Assembly Elections 2023 : ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿವೆ: ಎಚ್‌ಡಿಕೆ - Vistara News

ಕರ್ನಾಟಕ

Assembly Elections 2023 : ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿವೆ: ಎಚ್‌ಡಿಕೆ

Assembly Elections 2023 : ಮೋದಿ ನಾಯಕತ್ವಕ್ಕೆ ಮೂರು ರಾಜ್ಯಗಳಲ್ಲಿ ಜನ ಮತ ಹಾಕಿದ್ದಾರೆ. ಪಂಚರಾಜ್ಯಗಳನ್ನೂ ಆವರಿಸಿಕೊಂಡೇ ಬಿಟ್ಟೆವು ಎಂದು ಬೀಗುತ್ತಿದ್ದ ಕಾಂಗ್ರೆಸ್ ಗರ್ವಭಂಗ ಆಗಿದೆ. ತೆಲಂಗಾಣದ ಗೆಲುವು ಅದರ ಸ್ವಶಕ್ತಿಯಿಂದ ಪಡೆದ ಗೆಲುವಲ್ಲ. ದೇಶದ ಎಲ್ಲಾ ಕಡೆ ಕಾಂಗ್ರೆಸ್ ಪ್ರಭಾವ ಕುಗ್ಗಿದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

HD Kumaraswamy attack on Congress Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಲೂಟಿ ಹೊಡೆದ ಹಣವನ್ನು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ (Assembly Elections 2023) ವೆಚ್ಚ ಮಾಡಿ ಕಾಂಗ್ರೆಸ್ ಪಕ್ಷ (Congress Karnataka) ಗೆಲುವು ಸಾಧಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ಬೆಂಗಳೂರಿನಲ್ಲಿ ಚುನಾವಣೆ ಫಲಿತಾಂಶದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಎಚ್.ಡಿ. ಕುಮಾರಸ್ವಾಮಿ, ಪಂಚರಾಜ್ಯಗಳನ್ನೂ ಆವರಿಸಿಕೊಂಡೇ ಬಿಟ್ಟೆವು ಎಂದು ಬೀಗುತ್ತಿದ್ದ ಕಾಂಗ್ರೆಸ್ ಗರ್ವಭಂಗ ಆಗಿದೆ. ತೆಲಂಗಾಣದ ಗೆಲುವು ಅದರ ಸ್ವಶಕ್ತಿಯಿಂದ ಪಡೆದ ಗೆಲುವಲ್ಲ. ದೇಶದ ಎಲ್ಲ ಕಡೆ ಕಾಂಗ್ರೆಸ್ ಪ್ರಭಾವ ಕುಗ್ಗಿದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದು ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: Assembly Session: ಅಧಿವೇಶನಕ್ಕೆ ಬೇಗ ಬಂದವರಿಗೆ ಟೀ ಕಪ್‌; ತಡವಾಗಿ ಬಂದವರಿಗೂ ಪ್ರಶಸ್ತಿ: ಯು.ಟಿ. ಖಾದರ್‌

ಆಸೆ, ಆಮಿಷಗಳನ್ನು ಮುಂದೊಡ್ಡಿ ಕಾಂಗ್ರೆಸ್ ಅಧಿಕಾರಕ್ಕೆ

ಹಲವಾರು ಮತಗಟ್ಟೆ ಸಮೀಕ್ಷೆಗಳು ಜನರ ಮುಂದೆ ಇದ್ದವು. ಎರಡು ರಾಜ್ಯಗಳಲ್ಲಿ ಬಿಜೆಪಿ, ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಂತ ಈ ಸಮೀಕ್ಷೆಗಳು ಭವಿಷ್ಯ ಹೇಳಿದ್ದವು. ಎಲ್ಲವೂ ಉಲ್ಟಾ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬೆಂಬಲದ ರೂಪದಲ್ಲಿ ಜನತೆ ತೀರ್ಮಾನ ಕೈಗೊಂಡಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಆ ಪಕ್ಷದ ಮುಂದೆ ಸಾಕಷ್ಟು ಸವಾಲುಗಳು ಇವೆ. ಅನೇಕ ಆಸೆ, ಆಮಿಷಗಳನ್ನು ಮುಂದೊಡ್ಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಆರ್ಥಿಕ ಥೈಲಿಗಳು, ಚೀಲಗಳು ತೆಲಂಗಾಣದ ಗೆಲುವಿಗೆ ಕಾರಣ

ಕರ್ನಾಟಕದ ನಾಯಕರ ಪ್ರಚಾರದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಕರ್ನಾಟಕದಿಂದ ಅಲ್ಲಿಗೆ ರವಾನೆಯಾದ ಆರ್ಥಿಕ ಥೈಲಿಗಳು, ಚೀಲಗಳು ಈ ಗೆಲುವಿಗೆ ಕಾರಣ. ಇವರ ಸಮಾಜ ಸೇವೆ, ಅಭಿವೃದ್ಧಿಗೆ ಪೂರಕವಾಗಿ ಜನಸೇವೆ ನೋಡಿ ಜನರು ತೆಲಂಗಾಣದಲ್ಲಿ ತೀರ್ಮಾನ ಮಾಡಿದ್ದಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ನಾನಾ ಕಾರಣಗಳಿವೆ, ಕುತಂತ್ರಗಳು ಕೆಲಸ ಮಾಡಿವೆ. ಲೋಕಸಭೆ ಚುನಾವಣೆ ಬಳಿಕ ಏನೇನಾಗುತ್ತದೆ ಎಂಬುದನ್ನು ನೋಡಬೇಕಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ತಿವಿದರು. ‌

