ಕರ್ನಾಟಕ ಎಲೆಕ್ಷನ್
Karnataka Election 2023 : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನೇಮಕ; ಮೇ 20ರಂದು ಪ್ರಮಾಣವಚನ
Karnataka Election 2023 : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನೇಮಕವಾಗುವುದು ಬಹುತೇಕ ಖಚಿತವಾಗಿದ್ದು, ಗುರುವಾರ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಸಿದ್ಧತೆಗಳು ಆರಂಭಗೊಂಡಿವೆ.
ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಇನ್ನೂ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಿಲ್ಲ. ಆದರೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಪ್ರಮಾಣವಚನ ಕಾರ್ಯಕ್ರಮ ಗುರುವಾರ ನಡೆಯಲಿದ್ದು, ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಮೇ 20ರಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ.
ರಾಜಧಾನಿಯ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಸಿದ್ಧತೆ ನಡೆಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸೂಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುತ್ತಿದೆ.
ತಮಿಳು ನಾಡಿನ ಮುಖ್ಯಮಂತ್ರಿ ಸ್ಟಾಲಿನ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ.
ಸಂಧಾನ ಸೂತ್ರ ರೂಪಿಸಿದ ಹೈಕಮಾಂಡ್
ಪಕ್ಷದ ಉನ್ನತ ಮೂಲಗಳ ಪ್ರಕಾರ ಮುಖ್ಯಮಂತ್ರಿ ಹುದ್ದೆಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಸೂತ್ರ ರೂಪಿಸುವಲ್ಲಿ ಪಕ್ಷದ ಹೈಕಮಾಂಡ್ ಯಶಸ್ವಿಯಾಗಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನೇಮಕವಾಗಲಿದ್ದಾರೆ.
ಡಿಸಿಎಂ ಆಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ. ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದು, ಅವರಿಗೆ ಇಂಧನ ಮತ್ತು ಜಲ ಸಂಪನ್ಮೂಲ ಖಾತೆಯನ್ನು ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.
ಗುರುವಾರ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇದನ್ನೂ ಓದಿ: Karnataka Election Results: ಪ್ರಾಬಲ್ಯದ ವಿರುದ್ಧ ಜನಶಕ್ತಿ ಗೆದ್ದಿದೆ; ಫಲಿತಾಂಶದ ಬಳಿಕ ರಾಹುಲ್ ಗಾಂಧಿ ಹೇಳಿದ್ದಿಷ್ಟು
ಕರ್ನಾಟಕ ಎಲೆಕ್ಷನ್
Modi Magic: ಬರೀ ಮೋದಿ ಹೆಸರಿಗೆ ವೋಟ್ ಬರಲ್ಲ! ಬಿಜೆಪಿಗೆ ಆರೆಸ್ಸೆಸ್ ಮುಖವಾಣಿ ಪತ್ರಿಕೆಯಿಂದ ಫುಲ್ ಕ್ಲಾಸ್
Modi Magic: ಕರ್ನಾಟಕ ಚುನಾವಣೆ ಸೋತ ಬೆನ್ನಲ್ಲೇ ಆರೆಸ್ಸೆಸ್ ಚಿಂತಕರ ಚಾವಡಿ ಹೊಸ ನಿಟ್ಟಿನಲ್ಲಿ ಯೋಚಿಸುತ್ತಿರುವಂತಿದೆ. ಕೇವಲ ಮೋದಿ, ಹಿಂದುತ್ವದಿಂದಲೇ ಮತ ಬರುವುದಿಲ್ಲಎಂದು ಬಿಜೆಪಿಗೆ ಎಚ್ಚರಿಸಿದೆ.
