೆ ಮಾಡಿಕೊಳ್ಳಲಾರದ ಪರಿಸ್ಥಿತಿಗೆ ಸಿಲುಕಿದ್ದಾರೆ.

ಸದ್ಯಕ್ಕೆ ಯಾವುದೇ ಶಾಸಕರಾಗಲೀ, ಮುಖಂಡರೇ ಆಗಲೀ ದೇವೇಗೌಡರ ಮನೆಯತ್ತ ಸುಳಿಯುತ್ತಿಲ್ಲ. ಖುದ್ದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ಮಾಧ್ಯಮದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಭಾನುವಾರ ರಾತ್ರಿ ಹೊತ್ತಿಗೆ ಕುಮಾರಸ್ವಾಮಿ, ಪುತ್ರಿಯರಾದ ಅನಸೂಯ, ಶೈಲಜಾ ಎಲ್ಲರೂ ಗೌಡರ ಮನೆಗೆ ಭೇಟಿ ನೀಡಿ ಹೋಗಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading
Advertisement
Bengaluru Rain
ಕರ್ನಾಟಕ2 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ2 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ2 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ2 hours ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ2 hours ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ3 hours ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ3 hours ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ3 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ3 hours ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ7 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ8 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ8 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ21 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