Karnataka Budget 2023: ನಮ್ಮದು ರೈತ ಪರ ಸರ್ಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - Vistara News

ಪ್ರಮುಖ ಸುದ್ದಿ

Karnataka Budget 2023: ನಮ್ಮದು ರೈತ ಪರ ಸರ್ಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಅನುದಾನವನ್ನು ನಿಗದಿಗಿಂತಲೂ ಹೆಚ್ಚಾಗಿ ಬಳಸಿದ್ದೇವೆ, ಹಾಗಾಗಿ ಎಲ್ಲರನ್ನೂ ಒಳಗೊಳ್ಳುವ ಬಜೆಟ್‌ (Karnataka Budget 2023) ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

karnataka-budget-2023-Basavaraja bommai pressmeet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೈತರ ಸಮಸ್ಯೆಗಳನ್ನು ಮನಗಂಡು ಪರಿಹಾರ ನೀಡುವ ಯೋಜನೆಗಳನ್ನು ಆಯವ್ಯಯದಲ್ಲಿ ಘೋಷಿಸಿರುವುದು ನಮ್ಮ ಸರ್ಕಾರ ರೈತರ ಪರವಾಗಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2023-24 ರ ಆಯವ್ಯಯ ಕುರಿತಂತೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕೃಷಿಗೆ ರೈತರ ಸಾಲದ ಮಿತಿಯನ್ನು 3 ರಿಂದ 5ಲಕ್ಷದ ವರೆಗೂ ಶೂನ್ಯ ಬಡ್ಡಿದರದಲ್ಲಿ ಸಾಲದಲ್ಲಿ ಹೆಚ್ಚಳವಾಗದಿದ್ದು 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ ಲಾಭವಾಗಲಿದೆ. ಇನ್ನು ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆಯುವ ಅಗತ್ಯವಿಲ್ಲ. ಅಗತ್ಯವಿದ್ದಾಗ ಬೀಜ ಗೊಬ್ಬರ ಖರೀದಿಗೆ ಭೂಸಿರಿ ಎಂಬ ಯೋಜನೆಯಡಿ 10ಸಾವಿರ ರೂ. ನೀಡಲಾಗುವುದು. 2500 ರೂ.ರಾಜ್ಯ ಸರ್ಕಾರ, 7500 ರೂ. ನಬಾರ್ಡ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುವುದು ಎಂದರು.

ರೈತ ಯಾವುದೇ ಕಾರಣದಿಮದ ಸಾವನ್ನಪ್ಪಿದರೆ ಅವನ ಕುಟುಂಬಕ್ಕೆ ತೊಂದರೆಯಾದಬಾರದೆಂದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಜೀವನ ಜ್ಯೋತಿ ಜೀವ ವಿಮೆ ಯೋಜನೆ ಘೋಷಣೆಯಾಗಿದೆ. ಸಹಜವಾಗಿ ತೀರಿಕೊಂಡರೂ 2 ಲಕ್ಷ ರೂ.ಗಳು ಅವರ ಕುಟುಂಬಕ್ಕೆ ದೊರೆಯುತ್ತದೆ. ರೈತರಿಗೆ 180 ಕೋಟಿ ರೂ.ಗಳ ವೆಚ್ಚದ ಯೋಜನೆ ಇದಾಗಿದ್ದು, 53 ಲಕ್ಷ ರೈತರಿಗೆ ಇದರಿಂದ ಅನುಕೂಲವಾಗಿದೆ. ರೈತರಿಗೆ ಬೆಲೆ ಕುಸಿತ ಆದಾಗ ಸಮಸ್ಯೆಯಾಗದಂತೆ ಆವರ್ತ ನಿಧಿ 3500 ಕೋಟಿ ಮೀಸಲಿಡಲಾಗಿದೆ. .ಅತಿ ಹೆಚ್ಚು ಹಣ ಆವರ್ತ ನಿಧಿಗೆ ನೀಡಿರುವುದು ಒಂದು ದಾಖಲೆ. ನೀರಾವರಿಗೆ 25000 ಕೋಟಿ ರೂ.ಒದಗಿಸಲಾಗಿದೆ ಎಂದರು.

ಸರ್ಕಾರಿ ಪಿಯುಸಿ ಮತ್ತು ಪದವಿ ಕಾಲೇಜಿನಲ್ಲಿ ಓದುವ ಮಕ್ಕಳಿಗೆ ಶುಲ್ಕ ಸಂಪೂರ್ಣ ವಿನಾಯ್ತಿ ನೀಡಲಾಗಿದೆ. 8 ಲಕ್ಷ‌ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಇದರಿಂದ ಲಾಭವಾಗಲಿದೆ. ಬಡವರ ಮಕ್ಕಳಿಗೆ ಶುಲ್ಕ ಕಟ್ಟಲು ಹಣ ಇಲ್ಲದೆ ಕಾಲೇಜು ಬಿಟ್ಟ ಪರಿಸ್ಥಿತಿ ಇರಬಾರದು ಎಂದು ಈ ಯೋಜನೆಯನ್ನು ತರಲಾಗಿದೆ ಎಂದರು.