ಮುಂಬೈ, ಮಹಾರಾಷ್ಟ್ರ: ಕರ್ನಾಟಕದಲ್ಲಿ ಬಿಜೆಪಿ ಹೀನಾಯವಾಗಿ ಸೋತಿರುವುದು ಬಿಜೆಪಿಯ ಥಿಂಕ್ ಟ್ಯಾಂಕ್‌ನಲ್ಲಿ ಪರ್ಯಾಯ ಯೋಚನೆಗೆ ಕಾರಣವಾಗಿದೆಯೇ? ಹೌದು, ಇಂಥದೊಂದು ಅನುಮಾನ ಬರಲು ಕಾರಣವಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ದ ಮುಖವಾಣಿಯಾಗಿರುವ ಆರ್ಗೈನಸರ್ (Organizer) ವಾರ ಪತ್ರಿಕೆಯಲ್ಲಿ ಪ್ರಕಟವಾದ ವರದಿಯೊಂದು ಇದಕ್ಕೆ ಪುಷ್ಟಿ ನೀಡುತ್ತದೆ. ಚುನಾವಣೆ ಗೆಲ್ಲಲು ಮೋದಿ (Modi Magic) ನಾಮಬಲ, ಹಿಂದುತ್ವವು (hindutva) ಪ್ರತಿಬಾರಿಯೂ ಕೆಲಸ ಮಾಡುವುದಿಲ್ಲ ಎಂದು ಕಟುವಾಗಿ ಟೀಕಿಸಿದೆ.
ಕರ್ನಾಟಕದಲ್ಲಿನ ಹೀನಾಯ ಸೋಲು ಮತ್ತು ಮುಂಬರುವ 2024ರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ವರದಿಯು ಮಹತ್ವ ಪಡೆದುಕೊಂಡಿದೆ. ಬಿಜೆಪಿಯ ಎಲ್ಲ ಚುನಾವಣೆಗಳನ್ನು ಮೋದಿ ಮ್ಯಾಜಿಕ್‌ನಿಂದಲೇ ನಡೆಯುತ್ತದೆ ಎಂದು ಭಾವಿಸುತ್ತದೆ. ಆದರೆ, ಈಗ ಮೋದಿ ಮ್ಯಾಜಿಕ್ ನಡೆಯುತ್ತಿಲ್ಲ ಎಂಬುದು ಸಾಬೀತಾಗಿದೆ ಎಂಬ ರೀತಿಯಲ್ಲಿ ಆರೆಸ್ಸೆಸ್ ಮುಖವಾಣಿ ವರದಿಯನ್ನು ಪ್ರಕಟಿಸಿದೆ. ಚುನಾವಣೆಗಳನ್ನು ಗೆಲ್ಲಲು ಬಿಜೆಪಿ ಪ್ರಭಾವಿ ನಾಯಕತ್ವ ಅಗತ್ಯವಾಗಿದೆ. ಪ್ರಾದೇಶಿಕವಾಗಿ ಆಶೋತ್ತರಗಳನ್ನು ಈಡೇರಿಸುವ ಪ್ರಯತ್ನ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರಾದೇಶಿಕ ಮಟ್ಟದಲ್ಲಿ ಪ್ರಬಲ ನಾಯಕತ್ವ ಮತ್ತು ಪರಿಣಾಮಕಾರಿ ಪ್ರಯತ್ನವಿಲ್ಲದೇ, ಪ್ರಧಾನಿ ಮೋದಿಯವರ ವರ್ಚಸ್ಸು ಮತ್ತು ಹಿಂದುತ್ವವು ಸೈದ್ಧಾಂತಿಕ ವಿಷಯಗಳು ಚುನಾವಣೆ ಗೆಲ್ಲಲು ಸಾಕಾಗುವುದಿಲ್ಲ ಪತ್ರಿಕೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿ ಹೊರಬಂದಿವೆ. ಆದರೆ 2024 ರ ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಒಳ್ಳೆಯ ಹಾದಿಯಂತೂ ಅಲ್ಲ. ಹಾಗಾಗಿ, ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿಗೆ ಇದು ಸರಿಯಾದ ಸಮಯ ಎಂದು ಅದು ಹೇಳಿದೆ.
