Lok Sabha Election 2024 : ಕಾಂಗ್ರೆಸ್‌ನ 16 ಟಿಕೆಟ್‌ ಫೈನಲ್‌; ಹೆಬ್ಬಾಳ್ಕರ್‌ ಪುತ್ರ, ಜಾರಕಿಹೊಳಿ ಪುತ್ರಿ ಕಣಕ್ಕೆ? - Vistara News

ರಾಜಕೀಯ

Lok Sabha Election 2024 : ಕಾಂಗ್ರೆಸ್‌ನ 16 ಟಿಕೆಟ್‌ ಫೈನಲ್‌; ಹೆಬ್ಬಾಳ್ಕರ್‌ ಪುತ್ರ, ಜಾರಕಿಹೊಳಿ ಪುತ್ರಿ ಕಣಕ್ಕೆ?

Lok Sabha Election 2024 : ರಾಜ್ಯದ 16 ಲೋಕಸಭಾ‌ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. ಅದು ಬುಧವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ.

VISTARANEWS.COM


on

Lok Sabha Election 2024 Mrinal Hebbalkar Priyanka Jarkiholi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹತ್ವದ ಲೋಕಸಭಾ ಚುನಾವಣೆಗಾಗಿ (Lok Sabha Election 2024) ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಉದ್ದೇಶದಿಂದ ದಿಲ್ಲಿಯ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ (Central Election Commission) ಸಭೆ ನಡೆದಿದ್ದು, ಇದರಲ್ಲಿ 11 ರಾಜ್ಯಗಳ 80 ಲೋಕಸಭಾ ಕ್ಷೇತ್ರಗಳ ಟಿಕೆಟ್‌ ಬಗ್ಗೆ ಚರ್ಚೆ ನಡೆಯಿತು. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳ ಟಿಕೆಟ್‌ ಆಗಲೇ ಫೈನಲ್‌ ಆಗಿದ್ದು, ಉಳಿದ 21 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ 16 ಕ್ಷೇತ್ರಗಳ ಟಿಕೆಟ್‌ ಫೈನಲ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ. ಐದು ಕ್ಷೇತ್ರಗಳನ್ನು ಪೆಂಡಿಂಗ್‌ ಇಡಲಾಗಿದೆ. ಅಚ್ಚರಿ ಎಂದರೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ (DV Sadananda Gowda) ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿಯ ನಡುವೆಯೇ ಪಕ್ಷವು ಅವರು ಪ್ರತಿನಿಧಿಸುವ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ ಎನ್ನಲಾಗುತ್ತಿದೆ.

ಈಗ ಅಂತಿಮಗೊಳಿಸಲಾದ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಲಾಗುವುದಿಲ್ಲ. ಬದಲಾಗಿ ಬುಧವಾರ ಸಂಜೆ ಮತ್ತೊಂದು ಸುತ್ತು ಚರ್ಚೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಅಂತಿಮ ಮಾಡಲಾಗುತ್ತದೆ ಎನ್ನಲಾಗಿದೆ.

ಯಾವ ರಾಜ್ಯಗಳ ಟಿಕೆಟ್‌ ಬಗ್ಗೆ ಚರ್ಚೆ?

ಮಂಗಳವಾರ ನಡೆದ ಸಭೆಯಲ್ಲಿ ಕರ್ನಾಟಕ, ತೆಲಂಗಾಣ, ಮದ್ಯಪ್ರದೇಶ, ರಾಜ್ಯಸ್ಥಾನ ಛತ್ತೀಸ್ಗಡ್, ಗುಜರಾತ್ ಮಹಾರಾಷ್ಟ್ರ, ಅರುಣಾಚಲ ಪ್ರದೇಶ್, ಚಂಡೀಗಢ್, ಅಂಡಮಾನ್ ನಿಕೋಬಾರ್ ರಾಜ್ಯಗಳ ಲೋಕಸಭಾ ಟಿಕೆಟ್‌ ಮತ್ತು ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ರಾಜ್ಯ ವಿಧಾನಸಭಾ ಟಿಕೇಟ್ ಅಂತಿಮಗೊಳಿಸುವ ಯೋಜನೆ ಇತ್ತು.

ಹೆಬ್ಬಾಳ್ಕರ್‌ ಪುತ್ರ, ಜಾರಕಿಹೊಳಿ ಪುತ್ರಿಗೆ ಟಿಕೆಟ್‌?

ರಾಜ್ಯದ 16 ಕ್ಷೇತ್ರಗಳ ಟಿಕೆಟ್‌ ಫೈನಲ್‌ ಆಗಿದೆ ಎನ್ನಲಾಗಿದೆ. ಅದರಲ್ಲಿ ಅತ್ಯಂತ ಪ್ರಮುಖವಾಗಿರುವುದು ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳ ಟಿಕೆಟ್‌. ಬೆಳಗಾವಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ (Mrinal Hebbalkar) ಅವರಿಗೆ ಟಿಕೆಟ್‌ ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಇದೆ. ಅದೇ ರೀತಿ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ (Priyanka Jarakiholi) ಟಿಕೆಟ್‌ ನೀಡುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ : DV Sadananda Gowda : ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಗೆ ಒಕ್ಕಲಿಗರ ಸಂಘ ಬೆಂಬಲ; ಕೈ ತೀರ್ಮಾನ ಏನು?

ಹಾಗಿದ್ದರೆ ಅಂತಿಮವಾದ ಕ್ಷೇತ್ರಗಳು ಯಾವುದು? ಪೆಂಡಿಂಗ್‌ ಯಾವುದು?