ಘೋಷಿತ ಕಾರ್ಯಕ್ರಮಗಳ ಅನುಷ್ಠಾನ

100 ಎಸ್ ಸಿ ಎಸ್ ಟಿ ಹಾಸ್ಟೆಲ್ ಗಳು, 50 ಓಬಿಸಿ ಹಾಸ್ಟೆಲ್, 5 ಮೆಗಾ ಹಾಸ್ಟೆಲ್ ಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ವಸತಿ ಶಾಲೆಗಳ ಅಭಿವೃದ್ದಿ, ಹೊಸ ಶಾಲೆಗಳ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲಾಗುವುದು. ಹಿಂದುಳಿದ ವರ್ಗದ ಮಕ್ಕಳಿಗೆ ಹೆಚ್ಚವರಿಯಾಗಿ ವಿದ್ಯಾ ಸಿರಿ ಯೋಜನೆ ನೀಡಲಾಗುತ್ತಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಾರ್ಷಿಕ 15000 ನೀಡಲಾಗುತ್ತಿದೆ. ಕಳೆದ ಬಾರಿ ಬಜೆಟ್ ನಲ್ಲಿ ಮೀಸಲಿಟ್ಟಿದ್ದಕ್ಕಿಂತ ಹೆಚ್ಚಿನ ಹಣ ಖರ್ಚು ಮಾಡಿದ್ದೇವೆ. ಹಣ ಮೀಸಲಿಡುವುದಷ್ಟೆ ಅಲ್ಲ. ಅನುಷ್ಠಾನ ಮಾಡುವ ಕೆಲಸವನ್ನೂ ನಾವು ಮಾಡುತ್ತಿದ್ದೇವೆ. ಕೇವಲ ಬಜೆಟ್ ಘೋಷಣೆಯಲ್ಲಿ, ಘೋಷಣೆಗಳನ್ನು ವಾಸ್ತವದಲ್ಲಿ ಅನುಷ್ಠಾನಗೊಳಿಸುತ್ತಿರುವ ಸರ್ಕಾರ ನಮ್ಮದು ಎಂದರು.

ಅಸಂಘಟಿತ ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ :

ಎಸ್ಸಿ ಎಸ್ಟಿ ಗುತ್ತಿಗೆ ಮೊತ್ತವನ್ನು 1 ಕೊಟಿ ರೂ.ಗೆ ಹೆಚ್ಚಳ

ಎಸ್ಸಿಪಿ ಟಿಎಸ್ ಪಿ ಯೋಜನೆಯಲ್ಲಿ ತಾಂತ್ರಿಕ ತೊಂದರೆ, 7ಡಿ ಕಾಯ್ದೆಗೆ ತಿದ್ದುಪಡಿ, ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಕ್ರಮ, ಎಸ್ಸಿ ಎಸ್ಟಿ ಗುತ್ತಿಗೆ ಮೊತ್ತವನ್ನು 1 ಕೊಟಿ ರೂ.ಗೆ ಹೆಚ್ಚಳ ಮಾಡಲಾಗುವುದು. ಸಾಮಾಜಿಕ ವಲಯ, ಮೂಲ ಸೌಕರ್ಯ, ಆರ್ಥಿಕ ನಿರ್ವಹಣೆ ಚೆನ್ನಾಗಿ ಮಾಡಿದ್ದೇವೆ‌. ಜಿಎಸ್ ಟಿ ಜಾರಿಯಾಗುವ ಮುಂಚಿನ ಪ್ರಕರಣಗಳಿಗೆ ಒಂದೇ ಬಾರಿ ಸೆಟಲ್ ಮೆಂಟ್ ಮಾಡಿಕೊಳ್ಳಲು ಪ್ರೀ ಜಿಎಸ್ ಟಿ ರೆಜಿಮ್ ಗೆ ಅವಕಾಶ ನೀಡಲಾಗಿದೆ ಎಂದರು.

ಕಲ್ಯಾಣ ಕರ್ನಾಟಕದಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತು

ಕಲ್ಯಾಣ ಕರ್ನಾಟಕದಲ್ಲಿ ಎರಡು ಪ್ರಮಾಣದ ಮೂಲಭೂತ ಸೌಕರ್ಯಗಳಿವೆ. ಮಾನವ ಮೂಲಭೂತ ಸೌಕರ್ಯಗಳಾದ ಶಾಲಾ ಆಸ್ಪತ್ರೆಗಳು, ಮಕ್ಕಳ ಪೌಷ್ಠಿಕ ಆಹಾರ ಮತ್ತು ದೊಡ್ಡ ಪ್ರಮಾಣ ಮೂಲಭೂತಸೌಕರ್ಯಗಳಾದ ರೈಲ್ವೆ, ರಸ್ತೆ, ವಿಮಾನ ನಿಲ್ದಾಣ, ವಿಶ್ವವಿದ್ಯಾಲಯಗಳು, ಕೈಗಾರಿಕೆ ಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IPL 2024 : ಡಿಆರ್​ಎಸ್ ಅಕ್ರಮ; ಟಿಮ್ ಡೇವಿಡ್, ಕೀರನ್ ಪೊಲಾರ್ಡ್​ಗೆ ದಂಡ