ಕರ್ನಾಟಕದ ಚುನಾವಣೆಯಲ್ಲಿ ಭ್ರಷ್ಟಾಚಾರವು ಪ್ರಮುಖ ವಿಷಯವಾಗಿತ್ತು. ಮೋದಿ ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಸಮರ್ಥಿಸಿಕೊಳ್ಳಬೇಕಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Jagadish Shettar: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿಯೇ ಸೋತಿದೆ: ಜಗದೀಶ್ ಶೆಟ್ಟರ್
ಕರ್ನಾಟಕ ಚುನಾವಣೆಯಲ್ಲಿ ಆಡಳಿತ ಪಕ್ಷವು (ಬಿಜೆಪಿ) ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳೊಂದಿಗೆ ಮತದಾರರನ್ನು ಹುರಿದುಂಬಿಸಲು ಅತ್ಯುತ್ತಮವಾಗಿ ಪ್ರಯತ್ನಿಸಿತು. ಆದರೆ, ಕಾಂಗ್ರೆಸ್ ಸ್ಥಳೀಯ ಮಟ್ಟದಲ್ಲಿ ತನ್ನ ದಾಳಿ ಉರುಳಿಸಿತು. ಹಾಗಾಗಿ, ಅತಿ ಹೆಚ್ಚು ಮತದಾನವಾದ ಈ ಚುನಾವಣೆಯಲ್ಲಿ ಬಿಜೆಪಿಗೆ ತನ್ನ ಈ ಹಿಂದಿನ ಮತ ಪ್ರಮಾಣವನ್ನು ಉಳಿಸಿಕೊಳ್ಳಲು ವಿಫಲವಾಯಿತು. ಇದರಿಂದ ಹೀನಾಯವಾಗಿ ಸೋತಿತು. ಹಾಲಿ ಸಚಿವರ ವಿರುದ್ಧದ ಆಡಳಿತ ವಿರೋಧಿ ನಿಲುವು ಬಿಜೆಪಿಗೆ ಮುಳುವಾಯಿತು ಎಂದು ಆರ್ಗನೈಸರ್ ಹೇಳಿದೆ.
ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಭಾಗ-2: ಕನ್ನಡ ಬಾರದ ಶಿಕ್ಷಕಿ ವಿರುದ್ಧ ಉಪವಾಸ ಕುಳಿತ ವಿದ್ಯಾರ್ಥಿಗಳು!
ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಕೇರಳ ಸರ್ಕಾರ ಒಬ್ಬ ಶಿಕ್ಷಕಿಯನ್ನು ನಿಯೋಜನೆ ಮಾಡಿರುವುದನ್ನು ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದಾರೆ.
ಬೆಂಗಳೂರು: ಕರ್ನಾಟಕ ಹಾಗೂ ಕಾಸರಗೋಡಿನ ನಡುವಿನ ಕೊಂಡಿಯಾಗಿರುವ ಕಾಸರಗೋಡಿನಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಕಂಟಕ ಇನ್ನೂ ತಪ್ಪಿಲ್ಲ. ರಾಜಕೀಯವಾಗಿ ಕೇರಳ ರಾಜ್ಯಕ್ಕೆ ಸೇರಿರುವ ಕಾಸರಗೋಡಿನಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಲು ಅಥವಾ ನಿರ್ಬಲಗೊಳಿಸಲು ಆಗಾಗ್ಗೆ ಅಲ್ಲಿ ನಡೆಯುವ ಪ್ರಯತ್ನಗಳ ಕುರಿತು 2018ರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಎಂಬ ಸಿನಿಮಾವನ್ನು ರಿಷಭ್ ಶೆಟ್ಟಿ ನಿರ್ಮಿಸಿದ್ದರು.
ಈ ಸಿನಿಮಾ ಕರ್ನಾಟಕದಾದ್ಯಂತ ಜನಮೆಚ್ಚುಗೆಯನ್ನು ಪಡೆದು ಕಾಸರಗೋಡು ಸೇರಿ ರಾಜ್ಯದ ವಿವಿಧೆಡೆ ಸರ್ಕಾರಿ ಶಾಲೆ ಉಳಿಸುವ ಪ್ರೇರೇಪಣೆಯನ್ನು ಸಾರ್ವಜನಿಕರಿಗೆ ನೀಡಿತ್ತು. ಆದರೆ ಇದೀಗ ನಡೆದಿರುವುದು ಸಿನಿಮಾ ಕಥೆ ಅಲ್ಲ, ನಿಜವಾದ ಘಟನೆ.