1. ಚಿತ್ರದುರ್ಗ – ಬಿ.ಎನ್‌. ಚಂದ್ರಪ್ಪ

2.ಬೆಳಗಾವಿ – ಮೃಣಾಲ್‌ ಹೆಬ್ಬಾಳ್ಕರ್

3.ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ

4.ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್

5.ಹುಬ್ಬಳ್ಳಿ -ಧಾರವಾಡ – ವಿನೋದ್ ಅಸೂಟಿ

6. ದಾವಣಗೆರೆ – ಡಾ ಪ್ರಭಾ ಮಲ್ಲಿಕಾರ್ಜುನ್

7. ಕೊಪ್ಪಳ – ರಾಜಶೇಖರ್ ಹಿಟ್ನಾಳ್

8. ಬೀದರ್ – ರಾಜಶೇಖರ್ ಪಾಟೀಲ್

9. ದಕ್ಷಿಣ ಕನ್ನಡ- ಪದ್ಮರಾಜ್‌

10. ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ

11.ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ

12.ಬೆಂಗಳೂರು ಸೆಂಟ್ರಲ್- ಮನ್ಸೂರ್‌ ಅಲಿಖಾನ್

13.ಬೆಂಗಳೂರು ಉತ್ತರ -ಪ್ರೊ ರಾಜೀವ್ ಗೌಡ

14.ಮೈಸೂರು-ಕೊಡಗು – ಎಂ. ಲಕ್ಷ್ಮಣ್

15. ರಾಯಚೂರು- ಕುಮಾರ್ ನಾಯ್ಕ್

16.ಉತ್ತರ ಕನ್ನಡ -ಅಂಜಲಿ ನಿಂಬಾಳಕರ್

ಪೆಂಡಿಂಗ್‌ ಉಳಿಸಿರುವ ಕ್ಷೇತ್ರಗಳು

1.ಬಳ್ಳಾರಿ
2.ಚಾಮರಾಜನಗರ
3.ಚಿಕ್ಕಬಳ್ಳಾಪುರ
4.ಕೋಲಾರ
5.ಕಲಬುರಗಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BS Yediyurappa: ಪೋಕ್ಸೊ ಕೇಸ್‌ನಲ್ಲಿ ಖುದ್ದು ಹಾಜರಿಯಿಂದ ಬಿಎಸ್‌ವೈಗೆ ವಿನಾಯ್ತಿ; ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜು.26ಕ್ಕೆ

BS Yediyurappa: ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ನೀಡಿದ್ದು, ಬಿಎಸ್‌ವೈ ಸೇರಿ ಇತರೆ ಆರೋಪಿಗಳಿಗೂ ವಿಚಾರಣೆ ವೇಳೆ ಖುದ್ದು ಹಾಜರಿಯಿಂದ ವಿನಾಯಿತಿ ನೀಡಲಾಗಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಪೋಕ್ಸೊ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈ 26ಕ್ಕೆ ನಡೆಸಲು ಹೈಕೋರ್ಟ್ ದಿನಾಂಕ ನಿಗದಿಪಡಿಸಿದೆ. ಅಲ್ಲಿಯವರೆಗೆ ಪ್ರಕರಣದಲ್ಲಿ ಖುದ್ದು ಹಾಜರಿಗೆ ಮಾಜಿ ಸಿಎಂಗೆ ಕೋರ್ಟ್‌ ವಿನಾಯಿತಿ ನೀಡಿದೆ.

ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ನೀಡಿದ್ದು, ಇತರೆ ಆರೋಪಿಗಳಿಗೂ ಖುದ್ದು ಹಾಜರಿಯಿಂದ ವಿನಾಯಿತಿ ನೀಡಲಾಗಿದೆ. ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯಿತಿ ಕೋರಲು ಅವಕಾಶ ನೀಡಲಾಗಿದೆ. ಜುಲೈ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್‌ವೈಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ, ಖುದ್ದು ಹಾಜರಿಗೆ ಹೈಕೋರ್ಟ್ ವಿನಾಯಿತಿ ನೀಡಿದೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದರು. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು. ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ರೇವಣ್ಣ ಜಾಮೀನು ರದ್ದು ಕೋರಿದ್ದ ಎಸ್‌ಐಟಿ ಅರ್ಜಿ ವಿಚಾರಣೆ 3 ವಾರ ಮುಂದೂಡಿಕೆ

Prajwal Revanna Case

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಆದರೆ, ಅರ್ಜಿ ವಿಚಾರಣೆಯನ್ನು 3 ವಾರಗಳ ಕಾಲ ಹೈಕೋರ್ಟ್‌ ಮುಂದೂಡಿದೆ.

ಇದನ್ನೂ ಓದಿ | Fraud Case : ‌ಸಿಸಿಬಿ ಬಲೆಗೆ ಬಿದ್ದ ಖತರ್ನಾಕ್‌ ನಯ ವಂಚಕ; ಡಿಸಿ, ಜಡ್ಜ್‌ ಹೆಸರು ಬಳಸಿ ಲಕ್ಷ ಲಕ್ಷ ಲೂಟಿ

ಇದೇ ವೇಳೆ ಪ್ರಕರಣ ರದ್ದು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯೂ ಮುಂದೂಡಿಕೆಯಾಗಿದೆ. ಅಲ್ಲದೇ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ಪ್ರಜ್ವಲ್ ರೇವಣ್ಣ ಹಿಂಪಡೆದಿದ್ದಾರೆ. ಸೆಷನ್ಸ್ ಕೋರ್ಟ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್‌ ಅವಕಾಶ ನೀಡಿದ್ದರಿಂದ ಅರ್ಜಿ ಹಿಂಪಡೆಯಲಾಗಿದೆ.

Continue Reading

ಕರ್ನಾಟಕ

Monsoon session: ಜು.15ರಿಂದ ಮುಂಗಾರು ಅಧಿವೇಶನ: ನಾಗೇಂದ್ರ ಬಂಧನಕ್ಕೆ ಇಡಿ ನನ್ನ ಅನುಮತಿ ಪಡೆಯಲೇಬೇಕು ಎಂದ ಸ್ಪೀಕರ್‌

Monsoon session: ಮಾಜಿ ಸಚಿವ ನಾಗೇಂದ್ರ ಬಂಧನದ ಬಗ್ಗೆ ಇಡಿ ಅಧಿಕಾರಿಗಳು ಇನ್ನೂ ಮಾಹಿತಿ ನೀಡಿಲ್ಲ. ಅಧಿವೇಶನ ನಡೆಯುವಾಗ ಮಾತ್ರ ಶಾಸಕರನ್ನು ಬಂಧಿಸಬೇಕಿದ್ದರೆ ನನ್ನ ಅನುಮತಿ ಬೇಕು ಎಂದು ಸ್ಪೀಕರ್‌ ಯು.ಟಿ.ಖಾದರ್‌ ತಿಳಿಸಿದ್ದಾರೆ.