IPL 2024: ಈ ವಾರದ ಆರಂಭದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಿಬಿಕೆಎಸ್ ನಡುವೆ ನಿಕಟ ಥ್ರಿಲ್ಲರ್ ಮುಖಾಮುಖಿಯಲ್ಲಿ ಯುವ ಆಟಗಾರ ಅಶುತೋಷ್ ಶರ್ಮಾ ಕ್ರೀಸ್​ನಲ್ಲಿ ತಮ್ಮ ಪ್ರತಿಭೆಯಿಂದ ಮುಂಬೈ ಇಂಡಿಯನ್ಸ್ ಅನ್ನು ಮೀರಿಸಿದ್ದರು. ಆದರೆ ಅಂತಿಮವಾಗಿ ಪಂದ್ಯವನ್ನು ಮುಂಬೈ ತಂಡ 9 ರನ್​ಗಳಿಂದ ಗೆದ್ದಿತ್ತು.

VISTARANEWS.COM


on

IPL 2024
Koo

ಬೆಂಗಳೂರು: ಮುಂಬೈ ಇಂಡಿಯನ್ಸ್ ತಂಡದ ಸದಸ್ಯರಾದ ಟಿಮ್ ಡೇವಿಡ್ ಮತ್ತು ಕೀರನ್ ಪೊಲಾರ್ಡ್ ಇತ್ತೀಚೆಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್​​ ಪಂದ್ಯದ (IPL 2024) ವೇಳೆ ಡಿಆರ್​ಎಸ್​ ಅಕ್ರಮ ಎಸಗಿ ಐಪಿಎಲ್​​ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ದಂಡ ಪಾವತಿ ಮಾಡುವಂತಾಗಿದೆ. ಅವರಿಬ್ಬರೂ ಡಗ್​ಔಟ್​ನಲ್ಲಿ ಕುಳಿತು ಸೂರ್ಯಕುಮಾರ್ ಯಾದವ್​ಗೆ ಡಿಆರ್​ಎಸ್​​ ರೆಫರ್ ಮಾಡಲು ಸಹಾಯ ಮಾಡಿದ್ದರು. ಇದು ನಿಯಮ ಉಲ್ಲಂಘನೆಯಾಗಿದೆ.

ಈ ವಾರದ ಆರಂಭದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಿಬಿಕೆಎಸ್ ನಡುವೆ ನಿಕಟ ಥ್ರಿಲ್ಲರ್ ಮುಖಾಮುಖಿಯಲ್ಲಿ ಯುವ ಆಟಗಾರ ಅಶುತೋಷ್ ಶರ್ಮಾ ಕ್ರೀಸ್​ನಲ್ಲಿ ತಮ್ಮ ಪ್ರತಿಭೆಯಿಂದ ಮುಂಬೈ ಇಂಡಿಯನ್ಸ್ ಅನ್ನು ಮೀರಿಸಿದ್ದರು. ಆದರೆ ಅಂತಿಮವಾಗಿ ಪಂದ್ಯವನ್ನು ಮುಂಬೈ ತಂಡ 9 ರನ್​ಗಳಿಂದ ಗೆದ್ದಿತ್ತು.

ಪಿಬಿಕೆಎಸ್ ವಿರುದ್ಧ ಮೋಸ ಮಾಡಿದೆಯೇ ಮುಂಬಯಿ?

ಮೊದಲ ಇನ್ನಿಂಗ್ಸ್​​ನ 15 ನೇ ಓವರ್​ನಲ್ಲಿ ಅರ್ಶ್​ದೀಪ್​ ಸಿಂಗ್ ಅವರ ವೈಡ್ ಯಾರ್ಕರ್ ಅನ್ನು ಸರಿಯಾದ ಎಸೆತ ಎಂದು ಅಂಪೈರ್​ ಪರಿಗಣಿಸಿದ್ದರು. ಆದರೆ ಡಗೌಟ್​ನಿಂದ ಪೊಲಾರ್ಡ್ ಹಾಗೂ ಡೇವಿಡ್​ ನೆರವು ನೀಡಿದ ಕಾರಣ ಸೂರ್ಯಕುಮಾರ್​ ಡಿಆರ್​​ಎಸ್ ತೆಗೆದುಕೊಂಡರು.

ಟಿಮ್ ಡೇವಿಡ್ ಮತ್ತು ಕೀರನ್ ಪೊಲಾರ್ಡ್ ಇದು ನಿಜವಾಗಿಯೂ ವೈಡ್ ಎಸೆತ ಮತ್ತು ಸೂರ್ಯ ಡಿಆರ್​​ಎಸ್​ ತೆಗೆದುಕೊಳ್ಳಬೇಕು ಎಂದು ಮಾಡಿದ್ದರು. ಮೂರನೇ ಅಂಪೈರ್​​ ವೀಡಿಯೊ ಪರಿಶೀಲನೆ ಮಾಡಿ ಆನ್​ಫೀಲ್ಡ್ ಅಂಪೈರ್​​​ ನಿರ್ಧಾರವನ್ನು ರದ್ದುಗೊಳಿಸಿದ್ದರು.

