Karnataka Assembly Session: ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ ಚರ್ಚೆಗೆ ಪ್ರತಿಪಕ್ಷಗಳ ಬಿಗಿ ಪಟ್ಟು: ಅಧಿವೇಶನ Live ಆಗಿ ನೋಡಿ - Vistara News

ರಾಜಕೀಯ

Karnataka Assembly Session: ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ ಚರ್ಚೆಗೆ ಪ್ರತಿಪಕ್ಷಗಳ ಬಿಗಿ ಪಟ್ಟು: ಅಧಿವೇಶನ Live ಆಗಿ ನೋಡಿ

Karnataka Assembly Session: ವಿಧಾನ ಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನದಲ್ಲಿ ಇಂದು ಕೂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಹಗರಣ ಸದ್ದು ಮಾಡಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಈಗಾಗಲೇ ಘೋಷಿಸಿದ್ದಾರೆ. ಹೀಗಾಗಿ ಕಾವೇರಿದ ಚರ್ಚೆ ನಡೆಯಲಿದ್ದು, ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ನೋಡಿ.

VISTARANEWS.COM


on

Karnataka Assembly Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನದಲ್ಲಿ (Karnataka Assembly Session) ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಹಗರಣ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಚರ್ಚೆ ನಡೆಸಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಪಟ್ಟು ಹಿಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ (R Ashok) ಈಗಾಗಲೇ ಘೋಷಿಸಿದ್ದು ಇಂದೂ ಉಭಯ ಸದನಗಳಲ್ಲಿ ಕೋಲಾಹಲ ಉಂಟಾಗುವ ಸಾಧ್ಯತೆ ಇದೆ.

ಈ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಬುಧವಾರ ರಾತ್ರಿ ವಿಧಾನಸೌಧದಲ್ಲೇ ಕಳೆದರು. ಸದನದ ಬಾವಿಯೊಳಗೇ ಹಾಡು, ಭಜನೆಯ ಮಾಡಿದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು, ಸ್ವಂತ ಖರ್ಚಿನಲ್ಲಿಯೇ ಊಟ ತರಿಸಿಕೊಂಡು ಊಟ ಮಾಡಿದರು. ಬಳಿಕ ಸೋಫಾ, ನೆಲದ ಮೇಲೆ ಮಲಗಿದರು.

ವಿಧಾನಸೌಧದಲ್ಲಿ ಸ್ಪೀಕರ್‌ ಊಟೋಪಚಾರವನ್ನು ತಿರಸ್ಕರಿಸಿದ ಪ್ರತಿಪಕ್ಷ ನಾಯಕರು, ಸ್ವಂತ ಖರ್ಚಿನಲ್ಲೇ ವಿಧಾನಸೌಧಕ್ಕೆ ಊಟ ತರಿಸಿಕೊಂಡು ಊಟ ಮಾಡಿದ್ದು, ಭ್ರಷ್ಟಾಚಾರದ ಹಣದಲ್ಲಿ ನಾವು ಊಟ ಮಾಡುವುದಿಲ್ಲ ಎಂದು ಅವರು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಶಾಸಕರಾದ ಸುರೇಶ್‌ ಕುಮಾರ್‌, ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿ ಹಲವು ನಾಯಕರು ಅಹೋರಾತ್ರಿ ಧರಣಿ ನಡೆಸಿದರು. ʼʼತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಧರಣಿ ನಿಲ್ಲುವುದಿಲ್ಲʼʼ ಎಂದು ಆರ್.‌ಅಶೋಕ್‌ ತಿಳಿಸಿದರು.

ಶಾಸಕ ಅರವಿಂದ್ ಬೆಲ್ಲದ್ ಪ್ರತಿಕ್ರಿಯಿಸಿ, ʼʼಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ಕಲ್ಪಿಸಬೇಕು. ಈ ವಿಚಾರವಾಗಿ ಸೋಮವಾರ ನಾವು ಬೆಂಗಳೂರಿನಿಂದ ಮೈಸೂರು ಮುಡಾವರೆಗೂ ಪಾದಯಾತ್ರೆ ಮಾಡುತ್ತೇವೆ. ಇದು ಬೃಹತ್ ಹಗರಣ, ಇದರ ಚರ್ಚೆ ಆಗಬೇಕುʼʼ ಎಂದು ಹೇಳಿದರು.