VISTARANEWS.COM


on

Monsoon session
Koo

ಬೆಂಗಳೂರು: 16ನೇ ವಿಧಾನ ಸಭೆಯ ನಾಲ್ಕನೇ ಅಧಿವೇಶನ (Assembly Session) ಜುಲೈ 15ರಿಂದ 26ವರೆಗೂ ನಡೆಯಲಿದೆ. ಒಟ್ಟು ಒಂಬತ್ತು ದಿನಗಳ ಕಾಲ ಮುಂಗಾರು ಅಧಿವೇಶನ (Monsoon session) ನಡೆಯಲಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಸಭೆಯ ಹಿಂಬಾಗಿಲು ಬದಲಿಸುವ ಕೆಲಸ ‌ಮಾಡಿದ್ದೇವೆ. ವಿಧಾನ ಸೌಧದ ಸೌಂದರ್ಯ ಹೆಚ್ಚಿಸಲು ಪ್ಲ್ಯಾನ್ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ ಅವರು ಜುಲೈ 15ರಂದು ಮುಖ್ಯದ್ವಾರದ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಮೊದಲು ಬಂದವರನ್ನು ಮಾತ್ರ ಗುರುತಿಸುತ್ತೀರಿ ಎಂಬ ಅಪವಾದ ಇತ್ತು. ಈಗ ತಡವಾಗಿ ಹೋದವರನ್ನೂ ಗುರುತಿಸಲು ಸೂಚಿಸಿದ್ದೇನೆ. ದಿನಕ್ಕೆ ವಿಧಾನ ಸಭೆ ಒಳಗೆ ಎಷ್ಟು ಬಾರಿ ಒಳಗೆ ಬಂದರು, ಎಷ್ಟು ಬಾರಿ ಹೊರಗೆ ಹೋದರು ಎಂಬ ಮಾಹಿತಿ ಸಂಗ್ರಹ ಮಾಡುತ್ತೇವೆ. ಜನಪ್ರತಿನಿಧಿಗಳಿಗೆ ಈ ಬಾರಿ ಚೆಸ್ ಗೇಮ್ ಏರ್ಪಾಡು ಮಾಡಿದ್ದೇವೆ. ಇದರಲ್ಲಿ ಶಾಸಕರು ಮತ್ತು ಪರಿಷತ್ ಸದಸ್ಯರು ಭಾಗವಹಿಸಬಹುದು. ಕಾರ್ಯ ದಕ್ಷತೆ ತೋರಿದವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಶೀಘ್ರದಲ್ಲೇ ಕೊಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ | ED Raid: ಇಡಿಯಿಂದ ಪಾರಾಗಲು ಎಸ್‌ಐಟಿ ವಿಚಾರಣೆಗೆ ಹಾಜರಾದ ಶಾಸಕ ದದ್ದಲ್‌!

ಇಡಿ ಅಧಿಕಾರಿಗಳು ಶಾಸಕ ನಾಗೇಂದ್ರ ವಶಕ್ಕೆ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿ, ಬಂಧನದ ಬಗ್ಗೆ ಅಧಿಕಾರಿಗಳು ಇನ್ನೂ ಮಾಹಿತಿ ನೀಡಿಲ್ಲ. ಅಧಿವೇಶನ ನಡೆಯದಿರುವಾಗ ಬಂಧಿಸಿದ ಬಳಿಕ ನಮಗೆ ಮಾಹಿತಿ ಕೊಡಬೇಕು. ಇಲ್ಲಿಯವರೆಗೂ ಮಾಹಿತಿ ಕೊಟ್ಟಿಲ್ಲ. ಮುಂದೆ ಮಾಹಿತಿ ಕೊಡಬಹುದು. ಸದ್ಯಕ್ಕೆ ನನಗೆ ಮಾಹಿತಿ ಕೊಟ್ಟಿಲ್ಲ. ಮಾಧ್ಯಮಗಳಿಂದ ಮಾಹಿತಿ ಸಿಕ್ಕಿದೆ. ಅಧಿವೇಶನ ನಡೆಯುವಾಗ ಮಾತ್ರ ಶಾಸಕರನ್ನು ಬಂಧಿಸಬೇಕಿದ್ದರೆ ನನ್ನ ಅನುಮತಿ ಬೇಕು. ಈ ಪ್ರಕರಣದಲ್ಲಿ ನನಗೆ ಇಡಿ ಅಧಿಕಾರಿಗಳು ಬಂಧನದ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

40 ಗಂಟೆಗಳ ತಪಾಸಣೆ ಬಳಿಕ ಕೊನೆಗೂ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

Valmiki Corporation Scam

ಬೆಂಗಳೂರು: ನಿರಂತರ 40 ಗಂಟೆಗಳ ತಪಾಸಣೆ ಹಾಗೂ ತನಿಖೆಯ ಬಳಿಕ, ವಾಲ್ಮೀಕಿ ನಿಗಮ ಹಗರಣ (Valmiki Corporation Scam) ಕುರಿತು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೊನ್ನೆ ಮುಂಜಾನೆಯಿಂದ ನಾಗೇಂದ್ರ ಮನೆ ಹಾಗೂ ಕಚೇರಿ ಮುಂತಾದೆಡೆ ಇಡಿ ದಾಳಿ (ED Raid) ನಡೆದಿತ್ತು.

40 ಗಂಟೆಗಳ ಕಾಲ ನಾಗೇಂದ್ರ ಹಾಗೂ ಕುಟುಂಬದವರನ್ನು ಮನೆಯಿಂದ ಹೊರಬಿಡದ ಇಡಿ ಅಧಿಕಾರಿಗಳು ನಿರಂತರವಾಗಿ ಪ್ರಶ್ನೆ ಮಾಡಿದ್ದರು. ವಾಲ್ಮೀಕಿ ನಿಗಮದಲ್ಲಿ ನಡೆದ 185 ಕೋಟಿ ರೂಪಾಯಿಗಳ ಹಗರಣದ ಬಗ್ಗೆ ಯಾವುದೇ ಸುಳಿವು ತಮಗಿಲ್ಲ ಎಂದೇ ನಾಗೇಂದ್ರ ಹೇಳಿದ್ದರು. ಆದರೆ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ ಹೇಳಿಕೆಯಿಂದಾಗಿ ನಾಗೇಂದ್ರ ಹೇಳಿಕೆಯ ಬಗ್ಗೆ ಅನುಮಾನ ಮೂಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಕರೆದೊಯ್ಯಲಾಗಿದೆ.

