ಗಾಂಧಿ ಕುಟುಂಬಕ್ಕೆ ಆಹ್ವಾನ
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮನೆಗೆ ತೆರಳಿದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಹಾಗು ಪ್ರಿಯಾಂಕ ಗಾಂಧಿ ಅವರನ್ನೂ ಆಹ್ವಾನಿಸಲಾಗಿದೆ.
ಸಚಿವ ಸಂಪುಟ; ಪ್ರತ್ಯೇಕ ಸಭೆ
ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ. ಎರಡೂ ಸಭೆಗಳು ಅಂತ್ಯಗೊಂಡಿವೆ.
25 ಶಾಸಕರು ನಾಳೆ ಪ್ರಮಾಣ
ಸಚಿವ ಸಂಪುಟ ರಚನೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದು, ಶನಿವಾರ ಒಟ್ಟು 25 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
ಪ್ರಮಾಣವಚನ ಕಾರ್ಯಕ್ರಮಕ್ಕೆ ಸೋನಿಯಾಗಾಂಧಿ
ಶನಿವಾರ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ಆಹ್ವಾನಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟದ ಸಭೆಯಲ್ಲಿ ಪಕ್ಷದ ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಾನು ಸಚಿವ ಸ್ಥಾನದ ನಿರೀಕ್ಷೆಯಲಿಲ್ಲ
ನಾನು ಸಚಿವ ಸ್ಥಾನದ ನಿರೀಕ್ಷೆಯಲ್ಲಿಲ್ಲ ಎಂದು ಪಕ್ಷದ ಹಿರಿಯ ನಾಯಕ ಹೆಚ್ ಕೆ ಪಾಟೀಲ್ ದೆಹಲಿಯಲ್ಲಿ ಹೇಳಿದ್ದಾರೆ.
ಹೈಕಮಾಂಡ್ ಹೇಳಿದಂತೆ ನಡೆಯುತ್ತೇನೆ, ಯಾವ ನಿರೀಕ್ಷೆಯೂ ಇಲ್ಲ. ಸಚಿವ ಸಂಪುಟ ಕುರಿತ ಚರ್ಚೆ ನಡೆಯುತ್ತಿದ್ದು, ಇಂದು ರಾತ್ರಿ ಹೊತ್ತಿಗೆ ಎಲ್ಲವೂ ಫೈನಲ್ ಆಗುವ ನಿರೀಕ್ಷೆ ಇದೆ. ಹಿರಿಯರು, ಕಿರಿಯರು ಸೇರಿದ ಕಾಂಬಿನೇಷನ್ ಇರಲಿದೆ ಎಂದು ಆವರು ಹೇಳಿದ್ದಾರೆ.