ಕರ್ನಾಟಕ ಎಲೆಕ್ಷನ್
Karnataka Election 2023 : ಪುಷ್ಪಗಳ ಹಾಸಿನ ಮೇಲೆ ಮೋದಿ ರೋಡ್ ಶೋ ; ಅರಳೀತೆ ಕಮಲ?
ಈ ಚುನಾವಣೆಯ (Karnataka Election 2023) ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ಮೂರನೇ ರೋಡ್ ಶೋ ನಡೆಸಿದ್ದಾರೆ. ಇದು ಚುನಾವಣೆಯ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂಬ ಲೆಕ್ಕಾಚಾರ ಈಗ ನಡೆಯುತ್ತಿದೆ.
ಬೆಂಗಳೂರು: ಪ್ರಧಾನಿ ಮೋದಿ ಅವರ ಮೂರನೇ ರೋಡ್ ಶೋ ಅಂತ್ಯಗೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ (Karnataka Election 2023) ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿಯ ಅಲೆ ಎಬ್ಬಿಸುವ ಉದ್ದೇಶದಿಂದ ನಗರ ಮೂರು ದಿಕ್ಕುಗಳಲ್ಲಿ ಅವರು ರೋಡ್ ಶೋ (Narendra Modi Road show) ನಡೆಸಿದ್ದು, ಭಾನುವಾರ ರೋಡ್ ಶೋನಲ್ಲಿ 6.5 ಕಿ.ಮೀ. ಸಾಗಿದ ಪ್ರಧಾನಿ ಮೋದಿ (Modi in Karnataka) ಬಿಜೆಪಿ ಅಭಿಮಾನಿಗಳಲ್ಲಿ ಹುರುಪು ಮೂಡಿಸಿದರು.
ನ್ಯೂ ತಿಪ್ಪಸಂದ್ರದ ಕೆಂಪೇಗೌಡ ವೃತ್ತದಿಂದ ರೋಡ್ ಶೋ ಆರಂಭಗೊಂಡಿತು. ಕೆಂಪೇಗೌಡರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ತೆರದ ವಾಹನ ಏರಿದ ಮೋದಿ ಟ್ರಿನಿಟಿ ಸರ್ಕಲ್‌ನಲ್ಲಿ ತಮ್ಮ ರೋಡ್ ಶೋ ಅಂತ್ಯಗೊಳಿಸಿದರು. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಸಂಸದ ಪಿ.ಸಿ. ಮೋಹನ್ ಮೋದಿಯವರೊಂದಿಗೆ ವಾಹನದಲ್ಲಿದ್ದರು.
ರೋಡ್ ಶೋ ಅಂತ್ಯಗೊಳಿಸಿ ವಾಹನದಿಂದ ಇಳಿಯುವ ವೇಳೆ ಸುತ್ತಲೂ ನಿಂತಿದ್ದ ಜನರಿಗೆ ನಾಲ್ಕು ದಿಕ್ಕುಗಳಿಗೆ ತಿರುಗಿ ಬಾಗಿ ನಮಸ್ಕರಿಸಿ ವಾಹನದಿಂದ ಕೆಳಗಿಳಿದಿದ್ದು ಎಲ್ಲರ ಗಮನ ಸೆಳೆಯಿತು. ಜತೆಗೆ ಬಂದಿದ್ದ ರಾಜೀವ್ ಚಂದ್ರಶೇಖರ್ ಮತ್ತು ಪಿ ಸಿ ಮೋಹನ್ ಅವರ ಬೆನ್ನು ತಟ್ಟಿ ಕೃತಜ್ಞತೆ ಸಲ್ಲಿಸಲು ಮೋದಿ ಮರೆಯಲಿಲ್ಲ. ಇಲ್ಲಿಗೆ ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ಮೂರು ರೋಡ್ ಶೋ ನಡೆಸಿದಂತಾಗಿದೆ. ಇದಲ್ಲದೆ ಕಲಬುರಗಿ, ಮೈಸೂರು, ತುಮಕೂರಿನಲ್ಲಿಯೂ ಮೋದಿ ರೋಡ್ ಶೋ ನಡೆಸಿದ್ದಾರೆ.
ಮೋದಿಗೆ ತಲೆಬಾಗಿದ ವರುಣ!