ಇಂದು ಬೆಂಗಳೂರಿನ ಇಡಿ ಕಚೇರಿಯಲ್ಲಿ ಅಧಿಕಾರಿಗಳು ಅವರನ್ನು ಪ್ರಶ್ನಿಸಲಿದ್ದಾರೆ. ನಾಗೇಂದ್ರ ಸಿಎ ಹರೀಶ್‌ ಕೂಡ ನಿನ್ನೆಯಿಂದ ಇಡಿ ವಶದಲ್ಲಿದ್ದಾರೆ. ಯೂನಿಯನ್‌ ಬ್ಯಾಂಕ್‌ನಲ್ಲಿ ಸುಳ್ಳು ದಾಖಲೆ ನೀಡಿ ಅಕ್ರಮ ಖಾತೆ ತೆರೆದು ಕೋಟ್ಯಂತರ ರೂಪಾಯಿ ನಿಗಮದ ಹಣವನ್ನು ಅಲ್ಲಿಗೆ ವರ್ಗಾಯಿಸಿದ ಕುರಿತು ಹರೀಶ್‌ ಹೇಳಿಕೆಯಲ್ಲಿ ಕೆಲವು ಸಾಕ್ಷಿಗಳು ದೊರೆತಿವೆ. ಬ್ಯಾಂಕ್‌ ಸಿಸಿಟಿವಿ ರೆಕಾರ್ಡ್‌ಗಳನ್ನು ಚೆಕ್‌ ಮಾಡಿದಾಗಲೂ, ನಾಗೇಂದ್ರ ಸಿಎ ಹಾಗೂ ಶಾಸಕ ದದ್ದಲ್‌ ಸಿಎ ಅಲ್ಲಿಗೆ ಬಂದು ಹೋದ ಕುರಿತು ದಾಖಲೆ ಲಭ್ಯವಾಗಿದೆ. 50 ಲಕ್ಷ ಡೀಲ್‌ ನಡೆಸಲಾಗಿರುವ ಕುರಿತು ಬಂಧಿತರಾಗಿರುವ ಬ್ಯಾಂಕ್‌ ಅಧಿಕಾರಿಗಳು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ಈಗ ಹೆಚ್ಚಿನ ತನಿಖೆಯ ಉರುಳು ನಾಗೇಂದ್ರ ಕೊರಳಿಗೆ ಸುತ್ತಿಕೊಂಡಿದೆ.

ಇದನ್ನೂ ಓದಿ | ED Raids: ಕೇರಳದ ಚಿನ್ನದ ವ್ಯಾಪಾರಿಯ 9 ಸ್ಥಳಗಳ ಮೇಲೆ ಇ.ಡಿ. ದಾಳಿ; ಕಾರಲ್ಲಿ ಶಾಸಕ ಹ್ಯಾರಿಸ್‌ ಪ್ರೋಟೋಕಾಲ್ ಸ್ಟಿಕ್ಕರ್‌ ಪತ್ತೆ!

ಬಿ. ನಾಗೇಂದ್ರ ಹಾಗೂ ಬಸವನಗೌಡ ದದ್ದಲ್ ನಿವಾಸಗಳ ಜತೆಗೆ ಮೂವರು ಯೂನಿಯನ್ ಬ್ಯಾಂಕ್ ಸಿಬ್ಬಂದಿ ಮನೆಯ ಮೇಲೂ ಇಡಿ ದಾಳಿ ನಡೆಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರವಾದ್ದರಿಂದ ವಸಂತನಗರದಲ್ಲಿರುವ ವಾಲ್ಮೀಕಿ ನಿಗಮದ ಕಚೇರಿಗೂ ಇಡಿ ರೇಡ್‌ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.

Continue Reading

ಪ್ರಮುಖ ಸುದ್ದಿ

MUDA Scam: ಪೊಲೀಸರಿಂದ ಬಂಧನ ತಪ್ಪಿಸಲು ಗೂಡ್ಸ್‌ ಆಟೋದಲ್ಲಿ ಮೈಸೂರಿಗೆ ಬಂದ ಆರ್‌. ಅಶೋಕ್!

MUDA Scam: ಮೈಸೂರಿನಲ್ಲಿ ನಡೆದ ಪ್ರತಿಭಟನೆಗೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಶಾಸಕ ಅಶ್ವಥ್ ನಾರಾಯಣ್ ಗೂಡ್ಸ್‌ ಆಟೋದಲ್ಲಿ ಬಚ್ಚಿಟ್ಟುಕೊಂಡು ಆಗಮಿಸಿದರು. ಈ ನಡುವೆ, ಕಾರ್ಯಕರ್ತರ ಗುಂಪಿನೊಡನೆ ಮೈಸೂರಿಗೆ ಹೊರಟಿದ್ದ ಪಕ್ಷ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಬಿಡದಿ ಬಳಿಯೇ ಪೊಲೀಸರು ಬಂಧಿಸಿ ತಡೆದಿದ್ದಾರೆ.

VISTARANEWS.COM


on

muda scam r ashok in mysore
Koo

ಮೈಸೂರು: ಪೊಲೀಸರು ಬಂಧನ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ತರಕಾರಿ ಗೂಡ್ಸ್‌ ಆಟೋದಲ್ಲಿ ಬಚ್ಚಿಟ್ಟುಕೊಂಡು ಮೈಸೂರಿಗೆ ಆಗಮಿಸಿದ ವಿಪಕ್ಷ ನಾಯಕ ಆರ್.‌ ಅಶೋಕ್‌ (R Ashok), ಬಿಜೆಪಿ ಪ್ರತಿಭಟನೆಯಲ್ಲಿ (BJP Protest) ಭಾಗವಹಿಸಿದ್ದಾರೆ. ಮುಡಾ ಹಗರಣ (MUDA Scam) ವಿರೋಧಿಸಿ ಬಿಜೆಪಿ (BJP) ಇಂದು ಮೈಸೂರಿನಲ್ಲಿ ಮೆಗಾ ಪ್ರತಿಭಟನೆ ಹಮ್ಮಿಕೊಂಡಿದೆ.