ರಾಜ್ಯಪಾಲರಿಗೆ ಬರ ಅಧ್ಯಯನ ವರದಿ ಸಲ್ಲಿಸಿದ ಜೆಡಿಎಸ್‌

ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು (JDS Drought Study) ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಭಾನುವಾರ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಅವರಿಗೆ ಸಲ್ಲಿಸಿದರು. ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರ ಜತೆ ರಾಜಭವನಕ್ಕೆ ನಿಯೋಗದಲ್ಲಿ ತೆರಳಿದ ಅವರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕೂಡಲೇ ತಾವು ರಾಜ್ಯದಲ್ಲಿ ಬರ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರದಿಂದ ಅನುದಾನ ಕೊಡಿಸಲು ಮಧ್ಯಪ್ರದೇಶ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿಗಳು ರಾಜ್ಯಪಾಲರಲ್ಲಿ ಮನವಿ ಮಾಡಿದರು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯಪಾಲರು, ನಿಮ್ಮ ಅಹವಾಲನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ರಾಜ್ಯ ಎದುರಿಸುತ್ತಿರುವ ತೀವ್ರ ಪರಿಸ್ಥಿತಿಯನ್ನು ಕೇಂದ್ರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಮಾನ್ಸೂನ್ ವೈಫಲ್ಯದಿಂದ ರಾಜ್ಯದಲ್ಲಿ ಒಟ್ಟು 48.15 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಪೈಕಿ 46.09 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರವೇ ಅಂದಾಜು ಮಾಡಿರುವಂತೆ ರಾಜ್ಯದಲ್ಲಿ ಒಟ್ಟು 35.162.02 ಕೋಟಿ ರೂಪಾಯಿಯಷ್ಟು ಬೆಳೆ ಹಾನಿ ಆಗಿದ್ದು, ಎನ್‌ಡಿಆರ್‌ಎಫ್ ಮಾನದಂಡದ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ 18,171.44 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ಆದರೆ, ಇಷ್ಟು ಮೊತ್ತದ ಪರಿಹಾರದಿಂದ ರಾಜ್ಯದ ರೈತರ ಬವಣೆ ನೀಗುವುದಿಲ್ಲ. ಕೃಷಿಕರು ಅನುಭವಿಸಿರುವ ಒಟ್ಟಾರೆ ನಷ್ಟದಲ್ಲಿ ಶೇ.10ರಷ್ಟು ಪರಿಹಾರವೂ ಅವರಿಗೆ ಸಿಗುವುದಿಲ್ಲ. ಆದ್ದರಿಂದ ಈ ಹಿಂದೆ ನೀಡದಂತೆ ಪ್ರತಿ ಹೆಕ್ಟೇರ್ ಬೆಳೆ ನಾಶಕ್ಕೆ ಹೆಚ್ಚುವರಿ ಪರಿಹಾರವಾಗಿ 17,500 ರೂಪಾಯಿ ನೀಡಬೇಕು. ಈ ನಿಟ್ಟಿನಲ್ಲಿ ತಾವು ರಾಜ್ಯ ಸರಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿದರು.

ಬರ ಪರಿಹಾರ ನಿರ್ವಹಣೆಯಲ್ಲಿ ಸರ್ಕಾರ ಪೂರ್ಣ ವಿಫಲ

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಜಿಲ್ಲೆಗಳಲ್ಲಿ ಕುಡಿಯುವ ಸಮಸ್ಯೆ ಇದೆ. ಜಾನುವಾರುಗಳು ಕೂಡ ಸಂಕಷ್ಟದಲ್ಲಿವೆ. ರಾಜಧಾನಿ ಬೆಂಗಳೂರಿನಲ್ಲಿಯೂ ನೀರಿನ ಸಂಕಷ್ಟ ಎದುರಾಗಿದೆ ಎಂದು ರಾಜ್ಯಪಾಲರಿಗೆ ಕುಮಾರಸ್ವಾಮಿ ಅವರು ದೂರಿದರು.

ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ಬಹಳ ಅಸಡ್ಡೆಯಿಂದ ನೋಡುತ್ತಿದೆ. ತೀವ್ರ ನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡದೆ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂಬ ಅಂಶವನ್ನು ಅವರು ರಾಜ್ಯಪಾಲರ ಗಮನಕ್ಕೆ ತಂದರು.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿ ವಹಿಸಿಲ್ಲ. ರಾಜಕೀಯದಲ್ಲಿ ಮೈ ಮರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ರಾಜ್ಯಪಾಲರಿಂದ ಸಕಾರಾತ್ಮಕ ಸ್ಪಂದನೆ

ರಾಜ್ಯಪಾಲರ ಭೇಟಿ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ಅವರು, ನಮ್ಮ ಮನವಿಗೆ ರಾಜ್ಯಪಾಲರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮನವಿ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ನಾಡಿನ ಜನರ ಹಿತ ಕಾಪಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡರು ಸೇರಿದಂತೆ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

ಇದನ್ನೂ ಓದಿ | Assembly Elections 2023 : ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿಕೆಯ ಸಂಕೇತ: ಡಿಕೆಶಿ

ಮನವಿಯ ಪ್ರಮುಖ ಅಂಶಗಳು

  • ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಮಾನದಂಡದ ಅನ್ವಯ ಕೂಡಲೇ ರಾಜ್ಯಕ್ಕೆ 17,181.44 ಕೋಟಿ ರೂಪಾಯಿ ಬಿಡುಗಡೆ ಮಾಡಿಸಲು ರಾಜ್ಯಪಾಲರು ಮನವೊಲಿಸಬೇಕು.
  • ಕುಡಿಯುವ ನೀರು, ಜಾನುವಾರುಗಳ ಸಂರಕ್ಷಣೆ, ಕೃಷಿ ಕಾರ್ಮಿಕರಿಗೆ ನೆರವು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೆರವು ನೀಡುವ ಉದ್ದೇಶದಿಂದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 10,000 ಕೋಟಿ ರೂಪಾಯಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.
  • ವಿಮಾ ಕಂಪನಿಗಳು ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯಪಾಲರು ಕ್ರಮ ವಹಿಸಬೇಕು.
  • ಬೆಂಗಳೂರು ನಗರ ಕುಡಿಯುವ ನೀರಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಇದಕ್ಕೆ ಏಕೈಕ ಪರಿಹಾರ ಆಗಿರುವ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಕೊಡಿಸುವ ನಿಟ್ಟಿನಲ್ಲಿ ರಾಜ್ಯಪಾಲರು ಕ್ರಮ ವಹಿಸಬೇಕು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Baby Girl : ಹೆಣ್ಣು ಮಗುವೆಂದು ಗಂಡನ ತಾತ್ಸಾರ; ದಾನ ಮಾಡಲು ಮುಂದಾದ ನತದೃಷ್ಟ ತಾಯಿ

Baby Girl : ಎರಡನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದಳೆಂದು ಪತಿಯೊಬ್ಬ ಕಿರುಕುಳ ನೀಡಿದ್ದಕ್ಕೆ, ಪತ್ನಿ ಹೆತ್ತ ಮಗುವನ್ನೇ ದಾನ ಮಾಡಲು ಮುಂದಾಗಿದ್ದಾಳೆ.