ಭಾನುವಾರ ಬೆಳಗ್ಗೆ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತಾದರೂ ಮೋದಿಯ ರೋಡ್ ಶೋ ಆರಂಭವಾಗುವ ವೇಳೆಗೆ ಸಣ್ಣಗೆ ಸುರಿದ ಮಳೆ ರಸ್ತೆಯನ್ನು ತೊಳೆದು, ರೋಡ್ ಶೋಗೆ ದಾರಿ ಸುಗಮ ಮಾಡಿಕೊಟ್ಟಿತ್ತು. ಸೂರ್ಯ ಕೂಡ ರೋಡ್ ಶೋಗೆ ಸಾಕ್ಷಿಯಾಗಿ ಹರುಪು ಮೂಡಿಸಿದ್ದ. ಹೀಗಾಗಿ ಮಳೆ ಸುರಿಯುವ ಯಾವುದೇ ಆತಂಕವಿಲ್ಲದೆ ಈ ರೋಡ್ ಶೋ ನಡೆಯಿತು.
ಎಂದಿನಂತೆ ಮೋದಿ ಸಾಗಿ ಬರುತ್ತಿದ್ದಂತೆಯೇ ರಸ್ತೆಯ ಎರಡೂ ಬದಿಯಲ್ಲಿ ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳು ʼಮೋದಿ… ಮೋದಿ…ʼ ಎಂದು ಘೋಷಣೆ ಕೂಗುತ್ತಾ ಸ್ವಾಗತಿಸಿದರು. ಮೋದಿಯವರ ಮೇಲೆ ಹೂವಿನ ಮಳೆ ಸುರಿಸಿದರು. ಕೆಲವು ಕಡೆ ಮೋದಿಯವರೂ ಕೂಡ ತಮಗೆ ಎರಚ್ಚಿದ್ದ ಪುಷ್ಪಗಳ ದಳಗಳನ್ನು ಸಂಗ್ರಹಿಸಿದ ಜನರ ಮೇಲೆ ಎಸೆದು ಖುಷಿ ಪಟ್ಟರು. ಬಿಜೆಪಿ ಕಾರ್ಯಕರ್ತರು ಮೋದಲೇ ಜನರಿಗೆ ಹೂವನ್ನು ವಿತರಿಸಿದ್ದರು.
ಕೆಲವು ಕಡೆ ಕಲಾತಂಡಗಳೂ ರೋಡ್ ಶೋನಲ್ಲಿ ಭಾಗವಹಿಸಿ ಜನರ ಸಂಭ್ರಮ ಹೆಚ್ಚಿಸಿದ್ದವು. ಮುಖ್ಯವಾಗಿ ಇಂದಿರಾನಗರ ಮೆಟ್ರೊ ಸ್ಟೇಷನ್ ಬಳಿ ವೀರಗಾಸೆ, ಯಕ್ಷಗಾನ, ಕಂಗೀಲು, ಕೀಲುಕುದುರೆ, ತಮಟೆ ತಂಡ, ಡೊಳ್ಳಿನ ತಂಡ ಸೇರಿದಂತೆ ಅನೇಕ ಕಲಾತಂಡಗಳು ರೋಡ್ ಶೋಗೆ ಹೊಸ ಮೆರಗು ನೀಡಿದವು. ಶನಿವಾರ ನಡೆದ ರೋಡ್ ಶೋನಂತೆ ಭಾನುವಾರ ಭಜರಂಗಿಗಳ ಘೋಷಣೆ ಹೆಚ್ಚಾಗಿ ಕೇಳಿ ಬರಲಿಲ್ಲ.
ಮಹಿಳೆಯರ ಸಂಭ್ರಮ ಹೆಚ್ಚು
ಇಂದಿನ ರೋಡ್ ಶೋನಲ್ಲಿ ಕೂಡ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮೋದಿ ಆಗಮಿಸುತ್ತಿದ್ದಂತೆಯೇ ಮೋದಿಗೆ ಜೈ, ಹರ ಹರ ಮೋದಿ ಎಂದು ಘೋಷಣೆ ಕೂಗುತ್ತಿದ್ದರು.