ಮೈಸೂರಿನಲ್ಲಿ ನಡೆದ ಪ್ರತಿಭಟನೆಗೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಶಾಸಕ ಅಶ್ವಥ್ ನಾರಾಯಣ್ ಗೂಡ್ಸ್‌ ಆಟೋದಲ್ಲಿ ಬಚ್ಚಿಟ್ಟುಕೊಂಡು ಆಗಮಿಸಿದರು. ಈ ನಡುವೆ, ಕಾರ್ಯಕರ್ತರ ಗುಂಪಿನೊಡನೆ ಮೈಸೂರಿಗೆ ಹೊರಟಿದ್ದ ಪಕ್ಷ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಬಿಡದಿ ಬಳಿಯೇ ಪೊಲೀಸರು ಬಂಧಿಸಿ ತಡೆದಿದ್ದಾರೆ.

ಬ್ರಹ್ಮಾಂಡ ಭ್ರಷ್ಟಾಚಾರಿ ಸಿದ್ದರಾಮಯ್ಯ: ಅಶೋಕ್

ಸಿಎಂ ಸಿದ್ದರಾಮಯ್ಯ ಈ ದೇಶ ಕಂಡ ಬ್ರಹ್ಮಾಂಡ ಭ್ರಷ್ಟಾಚಾರಿ ಎಂದು ಅಶೋಕ್‌ ಆರೋಪಿಸಿದರು. ಮೈಸೂರಿನಲ್ಲಿ ಸೈಟು ಬೇಕು ಅಂತ 80 ಸಾವಿರ ಜನ ಅರ್ಜಿ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಕುಟುಂಬ ಹಾಗೂ ಬೆಂಬಲಿಗರಿಗೆ ಮಾತ್ರ ಸೈಟ್ ಕೊಟ್ಟಿದ್ದಾರೆ. ಜನರಿಗೆ ಸೈಟು ಕೊಡಲು ಆಗಲ್ಲ. ಇವರಿಗೆಲ್ಲ ಹೇಗೆ ಸೈಟು ಕೊಡ್ತಾರೆ? ಮುಡಾದಲ್ಲಿ ಬೃಹತ್‌ ಹಗರಣವೇ ನಡೆದಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಡಬೇಕು ಎಂದು ಅಶೋಕ್‌ ಆಗ್ರಹಿಸಿದರು.

ನಮಗೆ ಅಂಜಿ ನಮ್ಮ ಪ್ರತಿಭಟನೆ ಹತ್ತಿಕ್ಕಲು ಯತ್ನ ಮಾಡಿದ್ದಾರೆ. ನಾನು ಪೊಲೀಸರ ಕಣ್ಣು ತಪ್ಪಿಸಿ ತರಕಾರಿ ಟೆಂಪೋದಲ್ಲಿ ಬಂದೆ. ನಮ್ಮ ಉದ್ದೇಶ ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯ ಬಯಲಿಗೆ ಬರಬೇಕು ಅನ್ನುವುದು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಪಾತ್ರ ಇದೆ. 50:50 ಬೋಗಸ್ ಮಾಡಿ ಅಕ್ರಮ ಮಾಡಿದ್ದಾರೆ. ಬದಲಿ ನಿವೇಶನ ಪಡೆದು ವಂಚನೆ ಮಾಡಿದ್ದಾರೆ. ಪ್ರಭಾವ ಬಳಸಿ ಸೈಟು ಪಡೆದಿದ್ದಾರೆ. ನಮ್ಮ ಹೋರಾಟ ಹತ್ತಿಕ್ಕುವ ಯತ್ನ ಮಾಡಿದ್ದಾರೆ. ನಮ್ಮ ಅಧ್ಯಕ್ಷರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದರು.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಿಜಯೇಂದ್ರ ಬಂಧನ

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಜಮೀನು ಹಗರಣ (MUDA Scam) ಸಂಬಂಧಿಸಿ ಇಂದು ಮೈಸೂರಿನಲ್ಲಿ (Mysore) ಬೃಹತ್‌ ಪ್ರತಿಭಟನೆ (BJP Protest) ಹಮ್ಮಿಕೊಂಡಿರುವ ಬಿಜೆಪಿಯ ನಾಯಕರನ್ನು (BJP leaders) ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ (Bangalore Mysore highway) ಪೊಲೀಸರು ತಡೆದು ಬಂಧಿಸಿದ್ದಾರೆ.

ಮುಡಾ ಹಗರಣ ವಿರೋಧಿಸಿ ಪ್ರತಿಭಟನೆಗೆ ಮೈಸೂರಿಗೆ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮುನಿರತ್ನ ಮುಂತಾದ ನಾಯಕರನ್ನು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಕಣಮಿಣಕಿ ಟೋಲ್ ಬಳಿ ರಸ್ತೆ ತಡೆದು ಬಿಜೆಪಿ ನಾಯಕರು ಪ್ರತಿಭಟಿಸಿದರು. ಆಗ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿ ಬಿಡದಿ ಪೊಲೀಸ್‌ ಠಾಣೆಗೆ ಕರೆದೊಯ್ದರು. ಬಿಡದಿ ಪೊಲೀಸ್ ಠಾಣೆ ಮುಂದೆಯೂ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಈ ನಡುವೆ, ಮೈಸೂರಿಗೆ ಪ್ರತಿಭಟನೆಗಾಗಿ ಬೆಂಗಳೂರು ಹಾಗೂ ರಾಮನಗರ ಮುಂತಾದ ಕಡೆಗಳಿಂದ ಬಿಜೆಪಿ ಕಾರ್ಯಕರ್ತ ಹೊರಟಿದ್ದಾರೆ. ಆದರೆ ಪೊಲೀಸರು ಅವರನ್ನು ಹೆದ್ದಾರಿಯಲ್ಲಿಯೇ ತಡೆದು ವಾಪಸ್‌ ಕಳಿಸಲು ಮುಂದಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟಿಸುತ್ತಿದ್ದಾರೆ.

