Karnataka Budget Session 2024: ನಾವು ಹಣ ಕೊಡ್ತೀವಿ ಅಂದ್ರೂ ಕೇಂದ್ರ ಏಕೆ ಅಕ್ಕಿ ಕೊಡಲಿಲ್ಲ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ - Vistara News

ರಾಜಕೀಯ

Karnataka Budget Session 2024: ನಾವು ಹಣ ಕೊಡ್ತೀವಿ ಅಂದ್ರೂ ಕೇಂದ್ರ ಏಕೆ ಅಕ್ಕಿ ಕೊಡಲಿಲ್ಲ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

Karnataka Budget Session 2024: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರದ ಜತೆ ಸಂಘರ್ಷಕ್ಕೆ ಇಳಿಯಬಾರದು ಎಂದಿದ್ದಾರೆ. ಆದರೆ, ನಾವು ಸಂಘರ್ಷಕ್ಕೆ ಇಳಿದಿಲ್ಲ. ರಾಜ್ಯದ ಪಾಲಿನ‌ ಸಂವಿಧಾನಬದ್ದ ಹಕ್ಕನ್ನು, ಅನುದಾನವನ್ನು ಕೇಳುವುದು ಸಂಘರ್ಷ ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಹೇಳಿದ್ದಾರೆ.

VISTARANEWS.COM


on

CM Siddaramaiah in Budget Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸಿದ್ದನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ಎಚ್‌ಡಿಕೆ ವಕಾಲತ್ತು ವಹಿಸಿ ಕೇಂದ್ರಕ್ಕೆ ಸರಣಿ ಪತ್ರ ಬರೆದಿರುವುದನ್ನು ವಿವರಿಸಿದರು. ಈ ನಡುವೆ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿಗೆ ದುಡ್ಡು ಕೊಡುತ್ತೇವೆ ಎಂದು ಹೇಳಿದರೂ ಯಾಕೆ ಕೊಡಲಿಲ್ಲ ಎಂದು ಬಿಜೆಪಿಯವರನ್ನು ಪ್ರಶ್ನೆ ಮಾಡಿದರು.

ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರ ನೀಡುವ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನರ ಪರವಾಗಿ, ರಾಜ್ಯದ ಪಾಲಿನ ಹಕ್ಕನ್ನು ಪಡೆದುಕೊಳ್ಳಲು ನಡೆಸಿದ ಪ್ರಯತ್ನಗಳನ್ನೆಲ್ಲ ಸದನಕ್ಕೆ ವಿವರಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರದ ಜತೆ ಸಂಘರ್ಷಕ್ಕೆ ಇಳಿಯಬಾರದು ಎಂದಿದ್ದಾರೆ. ಆದರೆ, ನಾವು ಸಂಘರ್ಷಕ್ಕೆ ಇಳಿದಿಲ್ಲ. ರಾಜ್ಯದ ಪಾಲಿನ‌ ಸಂವಿಧಾನಬದ್ದ ಹಕ್ಕನ್ನು, ಅನುದಾನವನ್ನು ಕೇಳುವುದು ಸಂಘರ್ಷ ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

16 ಪತ್ರಕ್ಕೆ ಕೇಂದ್ರದಿಂದ ಉತ್ತರವೇ ಬಂದಿಲ್ಲ

ರಾಜ್ಯಕ್ಕೆ ತೀವ್ರ ಬರಗಾಲ ಬಂದಿದೆ. ಕೇಂದ್ರದಿಂದ ಬರ ಪರಿಹಾರ ಕೇಳಿ 17 ಬಾರಿ ಕೇಂದ್ರಕ್ಕೆ ಬರೆದೆವು‌. ಇದರಲ್ಲಿ ಒಂದು ಪತ್ರಕ್ಕೆ ಮಾತ್ರ, “ನಿಮ್ಮ ಪತ್ರ ತಲುಪಿದೆ” ಎನ್ನುವ ಉತ್ತರ ಕೇಂದ್ರದಿಂದ ಬಂತು. ಆದರೆ ಉಳಿದ 16 ಪತ್ರಗಳಿಗೆ ಉತ್ತರವೇ ಬರಲಿಲ್ಲ. ಕೇಂದ್ರದ ಅನುದಾನ ರಾಜ್ಯಕ್ಕೆ ಇವತ್ತಿನವರೆಗೂ ಒಂದು ಪೈಸೆಯೂ ಬಂದಿಲ್ಲ. ಇದು ನಿಯಮಬದ್ಧವಾಗಿ ರಾಜ್ಯದ ಹಕ್ಕು. ರಾಜ್ಯದ ಪಾಲು. ಇದನ್ನೂ ಕೇಂದ್ರ ಕೊಡುತ್ತಿಲ್ಲ. ನಮ್ಮ ಪಾಲನ್ನು, ರಾಜ್ಯದ ಪಾಲನ್ನು ಕೇಳುವುದು ತಪ್ಪಾ? ಇದು ಸಂಘರ್ಷ ಹೇಗಾಗುತ್ತದೆ ಎಂದು ಪ್ರಶ್ನೆಸಿದರು.