ಧರಣಿ ಮುಂದುವರಿಕೆಯ ಎಚ್ಚರಿಕೆ

ಎಂಎಎಲ್‌ಸಿ ರವಿಕುಮಾರ್ ಮಾತನಾಡಿ, ʼʼಸಿಎಂ ಸಿದ್ದರಾಮಯ್ಯ ಪ್ರಾಮಾಣಿಕರಲ್ಲ. ಎಸ್‌ಸಿ ವ್ಯಕ್ತಿಯ ಭೂಮಿ ಕಬಳಿಸಿದ್ದಾರೆ. ಇದರಲ್ಲಿ ಬೃಹತ್ ಹಗರಣ ನಡೆದಿದೆ. ನಿನ್ನೆ ಭಯಬಿದ್ದು ರಾಜಪಾಲರನ್ನ ಭೇಟಿಯಾಗಿದ್ದಾರೆ. ಇವತ್ತು ಕೂಡಾ ಚರ್ಚೆಗೆ ಅವಕಾಶ ಕೇಳ್ತೇವೆ. ನೀಡಲಿಲ್ಲ ಅಂದ್ರೆ ಧರಣಿ ಮುಂದುವರಿಸುತ್ತೇವೆʼʼ ಎಂದು ಸವಾಲು ಹಾಕಿದರು.

ಇದನ್ನೂ ಓದಿ: R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದೇನು?

ಬಿಜೆಪಿ ಆರೋಪದ ಬಗ್ಗೆ ಬುಧವಾರ ಪ್ರತಿಕ್ರಿಯಿಸಿದ್ದ ಸ್ಪೀಕರ್ ಯು.ಟಿ.ಖಾದರ್ ಅವರು, ʼʼಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಹಕ್ಕಿದೆ. ಅವರಲ್ಲಿ ನಾನು ಮನವಿ ಮಾಡಿದ್ದೇನೆ. ಆದರೂ ಧರಣಿಯನ್ನ ಮುಂದುವರಿಸಿದ್ದಾರೆ. ಅವರಿಗೆ ಬೇಕಾದ ವ್ಯವಸ್ಥೆ ಮಾಡಲಾಗುವುದು. ಬೆಡ್, ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ನೆಮ್ಮದಿಯಿಂದ ಧರಣಿ ಮಾಡಲಿʼʼ ಎಂದಿದ್ದರು. ಮೂಡಾ ಹಗರಣವನ್ನು ನಿಲುವಳಿಯಡಿ ಚರ್ಚೆ ನಡೆಸಲು ಅವಕಾಶ ಒದಗಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಾಗ, ʼʼನಿಯಮಾವಳಿಯಂತೆ ಸದನ ನಡೆಸಬೇಕು. ನೀವು ಹೇಳಿದ ತಕ್ಷಣ ಅವಕಾಶ ನೋಡಲು ಸಾಧ್ಯವಿಲ್ಲʼʼ ಎಂದು ಸ್ಪೀಕರ್ ತಿರುಗೇಟು ನೀಡಿದ್ದರು. ಒಟ್ಟಿನಲ್ಲಿ ಪ್ರತಿಪಕ್ಷಗಳು ಇಂದು ಕೂಡ ಈ ಬಗ್ಗೆ ಚರ್ಚೆ ನಡೆಸಲು ಪಟ್ಟು ಹಿಡಿಯುವುದು ಸ್ಪಷ್ಟವಾಗಿದ್ದು, ಸರ್ಕಾರದ ನಡೆ ಕುತೂಹಲ ಮೂಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

Pralhad Joshi: ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಾಗಿದೆ ಎಂದು ದೂರಿದ್ದಾರೆ.

VISTARANEWS.COM


on

1200 farmers suicides in last 15 months in Karnataka says Minister Pralhad Joshi Minister Pralhad Joshi alleges
Koo

ನವದೆಹಲಿ: ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ಉಜ್ವಲ ಭವಿಷ್ಯ ಇಲ್ಲದಾಗಿದೆ. ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿರುವುದು ದುರಂತ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದ್ದಾರೆ. ಅನ್ನದಾತರ ಜೀವನವನ್ನು ಸುಗಮವಾಗಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟ ಆಲಿಸದೇ ಸಾವಿಗೆ ಕಾರಣವಾಗುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಇದನ್ನೂ ಓದಿ: Pralhad joshi: ಎಸ್ಸಿ, ಎಸ್ಟಿ ಹಣ ದುರುಪಯೋಗ; ಸಿಎಂ ರಾಜೀನಾಮೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ, ಕಾಂಗ್ರೆಸ್ ಸರ್ಕಾರ ರೈತರಿಗಿತ್ತ ವರದಾನವೇ? ಎಂದು ಜೋಶಿ ಕಿಡಿ ಕಾರಿದ್ದಾರೆ.