ಇದನ್ನೂ ಓದಿ :MS Dhoni : ಧೋನಿ ಮುಟ್ಟಿದ್ದೆಲ್ಲ ದಾಖಲೆ, ಲಕ್ನೊ ವಿರುದ್ಧವೂ ಮತ್ತೊಂದು ರೆಕಾರ್ಡ್​​

ಈ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಶೀಲನೆಯ ನಂತರ, ಐಪಿಎಲ್ ಅಧಿಕಾರಿಗಳು ಲೀಗ್​ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಡೇವಿಡ್ ಮತ್ತು ಪೊಲಾರ್ಡ್​ಗೆ ದಂಡ ವಿಧಿಸಿದ್ದಾರೆ. ಇವರಿಬ್ಬರು ಆಟದ ಸ್ಫೂರ್ತಿಯಾಗಿರುವ ಉಲ್ಲಂಘನೆಯನ್ನು ಹೇಳುವ ಆರ್ಟಿಕಲ್ 2.20 ಅನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.

ಐಪಿಎಲ್ ಅಧಿಕಾರಿಗಳು ತಮ್ಮ ಹೇಳಿಕೆಯಲ್ಲಿ ಈ ಘಟನೆಯನ್ನು ನಿರ್ದಿಷ್ಟಪಡಿಸದಿದ್ದರೂ, ಇದು ಅಂತರ್ಜಾಲದಲ್ಲಿ ಉಂಟಾದ ಕೋಲಾಹಲವನ್ನು ಗಮನಿಸಿದರೆ ವೈಡ್ ಕಾಲ್ ಘಟನೆಗೆ ಸಂಬಂಧಿಸಿದೆ ಎಂಬುದು ಸ್ಪಷ್ಟವಾಗಿದೆ. ಟಿಮ್ ಡೇವಿಡ್ ಮತ್ತು ಕೀರನ್ ಪೊಲಾರ್ಡ್ ಇಬ್ಬರೂ ಲೆವೆಲ್ 1 ಉಲ್ಲಂಘನೆಯ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ ಮತ್ತು ಅವರ ಪಂದ್ಯದ ಶುಲ್ಕದ 20% ಅನ್ನು ದಂಡವಾಗಿ ಪಾವತಿಸಲು ಆದೇಶಿಸಲಾಗಿದೆ.

Continue Reading

ಕ್ರಿಕೆಟ್

KKR vs RCB: ತವರಿನ ಸೋಲಿಗೆ ಸೇಡು ತೀರಿಸೀತೇ ಆರ್​ಸಿಬಿ?

KKR vs RCB: 2017ರಲ್ಲಿ ಕೆಕೆಆರ್​ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್​ ಆಗಿತ್ತು. ಈ ವರೆಗೆ ಆರ್​ಸಿಬಿ ಮತ್ತು ಕೆಕೆಆರ್​ ಐಪಿಎಲ್​ನಲ್ಲಿ 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 14 ಗೆಲುವು ಕೆಕೆಆರ್​ 19 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್​ ಮುಂದಿದೆ. 

VISTARANEWS.COM


on

KKR vs RCB
Koo

ಕೋಲ್ಕತ್ತಾ: ಭಾನುವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಕೆಕೆಆರ್​(Kolkata Knight Riders) ಮತ್ತು ಆರ್​ಸಿಬಿ(RCB vs KKR) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಆರ್​ಸಿಬಿಗೆ ಸೇಡಿನ ಪಂದ್ಯವಾಗಿದೆ. ಏಕೆಂದರೆ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಕೆಕೆಆರ್​ ಗೆಲುವು ಸಾಧಿಸಿತ್ತು. ಇದೀಗ ಕೆಕೆಆರ್​ಗೆ ತನ್ನ ತವರಿನಲ್ಲೇ ಸೋಲುಣಿಸಿ ಸೇಡು ತೀರಿಸಲು ಆರ್​ಸಿಬಿ(Royal Challengers Bengaluru) ಪಣ ತೊಟ್ಟಿದೆ.

