Karnataka Budget Session 2024: ಅಧಿವೇಶನ ಒಂದು ದಿನ ವಿಸ್ತರಣೆ: ಸೋಮವಾರ ಮಧ್ಯಾಹ್ನಕ್ಕೆ ಮೊಟಕು? ಬಳಿಕ ರೆಸಾರ್ಟ್‌ಗೆ ಶಿಫ್ಟ್‌? - Vistara News

ರಾಜಕೀಯ

Karnataka Budget Session 2024: ಅಧಿವೇಶನ ಒಂದು ದಿನ ವಿಸ್ತರಣೆ: ಸೋಮವಾರ ಮಧ್ಯಾಹ್ನಕ್ಕೆ ಮೊಟಕು? ಬಳಿಕ ರೆಸಾರ್ಟ್‌ಗೆ ಶಿಫ್ಟ್‌?

Karnataka Budget Session 2024: ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಸೋಮವಾರ ಮಧ್ಯಾಹ್ನಕ್ಕೇ ಅಧಿವೇಶನವನ್ನು ಪೂರ್ಣಗೊಳಿಸಿ ರೆಸಾರ್ಟ್‌ಗೆ ಶಿಫ್ಟ್‌ ಆಗಲು ಕಾಂಗ್ರೆಸ್‌ ತಯಾರಾಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Karnataka Budget Session 2024 extended by a day to be curtailed to Monday afternoon
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶುಕ್ರವಾರಕ್ಕೆ (ಫೆ. 23) ಮುಕ್ತಾಯವಾಗಬೇಕಿದ್ದ ವಿಧಾನಮಂಡಲ ಅಧಿವೇಶನವು (Karnataka Budget Session 2024) ಒಂದು ದಿನ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಬೇಕಾಗಿರುವುದರಿಂದ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್ (UT Khadar) ನೇತೃತ್ವದಲ್ಲಿ ಶುಕ್ರವಾರ ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆ ನಡೆದಿದ್ದು, ಈ ತೀರ್ಮಾನಕ್ಕೆ ಬರಲಾಗಿದೆ. ಆದರೆ, ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಸೋಮವಾರ ಮಧ್ಯಾಹ್ನಕ್ಕೇ ಅಧಿವೇಶನವನ್ನು ಪೂರ್ಣಗೊಳಿಸಿ ರೆಸಾರ್ಟ್‌ಗೆ ಶಿಫ್ಟ್‌ ಆಗಲು ಕಾಂಗ್ರೆಸ್‌ ತಯಾರಾಗಿದೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಸದನಕ್ಕೆ ಗೈರಾಗಿದ್ದಾರೆ. ಹೀಗಾಗಿ ಸಭಾಪತಿ ಯು.ಟಿ. ಖಾದರ್ ನೇತೃತ್ವದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರೊಂದಿಗೆ ಶುಕ್ರವಾರ ಬೆಳಗ್ಗೆ ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಸೋಮವಾರ (ಫೆ.26) ಒಂದು ದಿನಕ್ಕೆ ವಿಧಾನಸಭೆ ಕಲಾಪವನ್ನು ನಡೆಸುವ ತೀರ್ಮಾನಕ್ಕೆ ಬರಲಾಯಿತು. ಅಂದು ಸಿಎಂ ಸಿದ್ದರಾಮಯ್ಯ ಅವರು ಫೆ.26 ರಂದು ಬೆಳಗ್ಗೆ 9.30ಕ್ಕೆ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ‌ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೀಯ ವ್ಯವಹಾರಗಳ ಸಚಿವ ಎಚ್​.ಕೆ. ಪಾಟೀಲ್ ಸೇರಿದಂತೆ ಇತರೆ ಸದಸ್ಯರು ಭಾಗಿಯಾಗಿದ್ದರು.

ಸಿಎಂಗೆ ಏಕೆ ಅನಾರೋಗ್ಯ?

ಕಳೆದ ಶುಕ್ರವಾರ (ಫೆ. 16) ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದರು. ಬಳಿಕ ಎರಡು ದಿನ ಜಿಲ್ಲಾ ಪ್ರವಾಸದಲ್ಲಿ ನಿರತರಾಗಿದ್ದರು. ಫೆ. 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿದ್ದರು. ಫೆ.18ರಂದು ಮಂಡ್ಯ ಜಿಲ್ಲೆ ಪ್ರವಾಸ ಮಾಡಿದ್ದರು. ಹೀಗೆ ನಿರಂತರ ಪ್ರವಾಸ ಮಾಡಿದ್ದರಿಂದ ಅವರು ಫೆ.19 ರಂದು ಅನಾರೋಗ್ಯಕ್ಕೆ ತುತ್ತಾಗಿದ್ದರು. ಅಂದು ವಿಶ್ರಾಂತಿ ಪಡೆದು ಮರುದಿನ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಆದರೆ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದರಿಂದ ಶುಕ್ರವಾರದ ಕಲಾಪಕ್ಕೆ ಹಾಜರಾಗಲು ಅವರಿಗೆ ಸಾಧ್ಯವಾಗಿಲ್ಲ.