VISTARANEWS.COM


on

By

Man harasses Wife for giving birth to girl child
Koo

ಚಿಕ್ಕಬಳ್ಳಾಪುರ: ಎರಡನೇ ಬಾರಿಯೂ ಹೆಣ್ಣು ಮಗುವನ್ನೇ (Baby Girl) ಹೆತ್ತಳೆಂದು ಸಿಟ್ಟಾದ ಪಾಪಿ ಪತಿಯೊಬ್ಬ ಪತ್ನಿಗೆ ಕಿರುಕುಳ ನೀಡಿದ್ದಾನೆ. ಪತಿ ಕುಟುಂಬಸ್ಥರ ಕಿರುಕುಳಕ್ಕೆ (Husband assaulted) ಬೇಸತ್ತ ನತದೃಷ್ಟ ತಾಯಿ, ಹೆಣ್ಣು ಮಗುವನ್ನು ದಾನ ಮಾಡಲು ಮುಂದಾಗಿದ್ದಾಳೆ. ಚಿಕ್ಕಬಳ್ಳಾಪುರ (chikkabalapura News) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮರಸನಪಲ್ಲಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ರಾಜಮ್ಮ ಎಂಬಾಕೆ ಹೆತ್ತ ಮಗುವನ್ನು ದಾನ ಮಾಡಲು ಮುಂದಾದ ನತದೃಷ್ಟ ತಾಯಿ ಆಗಿದ್ದಾಳೆ. ರಾಜಮ್ಮ ಮರಸನಪಲ್ಲಿ ಗ್ರಾಮದ ಲಕ್ಷ್ಮೀನಾರಾಯಣ ಎಂಬಾತನನ್ನು ಮದುವೆ ಆಗಿದ್ದರು. ಮೊದಮೊದಲು ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ. ಆದರೆ ಯಾವಾಗ ರಾಜಮ್ಮರಿಗೆ ಇಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳೋ ಆಗಲಿದ್ದ ಅಸಡ್ಡೆ ತೋರಲು ಮುಂದಾಗಿದ್ದರು.

ಗಂಡು ಮಗುವಿಗೆ ಜನ್ಮ ನೀಡದ ಕಾರಣಕ್ಕೆ ಪತಿ ಲಕ್ಷ್ಮೀನಾರಾಯಣ ಕುಟುಂಬದವರು ರಾಜಮ್ಮರಿಗೆ ಹಾಗೂ ಹೆಣ್ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ. ರಾಜಮ್ಮ ಗರ್ಭಿಣಿಯಾಗಿದ್ದಾಗ ಆರೈಕೆ ಮಾಡುತ್ತಿದ್ದ ಕುಟುಂಬ, 2ನೇ ಬಾರಿಯೂ ಹೆಣ್ಣು ಮಗು ಹುಟ್ಟಿದಾಕ್ಷಣ ನಿರ್ಲಕ್ಷ್ಯ ತೋರಿದ್ದಾರೆ. ರಾಜಮ್ಮ ಚಿಕಿತ್ಸೆಗೆಂದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆ ಬಂದಾಗ ಈ ನೋವಿನ ಪ್ರಕರಣವು ಬೆಳಕಿಗೆ ಬಂದಿದೆ.

ತಂದೆ- ತಾಯಿ ಕಳೆದುಕೊಂಡಿರುವ ರಾಜಮ್ಮರಿಗೆ ಅತ್ತ ತವರು ಮನೆ ಇಲ್ಲದೇ ಇತ್ತ ಗಂಡನ ಆಸರೆಯು ಇಲ್ಲದಂತಾಗಿದೆ. ಹೆತ್ತ ಮಗುವಿನ ಆರೈಕೆ ಮಾಡಲು ಆಗದ ಕಾರಣಕ್ಕೆ ಹುಟ್ಟಿದ ಹೆಣ್ಣು ಮಗುವನ್ನು ದಾನ ಮಾಡಲು ರಾಜಮ್ಮ ಮುಂದಾಗಿದ್ದಾರೆ. ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕೆ ಪತಿ ಲಕ್ಷ್ಮೀನಾರಾಣ ಪತ್ನಿ ರಾಜಮ್ಮ ಎಂದರೆ ತಾತ್ಸಾರ ಮನೋಭಾವ ತೋರುತ್ತಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Guarantee Survey : ಗ್ಯಾರಂಟಿ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಬಳಕೆ; ಎಸಿ ಗಿರಾಕಿಗಳೆಲ್ಲಿ ಎಂದ HDK

Guarantee Survey : ಗ್ಯಾರಂಟಿ ಯೋಜನೆಗಳ ಸಮೀಕ್ಷೆಯ ಜವಾಬ್ದಾರಿಯನ್ನು ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ವಹಿಸಿದ ಸರ್ಕಾರದ ನಿರ್ಧಾರವನ್ನು ಎಚ್‌.ಡಿ. ಕುಮಾರಸ್ವಾಮಿ ಖಂಡಿಸಿದ್ದಾರೆ.

VISTARANEWS.COM


on

Guarantee Survey HD Kumarawamy
Koo

ಬೆಂಗಳೂರು: ರಾಜ್ಯ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು (Guarantee Schemes) ಮನೆಗೆ ಮನೆಗೆ ತಲುಪಿವೆಯೇ ಎನ್ನುವುದನ್ನು ಖಾತ್ರಿಪಡಿಸಲು ಸರ್ಕಾರ ಗ್ಯಾರಂಟಿಗಳ ಸಮೀಕ್ಷೆ (Guarantee Survey) ನಡೆಸುತ್ತಿದೆ. ಈ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ʻಗ್ಯಾರಂಟಿ ಸ್ವಯಂಸೇವಕʼರನ್ನಾಗಿ (Guarantee Volunteers) ನೇಮಕ ಮಾಡಿದೆ. ಈ ನಿಯೋಜನೆಯನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಕೆರಳಿಸಿದೆ. ಆದರೂ ಸರ್ಕಾರದ ಆದೇಶ ಎಂಬ ಕಾರಣಕ್ಕಾಗಿ ಅವರು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರ ಕೊಡುವುದು 15 ದಿನದ ಕೆಲಸಕ್ಕೆ 1000 ರೂ. ಮಾತ್ರ.