ಕಾಸರಗೋಡು ಜಿಲ್ಲೆಯ ಅಡೂರು ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಕೇರಳ ಸರ್ಕಾರ ಒಬ್ಬ ಶಿಕ್ಷಕಿಯನ್ನು ನಿಯೋಜನೆ ಮಾಡಿದೆ. ಆ ಶಿಕ್ಷಕಿ ಸಮಾಜ ವಿಜ್ಞಾನ ಬೋಧಿಸುವವರಿದ್ದರು. ಆದರೆ ಅವರಿಗೆ ಕನ್ನಡವೇ ಬರುವುದಿಲ್ಲ. ಕನ್ನಡ ಮಾಧ್ಯಮ ಶಾಲೆಯಲ್ಲಿ ಕನ್ನಡವೇ ಬಾರದ ಶಿಕ್ಷಕರನ್ನು ನೇಮಿಸಿದ್ದಕ್ಕೆ ಪೋಷಕರು ಹಾಗೂ ಸ್ವತಃ ವಿದ್ಯಾರ್ಥಿಗಳೇ ಸಿಟ್ಟಾಗಿದ್ದಾರೆ.
ಇತ್ತೀಚೆಗೆ ಈ ಶಿಕ್ಷಕಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಆಗಮಿಸಿದ್ದರು. ಆದರೆ ಆಗ ಗ್ರಾಮಸ್ಥರು ವಿರೋಧಿಸಿದ್ದರಿಂದ ವಾಪಸಾಗಿದ್ದರು. ಆದರೆ ಶನಿವಾರ ಪೊಲೀಸ್ ಕಾವಲಿನೊಂದಿಗೆ ವರದಿ ಮಾಡಿಕೊಳ್ಳಲು ಶಿಕ್ಷಕಿ ಆಗಮಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳು ಊಟವನ್ನೂ ಮಾಡದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಘಟನಾವಳಿಗಳನ್ನು ತಿಳಿದ ಮುಖ್ಯಶಿಕ್ಷಕರು ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೆ ಸೋಮವಾರವೂ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ.
ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಕಳೆದ ವರ್ಷ ಕಾಸರಗೋಡಿನ ಅನೇಕ ಕನ್ನಡ ಮಾಧ್ಯಮ ಶಾಲೆಗಳಿಗೆ ಕ ನ್ನಡವೇ ತಿಳಿದಿಲ್ಲದ ಶಿಕ್ಷಕರನ್ನು ನಿಯೋಜನೆ ಮಾಡಲಾಗಿತ್ತು. ಇದರ ವಿರುದ್ಧ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕೇರಳ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಸಂಬಂಧ ಪ್ರತಿಭಟನೆಗಳು ನಡೆದಾಗ ಸರ್ಕಾರ ತನ್ನ ನಿರ್ಧಾರವನ್ನು ಬದಲಾವಣೆ ಮಾಡಿಕೊಂಡಿತ್ತು.
ಆನಂತರ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದಾಗಲೂ, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಈಗ ಮತ್ತೊಮ್ಮೆ ಸರ್ಕಾರ ಅದೇ ತಪ್ಪನ್ನು ಮಾಡಿದೆ. ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಕೇರಳ ಸರ್ಕಾರಕ್ಕೆ ದೂರವಾಣಿ ಹಾಗೂ ಪತ್ರದ ಮೂಲಕ ಸಂಪರ್ಕಿಸಲಾಗಿದೆ. ಕಾಸರಗೋಡು ಜಿಲ್ಲಾಧಿಕಾರಿಗೂ ತಿಳಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಇದನ್ನೂ ಓದಿ: ಕೊಣನೂರು ಪಿಎಸ್‌ಐ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು; ಸರ್ಕಾರಿ ಶಾಲೆಗೆ ಕಲ್ಲೆಸೆದು ವಿಕೃತಿ
ಕರ್ನಾಟಕ
Congress Guarantee: ಡಿಗ್ರಿ ನಂತರ ಪಿಜಿ ಓದಿದರೆ ಯುವನಿಧಿ ಇಲ್ಲ: ಸರ್ಕಾರದ ಮಾರ್ಗಸೂಚಿಯಲ್ಲಿ ಬಯಲಾಯ್ತು ಸತ್ಯ
ನಿರುದ್ಯೋಗ ಭತ್ಯೆಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಇನ್ನೂ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ.
ಬೆಂಗಳೂರು: ರಾಜ್ಯದ ನಿರುದ್ಯೋಗ ಯುವಕರಿಗೆ ಭತ್ಯೆ ನೀಡುವ ಯುವನಿಧಿ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹಾಗೂ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ, ಪದವಿ ವ್ಯಾಸಂಗ ಮಾಡಿದವರಿಗಷ್ಟೆ ನಿರುದ್ಯೋಗಭತ್ಯೆ ಸಿಗಲಿದೆ.