ಅವಧಿ ವಿಸ್ತರಣೆ ಏಕೆ?

ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಅವರು ಗುರುವಾರ ಬಜೆಟ್‌ ಮೇಲಿನ ಭಾಷಣ ಮಾಡಿದ್ದರು. ಇನ್ನೂ ಹಲವು ನಾಯಕರು ಬಜೆಟ್‌ ಮೇಲೆ ಭಾಷಣ ಮಾಡಬೇಕಿದೆ. ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮೇಲೆ ಚರ್ಚೆಗೆ ಉತ್ತರ ನೀಡಬೇಕಿತ್ತು. ಆದರೆ, ಈಗ ಸಮಯಾವಕಾಶದ ಕೊರತೆ ಇರುವುದರಿಂದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಮಂಗಳವಾರ ಅಧಿವೇಶನ ನಡೆಸಲು ಆಗುವುದಿಲ್ಲ!

ಮಂಗಳವಾರ ರಾಜ್ಯಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸೋಮವಾರವೇ ಅಧಿವೇಶನವನ್ನು ಪೂರ್ಣಗೊಳಿಸಬೇಕಿದೆ. ಹೀಗಾಗಿ ಅಂದು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಉತ್ತರ ನೀಡಿ ಮಧ್ಯಾಹ್ನದ ಒಳಗೆ ತೆರೆ ಎಳೆಯಲು ಪ್ರಯತ್ನಿಸಲಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಕಾಂಗ್ರೆಸ್‌ ಶಾಸಕರು ಸೇರಿದಂತೆ ಹಲವು ನಾಯಕರು ರೆಸಾರ್ಟ್‌ಗೆ ಶಿಫ್ಟ್‌ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: NIMHANS Hospital: ಉತ್ತರ ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ!

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ತನ್ನ ಮೂರೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಸರಳ ಬಹುಮತ ಇದ್ದರೂ ಸಹ ಅಡ್ಡ ಮತದಾನದ ಭೀತಿ ಇರುವುದರಿಂದ ಎಲ್ಲರನ್ನೂ ರೆಸಾರ್ಟ್‌ಗೆ ಶಿಫ್ಟ್‌ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Congress Candidate List: ಲೋಕಸಭಾ ಚುನಾವಣೆಯ ಎರಡು ಹಂತಗಳ ಮತದಾನ ಮುಗಿದಿದೆ. ಕಾಂಗ್ರೆಸ್‌ ಇನ್ನೂ ದೇಶದ ಪ್ರತಿಷ್ಠಿತ ಕಣಗಳಾದ ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿನ ತನ್ನ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ. ಇಲ್ಲಿ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ನಾಳೆಯೇ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಹೀಗಾಗಿ ಇಂದು ಅಭ್ಯರ್ಥಿಗಳ ಘೋಷಣೆಯಾಗಲಿದೆ. ಈ ಮೂಲಕ ಮಿಲಿಯನ್‌ ಡಾಲರ್‌ ಪ್ರಶ್ನೆಗೆ ಉತ್ತರ ಸಿಗಲಿದೆ.

VISTARANEWS.COM


on

Congress Candidate List
Koo

ಲಕ್ನೋ: ದೇಶದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಅದರ ಜತೆಗೆ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಕೂಡ ಏರಿಕೆಯಾಗುತ್ತಿದೆ. ಈಗಾಗಲೇ ಎರಡು ಹಂತದ ಮತದಾನ ಯಶಸ್ವಿಯಾಗಿ ಮುಗಿದಿದ್ದು, ಮೂರನೇ ಹಂತ ಮೇ 7ರಂದು ನಡೆಯಲಿದೆ. ಈ ಮಧ್ಯೆ ದೇಶದ ಪ್ರತಿಷ್ಠಿತ ಕಣವಾದ ಉತ್ತರ ಪ್ರದೇಶದ ಅಮೇಥಿ (Amethi) ಮತ್ತು ರಾಯ್‌ಬರೇಲಿ (Raebareli)ಯಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಿಸದ ಕಾಂಗ್ರೆಸ್‌ ಇನ್ನೂ ಗುಟ್ಟು ಕಾಪಾಡಿಕೊಂಡು ಬಂದಿದೆ. ನಾಮಪತ್ರ ಸಲ್ಲಿಕೆಗೆ ನಾಳೆಯೇ (ಮೇ 3) ಕೊನೆಯ ದಿನವಾಗಿದ್ದು ಇಂದು ಕೈಪಡೆ ಅಭ್ಯರ್ಥಿಗಳನ್ನು ಘೋಷಿಸಲಿದೆ (Congress Candidate List). ಅಮೇಥಿ ಕ್ಷೇತ್ರದಿಂದ ರಾಹುಲ್‌ ಗಾಂಧಿ(Rahul Gadhi) ಮತ್ತು ರಾಯ್‌ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ(Priyanka Gandhi) ಸ್ಪರ್ಧಿಸುತ್ತಾರಾ ಎನ್ನುವ ಕುತೂಹಲಕ್ಕೆ ಇಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೆರೆ ಎಳೆಯಲಿದ್ದಾರೆ.