ರೈತರ ಮನವಿ ಪತ್ರ ಕಸದ ಬುಟ್ಟಿಗೆ

ರಾಜ್ಯದ ರೈತರು ಸೂಕ್ತ ಬೆಳೆವಿಮೆ ಕಾಣಲಿಲ್ಲ. ಸಮರ್ಪಕ ಬೆಳೆ ಪರಿಹಾರವನ್ನೂ ಕಾಣಲಿಲ್ಲ. ರೈತರ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ನೀಡಿದ್ದ ಮನವಿ ಪತ್ರವೇ ಕಸದ ಬುಟ್ಟಿಗೆ ಸೇರಿಸಿತು. ಇಂಥ ರೈತ ವಿರೋಧಿ ಧೋರಣೆಯ ಕಾಂಗ್ರೆಸ್ ಆಡಳಿತದಲ್ಲಿ ರೈತರಿಗೆ ಉತ್ತಮ ಭವಿಷ್ಯವೇ ಇಲ್ಲವಾಗಿದೆ ಎಂದು ಪ್ರಲ್ಹಾದ ಜೋಶಿ “X” ಖಾತೆಯಲ್ಲಿ ಆತಂಕ ಹೊರ ಹಾಕಿದ್ದಾರೆ.

ನುಡಿದಂತೆ ನಡೆಯದ ಕಾಂಗ್ರೆಸ್

ನಾವು ಬಡವರ ಪರ, ಪರಿಶಿಷ್ಟರ ಪರ, ರೈತರ ಪರ ಎಂದು ಪರಿಪರಿಯಾಗಿ ಕಂತೆಪುರಾಣ ಹೇಳುವ ಕಾಂಗ್ರೆಸ್ ನುಡಿದಂತೆ ನಡೆಯದು. ಮಾತು ಉಳಿಸಿಕೊಳ್ಳುವ ಯೋಗ್ಯತೆ ಇಲ್ಲ ಎಂದು ಸಚಿವರು ಟೀಕಿಸಿದ್ದಾರೆ.

ಇದನ್ನೂ ಓದಿ: Fortis Hospital: ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಲಿವರ್‌ ದಾನ!

ರೈತರ ಮನವಿ ಪತ್ರವನ್ನು ಕಸದ ಬುಟ್ಟಿಗೆ ಎಸೆಯುವ ಇವರಿಗೆ ಅಧಿಕಾರದಲ್ಲಿ ಇರುವ ಅರ್ಹತೆಯೇ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ. ಈ ಕೂಡಲೇ ಸಿಎಂ ರಾಜಿನಾಮೆ ಕೊಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

Continue Reading

ಕರ್ನಾಟಕ

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

BJP Protest: ಕಾಂಗ್ರೆಸ್‌ ಸರ್ಕಾರ ದೊಡ್ಡ ಹಗರಣಗಳಲ್ಲಿ ಭಾಗಿಯಾಗಿರುವುದು ಜಗಜ್ಜಾಹೀರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲೂಟಿ ಮಾಡಿದ ಎರಡು ಹಗರಣಗಳು ಬೆಳಕಿಗೆ ಬಂದಿವೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ಹಾಗೂ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದರು.

VISTARANEWS.COM


on

BJP Protest
Koo

ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ (BJP Protest) ತಿಳಿಸಿದರು.

ಬಿಜೆಪಿ, ಜೆಡಿಎಸ್‌ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿ, ಕಾಂಗ್ರೆಸ್‌ ಸರ್ಕಾರ ದೊಡ್ಡ ಹಗರಣಗಳಲ್ಲಿ ಭಾಗಿಯಾಗಿರುವುದು ಜಗಜ್ಜಾಹೀರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲೂಟಿ ಮಾಡಿದ ಎರಡು ಹಗರಣಗಳು ಬೆಳಕಿಗೆ ಬಂದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಬಯಲಿಗೆ ಬಂದಿದೆ. ಸಿದ್ದರಾಮಯ್ಯನವರು ಪತ್ನಿಯ ಹೆಸರಲ್ಲಿ 14 ನಿವೇಶನ ಪಡೆದಿದ್ದರೆ, ಅವರ ಕುಟುಂಬದವರು ನೂರಾರು ಸೈಟುಗಳನ್ನು ಪಡೆದಿದ್ದಾರೆ. ಸಂವಿಧಾನ ರಕ್ಷಣೆ ಮಾಡುತ್ತೇನೆಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದವರೇ ಸಂವಿಧಾನವನ್ನು ಭಕ್ಷಣೆ ಮಾಡಿದ್ದಾರೆ ಎಂದು ದೂರಿದರು.