ತವರಿನಲ್ಲೇ ಸತತ ಸೋಲಿನ ಅವಮಾನ ಕಂಡಿರುವ ಆರ್​ಸಿಬಿ ಹೊರಗಡೆ ಆಡಿದ ಪಂದ್ಯದಲ್ಲಿ ಗೆಲ್ಲಬಹುದೇ ಎನ್ನುವ ಪ್ರಶ್ನೆ ಮೂಡುವುದು ಕೂಡ ಸಹಜ. ತಂಡದದಲ್ಲಿ ಸ್ಟಾರ್​ ಆಟಗಾರರಿದ್ದರೂ ಕೂಡ ಯಾರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ವಿರಾಟ್​ ಕೊಹ್ಲಿ, ದಿನೇಶ್​ ಕಾರ್ತಿಕ್​ ಮಾತ್ರ ತಂಡದ ನಂಬಿಕಸ್ಥ ಆಟಗಾರರಾಗಿದ್ದಾರೆ. ಆರ್​ಸಿಬಿ ಬ್ಯಾಟಿಂಗ್‌ನಲ್ಲಿ ಯಶಸ್ವಿಯಾದರೆ ಬೌಲಿಂಗ್‌ನಲ್ಲಿ ಎಡವುತ್ತಿದೆ. ಬೌಲಿಂಗ್‌ನಲ್ಲಿ ಯಶಸ್ವಿಯಾದರೆ, ಬ್ಯಾಟಿಂಗ್‌ನಲ್ಲಿ ಪಲ್ಟಿ ಹೊಡೆಯುತ್ತಿದೆ. ಬೌಲಿಂಗ್‌ ಪಡೆಯಂತೂ ಸಂಪೂರ್ಣ ಮೊನಚು ಕಳೆದುಕೊಂಡಿದೆ. ಇದು, ಸಹಜವಾಗಿ ಆರ್‌ಸಿಬಿಯನ್ನು ಸೋಲಿನ ಸುಳಿಗೆ ತಳ್ಳಿದೆ. ಒಟ್ಟಿನಲ್ಲಿ ಸಂಘಟನಾತ್ಮಕ ಹೋರಾಟವೇ ಬರುತ್ತಿಲ್ಲ. 

ನರೈನ್​ ಭಯ


ಆರ್​ಸಿಬಿ ತಂಡದ ದೊಡ್ಡ ಶತ್ರುವೆಂದರೆ ಸುನೀಲ್​ ನರೈನ್​ ಅವರ ಪ್ರಚಂಡ ಬ್ಯಾಟಿಂಗ್​. ನರೈನ್​ ಯಾವುದೇ ಪಂದ್ಯದಲ್ಲಿ ಆಡದಿದ್ದರೂ ಕೂಡ ಆರ್​ಸಿಬಿ ವಿರುದ್ಧ ಮಾತ್ರ ಸಿಡಿದು ನಿಲ್ಲುತ್ತಾರೆ. ಆರಂಭಿಕಾಗಿ ಕಣಕ್ಕಿಳಿದು ಕಡಿಮೆ ಎಸೆತಗಳಿಂದ ದೊಡ್ಡ ಮೊತ್ತ ಪೇರಿಸಿ ಆರ್​ಸಿಬಿ ಮೇಲೆ ಒತ್ತಡ ಹೇರುತ್ತಾರೆ. ಈ ಬಾರಿಯಂತು ಅವರು ಭಯಾನಕ ಬ್ಯಾಟಿಂಗ್​ ಲಯದಲ್ಲಿದ್ದಾರೆ. ಕಳೆದ ರಾಜಸ್ಥಾನ್​ ವಿರುದ್ಧ ಶತಕ ಕೂಡ ಬಾರಿಸಿದ್ದರು. ಅದು ಕೂಡ ಈಡನ್​ ಗಾರ್ಡನ್ಸ್​ನಲ್ಲೇ. ಹೀಗಾಗಿ ಈ ಪಂದ್ಯದಲ್ಲೂ ತಂಡ ಇವರ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟಿದೆ.

ಇದನ್ನೂ ಓದಿ IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

18 ವರ್ಷದ ಆಂಗ್ಕ್ರಿಶ್ ರಘುವಂಶಿ ಕೂಡ ಬಿರುಸಿನ ಬ್ಯಾಟಿಂಗ್​ ಮೂಲಕ ಗಮನಸೆಳೆಯುತ್ತಿದ್ದಾರೆ. ಯಾವುದೇ ಭಯವಿಲ್ಲದೆ ಬ್ಯಾಟಿಂಗ್​ ನಡೆಸುವ ಚಾಕಚಕ್ಯತೆ ಇವರಲ್ಲಿದೆ. ಭವಿಷ್ಯದ ಆಟಗಾರನೆಂದೇ ಗುರುತಿಸಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ರಸೆಲ್, ರಿಂಕು ಸಿಂಗ್​ ತಂಡಕ್ಕೆ ಆಸರೆಯಾಗಬಲ್ಲರು.

ಪಿಚ್​ ರಿಪೋರ್ಟ್​

ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ. ವಿರಾಟ್​ ಕೊಹ್ಲಿ 2019ರಲ್ಲಿ ಕೆಕೆಆರ್​ ವಿರುದ್ಧ ಇದೇ ಮೈದಾನದಲ್ಲಿ ಶತಕ ಕೂಡ ಬಾರಿಸಿದ್ದರು. ಈ ಬಾರಿ ಏನು ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.

2017ರಲ್ಲಿ ಕೆಕೆಆರ್​ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್​ ಆಗಿತ್ತು. ಈ ವರೆಗೆ ಆರ್​ಸಿಬಿ ಮತ್ತು ಕೆಕೆಆರ್​ ಐಪಿಎಲ್​ನಲ್ಲಿ 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 14 ಗೆಲುವು ಕೆಕೆಆರ್​ 19 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್​ ಮುಂದಿದೆ. 

