Site icon Vistara News

Lingayat CM : ಶಾಮನೂರು ಹೇಳಿಕೆಗೆ ಪೂರ್ಣ ಬೆಂಬಲವೆಂದ ಬಿಎಸ್‌ವೈ; ನಮ್ಮದು ಜಾತ್ಯತೀತ ಸರ್ಕಾರ ಎಂದ ಸಿಎಂ

CM Siddaramaiah BS Yediyurappa and shamanur Shivashankarappa

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ಲಿಂಗಾಯತರ ಅವಗಣನೆ (Neglecting Lingayats) ಮತ್ತು ಲಿಂಗಾಯತರು ಸಿಎಂ (Lingayat CM Demdand) ಆಗಬೇಕು. ಅಲ್ಲದೆ, ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಆಗಿದೆ ಎಂಬ ಲಿಂಗಾಯತ ಸಮುದಾಯದ (Lingayat community) ಹಿರಿಯ ನಾಯಕ, 92 ವರ್ಷದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಮಾತು ಈಗ ರಾಜ್ಯ ರಾಜಕಾರಣದಲ್ಲಿ (Karnataka Politics) ಗದ್ದಲವನ್ನು ಸೃಷ್ಟಿ ಮಾಡಿದೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ (Former CM BS Yediyurappa) ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿ, ಶಾಮನೂರು ಅವರು ವ್ಯಕ್ತಪಡಿಸಿರುವ ಭಾವನೆಗಳಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ತಿರುಗೇಟು ನೀಡಿದ್ದು, ಇದು ಜಾತ್ಯತೀತ ಸರ್ಕಾರ (Secular Government) ಯಾರಿಗೂ ತೊಂದರೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ವೀರಶೈವ ಸಮುದಾಯದ ಮುಖಂಡರಲ್ಲಿ ಇದೇ ತಳಮಳ ಇದೆ

ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಸಮಾಜದ ರಾಷ್ಟ್ರೀಯ ಅಧ್ಯಕ್ಷರು. ಶಾಮನೂರು ಅವರು ವ್ಯಕ್ತಪಡಿಸಿರುವ ಭಾವನೆಗಳಿಗೆ ನನ್ನ ಸಂಪೂರ್ಣ ಬೆಂಬಲ ಇದೆ. ವೀರಶೈವ ಸಮುದಾಯದವರು ಬಹಳ ದೊಡ್ಡ ಪ್ರಮಾಣದಲ್ಲಿ ಇದ್ದಾರೆ. ಆದರೆ ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ. ಇದರ ಬಗ್ಗೆ ಶಾಮನೂರು ಅವರಿಗೆ ಕಳಕಳಿ ಇದೆ. ಹೀಗಾಗಿ ಎಲ್ಲ ವೀರಶೈವ ಸಮುದಾಯದ ಮುಖಂಡರಲ್ಲಿ ಇದೇ ತಳಮಳ ಇದೆ ಎಂದು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ: Lingayat CM : ಲಿಂಗಾಯತ ಸಿಎಂ ಕೂಗು; ಶಾಮನೂರು ಆಕ್ರೋಶಕ್ಕೆ ಕಾಂಗ್ರೆಸ್‌ನಲ್ಲಿ ತಲ್ಲಣ

ಈ ಎಲ್ಲ ಕಾರಣಗಳಿಂದ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ನಾನು ಸಂಪೂರ್ಣ ಒಪ್ಪುತ್ತೇನೆ. ಈ ಸಮಯದಲ್ಲಿ ವೀರಶೈವ ಲಿಂಗಾಯತ ಸಮಾಜದವರು ಜಾಗೃತ ಆಗಬೇಕು, ಒಂದಾಗಬೇಕು, ಒಟ್ಟಾಗಬೇಕು ಎಂಬ ಕರೆಯನ್ನು ನಾನು ಸಹ ಕೊಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಹೇಳಿದರು.

