Site icon Vistara News

Karnataka Budget 2023: 777 ಚಾರ್ಲಿ ಎಫೆಕ್ಟ್‌: ಬೀದಿ ನಾಯಿ ದತ್ತುಗೆ ಆನ್‌ಲೈನ್‌ ಪೋರ್ಟಲ್‌ ಘೋಷಿಸಿದ ಶ್ವಾನ ಪ್ರಿಯ ಸಿಎಂ

777 ಚಾರ್ಲಿ karnataka-budget-2023-online portal to street dog adoptation

ಬೆಂಗಳೂರು: ಪ್ರಾಣಿಗಳ ಸಾಕಣೆ ಹಾಗೂ ಅಭಿವೃದ್ಧಿಯಲ್ಲಿ ನಿರ್ದಿಷ್ಟವಾಗಿ ಶ್ವಾನದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ವಿಶೇಷ ಆಸಕ್ತಿ ತೋರಿದ್ದಾರೆ. ಕರ್ನಾಟಕದ ಪ್ರಮುಖ ತಳಿಯಲ್ಲೊಂದಾದ ಮುಧೋಳ್‌ ಹೌಂಡ್‌ ಅಭಿವೃದ್ಧಿಗೆ 5 ಕೋಟಿ ರೂ. ನೀಡಲು ಬೊಮ್ಮಾಯಿ ಪ್ರಸ್ತಾವಿಸಿದ್ದಾರೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ. ಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ರೈತ ಮಹಿಳೆಯರಲ್ಲಿ ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ 16,642 ಫಲಾನುಭವಿಗಳಿಗೆ 3.33 ಲಕ್ಷ ಕೋಳಿಮರಿಗಳನ್ನು ವಿತರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಈ ಸಾಲಿನಲ್ಲಿ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದು.

ಪ್ರಾಣಿಗಳ ಮೇಲಿನ ಹಿಂಸೆ ತಡೆಯಲು ಮತ್ತು ಪ್ರಾಣಿ ಕಲ್ಯಾಣಕ್ಕಾಗಿ ಪ್ರಾಣಿ ಕಲ್ಯಾಣ ಮಂಡಳಿಗೆ 5 ಕೋಟಿ ರೂ. ಅನುದಾನ ನೀಡಲಾಗುವುದು. ಮಂಡಳಿಯ ವತಿಯಿಂದ ಬೆಂಗಳೂರಿನಲ್ಲಿ ನಿರ್ಲಕ್ಷಿತ ಪ್ರಾಣಿಗಳ ಸೂಕ್ತ ಚಿಕಿತ್ಸೆಗಾಗಿ ಸಂಚಾರಿ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.

ರಾಷ್ಟ್ರೀಯ ಪ್ರಾಣಿ ತಳಿ ಸಂಪನ್ಮೂಲ ಬ್ಯೂರೋದಿಂದ ಭಾರತೀಯ ದೇಶಿ ಶ್ವಾನ ತಳಿ ಎಂದು ಮಾನ್ಯತೆ ಪಡೆದ ಮುಧೋಳ್ ಹೌಂಡ್ ಶ್ವಾನ ತಳಿಯ ಅಭಿವೃದ್ಧಿಗಾಗಿ 5 ಕೋಟಿ ರೂ. ಅನುದಾನ ನೀಡಲಾಗುವುದು.

ಬೀದಿನಾಯಿಗಳ ಆರೈಕೆ ಮತ್ತು ಪೋಷಣೆಗಾಗಿ ಸಾರ್ವಜನಿಕರು ದತ್ತು ತೆಗೆದುಕೊಳ್ಳಲು ಒಂದು ಆನ್-ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದ ಆಸಕ್ತ ಶ್ವಾನ ಪ್ರೇಮಿಗಳು ತಮ್ಮ ಹೆಸರು ನೋಂದಾಯಿಸಿಕೊಂಡು ದತ್ತು ಪಡೆಯಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

2022ರಲ್ಲಿ ಬಿಡುಗಡೆಯಾಗಿದ್ದ 777 ಚಾರ್ಲಿ ಸಿನಿಮಾವನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದ್ದರು. ಸ್ವತಃ ಶ್ವಾನಪ್ರಿಯರಾದ ಬೊಮ್ಮಾಯಿ, ಸಿನಿಮಾದಲ್ಲಿ ನಾಯಿಯ ಸಂಕಷ್ಟವನ್ನು ನೆನೆದು ಕಣ್ಣೀರು ಹಾಕಿದ್ದರು.

Exit mobile version