ಭಾನುವಾರ ನಡೆದ ರೋಡ್ ಶೋನಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಇತರ ಭಾಷಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಮೋದಿಯವರನ್ನು ಹತ್ತಿರದಿಂದ ನೋಡಿ ಖುಷಿಪಟ್ಟರು. ರೋಡ್ ಶೋ ನೋಡಲು ನಿವೃತ್ತ ಸೈನಿಕರು ಆಗಮಿಸಿದ್ದನ್ನು ಗಮನಿಸಿದ ಪ್ರಧಾನಿ ಮೋದಿ ಅವರಿಗೆ ಸೆಲ್ಯೂಟ್ ಹೊಡೆದು ಗೌರವ ಸಲ್ಲಿಸಿದರು.
ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಣಾಮ
ಶನಿವಾರ ನಡೆದ ರೋಡ್ ಶೋನಲ್ಲಿ ಒಟ್ಟು 13 ಕ್ಷೇತ್ರಗಳಲ್ಲಿ ಹಾದು ಹೋಗಿದ್ದರೆ ಭಾನುವಾರ ನಡೆದ ರೋಡ್ ಶೋ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ, ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರ, ಶಿವಾಜಿನಗರ ವಿಧಾನಸಭಾ ಕ್ಷೇತ್ರ, ಶಾಂತಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಹಾದು ಹೋಯಿತು. ಈ ಕ್ಷೇತ್ರಗಳ ಮತದಾರರ ಮಾತ್ರವಲ್ಲದೆ ನಗರದ ಮತದಾರರ ಗಮನ ಸೆಳೆಯುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ. ಇದರಿಂದ ನಗರದ ಎಷ್ಟು ಕ್ಷೇತ್ರಗಳಲ್ಲಿ ಕಮಲ ಅರಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಇದನ್ನೂ ಓದಿ : Modi in Karnataka : ಬೆಂಗಳೂರಿನಲ್ಲಿ ಮೋದಿ ರೋಡ್ ಶೋ; ಜನರ ಸಂಭ್ರಮದ ಕಲರ್‌ಫುಲ್ ಚಿತ್ರಗಳು ಇಲ್ಲಿವೆ
ಕರ್ನಾಟಕ
Shadow CM: ಕಾಂಗ್ರೆಸ್‌ನ ಪೇಸಿಎಂ ಅಭಿಯಾನಕ್ಕೆ ಬಿಜೆಪಿಯಿಂದ ಶ್ಯಾಡೊ ಸಿಎಂ ಪೋಸ್ಟರ್ ವಾರ್
ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ (Shadow CM) ಎಂದು ಬಿಜೆಪಿ ಆರೋಪಿಸಿದೆ.
ಬೆಂಗಳೂರು: ವಿಧಾನಸಭೆ ಎಲೆಕ್ಷನ್‌ಗೂ ಮುನ್ನ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ರೂಪಿಸಿತ್ತು. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಾಡಿದ್ದ 40% ಕಮಿಷನ್ ಆರೋಪವನ್ನೇ ಆಧಾರವಾಗಿಸಿಕೊಂಡು ಪೆಸಿಎಂ ಪೋಸ್ಟರ್‌ಗಳನ್ನು ಬಹಿರಂಗವಾಗಿ ಅಂಟಿಸಿತ್ತು. (Shadow CM)
ಈ ಪೋಸ್ಟರ್‌ಗಳು ಸರ್ಕಾರಕ್ಕೆ ಸಾಕಷ್ಟ ಮುಜುಗರ ಉಂಟುಮಾಡಿದ್ದವು. ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಜನರಿಗೆ ಮನವರಿಕೆ ಮಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದ್ದವು. ಇದೀಗ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಶ್ಯಾಡೊ ಸಿಎಂ ಅಭಿಯಾನವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.
ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಆರೋಪಕ್ಕೆ ಅನಗುಣವಾಗಿ ಶ್ಯಾಡೊ ಸಿಎಂ ಪೋಸ್ಟರ್‌ಗಳನ್ನು ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ.
1. ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ.
ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ @siddaramaiah, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ.
— BJP Karnataka (@BJP4Karnataka) July 15, 2023
ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ.
2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ. pic.twitter.com/Wvf09am1e6
2. ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…
ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…#ShadowCM pic.twitter.com/FXM2DcQ4LB
— BJP Karnataka (@BJP4Karnataka) July 14, 2023
3. ಹುದ್ದೆಗಳು ಮಾರಾಟಕ್ಕಿವೆ… #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.