ಈ ಹಗರಣಗಳ ಕುರಿತು ಮಾತನಾಡಲು ಸದನದಲ್ಲಿ ಅವಕಾಶ ನೀಡಿಲ್ಲ. ಸ್ಪೀಕರ್‌ ಕೂಡ ಕಾಂಗ್ರೆಸ್‌ ಕಡೆ ವಾಲಿರುವುದು ಸ್ಪಷ್ಟವಾಗಿದೆ. ವಿರೋಧ ಪಕ್ಷಕ್ಕೆ ಪ್ರಶ್ನೆ ಮಾಡುವ ಅಧಿಕಾರ ಇದೆ. ಆದರೆ ಅದನ್ನು ಮೊಟಕುಗೊಳಿಸಿ, ದಾಖಲೆಗಳನ್ನು ಕೊಡುತ್ತೇವೆಂಬ ಭಯದಿಂದ ಆಡಳಿತ ಪಕ್ಷ ಪಲಾಯನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಡಾದಲ್ಲಿ ದಲಿತರ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಬಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೂಡ ದಲಿತರಿಗೆ ಸಂಬಂಧಿಸಿದೆ. ಇಷ್ಟೇ ಅಲ್ಲದೆ 25 ಸಾವಿರ ಕೋಟಿ ರೂಪಾಯಿಯನ್ನು ದಲಿತರಿಗೆ ನೀಡದೆ ಬೇರೆ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಇದಕ್ಕಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಈ ಬಗ್ಗೆ ರಾಜ್ಯಪಾಲರಿಗೆ ದೂರು ಹಾಗೂ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.

ಮುಖ್ಯಮಂತ್ರಿಯವರು ಪತ್ರಿಕಾಗೋಷ್ಠಿ ಬದಲು ಅಧಿವೇಶನದಲ್ಲೇ ದಾಖಲೆಗಳನ್ನು ನೀಡಲಿ. ಆಗ ನಾವು ಅಲ್ಲೇ ಪ್ರಶ್ನೆ ಕೇಳಬಹುದಿತ್ತು. ಅದನ್ನು ಬಿಟ್ಟು ಹೇಡಿಯಂತೆ ಪಲಾಯನ ಮಾಡಿದ್ದಾರೆ ಎಂದು ದೂರಿದರು.

ಇದನ್ನೂ ಓದಿ | Assembly session: ಐತಿಹಾಸಿಕ ಸ್ಥಳ, ಸ್ಮಾರಕ ವಿರೂಪಗೊಳಿಸಿದ್ರೆ ಜೈಲು ಫಿಕ್ಸ್‌; ಮಹತ್ವದ ಮಸೂದೆ ಪಾಸ್

Assembly session: ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ನಾಳೆ ಮುಗಿಯಬೇಕಿದ್ದ ಕಲಾಪ ಇಂದೇ ಮೊಟಕು!

Assembly session
Assembly session

ಬೆಂಗಳೂರು: ವಿಧಾನ ಮಂಡಲ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ನಾಳೆ (ಜು.26) ಮುಗಿಯಬೇಕಿದ್ದ ಅಧಿವೇಶನ (Assembly session) ಇಂದೇ ಮೊಟಕುಗೊಂಡಂತಾಗಿದೆ. 16ನೇ ವಿಧಾನ ಸಭೆಯ ನಾಲ್ಕನೇ ಅಧಿವೇಶನ 8 ದಿನಗಳ ಕಾಲ (37 ಗಂಟೆ, 30 ನಿಮಿಷ) ನಡೆದಿದ್ದು, ರಾಷ್ಟ್ರಗೀತೆಯೊಂದಿಗೆ ಅನಿರ್ಧಿಷ್ಟಾವಧಿಗೆ ಕಲಾಪ ಮುಂದೂಡಿಕೆಯಾಗಿದೆ.

ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ರಾಜಭವನಕ್ಕೆ ತೆರಳಲಿದರು. ಸ್ಪೀಕರ್ ನಡೆ ಕಾಂಗ್ರೆಸ್ ಕಡೆ ಎಂದು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ನಲ್ಲಿ ಭೇಟಿ ಮಾಡಿ ದೂರು ನೀಡಿದ ಬಿಜೆಪಿ-ಜೆಡಿಎಸ್ ನಿಯೋಗ, ಮುಡಾ ಹಗರಣ ವಿಚಾರ ಚರ್ಚೆಗೆ ನೀಡದ ಬಗ್ಗೆ ಹಾಗೂ ನಾಳೆಗೆ ಮುಗಿಯುವ ಅಧಿವೇಶನ ಇಂದೇ ಮೊಟಕುಗೊಳಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುವಂತೆ ಮನವಿ ಮಾಡಿದ್ದಾರೆ.

