Site icon Vistara News

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಬಳಸಿದ 11 ಕಟು ಶಬ್ದಗಳು: ಇದು ಮಾಜಿ CMಗಳ ಸಮರ

H.D Kumaraswamy'

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ (Santosh Suicide Case) ಕುರಿತಂತೆ ಮಾಜಿ ಸಚಿವ ಕೆ. ಎಸ್‌. ಈಶ್ವರಪ್ಪ (K.S. Eshwarappa) ಅವರನ್ನು ಬಂಧಿಸಬೇಕು ಎಂಬ ಕುರಿತು ತಮ್ಮ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ(Siddaramayya) ಮಾಡಿದ್ದ ವಾಗ್ದಾಳಿಗೆ ರಾಜ್ಯ ಜೆ.ಡಿ.ಎಸ್‌. ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ (H.D. Kumaraswamy) ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ.

ಈಶ್ವರಪ್ಪ ಅವರು ಮಂತ್ರಿಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಧಿಸುವ ಅಗತ್ಯವೇನಿದೆ ಎಂದು ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ಭಾನುವಾರ ಮಾತನಾಡಿದ್ದರು. ಈಶ್ವರಪ್ಪ ಪ್ರಕರಣ ಮುಗಿದಿದೆ. ಕಾಂಗ್ರೆಸ್‌ ಹೇಳುವಂತೆ ಬಂಧಿಸುವ ಅಗತ್ಯ ಏನಿದೆ? ಇಂಥ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ವೋಟ್‌ಬ್ಯಾಂಕ್‌ ಸೃಷ್ಟಿಸಿಕೊಳ್ಳಲು ಯತ್ನಿಸುತ್ತಿದೆ. ಒಂದು ಸಮುದಾಯದ ವೋಟು ಪಡೆಯಲು ಕಾಂಗ್ರೆಸ್‌ ಹಾಗೂ ಬಿಜೆಪಿ ಕೋಮುವಾದವನ್ನು ಬಳಸಿಕೊಳ್ಳುತ್ತಿವೆ ಎಂದಿದ್ದರು. ಇದನ್ನು ಪ್ರಸ್ತಾಪಿಸಿದ್ದ ಸಿದ್ದರಾಮಯ್ಯ, ಹಾಗಾದರೆ ಕೊಲೆ ಮಾಡಿದವನು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಬಿಟ್ಟುಬಿಡಬೇಕ? ಒಬ್ಬ ಕಳ್ಳನನ್ನು ಮತ್ತೊಬ್ಬ ಕಳ್ಳ ಹೇಗೆ ಬಚಾವು ಮಾಡುತ್ತಾರೆ ನೋಡಿ ಎಂದು ಮಂಡ್ಯದಲ್ಲಿ ಮಾತನಾಡಿದ್ದರು.

ಇದೇ ವಿಚಾರವನ್ನು ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು, ಈಶ್ವರಪ್ಪ ರಾಜೀನಾಮೆ ವಿಚಾರದಲ್ಲಿ ಬಿಜೆಪಿಯ ʼಬಿʼ ಟೀಂ ಸೇವೆ ಸಲ್ಲಿಸುತ್ತಿದೆ ಎಂದಿದ್ದರು. 2018ರ ವಿಧಾನಸಭೆ ಚುನಾವಣೆ ಸೇರಿ ಅನೇಕ ಸಂದರ್ಭದಲ್ಲಿ ಜೆಡಿಎಸ್‌ ಪಕ್ಷವನ್ನು ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆದಿಯಾಗಿ ಅನೇಕರು ಹೇಳಿದ್ದಾರೆ. ಈ ಎಲ್ಲ ಮಾತುಗಳಿಗೆ ಉತ್ತರವೆಂಬಂತೆ ಇದೀಗ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಹೆಚ್ಚಿನ ಓದಿಗಾಗಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯ ಹಗಲು ದರೋಡೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕುಮಾರಸ್ವಾಮಿ ಮಾತಿನ ಪೀಠಿಕೆ

ಸಿದ್ದರಾಮಯ್ಯಗೆ ನಾಲ್ಕು ಪ್ರಶ್ನೆ

  1. ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು?
  2. ಆ ಪಾಪದ ಹಣವನ್ನು ಏನು ಮಾಡಿದಿರಿ?
  3. ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು?
  4. ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ?

ಸಿದ್ದರಾಮಯ್ಯ ವಿರುದ್ಧ ಬಳಸಿದ ಮಾತುಗಳು

  1. ವಿನಾಶಕಾಲೇ ವಿಪರೀತ ಸುಳ್ಳು
  2. ಸತ್ಯಭಕ್ಷನಾಯಕಸುಳ್ಳಿನ_ಪ್ರಚಾರಕ
  3. ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ
  4. ಕಲ್ಲಪ್ಪ ಹಂಡಿಭಾಗ್‌ ಸಾವಿನ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿಸದೇ ವಿಧಿಯೇ ಇಲ್ಲ
  5. ಮೈಷುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ
  6. ನಿಮ್ಮ ರೈತವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ
  7. ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು; ಇದು ನಿಮ್ಮ ಜೀವನಶೈಲಿ
  8. ನಿಮ್ಮ ʼಸಿದ್ದಸೂತ್ರʼಕ್ಕೆ ಕೊನೆಗಾಲ ಹತ್ತಿರದಲ್ಲೇ ಇದೆ.
  9. ನಿಮ್ಮ ಪಾಲಿಗೆ ಆ ಪಕ್ಷ ಹೊರಗಷ್ಟೇ ಕೋಮುವಾದಿ! ಹಣದ ವಿಷಯ ಎಂದಾಗ ಒಳಗೆಲ್ಲಾ ಅನುಕೂಲವಾದಿ!!
  10. ಸ್ವಯಂ ಘೋಷಿತ ಸಂವಿಧಾನ ತಜ್ಞ, ಸ್ವಯಂ ಘೋಷಿತ ಸತ್ಯ ಹರಿಶ್ಚಂದ್ರ
  11. ಆಶ್ರಯ ಕೊಟ್ಟ ಪಕ್ಷಕ್ಕೇ ಹಳ್ಳ ತೋಡುತ್ತಿರುವ ನೀವು ʼಬಿಜೆಪಿ ಬಾಲಂಗೋಚಿʼ & ʼಬಿಜೆಪಿಯ ಬೇನಾಮಿ ಆಸಾಮಿ

ಹೆಚ್ಚಿನ ಓದಿಗಾಗಿ: ಕೊನೆಗೂ ರಾಜೀನಾಮೆ ನೀಡಿದ ಈಶ್ವರಪ್ಪ: ರಾಜಕೀಯ ಜೀವನದ ಅಂತ್ಯ?

Exit mobile version