ಇದೀಗ ಮಾಜಿ ಸಿಎಂ ಎಚ್.‌ಡಿ ಕುಮಾರಸ್ವಾಮಿ (HD Kumaraswamy) ಅವರು ಗ್ಯಾರಂಟಿ ಸಮೀಕ್ಷೆಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ನಿಯೋಜಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ. ಇದು ಸರ್ಕಾರದ ಲಜ್ಜೆಗೇಡಿತನದ ಪರಮಾವಧಿ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ ‘ಗ್ಯಾರಂಟಿ ಸ್ವಯಂ ಸೇವಕರು’ ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕುಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು? ಎಂದು ಪ್ರಶ್ನೆ ಕೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ?

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ? ಎಚ್.ಎಂ.ರೇವಣ್ಣ ಅವರಿಗೆ ಸಂಪುಟದರ್ಜೆ ಕೊಟ್ಟು ರಚಿಸಲಾಗಿರುವ ‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ? ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ಸಮೀಕ್ಷೆ ಮಾಡುತ್ತಿಲ್ಲವೇ? ಗ್ಯಾರಂಟಿ ಅನುಷ್ಠಾನ ನಿರ್ವಹಣೆಗೆ ವಾರ್ಷಿಕ ₹16 ಕೋಟಿ ವೆಚ್ಚಿಸುತ್ತೇವೆ ಎಂದಿದ್ದಾರೆ ಸಿಎಂ. ಹಾಗಾದರೆ, ಇದಕ್ಕೆ ಹೋಗುತ್ತಿರುವ ವೇತನ, ಭತ್ಯೆಗಳೆಲ್ಲ ವ್ಯರ್ಥವೇ? ಎಂದು ಪ್ರಶ್ನಿಸಿದ್ದಾರೆ.

ಎಸಿ ರೂಂ ಗಿರಾಕಿಗಳಿಗೆ ಕೋಟಿ ಕೋಟಿ, ಕಾರ್ಯಕರ್ತರಿಗೆ ಬರೀ 1000 ರೂ.

ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪೋಲಿಯೋ ಲಸಿಕೆ ಹಾಕುವುದರ ಜತೆಗೆ ಈ ಸುಡುಬಿಸಿಲಿನಲ್ಲಿ ಹಳ್ಳಿಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿದ್ದಾರೆ. ಅದೂ ಒತ್ತಾಯಪೂರ್ವಕವಾಗಿ… ಹಾಗಾದರೆ, ಅವರೂ ಈ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತಾರೆಯೆ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಒಬ್ಬ ಕಾರ್ಯಕರ್ತೆಗೆ 120ರಿಂದ 150 ಮನೆ ಹಂಚಿಕೆ ಮಾಡಿದ್ದು, 10-15 ದಿನದಲ್ಲಿ ಸಮೀಕ್ಷೆ ಮುಗಿಸಬೇಕಿದೆ. ಬೆಳಗ್ಗೆ 9 ರಿಂದ ಸಂಜೆ 4ರವರೆಗೂ ಉರಿಬಿಸಿಲಿನಲ್ಲಿ ಮಾಡುವ ಈ ಕೆಲಸಕ್ಕೆ ಅವರಿಗೆ ಸಿಗುವ ಗೌರವಧನ ಕೇವಲ ₹1,000! ಅದೇ ‘ಎಸಿ ರೂಂ ಸಮೀಕ್ಷೆ ಗಿರಾಕಿ’ಗಳಿಗೆ ಕೋಟಿ ಕೋಟಿ ಹಣ ಹೋಗುತ್ತಿದೆ ಎಂದು ಅವರು ಹೇಳಿದ್ದಾರೆ..

ಪಟ್ಟು-ಮಟ್ಟು-ಒಳಗುಟ್ಟು ಕಂಪನಿ ಏನು ಮಾಡುತ್ತಿದೆ?

ಜನರ ತೆರಿಗೆ ಹಣದಿಂದಲೇ ಗ್ಯಾರಂಟಿ ಸಮಾವೇಶಗಳನ್ನು (ಇವು ಚುನಾವಣಾ ಪ್ರಚಾರ ಸಭೆಗಳು) ಸಾಲು ಸಾಲಾಗಿ ನಡೆಸುತ್ತಿರುವ ಸರಕಾರಕ್ಕೆ ಸಮೀಕ್ಷೆಗಳ ಮೂಲಕವೂ ದುಡ್ಡು ಹೊಡೆಯುವ ಹಪಾಹಪಿ! ‘ಪಟ್ಟು-ಮಟ್ಟು-ಒಳಗುಟ್ಟು’ ಕಂಪನಿ ಸೇರಿ ಅಂತಹ ಹಲವಾರು ನಿಗೂಢ ಕಂಪನಿಗಳಿಗೆ ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿಯೇ ಕೋಟಿ ಕೋಟಿಯಷ್ಟು ಜನರ ತೆರಿಗೆ ಹಣ ಸುರಿಯುತ್ತಿದೆ ಸರಕಾರ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿ : ಗ್ಯಾರಂಟಿ ಬಗ್ಗೆ ಸುಳ್ಳು ಹೇಳೋದ್ಯಾಕೆ? ಸಿ.ಟಿ.ರವಿ ನಿನಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ವಾಗ್ದಾಳಿ

ಎಲ್ಲದಕ್ಕೂ ಅವರೇ ಬೇಕು ಅಂದರೆ ಏನು ಮಾಡುತ್ತಿದ್ದಾರೆ?