12 ವಿಧೇಯಕಗಳ ಅಂಗೀಕಾರ

16ನೇ ವಿಧಾನ ಸಭೆಯ 4ನೇ ಅಧಿವೇಶನದಲ್ಲಿ ಒಟ್ಟು 8 ದಿನಗಳ ಕಲಾಪ ನಡೆದಿದ್ದು, ಪೂರಕ ಅಂದಾಜುಗಳು, ಲೆಕ್ಕಪರಿಶೋಧಕರ ವರದಿ ಮಂಡನೆ ಮಾಡಲಾಗಿದೆ. ಭರವಸೆಗಳ ಸಮಿತಿ, ಕಾಗದ ಪತ್ರಗಳ ಸಮಿತಿ, ಅಂದಾಜು ಸಮಿತಿ, ಅನುಸೂಚಿತ ಜಾತಿ, ಅನುಸೂಚಿತ ಪಂಗಡ ಕಲ್ಯಾಣ ಸಮಿತಿ, ಅಲ್ಪಾಸಂಖ್ಯಾತ ಸಮಿತಿಯ ಮೊದಲ ವರದಿ ಮಂಡನೆ ಮಾಡಲಾಗಿದೆ.

ಇದನ್ನೂ ಓದಿ | Assembly session: ಪರಿಷತ್‌ನಲ್ಲೂ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಪಾಸ್; ಹೆಚ್ಚಲಿದೆ ಸಿನಿಮಾ ಟಿಕೆಟ್ ದರ, ಒಟಿಟಿ ಶುಲ್ಕ!

12 ವಿಧೇಯಕಗಳನ್ನು ಅಂಗೀಕಾರ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಗೆ ಒಪ್ಪಿಸಲಾಗಿದೆ. ನಿಯಮ 69 ಅಡಿಯಲ್ಲಿ 14 ಸೂಚನೆಗಳ ಅಂಗೀಕಾರ ಸಿಕ್ಕಿದ್ದು, 117 ಪ್ರಶ್ನೆಗಳಿಗೆ ಉತ್ತರ ಹಾಗೂ 1902 ಪ್ರಶ್ನೆಗಳಿಗೆ ಪೈಕಿ 1438 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 170 ಗಮನ ಸೆಳೆಯುವ ಸೂಚನೆ ಗಳಿಗೆ ಉತ್ತರ ನೀಡಲಾಗಿದೆ.

ನಾಲ್ಕು ನಿರ್ಣಯ ಪಾಸ್

  • ಒನ್ ನೆಷನ್-ಒನ್ ಎಲೆಕ್ಷನ್‌ಗೆ ವಿರೋಧ
  • ನೀಟ್ ಪರೀಕ್ಷೆ ರದ್ದು
  • 1971 ಜನಗಣತಿ ಆಧರಿಸಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ
  • ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳು ಪಾರಂಪರಿಕ ಅರಣ್ಯವಾಸಿಗಳ ಅಧಿನಿಯಮ 2006 ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮಾರ್ಪಾಡು ಮಾಡುವ ನಿರ್ಣಯ
Continue Reading

ರಾಜಕೀಯ

Lokayukta: ಲೋಕಾಯುಕ್ತ ಎಡಿಜಿಪಿಯಾಗಿ ಮನೀಶ್‌ ಕರ್ಬೀಕರ್‌, ಅಗ್ನಿಶಾಮಕ ದಳ ಡಿಜಿಪಿಯಾಗಿ ಪ್ರಶಾಂತ್ ಕುಮಾರ್ ಥಾಕೂರ್‌ ನೇಮಕ

Lokayukta: ಹಿರಿಯ ಐಪಿಎಸ್ ಅಧಿಕಾರಿಗಳಾದ ಮನೀಶ್‌ ಕರ್ಬೀಕರ್‌ ಮತ್ತು ಪ್ರಶಾಂತ್ ಕುಮಾರ್ ಥಾಕೂರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.‌

VISTARANEWS.COM


on

Lokayukta
ಲೋಕಾಯುಕ್ತ ನೂತನ ಎಡಿಜಿಪಿ ಮನೀಶ್‌ ಕರ್ಬೀಕರ್‌
Koo

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಗಳಾದ ಮನೀಶ್‌ ಕರ್ಬೀಕರ್‌ ಮತ್ತು ಪ್ರಶಾಂತ್ ಕುಮಾರ್ ಥಾಕೂರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.‌ ಸಿಐಡಿ ಎಡಿಜಿಪಿ (ಆರ್ಥಿಕ ಅಪರಾಧಗಳು) ಆಗಿದ್ದ ಮನೀಶ್‌ ಕರ್ಬೀಕರ್‌ ಅವರು ಲೋಕಾಯುಕ್ತ ಎಡಿಜಿಪಿಯಾಗಿ (Lokayukta) ನೇಮಕವಾಗಿದ್ದು, ಲೋಕಾಯುಕ್ತ ಡಿಜಿಪಿಯಾಗಿದ್ದ ಪ್ರಶಾಂತ್ ಕುಮಾರ್ ಥಾಕೂರ್ ಅವರು ಅಗ್ನಿಶಾಮಕ ದಳ ಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ.