ಇದನ್ನೂ ಓದಿ: BY Vijayendra: 12ರಂದು ಮೈಸೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ; ಸಿಎಂ ರಾಜೀನಾಮೆ, ಸಿಬಿಐ ತನಿಖೆಗೆ ವಿಜಯೇಂದ್ರ ಆಗ್ರಹ

Continue Reading

ಕರ್ನಾಟಕ

ED Raid: ಇಡಿಯಿಂದ ಪಾರಾಗಲು ಎಸ್‌ಐಟಿ ವಿಚಾರಣೆಗೆ ಹಾಜರಾದ ಶಾಸಕ ದದ್ದಲ್‌!

ED Raid: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೊಟೀಸ್ ನೀಡಿದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ದದ್ದಲ್ ಹಾಜರಾಗಿದ್ದಾರೆ.

VISTARANEWS.COM


on

ED Raid
Koo

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ವಶಕ್ಕೆ ಪಡೆದ ಬೆನ್ನಲ್ಲೇ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ಗಾಗಿ ಹುಡುಕಾಟ ನಡೆಸುತ್ತಿತ್ತು. ಆದರೆ, ಎಲ್ಲೂ ಕಾಣಿಸಿಕೊಂಡಿರದಿದ್ದ ಬಸನಗೌಡ ದದ್ದಲ್ ಇದೀಗ ಎಸ್ಐಟಿ ಕಚೇರಿ ಬಳಿ ಪ್ರತ್ಯಕ್ಷವಾಗಿದ್ದಾರೆ. ಇಡಿ ವಶಕ್ಕೆ ಪಡೆದರೆ ಸಂಕಷ್ಟ ಎದುರಾಗಬಹುದು ಎಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

ವಾಲ್ಮೀಕಿ ನಿಗಮ ಅಕ್ರಮ (Valmiki Corporation Scam) ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೊಟೀಸ್ ನೀಡಿದ ಹಿನ್ನೆಲೆಯಲ್ಲಿ ದದ್ದಲ್ ಹಾಜರಾಗಿದ್ದಾರೆ. ಇದಕ್ಕೂ ಮೊದಲು ಯಲಹಂಕ ಬಳಿ ಇರುವ ಬಸನಗೌಡ ದದ್ದಲ್ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಅವರು ಮನೆಯಲ್ಲಿರದ ಕಾರಣ ಇಡಿ ಅಧಿಕಾರಿಗಳು ವಾಪಸ್‌ ಆಗಿದ್ದರು. ನಂತರ ವಿಧಾನಸೌಧ ಹಾಗೂ ಶಾಸಕರ ಭವನದಲ್ಲಿ ಕೂಡ ಅವರಿಗಾಗಿ ಇಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಈ ವೇಳೆ ಎಲ್ಲೂ ಕಾಣಿಸಿಕೊಳ್ಳದಿದ್ದ ದದ್ದಲ್ ಅವರು ನೇರವಾಗಿ ಎಸ್‌ಐಟಿ ಕಚೇರಿಗೆ ತೆರಳಿದ್ದಾರೆ.

ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಪ್ಲ್ಯಾನ್ ಮಾಡಿದ್ರಾ ದದ್ದಲ್?

ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಬಸನಗೌಡ ದದ್ದಲ್ ಮೆಗಾ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಸೋಮವಾರದವರೆಗೂ ಇಡಿಯಿಂದ ತಪ್ಪಿಸಿಕೊಂಡರೆ ನಂತರ ಅರೆಸ್ಟ್ ಸುಲಭವಿಲ್ಲ. ಸೋಮವಾರದಿಂದ ಹದಿನೈದು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಯುವಾಗ ಸ್ಪೀಕರ್ ಅನುಮತಿ ಇಲ್ಲದೇ ಅರೆಸ್ಟ್ ಮಾಡಲು ಸಾಧ್ಯವಿಲ್ಲ. ಹೀಗಾಗಿ ದದ್ದಲ್‌ ಇಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.

ಬಂದನ ಮಾಡಬೇಕಾದರೆ ಸ್ಪೀಕರ್ ಅನುಮತಿ ಪಡೆದು ಪ್ರಕರಣದಲ್ಲಿ ಆರೋಪಿ ಬಂಧನ ಮೇಲ್ನೋಟಕ್ಕೆ ಅಗತ್ಯವಿದೆ ಎಂದು ಮನವರಿಕೆ ಮಾಡಬೇಕು. ಇಡಿ ಅಧಿಕಾರಿಗಳ ಮನವಿಯನ್ನು ಸ್ಪೀಕರ್ ಒಪ್ಪಬಹುದು ಅಥವಾ ತಿರಸ್ಕರಿಸಬಹುದು. ಒಪ್ಪಿದ್ರೆ ಬಂಧಿಸಬಹುದು, ತಿರಸ್ಕರಿಸಿದರೆ ಬಂಧನ ಅಷ್ಟು ಸಲುಭವಲ್ಲ. ಹೀಗಾಗಿ ಇಂದು ಎಸ್ಐಟಿ ಮುಂದೆ ಇಡೀ ದಿನ ದದ್ದಲ್ ವಿಚಾರಣೆ ಎದುರಿಸಲಿದ್ದಾರೆ.

ಹೇಳಿಕೆ ಸಮಯದಲ್ಲಿ ಎಸ್ಐಟಿಗೆ ಅರೆಸ್ಟ್ ಮಾಡುವ ಅವಶ್ಯಕತೆ ಇದ್ದರೆ ವಶಕ್ಕೆ ಪಡೆಯಬಹುದು. ವಶಕ್ಕೆ ಪಡೆದ ಬಳಿಕ ಸ್ಪೀಕರ್‌ಗೆ ಎಸ್ಐಟಿ ಮಾಹಿತಿ ಕೊಡಬೇಕು. ಸೋಮವಾರದವರೆಗೂ ದದ್ದಲ್ ಬಂಧನವಾಗದಿದ್ದರೆ, ಬಳಿಕ ಬಂಧಿಸಲು ಸ್ಪೀಕರ್ ಅನುಮತಿ ಕಡ್ಡಾಯವಾಗಿ ಬೇಕು. ಹೀಗಾಗಿ ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ದದ್ದಲ್ ಇಂದು ಎಸ್ಐಟಿ ನೆರವು ಪಡೆದಿದ್ದಾರೆ ಎನ್ನಲಾಗಿದೆ.