2019ರಲ್ಲಿ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅನಿರೀಕ್ಷಿತ ಸೋಲನ್ನು ಅನುಭವಿಸಿದ ರಾಹುಲ್ ಗಾಂಧಿ ಮತ್ತೆ ಅಲ್ಲಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಈಗಾಗಲೇ ಅವರು ಕೇರಳದ ವಯನಾಡ್‌ನಲ್ಲಿ ಸ್ಪರ್ಧಿಸಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಎರಡು ಕಡೆ ಕಣಕ್ಕಿಳಿಯುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎನ್ನುತ್ತಿವೆ ಮೂಲಗಳು.

ಇನ್ನು ರಾಯ್‌ ಬರೇಲಿ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿದೆ. 2004ರಿಂದ ಇದು ಸೋನಿಯಾ ಗಾಂಧಿ ಅವರ ವಶದಲ್ಲಿದೆ. ಈ ಬಾರಿ ಸೋನಿಯಾ ಗಾಂಧಿ ರಾಯ್‌ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹಿಂದೆಯೇ ಘೋಷಿಸಿದ್ದರು. ಈ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದರು. ಹೀಗಾಗಿ ಪ್ರಿಯಾಂಕಾ ಗಾಂಧಿ ರಾಯ್‌ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾತುಗಳು ವ್ಯಾಪಕವಾಗಿ ಕೇಳಿ ಬಂದಿದೆ. ಇದರ ಜತೆಗೆ ಬಿಜೆಪಿ ಆಗಾಗ ಉಲ್ಲೇಖಿಸುವ ʼವಂಶಪಾರಂಪರ್ಯ ರಾಜಕೀಯʼ ಆರೋಪವನ್ನು ಪರಿಗಣಿಸಿ ಅವರನ್ನು ಕಣಕ್ಕಿಳಿಸುವುದು ಅನುಮಾನ ಎನ್ನುವ ಮಾತೂ ಕೇಳಿ ಬಂದಿದೆ.

ʼʼಅಭ್ಯರ್ಥಿಗಳ ಆಯ್ಕೆ ಬಗ್ಗೆ ಯಾವುದೇ ಗೊಂದಲಗಳಿಲ್ಲ. ನಾವು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆʼʼ ಎಂದು ಹಿರಿಯ ಮುಖಂಡ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ. ಇದರ ನಡುವೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಅವರೂ ರಾಜಕೀಯ ಪ್ರವೇಶಿಸುತ್ತಾರೆ ಎನ್ನುವ ಗಾಳಿಸುದ್ದಿಯೂ ಹಬ್ಬಿದೆ.

ಇದನ್ನೂ ಓದಿ: Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

ರಾಯ್‌ ಬರೇಲಿ ಕ್ಷೇತ್ರದ ಇತಿಹಾಸ

ಇಂದಿರಾ ಗಾಂಧಿ ಅವರ ಪತಿ ಮತ್ತು ಕಾಂಗ್ರೆಸ್ ನಾಯಕ ಫಿರೋಜ್ ಗಾಂಧಿ 1952 ಮತ್ತು 1957ರಲ್ಲಿ ರಾಯ್‌ ಬರೇಲಿಯಿಂದ ಎರಡು ಬಾರಿ ಗೆದ್ದಿದ್ದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಮೊಮ್ಮಗ ಅರುಣ್ ನೆಹರೂ ಅವರು 1980 ಮತ್ತು 1984ರ ಉಪಚುನಾವಣೆಯಲ್ಲಿ ಇಲ್ಲಿ ಗೆಲುವು ಸಾಧಿಸಿದ್ದರು. ಜವಾಹರಲಾಲ್ ನೆಹರೂ ಅವರ ಅತ್ತಿಗೆ ಶೀಲಾ ಕೌಲ್ 1989 ಮತ್ತು 1991ರಲ್ಲಿ ಗೆಲುವು ಸಾಧಿಸಿದ್ದರು. ನೆಹರೂ-ಗಾಂಧಿ ಕುಟುಂಬದ ಸದಸ್ಯರು 1962 ಮತ್ತು 1999ರಲ್ಲಿ ಮಾತ್ರ ಇಲ್ಲಿಂದ ಸ್ಪರ್ಧಿಸಿರಲಿಲ್ಲ. ಇನ್ನು 2004ರಿಂದ 2024ರ ವರೆಗೆ ಈ ಕ್ಷೇತ್ರವನ್ನು ಸೋನಿಯಾ ಗಾಂಧಿ ಪ್ರತಿನಿಧಿಸಿದ್ದಾರೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

