ಬೆಂಗಳೂರು: ರಾಜ್ಯ ರಾಜಧಾನಿ ಹಾಗೂ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ (karnataka congress office) ಕಚೇರಿಗಾಗಿ ಎರಡು ಹೊಸ ಭವ್ಯ ಕಟ್ಟಡಗಳ ನಿರ್ಮಾಣಕ್ಕೆ ಕೆಪಿಸಿಸಿ (KPCC) ಉದ್ದೇಶಿಸಿದ್ದು, ಇದಕ್ಕಾಗಿ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದೆ. ಹಳೆಯ ಕಟ್ಟಡ ಕೆಡವಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಆದೇಶ ನೀಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸಮಿತಿ ರಚಿಸಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ (Race course road) ರಸ್ತೆಯಲ್ಲಿರುವ ಕಾಂಗ್ರೆಸ್ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಮಿತಿ ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಸಚಿವ ಕೆಜೆ ಜಾರ್ಜ್ (KJ George) ಅವರನ್ನು ನೇಮಿಸಲಾಗಿದೆ. ಎಂಎಲ್ಸಿ ಗೋವಿಂದರಾಜ್ ಸಂಚಾಲಕರಾಗಿ, ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್, ಸಚಿವರಾದ ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಶಾಸಕ ಕೃಷ್ಣಪ್ಪ ಸೇರಿ ಒಟ್ಟು 9 ಮಂದಿ ಸಮಿತಿಯಲ್ಲಿದ್ದಾರೆ.
ಮೈಸೂರಿನಲ್ಲಿ ಕಾಂಗ್ರೆಸ್ ಕಟ್ಟಡ ನಿರ್ಮಾಣ ಜವಾಬ್ದಾರಿ ಸಚಿವ ಮಹದೇವಪ್ಪ ಹೆಗಲಿಗೆ ಹೊರಿಸಲಾಗಿದೆ. ಸಮಿತಿ ಸದಸ್ಯರಾಗಿ ಸಚಿವ ಕೆ. ವೆಂಕಟೇಶ್, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ, ಶಾಸಕ ತನ್ವೀರ್ ಸೇಠ್, ಹರೀಶ್ ಗೌಡ ನೇಮಕ ಮಾಡಲಾಗಿದೆ. ಮುಡಾ ಅಧ್ಯಕ್ಷ ಮರಿಗೌಡ ಕೂಡ ಸಮಿತಿಯಲ್ಲಿದ್ದಾರೆ.
ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ
ಮಂಡ್ಯ: “ಕುಮಾರಸ್ವಾಮಿ ಅವರು ಈ ಹಿಂದೆ ಅವರೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ಮಂಡ್ಯದ ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ಮಂಗಳವಾರ ನಡೆದ ʼಜನಾಂದೋಲನ ಸಭೆʼ ಯಲ್ಲಿ ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಅಶ್ವತ್ಥನಾರಾಯಣ್, ಯೋಗೀಶ್ವರ್ ಅವರು ಪರಸ್ಪರ ಆರೋಪ, ಪ್ರತ್ಯಾರೋಪ, ಯೂ ಟರ್ನ್ ಹೊಡೆದಿದ್ದ ಹೇಳಿಕೆಗಳನ್ನು ವಿಡಿಯೋ ಮೂಲಕ ತೆರೆಯ ಮೇಲೆ ಪ್ರದರ್ಶಿಸಿದ ನಂತರ ಡಿಸಿಎಂ ಶಿವಕುಮಾರ್ ಮಾತನಾಡಿದರು.
“ಜನ ತೀರ್ಪು ನೀಡಿದ್ದಾರೆ. ಆದ ಕಾರಣಕ್ಕೆ ಗಂಡು ಭೂಮಿ ಮಂಡ್ಯದಲ್ಲಿ ಗೆಲುವು ಕಂಡಿದ್ದೀರಿ. ಇಲ್ಲಿಗೆ ಬಂದು ನಿಮ್ಮ ತಿರುವು-ಮುರುವು ಹೇಳಿಕೆಗಳ ಬಗ್ಗೆ ಉತ್ತರ ನೀಡಬೇಕು. ನಿಮ್ಮ ಅಮೃತದ ನುಡಿಮುತ್ತುಗಳನ್ನು ಈ ನೆಲದ ಮೇಲೆ ಉದುರಿಸಬೇಕು. “ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ” ಎಂದು ಶಿವಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಛೇಡಿಸಿದರು.
“ಮೋದಿ ಅವರ ಕೈ ಹಿಡಿದು ಕೇವಲ ಐದು ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಕುಮಾರಣ್ಣ ಹೇಳಿದ್ದರು. ಆದರೆ ಈಗ ನಾವು ಐದು ಜನ ಮಂತ್ರಿಗಳಿದ್ದೇವೆ, ನಾನು ಆ ರೀತಿ ಮಾತು ಕೊಡಲು ಮೂರ್ಖನೇ ಎಂದು ಹೇಳುತ್ತಿದ್ದಾರೆ. ಈ ಹೇಳಿಕೆಗಳಿಗೆ ಬಿಜೆಪಿ ಹಾಗೂ ಕುಮಾರಸ್ವಾಮಿ ಇಬ್ಬರೂ ಉತ್ತರ ಕೊಡಬೇಕು. 10 ನಿಮಿಷದಲ್ಲಿ ನಾನು ತೋರಿಸಿದ ಮೈತ್ರಿ ನಾಯಕರ ಮಾತುಗಳಿಗೆ ಉತ್ತರ ಕೊಡಲಿ” ಎಂದು ಆಗ್ರಹಿಸಿದರು.
ಇದನ್ನೂ ಓದಿ | Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್