Continue Reading

ಪ್ರಮುಖ ಸುದ್ದಿ

Surabhi Jain : 30 ವರ್ಷಕ್ಕೆ ಮೃತಪಟ್ಟ ಫ್ಯಾಷನ್ ಐಕಾನ್​ ಸುರಭಿ ಜೈನ್

VISTARANEWS.COM


on

Surabhi Jain
Koo

ನವದೆಹಲಿ: ಜನಪ್ರಿಯ ಫ್ಯಾಷನ್ ಐಕಾನ್​ ಸುರಭಿ ಜೈನ್ ಕ್ಯಾನ್ಸರ್​ನೊಂದಿಗಿನ ದೀರ್ಘಕಾಲದ ಹೋರಾಟದ ನಂತರ ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬವು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಇನ್​ಸ್ಟಾಗ್ರಾಮ್​ನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರೆ. ಜೈನ್ ಅಂಡಾಶಯದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು. ಎಂಟು ವಾರಗಳ ಹಿಂದೆ ಇನ್ಸ್ಟಾಗ್ರಾಮ್​ನಲ್ಲಿ ಹಾಕಿದ ತನ್ನ ಕೊನೆಯ ಪೋಸ್ಟ್​ನಲ್ಲಿ ಸುರಭಿ ಜೈನ್ ಆಸ್ಪತ್ರೆಯಲ್ಲಿ ತನ್ನ ಚಿತ್ರ ಹಂಚಿಕೊಂಡಿದ್ದರು.

“ನನ್ನ ಆರೋಗ್ಯದ ಬಗ್ಗೆ ನಾನು ನಿಮಗೆ ಅಪ್ಡೇಟ್ ಮಾಡಿಲ್ಲ ಎಂದು ನನಗೆ ತಿಳಿದಿದೆ. ಅದರ ಬಗ್ಗೆ ನಾನು ಪ್ರತಿದಿನ ಪಡೆಯುತ್ತಿರುವ ಸಂದೇಶಗಳ ಸಂಖ್ಯೆಯನ್ನು ನೋಡಿದರೆ ಭಯವಾಗುತ್ತಿದೆ. ವಿಷಯಗಳು ಉತ್ತಮವಾಗಿ ನಡೆಯುತ್ತಿಲ್ಲ. ಆದ್ದರಿಂದ ಹಂಚಿಕೊಳ್ಳಲು ಹೆಚ್ಚು ಇಲ್ಲ. ಕಳೆದ 2 ತಿಂಗಳುಗಳಲ್ಲಿ ನಾನು ಹೆಚ್ಚಾಗಿ ಆಸ್ಪತ್ರೆಯಲ್ಲಿ ಕಳೆದಿದ್ದೇನೆ. ಚಿಕಿತ್ಸೆ ನಡೆಯುತ್ತಿದೆ. ಕಷ್ಟ ಮತ್ತು ಇದೆಲ್ಲವೂ ಕೊನೆಗೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದು ಅವರು ಬರೆದುಕೊಂಡಿದ್ದರು.

ಇದನ್ನೂ ಓದಿ: Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

ಅವರ ಸಾವಿನ ಸುದ್ದಿಯನ್ನು ಅವರ ಕುಟುಂಬವು ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದೆ. ಅವರು ಗುರುವಾರ ನಿಧನರಾದರು ಮತ್ತು ಏಪ್ರಿಲ್ 19 ರಂದು ಗಾಜಿಯಾಬಾದ್​ನಲ್ಲಿ ಅಂತ್ಯಕ್ರಿಯೆ ಮಾಡಲಾಯಿತು ಎಂದು ಅವರು ಹೇಳಿದರು.

ಸುರಭಿ ಜೈನ್ ಅವರಿಗೆ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿರುವುದು ಇದು ಎರಡನೇ ಬಾರಿ. 27 ನೇ ವಯಸ್ಸಿನಲ್ಲಿ, ಅವರು ತಮ್ಮ ಮೊದಲ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. “ಶಸ್ತ್ರಚಿಕಿತ್ಸೆಯಿಂದ ನನಗೆ 149 ಹೊಲಿಗೆಗಳು ಮತ್ತು ಸಾಕಷ್ಟು ನೋವು ಕಾಣಿಸಿಕೊಂಡಿತು. ನಾನು ಹೆಚ್ಚು ಚಟವಟಿಕೆಯಿಂದ ಇರಲು ಹಾಗೂ ನಗು ಮೂಡಿಸಲು ಶ್ರಮ ವಹಿಸುತ್ತಿದ್ದೇನೆ ಎಂದು ಅವರು ಆ ವೇಳೆ ಬರೆದುಕೊಂಡಿದ್ದರು.