Continue Reading

ದೇಶ

Asaduddin Owaisi: ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

Asaduddin Owaisi: ಹೈದರಾಬಾದ್‌ ಕ್ಷೇತ್ರದಲ್ಲಿ ನೀಲಿ ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮಾ ಧರಿಸಿ ತಮ್ಮ ಟ್ರಿಯಂಫ್‌ ಬೊನ್ನೆವಿಲ್ಲೆ ಬೈಕ್‌ನಲ್ಲಿ ಸಾರ್ವಜನಿಕ ಸಭೆಗೆ ಆಗಮಿಸುವ ಮೂಲಕ ಓವೈಸಿ ಎಲ್ಲರ ಗಮನ ಸೆಳೆದಿದ್ದಾರೆ. ಓವೈಸಿ ಅವರು ತಮ್ಮ ಬೆಂಬಲಿಗರೊಂದಿಗೆ ಬೈಕ್‌ ರೈಡ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

VISTARANEWS.COM


on

Asaduddin Owaisi
Koo

ಹೈದರಾಬಾದ್‌: ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್‌ ಓವೈಸಿ(Asaduddin Owaisi) ಭರ್ಜರಿಯಾಗಿ ಬೈಕ್‌ ರೈಡಿಂಗ್‌(Bike ride) ಮಾಡುತ್ತಾ ಪ್ರಚಾರ ನಡೆಸಿದ್ದಾರೆ. ಹೈದರಾಬಾದ್‌(Hyderabad) ಕ್ಷೇತ್ರದಲ್ಲಿ ನೀಲಿ ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮಾ ಧರಿಸಿ ತಮ್ಮ ಟ್ರಿಯಂಫ್‌ ಬೊನ್ನೆವಿಲ್ಲೆ(Triumph Bonneville) ಬೈಕ್‌ನಲ್ಲಿ ಸಾರ್ವಜನಿಕ ಸಭೆಗೆ ಆಗಮಿಸುವ ಮೂಲಕ ಓವೈಸಿ ಎಲ್ಲರ ಗಮನ ಸೆಳೆದಿದ್ದಾರೆ. ಓವೈಸಿ ಅವರು ತಮ್ಮ ಬೆಂಬಲಿಗರೊಂದಿಗೆ ಬೈಕ್‌ ರೈಡ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಬರೋಬ್ಬರಿ ನಾಲ್ಕು ಬಾರಿ ಹೈದರಾಬಾದ್‌ ಕ್ಷೇತ್ರವನ್ನು ಪ್ರತಿನಿಧಿಸಿರುವ ಓವೈಸಿ, ಮೇ 13ರಂದು ನಡೆಯಲಿರುವ ನಡೆಯಲಿರುವ ನಾಲ್ಕನೇ ಹಂತದ ಚುನಾವಣೆಗೆ ಮನೆ ಮನೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ನಾಲ್ಕನೇ ಹಂತದಲ್ಲಿ ತೆಲಂಗಾಣದ ಎಲ್ಲಾ 17ಲೋಕಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ. ಇನ್ನು ಓವೈಸಿ ಎದುರು ಬಿಜೆಪಿಯ ಮಾಧವಿ ಲತಾ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಓವೈಸಿ ಬಿಜೆಪಿಯ ಭಗವಂತ್‌ ರಾವ್‌ ಅವರನ್ನು 2.5 ಲಕ್ಷ ಮತಗಳಿಂದ ಸೋಲಿಸಿದ್ದರು. ಹೈದರಾಬಾದ್‌ ಲೋಕಭಾ ಕ್ಷೇತ್ರ ಬಹದ್ದೂರ್‌ಪುರ, ಚಂದ್ರಯಾನ್‌ಗುಟ್ಟಾ. ಚಾರ್‌ಮಿನಾರ್‌, ಘೋಷಮಹಲ್‌, ಕಾರ್ವಾನ್‌, ಮಲಕಪೇಟೆ ಮತ್ತು ಯಾಕತ್‌ಪುರ ಸೇರಿದ್ದಂತೆ ಒಟ್ಟು 7ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿದೆ.