ರಾಜ್ಯದ ಹಕ್ಕನ್ನು ಕೇಳುವುದು ತಪ್ಪಾ?

ರಾಜ್ಯಕ್ಕೆ ಬರಗಾಲ ಬಂದಾಗ ನರೇಗಾ ಮಾನವ ದಿನಗಳನ್ನು ನಿಯಮ ಬದ್ಧವಾಗಿ 100 ರಿಂದ 150 ದಿನಗಳಿಗೆ ಏರಿಕೆ ಮಾಡಬೇಕಿತ್ತು. ಇದಕ್ಕಾಗಿ ನಾವು ಪದೇ ಪದೇ ಮನವಿ ಮಾಡಿದರೂ ಮಾನವ ದಿನಗಳನ್ನು ಏರಿಕೆ ಮಾಡಲೇ ಇಲ್ಲ. ಇದು ರಾಜ್ಯದ ಜನರಿಗೆ ಮಾಡಿದ ಅನ್ಯಾಯ ಅಲ್ಲವೇ? ನಮ್ಮ ರಾಜ್ಯದ, ರಾಜ್ಯದ ಹಕ್ಕನ್ನು ಕೇಳುವುದು ತಪ್ಪಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನೆಗಳ ಮೂಲಕವೇ ಎಚ್.ಡಿ. ಕುಮಾರಸ್ವಾಮಿ ಮಾತಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು.

ಗ್ಯಾರಂಟಿಗಳ ಲೆಕ್ಕ ಬಿಚ್ಚಿಟ್ಟ ಸಿಎಂ

ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದ್ದನ್ನು ಮುಖ್ಯಮಂತ್ರಿಗಳು ವಿವರಿಸಿದರು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಕೋಟಿ , ಕೋಟಿ ಫಲಾನುಭವಿಗಳು ಅನುಕೂಲ ಪಡೆಯುತ್ತಿರುವುದನ್ನು ಅಂಕಿ ಅಂಶಗಳ ಸಮೇತ ವಿವರಿಸಿದರು.

ಇದನ್ನೂ ಓದಿ: Karnataka Budget Session 2024: ಬಹುಮತ ಪಡೆದು ಅಧಿಕಾರಕ್ಕೆ ಬಾರದ ಕಮಲ ಪಡೆ: ಬಿಜೆಪಿಗೆ ಸಿದ್ದರಾಮಯ್ಯ ಸವಾಲು

ನಾವು ಹಣ ಕೊಡ್ತೀವಿ ಎಂದರೂ ಕೇಂದ್ರ ಅಕ್ಕಿ ಏಕೆ ಕೊಡಲಿಲ್ಲ?

ರಾಜ್ಯದ ಜನರಿಗೆ ಅನ್ನ ಕೊಡುವ ಉದ್ದೇಶದಿಂದ ಕೆಜಿಗೆ 34 ರೂಪಾಯಿ ಕೊಡ್ತೀವಿ, ಈ ಹಣಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಮನವಿ ಮಾಡಿದೆವು. ಆದರೆ ರಾಜ್ಯಕ್ಕೆ, ರಾಜ್ಯದ ಜನರಿಗೆ ಅಕ್ಕಿ ಕೊಡಲು ಕೇಂದ್ರ ಒಪ್ಪಲಿಲ್ಲ. ಈಗ 29 ರೂಪಾಯಿಗೆ ಅಕ್ಕಿ ಕೊಡುವುದಾಗಿ ಹೇಳುತ್ತಿದ್ದಾರೆ. ಈಗಲೂ ನಮಗೆ ಅದೇ ಬೆಲೆಗೆ ಅಕ್ಕಿ ಕೊಡಿಸಿ. ಅದನ್ನು ನಾವು ಕೇಂದ್ರದಿಂದ ಖರೀದಿಸಿ ರಾಜ್ಯದ ಜನರಿಗೆ ಕೊಡಲು ಸಿದ್ಧರಿದ್ದೇವೆ. ನೀವು ಕೇಂದ್ರದ ಜತೆ ಮಾತನಾಡಿ ನಮಗೆ ಅಕ್ಕಿ ಕೊಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

Latest

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಪದಗ್ರಹಣದ ಬಳಿಕ ತಮ್ಮ ಮೊದಲ ಭಾಷಣದಲ್ಲಿ ಜನತೆಗೆ ತಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಸ್ಪಷ್ಟಪಡಿಸಿದರು.

“ನಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ. ತಮಿಳುನಾಡಿನ 8 ಕೋಟಿ ಜನರೂ ನನ್ನವರೇ. ನಾನು ನಿಮ್ಮಲ್ಲೊಬ್ಬ., ನಿಮ್ಮ ಕುಟುಂಬದ ಸದಸ್ಯ, ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ” ಎಂದು ವಿಜಯ್‌ ಹೇಳಿದರು.