40 ಗಂಟೆಗಳ ತಪಾಸಣೆ ಬಳಿಕ ಕೊನೆಗೂ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

Valmiki Corporation Scam

ಬೆಂಗಳೂರು: ನಿರಂತರ 40 ಗಂಟೆಗಳ ತಪಾಸಣೆ ಹಾಗೂ ತನಿಖೆಯ ಬಳಿಕ, ವಾಲ್ಮೀಕಿ ನಿಗಮ ಹಗರಣ (Valmiki Corporation Scam) ಕುರಿತು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೊನ್ನೆ ಮುಂಜಾನೆಯಿಂದ ನಾಗೇಂದ್ರ ಮನೆ ಹಾಗೂ ಕಚೇರಿ ಮುಂತಾದೆಡೆ ಇಡಿ ದಾಳಿ (ED Raid) ನಡೆದಿತ್ತು.

40 ಗಂಟೆಗಳ ಕಾಲ ನಾಗೇಂದ್ರ ಹಾಗೂ ಕುಟುಂಬದವರನ್ನು ಮನೆಯಿಂದ ಹೊರಬಿಡದ ಇಡಿ ಅಧಿಕಾರಿಗಳು ನಿರಂತರವಾಗಿ ಪ್ರಶ್ನೆ ಮಾಡಿದ್ದರು. ವಾಲ್ಮೀಕಿ ನಿಗಮದಲ್ಲಿ ನಡೆದ 185 ಕೋಟಿ ರೂಪಾಯಿಗಳ ಹಗರಣದ ಬಗ್ಗೆ ಯಾವುದೇ ಸುಳಿವು ತಮಗಿಲ್ಲ ಎಂದೇ ನಾಗೇಂದ್ರ ಹೇಳಿದ್ದರು. ಆದರೆ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ ಹೇಳಿಕೆಯಿಂದಾಗಿ ನಾಗೇಂದ್ರ ಹೇಳಿಕೆಯ ಬಗ್ಗೆ ಅನುಮಾನ ಮೂಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಕರೆದೊಯ್ಯಲಾಗಿದೆ.

ಇಂದು ಬೆಂಗಳೂರಿನ ಇಡಿ ಕಚೇರಿಯಲ್ಲಿ ಅಧಿಕಾರಿಗಳು ಅವರನ್ನು ಪ್ರಶ್ನಿಸಲಿದ್ದಾರೆ. ನಾಗೇಂದ್ರ ಸಿಎ ಹರೀಶ್‌ ಕೂಡ ನಿನ್ನೆಯಿಂದ ಇಡಿ ವಶದಲ್ಲಿದ್ದಾರೆ. ಯೂನಿಯನ್‌ ಬ್ಯಾಂಕ್‌ನಲ್ಲಿ ಸುಳ್ಳು ದಾಖಲೆ ನೀಡಿ ಅಕ್ರಮ ಖಾತೆ ತೆರೆದು ಕೋಟ್ಯಂತರ ರೂಪಾಯಿ ನಿಗಮದ ಹಣವನ್ನು ಅಲ್ಲಿಗೆ ವರ್ಗಾಯಿಸಿದ ಕುರಿತು ಹರೀಶ್‌ ಹೇಳಿಕೆಯಲ್ಲಿ ಕೆಲವು ಸಾಕ್ಷಿಗಳು ದೊರೆತಿವೆ. ಬ್ಯಾಂಕ್‌ ಸಿಸಿಟಿವಿ ರೆಕಾರ್ಡ್‌ಗಳನ್ನು ಚೆಕ್‌ ಮಾಡಿದಾಗಲೂ, ನಾಗೇಂದ್ರ ಸಿಎ ಹಾಗೂ ಶಾಸಕ ದದ್ದಲ್‌ ಸಿಎ ಅಲ್ಲಿಗೆ ಬಂದು ಹೋದ ಕುರಿತು ದಾಖಲೆ ಲಭ್ಯವಾಗಿದೆ. 50 ಲಕ್ಷ ಡೀಲ್‌ ನಡೆಸಲಾಗಿರುವ ಕುರಿತು ಬಂಧಿತರಾಗಿರುವ ಬ್ಯಾಂಕ್‌ ಅಧಿಕಾರಿಗಳು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ಈಗ ಹೆಚ್ಚಿನ ತನಿಖೆಯ ಉರುಳು ನಾಗೇಂದ್ರ ಕೊರಳಿಗೆ ಸುತ್ತಿಕೊಂಡಿದೆ.

ಬಿ. ನಾಗೇಂದ್ರ ಹಾಗೂ ಬಸವನಗೌಡ ದದ್ದಲ್ ನಿವಾಸಗಳ ಜತೆಗೆ ಮೂವರು ಯೂನಿಯನ್ ಬ್ಯಾಂಕ್ ಸಿಬ್ಬಂದಿ ಮನೆಯ ಮೇಲೂ ಇಡಿ ದಾಳಿ ನಡೆಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರವಾದ್ದರಿಂದ ವಸಂತನಗರದಲ್ಲಿರುವ ವಾಲ್ಮೀಕಿ ನಿಗಮದ ಕಚೇರಿಗೂ ಇಡಿ ರೇಡ್‌ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.

ಆರೋಪಿ ಸತ್ಯನಾರಾಯಣ್‌ನಿಂದ ವಾಲ್ಮೀಕಿ ನಿಗಮದ ಎಂ.ಡಿ. ಪದ್ಮನಾಭ್ ಹಣ ತಂದಿದ್ದರು ಎನ್ನಲಾಗಿದೆ. ಆ ಹಣದಲ್ಲಿ ನಾಗೇಂದ್ರ ಪಿಎ ಹರೀಶ್‌ 25 ಲಕ್ಷ ಹಣ ಪಡೆದಿದ್ದ. ದದ್ದಲ್ ಪಿಎ ಪಂಪಣ್ಣ ಕೂಡ 55 ಲಕ್ಷ ಹಣ ಪಡೆದಿದ್ದ. ಈ ಬಗ್ಗೆ ಪರಿಶೀಲನೆ ವೇಳೆ ಹರೀಶ್ ಬಾಯ್ಬಿಟ್ಟ ಹಿನ್ನೆಲೆಯಲ್ಲಿ ಆತನನ್ನು ಇಡಿ ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಸಚಿವ ನಾಗೇಂದ್ರ ಪರ 50ರಿಂದ 60 ಕೋಟಿ ವ್ಯವಹಾರ ನಡೆದಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆದಿದೆ.