ಎರಡು ದಿನಗಳ ಹಿಂದೆ ಉತ್ತರಪ್ರದೇಶದ ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಸ್ಕೂಟರ್‌ನಲ್ಲಿ ತೆರಳಿ ಭರ್ಜರಿ ಪ್ರಚಾರ ಕೈಗೊಂಡಿದ್ದರು. ಸ್ಕೂಟರ್‌ ರೈಡ್‌ ಮಾಡಿಕೊಂಡು ತಮ್ಮ ಕ್ಷೇತ್ರಕ್ಕೆ ಬಂದಿದ್ದ ತಮ್ಮ ನೆಚ್ಚಿನ ನಾಯಕಿಯನ್ನು ಕಂಡು ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದರು. ಅವರ ಜೊತೆ ಸೆಲ್ಫಿ, ಫೊಟೋಗೆ ಪೋಸ್‌ ಕೊಟ್ಟರು. ಅಲ್ಲದೇ ಸ್ಥಳೀಯ ಬಿಜೆಪಿ ನಾಯಕರೊಂದಿಗೆ ಪ್ರಸ್ತು ಸ್ಥಿತಿಗತಿ ಬಗ್ಗೆ ಚರ್ಚಿಸಿದ್ದರು.

ಇದನ್ನೂ ಓದಿ:SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

ಕಾಂಡೋಮ್‌ಗಳನ್ನು ಮುಸ್ಲಿಮರೇ ಹೆಚ್ಚು ಬಳಸ್ತಾರೆ

ಎರಡು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಓವೈಸಿ,ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ. ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ. ನಮ್ಮ ಧರ್ಮ ಬೇರೆ ಆಗಿರಬಹುದು ಆದರೆ, ನಾವು ಕೂಡ ಈ ದೇಶದ ನಿವಾಸಿಗಳು ಎಂದಿದ್ದಾರೆ.
ಯಾಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂಬ ಭಯವನ್ನು ಏಕೆ ಹರಡಲು ಪ್ರಯತ್ನಿಸುತ್ತಿದ್ದೀರಿ? ಮೋದಿ ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ದರ ಕುಸಿದಿದೆ ಎಂದಿದೆ. ಯಾಕೆಂದರೆ ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದನ್ನು ಹೇಳಲು ನನಗೆ ಮುಜುಗರವಿಲ್ಲ ಎಂದು ಕಿಡಿಕಾರಿದರು.

Continue Reading

ಕರ್ನಾಟಕ

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Prajwal Revanna Case: ಹಾಸನದಲ್ಲಿ ಮುಖ್ಯ ರಸ್ತೆ ಪಕ್ಕದಲ್ಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಹೌಸ್‌ ಇದ್ದರೂ ಅಲ್ಲಿ ಸಿಸಿ ಕ್ಯಾಮೆರಾಗಳು ಇಲ್ಲದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

VISTARANEWS.COM


on

Prajwal Revanna Case
Koo

ಹಾಸನ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ (Prajwal Revanna Case) ಬಗ್ಗೆ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಣ ಮಾಡಿರುವುದು ಬೇರೆ ಎಲ್ಲೂ ಅಲ್ಲ, ನಗರದ ಎಂಪಿ ಗೆಸ್ಟ್‌ ಹೌಸ್‌ನಲ್ಲೇ ಎನ್ನಲಾಗಿದೆ. ಮತ್ತೊಂದೆಡೆ ಮುಖ್ಯ ರಸ್ತೆ ಪಕ್ಕದಲ್ಲೇ ಗೆಸ್ಟ್‌ ಹೌಸ್‌ ಇದ್ದರೂ ಅಲ್ಲಿ ಸಿಸಿ ಕ್ಯಾಮೆರಾಗಳು ಇಲ್ಲದಿರುವುದರಿಂದ ಹಲವು ಅನುಮಾನಗಳು ವ್ಯಕ್ತವಾಗಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಂಪಿ ಗೆಸ್ಟ್ ಹೌಸ್‌, ರಸ್ತೆ ಪಕ್ಕದಲ್ಲೇ ಇದ್ದರೂ ಕಟ್ಟಡದ ಹೊರಗೆ ಹಾಗೂ ಒಳಗೆ ಎಲ್ಲೂ ಸಿಸಿ ಕ್ಯಾಮೆರಾ ಪತ್ತೆಯಾಗಿಲ್ಲ. ಸರ್ಕಾರಿ ಬಂಗಲೆಗೆ ಸಿಸಿ ಕ್ಯಾಮೆರಾ ಇಲ್ಲದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಯಾರು ಬಂದರು, ಹೋದರು ಎಂಬ ಸಾಕ್ಷಿಗೂ ಸಿಸಿ ಕ್ಯಾಮೆರಾಗಳು ಇಲ್ಲದಂತಾಗಿದೆ.