2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿ೦ಗಳು 3000 ರೂ. ಹಾಗೂ
ಡಿಪ್ಲೊಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿ೦ಗಳು 1500 ರೂ. ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ ಯೋಜನೆ” ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆಯನ್ನು ಮೊದಲ ಸಂಪುಟ ಸಭೆಯಲ್ಲಿ ಸರ್ಕಾರ ನೀಡಿತ್ತು.
ಸಚಿವ ಸಂಪುಟದ ಅನುಮೋದನೆ ನ೦ತರ ಯೋಜನೆಯನ್ನು ಅನುಷ್ಠಾನಗೊಳಿಸಲು ಷರತ್ತು ಮತ್ತು ನಿಬ೦ಧನೆಗಳು ಹಾಗೂ ಅನರ್ಹತೆಯ ಮಾನದಂಡಗಳನ್ನು ವಿಧಿಸಿ ಆದೇಶ ಹೊರಡಿಸಿದೆ.
2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾ೦ಕದಿ೦ದ 180 ದಿನಗಳು ಕಳೆದರೂ ಉದ್ಯೋಗ
ಲಭಿಸದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿ೦ಗಳು 3000 ರೂ. ನೀಡಲಾಗುತ್ತದೆ. ಇದರಲ್ಲಿ ಇಂಜಿನಿಯರಿಂಗ್, ಮೆಡಿಕಲ್‌ನಂತಹ ವೃತ್ತಿಪರ ಕೋರ್ಸ್‌ಗಳೂ ಸೇರಿವೆ. ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ
ತಿ೦ಗಳು 1500 ರೂ. ನೀಡಲಾಗುತ್ತದೆ. ಎರಡೂ ಭತ್ಯೆಗಳನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲಾಗುತ್ತದೆ.
ಪದವೀಧರರಿಗೆ ಯುವನಿಧಿ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಪದವಿ ನಂತರ ಸ್ನಾತಕೋತ್ತರ ವ್ಯಾಸಂಗಕ್ಕೆ ತೆರಳುವವರಿಗೆ ಭತ್ಯೆ ಇಲ್ಲ ಎಂದು ತಿಳಿಸಿದೆ. ಆದರೆ ಸ್ನಾತಕೋತ್ತರ ಪದವಿ ನಂತರ ಉದ್ಯೋಗ ಲಭಿಸದಿದ್ದರೆ ಏನು ಎಂಬ ಪ್ರಶ್ನೆಗೆ ಮಾರ್ಗಸೂಚಿಯಲ್ಲಿ ಉತ್ತರ ಇಲ್ಲ.
ಷರತ್ತು ಮತ್ತು ನಿಬಂಧನೆಗಳು:
- ಪದವಿ ಅಥವಾ ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
- ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ
ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಮಗಿತಗೊಳಿಸಲಾಗುವುದು. - ಭತ್ಯೆಯನ್ನು ಖಾತೆಗೆ ನೇರ ನಗದು ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು
ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. - ವಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತ೦ತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನ೦ತರ ತಪ್ಪು ಫೋಷಣೆ
ಅಥವಾ ಘೋಷಿಸಲು ವಿಫಲವಾದರೆ ದ೦ಡ ವಿಧಿಸಲಾಗುವುದು.
ಯೋಜನೆಗೆ ಅರ್ಹರಾಗದೇ ಇರುವವರು ಯಾರು?
- ಉನ್ನತ ವ್ಯಾಸ೦ಗಕ್ಕೆ ದಾಖಲಾತಿ ಹೊ೦ದಿ ವಿದ್ಯಾಭ್ಯಾಸ ಮು೦ದುವರಿಸುವವರು.
- ಶಿಶಿಕ್ಕು (ಅಪ್ರೆಂಟೀಸ್) ವೇತನವನ್ನು ಪಡೆಯುತ್ತಿರುವವರು.
- ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
- ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ
ಉದ್ಯೋಗ ಹೊ೦ದಿದವರು ಈ ಯೋಜನೆಗೆ ಅರ್ಹರಲ್ಲ.
