Site icon Vistara News

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Legislative Council Election dates fixedVoting on June 13

ಬೆಂಗಳೂರು: ರಾಜ್ಯದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕವನ್ನು (Legislative Council Election) ಘೋಷಣೆ ಮಾಡಲಾಗಿದ್ದು, ಜೂನ್‌ 13ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದೆ. ಜೂನ್ 4ರಂದು ನಾಮಪತ್ರ ಪರಿಶೀಲನಾ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ, ಮತದಾನದ ದಿನವಾದ ಜೂನ್‌ 13ರಂದೇ ಮತ ಎಣಿಕೆಯನ್ನೂ ನಡೆಸಲಾಗುವುದು ಎಂದು ಆಯೋಗ ಹೇಳಿದೆ. ಈಗಿರುವ ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅವಧಿಯು ಮುಂದಿನ ತಿಂಗಳು ಮುಕ್ತಾಯವಾಗಲಿದೆ.

Legislative Council Election dates fixedVoting on June 13

ಜೂನ್‌ 17ರಂದು ಅವಧಿ ಮುಕ್ತಾಯವಾಗುತ್ತಿರುವುದರಿಂದ ಆ ಸದಸ್ಯತ್ವ ಸ್ಥಾನಗಳನ್ನು ಭರ್ತಿ ಮಾಡಲು ಮುಂದಾಗಲಾಗಿದೆ. ಶಾಸಕರು (ವಿಧಾನಸಭೆಯ ಸದಸ್ಯರು) ಇವರನ್ನು ಆಯ್ಕೆ ಮಾಡುತ್ತಾರೆ.

ಈ ಪರಿಷತ್ ಸದಸ್ಯರ ಅವಧಿ ಮುಕ್ತಾಯ

  1. ಅರವಿಂದ್ ಕುಮಾರ್ ಅರಳಿ
  2. ಎನ್.ಎಸ್. ಬೋಸರಾಜು
  3. ಕೆ. ಗೋವಿಂದರಾಜ್
  4. ಡಾ. ತೇಜಸ್ವಿನಿ ಗೌಡ
  5. ಮುನಿರಾಜು ಗೌಡ ಪಿ.ಎಂ.
  6. ಕೆ.ಪಿ. ನಂಜುಂಡಿ ವಿಶ್ವಕರ್ಮ
  7. ಬಿ.ಎಂ. ಫಾರೂಕ್
  8. ರಘುನಾಥ ರಾವ್ ಮಲ್ಕಾಪುರೆ
  9. ಎನ್. ರವಿ ಕುಮಾರ್
  10. ಎಸ್. ರುದ್ರೇಗೌಡ
  11. ಕೆ ಹರೀಶ್ ಕುಮಾರ್

ಅಧಿಸೂಚನೆಯಿಂದ ಮತ ಎಣಿಕೆ ವರೆಗೆ

  1. ಅಧಿಸೂಚನೆ ಹೊರಡಿಸುವ ದಿನಾಂಕ: ಮೇ 27 (ಸೋಮವಾರ)
  2. ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಜೂನ್ 03 (ಸೋಮವಾರ)
  3. ನಾಮಪತ್ರ ಪರಿಶೀಲನೆ: ಜೂನ್ 04 (ಮಂಗಳವಾರ)
  4. ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಜೂನ್ 06 (ಗುರುವಾರ)
  5. ಮತದಾನ ದಿನಾಂಕ: ಜೂನ್ 13 (ಗುರುವಾರ)
  6. ಮತದಾನದ ಸಮಯ: ಬೆಳಗ್ಗೆ 09 ಗಂಟೆಯಿಂದ ಸಂಜೆ 4 ಗಂಟೆವರೆಗೆ
  7. ಮತ ಎಣಿಕೆ ದಿನಾಂಕ: ಜೂನ್ 13 (ಗುರುವಾರ) ಸಂಜೆ 05:00 ಗಂಟೆಗೆ
  8. ಚುನಾವಣೆ ಮುಗಿಯುವ ದಿನಾಂಕ: ಜೂನ್ 15 (ಶನಿವಾರ)

MLC Election: ವಿಧಾನ ಪರಿಷತ್‌ ಚುನಾವಣೆ; ನೈಋತ್ಯ ಶಿಕ್ಷಕರ ಕ್ಷೇತ್ರದ 1 ನಾಮಪತ್ರ ತಿರಸ್ಕೃತ

ಮೈಸೂರು: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ (MLC Election). ಈ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಚುನಾವಣೆ ಅಧಿಕಾರಿ ಡಾ. ಪ್ರಕಾಶ್ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್‌ ಕಾರಂತ್‌ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ನಮೂನೆ-26 ನೋಟರಿ ಅಫಿಡವಿತ್‌ ಮತ್ತು ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲ 13 ನಾಮಪತ್ರವೂ ಅಂಗೀಕಾರಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಅಭ್ಯರ್ಥಿಗಳ ನಾಮಪತ್ರವೂ ಸ್ವೀಕೃತಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ವಿಧಾನ ಪರಿಷತ್‌ ಚುನಾವಣೆಗೆ ಮೇ 9ರಂದು ಅದಧಿಸೂಚನೆ ಹೊರಡಿಸಲಾಗಿತ್ತು. ಮೇ 17ರ ತನಕ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಮೇ 20ರ ಅಪರಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

ಬೆಂಗಳೂರು: ʼʼವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆʼʼ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ.

ಇದನ್ನೂ ಓದಿ: HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆʼʼ ಎಂದು ತಿಳಿಸಿದ್ದಾರೆ. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದ್ದಾರೆ. ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ʼʼನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆʼʼ ಎಂದು ಇದೇ ವೇಳೆ ತಿಳಿಸಿದ್ದಾರೆ.

Exit mobile version