“ಇಲ್ಲಿರುವುದು ಒಂದೇ ಪವರ್‌ ಸೆಂಟರ್‌. ಆ ಕಡೆ ಒಂದು, ಈ ಕಡೆ ಒಂದು ಪವರ್‌ ಸೆಂಟರ್‌ ಇಲ್ಲ. ತಮಿಳುನಾಡಿನಲ್ಲಿ ಹೊಸ ಯುಗಾರಂಭ ಆಗಿದೆ” ಎಂದು ಅವರು ಘೋಷಿಸಿದರು.

ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರ ಹಿತ ಕಾಪಾಡುವುದಾಗಿ ಹೇಳಿದ ವಿಜಯ್‌, “ನಿಜವಾದ ಜಾತ್ಯಾತೀತ ಹಾಗೂ ಸಮಾಜವಾದಿ ಆಡಳಿತ ಆರಂಭವಾಗಿದೆ” ಎಂದು ತಿಳಿಸಿದರು.

ತಮ್ಮ ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್‌, ವಿಸಿಕೆ ಹಾಗೂ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ವಿಜಯ್‌, “ನನ್ನ ಸಹೋದರ ರಾಹುಲ್‌ ಗಾಂಧಿಗೆ ವಿಶೇಷ ಧನ್ಯವಾದ” ಎಂದರು.

“ನನ್ನ ಜನರ ಹಣ ಲೂಟಿ ಮಾಡಲು ನಾನು ಬಿಡುವುದಿಲ್ಲ” ಎಂದು ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತಾಳುವುದಾಗಿ ಸಿಎಂ ವಿಜಯ್‌ ಸ್ಪಷ್ಟಪಡಿಸಿದರು.

Continue Reading

Latest

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್‌ ವಿಜಯ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಚೆನ್ನೈನ ನೆಹರೂ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಿದರು.

ಟಿವಿಕೆ ಪಕ್ಷ ಕಾಂಗ್ರೆಸ್‌, ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಸಚಿವ ಸಂಪುಟದಲ್ಲಿ ಎನ್‌. ಆನಂದ್‌, ಆಥವ್‌ ಅರ್ಜುನ್‌, ಡಾ. ಅರುಣ್‌ ರಾಜ್‌, ಕೆ.ಎ. ಸೆಂಗೋಟ್ಟಿಯ್ಯನ್‌, ಪಿ. ವೆಂಕಟರಮಣನ್‌, ಆರ್‌. ನಿರ್ಮಲ್‌ ಕುಮಾರ್‌, ಎ.ರಾಜ್‌ ಮೋಹನ್‌, ಟಿ.ಕೆ. ಪ್ರಭು, ಸೆಲ್ವಿ ಎಸ್‌. ಕೀರ್ತನಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಚಿತ್ರನಟಿ ತ್ರಿಶಾ, ವಿಜಯ್‌ ತಂದೆತಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿಜಯ್‌ ಪದಗ್ರಹಣ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

Continue Reading

Latest

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

VISTARANEWS.COM


on

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಪ್ರಯತ್ನ ಮುಂದುವರಿಸಿದೆ. ವಿಸಿಕೆ ಬೆಂಬಲ ಪಡೆಯುವಲ್ಲಿ ವಿಜಯ್ ಪಡೆ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗುತ್ತಿದೆ. ಚೆನ್ನೈನ ಮಾಮಲ್ಲಪುರಂನ ಖಾಸಗಿ ಹೋಟೆಲ್‌ನಲ್ಲಿ ಮಧ್ಯಾಹ್ನ ಟಿವಿಕೆ ಶಾಸಕರ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ವಿಸಿಕೆ ಸುದ್ದಿಗೋಷ್ಠಿ ನಡೆಸಲಿದ್ದು, ಬೆಂಬಲ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಕಾಂಗ್ರೆಸ್‌ ಹಾಗೂ ಎಡಪಕ್ಷಗಳು ಟಿವಿಕೆಗೆ ಬೆಂಬಲ ಸೂಚಿಸಿವೆ.
ಸದ್ಯ ವಿಜಯ್ ನೇತೃತ್ವದ ಮೈತ್ರಿಗೆ 116 ಶಾಸಕರ ಬೆಂಬಲವಿದೆ. ವಿಸಿಕೆ ಯ ಇಬ್ಬರು ಶಾಸಕರು ಬೆಂಬಲ ನೀಡಿದರೆ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಸಿಗಲಿದೆ.
ಇಂದು ಸಂಜೆ ವಿಜಯ್‌ ಅವರು ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸುವ ಸಾಧ್ಯತೆಯಿದೆ.
ಸಂಖ್ಯಾಬಲ ಹೀಗಿದೆ:
ಟಿವಿಕೆ – 107
ಕಾಂಗ್ರೆಸ್‌ – 5
ಎಡಪಕ್ಷಗಳು – 4
ವಿಸಿಕೆ – 2

Continue Reading
Advertisement
Latest22 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