ಇನ್ನು ಪ್ರಜ್ವಲ್‌ ವಿರುದ್ಧ ಪ್ರಕರಣದ ದಾಖಲಾದ ಬಳಿಕ ಹಾಸನ ಎಂಪಿ ಗೆಸ್ಟ್ ಹೌಸ್ ಖಾಲಿ ಖಾಲಿಯಾಗಿದ್ದು, ಅಲ್ಲಿಗೆ ಬಂದಿರುವ ಪತ್ರಗಳು ಬಾಗಿಲಿನಲ್ಲೇ ಸಿಕ್ಕಿಸಿರುವುದು ಕಂಡುಬಂದಿದೆ. ಪತ್ರಗಳು ಬಂದು ಎರಡು ದಿನ ಕಳೆದರೂ ಯಾರೂ ತೆಗೆದುಕೊಂಡಿಲ್ಲ.

ಸಂಸದರಾಗಿದ್ದಾಗ ಹಾಸನದ ಎಂಪಿ ಕ್ವಾರ್ಟರ್ಸ್‌ ​​ದೇವೇಗೌಡರ ಅಧಿಕೃತ ನಿವಾಸವಾಗಿತ್ತು. ಬಳಿಕ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾಗುತ್ತಲೇ ಪ್ರಜ್ವಲ್​​ಗೆ ಮನೆ ಹಸ್ತಾಂತರ ಮಾಡಲಾಗಿತ್ತು, ಹಾಸನಕ್ಕೆ ಬಂದಾಗ ಸಂಸದರ ನಿವಾಸದಲ್ಲೇ ಪ್ರಜ್ವಲ್ ವಾಸ್ತವ್ಯ ಹೂಡುತ್ತಿದ್ದರು. ಚುನಾವಣಾ ಸಮಯದಲ್ಲಿ ಇದೇ ಮನೆಯಲ್ಲಿ ಪ್ರಜ್ವಲ್ ರೇವಣ್ಣ ನೆಲೆಸಿದ್ದರು. ಅಧಿಕಾರಿಗಳ ಸಭೆ ಸೇರಿದಂತೆ ಜೆಡಿಎಸ್ ಮುಖಂಡರ ಸಭೆಗಳನ್ನು ಪ್ರಜ್ವಲ್ ನಡೆಸುತ್ತಿದ್ದರು.

ಇದನ್ನೂ ಓದಿ | Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

ಮಾಜಿ ಪ್ರಧಾನಿ ದೇವೇಗೌಡರು ಹಾಸನದ ಸಂಸದರಾಗಿದ್ದಾಗ ಸರ್ಕಾರದಿಂದ ನಿವೇಶನ ಮಂಜೂರಾಗಿ, ಅವರ ವಾಸ್ತವ್ಯಕ್ಕಾಗಿ 2019ರಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಕಟ್ಟಡದಲ್ಲಿ ಒಟ್ಟು ನಾಲ್ಕು ಕೊಠಡಿ ಇದ್ದು, ನೆಲ ಮಹಡಿಯಲ್ಲಿ ಎರಡು ಹಾಗೂ ಮೊದಲ ಅಂತಸ್ತಿನಲ್ಲಿ ಎರಡು ಕೊಠಡಿಗಳಿವೆ. ದೇವೇಗೌಡರು ಹಾಸನಕ್ಕೆ ಬಂದಾಗ ಹೆಚ್ಚಾಗಿ ಇದೇ ಗೆಸ್ಟ್ ಹೌಸ್​ನಲ್ಲಿ ಉಳಿಯುತ್ತಿದ್ದರು.

Continue Reading

ಕರ್ನಾಟಕ

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Neha Murder Case: ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನೇಹಾ ಹಿರೇಮಠ ತಂದೆ-ತಾಯಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಪ್ರಕರಣದಲ್ಲಿ (Neha Murder Case) ನ್ಯಾಯ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಗಿದೆ. ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನೇಹಾ ತಂದೆ-ತಾಯಿ ನೇರವಾಗಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೇದಿಕೆ ಹಿಂಭಾಗದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿರುವ ನೇಹಾ ಕುಟುಂಬ ಮಗಳ ಹತ್ಯೆ ಕುರಿತು ಸಂಪೂರ್ಣ ಮಾಹಿತಿ ಒದಗಿಸಿದರು. ನೇಹಾ ತಂದೆ ನಿರಂಜನ್ ಹಿರೇಮಠ ಅವರು, ತಾವೊಬ್ಬ ಕಾಂಗ್ರೆಸ್ ಕಾರ್ಪೊರೇಟರ್ ಆಗಿದ್ದರೂ ಮಗಳ ಹತ್ಯೆ ಪ್ರಕರಣದಲ್ಲಿ ಸರಿಯಾಗಿ ನ್ಯಾಯ ದಕ್ಕಿಸಿಕೊಳ್ಳಲು ಆಗುತ್ತಿಲ್ಲವೆಂದು ಅಮಿತ್ ಶಾ ಅವರೆದುರು ದುಃಖ ತೋಡಿಕೊಂಡಿದ್ದಾರೆ.