ನಾಗೇಂದ್ರ ಅವರಿಗೆ ಸೇರಿದ ಡಾಲರ್ಸ್ ಕಾಲೋನಿಯ ಮನೆ ಮೇಲೆ ದಾಳಿ ಮಾಡಲಾಗಿದೆ. ಅವರ ಆಸ್ತಿಗಳಿರುವ ಬಿಇಎಲ್ ರೋಡ್, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿಗಳು ನಡೆದಿವೆ. ಬಳ್ಳಾರಿಯ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ. ಬೆಂಗಳೂರು ಹೊರತುಪಡಿಸಿ ರಾಯಚೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ಮಧ್ಯೆ ಪ್ರವೇಶಿಸಬಹುದು ಎಂಬ ಮಾಹಿತಿ ದೊರೆತಿತ್ತು.

ಇದನ್ನೂ ಓದಿ | ED Raid: ʼಕನ್ನಡದ ಕೋಟ್ಯಾಧಿಪತಿʼ ಶೋನಲ್ಲಿ ಪ್ರಶ್ನೆಗೆ ಉತ್ತರಿಸಿ 50 ಲಕ್ಷ ಗೆದ್ದಿದ್ದ ಪಂಪಣ್ಣ ಈಗ ಇಡಿ ಪ್ರಶ್ನೆಗೆ ವಿಲವಿಲ!

ವಾಲ್ಮೀಕಿ ನಿಗಮದ ಹಗರಣದಲ್ಲಿ 185 ಕೋಟಿ ರೂ. ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್‌ ಡೆತ್‌ನೋಟ್‌ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇದೆ.

Continue Reading
Advertisement
BS Yediyurappa
ಕರ್ನಾಟಕ13 mins ago

BS Yediyurappa: ಪೋಕ್ಸೊ ಕೇಸ್‌ನಲ್ಲಿ ಖುದ್ದು ಹಾಜರಿಯಿಂದ ಬಿಎಸ್‌ವೈಗೆ ವಿನಾಯ್ತಿ; ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜು.26ಕ್ಕೆ

Earthquake
ದೇಶ19 mins ago

Earthquake: ಜಮ್ಮು-ಕಾಶ್ಮೀರದಲ್ಲಿ 4.1 ತೀವ್ರತೆಯ ಭೂಕಂಪ; ಮನೆಯಿಂದ ಓಡಿಬಂದ ಜನ

ಬೆಂಗಳೂರು33 mins ago

KEA : ಜು.13,14ಕ್ಕೆ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ; ಅಕ್ರಮ ತಡೆಯಲು ಮೊದಲ ಬಾರಿಗೆ ವೆಬ್ ಕಾಸ್ಟಿಂಗ್

Prajwal Revanna Case
ಕರ್ನಾಟಕ43 mins ago

Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿದ್ದ ಎಸ್‌ಐಟಿ ಅರ್ಜಿ ವಿಚಾರಣೆ 3 ವಾರ ಮುಂದೂಡಿಕೆ

Saina Nehwal
ಕ್ರೀಡೆ45 mins ago

Saina Nehwal: ಬ್ಯಾಡ್ಮಿಂಟನ್ ಬಿಟ್ಟು ಟೆನಿಸ್‌ ಆಡಿದ್ದರೆ ಹೆಚ್ಚಿನ ಯಶಸ್ಸು ಸಿಗುತ್ತಿತ್ತು ಎಂದ ಸೈನಾ ನೆಹ್ವಾಲ್‌

Kangana Ranaut
ದೇಶ57 mins ago

Kangana Ranaut: ನನ್ನನ್ನು ಭೇಟಿಯಾಗಲು ಬರುವವರು ಆಧಾರ್‌ ಕಾರ್ಡ್‌ ತನ್ನಿ ಎಂದ ಕಂಗನಾ ರಣಾವತ್;‌ ಏನ್‌ ದೌಲತ್ತು ನೋಡಿ!

Shiva Rajkumar Starrer 45 Movie Poster Released By Rishab Shetty
ಸ್ಯಾಂಡಲ್ ವುಡ್57 mins ago

Shiva Rajkumar: ಶಿವರಾಜ್‌ಕುಮಾರ್‌ ಅಭಿನಯದ ʻ45ʼ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ!

Anant Radhika Wedding
ವಾಣಿಜ್ಯ60 mins ago

Anant Radhika Wedding: ನಿಶ್ಚಿತಾರ್ಥದಿಂದ ಮದುವೆಯವರೆಗೆ; ಹೀಗಿತ್ತು ಅಂಬಾನಿ ಮಗನ ಮದುವೆಯ ಗತ್ತು!

Fraud Case CCB police arrest fraudster
ಕರ್ನಾಟಕ1 hour ago

Fraud Case : ‌ಸಿಸಿಬಿ ಬಲೆಗೆ ಬಿದ್ದ ಖತರ್ನಾಕ್‌ ನಯ ವಂಚಕ; ಡಿಸಿ, ಜಡ್ಜ್‌ ಹೆಸರು ಬಳಸಿ ಲಕ್ಷ ಲಕ್ಷ ಲೂಟಿ

Akshay Kumar tests positive for COVID-19 will miss Anant Ambani wedding
ಬಾಲಿವುಡ್1 hour ago

Akshay Kumar:  ಅಕ್ಷಯ್ ಕುಮಾರ್‌ಗೆ ಕೋವಿಡ್‌ ಪಾಸಿಟಿವ್; ಅನಂತ್ ಅಂಬಾನಿ ಮದುವೆಗೆ ಗೈರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effect
ಮಳೆ24 hours ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ3 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ3 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ3 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ4 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ4 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು4 days ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ5 days ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