ಹುದ್ದೆಗಳು ಮಾರಾಟಕ್ಕಿವೆ…#ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು. pic.twitter.com/tWIHlbcNAH
— BJP Karnataka (@BJP4Karnataka) July 12, 2023
4. ಹುದ್ದೆಗಳು ಮಾರಾಟಕ್ಕಿವೆ.. #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.
ಹುದ್ದೆಗಳು ಮಾರಾಟಕ್ಕಿವೆ..#ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು. pic.twitter.com/XLnSkAoW7q
— BJP Karnataka (@BJP4Karnataka) July 7, 2023
5. CM ನೆರಳಿನಲ್ಲಿ #ShadowCM ಅವ್ಯವಹಾರ. ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ.
CM ನೆರಳಿನಲ್ಲಿ #ShadowCM ಅವ್ಯವಹಾರ.
— BJP Karnataka (@BJP4Karnataka) July 6, 2023
ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ. #ShadowCM #ATMSarkara pic.twitter.com/E3ft1fYGFP
6. Commission Master in the shadows of Chief Minister!
ಕರ್ನಾಟಕ
Evm Machine : ಡೆಮಾಲಿಷನ್ ವೇಳೆ ಎಂಜಿನಿಯರ್ ಮನೆಯಲ್ಲಿ ಇವಿಎಂ ಯೂನಿಟ್‌ಗಳು ಪತ್ತೆ!
Evm Control Units : ಮನೆ ಡೆಮಾಲಿಷನ್ ಸಮಯದಲ್ಲಿ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗಳು ಪತ್ತೆಯಾಗಿವೆ. ಇವಿಎಂ ಕಂಟ್ರೋಲ್ ಯೂನಿಟ್‌ಗಳನ್ನು ತಹಸೀಲ್ದಾರ್ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ಮನೆ ಡೆಮಾಲಿಷನ್ ವೇಳೆ ಇವಿಎಂ ಕಂಟ್ರೋಲ್ ಯೂನಿಟ್‌ಗಳು (Evm Control Units ) ಪತ್ತೆ ಆಗಿವೆ. ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶಿವಕುಮಾರ್ ಎಂಬುವವರ ಮನೆಯಲ್ಲಿ (Evm Machine) ಪತ್ತೆ ಆಗಿದೆ.
2018ರ ಚುನಾವಣೆಯಲ್ಲಿ ಬಳಸಿ ರಿಜೆಕ್ಟ್ ಆಗಿದ್ದ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳು ಎನ್ನಲಾಗಿದೆ. ಅಂದಹಾಗೇ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ಡೆಮಾಲಿಷನ್ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್ ಯೂನಿಟ್ ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಸೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯ ಅವಶೇಷದಡಿ 7 ಯೂನಿಟ್‌ಗಳು ಪತ್ತೆ ಆಗಿದ್ದು, ತಹಸೀಲ್ದಾರ್ ಎಲ್ಲವನ್ನೂ ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ತಹಸೀಲ್ದಾರ್ ಮೋಹನ ಕುಮಾರಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿಯನ್ನು ನೀಡಿದ್ದಾರೆ. ಸದ್ಯ, ರಿಜೆಕ್ಟ್ ಆಗಿರುವ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳನ್ನು ಯಾಕಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್ ಕಮ್ ಬ್ಯಾಕ್
MLC Election: ಕಾಂಗ್ರೆಸ್‌ನ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಎಂಎಲ್‌ಸಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ (MLC Election) ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಅಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ಅವಿರೋಧ ಆಯ್ಕೆ ಘೋಷಿಸಲಾಗಿದೆ.
ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿ ಡಾ.ಕೆ ಪದ್ಮರಾಜನ್ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಹೀಗಾಗಿ ಉಳಿದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.