ನಿವಾಸಿ ಪ್ರಮಾಣ ಪತ್ರ:
ಕನ್ನಡಿಗರಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಹಾಗಾಗಿ ಕರ್ನಾಟಕದ ನಿವಾಸಿ ಎಂದು ದೃಢೀಕರಿಸಲು ಡೊಮಿಸಿಲ್ ಸರ್ಟಿಫಿಕೇಟ್ (ನಿವಾಸಿ ಪ್ರಮಾಣಪತ್ರ) ಅಗತ್ಯವಾಗುತ್ತದೆ ಎಂಬ ಚರ್ಚೆ ನಡೆದಿದೆ. ನಿವಾಸಿ ಪ್ರಮಾಣಪತ್ರಕ್ಕೆ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಸೇವಾಸಿಂಧು ಮೂಲಕ ಅರ್ಜಿ:
ನಿರುದ್ಯೋಗ ಭತ್ಯೆಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಇನ್ನೂ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ. ಕಾರಣವೇನೆಂದರೆ ಈ ವರ್ಷ ಅಂದರೆ 2023ರಲ್ಲಿ ತೇರ್ಗಡೆ ಹೊಂದಿರುವ ಪದವೀಧರರು ಹಾಗೂ ಡಿಪ್ಲೊಮಾದಾರರಿಗೆ ಮಾತ್ರವೇ ಈ ಯೋಜನೆ ಅನ್ವಯವಾಗಲಿದೆ. ಪದವಿ ಫಲಿತಾಂಶಗಳು ಆಗಮಿಸಿ ಆರು ತಿಂಗಳ ನಂತರವಷ್ಟೆ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ. ಹಾಗಾಗಿ ಇದಕ್ಕೆ ಇನ್ನೂ ಸಮಯವಿದೆ.
ಕರ್ನಾಟಕ
Political News : ನಿಮ್ಮ ಶಾಸಕರು ಬೆಂಗಳೂರಿನಲ್ಲಿ ಎಲ್ಲಿ ಸಿಗುತ್ತಾರೆ ಗೊತ್ತೇ? ಇಲ್ಲಿದೆ ಮಾಹಿತಿ!
ನೂತನ ಶಾಸಕರಿಗೆ ಬೆಂಗಳೂರಿನ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ (Political News). ಈ ಕುರಿತ ಮಾಹಿತಿ ಇಲ್ಲಿದೆ.
ಬೆಂಗಳೂರು: ನೂತನ ವಿಧಾನಸಭೆಗೆ ಆಯ್ಕೆಯಾಗಿರುವ ರಾಜ್ಯದ ಎಲ್ಲ ಶಾಸಕರುಗಳಿಗೆ ರಾಜಧಾನಿಯ ಶಾಸಕರ ಭವನದಲ್ಲಿ ಕೊಠಡಿಗಳನ್ನು ಹಂಚಿಕೆ (Political News) ಮಾಡಲಾಗಿದೆ.
ವಿಧಾನಸಭೆ ಅಧಿವೇಶನ ಮತ್ತು ಸರ್ಕಾರದ ಕೆಲಸಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಶಾಸಕರು ಇನ್ನು ಮುಂದೆ ಶಾಸಕರ ಭವನದ ಈ ಕೊಠಡಿಯಲ್ಲಿ ಉಳಿದುಕೊಳ್ಳಲಿದ್ದಾರೆ. ಯಾವ ಶಾಸಕರಿಗೆ ಯಾವ ಕೊಠಡಿಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ;
ಇದನ್ನೂ ಓದಿ: Congress Guarantee : ನಿಮಗೆ ಫ್ರೀ ಕರೆಂಟ್ ಸಿಗುತ್ತದೆಯೋ ಇಲ್ಲವೋ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಸರಳ ಮಾರ್ಗ
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ23 hours ago
Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ
-
ಕರ್ನಾಟಕ24 hours ago
Ullal News: ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಯು.ಟಿ. ಖಾದರ್
-
ಕರ್ನಾಟಕ16 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ23 hours ago
Shivamogga News: ಶಿಕಾರಿಪುರದಲ್ಲಿ ರಾಷ್ಟ್ರಕೂಟರ ಕಾಲದ ಪ್ರಾಚ್ಯಾವಶೇಷಗಳು ಪತ್ತೆ
-
ಕರ್ನಾಟಕ13 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ದೇಶ12 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ15 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