ಅಂಡಾಶಯದ ಕ್ಯಾನ್ಸರ್ ಅಂಡಾಶಯಗಳಲ್ಲಿ ಹುಟ್ಟುತ್ತದೆ ಮತ್ತು ಇದು ಮಹಿಳೆಯರಿಗೆ ಗಮನಾರ್ಹ ಆರೋಗ್ಯ ಕಾಳಜಿಯಾಗಿದೆ. ಈ ರೋಗವು ಅಂಡಾಶಯಗಳಲ್ಲಿ ಮಾರಣಾಂತಿಕ ಗೆಡ್ಡೆಯಿಂದ ಆರಂಭವಾಗುತ್ತದೆ. ಇದು ಆರೋಗ್ಯಕರ ಅಂಗಾಂಶಗಳನ್ನು ನಾಶಪಡಿಸುತ್ತದೆ. ಇದು ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ನಂತರ ಭಾರತದಲ್ಲಿ ಮಹಿಳೆಯರಲ್ಲಿ ಮೂರನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ.

Continue Reading

ಕ್ರೀಡೆ

RCB vS KKR: ಗ್ರೀನ್​ ಜೆರ್ಸಿಯಲ್ಲಿ ಆರ್​ಸಿಬಿ ಅದೃಷ್ಟ ಹೇಗಿದೆ; ಎಷ್ಟು ಗೆಲುವು ಎಷ್ಟು ಸೋಲು?

RCB vS KKR: ಆರ್​ಸಿಬಿ ಹಸಿರು ಜೆರ್ಸಿಯಲ್ಲಿ(RCB Green Jersey) ಕಣಕ್ಕಿಳಿದ ಬಹುತೇಕ ಪಂದ್ಯದಲ್ಲಿ ಸೋಲು ಕಂಡಿದೆ. ಇದುವರೆಗೆ ಒಟ್ಟು 13 ಪಂದ್ಯಗಳನ್ನು ಆಡಿದೆ. ಗೆದ್ದಿದ್ದು ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ. ಇನ್ನುಳಿದ 8 ಪಂದ್ಯಗಳಲ್ಲಿ ಸೋಲನುಭವಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.

VISTARANEWS.COM


on

RCB vs KKR
Koo

ಕೋಲ್ಕತ್ತಾ: ಸತತ ಸೋಲಿನಿಂದ ಕಂಗೆಟ್ಟಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB vS KKR) ತಂಡ ನಾಳೆ ನಡೆಯುವ ಐಪಿಎಲ್​ನ(IPL 2024) ಡಬಲ್​ ಹೆಡರ್​ನ ಹಗಲು ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಕಣಕ್ಕಿಳಿಯಲಿದೆ. ಗೋ ಗ್ರೀನ್​ ಅಭಿಯಾನದ ಭಾಗವಾಗಿ ಆರ್​ಸಿಬಿ ಈ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ(RCB Green Jersey) ಆಡಲಿದೆ. ಆರ್​ಸಿಬಿ ಈ ಜೆರ್ಸಿಯಲ್ಲಿ ಆಡಿದ ಪಂದ್ಯಗಳಲ್ಲಿ ಎಷ್ಟು ಸೋಲು ಮತ್ತು ಗೆಲುವು ಕಂಡಿದೆ ಎನ್ನುವ ಮಾಹಿತಿ ಇಂತಿದೆ.

13 ಪಂದ್ಯಗಳಲ್ಲಿ ಕಣಕ್ಕೆ


ಆರ್​ಸಿಬಿ ಈ ಜೆರ್ಸಿಯಲ್ಲಿ ಕಣಕ್ಕಿಳಿದ ಬಹುತೇಕ ಪಂದ್ಯದಲ್ಲಿ ಸೋಲು ಕಂಡಿದೆ. ಆರ್​ಸಿಬಿ ಐಪಿಎಲ್‌ನಲ್ಲಿ ಹಸಿರು ಜೆರ್ಸಿಯಲ್ಲಿ ಇದುವರೆಗೆ ಒಟ್ಟು 13 ಪಂದ್ಯಗಳನ್ನು ಆಡಿದೆ. ಗೆದ್ದಿದ್ದು ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ. ಇನ್ನುಳಿದ 8 ಪಂದ್ಯಗಳಲ್ಲಿ ಸೋಲನುಭವಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಅದರಲ್ಲೂ ಈ ಬಾರಿ ಆರ್​ಸಿಬಿ ಆಡಿದ 7 ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರ ಸಾಧಿಸಿದೆ. ಹೀಗಾಗಿ ಕೆಕೆಆರ್​ ವಿರುದ್ಧ ಗೆಲುವು ಸಾಧಿಸೀತೇ, ಈ ಉಡುಗೆ ಆರ್​ಸಿಬಿ ಪಾಲಿಗೆ ಅದೃಷ್ಟ ತಂದೀತೇ ಎಂಬುದು ಎಲ್ಲರ ನಿರೀಕ್ಷೆ.