ಮನೀಶ್‌ ಕರ್ಬೀಕರ್‌ ಅವರು ಸದ್ಯ ವಾಲ್ಮೀಕಿ ನಿಗಮದ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥರೂ ಆಗಿದ್ದಾರೆ. ಇವರು ಲೋಕಾಯುಕ್ತ ಎಡಿಜಿಪಿಯಾಗಿ ನೇಮಕವಾಗಿದ್ದರೂ ಕೂಡ ಎರಡೂ ಪ್ರಕರಣಗಳ ಎಸ್ಐಟಿ ಮುಖ್ಯಸ್ಥರಾಗಿ ಮುಂದುವರಿಯುವಂತೆ ಸೂಚಿಸಲಾಗಿದೆ.

ಇನ್ನು ಲೋಕಾಯುಕ್ತ ಡಿಜಿಪಿಯಾಗಿದ್ದ ಪ್ರಶಾಂತ್ ಠಾಕೂರ್ ಅವರನ್ನು ಅಗ್ನಿಶಾಮಕ ದಳ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅಗ್ನಿಶಾಮಕ ದಳ ಡಿಜಿಪಿ ಹಾಗೂ ಮಹಾ ನಿರ್ದೇಶಕರಾಗಿದ್ದ ಮಾಲಿನಿ ಕೃಷ್ಣಮೂರ್ತಿ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.

ಇದನ್ನೂ ಓದಿ | NEET UG 2024: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್‌ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?

ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ

ಬೆಂಗಳೂರು: ಕೇಂದ್ರ ಸರ್ಕಾರದ ನೀಟ್ ಪರೀಕ್ಷಾ ವ್ಯವಸ್ಥೆ, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ರಾಜ್ಯ ಸರ್ಕಾರ ಮಂಡಿಸಿರುವ ನಿರ್ಣಯ ವಿಧಾನಮಂಡಲದ ಉಭಯ ಸದನಗಳಲ್ಲಿ (Assembly session) ಅಂಗೀಕಾರವಾಗಿದೆ. ಕೇಂದ್ರ ಸರ್ಕಾರದ ನೀಟ್‌ ಪರೀಕ್ಷೆ, ಒಂದು ದೇಶ-ಒಂದು ಎಲೆಕ್ಷನ್‌ ತೀರ್ಮಾನಗಳನ್ನು ವಿರೋಧಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇದೀಗ ಅಧಿವೇಶನದಲ್ಲಿ ರಾಜ್ಯ ಸರ್ಕಾರ ನಿರ್ಣಯ ಮಂಡಿಸಿ, ಅಂಗೀಕಾರ ಪಡೆದಿದೆ.

ವಿಧಾನ ಸಭೆಯಲ್ಲಿ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ನೀಟ್ ರದ್ದು ನಿರ್ಣಯ ಮಂಡನೆ ಮಾಡಿದ್ದು, ವಿಧಾನ ಪರಿಷತ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಂಡಿಸಿದರು. ಇನ್ನು ವಿಧಾನ ಸಭೆಯಲ್ಲಿ ಒನ್ ನೇಷನ್- ಒನ್ ಎಲೆಕ್ಷನ್ ವಿರುದ್ಧದ ನಿರ್ಣಯವನ್ನು ಸಚಿವ ಎಚ್‌.ಕೆ. ಪಾಟೀಲ್, ವಿಧಾನ ಪರಿಷತ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದರು. ಉಭಯ ಸದನಗಳಲ್ಲೂ ನಿರ್ಣಯಗಳು ಅಂಗೀಕಾರವಾಗಿವೆ.

