ಹಗರಿಬೊಮ್ಮನಹಳ್ಳಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ ಶನಿವಾರ ಹಗರಿಬೊಮ್ಮನಹಳ್ಳಿ ತಾಲೂಕಿನ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚನೆ (Lok Sabha Election 2024) ನಡೆಸಿದರು.
ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ, ಈ ಬಾರಿಯ ಲೋಕಸಭಾ ಚುನಾವಣೆ ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ರಾಜ್ಯದ ಭವಿಷ್ಯ ನಿರ್ಧರಿಸಿದ್ದ ಚುನಾವಣೆ ಆಗಿತ್ತು ಎಂದ ಅವರು, ದಿ. ಇಂದಿರಾ ಗಾಂಧಿ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ಮಾಡಿದ ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಕೋಟ್ಯಂತರ ಜನರಿಗೆ ಭೂಮಿಯ ಹಕ್ಕು ನೀಡಿದರು. ಇದೊಂದೇ ಅಲ್ಲ ಇಂತಹ ನೂರಾರು ಕಾನೂನುಗಳನ್ನು ಬಡವರಿಗಾಗಿ ಜಾರಿ ಮಾಡಿದರು ಎಂದು ಅವರು ಹೇಳಿದರು.
ಇದನ್ನೂ ಓದಿ: Money Guide: ಕುಟುಂಬಕ್ಕಾಗಿ ಆರೋಗ್ಯ ವಿಮೆ; ಖರೀದಿ ಮುನ್ನ ತಿಳಿದಿರಲಿ ಕೆಲವು ವಿಚಾರ
ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸಲೇ ಇಲ್ಲ. ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿಲ್ಲ. ಆದರೆ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸುತ್ತಾ ಬಂದಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಿವಯೋಗಿ, ಮುಖಂಡರಾದ ರಫೀಕ್, ಗೋಣಿಬಸಪ್ಪ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು
ಕಾಂಗ್ರೆಸ್ ಸೇರ್ಪಡೆ
ಶ್ರೀ ತಾಯಮ್ಮ ಶಕ್ತಿ ಸಂಘದ ಅಧ್ಯಕ್ಷೆ ಕವಿತಾ ಈಶ್ವರ ಸಿಂಗ್, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಜತೆಯಲ್ಲಿ ಅವರ ಅಪಾರ ಬೆಂಬಲಿಗರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದನ್ನೂ ಓದಿ: Apricot Benefits: ನಿಮಗೆ ಇಂತಹ ಸಮಸ್ಯೆಗಳಿವೆಯೇ?: ಹಾಗಾದರೆ ನಿತ್ಯವೂ ಆಪ್ರಿಕಾಟ್ ತಿನ್ನಿ!
ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಗುಜ್ಜಲ ನಾಗರಾಜ್, ತಾರಿಹಳ್ಳಿ ವೆಂಕಟೇಶ್, ನಾಣೀಕೆರಿ ರಾಘವೇಂದ್ರ, ಲಲಿತಾ ಪರಗಂಟಿ, ಕಿಶನ್ ಸಿಂಗ್ ಸೇರಿದಂತೆ ಇತರರು ಇದ್ದರು.