Site icon Vistara News

Karnataka Budget Session 2024: ಪತ್ರಕರ್ತರಿಗೆ ಉಚಿತ ಬಸ್ ಪಾಸ್; ಕೆಯುಡಬ್ಲ್ಯುಜೆ ಹೋರಾಟಕ್ಕೆ ಸಂದ ಫಲ

Karnataka Budget Session 2024 Free bus pass for journalists The fruits of the KUWJ struggle

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ (Free Bus Pass) ಯೋಜನೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಈ ಬಜೆಟ್‌ನಲ್ಲಿ (Karnataka Budget Session 2024) ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.

ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.

ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ.

ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ.

ಇದನ್ನೂ ಓದಿ: Karnataka Budget 2024 : ಬಜೆಟ್​ನಲ್ಲಿ ಬ್ರಾಂಡ್ ಬೆಂಗಳೂರಿಗೆ ಸಿಕ್ಕಿದ್ದೇನು? ಇಲ್ಲಿದೆ ಎಲ್ಲ ವಿವರ

ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ಧವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಿನಂತಿಸಿದ್ದಾರೆ.

Exit mobile version