ಮಗಳು ನೇಹಾಳ ಹತ್ಯೆ ಹಿನ್ನೆಲೆ ಮತ್ತು ಈವರೆಗೆ ಆದ ಬೆಳವಣಿಗೆಗಳ ಕುರಿತು ಕಾರ್ಪೊರೇಟರ್ ನಿರಂಜನ್ ಅವರು ಕೇಂದ್ರ ಗೃಹ ಸಚಿವರೆದುರು ವಿವರಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದರಲ್ಲದೆ, ನಾವಿದ್ದೇವೆ ಹೆದರಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು.‌

ಇದನ್ನೂ ಓದಿ | PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಮತ್ತಿತರ ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.

ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Prajwal Revanna Case BJP will not be with those who do injustice to women says Amit Shah

ಹುಬ್ಬಳ್ಳಿ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಯಾವುದೇ ಮಹಿಳೆಗೆ ಅನ್ಯಾಯ ಮಾಡಿದರೂ ಅಂಥವರ ಜತೆಗೆ ಬಿಜೆಪಿ ಇರಲ್ಲ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರೇ ಇಲ್ಲಿ ಸ್ವಲ್ಪ ಕೇಳಿಸಿಕೊಳ್ಳಿ. ಪ್ರಜ್ವಲ್‌ ಮೇಲೆ ಕ್ರಮವನ್ನು ನೀವು ತೆಗೆದುಕೊಳ್ಳಬೇಕಿತ್ತು, ನಾವಲ್ಲ ಎಂದು ಗುಡುಗಿದ್ದಾರೆ.

ಹುಬ್ಬಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಒಕ್ಕಲಿಗ ಬೆಲ್ಟ್‌ನಲ್ಲಿ ಚುನಾವಣೆ ಆಗುವವರೆಗೂ ಪ್ರಜ್ವಲ್‌ ರೇವಣ್ಣ ಅವರ ಮೇಲೆ ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ವಿಷಯದಲ್ಲಿ ಭಾರಿ ರಾಜಕೀಯ ಮಾಡಿದ್ದೀರಿ. ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದೀರಿ. ಧೈರ್ಯವಿದ್ದರೆ ಸತ್ಯವನ್ನು ಜನರ ಮುಂದೆ ಹೇಳಿ. ಇಂತಹ ಕೃತ್ಯ ಮಾಡುವವರಿಗೆ ಕಠೋರವಾದ ಶಿಕ್ಷೆ ಆಗಬೇಕು, ವಿಳಂಬವಾಗಬಾರದು ಅನ್ನೋದು ನಮ್ಮ ನಿಲುವು. ಇಂತಹ ಭಯಾನಕ ಅಪರಾಧದ ನಡುವೆಯೂ ಇವರು ರಾಜಕೀಯ ಮಾಡುತ್ತಿದ್ದಾರೆ ಎಂದು ಗುಡುಗಿದರು.

ನಿಮಗಾಗದಿದ್ದರೆ ಕರ್ನಾಟಕದ ಸುರಕ್ಷತೆಯನ್ನು ನಮಗೆ ಬಿಡಿ

ಏಪ್ರಿಲ್ 18ರಂದು ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆಯಾಯಿತು. ಇದು ವೈಯಕ್ತಿಕ ಕೇಸ್‌ ಎಂದು ಕಾಂಗ್ರೆಸ್ ನಾಯಕರು ಹೇಳಿದರು. ನಿಮಗೆ ಆಗದಿದ್ದರೆ ಬಿಡಿ, ನಾವು ಕರ್ನಾಟಕವನ್ನು ಸುರಕ್ಷಿತವನ್ನಾಗಿ ಮಾಡುತ್ತೇವೆ. ನಾವು ಕರ್ನಾಟಕದ ಹೆಣ್ಣು ಮಕ್ಕಳಿಗೆ ಸುರಕ್ಷತೆಯನ್ನು ಕೊಡುತ್ತೇವೆ ಎಂದು ಅಮಿತ್‌ ಶಾ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Prajwal Revanna Case BJP will not be with those who do injustice to women says Amit Shah