ಶೆಟ್ಟರ್ 5 ವರ್ಷ, ಬೋಸರಾಜು 1 ವರ್ಷ, ಕಮಕನೂರು 3 ವರ್ಷ ಎಂಎಲ್‌ಸಿ
ರಾಜ್ಯದಲ್ಲಿ ಖಾಲಿಯಾಗಿರುವ ವಿಧಾನ ಪರಿಷತ್‌ನ (MLC Election) ಮೂರು ಸ್ಥಾನಗಳಿಗೆ ಜೂನ್ 30ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್ ಮೂವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಇವರ ಅಧಿಕಾರಾವಧಿ ನೋಡುವುದಾದರೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ 5 ವರ್ಷ, ಹಾಲಿ ಸಚಿವ ಎನ್.ಎನ್. ಬೋಸ್ ರಾಜು 1 ವರ್ಷ ಮತ್ತು ತಿಪ್ಪಣ್ಣ ಕಮಕನೂರು 3 ವರ್ಷ ಎಂಎಲ್‌ಸಿಯಾಗಿ ಇರಲಿದ್ದಾರೆ.
ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ ನಡೆಯುವ ಚುನಾವಣೆ ಇದಾಗಿದೆ. 135 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.
ಇದನ್ನೂ ಓದಿ | ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್
ಶೆಟ್ಟರ್‌ಗೆ ದೊಡ್ಡ ಗೌರವ
ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ಟಿಕೆಟ್ ನಿರಾಕರಿಸಲ್ಪಟ್ಟು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಅವರು ಚುನಾವಣೆಯಲ್ಲಿ ಸೋಲು ಕಂಡರೂ ಅವರಿಗೆ ಪಕ್ಷ ದೊಡ್ಡ ಗೌರವವನ್ನೇ ನೀಡಿದೆ. ಬಾಬುರಾವ್ ಚಿಂಚನಸೂರು ಅವರಿಂದ ತೆರವಾಗಿರುವ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅವರು ಆಯ್ಕೆಯಾಗಿದ್ದು, ಐದು ವರ್ಷ ಸದಸ್ಯರಾಗಿರಲಿದ್ದಾರೆ.
ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಈ ಬಾರಿ ಕಾಂಗ್ರೆಸ್ ಗೆ ಲಾಭವಾಗಿತ್ತು. 39 ಲಿಂಗಾಯತ ಸಮುದಾಯದ ಶಾಸಕರು ಗೆಲ್ಲುವುದರಲ್ಲಿ ಶೆಟ್ಟರ್ ಅವರ ವರ್ಚಸ್ಸಿನ ಪ್ರಭಾವವೂ ಇದೆ ಎಂದು ಕಾಂಗ್ರೆಸ್ ಕಂಡುಕೊಂಡಿದೆ. ಇದರ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆಯಲು ಶೆಟ್ಟರ್‌ಗೆ ಮಣೆ ಹಾಕಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಶೆಟ್ಟರ್ ಗೆ ಐದು ವರ್ಷಗಳ ಅವಧಿ ಇರೋ ಎಂಎಲ್ಸಿ ಸ್ಥಾನವನ್ನು ಕಾಂಗ್ರೆಸ್ ಕೊಟ್ಟಿದೆ ಎನ್ನಲಾಗಿದೆ.
ಇದನ್ನೂ ಓದಿ | Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ
ಎನ್.ಎಸ್. ಬೋಸರಾಜು ಅವರಿಗೆ 1 ವರ್ಷ ಅವಕಾಶವಿರುವ ಪರಿಷತ್ ಸದಸ್ಯತ್ವವನ್ನು ನೀಡಲಾಗಿದೆ. ಬೋಸರಾಜು ಅವರನ್ನು ಈಗಾಗಲೇ ಸಣ್ಣ ನೀರಾವರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇವರು ಆರ್.ಶಂಕರ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಇತ್ತ ತಿಪ್ಪಣ್ಣ ಕಮಕನೂರು ಅವರಿಗೆ ಲಕ್ಷ್ಮಣ ಸವದಿ ಅವರಿಂದ ತೆರವಾದ ಮೂರು ವರ್ಷಗಳ ಅವಧಿಯ ಮೇಲ್ಮನೆ ಸ್ಥಾನವನ್ನು ನೀಡಲಾಗಿದೆ.