ಗ್ಯಾರಂಟಿ ಸಮಾವೇಶಗಳಿಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರೇ ಬರಬೇಕು, ಪಲ್ಸ್ ಪೋಲಿಯೋ ಲಸಿಕೆಯನ್ನೂ ಇವರೇ ಹಾಕಬೇಕು, ಗ್ಯಾರಂಟಿ ಸಮೀಕ್ಷೆಯನ್ನೂ ನಡೆಸಬೇಕು ಹಾಗೂ ತಮ್ಮ ನಿತ್ಯದ ನಿಗದಿತ ಕರ್ತವ್ಯವನ್ನೂ ನಿಭಾಯಿಸಬೇಕು. ಹಾಗಾದರೆ, ಸರಕಾರ ತೆರಿಗೆ ಹಣ ಸುರಿದು ಮಾಡಿಸುತ್ತಿರುವ ‘ಎಸಿ ರೂಂ ಸಮೀಕ್ಷೆ’ಗಳ ಕಥೆ ಏನು? ಸಮೀಕ್ಷೆ ಕಷ್ಟ ಈ ಹೆಣ್ಣುಮಕ್ಕಳದು, ಜನರ ತೆರಿಗೆ ಹಣ ‘ಎಸಿ ರೂಂ ಗಿರಾಕಿ’ಗಳದು! ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು! ಎಂದು ಅವರು ಆರೋಪ ಮಾಡಿದ್ದಾರೆ. ಅಂಗನವಾಡಿಗೆ ಬರುವ ಮಕ್ಕಳ ಲಾಲನೆ- ಪಾಲನೆ, ಗರ್ಭಿಣಿಯರು- ಬಾಣಂತಿಯರಿಗೆ ಊಟ, ಪ್ರತಿ ತಿಂಗಳ ಮೊದಲ & 3ನೇ ಶುಕ್ರವಾರ ಪೋಷಣ್‌ ಅಭಿಯಾನ, 3ನೇ ಶನಿವಾರ ಬಾಲವಿಕಾಸ ಸಮಿತಿ ಸಭೆಗೆ ಹಾಜರಿ; ಜತೆಗೆ ಇಲಾಖೆ ನಿಯೋಜಿಸುವ ಕೆಲಸಗಳನ್ನೂ ನಿರ್ವಹಿಸಬೇಕು. ಮಾರ್ಚ್ 3ರಿಂದ ಗ್ಯಾರಂಟಿ ಸಮೀಕ್ಷೆ ಬೇರೆ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.\

ಹಾಗಾದರೆ, ಸಿದ್ದರಾಮಯ್ಯ ಅವರ ಸರಕಾರ ಮಾಡಿಕೊಂಡಿರುವ ಇಡೀ ಗ್ಯಾರಂಟಿ ಸೆಟಪ್ ಏನು ಮಾಡುತ್ತಿದೆ? ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಣ್ಣಬಣ್ಣದ ಜಾಹೀರಾತು ನೀಡುವುದಕ್ಕೆ ಮಾತ್ರ ಸೀಮಿತವಾಗಿದೆಯೇ? ಜನರ ತೆರಿಗೆ ದುಡ್ಡು, ಯಲ್ಲಮನ ಜಾತ್ರೆ ಎನ್ನುವಂತಾಗಿದೆ. ಬರ, ಕುಡಿಯುವ ನೀರಿನ ಹಾಹಾಕಾರದ ನಡುವೆಯೂ ಇವರ ಗ್ಯಾರಂಟಿ ರಾಜಕೀಯಕ್ಕೆ ಬರವಿಲ್ಲ, ಪ್ರಚಾರಕ್ಕೂ ಬರವಿಲ್ಲ! ಎಂದಿದ್ದಾರೆ ಎಚ್‌.ಡಿ ಕುಮಾರಸ್ವಾಮಿ.

Continue Reading

ಕರ್ನಾಟಕ

Karnataka Drought: ಬರ ನಿರ್ವಹಣೆಗೆ ಸಹಾಯವಾಣಿ, ಕಂಟ್ರೋಲ್‌ ರೂಂ ಸ್ಥಾಪನೆಗೆ ಸಿಎಂ ಸೂಚನೆ

Karnataka Drought: ಟ್ಯಾಂಕರ್ ಮಾಲೀಕರು ಪರಿಸ್ಥಿತಿ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸಲು ಕ್ರಮ ವಹಿಸಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

CM Siddaramaiah Meeting with officers
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು (Karnataka Drought) ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಹಣಕ್ಕೆ ಯಾವುದೇ ತೊಂದರೆ ಇಲ್ಲ. ಬರ ನಿರ್ವಹಣೆಗೆ ಸಹಾಯವಾಣಿ ಹಾಗೂ ಕಂಟ್ರೋಲ್ ರೂಂ ಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಹಾಗೂ ಸಿಇಒಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಪತ್ರಿಕೆಗಳ ವಾಚಕರ ವಾಣಿ, ಸಾಮಾಜಿಕ ಜಾಲತಾಣಗಳಲ್ಲಿ ವರದಿಯನ್ನು ಕಟ್ಟುನಿಟ್ಟಾಗಿ ಗಮನಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

ಟ್ಯಾಂಕರ್ ಮಾಲೀಕರು ಪರಿಸ್ಥಿತಿ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸಲು ಕ್ರಮ ವಹಿಸಲಾಗಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಗೂ ನೋಂದಣಿ ಮಾಡಿಸಿಕೊಂಡು ದರಗಳನ್ನು ನಿಯಂತ್ರಣ ಮಾಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ | Water Crisis : ನಿಮ್ಮ ಏರಿಯಾದಲ್ಲಿ ಕುಡಿಯುವ ನೀರಿನ ಸಮಸ್ಯೆನಾ?; ಈ ಹೆಲ್ಪ್‌ಲೈನ್‌ ನಂಬರ್‌ಗೆ ಕಾಲ್‌ ಮಾಡಿ

ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದು, ಹೆಚ್ಚುವರಿಯಾಗಿ 140 ಕೋಟಿ ರೂ.ಗಳ ಜೊತೆಗೆ 70 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು. ಇದು ಸರ್ಕಾರದಿಂದ ನೀಡುವ ಅನುದಾನವಾಗಿದೆ. ಕರ್ನಾಟಕದಲ್ಲಿ ಈ ವರ್ಷ ಬರಗಾಲವಿದ್ದು, 223 ತಾಲೂಕುಗಳು ಬರಗಾಲ ಪೀಡಿತವಾಗಿದ್ದು, 194 ತೀವ್ರ ಬರಗಾಲ ಪೀಡಿತವಾಗಿವೆ ಎಂದು ವಿವರಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚನೆ

ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂ. ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ. ಈವರೆಗೆ 646 ಸಭೆಗಳನ್ನು ಇಲ್ಲಿಯವರೆಗೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ 307 ಸಭೆಗಳಾಗಿವೆ. ಕುಡಿಯುವ ನೀರಿಗೆ ತೊಂದರೆ ಯಾಗದಂತೆ ಕ್ರಮ ವಹಿಸಿದೆ. ಸಮಸ್ಯೆಯಿರುವ ಗ್ರಾಮ, ಜಿಲ್ಲೆಗಳಲ್ಲಿ ಅದಕ್ಕೆ ಮುಂಚಿತವಾಗಿ ಯೋಜನೆ ತಯಾರಿಸಬೇಕು. ಸದ್ಯ 98 ತಾಲೂಕುಗಳ 412 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 175 ಗ್ರಾಮಗಳಿಗೆ 204 ಟ್ಯಾಂಕರ್ ಗಳಿಂದ 596 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಆಗುತ್ತಿದೆ ಎಂದು ವಿವರಿಸಿದರು.

120 ಬಿಬಿಎಂಪಿ ಹಾಗೂ ಜಲಮಂಡಲಿಯಲ್ಲಿ 232 ಟ್ಯಾಂಕರ್ ಗಳಲ್ಲಿ ನೀರು ಸರಬರಾಜು ಆಗುತ್ತಿದೆ. 96 ವಾರ್ಡುಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗುತ್ತಿದೆ. ಕೆಲವೆಡೆ ಸರ್ಕಾರದ ಕೊಳವೆಬಾವಿಗಳನ್ನು ಆಳ ಮಾಡುವುದು, ಫ್ಲ್ಯಾಶಿಂಗ್ ಮಾಡುವುದು, ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯುವುದು, ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಕ್ರಮ ವಹಿಸಿದೆ ಎಂದರು.

631 ಕೋಟಿ ರೂ. ತಾತ್ಕಾಲಿಕ ಪರಿಹಾರ ಪರಿಹಾರ

ಈವರೆಗೆ 33.25 ಲಕ್ಷ ರೈತರಿಗೆ 631 ಕೋಟಿ ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡಲಾಗಿದೆ. ಸರ್ಕಾರ 600 ಕೋಟಿ ರೂ.ಗಳ ಬೆಳೆ ವಿಮೆ ಪರಿಹಾರ ಒದಗಿಸಲಾಗಿದೆ. ಇನ್ನೂ 800 ಕೋಟಿ ರೂ.ಗಳನ್ನು ಪಾವತಿಯಾಗುವ ನಿರೀಕ್ಷೆ ಇದೆ. ಮೇವಿಗೆ ಈವರೆಗೆ ತೊಂದರೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಪಶುಸಂಗೋಪನೆ ಇಲಾಖೆಗೆ 40 ಕೋಟಿ ರೂ.ಗಳನ್ನು ಮೇವು ಬೆಳೆಯಲು ಒದಗಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಪ್ರತಿ.ಕುಟುಂಬಕ್ಕೆ 4- 5 ಸಾವಿರ ರೂ. 1.ಕೋಟಿ 20.ಲಕ್ಷ ಕುಟುಂಬ ಗಳಿಗೆ 4.50 ಕೋಟಿ ಜನರೊಗೆ ಇದರ ಲಾಭ ದೊರೆತಿದೆ. ಈ ಕಾರಣದಿಂದ ಜನ ಗುಳೇ ಹೋಗುತ್ತಿಲ್ಲ ಎಂದರು.

ಸುಮಾರು 7408 ಹಳ್ಳಿಗಳಲ್ಲಿ , 1115 ವಾರ್ಡುಗಳಲ್ಲಿ ನೀರಿನ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಅಷ್ಟೂ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಯೋಜನೆ ಸಿದ್ಧವಾಗಿದೆ. ಖಾಸಗಿ ಕೊಳವೆಬಾವಿಗಳೊಂದಿಗೆ ಒಪ್ಪಂದವಾಗಿದೆ. ಟ್ಯಾಂಕರ್ ಮೂಲಕ ನೀರು ಒದಗಿಸಲು ಕ್ರಮ ವಹಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ | Water Crisis: ಮಾ. 7ರೊಳಗೆ ನೋಂದಣಿ ಮಾಡಿಸದಿದ್ರೆ ನೀರಿನ ಟ್ಯಾಂಕರ್‌ ಸೀಜ್, ಸರ್ಕಾರದಿಂದಲೇ ದರ ನಿಗದಿ: ಡಿಕೆಶಿ

ಬರಗಾಲ ಬಂದರೆ 150 ದಿನಗಳಿಗೆ ಮಾನವ ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ಹೆಚ್ಚಿಸಿಲ್ಲ. ನರೇಗಾ ಯೋಜನೆಯಡಿ ಕೆಲಸದ ಹಣ ಪಾವತಿಯನ್ನೂ ಮಾಡಿಲ್ಲ,. 18, 172 ಕೋಟಿ ರೂ.ಗಳ ಪರಿಹಾರ ಕೋರಿದ್ದರೂ ಒಂದು ಬಿಡಿಗಾಸು ಸಹ ಕೇಂದ್ರ ಸರ್ಕಾರ ನೀಡಿಲ್ಲ. ಬಿಜೆಪಿ ನೇತೃತ್ವದಲ್ಲಿಯೇ ನಿಯೋಗ ಹೋಗೋಣವೆಂದರೆ ಬಿಜೆಪಿ ನಾಯಕರ ಉತ್ತರವಿಲ್ಲ. ಕೇಂದ್ರ ಸರ್ಕಾರ ಜಪ್ಪಯ್ಯ ಅಂದರೂ ಒಂದು ರೂ.ನೀಡಿಲ್ಲ. ಪರಿಹಾರ ನೀಡಿಲ್ಲ ಎನ್ನಲೂ ನಮಗೆ ಸ್ವಾತಂತ್ರ್ಯವಿಲ್ಲವೇ ಎಂದು ಕಿಡಿಕಾರಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಿಎಂ ಮಹತ್ವದ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Continue Reading

ಪ್ರಮುಖ ಸುದ್ದಿ

Kar TET 2024: ಜೂನ್‌ನಲ್ಲಿ ಟಿಇಟಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ ಶಿಕ್ಷಣ ಇಲಾಖೆ

Kar TET 2024: ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’(ಟಿಇಟಿ)ಯನ್ನು ಈ ಬಾರಿ ಜೂನ್‌ನಲ್ಲಿಯೇ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಸದ್ಯವೇ ಪ್ರಕಟಣೆ ಹೊರಡಿಸಲಿದೆ.