ಒನ್ ನೇಷನ್, ಒನ್ ಎಲೆಕ್ಷನ್ ವಿರುದ್ಧವಾಗಿ ವಿಧಾನಪರಿಷತ್‌ನಲ್ಲಿ ನಿರ್ಣಯ ಮಂಡನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ರೀತಿಯ ಚುನಾವಣೆಗೆ ನಮ್ಮ ವಿರೋಧ ಇದೆ. ಒಂದು ದೇಶ, ಒಂದು ಚುನಾವಣೆಯಿಂದ ಪ್ರಜಾಪ್ರಭುತ್ವಕ್ಕೆ ಮಾರಕ. ಏಕರೂಪ ಚುನಾವಣೆ ರಾಷ್ಟ್ರೀಯವಾಗಿ ಸಮಸ್ಯೆ ಆಗಲಿದೆ. ಸ್ಥಳೀಯವಾಗಿ ಹಲವು ತಾಂತ್ರಿಕ ಸಮಸ್ಯೆ ಆಗಲಿದೆ. ಇದನ್ನು ಅನುಷ್ಠಾನ ಮಾಡಬಾರದು ಅಂತ‌ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಅಂತ ಸದಸ್ಯರಿಗೆ ಮನವಿ ಮಾಡಿದರು.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET) ರದ್ದುಗೊಳಿಸಬೇಕು ಎಂದು ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಆಗ್ರಹ ಕೇಳಿಬರುತ್ತಿದೆ. ಅದರಲ್ಲೂ, ನೀಟ್‌ ಯುಜಿ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾದ ಬಳಿಕ ಆಗ್ರಹ ಹೆಚ್ಚಾಗಿದೆ. ಇದರ ಬೆನ್ನಲ್ಲೇ, ಕರ್ನಾಟಕದಲ್ಲೂ ನೀಟ್‌ ಪರೀಕ್ಷೆ ಸೇರಿ ಕೇಂದ್ರ ಸರ್ಕಾರದ ಮೂರು ತೀರ್ಮಾನಗಳನ್ನು ವಿರೋಧಿಸುವ ಕುರಿತು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು,.

ನೀಟ್‌ ಪರೀಕ್ಷೆ ಬದಲು ಹಳೆಯ ಪ್ರವೇಶ ಪರೀಕ್ಷೆ ವ್ಯವಸ್ಥೆಗೆ ಮರಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯವು ತನ್ನದೇ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಈ ಮೂಲಕ ತಮಿಳುನಾಡಿನಂತೆಯೇ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶವನ್ನು ನಡೆಸಲು ಚಿಂತನೆ ನಡೆಸಿದೆ.

Continue Reading

ದೇಶ

BJP: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಗೂ ಮೊದಲು ಕಾರ್ಯಕಾರಿ ಅಧ್ಯಕ್ಷರ ನೇಮಕ; ಶೀಘ್ರದಲ್ಲೇ ಆದೇಶ?

BJP: ಜೆ.ಪಿ. ನಡ್ಡಾ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಆರೋಗ್ಯ ಖಾತೆಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಗಳನ್ನೂ ನೀಡಲಾಗಿದೆ. ಈಗಾಗಲೇ ಎರಡು ಬಾರಿ ಅವಧಿ ವಿಸ್ತರಣೆಯಾದ ಕಾರಣ ಈ ಬಾರಿ ಜೆ.ಪಿ.ನಡ್ಡಾ ಅವರ ಬದಲಿಗೆ ಬೇರೆಯವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿದೆ. ಆದರೆ, ಇದಕ್ಕೂ ಮೊದಲೇ ಕಾರ್ಯಕಾರಿ ಅಧ್ಯಕ್ಷರನ್ನು ನೇಮಿಸಲಾಗುತ್ತದೆ ಎಂದು ತಿಳಿದುಬಂದಿದೆ.

VISTARANEWS.COM


on

BJP
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಕ್ತಾಯಗೊಂಡಿದ್ದು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರವೇ ಅಧಿಕಾರಕ್ಕೆ ಬಂದಿದೆ. ಇನ್ನು, ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರ ಅಧಿಕಾರದ ಅವಧಿಯು ಕಳೆದ ಜೂನ್‌ನಲ್ಲಿಯೇ ಮುಗಿದಿದೆ. ಅವರನ್ನು ಡಿಸೆಂಬರ್‌ವರೆಗೆ ಮುಂದುವರಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಇದರ ಮಧ್ಯೆಯೇ, ಆಗಸ್ಟ್‌ ಅಂತ್ಯದ ವೇಳೆಗೆ ಬಿಜೆಪಿ ನೂತನ ಕಾರ್ಯಕಾರಿ ಅಧ್ಯಕ್ಷರನ್ನು ನೇಮಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ಸಂಸತ್‌ ಭವನದಲ್ಲಿ ಬುಧವಾರ (ಜುಲೈ 24) ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಜೆ.ಪಿ.ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಮಹತ್ವದ ಸಭೆ ನಡೆಸಿದ್ದು, ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಗೂ ಮೊದಲು, ಕಾರ್ಯಕಾರಿ ಅಧ್ಯಕ್ಷರನ್ನು ನೇಮಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಸುಮಾರು ಎರಡು ಗಂಟೆ ಸಭೆ ನಡೆದಿದ್ದು, ಯಾರನ್ನು ಆಯ್ಕೆ ಮಾಡಲಿದ್ದಾರೆ ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ.