ಕರ್ನಾಟಕ
Brand Bengaluru: ವಿದ್ಯುತ್ ಜತೆಗೆ ಕಸದ ಶುಲ್ಕವೂ ಸೇರ್ಪಡೆಗೆ ಸಲಹೆ: ಖಚಿತಪಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು: ಅನೇಕ ನಗರಗಳಲ್ಲಿ ಕಸ ಸಂಗ್ರಹಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಶುಲ್ಕ ವಿಧಿಸಿ ವಿದ್ಯುತ್ ಬಿಲ್ ಜತೆಗೆ ಸೇರಿಸಬೇಕು ಎಂಬ ಸಲಹೆ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರು ಹಾಗೂ ತಜ್ಞರಿಂದ ಸಲಹೆ ಕೇಳುವ BrandBengaluru.karnataka.gov.in ಪೋರ್ಟಲ್‌ಗೆ ಚಾಲನೆ ನೀಡಿದ ನಂತರ ಮಾತನಾಡಿದರು.
1 ಕೋಟಿ 60 ಲಕ್ಷ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ. 1 ಕೋಟಿ 30 ಲಕ್ಷ ಅಧಿಕೃತ ಜನಸಂಖ್ಯೆ. ಆದರೆ ಪ್ರತಿದಿನ ಬಂದು ಹೋಗವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ಬಂದು ನೆಲೆಸಲು ಇಚ್ಚೆ ಪಡುತ್ತಾರೆ. ಬೆಂಗಳೂರಿಗೆ ಬಂದವರು ಯಾರು ವಾಪಸು ಹೋಗಲ್ಲ.
ನಾನು ಸಹ ಬೆಂಗಳೂರಿನ ನಿವಾಸಿ. ಜನ ಸಮಾನ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇನೆ. ಬಿಲ್ಡರ್ಸ್, ಉದ್ಯಮಿಗಳು ಸಹ ಕರೆಸಿದ್ದೆ ಅವರ ಅಭಿಪ್ರಾಯ ಪಡೆದಿದ್ದೇನೆ. ಹಿರಿಯ ನಾಯಕರ ಅಭಿಪ್ರಾಯ ಸಹ ಸಂಗ್ರಹ ಮಾಡಿದ್ದೇನೆ. ಮಾಜಿ ಸಿಎಂಗಳನ್ನ ಭೇಟಿ ಮಾಡ್ತೀನಿ. ಬೊಮ್ಮಾಯಿ ಸಮಯ ಕೇಳಿದ್ದೆ. ಕಸಕ್ಕೆ ಕೆಲ ನಗರಗಳಲ್ಲಿ ತೆರಿಗೆ ಹಾಕುತ್ತಿದ್ದಾರೆ. ಇಲ್ಲೂ ಹಾಕಿ ಅಂತ ಸಲಹೆ ನೀಡಿದ್ದಾರೆ. ವಿದ್ಯುತ್ ಬಿಲ್ ಜತೆಗಿನ ಇದನ್ನ ಹಾಕಲು ಸಲಹೆ ಬಂದಿದೆ. ಆದರೆ ಈಗ ವಿದ್ಯುತ್ ಬಿಲ್ ಜತೆ ಹಾಕಲು ಸಾಧ್ಯವಿಲ್ಲ ಎಂದರು.
ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರ, ಬಸವನಗುಡಿಯಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಬೆಂಗಳೂರು ಟ್ರಾಫಿಕ್‌ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡ್ತೀನಿ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಟನಲ್ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ. ಬೆಂಗಳೂರು ಪ್ಲಾನ್ಡ್ ಸಿಟಿ ಅಲ್ಲ. ಮುಂಬಯಿ, ದೆಹಲಿ ರೀತಿಯಲ್ಲಿ ಪ್ಲಾನ್ ಸಿಟಿ ಅಲ್ಲ. ಆದರೆ ಮುಂಬಯಿ ಮತ್ತು ದೆಹಲಿಯಲ್ಲಿ ಟ್ರಾಫಿಕ್ ಜಾಸ್ತಿ ಇದೆ. ನಮಗಿಂತಲೂ ಹೆಚ್ಚಿಜ ಟ್ರಾಫಿಕ್ ಇದೆ. ಇಲ್ಲಿ ನೀರು ನುಗ್ಗಿದರೂ ಸಮಸ್ಯೆ ಆಗುತ್ತೆ, ಅದನ್ನೇ ದೊಡ್ಡದಾಗಿ ಬರೆಯುತ್ತೀರಿ ಎಂದರು.