VISTARANEWS.COM


on

exam writing
Koo

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’(ಟಿಇಟಿ) (Kar TET 2024)ಯನ್ನು ಈ ಬಾರಿ ಜೂನ್‌ನಲ್ಲಿಯೇ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ಇಲಾಖೆಯು ಪರೀಕ್ಷಾ ಕೇಂದ್ರಗಳನ್ನು ಗುರುತಿಸುವ ಕೆಲಸ ಆರಂಭಿಸಿದ್ದು, ಸದ್ಯವೇ ಪ್ರಕಟಣೆ ಹೊರಡಿಸಲಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಕಳೆದ ವರ್ಷಕ್ಕಿಂತ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುವ ನಿರೀಕ್ಷೆ ಇರುವುದರಿಂದ ಶೇ. 5ರಷ್ಟು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲು ಶಿಕ್ಷಣ ಇಲಾಖೆಯು ತೀರ್ಮಾನಿಸಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯು ಕಡ್ಡಾಯವಾಗಿ ಇರುವಂತೆ ಇಲಾಖೆಯು ಮುನ್ನೆಚ್ಚರಿಕೆಯನ್ನು ವಹಿಸುತ್ತಿದೆ.

ಈ ವರ್ಷವೂ ಮತ್ತೆ ಶಿಕ್ಷಕರ ನೇಮಕಾತಿ ನಡೆಯಲಿರುವುದರಿಂದ ಆದಷ್ಟು ಬೇಗ ಈ ಅರ್ಹತಾ ಪರೀಕ್ಷೆಯನ್ನು ಪೂರ್ಣಗೊಳಿಸಲು ಶಿಕ್ಷಣ ಇಲಾಖೆಯು ತೀರ್ಮಾನಿಸಿದೆ. ಕಳೆದ ವರ್ಷ ಈ ಪರೀಕ್ಷೆಗೆ ಜುಲೈನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ ಜೂನ್‌ನಲ್ಲಿಯೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಏಪ್ರಿಲ್‌ನಲ್ಲಿಯೇ ಅರ್ಜಿ ಆಹ್ವಾನಿಸುವ ನಿರೀಕ್ಷೆ ಇದೆ.

ರಾಜ್ಯ ಸರ್ಕಾರ ನಡೆಸುವ ಶಿಕ್ಷಕರ ನೇಮಕಾತಿಯಲ್ಲಿ ಭಾಗವಹಿಸಲು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಎಷ್ಟು ಬಾರಿ ಬೇಕಾದರೂ ಈ ಅರ್ಹತಾ ಪರೀಕ್ಷೆ ಬರೆಯಬಹುದಾಗಿದೆ. ಹೆಚ್ಚಿನ ಅಂಕ ಪಡೆಯಲು ಬಯಸುವವರು ಮರು ಪರೀಕ್ಷೆಯನ್ನು ಸಹ ತೆಗೆದುಕೊಳ್ಳಬಹುದು. ಈ ಪರೀಕ್ಷೆಯ ಅಂಕಗಳನ್ನು ಶಿಕ್ಷಕರ ನೇಮಕಾತಿಗೆ ಮಾನದಂಡವನ್ನಾಗಿ ಪರಿಗಣಿಸಲಾಗುತ್ತದೆ.

ಅರ್ಹತೆಗಳೇನು?

1 ರಿಂದ 5ನೇ ತರಗತಿಗಳಿಗೆ ಶಿಕ್ಷಕರಾಗಲು ಸೀನಿಯರ್ ಸೆಕೆಂಡರಿ/ಪಿಯುಸಿ/ತತ್ಸಮಾನ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.50 (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ.45) ಅಂಕಗಳನ್ನು ಪಡೆದಿರಬೇಕು ಮತ್ತು ಶಿಕ್ಷಣದಲ್ಲಿ (D.El.Ed) ಎರಡು ವರ್ಷಗಳ ಡಿಪ್ಲೊಮಾ ಪಡೆದಿರಬೇಕು ಅಥವಾ ವಿಶೇಷ ಶಿಕ್ಷಣದಲ್ಲಿ ಎರಡು ವರ್ಷದ ಡಿಪ್ಲೊಮಾ ಮಾಡಿರಬೇಕು. ಬಿಇಡಿ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದು. ಇವರೆಲ್ಲರೂ ಟಿಇಟಿ ಪರೀಕ್ಷೆಯಲ್ಲಿ ಪತ್ರಿಕೆ-1 ಅನ್ನು ಬರೆಯಲು ಅರ್ಹರಾಗಿರುತ್ತಾರೆ.

6 ರಿಂದ 8ನೇ ತರಗತಿಗೆ ಶಿಕ್ಷಕರಾಗಲು ಪದವಿಯಲ್ಲಿ ಕನಿಷ್ಠ ಶೇ. 50 (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ.45) ಅಂಕಗಳನ್ನು ಪಡೆದಿರಬೇಕು ಮತ್ತು ಎರಡು ವರ್ಷಗಳ D.El.Ed ಕೋರ್ಸಿನ ತೇರ್ಗಡೆಯಾಗಿರಬೇಕು ಅಥವಾ ಬಿ.ಇಡಿಯಲ್ಲಿ ಅಥವಾ ನಾಲ್ಕು ವರ್ಷಗಳ B.El.Ed ಯಲ್ಲಿ ಅಥವಾ ಅಥವಾ ನಾಲ್ಕು ವರ್ಷಗಳ ಎಲಿಮೆಂಟರಿ ಶಿಕ್ಷಣದ ಪದವಿಯನ್ನು ಪಡೆದಿರಬೇಕು. ಬಿಎ/ಬಿಎಸ್ಸಿ ಪದವಿ ಮತ್ತು ಶಿಕ್ಷಣದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಪಡೆದವರು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