“ಬಣ್ಣಗಳ ಬದಲಾವಣೆಯು ಅದೃಷ್ಟದಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಭಾವಿಸುತ್ತೇವೆ!” ಎಂದು ಬರೆದಿಕೊಂಡು ಮುಂದಿನ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ತಂಡ ಕಣಕ್ಕಿಳಿಯಲಿದೆ ಎನ್ನುವ ವಿಚಾರವನ್ನು ಫ್ರಾಂಚೈಸಿ ತನ್ನ ಟ್ವಿಟರ್ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ.

ಇದನ್ನೂ ಓದಿ IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

ಒಂದು ಬಾರಿ ನೀಲಿ ಜರ್ಸಿಯಲ್ಲಿ ಆಡಿತ್ತು


2011 ರಿಂದ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್​ಸಿಬಿ ತಮ್ಮ ‘ಗೋ ಗ್ರೀನ್’ ಅಭಿಯಾನದಲ್ಲಿ ತೊಡಗಿಕೊಂಡಿತ್ತು. ಇದೇ ಕಾರಣಕ್ಕೆ ಪ್ರತಿ ಆವೃತ್ತಿಯಲ್ಲಿಯೂ ಒಂದು ಪಂದ್ಯವನ್ನು ಹಸಿರು ಜೆರ್ಸಿಯಲ್ಲಿ ಆಡುತ್ತಿದೆ. ಆದರೆ 2021ರಲ್ಲಿ, ಹಸಿರು ಜರ್ಸಿಯಲ್ಲಿ ಆಡುವ ಬದಲು ತಂಡವು ಒಂದು ಪಂದ್ಯದಲ್ಲಿ ನೀಲಿ ಜರ್ಸಿಯಲ್ಲಿ ಆಡಿತ್ತು. ಇದಕ್ಕೆ ಕಾರಣ ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಂಚೂಣಿಯಲ್ಲಿರುವ ಕಾರ್ಮಿಕರಿಗೆ ಅವರ ತ್ಯಾಗ ಮತ್ತು ಕಠಿಣ ಪರಿಶ್ರಮಕ್ಕೆ ಗೌರವ ಸಲ್ಲಿಸಲು ಈ ನೀಲಿ ಜೆರ್ಸಿ ಧರಿಸಿ ಆಡಿತ್ತು.

ಈ ಪಂದ್ಯ ನಿರ್ಣಾಯಕ


ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಕೆಕೆಆರ್​ ವಿರುದ್ಧದ ಪಂದ್ಯದಿಂದಲೇ ಗೆಲುವಿನ ಅಭಿಯಾನ ಆರಂಭಿಸಬೇಕಿದೆ. ಆದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಕೆಕೆಆರ್​ ವಿರುದ್ಧ ಸೋತರೆ ಆರ್​ಸಿಬಿ ಈ ಬಾರಿಯ ಟೂರ್ನಿಯಿಂದ ಹೊರ ಬೀಳಲಿದೆ.

Continue Reading
Advertisement
IPL 2024
ಕ್ರೀಡೆ8 mins ago

IPL 2024 : ಡಿಆರ್​ಎಸ್ ಅಕ್ರಮ; ಟಿಮ್ ಡೇವಿಡ್, ಕೀರನ್ ಪೊಲಾರ್ಡ್​ಗೆ ದಂಡ

KKR vs RCB
ಕ್ರಿಕೆಟ್20 mins ago

KKR vs RCB: ತವರಿನ ಸೋಲಿಗೆ ಸೇಡು ತೀರಿಸೀತೇ ಆರ್​ಸಿಬಿ?

Surabhi Jain
ಪ್ರಮುಖ ಸುದ್ದಿ44 mins ago

Surabhi Jain : 30 ವರ್ಷಕ್ಕೆ ಮೃತಪಟ್ಟ ಫ್ಯಾಷನ್ ಐಕಾನ್​ ಸುರಭಿ ಜೈನ್

RCB vs KKR
ಕ್ರೀಡೆ1 hour ago

RCB vS KKR: ಗ್ರೀನ್​ ಜೆರ್ಸಿಯಲ್ಲಿ ಆರ್​ಸಿಬಿ ಅದೃಷ್ಟ ಹೇಗಿದೆ; ಎಷ್ಟು ಗೆಲುವು ಎಷ್ಟು ಸೋಲು?

Modi in Karnataka Here live video of Modi rally in Chikkaballapur
Lok Sabha Election 20241 hour ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Modi in Karnataka today Cm Siddaramaiah asks 11 questions to PM Modi
Lok Sabha Election 20241 hour ago

Modi in Karnataka: ಇಂದು ಕರ್ನಾಟಕಕ್ಕೆ ಮೋದಿ; ಪ್ರಧಾನಿಗೆ 11 ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ

Uttarakaanda Movie bande kaaka rangayana Raghu
ಸ್ಯಾಂಡಲ್ ವುಡ್2 hours ago

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

India Economy
ಪ್ರಮುಖ ಸುದ್ದಿ2 hours ago

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

ರಾಜಕೀಯ2 hours ago

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Road Accident in karnataka
ಕೊಡಗು2 hours ago

Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Here live video of Modi rally in Chikkaballapur
Lok Sabha Election 20241 hour ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ4 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ24 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

ಟ್ರೆಂಡಿಂಗ್‌