ಹಿಂದಿನ ಕಾಮಗಾರಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂಭ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಇನ್ನಷ್ಟು ದೊಡ್ಡಮಟ್ಟದಲ್ಲಿ ಮಾತನಾಡಲಿ. ಎಲ್ಲ ಬಿಚ್ಚಿಸ್ತೀನಿ. ಟೆಂಡರ್ ಡಬಲ್ ಆಗ್ತಿದೆ, ನಾವು ಅಧಿಕಾರಕ್ಕೆ ಬಂದ್ರೆ ಇದಕ್ಕೆ ಅವಕಾಶ ಕೊಡಲ್ಲ ಎಂದು ನಾವು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆವು. ನಾವು ಅದಕ್ಕೆ ಬದ್ಧರಾಗಿದ್ದೇವೆ. ಯಾವ ಗುತ್ತಿಗೆದಾರ ಏನು ಬೇಕಾದರೂ ಮಾಡಿಕೊಳ್ಳಲಿ. ಕಾನೂನಾತ್ಮಕವಾಗಿ ಪರಿಶೀಲನೆ ಮಾಡುವವರೆಗೂ ನಾವು ವರ್ಕ್ ಆರ್ಡರ್ ಕೊಡಲ್ಲ. ತನಿಖೆ ಬಳಿಕವೇ ಕಾಮಗಾರಿ ಬಿಲ್ ಬಿಡುಗಡೆ ಮಾಡ್ತೀವಿ ಎಂದರು.
ನಗರದಲ್ಲಿ ಇರೋ ಸ್ಲಮ್ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತಹ ಸಲಹೆಗಳು ಬಂದಿವೆ. ಕೆಲವರು ಸರ್ಕಾರಿ ಜಾಗದಲ್ಲಿ ಇದ್ದಾರೆ. ಕೆಲ ಸ್ಲಮ್ ನಗರದ ಒಳಗೆ ಇವೆ. ಅದನ್ನ ಶಿಫ್ಟ್ ಮಾಡಲು ಸಮಯ ಬೇಕಾಗುತ್ತದೆ ಎಂದರು.
ಇದನ್ನೂ ಓದಿ: Rice Politics: ನಾಳೆ ಅಮಿತ್ ಶಾ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರವಾಸ; ನಾನೂ ಹೋಗುವೆ ಎಂದ ಡಿಕೆಶಿ
-
ಪ್ರಮುಖ ಸುದ್ದಿ22 hours ago
Iraq Fire Accident: ಮದುವೆ ಮನೆಯಲ್ಲಿ ಅಗ್ನಿ ದುರಂತ; ಮದುಮಕ್ಕಳು ಸೇರಿ 114 ಜನರ ಸಾವು!
-
ಪ್ರಮುಖ ಸುದ್ದಿ12 hours ago
German Shepherd: ಸೀಕ್ರೆಟ್ ಸರ್ವಿಸ್ ಏಜೆಂಟ್ನಿಗೆ ಕಚ್ಚಿದ ಅಮೆರಿಕ ಅಧ್ಯಕ್ಷ ಬೈಡನ್ ಅವರ ‘ಕಮಾಂಡರ್’!
-
ವಿದೇಶ14 hours ago
Most expensive wedding: ಜಗತ್ತಿನ ದುಬಾರಿ ವಿವಾಹ ಯಾವುದು ಗೊತ್ತೆ? ಖರ್ಚಾಗಿದ್ದು ಇಷ್ಟು ಕೋಟಿ ರೂ.
-
ಸುವಚನ2 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕ್ರೈಂ17 hours ago
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
-
ಕರ್ನಾಟಕ14 hours ago
Car Accident: ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು
-
ದೇಶ14 hours ago
Venus Mission: ಇಸ್ರೋಗೆ ‘ಶುಕ್ರ’ದೆಸೆ; ಚಂದ್ರ, ಸೂರ್ಯನ ಬಳಿಕ ಶುಕ್ರನತ್ತ ಚಿತ್ತ; ಉಡಾವಣೆ ಯಾವಾಗ?
-
ಕರ್ನಾಟಕ9 hours ago
PSI Recruitment Scam: ಕೊನೆಗೂ ಅಮೃತ್ ಪಾಲ್ ಸೆಂಟ್ರಲ್ ಜೈಲಿನಿಂದ ಬಿಡುಗಡೆ