ಕಾಂಗ್ರೆಸ್‌ನಿಂದ ವೋಟ್‌ ಬ್ಯಾಂಕ್‌ ರಾಜಕಾರಣ

ಕಾಂಗ್ರೆಸ್‌ನವರು ವೋಟ್ ಬ್ಯಾಂಕ್‌ಗಾಗಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದ್ದಾರೆ. ಬಾಂಬ್ ಬ್ಲಾಸ್ಟ್‌ ಆದರೆ ಇವರಿಗೆ ಯಾವುದೇ ಲೆಕ್ಕವಿಲ್ಲ. ನೀವು ಪ್ರಲ್ಹಾದ್ ಜೋಶಿಯವರಿಗೆ ಹಾಕುವ ಒಂದೊಂದು ಮತವೂ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುತ್ತದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾದರೆ ಭಯೋತ್ಪಾದನೆಯು ಸಂಪೂರ್ಣ ನಿರ್ಮೂಲನೆಯಾಗುತ್ತದೆ. ಕಾಂಗ್ರೆಸ್‌ನವರು ವೋಟ್ ಬ್ಯಾಂಕ್ ಕಾರಣಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಆಯೋಜನೆ ಮಾಡಿದ್ದ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಬರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯವನ್ನು ಕಿತ್ತುಹಾಕಿದ್ದಾರೆ ಎಂದು ಅಮಿತ್‌ ಶಾ ಹೇಳಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಾರೆ

ಪ್ರಲ್ಹಾದ್ ಜೋಶಿಯವರನ್ನು ದೆಹಲಿಗೆ ನೀವು ಕಳುಹಿಸಿ, ಅವರನ್ನು ದೊಡ್ಡವರನ್ನಾಗಿ ನಾವು ಮಾಡುತ್ತೇವೆ. ಜೋಶಿ ನೋಡಲು ಸೀದಾ ಸಾದಾ ಕಾಣುತ್ತಾರೆ. ಹುಬ್ಬಳ್ಳಿ- ಧಾರವಾಡದ ಅಭಿವೃದ್ಧಿ ವಿಷಯ ಬಂದಾಗ ನನ್ನ ಜತೆಗೂ ಜಗಳ ಮಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಪರಸ್ಪರ ಜಗಳದಲ್ಲಿ ತೊಡಗಿದ್ದಾರೆ. ನೀತಿ ಸಂಹಿತೆ ಜಾರಿಯಾಗಿದ್ದಕ್ಕೆ ಬರ ಪರಿಹಾರ ವಿಳಂಬವಾಗಿದೆ. ಕಾಂಗ್ರೆಸ್‌ನವರು ಸುಳ್ಳು ಹೇಳಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಈಗ ಹಣ ಬಿಡುಗಡೆಯಾಗಿದೆ ಎಂದು ಹೇಳಿದರು.

Continue Reading
Advertisement
Rahul Gandhi
ಪ್ರಮುಖ ಸುದ್ದಿ7 mins ago

Rahul Gandhi: ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ; ಪ್ರಜ್ವಲ್‌ ರೇವಣ್ಣ ವಿಚಾರ ತೆಗೀತಾರಾ?

Job Alert
ಉದ್ಯೋಗ11 mins ago

Job Alert: ಗಮನಿಸಿ; ಹಟ್ಟಿ ಚಿನ್ನದ ಗಣಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

After SSLC career options
ಶಿಕ್ಷಣ15 mins ago

Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಯಾವುದು ಉತ್ತಮ ಆಯ್ಕೆ?

Thomas Cup 2024
ಬ್ಯಾಡ್ಮಿಂಟನ್16 mins ago

Thomas Cup 2024: ಅಂತಿಮ ಲೀಗ್​ ಪಂದ್ಯದಲ್ಲಿ ಇಂಡೊನೇಷ್ಯಾಕ್ಕೆ ಮಣಿದ ಭಾರತ

Aadhaar Crads For Dog
ಪ್ರಮುಖ ಸುದ್ದಿ20 mins ago

Aadhaar Crads For Dog: ದೆಹಲಿಯಲ್ಲಿ ನಾಯಿಗಳಿಗೂ ಬಂತು ಆಧಾರ್ ಕಾರ್ಡ್!

Pushpa 2 The Rule Title track out
ಟಾಲಿವುಡ್32 mins ago

Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

Congress Candidate List
Lok Sabha Election 202435 mins ago

Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Asaduddin Owaisi
ದೇಶ38 mins ago

Asaduddin Owaisi: ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

IPL 2024 Points Table
ಕ್ರೀಡೆ49 mins ago

IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

karnataka SSLC result 2024
ಪ್ರಮುಖ ಸುದ್ದಿ54 mins ago

SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