JP Nadda
JP Nadda

ಅಮಿತ್‌ ಶಾ ಅವರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ಜೆ.ಪಿ.ನಡ್ಡಾ ಅವರು ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅಮಿತ್‌ ಶಾ ಅವರ ಅಧಿಕಾರದ ಅವಧಿ ಮುಗಿದ ಬಳಿಕ ನಡ್ಡಾ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಈಗಲೂ ಅಷ್ಟೇ, ನಡ್ಡಾ ಅಧಿಕಾರದ ಅವಧಿ ಮುಗಿಯುವ ಮೊದಲು ಕಾರ್ಯಕಾರಿ ಅಧ್ಯಕ್ಷರನ್ನು ನೇಮಿಸಿ, ಅವರಿಗೆ ರಾಷ್ಟ್ರೀಯ ಅಧ್ಯಕ್ಷರ ಹುದ್ದೆಯ ಜವಾಬ್ದಾರಿ, ಆಡಳಿತ ಸೇರಿ ಹಲವು ಮಾರ್ಗದರ್ಶನ ನೀಡಲಾಗುತ್ತದೆ. ಬಳಿಕ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂದು ತಿಳಿದುಬಂದಿದೆ.

2019ರಲ್ಲಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಕೇಂದ್ರ ಸಚಿವರಾದಾಗ ಜೆಪಿ ನಡ್ಡಾ ಬಿಜೆಪಿ ಕಾರ್ಯಕಾರಿ ಅಧ್ಯಕ್ಷರಾಗಿ ಜವಾಬ್ದಾರಿ ಪ್ರಾರಂಭಿಸಿದರು. ನಡ್ಡಾ 2020ರಲ್ಲಿ ಪೂರ್ಣ ಸಮಯದ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದರು. 2023ರ ಜನವರಿಯಲ್ಲಿ ಜೆ.ಪಿ.ನಡ್ಡಾ ಅವರ ಮೊದಲ ಅವಧಿಯು ಮುಕ್ತಾಯಗೊಂಡಿತ್ತು. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅವರ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು. 2024ರ ಫೆಬ್ರವರಿಯಲ್ಲೂ ಜೂನ್‌ವರೆಗೆ ಜೆ.ಪಿ.ನಡ್ಡಾ ಅವರ ಅಧಿಕಾರದ ಅವಧಿಯನ್ನು ವಿಸ್ತರಿಸಲಾಗಿತ್ತು.

ಇದನ್ನೂ ಓದಿ: CM Siddaramaiah: ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಸಿಎಂ ಸಿದ್ದರಾಮಯ್ಯ

Continue Reading
Advertisement
NEET UG 2024
ದೇಶ1 hour ago

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

V Sumangala
ಕರ್ನಾಟಕ2 hours ago

V Sumangala: ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು!

Sri lanka Team
ಕ್ರೀಡೆ2 hours ago

Sri lanka Team: ಟಿ20 ಸರಣಿ ಆರಂಭಕ್ಕೂ ಮುನ್ನವೇ ಲಂಕಾಗೆ ಗಾಯದ ಬರೆ; ಇಬ್ಬರು ವೇಗಿಗಳು ಔಟ್​

HD Deve Gowda
ದೇಶ3 hours ago

HD Deve Gowda: ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾದ ದೇವೇಗೌಡ; ಇಲ್ಲಿವೆ ಫೋಟೊಗಳು

Team India
ಕ್ರೀಡೆ4 hours ago

Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

Atal Setu
ಪ್ರಮುಖ ಸುದ್ದಿ4 hours ago

Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Health Minister Dinesh Gundurao instructs to send a team of deputy directors to dengue hot spots
ಕರ್ನಾಟಕ4 hours ago

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Media Connect Founder and ceo Dr Divya Rangenahalli honored at Chess Festival in bengaluru
ಬೆಂಗಳೂರು4 hours ago

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

1200 farmers suicides in last 15 months in Karnataka says Minister Pralhad Joshi Minister Pralhad Joshi alleges
ಕರ್ನಾಟಕ4 hours ago

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

BJP Protest
ಕರ್ನಾಟಕ4 hours ago

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್12 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ12 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ13 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