ನಮ್ಮದು ಜಾತ್ಯತೀತ ಸರ್ಕಾರ: ಸಿಎಂ

ಲಿಂಗಾಯತ ಕಡೆಗಣನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಯಡಿಯೂರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ. ಇದು ಜಾತ್ಯತೀತ ಸರ್ಕಾರವಾಗಿದೆ. ಯಾರಿಗೂ ತೊಂದರೆ ಆಗುವುದಿಲ್ಲ. ಶಕ್ತಿ ಯೋಜನೆ ಬರೀ ಒಂದು ಸಮುದಾಯಕ್ಕೆ ತಂದಿದ್ದೇ? ಜಾತ್ಯತೀತ ಯೋಜನೆ ಅದು. ಅನ್ನ ಭಾಗ್ಯ, ಗೃಹ ಜ್ಯೋತಿ ,ಗೃಹ ಲಕ್ಷ್ಮಿ ಇದಕ್ಕೆ ಜಾತಿ ತಂದೆವೇ? ಎಲ್ಲ ಜಾತಿಯನ್ನು ಸಮಾನವಾಗಿ ನೋಡುವುದು ನಮ್ಮ‌ ಸರ್ಕಾರ ಎಂದು ಹೇಳಿದರು.

ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

ದಾವಣಗೆರೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್‌ ಸರ್ಕಾರ, ಕಾಂಗ್ರೆಸ್‌ ನಾಯಕರು, ಅದರಲ್ಲೂ ಮುಖ್ಯವಾಗಿ ಸಿದ್ದರಾಮಯ್ಯ ಅವರ ಮೇಲೆ ಮೇಲೆ ಹಲವು ಆರೋಪಗಳನ್ನು ಮಾಡಿದರು.

  1. ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ನೀಡುತ್ತಿಲ್ಲ.
  2. ಲಿಂಗಾಯತ ಅಧಿಕಾರಿಗಳಿಗೆ ಪ್ರಮುಖ ಹುದ್ದೆಗಳೇ ಸಿಗುತ್ತಿಲ್ಲ. ಸಿದ್ದರಾಮಯ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಸರ್ಕಾರದ ಆಯಕಟ್ಟಿನ ಹುದ್ದೆಗಳನ್ನು ನಮ್ಮ ಸಮಾಜದವರಿಗೆ ಕೊಟ್ಟಿಲ್ಲ.
  3. ಈ ಹಿಂದೆ ಎಲ್ಲರೂ ಚೆನ್ನಾಗಿದ್ದರು. ನಿಜಲಿಂಗಪ್ಪ, ಜೆ.ಎಚ್‌.ಪಾಟೀಲರು ಇದ್ದಾಗ ಎಲ್ಲರೂ ಲಿಂಗಾಯತ ಸಮಾಜದ ವಿಚಾರದಲ್ಲಿ ಚೆನ್ನಾಗಿದ್ದರು.
  4. ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯವಾದ ಹುದ್ದೆಗಳನ್ನು ಬಹಳಷ್ಟು ಜನರಿಗೆ ಕೊಟ್ಟಿಲ್ಲ.
  5. ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಕೊಡಬೇಕು ಎಂಬ ಪ್ರಸ್ತಾಪ ಮಾಡಲಾಗುತ್ತಿದೆ. ಈ ಪ್ರಸ್ತಾಪ ಯಾವಾಗಲೂ ನಮ್ಮ ಕಡೆಯಿಂದ ಇರುತ್ತದೆ. ಆದರೆ, ಡಿಸಿಎಂ ತೆಗೆದುಕೊಂಡು ಏನು ಮಾಡಬೇಕು. ಕೊಟ್ಟರೆ ಸಿಎಂ ಕೊಡಬೇಕು.

ಇದನ್ನೂ ಓದಿ: BJP Karnataka : ಒಂದು ಸಮುದಾಯವನ್ನು ಮಾತ್ರವೇ ಓಲೈಸುವ ಸಿಎಂ ಸಿದ್ದರಾಮಯ್ಯ; ಬಿಜೆಪಿ ಸರಣಿ ಟ್ವೀಟ್

ಇದು ಕಾಂಗ್ರೆಸ್‌ ಅತ್ಯಂತ ಹಿರಿಯ ನಾಯಕರಾಗಿರುವ ಶಾಮನೂರು ಶಿವಶಂಕರಪ್ಪ ಮಂಡಿಸಿದ ಬೇಡಿಕೆಗಳು.

Exit mobile version