1 ರಿಂದ 8ನೇ ತರಗತಿಗಳಿಗೆ ಶಿಕ್ಷಕರಾಗಲು ಸೀನಿಯರ್ ಸೆಕೆಂಡರಿ/ಪಿಯುಸಿ/ತತ್ಸಮಾನ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.50(ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ.45) ಅಂಕಗಳನ್ನು ಗಳಿಸಿರಬೇಕು ಮತ್ತು ನಾಲ್ಕು ವರ್ಷಗಳ ಎಲಿಮೆಂಟರಿ ಶಿಕ್ಷಣ ಪದವಿಯನ್ನು ಹೊಂದಿರಬೇಕು. ಈ ಅಭ್ಯರ್ಥಿಗಳು ಟಿಇಟಿ ಪರೀಕ್ಷೆಯಲ್ಲಿ ಎರಡೂ ಪತ್ರಿಕೆಗಳನ್ನು ಬರೆಯಲು ಅರ್ಹರಾಗಿರುತ್ತಾರೆ.

ಅಂತಿಮ ವರ್ಷದಲ್ಲಿ /ಸೆಮಿಸ್ಟರ್‌ನಲ್ಲಿ ಓದುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆ ಬರೆಯಲು ವಯೋಮಿತಿ ಇರುವುದಿಲ್ಲ. ಎನ್‌ಸಿಟಿಇಯಿಂದ ಮಾನ್ಯತೆ ಪಡೆದಂತಹ ಡಿಪ್ಲೊಮಾ/ ಪದವಿ ಕೋರ್ಸುಗಳನ್ನು ಮಾತ್ರ ವಿದ್ಯಾರ್ಹತೆಯಲ್ಲಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 364 ಭೂಮಾಪಕರ ಹುದ್ದೆಗೆ ಮಾ. 11ರಿಂದ ಅರ್ಜಿ ಸಲ್ಲಿಕೆ ಆರಂಭ

ಜೀವಿತಾವಧಿಯ ಮಾನ್ಯತೆ

ಈ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ನೀಡಲಾಗುವ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆಯನ್ನು ಹೊಂದಿರುತ್ತದೆ. ಈ ಹಿಂದೆ ಏಳು ವರ್ಷಗಳ ಕಾಲ ಮಾನ್ಯತೆ ಇರಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಬದಲಾವಣೆ ಮಾಡಲಾಗಿದೆ. ಅರ್ಹತೆ ಪಡೆದವರು ಯಾವುದೇ ಸಂದರ್ಭದಲ್ಲಿ ನಡೆಯುವ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ram charan
ಸಿನಿಮಾ18 mins ago

Ram Charan: ದಕ್ಷಿಣ ಭಾರತದ ಸ್ಟಾರ್‌ ರಾಮ್‌ ಚರಣ್‌ಗೆ ಶಾರುಖ್‌ ಖಾನ್‌ನಿಂದ ಅವಮಾನ? ಫ್ಯಾನ್ಸ್‌ ಗರಂ ಆಗಿದ್ದೇಕೆ?

Man harasses Wife for giving birth to girl child
ಚಿಕ್ಕಬಳ್ಳಾಪುರ19 mins ago

Baby Girl : ಹೆಣ್ಣು ಮಗುವೆಂದು ಗಂಡನ ತಾತ್ಸಾರ; ದಾನ ಮಾಡಲು ಮುಂದಾದ ನತದೃಷ್ಟ ತಾಯಿ

Guarantee Survey HD Kumarawamy
ಬೆಂಗಳೂರು21 mins ago

Guarantee Survey : ಗ್ಯಾರಂಟಿ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಬಳಕೆ; ಎಸಿ ಗಿರಾಕಿಗಳೆಲ್ಲಿ ಎಂದ HDK

CM Siddaramaiah Meeting with officers
ಕರ್ನಾಟಕ29 mins ago

Karnataka Drought: ಬರ ನಿರ್ವಹಣೆಗೆ ಸಹಾಯವಾಣಿ, ಕಂಟ್ರೋಲ್‌ ರೂಂ ಸ್ಥಾಪನೆಗೆ ಸಿಎಂ ಸೂಚನೆ

Royal Challengers Bangalore Women
ಕ್ರೀಡೆ31 mins ago

WPL 2024 Points Table: ಡಬ್ಲ್ಯುಪಿಎಲ್​ನಲ್ಲಿ ಇನ್ನು 9 ಪಂದ್ಯಗಳು ಬಾಕಿ; ಅಂಕಪಟ್ಟಿ ಹೇಗಿದೆ?

exam writing
ಪ್ರಮುಖ ಸುದ್ದಿ58 mins ago

Kar TET 2024: ಜೂನ್‌ನಲ್ಲಿ ಟಿಇಟಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ ಶಿಕ್ಷಣ ಇಲಾಖೆ

Mohamed Muizzu And Xi Jinping
ದೇಶ59 mins ago

Maldives: ಚೀನಾ ಜತೆ ಒಪ್ಪಂದದ ಬೆನ್ನಲ್ಲೇ ಮಾಲ್ಡೀವ್ಸ್‌ ಉದ್ಧಟತನ;‌ ಭಾರತ ಸೇನೆಗೆ ಡೆಡ್‌ಲೈನ್

Cricket Coach Tushar Arothe
ಕ್ರೀಡೆ1 hour ago

Tushar Arothe: ಭಾರತ ತಂಡದ ಮಾಜಿ ಕೋಚ್ ಮನೆಯಲ್ಲಿ ಕೋಟಿ ರೂ. ಪತ್ತೆ; ವಶಕ್ಕೆ ಪಡೆದ ಪೊಲೀಸರು

Bescom website
ಕರ್ನಾಟಕ1 hour ago

Escom Online Services: ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯ

Shahjahan Sheikh
ದೇಶ1 hour ago

ಲೈಂಗಿಕ ದೌರ್ಜನ್ಯ; ಟಿಎಂಸಿಯ ಶಹಜಹಾನ್‌ನನ್ನು ಸಿಬಿಐಗೆ ವಹಿಸಿ ಎಂದು ಕೋರ್ಟ್‌ ಆದೇಶ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ23 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ1 day ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